ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರ ಸಂಘ ನಿ. ಮುಳ್ಳಿಕಟ್ಟೆ ಹೊಸಾಡು ಇದರ 5ನೇ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯು ಮುಳ್ಳಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಮುಖ್ಯ ಕಾರ್ಯನಿರ್ವಹಣಾಕಾಧಿಕಾರಿ ಭಾಸ್ಕರ ಬಿಲ್ಲವ, ಸಂಸ್ಥೆಯು ರೂ. 12,98,25,081 ಠೇವಣಿ ಸಂಗ್ರಹ, ರೂ10,23,76,291 ಸಾಲ ವಿತರಿಸಲಾಗಿದೆ. ರೂ.4,61,00,862 ಬೇರೆ ಬೇರೆ ಬ್ಯಾಂಕುಗಳಲ್ಲಿ ಠೇವಣಿ ಹೊಂದಿದ್ದು, ರೂ 6,48,447 ಮೌಲ್ಯದ ಚರಾಸಿಯನ್ನ್ಥು ಹೊಂದಿರುತ್ತದೆ. ಸಂಘದಲ್ಲಿ ಕಾಯ್ದಿರಿಸಿದ ನಿಧಿಗಳು 1,22,35,917 ಇರುತ್ತದೆ ಸದ್ರಿ ಆರ್ಥಿಕ ವರ್ಷದಲ್ಲಿ ರೂ. 56 ಕೋಟಿಗೂ ಮಿಕ್ಕಿ ವ್ಯವಹಾರ ಮಾಡಿದ್ದು ರೂ7,92,000 ಲಾಭ ಗಳಿಸಿರುತ್ತದೆ ಎಂದು ವರದಿ ಮಂಡಿಸಿದರು. ಸಂಘದ ಅಧ್ಯಕ್ಷರು ಸಂಘವು ಆರ್ಥಿಕ ವ್ಯವಹಾರ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಸ್ಥೆ ಮಾಡಿರುತ್ತದೆ. ಲಾಕ್‌ಡೌನ್ ಸಂದರ್ಭದಲ್ಲಿ ಸದಸ್ಯರ ಮನೆಬಾಗಿಲಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡಿ 6 ಜನ ಸದಸ್ಯರ ಮದುವೆ 3 ಮನೆ ಪ್ರವೇಶಕ್ಕೆ ಸಹಕರಿಸಿದ್ದೇವೆ ಮತ್ತು ಮಹಾಸಭೆಯಲ್ಲಿ ಸಂಘದ ಸದಸ್ಯರ 1…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡಲ್ಪಡುವ ಈ ಸಾಲಿನ ‘ಟ್ಯಾಗೋರ್ ಪತ್ರಿಕಾ ಪ್ರಶಸ್ತಿ’ ಘೋಷಣೆಯಾಗಿದ್ದು, ಈ ಬಾರಿ ಈ ಪ್ರಶಸ್ತಿಗೆ ‘ವಿಜಯ ಕರ್ನಾಟಕ’ ಶಿವಮೊಗ್ಗ ಬ್ಯೂರೋ ಮುಖ್ಯಸ್ಥ ವಿವೇಕ ಮಹಾಲೆ, ‘ದಿಗ್ವಿಜಯ ನ್ಯೂಸ್’ನ ಉತ್ತರಕನ್ನಡ ಜಿಲ್ಲಾ ವರದಿಗಾರ ಶೇಷಗಿರಿ ಮುಂಡಳ್ಳಿ ಹಾಗೂ ‘ಪ್ರಜಾವಾಣಿ’ ಉತ್ತರಕನ್ನಡ ಜಿಲ್ಲಾ ವರದಿಗಾರ ಸದಾಶಿವ ಎಂ.ಎಸ್. ಅವರನ್ನು ಆಯ್ಕೆ ಮಾಡಲಾಗಿದೆ. ಇತ್ತೀಚಿಗೆ ಸಂಘದ ಅಧ್ಯಕ್ಷ ಟಿ .ಬಿ. ಹರಿಕಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಮೂವರನ್ನೂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ 2016ರಿಂದ ಟ್ಯಾಗೋರ್ ಪತ್ರಿಕಾ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದ್ದು, ಕಾರವಾರದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿ, ಪ್ರಸ್ತುತ ಹೊರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಹಾಗೂ ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮದ ಈರ್ವರನ್ನು ಪ್ರತಿವರ್ಷ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಈ ವರ್ಷ ತಾಲೂಕಿನ ಸಿದ್ದರ ಗ್ರಾಮದಲ್ಲಿ ಜುಲೈ 25ರಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿರಿಯ ಪತ್ರಕರ್ತ, ಉದಯವಾಣಿಯಲ್ಲಿ 44 ವರ್ಷ ಸೇವೆ ಸಲ್ಲಿಸಿ ವಿಶ್ರಾಂತರಾಗಿರುವ ಎನ್. ಗುರುರಾಜ್ ಅವರಿಗೆ ಪತ್ರಕರ್ತರ ವೇದಿಕೆ ಬೆಂಗಳೂರು ನೀಡುವ ಪತ್ರಿಕಾದಿನದ ಗೌರವ (2021)ವನ್ನು ಅವರ ನಿವಾಸದಲ್ಲಿ ಹರಿಕೃಷ್ಣ ಪುನರೂರು ಅವರು ಪ್ರದಾನಿಸಲಿರುವರು ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಡಾ.ಶೇಖರ ಅಜೆಕಾರು ತಿಳಿಸಿದ್ದಾರೆ. ಒಂದೇ ಪತ್ರಿಕೆಯಲ್ಲಿ 44 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವರ ಮಾಧ್ಯಮ ಸೇವೆಯನ್ನು ಗುರುತಿಸಿ ಅವರನ್ನು ಜುಲೈ23 ರಂದು ಗೌರವಿಸಲಾಗುತ್ತಿದೆ. ದಾವಣಗೆರೆ ಜಗಳೂರಿನ ಅಸಗೋಡಿನಲ್ಲಿ 1944ರಲ್ಲಿ ಜನಿಸಿದ ಎನ್.ಗುರುರಾಜ್ ಇಂಜಿನಿಯರ್ ಪದವಿಧರರು. ಉತ್ತಮ ಕಥೆಗಾರರಾಗಿರುವ ಅವರು ಪದವಿಯ ತಕ್ಷಣ ಆಗ ತಾನೆ ಪ್ರಕಟಣೆ ಆರಂಭಿಸಲಿದ್ದ ಉದಯವಾಣಿಗೆ ಅನುವಾದಕರಾಗಿ ಸೇರಿದರು. ಮುಂದೆ ಅವರ ತಮ್ಮ ಕಾರ್ಯದಕ್ಷತೆಯಿಂದ ಸಹಾಯಕ ಸುದ್ದಿ ಸಂಪಾದಕರಾಗಿ, ಸುದ್ದಿ ಸಂಪಾದಕರಾಗಿ, ಸಂಪಾದಕರಾಗಿ 2014ರಲ್ಲಿ ಸೇವಾ ನಿವೃತ್ತಿ ಪಡೆದಿದ್ದಾರೆ. ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಅವರಿಗೆ 2006 ರ ಕರ್ನಾಟಕ ಮಾಧ್ಯಮ ಅಕಾಡೆಮಿಯ ಗೌರವ ಸಂದಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚವೀಶ್ ಜೈನ್ 600 ರಲ್ಲಿ 590 ಅಂಕಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.22: ಎಸ್‌ಎಸ್‌ಎಲ್‌ಸಿ ಎರಡನೇ ದಿನದ ಪರೀಕ್ಷೆಯನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕು ಸೇರಿದಂತೆ ಉಡುಪಿ ಜಿಲ್ಲಾದ್ಯಂತ ವಿದ್ಯಾರ್ಥಿಗಳು ನಿರ್ಭಯವಾಗಿ ಬರೆದಿದ್ದಾರೆ. ಈ ನಡುವೆ ತುಂಬಿ ಹರಿಯುತ್ತಿದ್ದರಿಂದ ಸೌಪರ್ಣಿಕಾ ನದಿಯ ನಡುವಿನ ಕುರು ದ್ವೀಪದಲ್ಲಿ ಪರೀಕ್ಷೆ ಬರೆಯಲಾಗದ ಆತಂಕದಲ್ಲಿದ್ದ ವಿದ್ಯಾರ್ಥಿಗಳನ್ನು ಸ್ವಯಃ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಎಸ್ ಹಾಗೂ ಉಡುಪಿ ಡಿ.ಎಚ್.ಓ ಎನ್. ಎಚ್ ನಾಗೂರು ದೋಣಿಯಲ್ಲಿ ಕರೆತಂದ ಪ್ರಸಂಗ ನಡೆದಿದೆ. ಸೌಪರ್ಣಿಕ ನದಿಯ ನಡುವಿನ ಕುರು ದ್ವೀಪದ ನಿವಾಸಿಗಳು ದೋಣಿಯನ್ನೇ ನಂಬಿ ಬದುಕು ಸವೆಸುತ್ತಿದ್ದಾರೆ. ಮಳೆಯಿಂದಾಗಿ ನೀರಿನ ಹರಿವು ಹೆಚ್ಚಿದ್ದರಿಂದ ದ್ವೀಪದ ನಿವಾಸಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಾದ ಶಿಲ್ಪಾ ಹಾಗೂ ಸಂಜನಾ ಆತಂಕದಲ್ಲಿದ್ದರು. ಪರೀಕ್ಷಾ ಸಂಯೋಜಕರ ಮೂಲಕ ವಿಷಯ ತಿಳಿದ ಶಿಕ್ಷಣಾಧಿಕಾರಿಗಳು ಹಾಗೂ ತಹಶೀಲ್ದಾರ್ ವಿದ್ಯಾರ್ಥಿಗಳ ಮನೆಗೆ ತೆರಳಿ ದೋಣಿಯಲ್ಲಿ ಅವರನ್ನು ಕರೆತಂದಿದ್ದು, ಬಳಿಕ ಡಿಡಿಪಿಐ ಅವರ ವಾಹನದಲ್ಲಿ ನಾವುಂದ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದಿದ್ದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮುಂದಿನಮನಿ,…
ಮಳೆಗಾಲ ಶುರುವಾಗಿದೆ. ಜೋರಾಗಿ ಸುರಿಯುವ ಮಳೆ ಖುಷಿ, ಸಂತೋಷ, ಆತಂಕವನ್ನು ತರುವುದರ ಜೊತೆಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೂ ಆಹ್ವಾನ ನೀಡುತ್ತದೆ. ಕೊರೊನಾದಂತಹ ಸಾಂಕ್ರಾಮಿಕದ ನಡುವೆ ಈ ಮಳೆಗಾಲದ ರೋಗಗಳು ನಮ್ಮನ್ನ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುತ್ತವೆ. ಆದ್ದರಿಂದ ಇಂತಹ ರೋಗಗಳಿಂದ ಮಳೆಗಾಲದಲ್ಲಿ ನಮ್ಮ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಬೇಕು. ಸೊಳ್ಳೆಯಿಂದ ಹರಡುವ ರೋಗಗಳು:ಮಳೆಗಾಲ ಸೊಳ್ಳೆಗಳ ಸಂತಾನೋತ್ಪತ್ತಿ ಕಾಲ. ಆದ್ದರಿಂದ ಈ ಕಾಲದಲ್ಲಿ ಹಲವಾರು ರೋಗಗಳಿಗೆ ಕಾರಣವಾಗಬಹುದು. ಮಲೇರಿಯಾ: ಮಲೇರಿಯಾವು ಪ್ಲಾಸ್ಮೋಡಿಯಮ್ ಎಂಬ ಏಕಕೋಶೀಯ ಪರಾವಲಂಬಿಯಿಂದ ಬರುವುದು. ಇದು ಮಳೆಗಾಲದಲ್ಲಿ ಕಂಡುಬರುವ ಆರೋಗ್ಯದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ನೀರಿನ ಕಾಲುವೆಗಳು ಮತ್ತು ತೊರೆಗಳಲ್ಲಿ ಸೊಳ್ಳೆಗಳ ಉತ್ಪತ್ತಿಯಿಂದ ಉಂಟಾಗುತ್ತಿದ್ದು, ಹಲವಾರು ದಿನಗಳವರೆಗೆ ಜ್ವರ ಬರುತ್ತದೆ. ಡೆಂಗ್ಯೂ: ಡೆಂಗ್ಯೂವು ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಉಂಟಾಗುತ್ತದೆ. ಇದು ನಿಂತ ಅಥವಾ ಶೇಖರಣೆಯಾದ ನೀರಿನಲ್ಲಿ (ಬಕೆಟ್, ಡ್ರಮ್ಸ್, ಬಾವಿಗಳು, ಮರದ ರಂಧ್ರಗಳು ಮತ್ತು ಹೂವಿನ ಮಡಿಕೆಗಳು) ಸಂತಾನೋತ್ಪತ್ತಿ ಮಾಡುತ್ತದೆ. ಕಚ್ಚಿದ ನಾಲ್ಕರಿಂದ ಏಳು ದಿನಗಳ ನಂತರ ಡೆಂಗ್ಯೂ ಬರಲಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರದ ಅಕ್ಷರ ದಾಸೋಹ – ಬಿಸಿಯೂಟ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುವ ಅಡುಗೆ ಎಣ್ಣೆ ದಿನಸಿ ಅಂಗಡಿಗಳಲ್ಲಿ ಮಾರಾಟ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕೋವಿಡ್-19 ಸಂದರ್ಭ ಸರಕಾರ ವಿದ್ಯಾರ್ಥಿಗಳಿಗೆ ವಿತರಿಸಲು ಸರಬರಾಜು ಮಾಡಿದ್ದ ಅಡುಗೆ ಎಣ್ಣೆ, ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಗ್ಗರ್ಸೆಯ ಅಂಗಡಿಯೊಂದರಲ್ಲಿ ಪತ್ತೆಯಾಗಿರುವುದು ಸಂಶಯಗಳಿಗೆ ಎಡೆಮಾಡಿಕೊಟ್ಟಿತ್ತು. ಗ್ರಾಹಕರೋರ್ವರು ಎಣ್ಣೆ ಪ್ಯಾಕೇಟ್ ಪರಿಶೀಲಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಬಿಸಿಯೂಟ ಯೋಜನೆಯ ಎಣ್ಣೆ ಅಂಗಡಿಗಳಲ್ಲಿ ಮಾರಾಟಕ್ಕೆ ಬಂದಿದ್ದು ಹೇಗೆ ಎಂಬುದು ತನಿಕೆಯಿಂದ ತಿಳಿದುಬರಬೇಕಿದೆ. ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಅವರು ಸ್ಥಳಕ್ಕೆ ಭೇಟಿ ನೀಡಿ ತನಿಕೆ ನಡೆಸಿದ್ದಾರೆ /ಕುಂದಾಪ್ರ ಡಾಟ್ ಕಾಂ ಸುದ್ದಿ/ ಸರಕಾರದ ಉಚಿತ ಅಡುಗೆ ಎಣ್ಣೆ ವಿಕ್ರಯವಾಗುತ್ತಿರುವ ಬಗ್ಗೆ ದೂರ ಬಂದ ತಕ್ಷಣ, ತಗ್ಗರ್ಸೆಯ ಅಂಗಡಿ ಹಾಗೂ ಸಮೀಪದ ಎರಡು ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಪಟ್ಟಿ ಹಾಗೂ ಬಾಕಿ ಇರುವ ಸ್ಟಾಕ್ ಚೆಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಇದರ ಆಶ್ರಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬೈಂದೂರು ತಾಲೂಕಿನ ಜ್ಞಾನ ವಿಕಾಸ ಕೇಂದ್ರದ ಸೇವಾ ಪ್ರತಿನಿಧಿ ಮತ್ತು ಸಂಯೋಜಕಿಯರ ಸಭೆ ತ್ರಾಸಿಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಯೋಜನಾ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಯೋಜನೆಯ ಹಿರಿಯ ಜಿಲ್ಲಾ ನಿರ್ದೇಶಕ ಗಣೇಶ್ ಬಿ., ಜ್ಞಾನವಿಕಾಸ ಕಾರ್ಯಕ್ರಮದ ಮಹತ್ವ, ಕಾರ್ಯಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಜ್ಞಾನವಿಕಾಸ ಕಾರ್ಯಕ್ರಮದ ಅನುಷ್ಠಾನ ಹಾಗೂ ಈ ವರ್ಷದ ಕಾರ್ಯಕ್ರಮನ್ನು ಉತ್ತಮವಾಗಿ ಪರಿಣಾಮಕಾರಿಯಾಗಿ ಮಾಡುವ ಬಗ್ಗೆ ಮಾಹಿತಿ ನೀಡಿದರು. ತಾಲೂಕಿನ ಯೋಜನಾಧಿಕಾರಿ ಶಶಿರೇಖಾ ಪಿ ಅವರು ಕೇಂದ್ರದ ಸದಸ್ಯರಲ್ಲಿ ಹೆಚ್ಚಿನ ಆಸಕ್ತಿ ಬರುವ ಕಾರ್ಯಕ್ರಮ ಹಮ್ಮಿಕ್ಕೊಳ್ಳುವ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಕೇಂದ್ರದಲ್ಲಿ ಮಾಹಿತಿ ಹಮ್ಮಿಕೊಳ್ಳುವಂತೆ ತಿಳಿಸಿದರು. ಆಂತರಿಕ ಲೆಕ್ಕ ಪರಿಶೋಧಕ ರಾಘವೇಂದ್ರ ಕೇಂದ್ರದಲ್ಲಿ ನಿರ್ವಹಿಸಬೇಕಾದ ದಾಖಲಾತಿಗಳ ಬಗ್ಗೆ ಕೇಂದ್ರದ ಶ್ರೇಣಿಕರಣ ಹಾಗೂ ಗ್ರಂಥಾಲಯ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಾದ್ಯಂತ ಜುಲೈ 26ರಿಂದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿ, ಈ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ ಮತ್ತು ತೋಟಗಾರಿಕಾ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ 2021-22 ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಗ್ರ ಕೃಷಿ ಅಭಿಯಾನವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜುಲೈ 26 ರಿಂದ ಆಗಸ್ಟ್ 7 ರವರೆಗೆ ಏರ್ಪಡಿಸಿ, ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನಿಗಳ ತಂಡ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ , ಸಮಗ್ರ ಕೃಷಿ ಅಭಿವೃಧ್ದಿ ಕುರಿತು ರೈತರಿಗೆ ವಿವರವಾದ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕೃಷಿಕರನ್ನು ಸ್ವಾವಲಂಬಿಗಳಾಗಿ,ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢಗೊಳಿಸಲು ಪ್ರಸುತ್ತ ಸಾಲಿನಲ್ಲಿ , ಕೇಂದ್ರ ಸರಕಾರವು ಕೃಷಿ ಯೋಜನೆಗಳಿಗೆ ಹೆಚ್ಚು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ : ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಆಯೋಜಿಸಲಾಗಿದ್ದ ಉಚಿತ ಯೋಗ ಶಿಬಿರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯೋಗದಿಂದ ನಮ್ಮ ಜೀವನದಲ್ಲಿ ಬಹಳಷ್ಟು ಪ್ರಯೋಜನ ಪಡೆದುಕೊಳ್ಳಬಹದು. ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯ ವರ್ಧನೆಗೆ ಯೋಗ ಸಹಕಾರಿಯಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಂಡು, ಪ್ರತಿನಿತ್ಯ ಸ್ವಲ್ಪ ಸಮಯವನ್ನಾದರೂ ಯೋಗಾಭ್ಯಾಸಕ್ಕೆ ಮೀಸಲಿಡಬೇಕು ಎಂದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ನಾಗರಾಜ ಖಾರ್ವಿ ಗುಡ್ಡೆಕೇರಿ, ಶಾಂತಿ ಖಾರ್ವಿ, ಶ್ರೀ ಶಾರದೋತ್ಸವ ಸಮಿತಿ ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಯೋಗ…
