ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಗಂಗಾನಾಡು ಗ್ರಾಮದ ಹಿಂದುಳಿದ ವರ್ಗದ ಬಡ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ 100 ರೇಷನ್ ಕಿಟ್ ವಿತರಿಸಲಾಯಿತು. ಕುಂದಾಪುರ ಕ್ರಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷರಾದ ಸಸಿಹಿತ್ಲು ವೆಂಕಟ ಪೂಜಾರಿ ಅವರು ಸಾಂಕೇತಿಕವಾಗಿ ವಿತರಣೆ ಮಾಡಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಇವರಿಗೆ ಶಾಲು ಹೊದಿಸಿ ಗೌರವಿಸಿದರು. ಕೊರೊನಾ ಸಮಯದಲ್ಲಿ ಗ್ರಾಮೀಣ ಪ್ರದೇಶದ ಜನರ ಮೇಲೆ ಕಾಳಜಿಯಿಟ್ಟು ಫುಡ್ ಕಿಟ್ ನೀಡಿದ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿ ಹಾಗೂ ಬಡವರಿಗೆ ನೀಡುವ ಸೌಲಭ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಉಡುಪಿ ಮಲಬಾರ್ ಗೋಲ್ಡ್ ಸಂಸ್ಥೆಯ ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ತಸ್ಲಿಮ್, ನದೀಮ್, ದೇವದಾಸ್ ನಾಗೂರು, ಸ್ಥಳೀಯರಾದ ಹೆರಿಯ ದೇವಾಡಿಗ, ಸುಧಾಕರ್ ಮೋಗವೀರ, ಹರೀಶ್ ಜಟ್ಟಿತ್ಲು, ರಾಘವೇಂದ್ರ ಮೋಗವೀರ ಸಸಿಹಿತ್ಲು ಮತ್ತಿತ್ತರರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಸರಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘ ಉಡುಪಿ ಇವರ ವತಿಯಿಂದ ಉಡುಪಿಯ ಜಿಲ್ಲಾ ಆಯುಷ್ ಕಛೇರಿಯಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮ ಜರಗಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಪ್ರಕಾಶ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಸರಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ವೀಣಾ ಕಾರಂತ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ.ನಿರಂಜನ್ ರಾವ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯದರ್ಶಿ ಡಾ.ಸಂಧ್ಯಾ ಸ್ವಾಗತಿಸಿದರು. ಖಜಾಂಚಿ ಡಾ.ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು. ಡಾ.ಪ್ರದೀಪ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪ.ಜಾತಿ ಫಲಾನುಭವಿಗಳಿಗೆ ನಿವೇಶನಾ ಹಕ್ಕುಪತ್ರಗಳನ್ನು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ವಿತರಿಸಿದರು. ವಿತರಿಸಿ ಮಾತನಾಡಿದ ಅವರು, ಅರ್ಹ ಆರ್ಥಿಕ ದುರ್ಬಲರನ್ನು ಆಯ್ಕೆ ಮಾಡಿ ಹಕ್ಕು ಪತ್ರ ವಿತರಣೆ ಮಾಡಿದ್ದೇವೆ. ಇಂತಹ ಯೋಜನೆಗಳು ಜನರ ಅನುಕೂಲಕ್ಕೆ ಇರುವಂತದ್ದು, ಅದು ಅರ್ಹರನ್ನು ತಲುಪಬೇಕು. ಆ ನಿಟ್ಟಿನಲ್ಲಿ ಎಲ್ಲಾ ಪಂಚಾಯತ್ನಲ್ಲೂ ನಿವೇಶನ ರಹಿತರ ಪಟ್ಟಿಯನ್ನು ಪಡೆದು ನಿವೇಶನ ಹಂಚಿಕೆ ಮಾಡಲಾಗುವುದು. ನಮ್ಮ ಸಮಗ್ರ ಬೈಂದೂರಿನ ಸರ್ವ ಜನರು ನಿವೇಶನ ಹೊಂದಬೇಕು, ನಿವೇಶನ ಇಲ್ಲದಿದ್ದವರು ಸಂಖ್ಯೆ ಸಂಪೂರ್ಣ ಶೂನ್ಯ ಆಗಿಸುವುದು ನನ್ನ ಗುರಿ ಎಂದರು. ಈ ಸಂದರ್ಭದಲ್ಲಿ ತ್ರಾಸಿ ಪಂಚಾಯತ್ ಅಧ್ಯಕ್ಷರಾದ ಗೀತಾ ದೇವಾಡಿಗ ಮತ್ತು ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಾಕೃತಿಕ ವಿಕೋಪ ತಡೆ, ಮೀನುಗಳ ಸಂತಾನೋತ್ಪತ್ತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಕಾಂಡ್ಲಾವನ ಬೆಳೆಸುವುದು ಹಾಗೂ ಸಂರಕ್ಷಣೆಯ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಅವರು ಕುಂದಾಪುರ ಪಂಚಗಂಗಾವಳಿ ಹಿನ್ನಿರು ಭಾಗದಲ್ಲಿರುವ ಕಾಂಡ್ಲಾವನ ವೀಕ್ಷಣೆ ಮಾಡಿದ ಬಳಿಕ ಮಾತನಾಡಿ ಕರಾವಳಿಯಾದ್ಯಂತ ಕಾಂಡ್ಲಾವನ ಬೆಳೆಸಲು ಅರಣ್ಯ ಇಲಾಖೆಯಿಂದ ಚಿಂತನೆ ನಡೆಸಲಾಗಿದೆ. ಕಾಂಡ್ಲಾವನ ಹೆಚ್ಚಿದಷ್ಟು ಕರಾವಳಿಯಲ್ಲಿ ಸೈಕ್ಲೋನ್ನಂತಹ ಪ್ರಕೃತಿವಿಕೋಪ ತಡೆಯಲು ಸಾಧ್ಯವಿದೆ. ಕುಂದಾಪುರದ ಪ್ರಸಿದ್ಧ ಕಾಣೆ ಮೀನು ಈ ಪ್ರದೇಶದಲ್ಲಿಯೇ ಸಂತಾನೋತ್ಪತ್ತಿ ಮಾಡುತ್ತದೆ ಅಲ್ಲದೇ ಇಕೋ ಟೂರಿಸಂಗೆ ಪ್ರಶಸ್ತ ಸ್ಥಳವಾಗಿದೆ. ಇದರಿಂದ ಬರುವ ಆದಾಯವನ್ನು ಕಾಂಡ್ಲಾ ಅರಣ್ಯ ಬೆಳೆಸಲು ವಿನಿಯೋಗಿಸುವ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ. ಈ ಸಂದರ್ಭ ಕಾಂಡ್ಲಾವನ ಪರಿಚಯದ ಕಿರುಹೊತ್ತಿಗೆಯನ್ನು ಸಚಿವರು ಬಿಡುಗಡೆಗೊಳಿಸಿದರು. ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಿಲ್ಲೋ ಟಾಗೋ, ಮುಖ್ಯ…
ಮಳೆಗಾಲ ಬಂತೆಂದರೆ ಶೀತದ ವಾತಾವರಣದ ಕಾರಣದಿಂದ ಕಾಯಿಲೆ ಬೀಳುವುದು ಅಧಿಕ. ಇದನ್ನು ತಡೆಗಟ್ಟಲು ನಾವು ಮಳೆಗಾಲದಲ್ಲಿ ನಮ್ಮ ಉಡುಪು, ಆಹಾರ ಶೈಲಿ ಎಲ್ಲವನ್ನೂ ಬದಲಾಯಿಸಬೇಕು. ಮಳೆಗಾಲದಲ್ಲಿ ವಾತಾವರಣದಲ್ಲಿ ವಾತ ಹಾಗೂ ಪಿತ್ತದ ದೋಷದ ಕಾರಣ ಜೀರ್ಣಕ್ರಿಯೆ ದುರ್ಬಲವಾಗುವುದು. ಮಳೆಗಾಲದಲ್ಲಿ ಕಾಯಿಲೆ ಬೀಳಲು ಇದು ಪ್ರಮುಖ ಕಾರಣವಾಗಿದೆ. ಆಹಾರಕ್ರಮದಲ್ಲಿ ಸಮತೋಲನ ಕಾಪಾಡಿದರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಆಹಾರಕ್ರಮ ಹೇಗಿರಬೇಕು ಎಂದು ನೋಡೋಣ ತಾಜಾ ಹಾಗೂ ಲಘು ಆಹಾರ ಸೇವಿಸಿ ಮಳೆಗಾಲದಲ್ಲಿ ಅಕ್ಕಿ, ಬಾರ್ಲಿ, ಗೋಧಿ ಇವುಗಳಿಂದ ತಯಾರು ಮಾಡುವ ಆಹಾರ ಸೇವಿಸಿ. ಧಾನ್ಯಗಳು, ತುಪ್ಪ ಇಂಥ ಪದಾರ್ಥಗಳನ್ನು ಸೇವಿಸಿ. ಪ್ರತೀ ಊಟದ ಮೊದಲಿಗೆ ಸ್ವಲ್ಪ ಶುಂಠಿ, ಒಂದು ಒಂದು ಹರಳು ಕಲ್ಲುಪ್ಪು ತಿನ್ನಿ. ಸಾಲ್ಟ್ ಅಂಡ್ ಸೋರ್ ಸೂಪ್ ಬಳಸಿ. ಈರುಳ್ಳಿ ಹಾಗೂ ಇತರ ತರಕಾರಿಗಳನ್ನು ಹೆಚ್ಚಾಗಿ ಬಳಸಿ. ಇವುಗಳನ್ನು ತಿನ್ನಿ ತುಂಬಾ ಮಳೆ ಬರುತ್ತಿದ್ದರೆ ಹುಳಿಯಂಶದ, ಉಪ್ಪಿನಂಶದ, ಎಣ್ಣೆಯಂಶದ ಆಹಾರ ಸೇವಿಸಿ. ಕುದಿಸಿ ಆರಿದ ನೀರಿಗೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದು ಒಳ್ಳೆಯದು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ) 30 ದಿನಗಳ ಆನ್ಲೈನ್ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಜುಲೈ 17ರ ಒಳಗೆ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತಗಂಗೋತ್ರಿ ಆವರಣದಲ್ಲಿರುವ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯೊಳಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0821-2515944 ಅನ್ನು ಸಂಪರ್ಕಿಸುವಂತೆ ಮುಕ್ತ ವಿವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೇವಾ ಭಾರತಿ ಕರ್ನಾಟಕ, ಪ್ರೇರಣಾ ಟ್ರಸ್ಟ್ ಶಿವಮೊಗ್ಗ, ಪಿಇಎಸ್ ಶಿವಮೊಗ್ಗ ಹಾಗೂ ಉಡುಪಿ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿರುವ ಎಂಡೋಸಲ್ಪಾನ್ ಸಂತ್ರಸ್ತ ಕುಟುಂಬದವರಿಗೆ ಉಚಿತ ಕೋವೀಡ್ ಲಸಿಕೆ ನೀಡುವ ಅಭಿಯಾನ ಜೂ.12ರಂದು ಬೆಳಿಗ್ಗೆ 9 ಘಂಟೆಗೆ ತಾಲೂಕಿನ ಶಿರೂರು ವೆಂಕಟರಮಣ ಸಭಾಭವನದಲ್ಲಿ ಆರಂಭಗೊಳ್ಳಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದರಾದ ಬಿ. ವೈ ರಾಘವೇಂದ್ರ ಹಾಗೂ ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರ ಸಹಭಾಗಿತ್ವದಲ್ಲಿ ಸುಮಾರು 3,000 ಕೋವೀಡ್ ಲಸಿಕೆಯನ್ನು ಉಚಿತವಾಗಿ ನೀಡಲಿದ್ದು, ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಂಡೋಸಲ್ಪಾನ್ ಸಂತ್ರಸ್ತ ಕುಟುಂಬಿಕರಿಗೆ ಪ್ರತ್ಯೇಕವಾಗಿ ನೀಡಲಾಗುತ್ತಿದೆ. ಎಂಡೋಸಲ್ಪಾನ್ ಸಂತ್ರಸ್ತ ಕುಟುಂಬದವರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಯನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಮಾಸಿಕ 15,000 ರೂ, ವೇತನದಂತೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು, ಜುಲೈ 13 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಹೊಂದಿ, ರಾಜ್ಯ ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಣಿ ಆದಂತಹ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0820-2536650/ 2525566 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ತಾಲೂಕಿನ ಮುಲ್ಲಿಬಾರು ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿನಿ ಸುಚಿತ್ರಾ ಪರಮೇಶ್ವರ ಮರಾಠಿ ನ್ಯಾಶನಲ್ ಮಿನ್ಸ್ ಕಮ್ ಮೆರೀಟ್ ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ (NMMS)ಯಲ್ಲಿ ತೇರ್ಗಡೆಯಾಗಿದ್ದಾಳೆ. ಬೈಂದೂರು ವಲಯದ ಸುಮಾರು ಮೂರು ಸಾವಿರ ವಿದ್ಯಾರ್ಥಿಗಳ ಪೈಕಿ 11 ಮಂದಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿನಿಯನ್ನು ಆಕೆಯ ನಿವಾಸದಲ್ಲಿ ಗೌರವಿಸಲಾಯಿತು. ಈ ಸಂದರ್ಭ ಮುಲ್ಲಿಬಾರು ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು, ಸಂಚಲನದ ಪದಾಧಿಕಾರಿಗಳು, ಕಂಬದಕೋಣೆ ಕ್ಲಸ್ಟರ್ ಸಿಆರ್‌ಪಿ, ಕ್ಯಾಕೋಡ್ ಶಾಲೆಯ ಮುಖ್ಯ ಶಿಕ್ಷಕರು ಮೊದಲಾದವರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಧುನಿಕ ತಂತ್ರಜ್ಞಾನ ಭರಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷೀನ್ ಲರ್ನಿಂಗ್ ತಂತ್ರಜ್ಞಾನ ದ ಹೊಸ ಕೋರ್ಸ್ ಅನ್ನು ಪ್ರಾರಂಭಿಸಲು ಅನುಮೋದನೆ ದೊರಕಿದ್ದು, ಇದೇ ಸಾಲಿನಲ್ಲಿ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ಆಧುನಿಕ ಯುಗದಲ್ಲಿ ಇಂಜಿನಿಯರಿಂಗ್ ಒಳಗೊಳ್ಳುವಿಕೆ ಇಲ್ಲದೆ ಇರುವುದನ್ನು ಊಹಿಸಲೇ ಕಷ್ಟವಾಗಿದ್ದು, ಸ್ವಯಂಚಾಲಿತವಾಗಿ ಕಾರ್ಯ ನಿರ್ವಹಿಸುವ ಉತ್ಪನ್ನಗಳಿಗೆ ಬಹಳ ಬೇಡಿಕೆ ಇರುವುದರಿಂದ ಕೃತಕ ಬುದ್ದಿಶಕ್ತಿ ತಂತ್ರಜ್ಞಾನ ಕಲಿಕೆ ಪ್ರಮುಖ ಪಾತ್ರವಹಿಸುತ್ತದೆ. ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ಸ್, ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೋರ್ಸ್ ಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದು, ಈಗ ಹೊಸ ಕೋರ್ಸ್ನ ಸೇರ್ಪಡೆಯಿಂದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಸಿಕ್ಕಂತಾಗಿದೆ. ವಿದ್ಯಾರ್ಥಿಗಳಿಗೆ ಕಂಪನಿಯಲ್ಲಿ ಉದ್ಯೋಗವಕಾಶಕ್ಕೆ ಅನುಕೂಲವಾಗುವ ಸಲುವಾಗಿ ಕಾಲೇಜು ಈಗಾಗಲೇ ಮೈಕ್ರೋಸಾಫ್ಟ್ನ ಟ್ರೈನಿಂಗ್ ಪಾರ್ಟ್ನರ್ ಮತ್ತು ಎಡೆಕ್ಸ್ ಕಂಪನಿಗಳ ಜೊತೆ ಒಪ್ಪಂದ ಮಾಡಿ ಕೊಂಡಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಕೂಡ ಪಡೆಯಲು ಅವಕಾಶ ಇರುತ್ತದೆ. 2020-2021 ಸಾಲಿನಲ್ಲಿ…
