Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅರ್ಬನ್ ಸೌಹಾರ್ದ ಕೊ- ಆಪರೇಟಿವ್ ಸೊಸೈಟಿಯ ಇ- ಸ್ಟಾಂಪ್ ಸೌಲಭ್ಯ ಉದ್ಘಾಟನೆ ಮುಖ್ಯ ಕಛೇರಿಯಲ್ಲಿ ನಡೆಯಿತು. ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ ಉಪಪ್ರಾಂಶುಪಾಲರಾದ ರಾಮ ದೇವಾಡಿಗ ಉದ್ಘಾಟಿಸಿದರು, ಸೊಸೈಟಿ ಅಧ್ಯಕ್ಷರಾದ ಮಣಿಕಂಠ ಎಸ್ . ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೈಂದೂರು ಭಾಗದ ವಕೀಲರಾದ ಮೋಬಿ ಪಿ.ಸಿ, ಮಂಗೇಶ್ ಶ್ಯಾನುಭಾಗ್, ಪ್ರಶಾಂತ ಪೂಜಾರಿ, ಲಿಂಗಪ್ಪ ಮೇಸ್ತ, ಚಂದ್ರಶೇಖರ್ ಪಿ. ಹಾಗೂ ಎಲ್ಲಾ ನಿರ್ದೇಶಕರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸೌಮ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ವಿವಿಧ ದುಷ್ಪರಿಣಾಮಗಳ ಕುರಿತು, ಮಕ್ಕಳ ಮೂಲಕವೇ ತಿಳಿದು, ಅವುಗಳಿಗೆ ಸೂಕ್ತ ನೆರವು ಹಾಗೂ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಯುನಿಸೆಫ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ, ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ದುಷ್ಪರಿಣಾಮಗಳ ಕುರಿತ ಮಕ್ಕಳ ಸಾರ್ವಜನಿಕ ಅಹವಾಲು ವಿಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸುಮಾರು 1.5 ವರ್ಷಕ್ಕೂ ಅಧಿಕ ಅವಧಿಯ ಕೋವಿಡ್-19 ಪಿಡುಗು, ಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಂಡಿತ್ತು. ಈ ಅವಧಿಯಲ್ಲಿ ಮಕ್ಕಳು ಶಾಲೆಯ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಂದ ಹೊರಗುಳಿದಿದ್ದರು. ಮೊಬೈಲ್ ಮೂಲಕವೇ ಆನ್ಲೈನ್ ತರಗತಿಗಳಿಗೆ ಹಾಜರಾಗಿದ್ದರು. ಮಕ್ಕಳು ಹೆಚ್ಚು ಕಾಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚುನಾವಣಾ ಆಯೋಗದವರು ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ನಡೆಸಿದ ‘ಇಂಗ್ಲಿಷ್ ಪ್ರಬಂಧ’ ಸ್ಪರ್ಧೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರಾವ್ಯ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಮತ್ತು ಬೋಧಕ, ಬೋಧಕೇತರ ವ್ರಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಶುಕ್ರವಾರದಂದು ವಿಜ್ರಂಭಣೆಯಿಂದ ನಡೆಯಿತು. ಶ್ರೀ ದೇವರ ನರಗ ಪುರಮೆರವಣಿಗೆಯಲ್ಲಿ ಭಜನಾ ತಂಡ ಹಾಗೂ ವಾದ್ಯ ತಂಡಗಳು ಭಾಗವಹಿಸಿದ್ದವು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿ ಜನ್ಮದಿನಾಚರಣೆ, ಸದಸ್ಯತ್ವ ನೋಂದಾವಣೆ ಕಾರ್ಯಕ್ರಮ ನಡೆಯಿತು. ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಮಾತನಾಡಿ ‘ದೇಶಕ್ಕೆ ಇಂದಿರಾಗಾಂಧಿ ಯವರ ಕೊಡುಗೆ ಅಪಾರವಾದುದು. ಪಕ್ಷದ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಪಕ್ಷದ ಮೇಲೆ ಹಾಗೂ ನಾಯಕತ್ವದ ಮೇಲೆ ಗೌರವ ಹೆಮ್ಮೆ ಇರಬೇಕು. ಭೂಮಸೂದೆ, ಬ್ಯಾಂಕ್ ರಾಷ್ಟ್ರೀಕರಣ, ಇಪ್ಪತ್ತು ಅಂಶಗಳ ಕಾರ್ಯಕ್ರಮ ಮುಂತಾದ ಜನಪರ ಕಾರ್ಯಕ್ರಮಗಳ ಮೂಲಕ ಈ ದೇಶದ ದೀನದಲಿತರ ಉದ್ಧಾರಕ್ಕಾಗಿ ಯೋಜನೆಗಳನ್ನು ನೀಡಿದವರು ಇಂದಿರಾಗಾಂಧಿ. ಇದೀಗ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಸರಕಾರಿ ಆಸ್ತಿಗಳು ಖಾಸಗೀಕರಣ ಆಗುತ್ತಿರುವುದು ಖೇಧಕರವಾದುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಷ್ಟದಲ್ಲಿರುವ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದು ತಪ್ಪಾಗದು ಆದರೆ ಲಾಭದಲ್ಲಿರುವ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿರುವುದು ಸರಿಯಲ್ಲ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತೀ ಬೂತ್ ನಲ್ಲಿ ಕನಿಷ್ಠ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾಡ್ಮಿಂಟನ್ ಲೋಕದ ದಿಗ್ಗಜ, ವಿಶ್ವದರ್ಜೆಯ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರು, ಹುಟ್ಟೂರು ಪಡುಕೋಣೆಗೆ ಆಗಮಿಸಿದ್ದರು. ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿರುವ ಸಂದರ್ಭದಲ್ಲಿ ಪ್ರಕಾಶ್ ಪಡುಕೋಣೆ ಹುಟ್ಟೂರು ಪಡುಕೋಣೆಗೆ ಆಗಮಿಸಿರುವುದು ವಿಶೇಷವಾಗಿದೆ. ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಪ್ರಕಾಶ್ ಪಡುಕೋಣೆ ಅವರನ್ನು ಸ್ವಾಗತಿಸಲಾಯಿತು. ಕೆಲಹೊತ್ತು ವಿದ್ಯಾರ್ಥಿಗಳೊಂದಿಗೆ ಕಳೆದ ಪ್ರಕಾಶ್ ಪಡುಕೋಣೆ ಪ್ರೋತ್ಸಾಹದ ಮಾತುಗಳನ್ನಾಡಿದರು. ವಿಶ್ವಮಟ್ಟದ ಬ್ಯಾಡ್ಮಿಂಟನ್ ಧ್ರುವತಾರೆ ಪ್ರಕಾಶ್ ಪಡುಕೋಣೆ ತಮ್ಮ ಶಾಲೆಗೆ ಭೇಟಿ ನೀಡಿರುವುದಕ್ಕೆ ಅತೀವ ಸಂಭ್ರಮ ಪಟ್ಟ ವಿದ್ಯಾರ್ಥಿಗಳು ಪ್ರಕಾಶ್ ಅವರೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡರು. ಶಾಲೆಯಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಪ್ರಕಾಶ್ ಪಡುಕೋಣೆ ದಂಪತಿಗಳನ್ನು ಅಭಿನಂದಿಸಲಾಯಿತು. ನಾಗರಾಜ ಬಿ ಪಡುಕೋಣೆ ಮತ್ತು ಪ್ರವೀಣ ಪಡುಕೋಣೆ ಪ್ರಕಾಶ್ ಪಡುಕೋಣೆ ಅವರನ್ನು ಬರಮಾಡಿಕೊಂಡರು. ಸುಬ್ರಹ್ಮಣ್ಯ ಪಡುಕೋಣೆ ಅಭಿನಂದನಾ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸರೀಟಾ ಪಾಯಸ್, ಸಹಶಿಕ್ಷಕರಾದ ಅಮಿತಾ, ಶ್ಯಾಮಲ, ಜ್ಯೋತಿ, ಅಕ್ಷರ ದಾಸೋಹ ಸಿಬಂದಿಗಳಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಾಗತಿಕ ಬಂಟರ ಸಂಘ ಬಹು ಹಿಂದಿನಿಂದಲೂ ಸಮಾಜದ ಕಟ್ಟಕಡೆಯಲ್ಲಿರುವ ಬಂಟರ ಶ್ರೇಯೋಭಿವೃದ್ದಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಉತ್ತಮವಾದ ಹೆಸರನ್ನು ಗಳಿಸಿತ್ತು. ಆದರೆ ಇದೀಗ ಜಾಗತಿಕ ಬಂಟರ ಸಂಘಗಳ ಒಕ್ಕೂಟ ವಿಧಾನಪರಿಷತ್ ಚುನಾವಣೆಗೆ ಬಂಟೇತರ ವ್ಯಕ್ತಿಯಾದ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ರವರಿಗೆ ಬೆಂಬಲ ಘೋಷಿಸಿರುವುದು ಆಶ್ಚರ್ಯ ಹುಟ್ಟಿಸಿದೆ ಹಾಗೆ ಬೆಂಬಲ ಘೋಷಿಸಲು ಜಾಗತಿಕ ಬಂಟರ ಸಂಘ ರಾಜಕೀಯ ಪಕ್ಷವೇ? ಎಂದು ಬಂಟರ ಸಂಘದ ಸದಸ್ಯ ಸನ್ಮತ್ ಹೆಗ್ಡೆ ಪ್ರಶ್ನಿಸಿದ್ದಾರೆ. ಬಂಟ ಸಮುದಾಯದಿಂದ ಇದೀಗ ಪ್ರತಾಪ್ ಚಂದ್ರ ಶೆಟ್ಟಿಯವರಂತಹ ಭ್ರಷ್ಟಾಚಾರ ರಹಿತ ನಾಯಕ ವಿಧಾನಪರಿಷತ್ ಅಭ್ಯರ್ಥಿಯಾಗಿರುವ ಸಂಧರ್ಭದಲ್ಲಿ ಜಾಗತಿಕ ಬಂಟರ ಸಂಘ ಅವರನ್ನು ಪುನಃ ಅವಿರೋಧವಾಗಿ ಆಯ್ಕೆ ಮಾಡುವಂತೆ ಎರಡೂ ರಾಜಕೀಯ ಪಕ್ಷಗಳಿಗೆ ಒತ್ತಾಯಿಸುವ ಬದಲಿಗೆ ಬಂಟರಲ್ಲದ ವ್ಯಕ್ತಿಗೆ ಬೆಂಬಲ ಘೋಷಿಸಿರುವುದರ ಹಿಂದಿನ ಮರ್ಮವೇನು ಎಂದವರು ಪ್ರಶ್ನಿಸಿದ್ದಾರೆ. ಪ್ರತಾಪ್ ಚಂದ್ರ ಶೆಟ್ಟಿಯವರ ಹೊರತಾಗಿ ಬಂಟ ಜಾತಿಯಿಂದ ಮಂಜುನಾಥ ಭಂಡಾರಿ, ಯು.ಬಿ ಶೆಟ್ಟಿ, ರಮಾನಾಥ ರೈ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2021-22ನೇ ಸಾಲಿನ ರಾಷ್ಟ್ರೀಯ ಮತದಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದಲ್ಲಿ ನಡೆಸಿದ ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ಕೋಡಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೇಘ ಶೆಟ್ಟರ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋವಾದಲ್ಲಿ ನಡೆದ ರಾಷ್ಟ್ರಮಟ್ಟದ ಬೆಂಜ್ ಪ್ರೆಸ್ 2 ವಿಭಾಗದಲ್ಲಿ ಸ್ಪರ್ಧಿಸಿದ ಸತೀಶ್ ಖರ್ವಿ ಅವರು ಬೆಳ್ಳಿ ಪದಕ ಹಾಗೂ ಕಂಚಿನ ಪದಕ ಗೆದ್ದಿದ್ದಾರೆ. ಸತೀಶ್ ಖಾರ್ವಿ ಕುಂದಾಪುರದ ಹರ್ಕ್ಯುಲೆಸ್ ಜಿಮ್ನ ವ್ಯವಸ್ಥಾಪಕ ಹಾಗೂ ಖಾರ್ವಿಕೇರಿ ಕಿಂಗ್ ಫಿಶರ್ ಸ್ಪೋರ್ಟ್ಸ್ ಕ್ಲಬ್ ಸದಸ್ಯರಾಗಿದ್ದು ಈ ಹಿಂದೆ ಹಲವು ರಾಷ್ಟೀಯ, ಅಂತರಾಷ್ಟ್ರೀಯ ಸ್ವರ್ಧೆಗಳಲ್ಲಿ ಭಾಗವಹಿಸಿ ಪದಕ ಗೆದ್ದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಶುಕ್ರವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳು ಆರಂಭಗೊಂಡವು. ತಂತ್ರಿಗಳು ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಳ್ಳುತ್ತದೆ. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ಕೋವಿಡ್ ಮಾರ್ಗಸೂಚಿ ಇದ್ದ ಹಿನ್ನೆಲೆಯಲ್ಲಿ ಸರಳ ಆಚರಣೆ ನಡೆಯಿತು. ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ಸಂಜೆಯ ರಥೋತ್ಸವಕ್ಕೆ ಚಾಲನೆ ಸಿಗುತ್ತಿರುವಂತೆಯೇ ಗರುಡ ದರ್ಶನ ಆಗಿದ್ದು ರಥಕ್ಕೆ ಎರಡು ಸುತ್ತು ಬಂದು ನಿರ್ಗಮಿಸುತ್ತದೆ. ಗರುಡದರ್ಶನ ವೀಕ್ಷಿಸಲು ಸಹಸ್ರಾರು ಭಕ್ತರು ನೆರೆದಿದ್ದು ಗರುಡ ರಥಕ್ಕೆ ಸುತ್ತು…

Read More