ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗ್ರಾಮೀಣ ಭಾಷೆಗಳ ಬಗ್ಗೆ ಯಾರಿಗೂ ಕೀಳರಿಮೆ ಇರಬಾರದು ಅದರ ಶ್ರೇಷ್ಠತೆ ಅಳಯಲು ಸಾಧ್ಯವಿಲ್ಲ ಎಂದು ಗ್ರಾಮ್ಯ ಭಾಷೆಯ ಸೋಗಡುಗಾರ ಎಂ ಜಯರಾಮ ಶೆಟ್ಟಿ ಹೇಳಿದ್ದಾರೆ ಪಂಚವರ್ಣ ಯುವಕ ಮಂಡಲ ಕೋಟ, ಪಂಚವರ್ಣ ಮಹಿಳಾ ಮಂಡಲ ಕೋಟ ಆಶ್ರಯದಲ್ಲಿ ಹಂದಟ್ಟು- ದಾನಗುಂದು ಗೆಳೆಯರ ಬಳಗ ಸಭಾಭವನದಲ್ಲಿ ಆಸಾಡಿ ವಡ್ರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಕುಂದಗನ್ನಡಕ್ಕೆ ವಿಶ್ವಮಾನ್ಯತೆ ಎಲ್ಲೆಡೆ ದೊರಕುತ್ತಿದೆ ಅದೊಂದು ಬದುಕಿನ ಚಹರೆಯಾಗಿದೆ ಎಂದರಲ್ಲದೆ ಇದರ ಮಹತ್ವವನ್ನು ನಮ್ಮ ಹಿರಿಯರು ಮುಂದಿನ ಪೀಳಿಗೆಗೆ ಧಾರೆ ಎರೆಯಬೇಕು, ಅದೇ ರೀತಿಯಲ್ಲಿ ಆಷಾಢ ಮಾಸಕ್ಕೆ ವಿಶೇಷತೆ ಇದೆ, ಈ ತಿಂಗಳಲ್ಲಿ ಮಾಡುವ ತಿಂಡಿ ತಿನಿಸುಗಳು ಆರೋಗ್ಯಕ್ಕೆ ಪೂರಕವಾಗಿದ್ದವು ಹಾಗೂ ಆಚರಣೆಯ ಹಿಂದೆ ನಂಬಿಕೆ ಇದೆ ಎಂದರು. ಆಧುನಿಕತೆಯ ಹೊಡೆತಕ್ಕೆ ಸಿಲುಕಿ ಕುಂದಗನ್ನಡ ಶಬ್ದ ಮರೆಯಾಗದಿರಲಿ ಎಂದರು ಹಾಗೂ ಕುಂದಾಪ್ರ ಕನ್ನಡ ದಿನಾಚರಣೆ ನಮ್ಮಆಚಾರ- ವಿಚಾರ ಬೆಳೆಸುವಲ್ಲಿ ಸಹಾಯಕವಾಗಿದ್ದು, ಇದು ನಿತ್ಯ ನಿರಂತರವಾಗಿ ನಡೆಯಲಿ ಎಂದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಬಯೋಟೆಕ್ನಾಲಜಿ ವಿಭಾಗ ಹಾಗೂ ಮಂಗಳೂರಿನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಆಶ್ರಯದಲ್ಲಿ ಆಹಾರ ಮತ್ತು ಫಾರ್ಮಾಸ್ಯುಟಿಕಲ್ ಜೈವಿಕ ತಂತ್ರಜ್ಞಾನದ ಕುರಿತ ಅಂತರರಾಷ್ಟ್ರೀಯ ಮಟ್ಟದ ಕಾನ್ಫರೆನ್ಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಯನಾಡ್ನ ಡಾ. ಮೂಪೆನ್ಸ್ ಮೆಡಿಕಲ್ ಕಾಲೇಜಿನ ಫಾರ್ಮಾಕಾಲಜಿ ವಿಭಾಗದ ಸಹಪ್ರಾಧ್ಯಪಕ ಡಾ. ರವಿ ಮುಂಡುಗಾರು, ಸಮಸ್ಯೆಗಳನ್ನು ಮೂಲದಿಂದ ಅರಿತು ಅದಕ್ಕೆ ಪರಿಹಾರವನ್ನು ಹುಡುಕಬೇಕು. ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಡ್ರಗ್ಗಳ ಬಳಕೆಯನ್ನು ಅರಿತುಕೊಂಡು, ಔ?ಧೀಯ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಸಾಧಿಸಬೇಕೆಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಸಮಾಜದಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಕಾರ್ಯಪ್ರವೃತ್ತರಗಬೇಕು. ತಂತ್ರಜ್ಞಾನ ಹಳೆಯದಾಗಬಹುದು ಆದರೆ ದೃಢ ಸಂಕಲ್ಪದಿಂಧ ಛಲ ಬಿಡದೆ ಕೆಲಸ ಮಾಡಿದರೆ ನಮ್ಮ ಗುರಿಯನ್ನು ತಲುಪಬಹುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆಳ್ವಾಸ್ ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ಪತ್ನಿ ನಾಗರತ್ನ ಶೆಟ್ಟಿ (80) ಭಾನುವಾರ ಸಂಜೆ ಬಸ್ರೂರಿನ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಧಾರ್ಮಿಕ, ಸಾಮಾಜಿಕ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಬಸ್ರೂರು ಹಾಗೂ ಕೊಲ್ಲೂರಿನ ಕೂಡುರಿನ ಪರಿಸರದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು. ಮೃತರಿಗೆ ಪತಿ, ಇಬ್ಬರು ಪುತ್ರರು, ಮೂವರು ಪುತ್ರಿಯರಿದ್ದಾರೆ ಅಂತ್ಯಕ್ರಿಯೆ:ಸೋಮವಾರ ಮಧ್ಯಾಹ್ನ ಕೊಲ್ಲೂರು ಸಮೀಪದ ಕೂಡುರು ಮನೆಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದ್ದು, ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಬಸ್ರೂರಿನ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಳೆದ ಜೂನ್ ತಿಂಗಳಿನಲ್ಲಿ ನಡೆದ ಕರ್ನಾಟಕ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ರಾಜ್ಯದ ಟಾಪ್ 9 ರ್ಯಾಂಕ್ ಗಳಲ್ಲಿ 2ನೇ ರ್ಯಾಂಕನ್ನು ಇಲ್ಲಿನ ವಿದ್ಯಾರ್ಥಿ ಮನೋಜ್ ಪಡೆದಿದ್ದು, ಬಿಎಸ್ಸಿ ಅಗ್ರಿಯಲ್ಲಿ 5ನೇ ರ್ಯಾಂಕ್, ಬಿಎನ್ವೈಎಸ್ಲ್ಲಿ 8ನೇ ರ್ಯಾಂಕ್, ಪಶು ವೈದ್ಯಕೀಯದಲ್ಲಿ 12ನೇ ರ್ಯಾಂಕ್, ಬಿ.ಫಾರ್ಮ್ ಹಾಗೂ ಡಿ.ಫಾರ್ಮಾದಲ್ಲಿ 22ನೇ ರ್ಯಾಂಕ್, ಇಂಜಿನಿಯರಿಂಗ್ನಲ್ಲಿ 77ನೇ ರ್ಯಾಂಕ್ ಗಳಿಸಿದ್ದಾರೆ. ಮೊದಲ 50 ರ್ಯಾಂಕ್ 11 ರ್ಯಾಂಕ್, ಮೊದಲ 100 ರಲ್ಲಿ 17 ರ್ಯಾಂಕ್ ಗಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ 1966 ವಿದ್ಯರ್ಥಿಗಳಲ್ಲಿ 55 ವಿದ್ಯಾರ್ಥಿಗಳ 180ರಲ್ಲಿ 150ಕ್ಕಿಂತ ಅಧಿಕ ಅಂಕಗಳನ್ನು ಪಿಸಿಬಿ ಹಾಗೂ ಪಿಸಿಎಂ ವಿಷಯಗಳಲ್ಲಿ ಪಡೆದಿದ್ದಾರೆ. 1228 ವಿದ್ಯಾರ್ಥಿಗಳು 180ರಲ್ಲಿ 100ಕ್ಕೂ ಅಧಿಕ ಅಂಕ ಪಿಸಿಬಿ ವಿಷಯದಲ್ಲಿ ಹಾಗೂ 571 ವಿದ್ಯಾರ್ಥಿ ಪಿಸಿಎಂ ವಿಷಯದಲ್ಲಿ ಪಡೆದಿದ್ದಾರೆ. 1248 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯ ಯಾವುದಾದರೂ ಒಂದು ವಿಷಯದಲ್ಲಿ 50…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕುಂದಾಪುರ ಚಿತ್ತೂರಿನ ಗುರುರಾಜ ಪೂಜಾರಿ ಕಂಚಿನ ಪದಕ ಗೆಲ್ಲುವ ಮೂಲಕ ಕ್ರೀಡಾಕ್ಷೇತ್ರದಲ್ಲಿ ರಾಷ್ಟ್ರದ ಕೀರ್ತಿ ಪತಾಕೆ ಹಾರಿಸಿದ್ದಾರೆ. 2018ರಲ್ಲಿ ಗೋಲ್ಡ್ ಕೋಸ್ಟ್’ನಲ್ಲಿ ನಡೆದ 21ನೇ ಕಾಮನ್ ವೆಲ್ತ್ ಗೇಮ್ಸ್ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಭಾರತದ ಪದಕಗಳ ಭೇಟೆ ಆರಂಭ ದೊರಕಿಸಿಕೊಟ್ಟಿದ್ದರು. ಚಿತ್ತೂರು ಗ್ರಾಮದ ಜಡ್ಡು ಮಹಾಬಲ ಪೂಜಾರಿ ಹಾಗು ಪದ್ದು ದಂಪತಿಗಳ ಆರು ಮಕ್ಕಳಲ್ಲಿ ಐದನೇಯವರಾದ ಗುರುರಾಜಗೆ ಓದಿನಷ್ಟೇ ಕ್ರೀಡೆಯಲ್ಲಿಯೂ ಆಸಕ್ತಿ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಕಲಿಯುತ್ತಿದ್ದ ಸಂದರ್ಭದಲ್ಲಿ ರ್ವೆಸ್ಲಿಂಗ್’ನಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದ ಗುರುರಾಜ್ಗೆ ಸುಕೇಶ್ ಶೆಟ್ಟಿ ಅವರು ತರಬೇತಿ ನೀಡಿದ್ದರು. ಮುಂದೆ ಪದವಿ ವ್ಯಾಸಂಗಕ್ಕಾಗಿ ಉಜಿರೆಯ ಎಸ್.ಡಿ.ಎಂ ಕಾಲೇಜು ಸೇರಿದ ಬಳಿಕ ಗುರುರಾಜ್ ಬದುಕಿಗೊಂದು ತಿರುವು ದೊರೆತಿತ್ತು. ಈ ಅವಧಿಯಲ್ಲಿ ಎಂ. ರಾಜೇಂದ್ರ ಪ್ರಸಾದ್ ವೇಯ್ಡ್ ಲಿಫ್ಟಿಂಗ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪ್ರ ಭಾಷೆ ಈ ಭಾಗದ ಜನರ ಜೀವನಾಡಿಯಿದ್ದಂತೆ, ಅದನ್ನು ವಿಶ್ವದೆಲ್ಲೆಡೆ ಪಸರಿಸುವಂತಾಗಬೇಕು, ಇಲ್ಲಿನ ಆಚರಣೆ ಸಂಸ್ಕೃತಿ ತನ್ನದೇ ಆದ ಮಹತ್ವವನ್ನು ಹೊಂದಿದ್ದು ಇನ್ನಷ್ಟೂ ಈ ಭಾಷೆ ಸಮೃದ್ಧವಾಗಿ ಬೆಳೆಯಲಿ, ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಕುಂದಾಪ್ರ ಭಾಷೆಯ ವಿವಿಧ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುವುದು ಅಲ್ಲದೇ ಕುಂದಾಪ್ರ ಭಾಷೆ ಅಕಾಡೆಮಿ ಸ್ಥಾಪಿಸಲು ಸರಕಾರವನ್ನು ಒತ್ತಾಯಿಸಲಾಗುವುದೆಂದು ಉಡುಪಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಹೇಳಿದರು. ಅವರು ಡಾ|| ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ|| ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಆಶ್ರಯದಲ್ಲಿ ಯು ಚಾನೆಲ್ ಸಹಯೋಗದಲ್ಲಿ ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ಕುಂದಾಪ್ರ ಕನ್ನಡ ಉತ್ಸವ ಹಾಡಿಗೆ-ಹನ್ನೆರಡು ಕಬರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಉಡುಪಿ ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿರ್ದೇಶಕಿ ಪೂರ್ಣಿಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರಾವಳಿಯಲ್ಲಿ ಚತುಷ್ಪಥ ಕಾಮಗಾರಿ ಆರಂಭವಾದಾಗಿಂದ ಗುತ್ತಿಗೆದಾರ ಕಂಪೆನಿಯ ಅವ್ಯವಸ್ಥೆಯಿಂದಾಗಿ ಒಂದಿಲ್ಲೊಂದು ಅಪಘಾತ ನಡೆಯುತ್ತಲೇ ಇದೆ. ಪ್ರಾಧಿಕಾರಕ್ಕೆ ಹಲವು ಭಾರಿ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆಯುತ್ತಿಲ್ಲ. ಶೀಘ್ರ ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ಸರಣಿ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ರಾಷ್ಟ್ರೀಯ ಹೆದ್ದಾರಿ -66ರ ಅವ್ಯವಸ್ಥೆಯನ್ನು ಖಂಡಿಸಿ ಶಿರೂರು ಗ್ರಾಮ ಪಂಚಾಯತ್ ಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ನೇತೃತ್ವದಲ್ಲಿ ಶನಿವಾರ ಶಿರೂರು ಟೋಲ್ ಬಳಿ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿ ಬೀದಿ ದೀಪ, ಸರ್ವಿಸ್ ರಸ್ತೆ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಸಾರ್ವಜನಿಕರು ಪ್ರತಿನಿತ್ಯ ಎದುರಿಸುತ್ತಿದ್ದಾರೆ. ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ನಿಂತು ಅಪಘಾತವಾಗುತ್ತಿದೆ. ಈ ಎಲ್ಲದಕ್ಕೂ ಪರಿಹಾರ ದೊರೆಯಬೇಕಿದೆ ಎಂದರು. ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸಂಸದರು ಹಾಗೂ ಶಾಸಕರು ಈಗಾಗಲೇ ಇಲ್ಲಿನ ಸಮಸ್ಯೆಗಳ ಬಗ್ಗೆ ತಿಳಿಸಿದ್ದು ಸಮಸ್ಯೆ ಬಗೆಹರಿಸುವ ಭರವಸೆಯನ್ನೂ ನೀಡಿದ್ದರು. ಇಷ್ಟರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.29: ವಿದ್ಯಾರ್ಥಿಗಳು ಜ್ಞಾನವನ್ನು ವಿಸ್ತರಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಬೇಕು. ಪ್ರಾಥಮಿಕ ಹಂತದಲ್ಲಿ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಲು ಶಾಲೆ ಉತ್ತಮ ವೇದಿಕೆಯಾಗಿದ್ದು ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಯುಬಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು.ಬಿ. ಶೆಟ್ಟಿ ಹೇಳಿದರು. ಬೈಂದೂರು ಯು. ಬಿ. ಶೆಟ್ಟಿ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ವಿದ್ಯಾರ್ಥಿ ಸಂಸತ್ತನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಆತ್ಮವಿಶ್ವಾಸದ ಜತೆಗೆ ಸೇವಾ ಮನೋಭಾವ ಮೂಡಿಸುವ ಕೆಲಸವಾಗಬೇಕು. ವ್ಯಕ್ತಿತ್ವ ವಿಕಸನದ ಮೂಲಕ ಮನವೀಯತೆಯ ಮೌಲ್ಯ ರೂಪಿಸಿ ಸಮಾಜದಲ್ಲಿ ನಿಸ್ವಾರ್ಥ ಸೇವೆ ಗೈಯುವಂತೆ ಮಾಡುವಲ್ಲಿ ಅವರಿಗೆ ಉತ್ತಮ ಮಾರ್ಗದರ್ಶನದ ಮೂಲಕ ಸರಿಯಾದ ದಾರಿಯಲ್ಲಿ ನಡೆಸುತ್ತಿರುವ ಶಿಕ್ಷಕರ ಪಾತ್ರ ಶ್ಲಾಘನೀಯ. ಇದೇ ರೀತಿಯಲ್ಲಿ ಈ ಸಾಲಿನ ವಿದ್ಯಾರ್ಥಿ ಸಂಸತ್ತಿನ ಸಚಿವರು ತಮ್ಮ ಜವಾಬ್ದಾರಿ ಅರಿತು ತಮ್ಮ ಪರಿಮಿತಿಯಲ್ಲಿ ಶಾಲಾಭಿವೃದ್ಧಿ ಬಗ್ಗೆ ಗಮನ ಹರಿಸಬೇಕು. ಶಿಕ್ಷಕ ವರ್ಗ ಹಾಗೂ ಸಹಪಾಠಿಗಳೊಂದಿಗೆ ಬಾಂಧ್ಯವ್ಯವಿರಿಸಿ ಸಹಬಾಳ್ವೆ ಮೂಲಕ ಶಾಲೆಯ ಶಿಸ್ತು, ಸಂಯಮವನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಭಾಷೆಗಿರುವ ಇತಿಹಾಸ ಕುಂದಗನ್ನಡ ಭಾಷೆಗೂ ಇದೆ. ಪ್ರಾದೇಶಿಕ ಅನನ್ಯತೆಯನ್ನು ಒಳಗೊಂಡು ವಿಶಿಷ್ಠ ನಂಬಿಕೆ ಆಚರಣೆಗಳ ಮೂಲಕ ಸಾಂಸ್ಕೃತಿಕ ಹೆಗ್ಗುರುತನ್ನು ಹೊಂದಿರುವ ಈ ಭಾಷೆಯ ಅಭಿವೃದ್ಧಿಗೆ ಮಂಗಳೂರು ವಿ.ವಿ.ಯಲ್ಲಿ ಕುಂದಗನ್ನಡ ಅಧ್ಯಯನ ಪೀಠಕ್ಕೆ ಅನುಮೋದನೆ ದೊರಕಿರುವುದು ಸ್ತುತ್ಯಾರ್ಹ. ಕುಂದಗನ್ನಡ ಭಾಷೆ & ಸಂಸ್ಕೃತಿಯ ಬಹುಮುಖಿ ಆಯಾಮದ ಸಂಶೋಧನೆಗೆ & ಅಭಿವೃದ್ಧಿಗೆ ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪನೆಯಾಗಲಿ ಎಂದು ಕುಂದಪ್ರಭ ವಾರಪತ್ರಿಕೆ ಸಂಪಾದಕ ಯು. ಎಸ್. ಶೆಣೈ ಹೇಳಿದರು. ಅವರು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಕನ್ನಡ ವಿಭಾಗ ಆಯೋಜಿಸಿದ ವಿಶ್ವ ಕುಂದಾಪ್ರಕನ್ನಡ ದಿನವನ್ನು ಉದ್ಧೇಶಿಸಿ ಮಾತನಾಡಿದರು. ಕುಂದಗನ್ನಡ ಭಾಷೆಯನ್ನು ಬಳಸಿ, ಬೆಳೆಸುವುದು ನಮ್ಮೆಲ್ಲರ ಕರ್ತವ್ಯವೆಂದು ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೆಶ್ ಶೆಟ್ಟಿ ಹೇಳಿದರು. ಮೂಡುಬಗೆಯ ಬಾಪು ಸಾಹೇಬರು ಭತ್ತ ಕುಟ್ಟುವ ಹಾಡುಗಳ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ರಾಮ್ ಶೆಟ್ಟಿ ಅತ್ತಿಕಾರ್, ಶ್ರೀ ಪ್ರಸಾದ್ ಜೋಗಿ ಹಕ್ಲಾಡಿ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ, ಜು.28: ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಆಶ್ರಯದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಕಾರ್ಯಕ್ರಮ ಕೋಟ ಪಶು ಆಸ್ಪತ್ರೆ ವಠಾರದಲ್ಲಿ ಜರಗಿತು. ಹಿರಿಯ ಕೃಷಿಕರಾದ ಕೂಸ ಪೂಜಾರಿಯವರು ಹಾಲೆ ಗಿಡವನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಉದ್ಯಮಿ ಆನಂದ ಸಿ. ಕುಂದರ್ ಮಾತನಾಡಿ, ನಮ್ಮ ಹಿಂದಿನ ತಲೆಮಾರಿನವರು ಗಿಡ ಮರಗಳನ್ನು ಬೆಳೆಸಿ ಸಂರಕ್ಷಿಸಿದ್ದರಿಂದ ಅದರ ಫಲ ಇವತ್ತು ನಾವು ಉಣ್ಣುವಂತಾಗಿದೆ. ಈ ಪರಂಪರೆಯನ್ನು ಮುಂದುವರಿಸುವಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಯಂತಹ ಕಾರ್ಯಕ್ರಮಗಳು ನೆಪವಾಗುತ್ತಿರುವುದು ಅರ್ಥಪೂರ್ಣ ಎಂದರು. ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಕುಂದಗನ್ನಡದ ವಿಶೇಷತೆಯನ್ನು ತಿಳಿಸಿದರು ಹಾಗೂ ಈ ಭಾಷೆಯನ್ನು ಬಳಸುವುದರ ಮೂಲಕ ಬೆಳೆಸಬೇಕು ಎಂದರು. ಸಾಂಸ್ಕೃತಿಕ ಚಿಂತಕ ಉದಯ ಶೆಟ್ಟಿ ಪಡುಕರೆ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಆಶಯಗಳನ್ನು ವಿವರಿಸಿದರು. ಪಶು ವೈದ್ಯಾಕಾರಿ ಡಾ| ಅರುಣ ಕುಮಾರ್ ಶೆಟ್ಟಿ, ಕೋಟ ಸಿ.ಎ. ಬ್ಯಾಂಕ್ ಅಧ್ಯಕ್ಷ ತಿಮ್ಮ ಪೂಜಾರಿ,…
