ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ಎಮ್ಎಮ್.ಹೌಸ್ ಇದರ ವತಿಯಿಂದ ಕೋವಿಡ್ ನೆರವಿಗಾಗಿ ಉಡುಪಿ ಜಿಲ್ಲಾಡಳಿತಕ್ಕೆ 37 ಆಕ್ಸಿಜನ್ ಸಿಲಿಂಡರ್ಗಳನ್ನು ಕೊಡುಗೆಯಾಗಿ ನೀಡಲಾಯಿತು. ಎಮ್.ಎಮ್.ಹೌಸ್ ಪರವಾಗಿ ಮಣೆಗಾರ್ ಜಿಪ್ರಿ ಅವರು ಅಪರ ಜಲ್ಲಾಧಿಕಾರಿ ಸದಾಶಿವ ಪ್ರಭು ಅವರಿಗೆ ಆಕ್ಸಿಜನ್ ಸಿಲಿಂಡರ್ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಕೋವಿಡ್ ಎರಡನೇ ಅಲೆ ಆರಂಭದಲ್ಲಿ ಕೋವಿಡ್ ನಿಯಂತ್ರಣ ಜಿಲ್ಲಾಡಳಿತಕ್ಕೆ ದೊಡ್ಡ ಸವಾಲಾಗಿತ್ತು. ಆಮ್ಲಜನಕ ಕೊರತೆ ಕಾಡಿದ್ದು ಜಿಲ್ಲಾಡಳಿತದ ಸಕಾಲಿಕ ಕ್ರಮಗಳ ಮೂಲಕ ಸಂಭವಿಸಬಹುದಾದ ಅನಾಹುತಗಳಿಂದ ಪಾರಾಗಿರುವುದು ಜಿಲ್ಲೆಯ ಹೆಮ್ಮೆಯಾಗಿದೆ. ಕೋವಿಡ್ ನಿಯಂತ್ರಣದಲ್ಲಿ ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಕಾರ ಅಪಾರವಾಗಿದೆ. ಜಿಲ್ಲೆಯ ತುತ್ತತುದಿಯ ಗ್ರಾಮವಾದ ಶಿರೂರಿನ ಮೀರಾನ್ ಸಾಹೇಬ್ ಅವರ ಸಹಕಾರಕ್ಕೆ ಜಿಲ್ಲಾಡಳಿತ ಅಬಾರಿಯಾಗಿದೆ. ಮಾತ್ರವಲ್ಲದೆ ಸಾರ್ವಜನಿಕರ ಈ ರೀತಿಯ ಸಹಕಾರದಿಂದ ಉಡುಪಿ ಜಿಲ್ಲೆ ಇನ್ನಷ್ಟು ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದರು. ಎಮ್.ಎಮ್.ಹೌಸ್ ಶಿರೂರು ಪರವಾಗಿ ಮಣೆಗಾರ್ ಜಿಪ್ರಿ ಸಾಹೇಬ್ ಮಾತನಾಡಿ, ಕೋವಿಡ್ ಜಗತ್ತಿಗೆ ಬಂದಿರುವ ವಿಪತ್ತಾಗಿದೆ. ಈ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಅಭಯ ಹಸ್ತ ಹೆಲ್ಪ್ಲೈನ್ ಉಡುಪಿ ಗೆಳೆಯರ ಬಳಗ ಆನಗಳ್ಳಿ, ದತ್ತಾಶ್ರಮ ಆನಗಳ್ಳಿ, ಹ್ಯಾಲ್ಪಿಂಗ್ ಹ್ಯಾಂಡ್ಸ್ ಕುಂದಾಪುರ ಇವರ ಸಹಕಾರದಲ್ಲಿ ಗೆಳೆಯರ ಬಳಗ ಆನಗಳ್ಳಿ ಕುಂದಾಪುರ ಸಭಾಂಗಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಇತ್ತಿಚೆಗೆ ನಡೆಯಿತು. ಉಡುಪಿ ಅಭಯ ಹಸ್ತ ಹೆಲ್ಪ್ ಲೈನ್ ಇದರ ಅಧ್ಯಕ್ಹರಾದ ಯಶ್ ಪಾಲ್ ಸುವರ್ಣ ರಕ್ತದಾನ ಶಿಬಿರಕ್ಕೆ ಆಗಮಿಸಿ ಶುಭಕೋರಿದರು. ಉದ್ಯಮಿ ಜಗದೀಶ್ ಕೊಟೇಶ್ವರ ಉದ್ಘಾಟಿಸಿದರು, ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಅದ್ಯಕ್ಷರಾದ ಜಯಕರ ಶೆಟ್ಟಿ ಅಧ್ಯಕ್ಹತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಕ್ತದಾನ ಹಾಗೂ ರಕ್ತದಾನ ಶಿಬಿರ ಆಯೋಜನೆ ಮಾಡಿದ ಸಂಘಟನೆಗಳನ್ನು ಗುರುತಿಸಿ ಸನ್ಮಾನಿಸಲಾಯಿತು ಮುಖ್ಯ ಅತಿಥಿಗಳಾಗಿ ಸುದಾಕರ್ ಕಾಂಚನ್ ಕುಂದಾಪುರ, ಉಡುಪಿ ಅಭಯ ಹಸ್ತ ಹೆಲ್ಫ್ ಲೈನ್ ಅಧ್ಯಕ್ಷರಾದ ರಾಜೇಶ ಶೆಟ್ಟಿ ಮುನಿಯಾಲು, ಉಡುಪಿ ಅಭಯಹಸ್ತ ಹೆಲ್ಫ್ ಲೈನ್ ಸಂಸ್ಥಾಪಕ ಅಧ್ಯಕ್ಷರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಹೆತ್ತವರನ್ನು ಕಳೆದುಕೊಂಡ ಅವಲಂಬಿತ ಮಕ್ಕಳು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿಯು ಉಚಿತ ಶಿಕ್ಷಣವನ್ನು ನೀಡುವುದು ಎಂದು ಕಾಲೇಜಿನ ಆಡಳಿತ ತಿಳಿಸಿದೆ. ಪ್ರಸ್ತುತ ವರ್ಷ ಅಂತಹ ವಿದ್ಯಾರ್ಥಿಗಳ ಶೈಕ್ಷಣಿಕವಾಗಿ ಸಾಮರ್ಥ್ಯದ ಬೆಳವಣಿಗೆಯ ದೃಷ್ಟಿಯಿಂದ ಈ ಆರ್ಥಿಕ ಸಹಾಯವು ಅನುಕೂಲವಾಗಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೆಹಲಿಯಲ್ಲಿ ನಡೆದ ಇಂಟರ್ನ್ಯಾಷನಲ್ ಅಚಿವರ್ಸ್ ಕಾನ್ಫರೆಸ್ಸ್ ಸಮಾರಂಭದಲ್ಲಿ ಶೆಫ್ಟಾಕ್ ಸಂಸ್ಥೆಯು ಅಹಾರದ ಅತ್ಯತ್ತಮ ಗುಣಮಟ್ಟಕ್ಕೆ ಕ್ವಾಲಿಟಿ ಪುಡ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಅವಾರ್ಡ್ನ್ನು ಶೆಫ್ಟಾಕ್ ಸಂಸ್ಥೆಯ ಎಂಡಿ ಗೋವಿಂದ ಬಾಬು ಪೂಜಾರಿ ಪಡೆದುಕೊಂಡಿದ್ದಾರೆ. ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಗೋವಿಂದ ಬಾಬು ಪೂಜಾರಿ ಅವರು ಹಂತ ಹಂತವಾಗಿ ಸಾಧನೆಯ ಶಿಖರವೇರಿದವರು. ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿರುವ ಗೋವಿಂದ ಪೂಜಾರಿ ಅವರು ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ತಮ್ಮ ಉದ್ಯಮವನ್ನು ವಿಸ್ತರಿಸಿ ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದಾರೆ. ನಾಯಕತ್ವದ ಕೌಶಲ್ಯ ಮತ್ತು ಶ್ರಮದ ದುಡಿಮೆ ಮೂಲಕ ಯಶಸ್ಸು, ಪ್ರಸಿದ್ಧಿ ಗಳಿಸಿರುವ ಇವರು ಹುಟ್ಟೂರು ಉಪ್ಪುಂದದಲ್ಲಿ ಜನೋಪಕಾರಿ ಸಂಸ್ಥೆಯೊಂದು ಇರಬೇಕೆಂಬ ಆಶಯದಿಂದ 2015ರಲ್ಲಿ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿಯನ್ನು ತೆರೆದು ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾದರು. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಶ್ರೀ ವರಲಕ್ಷ್ಮೀ ಚಾರಿಟೇಬಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಸಾರಿಗೆ ಆಯುಕ್ತರ ಆದೇಶ ಹಾಗೂ ಮೋಟಾರು ವಾಹನ ಕಾಯ್ದೆಯನ್ವಯ ಜಿಲ್ಲೆಯ ಎಲ್ಲಾ ಖಾಸಗಿ ಬಸ್ಸು, ಮ್ಯಾಕ್ಸಿಕ್ಯಾಬ್ ಹಾಗೂ ಟ್ಯಾಕ್ಸಿಗಳು ಮುಂಗಡ ತೆರಿಗೆ ಪಾವತಿಸಿ, ಅನುಪಯುಕ್ತತೆಯಿಂದ ಬಿಡುಗಡೆಗೊಳಿಸಿಕೊಂಡು ಮಾತ್ರ ವಾಹನವನ್ನು ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಆದೇಶಿಸಿರುತ್ತಾರೆ. ಆದರೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಚೇರಿಯ ಮೋಟಾರು ವಾಹನ ನಿರೀಕ್ಷಕರು, ನಿಯಮ ಉಲ್ಲಂಘಿಸಿ ವಾಹನ ತೆರಿಗೆ ಪಾವತಿಸದೇ, ಅದ್ಯರ್ಪಣಯಿಂದ ಬಿಡುಗಡೆಗೊಳಿಸಿಕೊಳ್ಳದೇ ಖಾಸಗಿ ಕಂಪೆನಿಯ ನೌಕರರನ್ನು ಸಾರ್ವಜನಿಕ ರಸ್ತೆಯ ಮೇಲೆ ಕೊಂಡೊಯ್ಯುತ್ತಿದ್ದ ಉಡುಪಿಯಿಂದ ಹೆಬ್ರಿ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು (ಕೆಎ-51/ ಬಿ 9646) ತಪಾಸಣೆ ನಡೆಸಿ, ವಾಹನವನ್ನು ಮುಟ್ಟುಗೋಲು ಹಾಕಿ, ಕಾನೂನು ರೀತಿಯ ಕ್ರಮ ಕೈಗೊಂಡು, ಮುಂದಿನ ಕ್ರಮಕ್ಕಾಗಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಒಪ್ಪಿಸಿರುತ್ತಾರೆ. ಆದ್ದರಿಂದ ಅನಾವಶ್ಯಕವಾಗಿ ಸಾರ್ವಜನಿಕರಿಗೆ ತೊಂದರೆ ನೀಡದೇ, ಮುಂಗಡ ವಾಹನ ತೆರಿಗೆ ಪಾವತಿಯೊಂದಿಗೆ ಅದ್ಯರ್ಪಣದಿಂದ ಬಿಡುಗಡೆಗೊಳಿಸಿದ ನಂತರ ಮಾತ್ರ ವಾಹನವನ್ನು ಸಾರ್ವಜನಿಕ ರಸ್ತೆಯಲ್ಲಿ ಓಡಾಡಿಸುವಂತೆ ಪ್ರಾದೇಶಿಕ ಸಾರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಹಿಳೆಯರ ಕಲ್ಯಾಣಾಭಿವೃದ್ಧಿಗೆ ಸರಕಾರ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳೆ ಹೇಳಿದರು. ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿನ ದುರ್ಬಲ ವರ್ಗದ ಮಹಿಳೆಯರ ಅನುಕೂಲಕ್ಕೆ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಂಡು ಸ್ವ-ಉದ್ಯೋಗ, ವಾಣಿಜ್ಯ, ಹೈನುಗಾರಿಕೆ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಆರ್ಥಿಕವಾಗಿ ಸಬಲರಾಗುವುದರೊಂದಿಗೆ ಸ್ವಾವಲಂಭಿಗಳಾಗಬೇಕು ಎಂದರು. ಜಿಲ್ಲೆಯಲ್ಲಿ ಉದ್ಯೋಗಿನಿ, ಸಮೃದ್ಧಿ, ಕಿರುಸಾಲ, ಧನಶ್ರೀ, ಚೇತನ, ಲಿಂಗತ್ವ ಅಲ್ಪಸಂಖ್ಯಾತ, ಮಹಿಳೆಯರಿಗೆ ಕೌಶಲ್ಯ ತರಬೇತಿ, ಮಹಿಳಾ ಸ್ವ-ಉದ್ಯೋಗ ಮಾರ್ಗದರ್ಶನ ಕೇಂದ್ರ ಯೋಜನೆ, ಪರಿಶಿಷ್ಟ ಜಾತಿ/ಪಂಗಡ ಉಪಯೋಜನೆಗಳನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದರು. ಕೇಂದ್ರ ಹಣಕಾಸು ಸಚಿವಾಲಯ ಪ್ರಧಾನ ಮಂತ್ರಿ ಮಹಿಳಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಂಗಳವಾರ ಭೇಟಿ ನೀಡಿ ಕೋವಿಡ್ ವ್ಯಾಕ್ಸಿನೇಶನ್ ಬಗ್ಗೆ ಮಾಹಿತಿ ಪಡೆದುಕೊಂಡರು. ಕರೋನಾ ವ್ಯಾಕ್ಸಿನ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದೆ. 45 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡುವ ಕಾರ್ಯವನ್ನು ಚುರುಕುಗೊಳಿಸಬೇಕು. ಗ್ರಾಮದಲ್ಲಿರುವ 45 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಆಯಾ ಗ್ರಾಮಗಳಲ್ಲಿ ವ್ಯಾಕ್ಸಿನೇಶನ್ ಕ್ಯಾಂಪ್ ನಡೆಸಿ ಲಸಿಕೆ ನೀಡುವ ಕಾರ್ಯ ಮಾಡಬೇಕು. ಪ್ರತಿನಿತ್ಯ ಬೇಕಾಗುವ ಲಸಿಕೆಯನ್ನು ಪೂರೈಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಯವರಲ್ಲಿ ಮನವಿ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಜಿಲ್ಲಾಧಿಕಾರಿಯವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಅವರು ಅಗತ್ಯ ಮಾಹಿತಿ ನೀಡಿದರು. ಕಾಂಗ್ರೆಸ್ ಮುಖಂಡರಾದ ಮಂಜುಳಾ ದೇವಾಡಿಗ, ಜಹೀರ್ ಅಹಮ್ಮದ್ ನಾಕುದಾ, ಮುಜಾಹಿದ್, ಗಂಗೊಳ್ಳಿ ಗ್ರಾಪಂ ಸದಸ್ಯ ದೇವು ಶಿಪಾ, ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆನೆಕಾಲು ರೋಗ ಪತ್ತೆ ಹಚ್ಚುವ ನಿಟ್ಟಿನಲ್ಲಿ 2019 ರಿಂದ 2021ಮೇ ತನಕ 72 ಜನರ ರಕ್ತದ ಮಾದರಿ ಸಂಗ್ರಹಸಿದ್ದು, ಒಂದೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಉಡುಪಿ ಜಿಲ್ಲೆಯಲ್ಲಿ ಹೊಸ ಮಲೇರಿಯಾ ಪ್ರಕರಣ ಪತ್ತೆಯಾಗದೆ ಇದ್ದು, ಜಿಲ್ಲೆ ಮಲೇರಿಯಾ ಮುಕ್ತವಾಗಿದ್ದು, ಘೊಷಣೆ ಮಾಡುವುದೊಂದೇ ಬಾಕಿಯಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರೇಮಾನಂದ್ ಮಾಹಿತಿ ನೀಡಿದರು. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ನಿಯಂತ್ರಣ ಕಾರ್ಯಕ್ರಮ, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಆಶ್ರಯದಲ್ಲಿ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಕೀಟ ಜನ್ಯ ರೋಗಗಳ ಮಾಹಿತಿ ಕಾರ್ಯಕ್ರದಲ್ಲಿ ಮಾತನಾಡಿದರು. ಕುಂದಾಪುರ ಗಂಗೊಳ್ಳಿಯಲ್ಲಿ ಆನೆಕಾಲು ರೋಗ ಹೆಚ್ಚಿದ್ದು, ನಿರಂತರ ಎಚ್ಚರಿಕೆ ಮದ್ದು ಮಾಡುವ ಮೂಲಕ ಕಳೆದ ಐದು ವರ್ಷದಿಂದ ಪೈಲೇರಿಯಾ ಕುಂದಾಪುದಲ್ಲಷ್ಟೇ ಅಲ್ಲ. ಜಿಲ್ಲೆಯಲ್ಲೂ ಕಂಡಿಲ್ಲ. ಕರೋನಾ ನಡುವೆಯೂ ಮಲೇರಿಯಾ, ಚಿಕನ್ ಗುನ್ಯ, ಡೆಂಗ್ಯೂ ಪರೀಕ್ಷೆ ಅವಶ್ಯವಾಗಿ ಮಾಡಿಸಿಕೊಳ್ಳುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಜಿಲ್ಲೆಯಲ್ಲಿ 2018-19, 2019-20 ಮತ್ತು 2020-21 ನೇ ಸಾಲಿನಲ್ಲಿ ಆದಿವಾಸಿ ಜನಾಂಗದ ಕೊರಗ ವಿದ್ಯಾರ್ಥಿಗಳು ಏಳನೇ ತರಗತಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದವರಿಗೆ ಕ್ರಮವಾಗಿ 2,500 ರೂ. ಮತ್ತು 5,000 ರೂ. ವಿಶೇಷ ಪ್ರೋತ್ಸಾಹಧನ ಮಂಜೂರು ಮಾಡುವ ಕುರಿತು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಣಿಪಾಲ ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಅಹ್ವಾನಿಸಲಾಗಿದೆ. ದತ್ತಿನಿಧಿ ಪ್ರಶಸ್ತಿಗೆ ಪುಸ್ತಕಗಳನ್ನು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರಿಗೆ ತಲುಪಿಸಲು ಜುಲೈ 5 ಕೊನೆಯ ದಿನ. ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. ಹೆಚ್ಚಿನ ವಿವರಗಳಿಗೆ ಸ್ವ-ವಿಳಾಸದ ಸ್ಟಾಂಪ್ ಹಚ್ಚಿದ ಲಕೋಟೆ ಇಟ್ಟು ಪತ್ರ ಬರೆಯಬಹುದು ಅಥವಾ www.kasapa.in ಮೂಲಕ ಪಡೆಯಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
