ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಯ ಈರ್ವರು ಶಾಸಕರಿಗೆ ಸಚಿವ ಸ್ಥಾನ ಖಚಿತವಾಗಿದೆ. ರಾಜ್ಯ ಸಂಪುಟದಲ್ಲಿ ಸಚಿವರಾಗಿ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವ ಸಂಪುಟದಲ್ಲಿ 8 ಲಿಂಗಾಯತ, 7 ಒಕ್ಕಲಿಗ, 7 ಒಬಿಸಿ, 3 ದಲಿತ, 3 ಎಸ್.ಸಿ., 1 ಎಸ್.ಟಿ ಮತ್ತು ಮಹಿಳೆ ಶಾಸಕಿಗೂ ಸ್ಥಾನ ನೀಡಲಾಗಿದ್ದು, ರಾಜ ಭವನದಲ್ಲಿ ಇಂದು ಮಧ್ಯಾಹ್ನ 2.15ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಬೊಮ್ಮಾಯಿ ಸಂಪುಟದ ಫೈನಲ್ ಪಟ್ಟಿ:ಸುನೀಲ್ ಕುಮಾರ್ – ಕಾರ್ಕಳ,ಕೋಟ ಶ್ರೀನಿವಾಸ ಪೂಜಾರಿ – ಎಂಎಲ್ಸಿಎಸ್ ಅಂಗಾರ-ಸುಳ್ಯ,ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ,ಆರ್.ಅಶೋಕ್- ಪದ್ಮನಾಭ ನಗರ,ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ,ಉಮೇಶ್ ಕತ್ತಿ- ಹುಕ್ಕೇರಿ,ಎಸ್.ಟಿ.ಸೋಮಶೇಖರ್- ಯಶವಂತಪುರ,ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ,ಬೈರತಿ ಬಸವರಾಜ – ಕೆ ಆರ್ ಪುರಂ,ಮುರುಗೇಶ್ ನಿರಾಣಿ – ಬೀಳಗಿ,ಶಿವರಾಂ ಹೆಬ್ಬಾರ್- ಯಲ್ಲಾಪುರ,ಶಶಿಕಲಾ ಜೊಲ್ಲೆ- ನಿಪ್ಪಾಣಿ,ಕೆಸಿ ನಾರಾಯಣಗೌಡ – ಕೆಆರ್ ಪೇಟೆ,ಅರಗ ಜ್ಞಾನೇಂದ್ರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಲಭ್ಯವಿರುವ ಕಾಳ ಮೆಣಸು ಪುನಃಶ್ಚೇತನ, ಅಣಬೆ ಉತ್ಪಾದನಾ ಘಟಕಗಳು ಸ್ಫಾಪನೆ, ಕೃಷಿ ಹೊಂಡಗಳ ನಿರ್ಮಾಣ, ಸಮಗ್ರ ಪೀಡೆ/ ಪೋಷಕಾಂಶಗಳ ನಿರ್ವಹಣೆ 20 ಅಶ್ವಶಕ್ತಿಗಿಂತ ಕಡಿಮೆ ಸಾಮರ್ಥ್ಯದ ಟ್ರಾಕ್ಟರ್ ಖರೀದಿಗೆ, ಪ್ಯಾಕ್ ಹೌಸ್ ಘಟಕ ನಿರ್ಮಾಣಕ್ಕೆ, ಪ್ರಾಥಮಿಕ/ ಬಹುಪಯೋಗಿ ಸಂಸ್ಕರಣಾ ಘಟಕಗಳ ಸ್ಥಾಪನೆ ಹಾಗೂ ತೋಟಗಾರಿಕೆ ಬೆಳೆಗಳನ್ನು ಒಣಗಿಸಲು ನಿರ್ಮಾಣ ಮಾಡುವ ಸೋಲರ್ ಡ್ರೆಯರ್ ಗಳಲ್ಲಿ ಉಪಯೋಗಿಸುವ ಸಿಲ್ ಪಾಲಿನ ಹಾಳೆಗಳಿಗೆ ಸಹಾಯ ಧನ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಉಡುಪಿ ಜಿಲ್ಲೆಯ ತೋಟಗಾರಿಕೆ ನಿರ್ದೇಶಕರ ಕಚೇರಿ 0820-2531950, ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕರು ಉಡುಪಿ ತಾಲೂಕು 0820-2522837, ಕುಂದಾಪುರ ತಾಲೂಕು 08254-230813 ಹಾಗೂ ಕಾರ್ಕಳ ತಾಲೂಕು 08258-230288 ನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2020ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಹಾಗೂ ಅಂತರರಾಷ್ರೀಯ ಮಟ್ಟದ ವಿವಿಧ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಅರ್ಹ ಕ್ರೀಡಾಪಟುಗಳು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇವರಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ದೃಢೀಕೃತ ದಾಖಲೆಗಳೊಂದಿಗೆ ಇದೇ ಆಗಸ್ಟ್ 25 ರೊಳಗೆ ಹಿಂತಿರುಗಿಸಲು ಕೋರಿದೆ. ನಂತರ ಬರುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2521324, 9480886467 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಡಿಯ ಬ್ಯಾರಿಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ( ಸಿ ಬಿ ಎಸ್ ಇ ) ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸತತವಾಗಿ 4ನೇ ವರ್ಷ ಶೇಕಡಾ 100 ಫಲಿತಾಂಶ ದಾಖಲಿಸಿದೆ . ಉತ್ತೀರ್ಣಗೊಂಡವರಲ್ಲಿ , 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯನ್ನು , 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯನ್ನು ಪಡೆದಿದ್ದಾರೆ . ವಿದ್ಯಾರ್ಥಿಗಳಾದ ಸುಹಾ ಅನಮೋಲ್ ಶೇ.88, ಶೈನಾ ಫೆರ್ನಾಂಡಿಸ್ ಶೇ.83, ಭಾಗ್ಯವಂತಿ ಪಾಟೀಲ್ ಶೇ. 79.3, ಸಾನಿಯಾ ಶೇ. 79, ಎಂ. ಕೆ. ಅಮನ್ ಶೇ .75 ಅಂಕ ಗಳಿಸಿದ್ದಾರೆ. ಬ್ಯಾರಿಸ್ ಗ್ರೂಪಿನ ಸಂಚಾಲಕರಾದ ಸೈಯದ್ ಮಹಮ್ಮದ್ ಬ್ಯಾರಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ್, ನಿರ್ದೇಶಕರಾದ ದೋಮ ಚಂದ್ರಶೇಖರ್, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರು, ಶಿಕ್ಷಕರು ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ವರ್ಗಾಯಿಸಿ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ನವೀನ್ ಭಟ್ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕೈಗೊಳ್ಳುವ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೋಂಕಿತ ವ್ಯಕ್ತಿಗಳನ್ನು ಗುರುವಾರದಿಂದ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ವರ್ಗಾಯಿಸಿ ಅವರುಗಳಿಗೆ ಉತ್ತಮ ಚಿಕಿತ್ಸೆ ನೀಡುವುದರಿಂದ ಕೊರೋನಾ ಸೋಂಕು ಹರಡುವಿಕೆಯ ಸರಪಳಿಯನ್ನು ಕಡಿತಗೊಳಿಸಲು ಸಾಧ್ಯ, ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿಯೂ ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆದು, ಅಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಕೊರೋನಾ ಪೀಡಿತರಿಗೆ ಆರೈಕೆ ಮಾಡಲು ಮುಂದಾಗಬೇಕು ಎಂದ ಅವರು ಕೋವಿಡ್ಕೇರ್ ಸೆಂಟರ್ಗಳಿಗೆ ಅಗತ್ಯ ಇರುವ ವೈದ್ಯರು ಶುಶ್ರೂಷಕರು ಮತ್ತಿತರ ಸಿಬ್ಬಂದಿಗಳನ್ನು ಅಗತ್ಯಕ್ಕನುಣವಾಗಿ ನಿಯೋಜಿಸಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಪ್ರತಿದಿನ 5000 ಕ್ಕೂ ಹೆಚ್ಚು ಕೋವಿಡ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಡುವರಿ ಗ್ರಾಮದ ಹೇನಬೇರು ರಾಮಕೃಷ್ಣ ದೇವಾಡಿಗ ಅವರ ಪುತ್ರ ಅಜಿತ್ ದೇವಾಡಿಗ(15) ತೀವೃ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಹೆಚ್ಚಿನ ಚಿಕಿತ್ಸೆಗೆ ಮಾನವೀಯ ನೆರವಿನ ಅಗತ್ಯವಿದೆ. ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಸಲಹೆಯಂತೆ ಲಿವರ್ ಕಸಿ ಮಾಡಬೇಕಾದ ಪರಿಸ್ಥಿತಿ ಇರುವುದರಿಂದ ಚಿಕಿತ್ಸೆಗೆ 30ರಿಂದ 35 ಲಕ್ಷ ರೂ. ಖರ್ಚಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ನೆರವಿಗೆ ಮನವಿ: ಇವರದ್ದು ಸಾಮಾನ್ಯ ರೈತಾಪಿ ಕುಟುಂಬ ಆಗಿರುದರಿಂದ ಹೆಚ್ಚಿನ ಚಿಕಿತ್ಸೆಗೆ ಹಣ ಭರಿಸಲು ಸಾಧ್ಯವಾಗುತ್ತಿಲ್ಲ. ಅಜಿತ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು ರಾಮಕೃಷ್ಣ ದೇವಾಡಿಗ, ಬ್ಯಾಂಕ್ ಆಫ್ ಬರೋಡ ಉಳಿತಾಯ ಖಾತೆ ಸಂಖ್ಯೆ: 82000100004112 (ಐಎಫ್ಎಸ್ಸಿ ಕೋಡ್ BARB0VJBYND)Phone pay or google pay: 8073201943 ಮಹಬಲ ದೇವಾಡಿಗ, ಕೆನರಾ ಬ್ಯಾಂಕ್ ಉಳಿತಾಯ ಖಾತೆ ಸಂಖ್ಯೆ: 01222200062946 ( ಐಎಫ್ಎಸ್ಸಿ ಕೋಡ್ CNRB0010122)ಗೆ ಸಲ್ಲಿಸಬಹುದಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ರಾಮಚಂದ್ರ ಅವರನ್ನು ಕಾಲೇಜಿನ ಅಧ್ಯಾಪಕರ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಮಾತನಾಡಿ ರಾಮಚಂದ್ರ ಅವರಲ್ಲೊಂದು ನಾಯಕತ್ವದ ಗುಣವಿದೆ. ಅಪಾರ ದೇಶಪ್ರೇಮಿಯಾಗಿರುವ ಅವರಲ್ಲಿ ಹೋರಾಟದ ಮನೋಭಾವವಿದೆ. ಅವರು ಸೇವೆ ಸಲ್ಲಿಸುತ್ತಿರುವಾಗ ನಡೆಸಿದ ದೊಡ್ಡ ಕಾರ್ಯಕ್ರಮಗಳು ಅವರ ಅತ್ಯತ್ತಮ ನಾಯಕತ್ವಕ್ಕೆ ಸಾಕ್ಷಿಯಾಗಿವೆ ಎಂದು ಹೇಳಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಗೋಪಾಲ್ ಕೆ. ಮಾತನಾಡಿ ಅವರನ್ನು ತುಂಬಾ ವರ್ಷಗಳಿಂದ ಬಲ್ಲೆ. ಸಮಾಜಶಾಸ್ತ್ರದಲ್ಲಿ ವಿಶೇಷವಾದ ಜ್ಞಾನ ಮತ್ತು ತಿಳುವಳಿಕೆ ಹೊಂದಿರುವ ಅವರಲ್ಲೊಬ್ಬ ನಾಯಕನಿದ್ದಾನೆ. ಯಾವುದೇ ಸಮಸ್ಯೆಯನ್ನು ಅತ್ಯಂತ ನಿರಾಳವಾಗಿ ಸಲೀಸಾಗಿ ಪರಿಹರಿಸುವ ಗುಣ ಅವರಲ್ಲಿ ಕರಗತವಾಗಿದೆ ಎಂದು ಹೇಳಿದರು. ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಮತ್ತು ಅಧ್ಯಾಪಕರ ಸಂಘದ ಅಧ್ಯಕ್ಷರಾದ ಶಂಕರನಾರಾಯಣ ಉಪಸ್ಥಿತರಿದ್ದರು. ಅಧ್ಯಾಪಕರ ಸಂಘದ ಖಜಾಂಚಿ ಮಂಜುನಾಥ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹೆಮ್ಮಾಡಿ ಗ್ರಾಮದ ಜಾಲಾಡಿ ಅಂಗನವಾಡಿ ಕೇಂದ್ರಕ್ಕೆ ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಮತ್ತು ಮಾಸ್ಕ್ನ್ನು ಕೊಡುಗೆಯಾಗಿ ನೀಡಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ ಅವರು ವಾಟರ್ ಫಿಲ್ಟರ್ ಮತ್ತು ಮಾಸ್ಕ್ನ್ನು ಅಂಗನವಾಡಿ ಕೇಂದ್ರದ ಶಿಕ್ಷಕಿ ಶಶಿಕಲಾ ಅವರಿಗೆ ಹಸ್ತಾಂತರಿಸಿದರು. ರೋಟರಿ ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ಕಾರ್ಯದರ್ಶಿ ನಾರಾಯಣ ಇ.ನಾಯ್ಕ್, ಮಹಾವಿಷ್ಣು ಯುವಕ ಮಂಡಲದ ಅಧ್ಯಕ್ಷ ಶ್ರೀಕಾಂತ ಆಚಾರ್, ಸ್ಥಾಪಕ ಅಧ್ಯಕ್ಷ ಚಂದ್ರ ನಾಯ್ಕ್, ನರಸಿಂಹ ಗಾಣಿಗ ಹರೆಗೋಡು, ಲಕ್ಷ್ಮಣ ದೇವಾಡಿಗ, ಮಕ್ಕಳ ಪೋಷಕರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಒಂದು ಸಮುದಾಯದ ಹಿತರಕ್ಷಣೆಗಾಗಿ ಸಂಬಂಧಪಟ್ಟ ಎಲ್ಲರೂ ಒಮ್ಮನಸ್ಸಿನಿಂದ ಕೆಲಸವನ್ನು ಮಾಡಬೇಕು. ಸಮಗ್ರ ಪರಿಶ್ರಮದಿಂದಲೇ ಸಮುದಾಯದ ಹಿತ ರಕ್ಷಣೆ ಸಾಧ್ಯ ಎಂದು ಬಿಲ್ಲವ ಸಮುದಾಯದ ಹಿರಿಯರಾದ ಮುತ್ತ ಕುಂದರ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಪಂಜುರ್ಲಿ ದೈವಸ್ಥಾನದ ವಠಾರದಲ್ಲಿ ನಡೆದ ಬಿಲ್ಲವರ ಹಿತರಕ್ಷಣಾ ವೇದಿಕೆಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀನಿವಾಸ ಜತ್ತನ್ ಮಾತನಾಡಿ, ಸಂಸ್ಥೆಗಳು ಸಮುದಾಯದ ಕೆಳವರ್ಗದ ಜನರನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡು ಅವರಲ್ಲಿ ಜಾಗೃತಿಯನ್ನು ಮೂಡಿಸಿ ಸಮುದಾಯದ ಒಟ್ಟಾರೆ ಅಭಿವೃದ್ಧಿಗಾಗಿ ದುಡಿಯಬೇಕು ಎಂದು ಹೇಳಿದರು. ಈ ಸಭೆಯಲ್ಲಿ 2021-22ನೇ ಸಾಲಿನ ಸಮಿತಿಯನ್ನು ರಚಿಸಲಾಯಿತು ಅಧ್ಯಕ್ಷರಾಗಿ ಜಿ. ಗೋಪಾಲ ಪೂಜಾರಿ ಆಯ್ಕೆಯಾದರು ಉಪಾಧ್ಯಕ್ಷರಾಗಿ ಜಿ. ಕೆ.ವೆಂಕಟೇಶ ಕೊಡೇರಿ ಮನೆ, ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ ಜಿ ಎ. ಆರ್, ಜೊತೆ ಕಾರ್ಯದರ್ಶಿಯಾಗಿ ಅನಿಲ ಪೂಜಾರಿ ಖಜಾಂಜಿಯಾಗಿ ಮಂಜುರಾಜ್ ಗಂಗೊಳ್ಳಿ ಆಯ್ಕೆಯಾದರು. ಕಾರ್ಯಕಾರಿ ಮಂಡಳಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ವರ್ಷದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು 2019ರಲ್ಲಿ ಮೊದಲ ಆವೃತ್ತಿಯಾಗಿ ಬಂದ ಅನುಪಮಾ ಪ್ರಸಾದ್ ಕಾಸರಗೊಡು ಅವರ ‘ಪಕ್ಕಿಹಳ್ಳದ ಹಾದಿಗುಂಟ’ ಕಾದಂಬರಿಗೆ ದೊರಕಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಈಗಾಗಲೇ ತಮ್ಮ ಕತೆಗಳ ಮೂಲಕ ಪ್ರಸಿದ್ಧರಾಗುರುವ ಅನುಪಮಾ ಪ್ರಸಾದ್ ಅವರ ಚೊಚ್ಚಲ ಕಾದಂಬರಿ ಇದಾಗಿದೆ. ಕನ್ನಡದ ಪ್ರಮುಖ ಲೇಖಕರಾದ ಓ. ಎಲ್. ನಾಗಭೂಷಣ ಸ್ವಾಮಿ, ದೇವು ಪತ್ತಾರ್, ಮತ್ತು ನರೇಂದ್ರ ರೈ ದೇರ್ಲರವರು ನಿರ್ನಾಯಕರಾಗಿ ಸಹಕರಿಸಿರುತ್ತಾರೆ. ಪ್ರಶಸ್ತಿಯು ಹದಿನೈದು ಸಾವಿರರೂಪಾಯಿ ನಗದಿನೊಂದಿಗೆ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯವರಾದ ಅನುಪಮಾ ಪ್ರಸಾದ್ ಬಾಲ್ಯದಲ್ಲಿಯೇ ದಕ್ಷಿಣ ಕನ್ನಡದ ಉಜಿರೆಗೆ ಬಂದು ಅಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಗಿಸಿ, ಗಡಿನಾಡು ಕಾಸರಗೋಡಿನಲ್ಲಿ ತಮ್ಮ ವೈದ್ಯ ವೃತ್ತಿಯ ಪತಿಯೊಂದಿಗೆ ನೆಲೆಸಿದ್ದಾರೆ. ತಮ್ಮ ಸಾಹಿತ್ಯ ಕೃಷಿಯನ್ನು ಕಥಾರಚನೆಯ ಮೂಲಕ ಆರಂಭಿಸಿದರು. ಕನ್ನಡದ ದಿನಪತ್ರಿಕೆಗಳಾದ ಪ್ರಜಾವಾಣಿ, ವಿಜಯವಾಣಿ ಇವರ ಕಥೆಗಳು ಪ್ರಕಟವಾಗಿವೆ. ಚೇತನಾ, ಕರವೀರದಗಿಡ, ದೂರತೀರ, ಜೋಗತಿ…
