ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್ -19ರ ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಹೊಸ ಕಟ್ಟಡದಲ್ಲಿ ಕೋವಿಡ್ ಮತ್ತು ಹಳೆಯ ಕಟ್ಟಡದಲ್ಲಿ ನಾನ್ ಕೋವಿಡ್ ಒಳರೋಗಿಗಳನ್ನು ದಾಖಲಿಸಿ, ಉಳಿದ ಸೇವೆಗಳಾದ ನಾನ್ ಕೋವಿಡ್ ಹೊರರೋಗಿ ವಿಭಾಗ, ತುರ್ತು ಚಿಕಿತ್ಸಾ ವಿಭಾಗ, ಪ್ರಯೋಗಾಲಯ ಸೇವೆ, ಕ್ಷ-ಕಿರಣ ಸೇವೆ, ಫೀವರ್ ಕ್ಲನಿಕ್, ಡಯಾಲಿಸಿಸ್ ವಿಭಾಗ, ಎ.ಆರ್.ಟಿ ಸೆಂಟರ್, ಐ.ಸಿ.ಟಿ.ಸಿ ವಿಭಾಗ, ಎಂ.ಎಲ್ ಸಿ ಸೇವೆ, ಪೋಸ್ಟ್ ಮಾರ್ಟಮ್ ಸೇವೆ, ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮಗಳನ್ನು ಕೋವಿಡ್-19 ಸುರಕ್ಷತಾ ಕ್ರಮಗಳೊಂದಿಗೆ ಸದರಿ ಆಸ್ಪತ್ರೆಯಲ್ಲಿಯೇ ನಿರ್ವಹಿಸಲಾಗುತ್ತಿದೆ. ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿರುವ ಕಲಾಮಂದಿರದಲ್ಲಿ ಕೋವಿಡ್-19 ಲಸಿಕಾಕರಣ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ ► ಕುಂದಾಪುರ ಸರಕಾರಿ ಆಸ್ಪತ್ರೆಯನ್ನು ಕೋವಿಡ್ ನೆಪದಲ್ಲಿ ಸ್ಥಳಾಂತರಿಸುವ ಹಿಂದೆ ಹುನ್ನಾರ ಅಡಗಿದೆ:…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೊರೊನಾ ವೈರಸ್ ನಿಯಂತ್ರಣಕ್ಕೆ ಹೇರಲಾಗಿರುವ ಜನತಾ ಕರ್ಫ್ಯೂ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿರುವ ಸುಮಾರು 100ಕ್ಕೂ ಮಿಕ್ಕಿ ಲಾರಿ ಮತ್ತು ಇತರ ವಾಹನ ಚಾಲಕರು ಹಾಗೂ ನಿರ್ವಾಹಕರಿಗೆ ತ್ರಾಸಿ ಬೀಚ್‌ನಲ್ಲಿ ಗಂಗೊಳ್ಳಿಯ ಗಂಗೊಳ್ಳಿಯ ಮಹಮ್ಮದ್ ಶಾಕೀರ್ ಹುಸೇನ್, ಮಹಮ್ಮದ್ ಇಮ್ರಾನ್ ಅಲ್-ಫಲ್ಹಾ, ಮಹಮ್ಮದ್ ಜುನೈದ್ ವಾಹನ ಚಾಲಕ ನಿರ್ವಾಹಕರಿಗೆ ಊಟದ ಪ್ಯಾಕೇಟ್ ಮತ್ತು ಕುಡಿಯುವ ನೀರಿನ ಬಾಟಲಿಗಳನ್ನು ವಿತರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳನ್ನು ದಾಖಾಲಾತಿ ಮಾಡಲು ಕುಂದಾಪುರ ಸಹಾಯಕ ಕಮೀಷನರ್ರವರನ್ನು ಭೇಟಿ ಮಾಡಿ ಮನವಿ ನೀಡಲಾಯಿತು. ಮನವಿಗೆ ಸ್ಪಂದಿಸಿದ ಸಹಾಯಕ ಕಮೀಷನರ್ ಮೂರು ನಾಲ್ಕು ದಿನಗಳಲ್ಲಿ, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಒಳರೋಗಿಗಳ ದಾಖಾಲಾತಿ ಹಾಗೂ ಇತರೇ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಹಳೆ ಕಟ್ಟಡದಲ್ಲಿರುವ ಆಕ್ಸಜಿನ್ ಬೆಡ್ ಗಳನ್ನು ಹೊಸ ಕಟ್ಟಡಕ್ಕೆ ಸಿಪ್ಟ್ ಮಾಡಿ ಸಾರ್ವಜನಿಕರ ಸೇವೆಗೆ ಅವಕಾಶ ಮಾಡುಕೊಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷರಾದ ಪಿ.ದೇವಕಿ ಸಣ್ಣಯ್ಯ, ಪುರಸಭೆ ಸದಸ್ಯರಾದ ಕೆ.ಜಿ. ನಿತ್ಯಾನಂದ, ಚಂದ್ರಶೇಖರ ಖಾರ್ವಿ, ಶ್ರೀಧರ ಸೇರಿಗಾರ್, ಅಬ್ಬು ಮಹಮ್ಮದ್, ಅಶ್ಪಾಕ್ ಕೋಡಿ ಉಪಸ್ಥಿತರಿದ್ದರು. ಇದನ್ನೂ ಓದಿ ► ಕುಂದಾಪುರ ಸರಕಾರಿ ಆಸ್ಪತ್ರೆಯನ್ನು ಕೋವಿಡ್ ನೆಪದಲ್ಲಿ ಸ್ಥಳಾಂತರಿಸುವ ಹಿಂದೆ ಹುನ್ನಾರ ಅಡಗಿದೆ: ಎಂಎಲ್‌ಸಿ ಕೆ. ಪ್ರತಾಪಚಂದ್ರ ಶೆಟ್ಟಿ ಆರೋಪ – https://kundapraa.com/?p=47774 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 568 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 312, ಕುಂದಾಪುರ, ಬೈಂದೂರು ತಾಲೂಕಿನ 175, ಕಾರ್ಕಳ, ಹೆಬ್ರಿ ತಾಲೂಕಿನ 78 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 568 ಪ್ರಕರಣಗಳಲ್ಲಿ 364 ಸಿಂಟಮಿಕ್ ಹಾಗೂ 204 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 28 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 540 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 2903 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 2359 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 439 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಇಂದು ಕೋವಿಡ್ ಪಾಸಿಟಿವ್ ಆಗಿದ್ದ ಕುಂದಾಪುರದ 76 ವರ್ಷದ ಮಹಿಳೆ ಹಾಗೂ ಕಾರ್ಕಳದ 62 ವರ್ಷದ ಪುರುಷ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಕೆಲವು ದಿನಗಳಿಂದ ಮರವಂತೆಯಲ್ಲಿ ಕಾಣಿಸಿಕೊಂಡಿದ್ದ ಕಡಲ್ಕೊರೆತ ಮುಂದುವರಿದಿದ್ದು ಬುಧವಾರ ರಾತ್ರಿ ಮರವಂತೆ ಕರಾವಳಿಯ ಬ್ರೇಕ್ ವಾಟರ್ ಉತ್ತರ ದಿಕ್ಕಿನಲ್ಲಿದ್ದ ದಿನಕರ ಖಾರ್ವಿ ಎಂಬುವರಿಗೆ ಸೇರಿದ್ದ ಮೀನುಗಾರಿಕಾ ಶೆಡ್ ಸಮುದ್ರ ಪಾಲಾಗಿದೆ. ಮೀನುಗಾರಿಕಾ ಶೆಡ್ ಹಾಗೂ ಮೀನುಗಾರಿಕಾ ಸಲಕರಣೆಗಳು ಸಮುದ್ರ ಪಾಲಾಗಿದ್ದು ಸುಮಾರು 4 ಲಕ್ಷ ರೂ. ನಷ್ಟವಾಗಿರಬಹುದೆಂದು ಅಂದಾಜಿಸಲಾಗಿದೆ. ಮರವಂತೆಯಲ್ಲಿ ಅರ್ಧದಲ್ಲೇ ಸ್ಥಗಿತವಾಗಿರುವ ಮೀನುಗಾರಿಕಾ ಹೊರಬಂದರಿನ ಉತ್ತರ ತಡೆಗೋಡೆಯ ಉತ್ತರಕ್ಕಿರುವ ಈ ಪ್ರದೇಶದಲ್ಲಿ ಹಿಂದಿನ ಮಳೆಗಾಲದಲ್ಲಿ ಆರಂಭವಾದ ಕೊರೆತ ಮಳೆಗಾಲದ ಬಳಿಕವೂ ಮರುಕಳಿಸುತ್ತಲೇ ಇದೆ. ಸಾಮಾನ್ಯವಾಗಿ ಅಮಾವಾಸ್ಯೆ ಮತ್ತು ಹುಣ್ಣಿಮೆಯ ದಿನಗಳಲ್ಲಿ ಕೆಲವೆಡೆ ಸಮುದ್ರ ಪ್ರಕ್ಷುಬ್ಧಗೊಂಡು, ಅಲೆಗಳ ರಭಸ ಹೆಚ್ಚಿ, ತೀರದ ಮೇಲೆ ದಾಳಿ ನಡೆಸುತ್ತವೆ. ಮಂಗಳವಾರ ಹುಣ್ಣಿಮೆ ಇದ್ದುದರಿಂದ ಬುಧವಾರ ಅದರ ಪ್ರಭಾವ ಕಂಡುಬಂದಿದೆ. ಇಲ್ಲಿ ಕೆಲವು ತೆಂಗಿನ ಮರಗಳು ಉರುಳಿವೆ. ಹಲವು ಮರಗಳ ಬುಡದ ಮಣ್ಣು ಅಲೆಗಳಿಗೆ ಸಿಲುಕಿ ನಶಿಸುತ್ತಿರುವುದರಿಂದ ಸಮುದ್ರದ ಅಬ್ಬರ ಇನ್ನೂ ಒಂದೆರಡು ದಿನ ಮುಂದುವರಿದರೆ ಹತ್ತಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಟಾಸ್ಕ್‌ಪೋರ್ಸ್ ಸಮಿತಿ ಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ ಅವರು ಕೋವಿಡ್-19 ಮಾರ್ಗಸೂಚಿ ಹಾಗೂ ಕರೋನಾ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜ್ವರದಿಂದ ಬಳಲುತ್ತಿರುವವರನ್ನು ಕರೋನಾ ಟೆಸ್ಟ್‌ಗೆ ಒಳಪಡಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಬೇಕು. ಗಂಗೊಳ್ಳಿಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಕರೋನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂಬಿತ್ಯಾದಿ ಆಗ್ರಹಗಳು ಸಭೆಯಲ್ಲಿ ವ್ಯಕ್ತವಾಯಿತು. ಗ್ರಾಮ ಪಂಚಾಯತ್ ಪಿಡಿಒ ಉಮಾಶಂಕರ, ಟಾಸ್ಕ್‌ಪೋರ್ಸ್ ಸಮಿತಿ ಸದಸ್ಯರಾದ ಬಿ.ರಾಘವೇಂದ್ರ ಪೈ, ಫಿಲೋಮಿನಾ ಫೆರ್ನಾಂಡಿಸ್, ಕಿರಿಯ ಆರೋಗ್ಯ ಸಹಾಯಕಿ ಶ್ರೀದೇವಿ, ಆಶಾ ಕಾರ್ಯಕರ್ತೆ ಉಷಾ, ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್, ಚೈತ್ರಾ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಮೀಪದ ಪಡುಕೋಣೆಯ ಉದ್ಯಮಿ ಪ್ರಭು ಆರ್ಥರ್ ಪಿರೇರಾ (53) ಎ. 25ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಡಾ ಗುಡ್ಡೆಯಂಗಡಿಯಲ್ಲಿ ಲೇಟೆಸ್ಟ್ ಸಾಫ್ಟ್ ಡ್ರಿಂಕ್ಸ್ ಉದ್ಯಮವನ್ನು ಹೊಂದಿದ್ದ ಅವರು ಪರಿಸರದಲ್ಲಿ ಜನಾನುರಾಗಿಯಾಗಿದ್ದರು. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭು ಕೆನಡಿ ಪಿರೇರಾ ಅವರ ಸಹೋದರರಾಗಿದ್ದ ಅವರು ತಂದೆ, ತಾಯಿ, ಮೂವರು ಸಹೋದರರು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪಡುಕೋಣೆ ಇಗರ್ಜಿಯಲ್ಲಿ ಮೃತರಅಂತಿಮ ವಿಧಿಯನ್ನು ನೆರವೇರಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯುವಮೋರ್ಚಾ ಭಾರತೀಯ ಜನತಾಪಾರ್ಟಿ ಬೈಂದೂರು ಮಂಡಲ ವತಿಯಿಂದ ಇಂದು ಪಕ್ಷದ ಕಛೇರಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ.ವೀಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ರಾಜ್ಯ ಯುವಮೋರ್ಚಾ ಕಾರ್ಯಕಾರಣಿ ಸದಸ್ಯರಾದ ಪ್ರಜ್ವಲ್ ಶೆಟ್ಟಿ , ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಹಾಗೂ ಪಕ್ಷದ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು ಯುವಮೋರ್ಚಾ ಪ್ರಧಾನಕಾರ್ಯದರ್ಶಿ ಆಕಾಶ್ ಪೂಜಾರಿ ಸ್ವಾಗತಿಸಿದರು, ಯುವಮೋರ್ಚಾ ಅಧ್ಯಕ್ಷ ಸಂತೋಶ್ ಧನ್ಯವಾದಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪರಿಶಿಷ್ಟ ವರ್ಗದ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ http://www.sw.kar.nic/in , ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ರಜತಾದ್ರಿ, ಮಣಿಪಾಲ ದೂ. ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಸರ್ಕಾರಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ 19 ರೋಗಿಗಳಿಗೆ ಮಾತ್ರ ಮೀಸಲಿಟ್ಟು, ಏಕಾಏಕಿಯಾಗಿ ಆಸ್ಪತ್ರೆಯ ಹೊರರೋಗಿ ಹಾಗೂ ಒಳರೋಗಿ ವಿಭಾಗವನ್ನು ಉಡುಪಿ ಜಿಲ್ಲಾಸ್ಪತ್ರಗೆ ಸ್ಥಳಾಂತರಿಸಿರುವುದು ಖಂಡನೀಯ ಹಾಗೂ ಜನವಿರೋಧಿ ಕ್ರಮವಾಗಿದ್ದು ಈ ನಿರ್ಧಾರದ ಹಿಂದೆ ಸ್ಥಳೀಯ ಖಾಸಗಿ ಆಸ್ಪತ್ರೆಯನ್ನು ಅವಲಂಬಿಸುವಂತೆ ಮಾಡುವ ಹುನ್ನಾರ ಅಡಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಎ.28ರಂದು ಎರಡನೇ ಭಾರಿಗೆ ವಿವರವಾದ ಪತ್ರ ಬರೆದಿರುವ ಅವರು ಈ ಜನವಿರೋಧಿ ಕ್ರಮವು ಹೀಗೆಯೇ ಮುಂದುವರಿದರೆ ಅದರ ವಿರುದ್ದ ಜನಭಿಪ್ರಾಯ ಮೂಡಿಸುವುದರೊಂದಿಗೆ ಸೂಕ್ತ ವೇದಿಕೆಯಲ್ಲಿ ನಿರಂತರವಾಗಿ ಪ್ರತಿಭಟನೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ 30,444 ಜನಸಂಖ್ಯೆಯಿದ್ದು, ಪುರಸಭೆಯನ್ನು ಹೊರತುಪಡಿಸಿ ಕುಂದಾಪುರ ತಾಲೂಕಿನ ಇತರೆ ಪ್ರದೇಶಗಳು 2,23,296 ಜನಸಂಖ್ಯೆಯಿದೆ. ಪುರಸಭೆ ಸೇರಿದಂತೆ ಆಸುಪಾಸಿನ ಗ್ರಾಮಗಳ ಬಡ ಹಿಂದುಳಿದ ಜನರು ತಮ್ಮ ಚಿಕಿತ್ಸೆಗಾಗಿ ಕುಂದಾಪುರ ತಾಲೂಕು ಆಸ್ಪತ್ರೆಯನ್ನು ಆಶ್ರಯಿಸಿರುತ್ತಾರೆ ಹಾಗೂ…
