ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಜೂ.06:ಯಡಮೊಗೆ ಗ್ರಾಮ ಪಂಚಾಯತಿಯ ಹೊಸಬಾಳುವಿನಲ್ಲಿ ಶನಿವಾರ ರಾತ್ರಿ ನಡೆದ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪಾದಿತ ಯಡಮೊಗೆ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಶಂಕರನಾರಾಯಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳೂರು -74 ಗ್ರಾ.ಪಂ ಸದಸ್ಯರೊಬ್ಬರ ಮನೆಯಲ್ಲಿ ಪ್ರಾಣೇಶ್ ಯಡಿಯಾಳ್ ನನ್ನು ತಡರಾತ್ರಿ 3 ಗಂಟೆಯ ಸಮಯದಲ್ಲಿ ವಶಕ್ಕೆ ಪಡೆಯಲಾಗಿದೆ. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ಮನೆಯ ಎದುರಿನ ರಸ್ತೆಯ ಮೇಲೆ ನಿಂತಿದ್ದ ಉದಯ ಅವರ ಮೇಲೆ ಪ್ರಾಣೇಶ್ ಯಡಿಯಾಳ ಏಕಾಏಕಿಯಾಗಿ ಕಾರು ಚಲಾಯಿಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡು ಉದಯ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯುವ ಯತ್ನ ನಡೆಸಿದರಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ► ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು. ಗ್ರಾಮ ಪಂಚಾಯತಿ ಅಧ್ಯಕ್ಷನಿಂದಲೇ ಕೊಲೆ? – https://kundapraa.com/?p=48989 . ಗ್ರಾ.ಪಂ.ನಲ್ಲಿ ನಡೆಯುವ ಅನ್ಯಾಯ, ಅಕ್ರಮಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಉದಯ ಗಾಣಿಗ ಬರಹ ಪ್ರಕಟಿಸಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಜೂ.05: ಲಾಕ್ಡೌನ್ ಸಮಯದಲ್ಲಿ ಜನಸಾಮಾನ್ಯರಿಗಾದ ತೊಂದರೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ಯಡಮೊಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಬಾಳು ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಅಪಘಾತವು ಪೂರ್ವ ನಿಯೋಜಿತವಾದದ್ದು, ಗ್ರಾಮ ಪಂಚಾಯತಿ ಅಧ್ಯಕ್ಷನೇ ವೈಷಮ್ಯದಿಂದ ಕಾರು ಹತ್ತಿಸಿ ಕೊಲೆಗೈದಿದ್ದಾನೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಯಡಮೊಗೆ ಗ್ರಾಮದ ಹೊಸಬಾಳು ನಿವಾಸಿ ಉದಯ ಗಾಣಿಗ (45) ಅಪಘಾತದಲ್ಲಿ ಮೃತ ದುರ್ದೈವಿ. ಆರೋಪಿ ಯಡಮೊಗೆ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಘಟನೆಯ ಬಳಿಕ ಕಾರು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಆಗಿದ್ದೇನು? ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ಮನೆಯ ಎದುರಿನ ರಸ್ತೆಯ ಬದಿಯಲ್ಲಿ ನಿಂತಿದ್ದ ಉದಯ್ ಗಾಣಿಗ ಎಂಬುವವರ ಮೇಲೆ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಏಕಾಏಕಿಯಾಗಿ ಕಾರು ಚಲಾಯಿಸಿದ್ದಾನೆ. ಗಂಭೀರ ಗಾಯಗೊಂಡ ಉದಯ ಅವರನ್ನು ಸ್ಥಳೀಯ ನಿವಾಸಿಗಳು ಆಂಬುಲೆನ್ಸ್ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶನಿವಾರ 552 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 1 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 208, ಕುಂದಾಪುರ, ಬೈಂದೂರು ತಾಲೂಕಿನ 139, ಕಾರ್ಕಳ, ಹೆಬ್ರಿ ತಾಲೂಕಿನ 197 ಮಂದಿಗೆ ಹಾಗೂ ಹೊರ ಜಿಲ್ಲೆಯ 8 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 552 ಪ್ರಕರಣಗಳಲ್ಲಿ 21 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 531 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 70 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 734 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4323 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3781 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 4577 ಮಂದಿಗೆ ಮೊದಲನೇ ಡೋಸ್, 956 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,68,422 ಮಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ.ಜೂ.5: ಕೋವಿಡ್-19ರ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯುವ ನಿಟ್ಟಿನಲ್ಲಿ ಪಾಸಿಟಿವ್ ಪ್ರಕರಣಗಳು ಹಾಗೂ ಮರಣ ದರವನ್ನು ತಗ್ಗಿಸಲು ಜೂನ್ 7 ಬೆಳಗ್ಗೆ 6 ರಿಂದ ಜೂನ್ 14 ರ ಬೆಳಗ್ಗೆ 6 ಗಂಟೆಯವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ ಸೆಕ್ಷನ್ 144(3) ನ್ನು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ಕೆಳಕಡಂತೆ ಮಾರ್ಗಸೂಚಿಯನ್ನು ಹೊರಡಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ. ನಿಗದಿಯಾಗಿರುವ ವಿಮಾನ ಪ್ರಯಾಣ ಹಾಗೂ ರೈಲು ಪ್ರಯಾಣಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆಟೋ, ಕ್ಯಾಬ್ ಗಳು ಟ್ಯಾಕ್ಸಿಗಳ (including cabs by aggregators) ಮೂಲಕ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವವರು ವಿಮಾನಯಾನ ಟಿಕಟ್ ಗಳು ಹಾಗೂ ರೈಲು ಪ್ರಯಾಣದ ಟಿಕೆಟ್ ಗಳನ್ನೇ ಪಾಸ್ ಗಳಂತೆ ಬಳಸಿಕೊಳ್ಳಬಹುದಾಗಿದೆ. ತುರ್ತು ಸಂದರ್ಭದಲ್ಲಿ ಬಾಡಿಗೆಗೆ ಪಡೆದ ಹಾಗೂ ಈ ಮಾರ್ಗಸೂಚಿಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದುಬೈನ ಉದ್ಯಮಿ ಕೇವಿನ್ ಲೂವಿಸ್ ಕೊಡ ಮಾಡಿದ ಸುಮಾರು ೧.೨೦ ಲಕ್ಷ ಮೌಲ್ಯದ ಆಹಾರ ಸಾಮಾಗ್ರಿಗಳ ಕಿಟ್ಗಳನ್ನು ಗುಜ್ಜಾಡಿ ಶ್ರೀ ರಾಮ ಮಂದಿರದಲ್ಲಿ ಶನಿವಾರ ವಿತರಿಸಲಾಯಿತು. ಗುಜ್ಜಾಡಿ ಗ್ರಾಮದ ಕರೋನಾ ವಾರಿಯರ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ದಾದಿಯರಿಗೆ ಮತ್ತು ಗುಜ್ಜಾಡಿ ಗ್ರಾಮದ ಐದು ವಾರ್ಡಗಳ ಆಶಕ್ತ ಕುಟುಂಬಗಳಿಗೆ ಕೇವಿನ್ ಲೂವಿಸ್ ಕೊಡ ಮಾಡಿದ ಕಿಟ್ಗಳನ್ನು ಗುಜ್ಜಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ವಿತರಿಸಿದರು. ಬಳಿಕ ಮಾತನಾಡಿದ ಅವರು, ಕರೋನಾ ಹಾವಳಿಯಿಂದ ಅನೇಕ ಕುಟುಂಬಗಳು ಸಂಕಷ್ಟದಲ್ಲಿದೆ. ಕರೋನಾ ವಾರಿಯರ್ಸ್ಗಳು ಮತ್ತು ಆರೋಗ್ಯ ಸಿಬ್ಬಂದಿಗಳು ಹಗಲಿರುಳು ಕರೋನಾ ವಿರುದ್ಧ ಸೆಣಸಾಡುತ್ತಿದ್ದಾರೆ. ಇಂತಹ ಸಂಕಷ್ಟದಲ್ಲಿರುವ ಗುಜ್ಜಾಡಿ ಗ್ರಾಮದ ಬಡ ಕುಟುಂಬಗಳಿಗೆ ದುಬೈ ಉದ್ಯಮಿ ಕೇವಿನ್ ಲೂವಿಸ್ ಆಹಾರ ಸಾಮಾಗ್ರಿಗಳನ್ನು ವಿತರಿಸುತ್ತಿರುವುದು ಪುಣ್ಯದ ಕೆಲಸ ಎಂದರು. ಈ ಸಂದರ್ಭದಲ್ಲಿ ಗುಜ್ಜಾಡಿ ಗ್ರಾಪಂ. ಅಧ್ಯಕ್ಷೆ ಯಮುನಾ ಪೂಜಾರಿ, ಉಪಾದ್ಯಕ್ಷ ರಾಜು ಪೂಜಾರಿ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ…
ಕುಂದಾಪ್ರ ಡಾಟ್ ಕಾಂ ಉಸದ್ದಿ. ಕುಂದಾಪುರ: ಗ್ರಾಮ ಪಂಚಾಯತ್ ತ್ರಾಸಿ ವತಿಯಿಂದ ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕುಂದಾಪುರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ತ್ರಾಸಿ ಗ್ರಾಮ ಪಂಚಾಯತ್ ಕಾರ್ಯಾಲಯ ಸಮೀಪ ಶನಿವಾರ ಜರಗಿತು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ದೇವಾಡಿಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷೆ ಹೇಮಾ, ಸದಸ್ಯ ರಾಜು ಮೆಂಡನ್, ಪಿಡಿಒ ಶೋಭಾ ಎಸ್., ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ಸಂಗೀತಾ, ಲೆಕ್ಕ ಸಹಾಯಕ ಶಿವಾನಂದ, ಗ್ರಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಕಾರ್ಯಕ್ರಮವನ್ನು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ತಮ್ಮ ಮನೆ ಸುತ್ತಮುತ್ತಲಿನ ಪರಿಸರದಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಹಾಗೂ ಎನ್ನೆಸ್ಸೆಸ್ ಘಟಕದ ಯೋಜನಾಧಿಕಾರಿಗಳಾದ ಲತಾ ಪೂಜಾರಿ ಹಾಗೂ ನಾಗರಾಜ್ ಶೆಟ್ಟಿ ಹಾಗೂ ಉಪನ್ಯಾಸಕರುಗಳು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಬೆಂಗಳೂರು ನಾರಾಯಣ ಹೃದಯಾಲಯದ ವೈದ್ಯ ಡಾ.ಇಸ್ತಿಯಾಕ್ ಅಹಮ್ಮದ್, ಮುಂಬೈ ಉದ್ಯಮಿ ಗಣೇಶ್, ಬೆಂಗಳೂರಿನ ಸೃಜನ್ ಅವರ ನೆರವಿನಿಂದ ಯುಎಸ್ಐ ಯುಎಸ್ಐ ಡೆಂಪೆಸ್ಸಿ ವೆಂಚರ್ಸ್ ಕಂಪೆನಿಯ ಸಿಇಓ ಡಾನ್ ಬೊವೆನ್ ಅವರು ಕೊಡ ಮಾಡಿದ ಆಧುನಿಕ ತಂತ್ರಜ್ಞಾನದ ಅನಿಲ ಸಾಂದ್ರಕ, ಡೈನಮಿಕ್ ಇನ್ಫೋಟೆಕ್ ಸಂಸ್ಥೆ ಹಾಗೂ ಕೀಳೇಶ್ವರಿ ಯೂತ್ ಕ್ಲಬ್ ವತಿಯಿಂದ ನೀಡಲಾದ 250 ಕೊರೊನಾ ವೈರಸ್ ಚಿಕಿತ್ಸೆಯ ಔಷಧಿಗಳ ಕಿಟ್ಗಳ ಉಪ ವಿಭಾಗಾಧಿಕಾರಿ ಕೆ.ರಾಜು ಅವರಿಗೆ ಹಸ್ತಾಂತರಿಸಲಾಯಿತು. ಕೊಡುಗೆಗಳನ್ನು ಸ್ವೀಕರಿಸಿ ಅವರು ಮಾತನಾಡಿ ಕೋವಿಡ್ ಸಂಕಷ್ಟದ ಸಮಯದಲ್ಲಿ ಸರ್ಕಾರಿ ವ್ಯವಸ್ಥೆಯೊಂದಿಗೆ ಈ ಭಾಗದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನೀಡಿರುವ ಸಹಕಾರವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಕುಂದಾಪುರದಂತಹ ಉಪ ವಿಭಾಗದಲ್ಲಿ, ಕೋವಿಡ್ ವಿರುದ್ಧದ ಹೋರಾಟದಲ್ಲಿ ದುಡಿಯಲು ಅವಕಾಶ ದೊರಕಿರುವುದು ನನ್ನ ಸರ್ಕಾರಿ ಸೇವೆಯ ಸುವರ್ಣ ದಿನಗಳು ಎಂದು ನಾನು ಭಾವಿಸುವುದಾಗಿ ಹೇಳಿದರು. ಕುಂದಾಪುರದ ಕೋವಿಡ್ ನಿರ್ವಹಣೆಗಾಗಿ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 561 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 3 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 227, ಕಾರ್ಕಳ, ಹೆಬ್ರಿ ತಾಲೂಕಿನ 106 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 561 ಪ್ರಕರಣಗಳಲ್ಲಿ 9 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 552 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಕಾರ್ಕಳ ತಾಲೂಕಿನ 85 ವರ್ಷದ ಮಹಿಳೆ, 89 ವರ್ಷದ ಪುರುಷ, ಉಡುಪಿ ತಾಲೂಕಿನ 66 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 585 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4506 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3326 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 5494 ಮಂದಿಗೆ ಮೊದಲನೇ ಡೋಸ್, 1311 ಮಂದಿಗೆ ಎರಡನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಆದರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ ಈ ವರ್ಷ ಪರಿಸ್ಥಿತಿ ತುಂಬಾ ವಿಭಿನ್ನವಾಗಿದೆ. ಮಕ್ಕಳ ಯೋಗಕ್ಷೇಮ ಮತ್ತು ಶೈಕ್ಷಣಿಕ ಭವಿಷ್ಯ ಇದನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಈಗ ನಡೆಸುವುದಿಲ್ಲ. ಬದಲಾಗಿ ಪರೀಕ್ಷೆ ಇಲ್ಲದೆ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲು ನಿರ್ಧರಿಸಲಾಗಿದೆ. ಹೀಗಾಗಿ 2021ರ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಭಿನ್ನ ಮಾದರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಶ್ನೆಗಳು ಸರಳವಾಗಿ ನೇರವಾಗಿ ಇರುತ್ತದೆ. ಪರೀಕ್ಷೆ…
