Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಸ್ಥೆಗಳ ಮೂಲಕ ಗ್ರಾಮೀಣ ಭಾಗದಲ್ಲಿ ಆರ್ಥಿಕ ಸಬಲೀಕರಣ ಸಾಧ್ಯವಾಗಿದ್ದು, ಜನರ ಆರ್ಥಿಕ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆತಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಸೋಮವಾರ ಇಲ್ಲಿನ ರಥಬೀದಿಯ ಶಾಂತಿ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಆರಂಭಗೊಂಡ ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟಿಸಿ ಶುಭಹಾರೈಸಿದರು. ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಛೇರಿ ಉದ್ಘಾಟಿಸಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಪ್ರಕಾಶ್ಚಂದ್ರ ಶೆಟ್ಟಿ ಲಾಕರ್ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಂಕರ ಪೂಜಾರಿ ಪಾಸ್‌ಪುಸ್ತಕ ಬಿಡುಗಡೆಗೊಳಿಸಿದರು. ರಿಯಾಜ್ ಅಹಮ್ಮದ್ ಶೇರು ಪತ್ರ ಬಿಡುಗಡೆಗೊಳಿಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೌರಿ ದೇವಾಡಿಗ ಕಂಪ್ಯೂಟರ್ ಕೌಂಟರ್ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ. ಬಾಬು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಅಗಾಧ ಪ್ರತಿಭೆ ಇದ್ದು, ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ಉತ್ತಮ ಸಾಧನೆ ಮಾಡಬಹುದಾಗಿದೆ. ಪ್ರತಿಭೆ ಇದ್ದವರಿಗೆ ಒಂದಿಲ್ಲೊಂದು ರೂಪದಲ್ಲಿ ಸಹಕಾರ, ಮಾರ್ಗದರ್ಶನ ದೊರೆಯುತ್ತದೆ ಎಂದು ಉಡುಪಿ ಜಿಲ್ಲಾ ಶ್ರೀಮದ್ಭಗವದ್ದೀತಾ ಜಯಂತಿ ಆಚರಣಾ ಸಮಿತಿ ಪ್ರಧಾನ ಸಂಚಾಲಕ ಬಿ. ರಾಮಕೃಷ್ಣ ಶೇರುಗಾರ್ ಹೇಳಿದರು. ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಭಾನುವಾರ ವಿದ್ಯಾನಿಧಿ ವಿತರಣಾ ಕಾರ್ಯಕ್ರಮದಲ್ಲಿ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿ ವಿದ್ಯಾವಂತರಾದಾಗಲೇ ಜಗತ್ತಿನೆದುರು ತಲೆಯೆತ್ತೆ ನಡೆಯಲು ಸಾಧ್ಯ. ಕೆಲವು ವರ್ಷಗಳ ಹಿಂದೆ ಶಿಕ್ಷಣ ಪಡೆಯಲು ಹಿಂದೇಟು ಹಾಕುತ್ತಿದ್ದ ಗ್ರಾಮದಲ್ಲಿ ಶ್ರೀ ರಾಮಕೃಷ್ಣ ಕುಟೀರದ ಮೂಲಕ ಹಲವಾರು ವಿದ್ಯಾರ್ಥಿಗಳು ಇಂದು ಉನ್ನತ ವ್ಯಾಸಂಗವನ್ನೂ ಪೂರೈಸಿರುವುದು ಗಮನಾರ್ಹ ಸಾಧನೆ. ಸ್ವಾಮಿ ಸತ್ಯಸ್ವರೂಪಾನಂದರ ಇಚ್ಛಾಶಕ್ತಿಯಿಂದ ಇದು ಸಾಧ್ಯವಾಗಿದೆ. ವಿದ್ಯಾರ್ಥಿ ವೇತನ ಪಡೆದು ಉತ್ತಮ ಶಿಕ್ಷಣ ಉದ್ಯೋಗ ಪಡೆದುಕೊಳ್ಳುವುದರ ಜತೆಗೆ ಇತರರಿಗೂ ಸಹಕಾರ ಮಾಡುವ ಗುಣ ಬೆಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವತಿಯಿಂದ ‘ಆನಿಮೇಷನ್ ವೃತ್ತಿ ಅವಕಾಶಗಳು ಹಾಗೂ ನಿರೀಕ್ಷೆಗಳು’ ಕುರಿತು ವೆಬಿನಾರ್ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಹಳೆಯ ವಿದ್ಯಾರ್ಥಿನಿ ಪ್ರಸ್ತುತ ಟೆಕ್ನಿಕಲರ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಪ್ರೊಡಕ್ಷನ್ ಕೊಆರ್ಡಿನೇಟರ್ ಆಗಿ ಕಾರ‍್ಯ ನಿರ್ವಹಿಸುತ್ತಿರುವ ನಮ್ರತಾ ಡಿ.ಪಿ. ಭಾಗವಹಿಸಿದ್ದರು. ಆನಿಮೇಷನ್ ಮತ್ತು ವಿಎಫ್‌ಎಕ್ಸ್ ಕ್ಷೇತ್ರದ ಬಹುಮುಖಿ ಆಯಾಮಗಳ ಬಗ್ಗೆ ತಿಳಿಸಿದ ಅವರು, ‘ಆನಿಮೇಷನ್ ಕ್ಷೇತ್ರವು ಇತ್ತೀಚಿನ ದಿನಗಳಲ್ಲಿ ಹೆಚ್ಚು ಪ್ರಚಲಿತವಾದಂತಹ ಕ್ಷೇತ್ರ. ಇದಕ್ಕಿರುವ ವಿಶಾಲ ವ್ಯಾಪ್ತಿ, ಪ್ರಾಯೋಗಿಕ ಅಳವಡಿಕೆ ಹಾಗೂ ಸೃಜನಾತ್ಮಕ ಗುಣಗಳಿಂದಾಗಿ ಸಿನಿಮಾ, ಜಾಹೀರಾತು, ಡಾಕ್ಯುಮೆಂಟರಿಯಂತಹ ವೈವಿಧ್ಯಮಯ ಕ್ಷೇತ್ರಗಳಲ್ಲಿ ಇಂದು ಆನಿಮೇಶನ್ ಬಳಕೆಯಾಗುತ್ತಿದೆ. ಗ್ರಾಫಿಕ್ಸ್ ಹಾಗೂ ವಿಷುವಲ್ ಇಫೆಕ್ಟ್ಸ್ ಬಳಕೆಯಿಂದಾಗಿ ಈ ಕ್ಷೇತ್ರಕ್ಕೆ ಹೆಚ್ಚಿನ ಬೇಡಿಕೆಯಿದೆ’ ಎಂದರು. ಕ್ರಿಯೇಟಿವ್ ಆಲೋಚನೆಗಳಿರುವ ವಿದ್ಯಾರ್ಥಿಗಳು ಆನಿಮೇಷನ್ ಕೋರ್ಸ್‌ಗಳನ್ನು ಆಯ್ದುಕೊಂಡು, ಹಾಲಿವುಡ್ ಸೇರಿದಂತೆ ಇತರ ಸಿನಿಮಾ ಮತ್ತು ಪ್ರೊಡಕ್ಷನ್ ವಿಭಾಗಗಳಲ್ಲಿ ಉದ್ಯೋಗ ಪಡೆಯಬಹುದು. ಗ್ರಾಫಿಕ್ಸ್ ಹಾಗೂ ವಿಷುವಲ್ ಇಫೆಕ್ಟ್ಸ್ ಕೌಶಲ್ಯ ತಿಳಿದಿರುವ ಅಭ್ಯರ್ಥಿಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸಿದ್ದಿ. ಕುಂದಾಪುರ: ತಾಲೂಕಿನ ಶಂಕರನಾರಾಯಣ ಯುವ ಬ್ರಿಗೇಡ್ ವತಿಯಿಂದ ‘ಉಸಿರು ಹಂಚೋಣ’ ಶೀರ್ಷಿಕೆಯಡಿಯಲ್ಲಿ ಮನೆ-ಮನೆಗೆ ಸಂಪರ್ಕಿಸಿ ವಿವಿಧ ರೀತಿಯ ಗಿಡಗಳನ್ನು ವಿತರಿಸಿ, ಗಿಡಗಳನ್ನು ನಟ್ಟು ಅದನ್ನು ಪೋಷಿಸುವಂತೆ ಸೂಚಿಸಲಾಯಿತು. ಈ ಸಂದರ್ಭ ಶಂಕರನಾರಾಯಣ ಘಟಕದ ಪ್ರಮೋದ್ ಶಂಕರನಾರಾಯಣ, ವಿಜಯ್ ಯಡಮಕ್ಕಿ, ಕಿರಣ್ ಉಳ್ಳೂರು-74, ನಂದನ ನಿತೀಶ್, ಶ್ರೀಶ, ಚೇತನ್ ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕಾರಿಪುರದ ಹರಗಿ ಎಂಬಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ಭಟ್ಕಳಮಕ್ಕಿಯ ನಿವಾಸಿ ದಿನೇಶ್ ನಾಯ್ಕ್(34) ಅವರು ಬೈಕ್ನಲ್ಲಿ ಊರಿಗೆ ಬರುತ್ತಿದ್ದ ವೇಳೆ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಸಂಭವಿಸಿದೆ. ಹರಗಿ ಸರಕಾರಿ ಹಿ.ಪ್ರಾ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ದಿನೇಶ್ ಊರಿಗೆ ಬರುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ವಿದ್ಯಾರ್ಥಿಗಳ ಅಚ್ಚು ಮೆಚ್ಚಿನ ಶಿಕ್ಷರಾಗಿದ್ದ ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ ಸಹೋದರ ಸಹೋದರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಗಂಗಾನಾಡು ಗ್ರಾಮದ ಹಿಂದುಳಿದ ವರ್ಗದ ಬಡ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ 100 ರೇಷನ್ ಕಿಟ್ ವಿತರಿಸಲಾಯಿತು. ಕುಂದಾಪುರ ಕ್ರಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷರಾದ ಸಸಿಹಿತ್ಲು ವೆಂಕಟ ಪೂಜಾರಿ ಅವರು ಸಾಂಕೇತಿಕವಾಗಿ ವಿತರಣೆ ಮಾಡಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಇವರಿಗೆ ಶಾಲು ಹೊದಿಸಿ ಗೌರವಿಸಿದರು. ಕೊರೊನಾ ಸಮಯದಲ್ಲಿ ಗ್ರಾಮೀಣ ಪ್ರದೇಶದ ಜನರ ಮೇಲೆ ಕಾಳಜಿಯಿಟ್ಟು ಫುಡ್ ಕಿಟ್ ನೀಡಿದ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿ ಹಾಗೂ ಬಡವರಿಗೆ ನೀಡುವ ಸೌಲಭ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಉಡುಪಿ ಮಲಬಾರ್ ಗೋಲ್ಡ್ ಸಂಸ್ಥೆಯ ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ತಸ್ಲಿಮ್, ನದೀಮ್, ದೇವದಾಸ್ ನಾಗೂರು, ಸ್ಥಳೀಯರಾದ ಹೆರಿಯ ದೇವಾಡಿಗ, ಸುಧಾಕರ್ ಮೋಗವೀರ, ಹರೀಶ್ ಜಟ್ಟಿತ್ಲು, ರಾಘವೇಂದ್ರ ಮೋಗವೀರ ಸಸಿಹಿತ್ಲು ಮತ್ತಿತ್ತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಸರಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘ ಉಡುಪಿ ಇವರ ವತಿಯಿಂದ ಉಡುಪಿಯ ಜಿಲ್ಲಾ ಆಯುಷ್ ಕಛೇರಿಯಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮ ಜರಗಿತು. ಜಿಲ್ಲಾ  ಆಯುಷ್ ಅಧಿಕಾರಿ ಡಾ.ಪ್ರಕಾಶ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಸರಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ವೀಣಾ ಕಾರಂತ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ.ನಿರಂಜನ್ ರಾವ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯದರ್ಶಿ ಡಾ.ಸಂಧ್ಯಾ ಸ್ವಾಗತಿಸಿದರು. ಖಜಾಂಚಿ ಡಾ.ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು. ಡಾ.ಪ್ರದೀಪ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪ.ಜಾತಿ ಫಲಾನುಭವಿಗಳಿಗೆ ನಿವೇಶನಾ ಹಕ್ಕುಪತ್ರಗಳನ್ನು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ವಿತರಿಸಿದರು. ವಿತರಿಸಿ ಮಾತನಾಡಿದ ಅವರು, ಅರ್ಹ ಆರ್ಥಿಕ ದುರ್ಬಲರನ್ನು ಆಯ್ಕೆ ಮಾಡಿ ಹಕ್ಕು ಪತ್ರ ವಿತರಣೆ ಮಾಡಿದ್ದೇವೆ. ಇಂತಹ ಯೋಜನೆಗಳು ಜನರ ಅನುಕೂಲಕ್ಕೆ ಇರುವಂತದ್ದು, ಅದು ಅರ್ಹರನ್ನು ತಲುಪಬೇಕು. ಆ ನಿಟ್ಟಿನಲ್ಲಿ ಎಲ್ಲಾ ಪಂಚಾಯತ್ನಲ್ಲೂ ನಿವೇಶನ ರಹಿತರ ಪಟ್ಟಿಯನ್ನು ಪಡೆದು ನಿವೇಶನ ಹಂಚಿಕೆ ಮಾಡಲಾಗುವುದು. ನಮ್ಮ ಸಮಗ್ರ ಬೈಂದೂರಿನ ಸರ್ವ ಜನರು ನಿವೇಶನ ಹೊಂದಬೇಕು, ನಿವೇಶನ ಇಲ್ಲದಿದ್ದವರು ಸಂಖ್ಯೆ ಸಂಪೂರ್ಣ ಶೂನ್ಯ ಆಗಿಸುವುದು ನನ್ನ ಗುರಿ ಎಂದರು. ಈ ಸಂದರ್ಭದಲ್ಲಿ ತ್ರಾಸಿ ಪಂಚಾಯತ್ ಅಧ್ಯಕ್ಷರಾದ ಗೀತಾ ದೇವಾಡಿಗ ಮತ್ತು ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಾಕೃತಿಕ ವಿಕೋಪ ತಡೆ, ಮೀನುಗಳ ಸಂತಾನೋತ್ಪತ್ತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಕಾಂಡ್ಲಾವನ ಬೆಳೆಸುವುದು ಹಾಗೂ ಸಂರಕ್ಷಣೆಯ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಅವರು ಕುಂದಾಪುರ ಪಂಚಗಂಗಾವಳಿ ಹಿನ್ನಿರು ಭಾಗದಲ್ಲಿರುವ ಕಾಂಡ್ಲಾವನ ವೀಕ್ಷಣೆ ಮಾಡಿದ ಬಳಿಕ ಮಾತನಾಡಿ ಕರಾವಳಿಯಾದ್ಯಂತ ಕಾಂಡ್ಲಾವನ ಬೆಳೆಸಲು ಅರಣ್ಯ ಇಲಾಖೆಯಿಂದ ಚಿಂತನೆ ನಡೆಸಲಾಗಿದೆ. ಕಾಂಡ್ಲಾವನ ಹೆಚ್ಚಿದಷ್ಟು ಕರಾವಳಿಯಲ್ಲಿ ಸೈಕ್ಲೋನ್ನಂತಹ ಪ್ರಕೃತಿವಿಕೋಪ ತಡೆಯಲು ಸಾಧ್ಯವಿದೆ. ಕುಂದಾಪುರದ ಪ್ರಸಿದ್ಧ ಕಾಣೆ ಮೀನು ಈ ಪ್ರದೇಶದಲ್ಲಿಯೇ ಸಂತಾನೋತ್ಪತ್ತಿ ಮಾಡುತ್ತದೆ ಅಲ್ಲದೇ ಇಕೋ ಟೂರಿಸಂಗೆ ಪ್ರಶಸ್ತ ಸ್ಥಳವಾಗಿದೆ. ಇದರಿಂದ ಬರುವ ಆದಾಯವನ್ನು ಕಾಂಡ್ಲಾ ಅರಣ್ಯ ಬೆಳೆಸಲು ವಿನಿಯೋಗಿಸುವ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ. ಈ ಸಂದರ್ಭ ಕಾಂಡ್ಲಾವನ ಪರಿಚಯದ ಕಿರುಹೊತ್ತಿಗೆಯನ್ನು ಸಚಿವರು ಬಿಡುಗಡೆಗೊಳಿಸಿದರು. ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ,  ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಿಲ್ಲೋ ಟಾಗೋ, ಮುಖ್ಯ…

Read More

ಮಳೆಗಾಲ ಬಂತೆಂದರೆ ಶೀತದ ವಾತಾವರಣದ ಕಾರಣದಿಂದ ಕಾಯಿಲೆ ಬೀಳುವುದು ಅಧಿಕ. ಇದನ್ನು ತಡೆಗಟ್ಟಲು ನಾವು ಮಳೆಗಾಲದಲ್ಲಿ ನಮ್ಮ ಉಡುಪು, ಆಹಾರ ಶೈಲಿ ಎಲ್ಲವನ್ನೂ ಬದಲಾಯಿಸಬೇಕು. ಮಳೆಗಾಲದಲ್ಲಿ ವಾತಾವರಣದಲ್ಲಿ ವಾತ ಹಾಗೂ ಪಿತ್ತದ ದೋಷದ ಕಾರಣ ಜೀರ್ಣಕ್ರಿಯೆ ದುರ್ಬಲವಾಗುವುದು. ಮಳೆಗಾಲದಲ್ಲಿ ಕಾಯಿಲೆ ಬೀಳಲು ಇದು ಪ್ರಮುಖ ಕಾರಣವಾಗಿದೆ. ಆಹಾರಕ್ರಮದಲ್ಲಿ ಸಮತೋಲನ ಕಾಪಾಡಿದರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಆಹಾರಕ್ರಮ ಹೇಗಿರಬೇಕು ಎಂದು ನೋಡೋಣ ತಾಜಾ ಹಾಗೂ ಲಘು ಆಹಾರ ಸೇವಿಸಿ  ಮಳೆಗಾಲದಲ್ಲಿ ಅಕ್ಕಿ, ಬಾರ್ಲಿ, ಗೋಧಿ ಇವುಗಳಿಂದ ತಯಾರು ಮಾಡುವ ಆಹಾರ ಸೇವಿಸಿ. ಧಾನ್ಯಗಳು, ತುಪ್ಪ ಇಂಥ ಪದಾರ್ಥಗಳನ್ನು ಸೇವಿಸಿ. ಪ್ರತೀ ಊಟದ ಮೊದಲಿಗೆ ಸ್ವಲ್ಪ ಶುಂಠಿ, ಒಂದು ಒಂದು ಹರಳು ಕಲ್ಲುಪ್ಪು ತಿನ್ನಿ. ಸಾಲ್ಟ್ ಅಂಡ್ ಸೋರ್ ಸೂಪ್ ಬಳಸಿ. ಈರುಳ್ಳಿ ಹಾಗೂ ಇತರ ತರಕಾರಿಗಳನ್ನು ಹೆಚ್ಚಾಗಿ ಬಳಸಿ. ಇವುಗಳನ್ನು ತಿನ್ನಿ ತುಂಬಾ ಮಳೆ ಬರುತ್ತಿದ್ದರೆ ಹುಳಿಯಂಶದ, ಉಪ್ಪಿನಂಶದ, ಎಣ್ಣೆಯಂಶದ ಆಹಾರ ಸೇವಿಸಿ. ಕುದಿಸಿ ಆರಿದ ನೀರಿಗೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದು ಒಳ್ಳೆಯದು.…

Read More