ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ 2011 ರಜನಗಣತಿಯಲ್ಲಿ 2,95,984 ಕುಟುಂಬಗಳು ದಾಖಲಾಗಿದ್ದು, ಪ್ರಸ್ತುತ ಮೇ ಅಂತ್ಯದವರೆಗೆ 28,264 ಅಂತ್ಯೋದಯಅನ್ನ ಮತ್ತು 1,61,987 ಆದ್ಯತಾ ಸೇರಿಒಟ್ಟು 1,90,251 ಕುಟುಂಬಗಳಿಗೆ ಆದ್ಯತಾ (ಬಿ.ಪಿ.ಎಲ್) ಪಡಿತರಚೀಟಿ ಹಾಗೂ 1,05,733 ಕುಟುಂಬಗಳಿಗೆ ಆದ್ಯತೇತರ (ಎಪಿಎಲ್) ಪಡಿತರಚೀಟಿ ನೀಡಲಾಗಿರುತ್ತದೆ. ವೇತನವನ್ನುಗಣನೆಗೆ ತೆಗೆದುಕೊಳ್ಳದ ಸರ್ಕಾರದಅಥವಾ ಸರ್ಕಾರದಿಂದಅನುದಾನ ಪಡೆಯುತ್ತಿರುವ ಸಂಸ್ಥೆಗಳು ಹಾಗೂ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯತೆರಿಗೆ, ಸೇವಾ ತೆರಿಗೆ, ವ್ಯಾಟ್ ಹಾಗೂ ವೃತ್ತಿತೆರಿಗೆ ಪಾವತಿಸುವ ಕುಟುಂಬಗಳು, ಗ್ರಾಮೀಣ ಭಾಗದಲ್ಲಿಮೂರು ಹೆಕ್ಟೇರ್ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವಾದ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 394 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 2 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 207, ಕುಂದಾಪುರ, ಬೈಂದೂರು ತಾಲೂಕಿನ 110, ಕಾರ್ಕಳ, ಹೆಬ್ರಿ ತಾಲೂಕಿನ 70 ಮಂದಿಗೆ ಹಾಗೂ ಹೊರ ಜಿಲ್ಲೆಯ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 394 ಪ್ರಕರಣಗಳಲ್ಲಿ 23 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 371 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಕುಂದಾಪುರ ತಾಲೂಕಿನ 85 ವರ್ಷದ ಮಹಿಳೆ, 61 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 628 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4085 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3374 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 4913 ಮಂದಿಗೆ ಮೊದಲನೇ ಡೋಸ್, 522 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶ ಹಾಗೂ ಜನರು ಸಂಕಷ್ಟದಲ್ಲಿರುವಾಗ ಅವರಿಗೆ ಸ್ಪಂದಿಸಬೇಕಿರುವುದು ನಮ್ಮ ಕರ್ತವ್ಯವಾಗಿದ್ದು ರಾಜಕೀಯದ ಹೊರತಾಗಿ ಆತ್ಮಸಂತೃಪ್ತಿಗಾಗಿ ಅತಿ ಅಗತ್ಯವುಳ್ಳವರಿಗೆ ಆಹಾರದ ಕಿಟ್ ನೀಡಲಾಗುತ್ತಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಅವರು ಸೋಮವಾರ ಮಾರಣಕಟ್ಟೆ, ಸಿದ್ಧಾಪುರ, ಅಂಪಾರು ಹಾಗೂ ತ್ರಾಸಿಯಲ್ಲಿ ಕೊರೋನಾ ವಾರಿಯರ್ಸ್ ಹಾಗೂ ವಿವಿಧ ವೃತ್ತಿಯಲ್ಲಿ ತೊಡಗಿಕೊಂಡಿರುವವರಿಗೆ ಆಹಾರದ ಕಿಟ್ಗಳನ್ನು ವಿತರಿಸಿ ಮಾತನಾಡಿ ಕೇಂದ್ರ ನರೇಂದ್ರ ಮೋದಿ ಅವರ ಸರಕಾರ ದೇಶಕ್ಕೆ ಎದುರಾದ ಕೋವಿಡ್ ಪರಿಸ್ಥಿತಿಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿಭಾಯಿಸುತ್ತಿದೆ. ರಾಜ್ಯದಲ್ಲಿಯೂ ಕೋರೊನಾ ನಿರ್ವಹಣೆ ಹಾಗೂ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ಪ್ಯಾಕೇಜ್ಗಳನ್ನು ನೀಡುವ ಮೂಲಕ ಜನಸಾಮಾನ್ಯರೊಂದಿಗೆ ಸರಕಾರ ನಿಂತಿದೆ ಎಂದರು. ಸೇವಾ ಭಾರತಿ ಹಾಗೂ ಪ್ರೇರಣಾ ಎಜುಕೇಷನಲ್ ಟ್ರಸ್ಟ್ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 16 ವಿಭಾಗದ ಜನರಿಗೆ ಒಟ್ಟು 35000 ಕಿಟ್ಗಳನ್ನು ವಿತರಿಸಲಾಗುತ್ತಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರದ 5000 ಜನರಿಗೆ ಆಹಾರದ ಕಿಟ್ ನೀಡಲಾಗುತ್ತಿದೆ ಎಂದರು. ಈ ಸಂದರ್ಭ ಸಚಿವರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದುಬೈನ ಉದ್ಯಮಿಯೊಬ್ಬರು ಕೊಡಮಾಡಿದ ಸುಮಾರು 60 ಸಾವಿರ ರೂ. ವೆಚ್ಚದ ಆಕ್ಸಿಜನ್ ಕಾನ್ಸ್ಟ್ರೇಟರ್ನ್ನು ಗಂಗೊಳ್ಳಿ ತೌಹೀದ್ ಎಜ್ಯಕೇಶನ್ ಟ್ರಸ್ಟ್ನ ಆಡಳಿತಾಧಿಕಾರಿ ಅಖ್ತರ್ ಅಹಮ್ಮದ್ ಖಾನ್ ಅವರು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ.ರಾಜು ಮತ್ತು ಉಡುಪಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗಭೂಷಣ ಉಡುಪ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಸಹಾಯಕ ಆಯುಕ್ತ ಕೆ. ರಾಜು, ಕೋವಿಡ್ ಎರಡನೇ ಅಲೆ ಎದುರಿಸಲು ಆಸ್ಪತ್ರೆಗೆ ಬೇಕಾದ ಕೆಲವೊಂದು ಮೂಲಭೂತ ಸೌಲಭ್ಯ ಹಾಗೂ ಇನ್ನಿತರ ಅಗತ್ಯತೆಗಳನ್ನು ದಾನಿಗಳು ಒದಗಿಸಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಯಾವುದೇ ತೊಂದರೆಯಾಗಿಲ್ಲ. ಕುಂದಾಪುರ ಮತ್ತು ಬೈಂದೂರು ತಾಲೂಕುಗಳಲ್ಲಿ ಸುಮಾರು ೩ ಸಾವಿರಕ್ಕೂ ಮಿಕ್ಕಿ ಸೋಂಕಿತರು ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದಾರೆ. ಎನ್ಜಿಒಗಳು ಸರಕಾರ ಹಾಗೂ ಇಲಾಖೆಯೊಂದಿಗೆ ಸ್ಪಂದಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಡಾ.ನಾಗಭೂಷಣ ಉಡುಪ ಮಾತನಾಡಿ, ಕರೋನಾ ಮೂರನೇ ಎದುರಿಸಲು ಆರೋಗ್ಯ ಇಲಾಖೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮದ ಕರೋನಾ ಸೋಂಕಿತರ ಮನೆಗಳಿಗೆ ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್ ಕೆ. ರಾಜು ಭೇಟಿ ನೀಡಿ ಕರೋನಾ ಸೋಂಕಿತರಿಗೆ ಧೈರ್ಯ ತುಂಬಿದರು. ಸೋಂಕು ಪೀಡಿತರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದ ಕೆ.ರಾಜು, ಕುಟುಂಬ ಸದಸ್ಯರಿಗೆ ಸೋಂಕು ಹರಡಿದ ಬಗ್ಗೆ ಮಾಹಿತಿ ಪಡೆದುಕೊಂಡರು. ಜ್ವರದಿಂದ ಬಳಲುತ್ತಿರುವ ವ್ಯಕ್ತಿಗಳು ಸ್ಥಳೀಯ ಖಾಸಗಿ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಸೋಂಕಿನ ಲಕ್ಷಣ ಇದ್ದರೂ ಕೋವಿಡ್ ತಪಾಸಣೆಗೆ ಸೂಚಿಸದ ವೈದ್ಯರ ವಿರುದ್ಧ ಗರಂ ಆದರು. ಖಾಸಗಿ ವೈದ್ಯರು ಸೋಂಕು ಲಕ್ಷಣ ಇದ್ದವರನ್ನು ಕೂಡಲೇ ಕೋವಿಡ್ ತಪಾಸಣೆಗೆ ಒಳಪಡಿಸಬೇಕು. ಕರೋನಾ ಪಾಸಿಟಿವ್ ಇದ್ದರೆ ಸೋಂಕಿತರಿಗೆ ಹೋಮ್ ಐಸೋಲೇಶನ್ ಅಥವಾ ಕೋವಿಡ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಂಜಿತ್, ವಂಡ್ಸೆ ಹೋಬಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನ ನಡೆಯುತ್ತಿದ್ದು, ಈ ಲಸಿಕೆ ಅಭಿಯಾನವನ್ನು ಮೂಡುಬಿದಿರೆ-ಮುಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು. ಮೊದಲ ಹಂತದ ವ್ಯಾಕ್ಸಿನೇಶನ್ ಡ್ರೈವ್ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ನಡೆಯಿತು. ಲಸಿಕೆ ಅಭಿಯಾನದ ಭಾಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬವರ್ಗ ಸೇರಿ ೫೦೦ ಜನರಿಗೆ ಕೋವಿಶೀಲ್ಡ್ ಲಸಿಕೆ (ಆನ್ಸೈಟ್ ಬಲ್ಕ್ ವ್ಯಾಕ್ಸಿನ್) ವಿತರಿಸಲಾಯಿತು. ನಾಲ್ಕು ಹಂತಗಳಲ್ಲಿ ಲಸಿಕೆ ವಿತರಣೆ ನಡೆಯಲಿದ್ದು, ಸುಮಾರು ೨೦೦೦ ಜನರಿಗೆ ವ್ಯಾಕ್ಸಿನೇಶನ್ ಮಾಡುವ ಗುರಿಯನ್ನು ಹೊಂದಲಾಗಿದೆ. ಇದೇ ಅಭಿಯಾನದ ಭಾಗವಾಗಿ ಮೂಡುಬಿದಿರೆಯ ಸಾರ್ವಜನಿಕರಿಗೆ ಶನಿವಾರದಂದು ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ಲಸಿಕೆ ನೀಡಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದರು. ಲಸಿಕೆ ಅಭಿಯಾನದಲ್ಲಿ ನಿಟ್ಟೆ ಮೆಡಿಕಲ್ ಅಕಾಡೆಮಿಯ ಕಮ್ಯುನಿಟಿ ಮೆಡಿಸಿನ್. ಅನಸ್ತೇಶಿಯಾ, ಸ್ಟಾಫ್ ನರ್ಸ್ಗಳು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಭಾನುವಾರ 494 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 2 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 123, ಕುಂದಾಪುರ, ಬೈಂದೂರು ತಾಲೂಕಿನ 191, ಕಾರ್ಕಳ, ಹೆಬ್ರಿ ತಾಲೂಕಿನ 178 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 494 ಪ್ರಕರಣಗಳಲ್ಲಿ 10 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 484 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 73 ವರ್ಷದ ಪುರುಷ, 38 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 494 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4321 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 4077 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 1802 ಮಂದಿಗೆ ಮೊದಲನೇ ಡೋಸ್, 10 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ: ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಮನವಿ ಮಾಡಿತು. ಈ ಸಂದರ್ಭ ಮಾತನಾಡಿ ಅಧ್ಯಕ್ಷ ಪ್ರಭಾಕರ ಬಿ. ಕುಂಭಾಶಿ ಮಾತನಾಡಿ ಪಾಪದ ವ್ಯಕ್ತಿಯನ್ನು ಕರೆಸಿ ಪೂರ್ವದ್ವೇಷದಿಂದ ಕೊಲೆ ಮಾಡಿರುವುದು ಅಕ್ಷಮ್ಯ ಅಪರಾಧ. ಈ ಕೃತ್ಯದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಬಗ್ಗೆ ನಿಷ್ಪಕ್ಷಪಾತ ತನಿಕೆಯಾಗಬೇಕು. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು. ಬೆಳಿಗ್ಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಗೆ ನ್ಯಾಯ ಒದಗಿಸುವಂತೆ ಕೋರಿ ಮನವಿ ಸಲ್ಲಿಸಲಾಯಿತು. ಕುಂದಾಪುರ ಡಿವೈಎಸ್ಪಿ, ಶಂಕರನಾರಾಯಣ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ನೊಂದ ಕುಟುಂಬಕ್ಕೆ ನ್ಯಾಯ ನೀಡಲು ಆಗ್ರಹಿಸಲಾಯಿತು. ಉದಯ ಗಾಣಿಗರ ಕುಟುಂಬಕ್ಕೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಗೌರವಾಧ್ಯಕ್ಷ ಕೆ. ಎಂ. ಲಕ್ಷ್ಮಣ, ಕಾರ್ಯದರ್ಶಿ ನಾಗರಾಜ ಗಾಣಿಗ ಬಸ್ರೂರು, ಕೋಶಾಧಿಕಾರಿ ನಾಗರಾಜ ಗಾಣಿಗ ಹಿಲ್ಕೋಡು, ಉಪಾಧ್ಯಕ್ಷರಾದ ರವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಡಮೊಗೆ ನಿವಾಸಿ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಈ ಕೃತ್ಯದಲ್ಲಿ ಭಾಗಿಯಾಗಿರುವ ಇತರರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆಗ್ರಹಿಸಿದ್ದಾರೆ. ಕಟ್ಬೆಲ್ತೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಬಿಜೆಪಿ ಕಾರ್ಯಕರ್ತರು ಕೆಲವೆಡೆ ಲಾಕ್ಡೌನ್ ಹೆಸರಿನಲ್ಲಿ ದಬ್ಬಾಳಿಕೆ ರಾಜಕೀಯ ನಡೆಸುತ್ತಿದ್ದಾರೆ. ಬೈಂದೂರು ಕ್ಷೇತ್ರದಲ್ಲಿಯೂ ನೈತಿಕ ಪೊಲೀಸ್ಗಿರಿ ಹೆಚ್ಚಿದೆ. ಓರ್ವ ಸಜ್ಜನ ವ್ಯಕ್ತಿಯನ್ನು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದ್ದು ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳಿಗೂ ಶಿಕ್ಷೆಯಾಗಬೇಕು ಎಂದರು. ಮೃತ ಉದಯ ಗಾಣಿಗರಿಗೆ ಪತ್ನಿ ಹಾಗೂ ಎರಡು ಮಕ್ಕಳಿದ್ದು ಕುಟುಂಬಕ್ಕೆ ಆಸರೆಯಾಗಿದ್ದವರನ್ನು ಕೊಲೆ ಮಾಡಲಾಗಿದೆ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಕೆಲಸವಾಗಬೇಕು ಎಂದರು. ಬೈಂದೂರು ಶಾಸಕರು ರಾಜಿನಾಮೆ ನೀಡಲಿ: ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರು ಭಾಗದ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ನೌಕರರು ಹಾಗೂ ಪೌರಕಾರ್ಮಿಕರಿಗೆ ದಿನಸಿ ಸಾಮಾಗ್ರಿಗಳು, ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಯಿತು. ಭಾನುವಾರು ಬೈಂದೂರು ರೋಟರಿ ಕ್ಲಬ್’ನಲ್ಲಿ ಕಿಟ್ ವಿತರಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಿ ಮಾತನಾಡಿ ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರಿಗೆ ಸ್ಪಂದಿಸುತ್ತಿರುವುದು ಬಹುದೊಡ್ಡ ಕಾರ್ಯ. ಟ್ರಸ್ಟ್ ಮೂಲಕ ಮನೆ ನಿರ್ಮಾಣ, ಆರ್ಥಿಕ ಸಹಕಾರವನ್ನು ನಿರಂತರವಾಗಿ ಮಾಡುತ್ತಿರುವುದು ಶ್ಲಾಘನೀಯವಾದುದು. ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರು ನಿರಂತರವಾಗಿ ಕೋವಿಡ್ ನಿಯಂತ್ರಣದಲ್ಲಿ ಶ್ರಮಿಸುತ್ತಿದ್ದಾರೆ. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟ್ ಮೂಲಕ ಹತ್ತಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದ್ದು ಇಂದಿನಿಂದ ಕೆಲವು ದಿನಗಳ ಕಾಲ ಪ್ರತಿ ಗ್ರಾಮದಲ್ಲಿಯೂ ದಿನಸಿ ಕಿಟ್…
