ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಸರಕಾರದ ನೆಹರು ಯುವ ಕೇಂದ್ರ, ಜಿಲ್ಲಾ ಕಚೇರಿಯ ವತಿಯಿಂದ 2020-21 ನೇ ಸಾಲಿನ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ, ಯುವ ಮಂಡಳಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ನೊಂದಣಾಧಿಕಾರಿಗಳ ಕಛೇರಿಯಲ್ಲಿ ನೋಂದಾವಣೆಯಾಗಿರುವ ಯುವಕ, ಯುವತಿ ಮಂಡಳಿಗಳು, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರಬೇಕು. 2020-21 ನೇ ಸಾಲಿನಲ್ಲಿ ಗ್ರಾಮ, ಪಟ್ಟಣ ಹಾಗೂ ತಾಲೂಕು ಅಭಿವೃದ್ಧಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರುವ (ಮಾಹಿತಿಯು 2020 ಏಪ್ರಿಲ್ 01 ರಿಂದ ಪ್ರಸಕ್ತ ಸಾಲಿನ ಮಾರ್ಚ್ 31ರ ಒಳಗಿರಬೇಕು), ಯುವ ಮಂಡಳಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಮಂಡಳಕ್ಕೆ 25,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಲ್ಲ್ಫ್ರೆಡ್ ಡಿ ಸೋಜ, ಜಿಲ್ಲಾ ಯುವಜನ ಅಧಿಕಾರಿ, ನೆಹರು ಯುವ ಕೇಂದ್ರ, ರಜತಾದ್ರಿ ಮಣಿಪಾಲ, ದೂ.ಸಂಖ್ಯೆ: ಉಡುಪಿ: 0820-2574992 ಅನ್ನು ಸಂಪರ್ಕಿಸುವಂತೆ ನೆಹರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭೆಯ ಯುಜಿಡಿ ಕಾಮಗಾರಿ ವೆಟ್ವೆಲ್ ನಿರ್ಮಿಸಲು ನಿರುಪಯುಕ್ತ ಹೊಳೆ ಬದಿ ಖರೀದಿಸಿರುವ ಸರ್ಕಾರವು ದುಪ್ಪಟ್ಟು ಹಣ ಪಾವತಿಸಿದೆ. ಜಾಗದ ನಷ್ಟ ಪರಿಹಾರ ಎಂದು ತೋರಿಸಿ ಒಟ್ಟು 95 ಲಕ್ಷ ಜಾಗದ ಮಾಲೀಕರಿಗೆ ಸಂದಾಯ ಮಾಡಿರುವ ಹಿಂದೆ ಅಕ್ರಮ ನಡೆದಿರುವ ಶಂಕೆ ಇದೆ ಎಂದು ಪುರಸಭೆಯ ಮಾಜಿ ಸದಸ್ಯ ಕೇಶವ ಭಟ್ ಆರೋಪಿಸಿದ್ದಾರೆ. ಪುರಸಭೆ ಸದಸ್ಯರ ಗಮನಕ್ಕೆ ತರದೇ ದುಪ್ಪಟ್ಟು ಹಣ ನೀಡಿ ಜಾಗ ಖರೀದಿಯ ಮಾಡಿರುವ ಹಿಂದಿನ ಮರ್ಮವೇನು? ಈ ಕುರಿತು ಸಮಗ್ರ ತನಿಖೆ ನಡೆಸಬೇಕು, ಸಾರ್ವಜನಿಕರ ತೆರಿಗೆ ಹಣ ಈ ರೀತಿಯಾಗಿ ಫೋಲಾಗಬಾರದು ಎಂದು ಧ್ವನಿ ಎತ್ತಿದ್ದರೂ ಯಾಕೆ? ಕೋವಿಡ್ ಸಂದರ್ಭದಲ್ಲಿ ತರಾತುರಿಯಲ್ಲಿ ಜಾಗ ಖರೀದಿ ಮಾಡಿ ಪುರಸಭೆ ಸದ್ಯಸರ ಗಮಕ್ಕೆ ತರದೇ, ರಿಜಿಸ್ಟರ್ ಮಾಡಿದರ ಹಿಂದಿನ ಗುಟ್ಟೇನು? ಕೇವಲ ದುಪ್ಪಟ್ಟು ಹಣ ನೀಡಿ ಜಾಗ ಖರೀದಿಯಾಗಿದೆ ಅನ್ನುವುದರ ಬಗ್ಗೆ ಆಡಳಿತ ಪಕ್ಷದ ಸದಸ್ಯ ಗಿರೀಶ್ ದೇವಾಡಿಗ ಹಾಗೂ ಸ್ವಪಕ್ಷದವರು ಧ್ವನಿ ಎತ್ತಿದ್ದು ಶ್ಲಾಘನೀಯ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿರುವ ವಸತಿಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುವ ಕುರಿತಂತೆ, ವಸತಿ ಶಾಲೆಗಳಲ್ಲಿರುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಹೆಚ್ಚಿನ ಮಾಹಿತಿ ನೀಡುವಂತೆ , ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಜಿಲ್ಲಾದಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , 6ನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ವಸತಿಶಾಲೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ವಸತಿಶಾಲೆಗಳ ಪ್ರಾಂಶುಪಾಲರ, ನಿಲಯಪಾಲಕರ, ಕಂಪ್ಯೂಟರ್ ಶಿಕ್ಷಕರ , ಪ್ರಥಮ ದರ್ಜೆ ಸಹಾಯಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರಕಾರ ಉಡುಪಿ ಜಿಲ್ಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ನಡೆಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದ್ದು , ಉಡುಪಿ ಜಿಲ್ಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೇವಾ ಮನೋಭಾವನೆಯಿಂದ ಲಭಿಸುವ ಯಶಸ್ಸು ಶಾಸ್ವತವಾಗಿದ್ದು, ಈ ನಿಟ್ಟಿನಲ್ಲಿ ಕಳೆದ 116 ವರ್ಷಗಳಿಂದ ವಿಶ್ವದಾದ್ಯಂತ ಸೇವಾಕಾರ್ಯದಲ್ಲಿ ತೊಡಗಿರುವ ರೋಟರಿಯಲ್ಲಿ ಸದಸ್ಯರಾಗಿ ಕಾರ್ಯೊನ್ಮುಖರಾದರೆ ಸಮಾಜಕ್ಕೆ ಉತ್ತಮ ಸೇವೆ ನೀಡಲು ಸಹಕಾರಿಯಾಗುವುದು. ಹಾಗೆಯೇ ಕಷ್ಟದಲ್ಲಿರುವವರನ್ನು ಗುರುತಿಸಿ ತಕ್ಷಣ ಅಂತವರನ್ನು ಸ್ಪಂದಿಸಿ ಸ್ವಲ್ಪ ಮಟ್ಟಿನ ಪರಿಹಾರ ನೀಡಿದರೆ ಸೇವೆಯಲ್ಲಿ ಸಾರ್ಥಕತೆ ಕಾಣಬಹುದು ಎಂದು ರೋಟರಿ ವಲಯ ಒಂದರ ಸಹಾಯಕ ಗವರ್ನರ್ ಜಯಪ್ರಕಾಶ್ ಶೆಟ್ಟಿ ಹೇಳಿದರು. ಅವರು, ಯಡ್ತರೆ ಬಂಟರ ಭವನದಲ್ಲಿ ನಡೆದ 2021-22ನೇ ಸಾಲಿನ ಬೈಂದೂರು ರೋಟರಿ ಕ್ಲಬ್‌ನ ನೂತನ ಪದಾಧಿಕಾರಿಗಳಿಗೆ ಪದಪ್ರದಾನಿಸಿ ಮಾತನಾಡಿದರು. ಪ್ರತಿಯೊಂದಲ್ಲಿಯೂ ಸಮಯಪ್ರಜ್ಞೆ ಮತ್ತು ಶಿಸ್ತಿನ ಸೇವಾ ಕಾರ್ಯಾಚರಣೆ ಮೂಲಕ ಸಾಗುತ್ತಿರುವ ರೋಟರಿಯು ಜನರ ನಂಬಿಕೆಗೆ ಪಾತ್ರವಾಗಿದೆ. ಸೇವಾಕಾಂಕ್ಷಿ ಮಾನವ ಸಂಪನ್ಮೂಲಗಳನ್ನು ಸಮರ್ಥವಾಗಿ ಕ್ರೂಢಿಕರಿಸಿ ಅವರಲ್ಲಿ ಶ್ರೇಷ್ಠ ನಾಯಕತ್ವದ ಗುಣಗಳನ್ನು ಬೆಳೆಸುವ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಸಂಸ್ಥೆಯ ಪಾತ್ರ ದೊಡ್ಡದಿದೆ ಎಂದ ಅವರು, ಪ್ರಾಮಾಣಿಕವಾಗಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಜನ ಗುರುತಿಸುತ್ತಾರೆ. ಒಬ್ಬರಿಂದಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಚಿವ ಸ್ಥಾನಕ್ಕಾಗಿ ಯಾರ ಬಳಿಯೂ ಕೇಳಲ್ಲ. ಬೆಂಗಳೂರಿಗೆ ಹೋಗಿ ಸಚಿವ ಸ್ಥಾನಕ್ಕಾಗಿ ಯಾರ ಕಾಲಿಗೂ ಬೀಳುವುದಿಲ್ಲ. ಯಾವ ನಾಯಕನ ಹಿಂದೆಯೂ ತಿರುಗಾಡಲು ಹೋಗಲ್ಲ. ನಾನಿನ್ನು ರಾಜಕೀಯದಲ್ಲಿ ಸ್ವಾಭಿಮಾನ ಬಿಟ್ಟಿಲ್ಲ. ಈ ಹಿಂದೆ ನನ್ನನ್ನು ಕರೆದು ತಪ್ಪು ಮಾಡಿದ್ದರು. ಆಗಲೂ ನಾನು ಸಚಿವ ಸ್ಥಾನ ಕೇಳಿರಲಿಲ್ಲ. ಈಗಲೂ ಕೇಳಲು ಹೋಗಲ್ಲ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಸಂಪುಟ ರಚನೆಯ ಕಸರತ್ತು ಜೋರಾಗಿದ್ದು ಆಕಾಂಕ್ಷಿಗಳು ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮಾತ್ರ ನೇರ ನುಡಿಯ ಮೂಲಕ ನಾಯಕರಿಗೆ ಬಿಸಿಮುಟ್ಟಿಸಿದ್ದಾರೆ. ನಾನೆಂದೂ ರಾಜಕೀಯದಲ್ಲಿ ಲಾಬಿ, ಜಾತಿವಾದಿತನ ನಾನು ಮಾಡಿಲ್ಲ, ಮಾಡುವುದು ಇಲ್ಲ. ಯಾರ ಕಾಲಿಗೆ ಬಿದ್ದು ನಾನು ಕೆಲಸ ತೆಗೆದುಕೊಳ್ಳುವುದಿಲ್ಲ. ಕೆಲಸ ಕೊಟ್ಟರೆ ನಾನು ಅದನ್ನು ನಿಭಾಯಿಸುತ್ತೇನೆ. ಶ್ರದ್ಧೆಯಿಂದ ಮಾಡುತ್ತೇನೆ. ಶಾಸಕನಾಗಿ ಜನ ಸೇವೆಯನ್ನು ಐದು ಅವಧಿಯಲ್ಲೂ ಮಾಡುತ್ತಿದ್ದೇನೆ ಎಂದವರು ಹೇಳಿದ್ದಾರೆ. ಈವರೆಗೆ…
ಹೆಚ್ಚಿನವರು ಊಟ ಮಾಡಿದ ನಂತರ ಸಿಹಿ ತಿನ್ನುವ ಅಭ್ಯಾಸ ಹೊಂದಿರುತ್ತಾರೆ. ಹೋಟೆಲ್‍ನಲ್ಲಿ ಅಥವಾ ಹೊರಗೆ ಎಲ್ಲಾದರೂ ತಿಂದರೆ, ಅಂತಿಮವಾಗಿ ಐಸ್ ಕ್ರೀಮ್, ಸಿಹಿತಿಂಡಿಗಳು ಅಥವಾ ಯಾವುದೇ ಪುಡ್ಡಿಂಗ್ ನಂತಹ ಸಿಹಿತಿಂಡಿಗಳನ್ನು ನೀಡಲಾಗುತ್ತದೆ. ಆದರೆ ಊಟ ಮಾಡಿದ ನಂತರವೇ ಸಿಹಿ ತಿಂಡಿಗಳನ್ನು ಏಕೆ ತಿನ್ನಲಾಗುತ್ತದೆ ಎಂದು ಯಾರಾದರೂ ಯೋಚಿಸಿದ್ದಾರೆಯೇ? ಈ ಬಗ್ಗೆ ಇಂದು ಒಂದಷ್ಟು ಮಾಹಿತಿ ಇಲ್ಲಿದೆ. ನಮ್ಮ ಹಿರಿಯರು ಹಿಂದಿನಿಂದಲೂ ಮೊದಲಿಗೆ ಖಾರ ತಿನ್ನಬೇಕು, ಊಟದ ಕೊನೆಗೆ ಸಿಹಿಯನ್ನು ತಿನ್ನಬೇಕು, ಎಂದು ಪಾಯಸ ಮತ್ತಿತರ ಸಿಹಿ ಭಕ್ಷ್ಯಗಳನ್ನು ಮಾಡುತ್ತಾರೆ. ಯಾಕೆ ಕೊನೆಗೆ ಸಿಹಿ ಸೇವಿಸಬೇಕು ತಿಳಿಯೋಣ. ವಾಸ್ತವವಾಗಿ, ಸಿಹಿ ವಸ್ತುಗಳು ಕಾರ್ಬೋಹೈಡ್ರೆಟ್‍ಗಳಿಂದ ಸಮೃದ್ಧವಾಗಿರುತ್ತವೆ, ಇದು ಜೀರ್ಣಾಂಗ ಪ್ರಕ್ರಿಯೆಯನ್ನು ಸುಧಾರಿಸುತ್ತದೆ. ಆದ್ದರಿಂದ ಊಟ ತಿಂದ ನಂತರ ಸ್ವಲ್ಪ ಸಿಹಿ ತಿನ್ನಬೇಕು. ಸಿಹಿ ತಿಂದ ನಂತರ ಸೆರೊಟೋನಿನ್ ಹಾರ್ಮೋನ್ ಮಟ್ಟ ಹೆಚ್ಚುತ್ತದೆ. ಇದು ಮನಸ್ಸನ್ನು ಸಂತೋಷಪಡಿಸುತ್ತದೆ. ಆದ್ದರಿಂದ ಮನಸ್ಸು ಅಸಂತುಷ್ಟವಾಗಿದ್ದರೆ, ಸ್ವಲ್ಪ ಸಿಹಿ ತಿನ್ನಬೇಕು. ಅನೇಕ ಜನರು ಹೈಪೋಗ್ಲೈಸೀಮಿಯಾ ಅಂದರೆ ಕಡಿಮೆ ಸಕ್ಕರೆಯಿಂದ ಬಳಲುತ್ತಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಾಗತಿಕವಾಗಿ ವ್ಯಾಪಿಸಿದ ಕೋವಿಡ್-19 ಸೋಂಕಿನಿಂದಾಗಿ ವಿವಿಧ ಸರಕುಗಳ ಉತ್ಪಾದನೆ ಮತ್ತು ಬೇಡಿಕೆಯ ಮೇಲೆ ತೀವ್ರ ಸ್ವರೂಪದ ಋಣಾತ್ಮಕ ಪರಿಣಾಮ ಉಂಟಾಗಿದೆ. ಭಾರತದ ವಿದೇಶಿ ವ್ಯಾಪಾರದಲ್ಲಿಯೂ ಕುಸಿತ ಕಂಡುಬಂದಿದೆ ಎಂದು ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕಿ ಡಾ. ವರದುರ್ಗಾ ಭಟ್ ಅಭಿಪ್ರಾಯಪಟ್ಟರು. ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಏರ್ಪಡಿಸಿದ್ದ ‘ಕೋವಿಡ್-19, ಅಂತರರಾಷ್ಟ್ರೀಯ ವ್ಯಾಪಾರ ಹಾಗೂ ಅಭಿವೃದ್ಧಿ: ಭಾರತದಲ್ಲಿನ ಸನ್ನಿವೇಶ’ ವಿಷಯದ ಕುರಿತು ರಾಜ್ಯಮಟ್ಟದ ವೆಬಿನಾರ್‌ನಲ್ಲಿ ಅವರು ವಿಷಯ ಮಂಡನೆ ಮಾಡಿದರು. ಉದ್ಯಮಗಳ ನಿಲುಗಡೆ, ಉದ್ಯೋಗ ನಷ್ಟ ಆರ್ಥಿಕ ಹಿಂಜರಿತಕ್ಕೆ ಕಾರಣವಾಗಿದೆ. ಆದರೆ ಈ ದುಸ್ಥಿತಿ ಮತ್ತು ಸಂಕಷ್ಟಗಳ ನಡುವೆಯೂ ಭಾರತದ ಆರ್ಥಿಕತೆಗೆ ಕೆಲವು ಹೊಸ ಅವಕಾಶಗಳು ಸೃಷ್ಟಿಯಾಗಿರುವುದನ್ನೂ ಕಾಣುತ್ತಿದ್ದೇವೆ ಎಂದು ಅವರು ಹೇಳಿದರು. ವೆಬಿನಾರ್‌ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಮುಂದಿರಿಸಿದ ಪ್ರಶ್ನೆ ಹಾಗೂ ಸಂದೇಹಗಳಿಗೆ ಡಾ. ಭಟ್ ಪ್ರತಿಕ್ರಿಯಿಸಿದರು. ಬೈಂದೂರು ಕಾಲೇಜು ಅಲ್ಲದೆ ರಾಜ್ಯದ ವಿವಿಧ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರು ಬದುಕಿನೂದಕ್ಕು ನುಡಿದಂತೆ ಬದುಕಿ ಮಾದರಿ ಆದವರು ಅವರ ಬದುಕೇ ಅವರ ಸಂದೇಶದಂತೆ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿ ಎಲ್ಲಾರಿಗೂ ಮಾದರಿಯಾದ ಮಹಾನ್ ಚೇತನ ಇದು ಸಮಾಜಕ್ಕೆ ತಲುಪಿಸುವ ಕಾರ್ಯವಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿಯ ನಿರ್ದೇಶಕ ಎಸ್ ರಂಗಪ್ಪ ಕ.ಆ.ಸೇ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕೆರೆ ಮಧ್ಯದ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಂಗಮಂದಿರ, ಆರ್ಟ್ ಗ್ಯಾಲರಿ, ಅಂಗನವಾಡಿ, ಮಿನಿ ರಂಗಮಂದಿರ, ಗ್ರಂಥಾಲಯ ವೀಕ್ಷಿಸಿದರು. ಥೀಮ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ-ಸಾಹಿತ್ಯಿಕ ಕಾರ್ಯಕ್ರಮ, ತರಭೇತಿ, ವಿವಿಧ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಕಾರಂತರ ಬದುಕಿನ ಅನಾವರಣಕ್ಕೆ ಥೀಮ್ ಪಾರ್ಕ್ ಸಹಕಾರಿ ಎಂದು ಶ್ಲಾಘಿಸಿದರು. ಕಾರಂತ ಥೀಮ್ ಅಭಿವೃದ್ಧಿ ಬಗ್ಗೆ ಚರ್ಚೆಕಾರಂತ ಥೀಮ್ ಪಾರ್ಕ್‌ನಲ್ಲಿ ಇನ್ನಷ್ಟೂ ಹೊಸ ಯೋಜನೆ ರೂಪಿಸಿಕೊಂಡು ಕಾರಂತರ ಕುರಿತಾದ ಚಟುವಟಿಕೆಯನ್ನು ಇನ್ನಷ್ಟೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಬೈಂದೂರು ತಾಲ್ಲೂಕು ಚಿತ್ತೂರು ವಲಯ ಹಾಗೂ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ‘ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ’ವು ಇಲ್ಲಿನ ಇಡೂರಿನಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮಿನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ತಾಲೂಕಿನ ಯೋಜನಾಧಿಕಾರಿ ಶಶಿರೇಖಾ ಪಿ., ಉಪವಲಯ ಸಹಾಯಕ ಅರಣ್ಯಧಿಕಾರಿ ಸುನಿಲ್ ಕುಮಾರ್, ಚಿತ್ತೂರು ವಲಯ ಒಕ್ಕೂಟಗಳ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಇಡೂರು ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಆಚಾರ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಮತಿ ಆಚಾರ್ಯ ಒಕ್ಕೂಟದ ಪದಾಧಿಕಾರಿಗಳು ಮತ್ತು ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಹಾಜರಿದ್ದರು. ವಲಯದ ಮೇಲ್ವಿಚಾರಕ ಶ್ರೀನಿವಾಸ್ ಸ್ವಾಗತಿಸಿ, ಗ್ರಾಮದ ಸೇವಾಪ್ರತಿನಿಧಿ ಪ್ರೇಮಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೌಪರ್ಣಿಕಾ ನದಿಯಲ್ಲಿ ಪ್ರವಾಹ ಬಂದಾಗ ನೀರಿನಿಂದ ಆವೃತವಾಗಿ ಊರಿನ ಪ್ರಧಾನ ಭಾಗದಿಂದ ಸಂಪರ್ಕ ಕಡಿದುಕೊಳ್ಳುವ ನದಿತೀರ ಪ್ರದೇಶಗಳನ್ನು ಹೊಂದಿದ ಐದು ಗ್ರಾಮಗಳಿಗೆ ಜಿಲ್ಲಾಡಳಿತ ಒದಗಿಸಿದ ದೋಣಿಗಳನ್ನು ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್ ಆಯಾ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಅವರು ಜಿಲ್ಲಾಧಿಕಾರಿಗಳ ನೇತೃತ್ವದ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ನಾಡ, ಬಡಾಕೆರೆ, ಮರವಂತೆ, ನಾವುಂದ, ಹೇರೂರು ಗ್ರಾಮಗಳಿಗೆ ತಲಾ ಒಂದು ದೋಣಿ ವಿತರಿಸಲಾಗಿದೆ. 18 ಅಡಿ ಉದ್ದದ ಪ್ರತಿ ಫೈಬರ್ ದೋಣಿಯನ್ನು ರೂ 85,000ಕ್ಕೆ ಖರೀದಿಸಲಾಗಿದೆ. ಈ ಗ್ರಾಮಗಳಲ್ಲಿ ವಿವಿಧ ಮೂಲಗಳಿಂದ ಖರೀದಿಸಿದ ದೋಣಿಗಳು ಈಗಾಗಲೇ ಇದ್ದರೂ ಪ್ರವಾಹ ಬಂದಾಗ ಗ್ರಾಮಗಳ ಎಲ್ಲ ಬಾಧಿತ ಪ್ರದೇಶಗಳಲ್ಲಿ ಏಕ ಕಾಲದಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಹೆಚ್ಚುವರಿ ದೋಣಿಗಳಿಗೆ ಬೇಡಿಕೆ ಬಂದ ಕಾರಣ ಇವುಗಳನ್ನು ಒದಗಿಸಲಾಗಿದೆ. ದೋಣಿಗಳ ನಿರ್ವಹಣೆ ಮತ್ತು ಉಸ್ತುವಾರಿಯನ್ನು ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ ಎಂದರು. ಮರವಂತೆಗೆ ನೀಡಿದ ದೋಣಿಯನ್ನು ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ,…
