Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಏಳಜಿತ ಶ್ರೀ ರಾಮಕೃಷ್ಣ ಕುಟೀರದಿಂದ ಪರಿಸರದ ಆಟೋ ಚಾಲಕರಿಗೆ ದಿನಸಿ, ತರಕಾರಿ ಹಾಗೂ ಆಯುರ್ವೇದದ ಔಷದಿಗಳ ಕಿಟ್ ಗುರುವಾರ ಕುಟೀರದ ಆವರಣದಲ್ಲಿ ವಿತರಿಸಲಾಯಿತು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಕಿಟ್ ವಿತರಿಸಿ ಮಾತನಾಡಿ, ಕುಟೀರದ ವತಿಯಿಂದ ಈತನಕ ಅಗತ್ಯವುಳ್ಳವರನ್ನು ಗುರುತಿಸಿ 100ಕ್ಕೂ ಹೆಚ್ಚು ಕಿಟ್ಗಳನ್ನು ವಿತರಿಸಲಾಗಿದೆ. ಸಂಕಷ್ಟದ ಸಮಯದಲ್ಲಿ ಸಾಧ್ಯವಾದಷ್ಟು ನೆರವು ನೀಡಲಾಗಿದೆ. ಲಾಕ್ಡೌನ್ ಸಡಿಲಗೊಳಿಸಿರುದರಿಂದ ಕಿಟ್ ವಿತರಣಾ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಹಾಗೂ ಸಮಸ್ಯೆಗಳಿಗೆ ಆಸ್ಪದ ನೀಡದಂತೆ , ಅರ್ಹ ಸಾರ್ವಜನಿಕರಿಗೆ ಸಮರ್ಪಕವಾಗಿ ಲಸಿಕೆಯನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, ಆದ್ಯತಾ ವಲಯದಲ್ಲಿರುವವರು ಮತ್ತು ದುರ್ಬಲ ವರ್ಗದವರಿಗೆ ಸಮಪರ್ಕವಾಗಿ ಲಸಿಕೆ ನೀಡುವಂತೆ ತಿಳಿಸಿದ ಡಾ.ರೇಜು, ಲಸಿಕೆ ನೀಡುವ ಕುರಿತಂತೆ ಸಾರ್ವಜನಿಕರಿಗೆ ಸಾಕಷ್ಟು ಮುಂಚಿತವಾಗಿ ಮಾಹಿತಿ ನೀಡಿ, ಲಸಿಕಾ ಸ್ಥಳದಲ್ಲಿ ಅನಗತ್ಯವಾಗಿ ಜನದಟ್ಟಣಿ ಉಂಟಾಗದಂತೆ ಹಾಗೂ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಅರ್ಹರಿಗೆ ಲಸಿಕೆ ನೀಡಿ, ಲಸಿಕಾ ಉಸ್ತುವಾರಿಗೆ ನಿಯೋಜಿಸಿರುವ ಅಧಿಕಾರಿಗಳು ಲಸಿಕೆ ನೀಡುವ ಸ್ಥಳದಲ್ಲಿ ಸಮಸ್ಯೆಗಳು ಕಂಡುಬರದAತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 289 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 2 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 126, ಕುಂದಾಪುರ, ಬೈಂದೂರು ತಾಲೂಕಿನ 122, ಕಾರ್ಕಳ, ಹೆಬ್ರಿ ತಾಲೂಕಿನ 40 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 289 ಪ್ರಕರಣಗಳಲ್ಲಿ 13 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 276 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 74 ವರ್ಷದ ಪುರುಷ, ಕಾರ್ಕಳ ತಾಲೂಕಿನ 72 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 241 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3812 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3606 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 2146 ಮಂದಿಗೆ ಮೊದಲನೇ ಡೋಸ್, 304 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: 50ಕ್ಕೂ ಮಿಕ್ಕಿ ಕೋವಿಡ್ ಪಾಸಿಟಿವ್ ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಜಿಲ್ಲಾಧಿಕಾರಿಯವರ ಆದೇಶದಂತೆ ಜೂ.10ರಿಂದ 14ರವರೆಗೆ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ಬೆಳಗಿನಿಂದ ಗಂಗೊಳ್ಳಿಯ ಮೇಲ್‌ಗಂಗೊಳ್ಳಿ ಬಳಿ ಪೊಲೀಸ್ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸಿದ ಗಂಗೊಳ್ಳಿ ಪೊಲೀಸರು ತುರ್ತು ಅಗತ್ಯ ವೈದ್ಯಕೀಯ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಮಾಡಿಕೊಟ್ಟರು. ಸ್ಥಳೀಯ ಗ್ರಾಮ ಪಂಚಾಯತ್ ಟಾಸ್ಕ್‌ಪೋರ್ಸ್ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪೊಲೀಸರ ಸಹಕಾರದೊಂದಿಗೆ ಜನರ ಹಾಗೂ ವಾಹನಗಳ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಿದರು. ಗಂಗೊಳ್ಳಿ ಪ್ರವೇಶಿಸುವವರಿಗೆ ಹಾಗೂ ಹೊರ ಹೋಗುವವರಿಗೆ ನಿರ್ಬಂಧ ಹೇರಲಾಗಿತ್ತು. ಸಂಪೂರ್ಣ ಲಾಕ್‌ಡೌನ್ ಹಿನ್ನಲೆಯಲ್ಲಿ ಜನರ ಮತ್ತು ವಾಹನ ಸಂಚಾರವಿಲ್ಲದೆ ಮುಖ್ಯರಸ್ತೆ ಬಿಕೋ ಎನ್ನುತ್ತಿತ್ತು. ಎಲ್ಲಾ ಸಹಕಾರಿ ಬ್ಯಾಂಕ್ ಮತ್ತು ಸೌಹಾರ್ದ ಸಹಕಾರಿಯನ್ನು ಮುಚ್ಚಲಾಗಿತ್ತು. ರಾಷ್ಟ್ರೀಕೃತ ಬ್ಯಾಂಕ್ ಮತ್ತು ಅಂಚೆ ಕಛೇರಿ ತೆರೆದಿದ್ದರೂ ಯಾವುದೇ ವಹಿವಾಟು ನಡೆಸಲು…

Read More

ನಿಮ್ಮ ಆಹಾರದ ಜೊತೆಗೆ ಮೊಸರು ತಿನ್ನುವುದು ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳುವುದಲ್ಲದೆ, ದೇಹದ ಉಷ್ಣತೆಯನ್ನು ಶಾಂತಗೊಳಿಸುತ್ತದೆ. ಮೊಸರನ್ನು ಪ್ರತಿದಿನ ತಿನ್ನುವುದರಿಂದ ಬಾಡಿ ಡಿಟಾಕ್ಸ್ ಗೆ ಕಾರಣವಾಗುತ್ತದೆ, ಆದರೆ ಮೊಸರಿನೊಂದಿಗೆ ಸೇವಿಸಬಾರದ ಕೆಲವೊಂದು ಆಹಾರಗಳಿವೆ. ಇವುಗಳನ್ನು ಮೊಸರಿನೊಂದಿಗೆ ತಿನ್ನುವುದರಿಂದ, ದೇಹದಲ್ಲಿ ಜೀವಾಣು ರೂಪುಗೊಳ್ಳುತ್ತದೆ, ಇದು ರೋಗ ನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ. ಮಾವು ಮತ್ತು ಮೊಸರು: ನೀವು ಎಂದಿಗೂ ಮಾವು ಮತ್ತು ಮೊಸರನ್ನು ಒಟ್ಟಿಗೆ ತಿನ್ನಬೇಡಿ. ಇವೆರಡೂ ದೇಹಕ್ಕೆ ವಿಷಕಾರಿಯಾಗಿವೆ. ಏಕೆಂದರೆ ಅವುಗಳ ಪರಿಣಾಮವು ಪರಸ್ಪರ ಭಿನ್ನವಾಗಿರುತ್ತದೆ. ಆದ್ದರಿಂದ ನೀವೇನಾದ್ರೂ ಮೊಸರಿನೊಂದಿಗೆ ಮಾವಿನಹಣ್ಣು ಸೇವಿಸುವುತ್ತಿದ್ದರೆ ಈಗಲೇ ನಿಲ್ಲಿಸಿ. ಇವು ನಿಮ್ಮ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿವೆ. ಉದ್ದಿನ ಬೇಳೆ ಮತ್ತು ಮೊಸರು: ಉದ್ದಿನ ಬೇಳೆಯನ್ನು ಮೊಸರಿನೊಂದಿಗೆ ತಿನ್ನಬಾರದು, ಎರಡೂ ಹೊಟ್ಟೆಗೆ ಹೋಗಿ ದೇಹಕ್ಕೆ ದೊಡ್ಡ ಹಾನಿ ಉಂಟುಮಾಡುತ್ತದೆ. ಆದ್ದರಿಂದ ಉದ್ದಿನ ಬೇಳೆಯನ್ನು ಮೊಸರಿನೊಂದಿಗೆ ಎಂದಿಗೂ ಸೇವಿಸಬೇಡಿ. ಇದು ಖಂಡಿತ ನಿಮ್ಮಲ್ಲಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಾಲು ಮತ್ತು ಈರುಳ್ಳಿ ಅಥವಾ ಮೊಸರು ಮತ್ತು ಈರುಳ್ಳಿ: ಇವುಗಳನ್ನು ಎಂದಿಗೂ ಒಟ್ಟಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಆಯಾ ತಾಲೂಕು ತಹಶೀಲ್ದಾರರುಗಳು ವೈಯಕ್ತಿಕ ಗಮನಹರಿಸಿ ತಮ್ಮ ತಾಲೂಕು ವ್ಯಾಪ್ತಿಯ ಎಲ್ಲಾ ಸ್ಥಳಗಳಿಗೆ ಭೇಟಿ ನೀಡಿ, ಸರಕಾರಿ ಜಮೀನುಗಳು ಅತಿಕ್ರಮಣವಾಗಿರುವ ಪ್ರಕರಣಗಳನ್ನು ಪತ್ತೆಹಚ್ಚಿ, ಅತಿಕ್ರಮಣವನ್ನು ತೆರವುಗೊಳಿಸಬೇಕು. ಸದ್ರಿ ಜಮೀನನ್ನು ಸರಕಾರದ ವಶಕ್ಕೆ ಪಡೆದು ಸೂಚನಾ ಬೋರ್ಡ್ ಹಾಗೂ ತಡೆಬೇಲಿಯನ್ನು ಅಳವಡಿಸಿ, ಸರ್ಕಾರಿ ಜಮೀನನ್ನು ಅತಿಕ್ರಮಣ ಮಾಡಿದವರ ಮೇಲೆ ಕಾನೂನು ಕ್ರಮ ವಹಿಸಲು ಹಾಗೂ ಇದಕ್ಕೆ ಸಹಕಾರ ನೀಡಿ ಅತಿಕ್ರಮಣಕ್ಕೆ ಕಾರಣರಾದ ಕಂದಾಯ ಇಲಾಖಾ ನೌಕರರ ವಿರುದ್ಧ ಶಿಸ್ತು ಕ್ರಮ ವಹಿಸಲು ಪ್ರಸ್ತಾವನೆ ಸಲ್ಲಿಸಬೇಕು. ಈ ಕುರಿತು ತಹಶೀಲ್ದಾರರುಗಳು ಪ್ರತಿದಿನ ಕೈಗೊಂಡ ಕ್ರಮದ ಬಗ್ಗೆ ವಿಸ್ತೃತ ವರದಿಯನ್ನು ಜೂನ್ 11 ರ ಸಂಜೆ 4 ಗಂಟೆಯ ಒಳಗೆ ಜಿಲ್ಲಾಧಿಕಾರಿ ಕಚೇರಿಗೆ, ಕುಂದಾಪುರ ಸಹಾಯಕ ಕಮೀಷನರ್ ಮೂಲಕ ಇ-ಮೇಲ್ನಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜೂ.9: ಯಡಮೊಗೆ ಗ್ರಾಮದ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಮಂದಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಜೂ.6ರಂದು ನಡೆದ ಕೊಲೆ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಎಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನ್ನು ಅಂದು ಮಧ್ಯರಾತ್ರಿಯೇ ಬಂಧಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಇನ್ನೋರ್ವ ಆರೋಪಿ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಹಾಗೂ ರಾಜೇಶ್ ಭಟ್ ಎಂಬಾತನನ್ನು ಬಂಧಿಸಲಾಗಿದ್ದು ಮೂವರೂ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜೂ.9ರಂದು ಯಡಮೊಗೆ ನಿವಾಸಿ ಮನೋಜ್ ಕುಮಾರ್, ಯಡಮೊಗೆ ಗ್ರಾಮ ಪಂಚಾಯತ್ ಸದಸ್ಯ ಸದಾಶಿವ ನಾಯ್ಕ್ ಹಾಗೂ ಸ್ಥಳೀಯ ನಿವಾಸಿ ವೇಣುಗೋಪಾಲ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಜೂನ್ 29ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರಾಣೇಶ್ ಯಡಿಯಾಳ್ ಹಾಗೂ ಆತನ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ ಎಂದು ಉದಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಮೂಲಕ ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ಬಿಡುಗಡೆ ಮಾಡುತ್ತಿರುವುದನ್ನು ತಡೆಹಿಡಿಯುವಂತೆ ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಯುಕ್ತರಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ 34,500 ಹಿಂದೂ ದೇವಸ್ಥಾನಗಳಿಗೆ ತಸ್ತೀಕ್ ನೀಡಲಾಗುತ್ತಿದ್ದು, ಸುಮಾರು 133 ಕೋಟಿ ರೂಪಾಯಿ ಸರಕಾರ ವಾರ್ಷಿಕ ಅನುದಾನ ಹಂಚುತ್ತಿದೆ. ಈ ಪೈಕಿ ಸುಮಾರು 764 ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೆಲವು ವರ್ಷಗಳಿಂದ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪುತ್ತಿದೆ. ಅದನ್ನು ತಡೆಹಿಡಿಯಲು ಸೂಚಿಸಲಾಗಿದೆ. ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ, ಆಯಾಯ ಇಲಾಖೆಯ ಜವಾಬ್ದಾರಿ ಹಾಗೂ ಆಯಾ ಇಲಾಖೆಯ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದವರು ತಿಳಿಸಿದ್ದಾರೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಜೂ.9: ಎಂಡೋಸಲ್ಫಾನ್ ಸಂತ್ರಸ್ಥರ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ಕಳುಹಿಸಲು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ನಿರ್ದೇಶನದ ಮೇರೆಗೆ ಉಡುಪಿ ಜಿಲ್ಲಾ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎಸ್ ಅವರು ಇಂದು ಕಿರಿಮಂಜೇಶ್ವರ ಗ್ರಾಮಕ್ಕೆ ಭೇಟಿ ನೀಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಎಂಡೋಸಲ್ಫಾನ್ ಸಂತ್ರಸ್ಥರಾದ ಮಣಿಕಂಠ (8 ವರ್ಷ) ಹೆರಿಂಜಾಲು, ರೋಶನಿ (4 ವರ್ಷ), ನಾಗಮ್ಮ (25 ವರ್ಷ), ಮಹಮ್ಮದ್ ಐಯಾನ್ ಕಂಬದಕೋಣೆ (8 ವರ್ಷ), ರಂಜಿತ (21 ವರ್ಷ), ತರಣ್ (5 ವರ್ಷ), ತನ್ಮಯಿ (14 ವರ್ಷ) ಹೆರೂರು ಅವರನ್ನು ಭೇಟಿ ಮಾಡಿ ಅವರ ಕುಟುಂಬಿಕರಿಂದ ಪ್ರಸ್ತುತ ಸ್ಥಿತಿಗತಿಗಳ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಬೈಂದೂರು ತಹಸೀಲ್ದಾರ್ ಶೋಭಾ ಲಕ್ಷ್ಮಿ, ಎಸ್ಐ ಸಂಗೀತ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಬುಧವಾರ 409 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 3 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 175, ಕುಂದಾಪುರ, ಬೈಂದೂರು ತಾಲೂಕಿನ 123, ಕಾರ್ಕಳ, ಹೆಬ್ರಿ ತಾಲೂಕಿನ 107 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 409 ಪ್ರಕರಣಗಳಲ್ಲಿ 19 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 390 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 56 ವರ್ಷದ ಮಹಿಳೆ, 75 ವರ್ಷದ ಪುರುಷ, 67 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 423 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3766 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3448 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 4207 ಮಂದಿಗೆ ಮೊದಲನೇ ಡೋಸ್, 384 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್…

Read More