ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ರೋಟರಾಕ್ಟ್ ಕ್ಲಬ್ನ 20121-22 ನೇ ಸಾಲಿನ ಪದಗ್ರಹಣ ಸಮಾರಂಭ ಕೋಟೇಶ್ವರದ ರೋಟರಿ ಭವನದಲ್ಲಿ ಜರಗಿತು. ನೂತನ ಅಧ್ಯಕ್ಷರಾಗಿ ರಾಕೇಶ್ ಶೆಟ್ಟಿ ವಕ್ವಾಡಿ ಕಾರ್ಯದರ್ಶಿಯಾಗಿ ಭರತ್ ರಾಜ್ ಕೋಟೇಶ್ವರ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ರಾದ ರೋ ಚಂದ್ರಶೇಖರ ಶೆಟ್ಟಿ ರೋಟರಾಕ್ಟ್ ಡಿಸ್ಟ್ರಿಕ್ಟ್ ಚೇರ್ಮನ್ ರೋ ಕೆಕೆ ಕಾಂಚನ್, ಡಿ ಆರ್ ಆರ್ ರೋ ಗ್ಲಾಡ್ಸನ್ ಕುಂದರ್, ರೋ ಗಣೇಶ್ ಆಚಾರ್ಯ, ರೋ ನಾಗೇಶ್ ಶೆಟ್ಟಿಗಾರ್ ಹಾಗೂ ರೋಟರಿ ಕ್ಲಬ್ ರೋಟರಾಕ್ಟ್ ಕ್ಲಬ್ನ ಸದಸ್ಯರು ಉಪಸ್ಥಿತರಿದ್ದರು. ರೋ ಶ್ರೀಕಾಂತ್ ಆಚಾರ್ಯ, ಭರತ್ ಹೊಸಮಠ ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೀವ್ರ ಬೆಲೆ ಏರಿಕೆ ಮರೆಮಾಚಲು ಬಿಜೆಪಿ ನಾಯಕರು ವಿವಾದಾಸ್ಪದ ಹೇಳಿಕೆ ನೀಡುತ್ತಿರುವುದು ತೀವ್ರ ಖಂಡನೀಯ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಖಂಡಿಸಿದ್ದಾರೆ. ನಿರಂತರ ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಅಗತ್ಯವಸ್ತು, ಕಟ್ಟಡ ಸಾಮಗ್ರಿಗಳ ಬೆಲೆ ಗಣನೀಯ ಏರಿಕೆಯಾಗಿದೆ. ಸ್ವಾತಂತ್ಯ ನಂತರ ದೇಶದಲ್ಲಿ ಅಧಿಕಾರಕ್ಕೆ ಬಂದ ಯಾವುದೇ ಸರಕಾರ ಬೆಲೆಯೆರಿಕೆ ಸಂದರ್ಭದಲ್ಲಿ ಈ ರೀತಿ ಕೈ ಕಟ್ಟಿ ಕುಳಿತುಕೊಂಡಿಲ್ಲ .ದೇಶದ ಜನತೆ ತಾವು ಏನು ಮಾಡಿದರು ನಮಗೆ ನಿರಂತರ ಮತ ನೀಡುತ್ತಾರೆ ಎನ್ನುವ ಮನಸ್ಥಿತಿಯಿಂದ ಪ್ರಧಾನಿ ಮತ್ತು ಬಿಜೆಪಿ ಸರಕಾರ ಈ ರೀತಿ ವರ್ತಿಸುತ್ತಿದ್ದಾರೆ. ಇವರ ಏಳು ವರ್ಷದ ಆಡಳಿತದಲ್ಲಿ ದೇಶದ ಜನರ ಆರ್ಥಿಕ ಸ್ಥಿತಿ 15 ವರ್ಷ ಹಿಂದಕ್ಕೆ ತಳ್ಳಲ್ಪಟ್ಟಿದೆ. ಕಾರ್ಮಿಕರ ,ಕ್ರಷಿಕರ, ಮಧ್ಯಮ ವರ್ಗದವರ ಪರಿಸ್ಥಿತಿ ತೀವ್ರ ಶೋಚನೀಯವಾಗಿದೆ ಎಂದು ಆಗ್ರಹಿಸಿದ್ದಾರೆ. ದೇಶದ ಜನತೆ ಇಂತಹ ಪರಿಸ್ಥಿತಿಯಲ್ಲಿರುವಾಗ ಸರಕಾರ ಮಧ್ಯಪ್ರವೇಶಿಸಿ ಇಂಧನ ಬೆಲೆ ಕಡಿಮೆ ಮಾಡಬೇಕು. ಅಂತಾರಾಷ್ಟ್ರೀಯ ಮಟ್ಟದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತರತ್ನ ಪಂ. ಭೀಮಸೇನ ಜೋಶಿ ಜನ್ಮ ಶತಾಬ್ದಿ ಸಂಗೀತೋತ್ಸವದ ಅಂಗವಾಗಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಆರ್. ಎನ್ ಶೆಟ್ಟಿ ಸಭಾಭವನದಲ್ಲಿ ಈಚೆಗೆ ನಡೆದ ಪಂ. ಗಣಪತಿ ಭಟ್ ಹಾಸಣಗಿ ಮತ್ತು ಅವರ ಶಿಷ್ಯ ವಿದ್ವಾನ್ ಸತೀಶ ಭಟ್ ಮಾಳಕೊಪ್ಪ ಅವರ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಚೇರಿ ‘ಭೀಮಪಲಾಸ’ ಸಂಗೀತಾಸಕ್ತರ ಮನಸೂರೆಗೊಂಡಿತು. ಈ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ, ಇನ್ಫೋಸಿಸ್ ಫೌಂಡೇಶನ್, ಭಾರತೀಯ ಜೀವವಿಮಾ ನಿಗಮ ಮತ್ತು ಎಲ್ಲೈಸಿ ಹೌಸಿಂಗ್ ಫೈನಾನ್ಸ್ ಪ್ರಧಾನ ಪ್ರಾಯೋಜಕತ್ವದಲ್ಲಿ ಧಾರವಾಡದ ಜಿ. ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ ಮತ್ತು ಹುಬ್ಬಳ್ಳಿಯ ಕ್ಷಮತಾ ಜತೆಯಾಗಿ ಆಯೋಜಿಸಿದ್ದುವು. ಸ್ಥಳೀಯ ಆಯೋಜಕರಾಗಿ ಇಲ್ಲಿನ ಗುರುಪರಂಪರಾ ಸಂಗೀತ ಸಭಾ ನಿರ್ವಹಿಸಿತ್ತು. ವಿವಿಡ್ ಲಿಪಿ ಯುಟ್ಯೂಬ್ನಲ್ಲಿ ನೇರ ಪ್ರಸಾರ ಮಾಡಿತ್ತು. ಕಾರ್ಯಕ್ರಮವನ್ನು ಎಲ್ಐಸಿ ಕುಂದಾಪುರ ಶಾಖೆಯ ಸೀನಿಯರ್ ಮ್ಯಾನೇಜರ್ ಯು. ನಾರಾಯಣ ಗೌಡ, ಮ್ಯಾನೇಜರ್ ರಾಘವೇಂದ್ರ ಸಾಮಗ. ಮಾಹೆ ವಿಶ್ವವಿದ್ಯಾಲಯದ ಕುಲಸಚಿವ ರಂಗ ಪೈ, ಪಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬೊಬ್ಬರ್ಯನಕಟ್ಟೆ ಜಂಕ್ಷನ್ನಲ್ಲಿ ಫ್ಲೈ ಓವರ್ಗೆ ಪ್ರವೇಶ ಮತ್ತು ನಿರ್ಗಮನ ನೀಡುವ ವಿಚಾರದಲ್ಲಿ ಅ.30ರೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಉಡುಪಿ ಜಿಲ್ಲಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಅ.13ರಂದು ಇಲ್ಲಿನ ಪುರಸಭೆ ಸದಸ್ಯರ ನಿಯೋಗ ಉಡುಪಿ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಬೊಬ್ಬರ್ಯನಕಟ್ಟೆ ಜಂಕ್ಷನ್ ಮುಚ್ಚುಗಡೆಯಿಂದ ಕುಂದಾಪುರ ನಗರ ಪ್ರವೇಶ – ನಿರ್ಗಮನ ಕೊಂಡಿ ಕಳಚಿ ಹೋಗಿದ್ದು ಕೂಡಲೇ ಜಂಕ್ಷನ್ ತೆರವಿಗೆ ಅನುವು ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿದ್ದರು. ಜಂಕ್ಷನ್ ಮುಚ್ಚುಗಡೆಯಿಂದ ಆಗುತ್ತಿರುವ ತೊಂದರೆ ಮತ್ತು 14ಕ್ಕೂ ಮಿಕ್ಕಿ ಸರಕಾರಿ ಕಚೇರಿಗಳು, ಮೂರು ವಾರ್ಡ್ನ ಜನರು ಎದುರಿಸುತ್ತಿರುವ ಸಂಕಷ್ಟ ಹಾಗೂ ಸ್ಥಳದ ಬಗ್ಗೆ ತನಿಖೆ ನಡೆಸಿದ ಉಡುಪಿ ಡಿಸಿ ಸಮಿತಿ ರಚಿಸಿ ಅ.೩೦ರೊಗಳಗೆ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಆದೇಶದಲ್ಲೇನಿದೆ?: ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರ ಫ್ಲೈ ಓವರ್ಗೆ ಪ್ರವೇಶ ನಿರ್ಗಮನಕ್ಕೆ ಅವಕಾಶ ನೀಡುವ ಬಗ್ಗೆ ಜನಪ್ರತಿನಿಧಿಗಳು, ಸಾರ್ವಜನಿಕರಿಂದ ಅಹವಾಲುಗಳು ಸಲ್ಲಿಕೆಯಾಗಿದ್ದು, ಪತ್ರಿಕೆ ಸಾಮಾಜಿಕ ಜಾಲತಾಣದಲ್ಲೂ ಅವಕಾಶ ನೀಡುವ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾತೃಭೂಮಿ ಸೇವಾ ಟ್ರಸ್ಟ್ ರಿ. ತುಮಕೂರು ಇವರ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹಾಗೂ ಸೇವೆ ಗೈದವರಿಗೆ ಕೊಡಮಾಡುವ ‘ರಾಜ್ಯ ಮಟ್ಟದ ಕರುನಾಡ ಕಣ್ಮಣಿ ಪ್ರಶಸ್ತಿ’ಗೆ ಬಸ್ರೂರಿನ ಪ್ರದೀಪ್ ಕುಮಾರ್ ಆಯ್ಕೆಯಾಗಿದ್ದಾರೆ. ಅವರು, ಕ್ರೀಡೆ, ಸಾಂಸ್ಕ್ರತಿಕ,ಶೈಕ್ಷಣೀಕ, ಸಾವ೯ಜನಿಕ ಸೇವಾ ವಲಯ,ಧಾಮಿ೯ಕ ಸೇವೆಯೊಂದಿಗೆ ಸ್ವತಂತ್ರ ಸಂಶೋಧನಾ ಕಾಯ೯ದಲ್ಲಿ ತೊಡಗಿಕೊಂಡು ಶಾಸನ ಶೋಧ ಕಾಯ೯ದ ಒಂದು ಶಾಸನವು ಹಂಪಿ ವಿಶ್ವವಿದ್ಯಾಲಯದ ಶಾಸನ ಪ್ರಸಾರಾಂಗ ವಿಭಾಗದಲ್ಲಿ ವರದಿಯಾಗಿದೆ. ಇದರೊಂದಿಗೆ ಅನೇಕ ವೀರಗಲ್ಲು, ಶಾಸನ ಕಲ್ಲು, ಪುರಾತನ ದೇವರ ವಿಗ್ರಹವನ್ನು ಪರಿಚಯಿಸಿದ್ದಾರೆ. ಅವರ ಅನೇಕ ಸಂಘ ಸಂಸ್ಥೆಯ ಸೇವೆಯನ್ನು ಗುರುತಿಸಿ ಮಾತೃಭೂಮಿ ಸೇವಾ ಟ್ರಸ್ಟ್ ನವೆಂಬರ್ 21 ರಂದು ತುಮಕೂರುನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದೆ. ಅವರು, ಹಟ್ಟಿಕುದ್ರು ಗುಜ್ಜಾಡಿ ಮನೆ ಪದ್ಮನಾಭ ಪೂಜಾರಿ ಹಾಗೂ ಉಗ್ರಾಣಿ ಮನೆ ಗಿರಿಜಾ ಪೂಜಾರಿ ದಂಪತಿಯ ದ್ವಿತೀಯ ಪುತ್ರ.
ಕುಂದುದ್ರಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಡಳಿತ ಸೇವೆಗೆ ಸೇರ್ಪಡೆಗೊಳ್ಳಬೆಕು, ಈ ಮೂಲಕ ಸಮಾಜದಲ್ಲಿ ತಮ್ಮ ಚಿಂತನೆಯ ಬದಲಾವಣೆಯನ್ನು ತರಬಹುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಸಹಯೋಗದಲ್ಲಿ ಶುಕ್ರವಾರ ಮಣಿಪಾಲ ರಜತಾದ್ರಿ ಸಭಾಂಗಣದಲ್ಲಿ ಆಯೋಜಿಸಿದ್ದ ‘ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ’ ಕುರಿತು ಹಮ್ಮಿಕೊಂಡ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ತರಬೇತಿ ಕಾರ್ಯಾಗಾರವನ್ನು ಆಫ್ಲೈನ್ ಮತ್ತು ಆನ್ ಲೈನ್ ಎರಡೂ ಮಾದರಿಯಲ್ಲಿ ನಡೆಸುವ ಚಿಂತನೆಯಿದ್ದು, ಸ್ಪರ್ದಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮೊದಲು ತಮ್ಮ ಬಗ್ಗೆ ತಾವೇ ಅರಿತಿರಬೇಕು,ಆಸಕ್ತಿಯಿರುವ ಕ್ಷೇತ್ರಗಳ ಬಗ್ಗೆ ತಿಳಿದಿರಬೇಕು. ಸಾಧನೆಯ ಹಾದಿಯಲ್ಲಿ ವೈಪಲ್ಯಗಳು ಎದುರಾದರೂ ಮುನ್ನೆಡೆದು ಗುರಿ ಸಾಧಿಸಬೇಕು , ಶ್ರಮ ಪಟ್ಟರೆ ಸ್ಪರ್ದಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು ಜಿಲ್ಲಾ ಪಂಚಾಯತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಾಸ್ತ್ರೀ ವೃತ್ತದ ಬಳಿ ಬ್ರೌನ್ ಶುಗರ್, ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಮತ್ತು ತಂಡ ಸೊತ್ತುಗಳ ಸಹಿತ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರಕನ್ನಡ ಜಿಲ್ಲೆಯ ನಿವಾಸಿ ಮಹಮ್ಮದ್ ಜಾಫರ್ ಗುಡುಮಿಯಾ (28) ಎಂದು ಗುರುತಿಸಲಾಗಿದೆ. ಆರೋಪಿಯ ಬಳಿ ಇದ್ದ 1 ಕೆ.ಜಿ 800 ಗ್ರಾಂ ತೂಕದ ಗಾಂಜಾ ಅಂದಾಜು ಮೌಲ್ಯ ನಲವತ್ತು ಸಾವಿರ ರೂಪಾಯಿ ಹಾಗೂ 1 ಗ್ರಾಂ ಬ್ರೌನ್ ಶುಗರ್ ಅಂದಾಜು ಮೌಲ್ಯ ಹತ್ತು ಸಾವಿರ ರೂಪಾಯಿ, ಎರಡು ಮೊಬೈಲ್ ಪೋನ್, ಒಂದೂವರೆ ಸಾವಿರ ರೂಪಾಯಿ ನಗದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ನಿರ್ದೇಶನದಲ್ಲಿ ಎಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಶ್ರೀಕಾಂತ್ ಕೆ. ಹಾಗೂ ಡಿವೈಎಸ್ಪಿ ಕಚೇರಿಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ರಾಘವೇಂದ್ರ ಉಪ್ಪುಂದ, ವಿಜಯ ಕುಂದಾಪುರ, ರಾಮು ಹೆಗ್ಡೆ, ರಮೇಶ್ ಕುಲಾಲ್, ಕುಂದಾಪುರ ಪೊಲೀಸ್ ಠಾಣೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆದರ್ಶ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕೆರಾಡಿ ಗ್ರಾಮ ಪಂಚಾಯತ್ನಲ್ಲಿ ಕ್ಷಯ ಮುಕ್ತ ಗ್ರಾಮ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮವನ್ನು ಕೆರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಿರಿಜಾ ಶೆಟ್ಟಿ ಉದ್ಘಾಟಿಸಿದರು. ಪಂಚಾಯಿತಿನ ಸದಸ್ಯರಾದ ರಾಘವೇಂದ್ರ ಕೊಠಾರಿ ಹಾಗೂ ಮಂಜುನಾಥ ಕೊಠಾರಿ ಮಾತನಾಡಿ ಇಡೀ ಗ್ರಾಮವನ್ನು ಕ್ಷಯ ಮುಕ್ತ ಮಾಡಲು ಕೆರಾಡಿ ಗ್ರಾಮ ಪಂಚಾಯತ್ ಸಹಕರಿಸುವುದಾಗಿ ತಿಳಿಸಿದರು. ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗುರುಮೂರ್ತಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರವೀಣ್ ಶೆಟ್ಟಿ, ಕುಂದಾಪುರ ತಾಲೂಕು ಆಸ್ಪತ್ರೆಯ ಎನ್ಸಿಡಿ ವಿಭಾಗದ ವೈದ್ಯಾಧಿಕಾರಿ ಡಾ. ರಂಜಿತಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಕುಂದಾಪುರ ತಾಲೂಕಿನ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಗುರುದಾಸ್ ಕಾರ್ಯಕ್ರಮವನ್ನು ನಿರೂಪಿಸಿದರು, ಕಾರ್ಯಕ್ರಮದ ಉದ್ದೇಶದ ಕುರಿತು ಹಿರಿಯ ಮೇಲ್ವಿಚಾರಕ ಆಲ0ದೂರು ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಿಪಿಎಂಒ ಸುರೇಶ್ ಸಾಲಿಗ್ರಾಮ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕೆರಾಡಿ ಗ್ರಾಮದ ಸಾರ್ವಜನಿಕರಿಗೆ ಮಧುಮೇಹ, ರಕ್ತದೊತ್ತಡ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯ ಶಿಕ್ಷಕರ ಸಂಘದ ನಿರ್ದೇಶನದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಮಾನ್ಯ ಶಿಕ್ಷಣ ಸಚಿವರಿಗೆ/ ಪ್ರಧಾನ ಕಾರ್ಯದರ್ಶಿಗಳು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ / ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ಮನವಿಯನ್ನು ಕಚೇರಿಯ ಮುಖ್ಯಾಧಿಕಾರಿ ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳ ಮೂಲಕ ಇಂದು ಸಲ್ಲಿಸಲಾಯಿತು. ಈ ಸಂದರ್ಭ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಹೋರಾಟದ ರೂಪುರೇಷೆಗಳನ್ನು ಸವಿಸ್ತಾರವಾಗಿ ಹಾಗೂ ತರಬೇತಿ ಬಹಿಷ್ಕಾರ ಕಪ್ಪುಪಟ್ಟಿ ಧರಿಸಿ ಮಕ್ಕಳೊಂದಿಗೆ ಇದ್ದು ನಿರಂತರ ಹೋರಾಟ ಮಾಡಲು ಶಿಕ್ಷಕ ರ ಸಹಕಾರ ಕೋರಿ ಮನವಿ ಸಲ್ಲಿಸಿದರು. ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಗಣಪತಿ ಹೋಬಳಿದಾರ್ ಪದವೀಧರ ಶಿಕ್ಷಕರ ಸಮಸ್ಯೆ ವ್ರಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಮುಖ್ಯೋಪಾಧ್ಯಾಯರ ವೇತನ ಬಡ್ತಿ ಸಮಸ್ಯೆ ನೂತನ ಪಿಂಚಣಿ ರದ್ದತಿ ಕುರಿತು ಗ್ರಾಮೀಣ ಕೃಪಾಂಕದ ಶಿಕ್ಷಕರ ಸಮಸ್ಯೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ವಿನಾಯಕ ಯುವಕ ಮಂಡಲ ರಿ. ಸಾಬ್ರಕಟ್ಟೆ-ಯಡ್ತಾಡಿ ಇದರ 11ನೇ ವರ್ಷದ ಸಾಲಿನ ಅಧ್ಯಕ್ಷರಾಗಿ ರಾಜೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಭಾಕರ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಂದೀಶ್ ನಾಯ್ಕ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗೋಪಾಲ ನಾಯ್ಕ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮಂಜುನಾಥ ನಾಯ್ಕ, ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವನಾಥ ಸಾಬ್ರಕಟ್ಟೆ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ರಾಜೇಂದ್ರ ಪೂಜಾರಿ ಅವರನ್ನು ಸದಸ್ಯರ ಸಮ್ಮುಖದಲ್ಲಿ ಮುಂದಿನ ಒಂದು ವರ್ಷದ ಅವಧಿಗೆ ಆಯ್ಕೆ ಮಾಡಲಾಗಿದೆ.
