Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಾಮಫಲಕವನ್ನು ಕೊಡುಗೆಯಾಗಿ ನೀಡಲಾಯಿತು. ಆರೋಗ್ಯ ಕೇಂದ್ರದ ಸಮೀಪ ಅಳವಡಿಸಲಾಗಿರುವ ನಾಮಫಲಕವನ್ನು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅವರು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಸಮ್ಮುಖದಲ್ಲಿ ಬುಧವಾರ ಅನಾವರಣಗೊಳಿಸಿ ಕೊಡುಗೆಯನ್ನು ಹಸ್ತಾಂತರಿಸಿದರು. ನಾಮಫಲಕವನ್ನು ಕೊಡುಗೆಯಾಗಿ ನೀಡಿದ ಲಿಫ್ಟನ್ ಒಲಿವೇರಾ ಅವರನ್ನು ಗೌರವಿಸಲಾಯಿತು. ರೋಟರಿ ವಲಯ ಸೇನಾನಿ ಕೆ.ರಾಮನಾಥ ನಾಯಕ್, ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಸದಸ್ಯ ಬಿ.ರಾಘವೇಂದ್ರ ಪೈ, ರೋಟರಿ ಸದಸ್ಯರಾದ ಲಿಫ್ಟನ್ ಒಲಿವೇರಾ, ಗಿರೀಶ ಖಾರ್ವಿ, ಆಸ್ಪತ್ರೆಯ ಶುಶ್ರೂಷಕಿ ಶೋಭಾ, ಆಸ್ಪತ್ರೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ೨೭ ವರ್ಷಗಳಂದ ಆಯಾ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾಗುತ್ತಿರುವ ಪ್ರೇಮಾ ಇವರನ್ನು ಇಲಾಖಾ ವತಿಯಿಂದ ಸನ್ಮಾನಿಸಲಾಯಿತು. ಇಲಾಖಾ ಪ್ರತಿನಿಧಿಯಾಗಿ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ ಸನ್ಮಾನ ನೆರವೇರಿಸಿ ನಿವೃತ್ತರ ಅರ್ಪಣಾ ಮನೋಭಾವ, ಶಾಲೆಯ ಕುರಿತಾದ ಕಾಳಜಿಯನ್ನು ಶ್ಲಾಘಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ ಎ.ಜಿ. ನಿವೃತ್ತರ ಸೇವಾವೈಖರಿ ಪ್ರಶಂಸಿಸಿದರು. ಮುಖ್ಯ ಶಿಕ್ಷಕ ಚಂದ್ರ ನಾಯ್ಕ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಆಶಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ತಾವು ಮಾಡುತ್ತಿರುವ ಉದ್ಯೋಗದಲ್ಲಿ ಅವರನ್ನು ಸಾಧ್ಯವಾದಷ್ಟು ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಸಂಘದ ಉಪ್ಪುಂದದ ರೈತಸಿರಿ ಸಭಾಭವನದಲ್ಲಿ ಸಂಘ ಪ್ರಾಯೋಜಿತ ರೈತಸಿರಿ ರೈತ ಸೇವಾ ಒಕ್ಕೂಟದ ಆಶ್ರಯದಲ್ಲಿ ಈಚೆಗೆ ನಡೆದ ರೈತಕೂಟ ಸಭೆ ಹಾಗೂ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮನೆಯವರು ನಡೆಸುವ ಉದ್ಯೋಗದಲ್ಲಿ ಮಕ್ಕಳು ಭಾಗಿಗಳಾಗುವುದರಿಂದ ಅವರಿಗೆ ಉದ್ಯೋಗದ ಕಲೆ, ಕೌಶಲ ಕರಗತವಾಗುವುದರ ಜತೆಗೆ ಶ್ರಮದ ಬಗೆಗೆ ಗೌರವ ಮೂಡುತ್ತದೆ ಎಂದು ಅವರು ಹೇಳಿದರು. ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಸ್ವ ಉದ್ಯೋಗ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಕ್ರಮ ಮತ್ತು ರುಡ್‌ಸೆಟ್ ಸಂಸ್ಥೆಯ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಕೃಷಿ ಸಹಾಯಕ ಈಶ್ವರ ಜೆ. ನಾಯ್ಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.02: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಿದ ಹಿನ್ನೆಲೆ ಇಂದು ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ. ಹೊಸ ಮಾರ್ಗಸೂಚಿ ಪ್ರಕಾರ ಜಿಲ್ಲೆಯಾದ್ಯಂತ ಪ್ರತಿ ಶುಕ್ರವಾರ ರಾತ್ರಿ 9.00 ರಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತವೆ . ಹಾಗೂ ಜಿಲ್ಲೆಯಾದ್ಯಂತ ಪ್ರತಿ ದಿನ ರಾತ್ರಿ 9.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ ?ಪಬ್‌ ಗಳಿಗೆ ಅನುಮತಿ ಇರುವುದಿಲ್ಲಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು ಕೊಳಗಳನ್ನು ತೆರೆಯಲು ಅನುಮತಿಸಿದೆ. ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಿದೆ. ಆದರೆ ಪ್ರೇಕ್ಷಕರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದುಳಿದಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಯೋಜನೆಗಳಿಗಾಗಿ ದಾಖಲೆ ಮೊತ್ತದ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ಇಲಾಖೆಗಳ ಅಧಿಕಾರಿಗಳ ಕೆಲಸದ ವೇಗ ನಿರೀಕ್ಷಿತ ಮಟ್ಟದಲ್ಲಿ ಇರದ ಕಾರಣ ಅನುಷ್ಠಾನ ಕುಂಠಿತವಾಗುತ್ತಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಇಲ್ಲಿ ಬುಧವಾರ ಅವರು ಅಧಿಕಾರಿಗಳ ಸಭೆಯಲ್ಲಿ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದರು. ಕೆಲವು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಚುರುಕು ಮುಟ್ಟಿಸಿದರು. ಮುಂದುವರಿದು ಮಾತನಾಡಿ ಜವುಳಿ ಪಾರ್ಕ್, ಪೀಠೋಪಕರಣ ತಯಾರಿ ಸಂಕೀರ್ಣ, ಕ್ರೀಡಾ ಸಂಕೀರ್ಣ, ನ್ಯಾಯಾಲಯ, ಕ್ರೀಡಾಂಗಣ, ವಸತಿ ಶಾಲೆಗಳೀಗೆ ಜಮೀಣು ಗುರುತಿಸಬೇಕು. ಮೂಕಾಂಬಿಕಾ ವನ್ಯಪ್ರಾಣಿ ಸಂರಕ್ಷಣಾ ತಾಣ, ಮರಿನಾ, ಬೀಚ್‌ವಾಕ್, ಉದ್ಯಾನ, ವಿಶ್ರಾಂತಿ ತಾಣ ನಿರ್ಮಾಣ ಯೋಜನೆಗಳು ಬರಲಿದ್ದು, ಅವುಗಳ ಅನುಷ್ಠಾನಕ್ಕೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ವೈದ್ಯಕೀಯ ಕಾಲೇಜಿಗೆ ಹಣ ಹೂಡಲು ಒಬ್ಬರು ಮುಂದಾಗಿದ್ದು, ಅದಕ್ಕೂ ಸ್ಥಳ ಮೀಸಲಿಡಲು ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅಗತ್ಯ ಎನಿಸಿದರೆ, ಹಣ ಮಂಜೂರು ಮಾಡಲಾಗುವುದು ಎಂದರು. ಕಂದಾಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾದ ಅಂಬುಲೆನ್ಸ್ ಹಾಗೂ ಕೆಎಸ್‌ಐಐಡಿಸಿಯಿಂದ ನೀಡಲಾದ ಮಿನಿ ಅಂಬ್ಯುಲೆನ್ಸ್‌ನ್ನು ಬುಧವಾರ ಲೋಕಾರ್ಪಣೆಗೊಳಿಸಲಾಯಿತು. ಹಿಂದೂಳಿದ ಮತ್ತು ಸಮಾಜ ಕಲಾಖ್ಯ ಕಲ್ಯಾಣಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಂಬುಲೆನ್ಸ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಸಂಸದ ಬಿ. ವೈ. ರಾಘವೇಂದ್ರ, ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಐ.ಐ.ಡಿ.ಸಿ) ನಿರ್ದೇಶಕ ಸಿ. ಆರ್. ಗಾಯತ್ರಿದೇವಿ, ಕರ್ನಾಟಕ ಬಾಲ ಭವನ ಬೆಂಗಳೂರು ಇದರ ನಿರ್ದೇಶಕರಾದ ಪದ್ಮಿನಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ., ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್‌ಕುಮಾರ್ ಶೆಟ್ಟಿ, ಕಾರ‍್ಯದರ್ಶಿ ಪ್ರಕಾಶ್ ಜಿಡ್ಡು, ಜಿಪಂ ಮಾಜಿ ಸದಸ್ಯರಾದ ಬಾಬು ಶೆಟ್ಟಿ, ಸುರೇಶ್ ಬಟವಾಡಿ, ರಾಜ್ಯ ಯೋಜನಾ ಆಯೋಗ ಮಂಡಳಿಯ ಅಧಿಕಾರೇತರ ಸದಸ್ಯೆ ಪ್ರಿಯದರ್ಶಿನಿ ಕಮಲೇಶ್ ಮೊದಲಾದವರು ಉಪಸ್ಥಿತರಿದ್ದರು. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಿ. ವೈ. ರಾಘವೇಂದ್ರ ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ ಜನತೆ ತೋರಿರುವ ಅಭಿಮಾನ, ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ, ಇಲ್ಲಿಯ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯ ಉನ್ನತ ಹುದ್ದೆಗೆ ಹೋಗಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ರಜತಾದ್ರಿಯ ಇಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಹೆಚ್ಚಿನ ಅವಧಿಯಲ್ಲಿ ಕೊರೋನಾ ನಿಯಂತ್ರಣಕ್ಕೆ ಮೀಸಲಿಡಲಾಯಿತು ಆದ್ದರಿಂದ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗಲಿಲ್ಲ ಎಂಬ ಕೊರಗು ಇದೆ, ಆದರೆ ಕೋವಿಡ್ ನಿಂದ ಜಿಲ್ಲೆಯಲ್ಲಿ ಹೆಚ್ಚು ಸಾವುಗಳು ಸಂಭವಿಸದAತೆ ಅಗತ್ಯ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿAದ, ಸೋಂಕು ಹೆಚಿದ್ದರೂ ಅತೀ ಕಡಿಮೆ ಸಾವು ಸಂಭವಿಸಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಜಿಲ್ಲೆಗೆ ದೊರೆತಿದೆ ಎಂದರು. ಜಿಲ್ಲೆಯಲ್ಲಿ ಪ್ರವಾಸೋಧ್ಯಮವನ್ನು ಅಭಿವೃಧ್ದಿಪಡಿಸುವ ಅನೇಕ ಯೋಜನೆಗಳನ್ನು ರೂಪಿಸಿ ಅವುಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ,ಕಂದಾಯ ಸೇವೆಗಳನ್ನು ಒದಗಿಸುವಲ್ಲಿ ಜಿಲ್ಲೆ ಇಂದಿಗೂ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಂದ್ರ ಫೌಂಡೇಶನ್, ಚಂಡೀಗಢ ಆಯೋಜಿಸಿದ್ದ ರಾಷ್ಟ್ರಮಟ್ಟದ ಚಿತ್ರಕಲಾ ಸ್ಫರ್ಧೆಯಲ್ಲಿ ಚೇತನ್ ಕುಮಾರ್ ಹಳ್ಳಿಹೊಳೆ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಯಾಗಿರುವ ಚೇತನ್, ದೃಶ್ಯ ಕಲಾ ವಿಭಾಗದ ಅಂತಿಮ ವರ್ಷದ ಬಿ.ವಿ.ಎ ಪದವಿ ವ್ಯಾಸಂಗ ನಡೆಸುತ್ತಿದ್ದಾರೆ. ಚೇತನ್ ಲಾಕ್ ಡೌನ್ ಅವಧಿಯನ್ನು ಸದುಪಯೋಗ ಪಡಿಸಿಕೊಂಡು ಹಲವು ಕಲಾಕೃತಿಗಳನ್ನು ರಚಿಸಿ ಮೆಚ್ಚುಗೆಗಳಿಸಿದ್ದರು. ಇವರು ಹಳ್ಳಿಹೊಳೆಯ ಚಂದ್ರಶೇಖರ್ ನಾಯಕ್ ಮತ್ತು ರತ್ನಾ ದಂಪತಿಗಳ ಪುತ್ರರಾಗಿದ್ದಾರೆ. ಇದನ್ನೂ ಓದಿ:► ಕಮಲಶಿಲೆ ಪಾರೆಯಲ್ಲಿ ಗಮನಸೆಳೆಯುತ್ತಿರುವ ಕಡವೆ ಕಲಾಕೃತಿ – https://kundapraa.com/?p=46245 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ (ಎಸ್.ಕೆ.ಪಿ.ಎ) ಕುಂದಾಪುರ ವಲಯದ ನೂತನ ಅಧ್ಯಕ್ಷರಾಗಿ ಬಿ. ದೊಟ್ಟಯ್ಯ ಪೂಜಾರಿ ಬೈಂದೂರು ಆಯ್ಕೆ ಆಗಿದ್ದಾರೆ. ವಲಯದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕರ್ ಮೆಂಡನ್, ಕೋಶಾಧಿಕಾರಿಯಾಗಿ ವಿಠ್ಠಲ್ ನಾಗೂರು, ಉಪಾಧ್ಯಕ್ಷರಾಗಿ ಶ್ರೀನಿವಾಸ್ ದೇವಾಡಿಗ ಉಪ್ಪುಂದ, ಪ್ರಕಾಶ್ ಹೆಗ್ಡೆ ಅಮಾಸೆಬೈಲು, ಚಂದ್ರಕಾಂತ್ (ಚನ್ನ ), ರಾಘು ಭಟ್ ವಂಡ್ಸೆ ಹಾಗೂ ಸಲಹಾ ಸಮಿತಿ ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನ ಮಠ ಆಯ್ಕೆಯಾಗಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಏರ್ಪಡಿಸಲಾದ ‘ ಭಾರತ ಬಿಟ್ಟು ತೊಲಗಿ ಆಂದೋಲನ’ ಎಂಬ ವಿಷಯವಾಗಿ ನಿವೃತ್ತ ಪ್ರಾಂಶುಪಾಲರಾದ ಡಾ ದಿನೇಶ್ ಹೆಗ್ಡೆ ಉಪನ್ಯಾಸ ನೀಡಿದರು. ಭಾರತ ಬ್ರೀಟಿಷರ ಆಡಳಿತಕ್ಕೆ ಒಳಪಟ್ಟನಂತರ ನಡೆದ ಸ್ವಾತಂತ್ರ್ಯ ಹೋರಾಟದ ಹೆಜ್ಜೆಗಳನ್ನು ಸೂಕ್ಷ್ಮವಾಗಿ ಗುರುತಿಸಿದರು. ಸಾತಂತ್ರ್ಯ ಸಂಗ್ರಾಮದ ಚಳುವಳಿಯಲ್ಲಿ ‘ ಭಾರತ ಬಿಟ್ಟು ತೊಲಗಿ ಆಂಧೋಲನ’ ಅತ್ಯಂತ ಪ್ರಮುಖವಾದುದು ಮಾತ್ರವಲ್ಲ, ಅದು ಕೊನೆಯ ಘಟ್ಟವಾಗಿ ಪರಿಣಮಿಸಿತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಬಂಗಾಳ ವಿಭಜನೆ, ಅದರಿಂದ ಭಾರತೀಯರಮೇಲೆ ಆದ ಪರಿಣಾಮ ಮತ್ತು ಗಾಂಧೀಜಿಯವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಆಗಮಿಸಿ, ಸ್ವಾತಂತ್ರ್ಯಚಳುವಳಿಯಲ್ಲಿ ಭಾಗವಹಿಸಿದ ಪ್ರಾರಂಭದ ದಿನಗಳು ಹೇಗಿದ್ದವು ಎಂಬುದನ್ನು ತಿಳಿಸಿದರು. 1909 ರ ಮೋರ್ಲೆ ಮಿಂಟೋ ಸುಧಾರಣೆಗಳು, 1935 ರ ಗವರ್ನಮೆಂಟ್ ಆಫ್ ಇಂಡಿಯಾ ಕಾಯ್ದೆ , ಹಾಗೂ ಇಂತಹ ಹಲವಾರು ಕಾಯ್ದೆಗಳನ್ನು ಜಾರಿಗೊಳಿಸಿ, ಇವುಗಳೊಂದಿಗೆ ಶಿಕ್ಷಣದಲ್ಲಿ ಹಲವಾರು ಬದಲಾವಣೆಗಳನ್ನು ಮಾಡುವದರ ಮೂಲಕ ಭಾರತೀಯರ ಮನವೊಲಿಸುವ ಪ್ರಯತ್ನಗಳು ನಡೆದುದರ ಕುರಿತು…

Read More