Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಅಂಚೆ ಇಲಾಖೆಯಲ್ಲಿ 41 ವರ್ಷ ಹಾಗೂ ಗಂಗೊಳ್ಳಿ ಉಪ ಅಂಚೆ ಕಛೇರಿಯಲ್ಲಿ ಪೋಸ್ಟ್‌ಮ್ಯಾನ್ ಆಗಿ 11ವರ್ಷ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಬಾಬಣ್ಣ ಬಳೆಗಾರ್ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ರೋಟರಿ ಜಿಲ್ಲೆಯ ಮಾಜಿ ಅಸಿಸ್ಟೆಂಟ್ ಗವರ್ನರ್ ಎಚ್.ಗಣೇಶ ಕಾಮತ್, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಮಾಜಿ ಅಧ್ಯಕ್ಷರಾದ ಉಮೇಶ ಮೇಸ್ತ, ಕೆ.ರಾಮನಾಥ ನಾಯಕ್, ವಾಸುದೇವ ಶೇರುಗಾರ್, ಶಿವಾನಂದ ಪೂಜಾರಿ, ನಿಯೋಜಿತ ಅಧ್ಯಕ್ಷ ರಾಜೇಶ ಎಂ.ಜಿ, ಗಂಗೊಳ್ಳಿ ರೋಟರಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕ ಎಂ. ಎಚ್. ನಾಗೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜು.19ರಂದು ಪ್ರಾರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಾಡಿಕೊಳ್ಳಬೇಕಿರುವ ಸಿದ್ಧತೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಕೇಂದ್ರದ ಅಧಿಕಾರಿಗಳಿಗೆ ಮಾಹಿತಿ ನೀಡಿ ಶಾಲೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕೋವಿಡ್-19 ಹಿನ್ನಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಮಾನಸಿಕ ಸ್ಥೈರ್ಯ ತುಂಬುವ ಕೆಲಸ ನಡೆಸಬೇಕು. ವಿದ್ಯಾರ್ಥಿಗಳು ಯಾವುದೇ ಹೆದರಿಕೆ ಇಲ್ಲದೆ ಪರೀಕ್ಷಾ ಕೇಂದ್ರಗಳಿಗೆ ಬಂದು ಪರೀಕ್ಷೆಯನ್ನು ಬರೆಯುವ ನಿಟ್ಟಿನಲ್ಲಿ ಅಧ್ಯಾಪಕರು ಶ್ರಮಿಸಬೇಕು ಎಂದರು. ಇದೇ ಸಂದರ್ಭ ಚಂದನ ವಾಹಿನಿ ಮೂಲಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು ಹಾಗೂ ಪರೀಕ್ಷೆಯ ಒಎಂಆರ್ ಶೀಟ್‌ನ್ನು ಭರ್ತಿ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ಅಗತ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ 3 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ವಿವರ: ಅಕೌಂಟೆಂಟ್ ಕಂ ಕ್ಲರ್ಕ್/ ಸ್ಟೋರ್ ಕೀಪರ್ನ 1 ಹುದ್ದೆಗೆ ಬಿ.ಕಾಂ ಪದವಿ ಮತ್ತು ಕಂಪ್ಯೂಟರ್ ಅನುಭವ ಹೊಂದಿರುವವರು (ಮಾಸಿಕ ಗೌರವಧನ 12,000), ಕೃತಕಾಂಗ ಜೋಡಣೆ ಪಿ & ಓ ಅಭಿಯಂತರು 1 ಹುದ್ದೆಗೆ ಪಿ & ಓ ಇಂಜಿನಿಯರಿಂಗ್ ಪದವಿ/ ಡಿಪ್ಲೋಮಾ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷದ ಅನುಭವ ಹೊಂದಿರುವವವರು (ಮಾಸಿಕ ಗೌರವಧನ 25,000) ಹಾಗೂ ಮೊಬಿಲಿಟಿ ಇನ್ಸ್ಟ್ರಕ್ಟರ್ 1 ಹುದ್ದೆಗೆ ಸರ್ಟಿಫಿಕೇಟ್ ಕೋರ್ಸ್ ಇನ್ ಓ & ಎಂ ವಿದ್ಯಾರ್ಹತೆ ಹೊಂದಿರುವ (ಮಾಸಿಕ ಗೌರವಧನ 8,000 ರೂ.) ಅರ್ಹ ಅಭ್ಯರ್ಥಿಗಳು ಜುಲೈ 17 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಯಡಮೊಗೆಯಲ್ಲಿ ಇತ್ತೀಚಿಗೆ ಕೊಲೆಯಾದ ಯಡಮೊಗೆ ಉದಯ್ ಗಾಣಿಗ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಕಾಂಗ್ರೆಸ್ ಪಕ್ಷದಿಂದ ಒಂದು ಲಕ್ಷದ ಇಪ್ಪತೈದು ಸಾವಿರ ಮೊತ್ತದ ಚೆಕ್ ಹಸ್ತಾಂತರಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉದಯ್ ಗಾಣಿಗ ಅವರದ್ದು ಒಂದೇ ಕೊಲೆಯಲ್ಲ, ಹಲವು ಕೊಲೆಗಳು ಆಗಿವೆ ಎಲ್ಲ ಕೊಲೆಗಳನ್ನು ಮುಚ್ಚಿ ಹಾಕುವ ದೊಡ್ಡ ಪ್ರಯತ್ನ ನಡೆಯುತ್ತಿದೆ. ಬೇರೆ ಕೊಲೆಗಳು ನಡೆದಾಗ ಸಿಬಿಐಗೆ ವಹಿಸಿದ್ದಾರೆ ಇದನ್ನು ಕೂಡ ಸಿಬಿಐಗೆ ವಹಿಸಿ, ಸಾವಿಗೆ ನ್ಯಾಯ ದೊರಕಿಸಿ ಕೊಡಿ ಉದಯ್ ಗಾಣಿಗ ಬಿಜೆಪಿ ಪಕ್ಷಕ್ಕೆ, ಬೆಳಗ್ಗೆ ಸಂಜೆ ದುಡಿದಿದ್ದಾನೆ ಅಂತ ಹೆಣ್ಣು ಮಗಳು ಹೇಳುತ್ತಾಳೆ ಕೊಲೆ ಮಾಡಿದ್ದು, ಬಿಜೆಪಿಯ ಪಂಚಾಯತ್ ಅಧ್ಯಕ್ಷನೇ ಅಂತ ಹೇಳಿದ್ದಾಳೆ ನ್ಯಾಯ ಒದಗಿಸಿ, ಕುಟುಂಬಕ್ಕೆ ಸೂಕ್ತ ಒದಗಿಸಬೇಕು ಈ ಬಗ್ಗೆ ವಿಧಾನಸಭೆಯಲ್ಲಿ ಹೋರಾಟ ಮಾಡುತ್ತೇವೆ ಸಿಎಂ, ಗೃಹ ಸಚಿವರಲ್ಲಿ ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದರು. ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜು.6: ತಾಲೂಕಿನ ಬಸ್ರೂರು ಮೂಡ್ಕೇರಿ ಕೋಟಿಚೆನ್ನಯ್ಯ ಪಂಜುರ್ಲಿ ಗರಡಿಗೆ ಮಂಗಳವಾರ ಸಂಜೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ. ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಕುಂದಾಪುರ ಬಿಲ್ಲವ ಸಂಘದಿಂದ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಆ ಬಳಿಕ ಅವರು ಯಡಮೊಗೆಯಲ್ಲಿ ಕೊಲೆಯಾದ ಉದಯ ಗಾಣಿಗ ಅವರ ನಿವಾಸಕ್ಕೆ ತೆರಳಿ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭ ಕೆಪಿಸಿಸಿ ಕಾರ್ಯಧ್ಯಕ್ಷ ದ್ರುವ ನಾರಾಯಣ, ಮಾಜಿ ಸಚೊವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ‌ ಪೂಜಾರಿ, ಎಐಸಿಸಿ ಸದಸ್ಯ ಪಿ.ವಿ ಮೋಹನ್, ಬಸ್ರೂರು ಮೂಡ್ಕೇರಿ ಗರಡಿ ಆಡಳಿತ ವ್ಯವಸ್ಥಾಪಕ ಬಿ. ಗೋಪಾಲ ಪೂಜಾರಿ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಎಸ್. ರಾಜು ಪೂಜಾರಿ, ಮದನ್ ಕುಮಾರ್, ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘಧ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಸ್ವ-ಉದ್ಯೋಗ ಆರಂಭಿಸಲು ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ಗರಿಷ್ಟ ಯೋಜನಾ ವೆಚ್ಚ 25 ಲಕ್ಷ ರೂ. ಉತ್ಪಾದನೆ ಚಟುವಟಿಕೆ ಮತ್ತು 10 ಲಕ್ಷ ರೂ. ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 25 ರಿಂದ 35 ರ ವರೆಗೆ ಸಹಾಯಧನ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://www.kviconline.gov.in/pmegpeportal/jsp/pmegponline.jsp ಅಥವಾ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ (ಕೆ.ವಿ.ಐ.ಬಿ), 2ನೇ ಮಹಡಿ, ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574855 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೀದರ್‌ನ ಖ್ಯಾತ ಸಾಹಿತಿ ಡಾ. ಎಂ. ಜಿ. ದೇಶಪಾಂಡೆ ಅವರ ‘ದೇಶಪಾಂಡೆ ಸಾಹಿತ್ಯಿಕ ಸಾಂಸ್ಕೃತಿಕ ಪ್ರತಿಷ್ಠಾನ’ವು ಉಪ್ಪುಂದದ ಕುಂದ ಅಧ್ಯಯನ ಕೇಂದ್ರದ ಸ್ಥಾಪಕ ಅಧ್ಯಕ್ಷ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಅಧ್ಯಾತ್ಮಿಕ ಚಿಂತಕ ಮತ್ತು ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳರಿಗೆ ಕೊಡಮಾಡಿದ ರಾಜ್ಯಮಟ್ಟದ ‘ಸಾಂಸ್ಕೃತಿಕ ರಾಯಭಾರಿ ಪ್ರಶಸ್ತಿ’ ಹಾಗೂ ಕೆನರಾ ಬ್ಯಾಂಕಿನ ನಿವೃತ್ತ ಅಧಿಕಾರಿ, ರುಡ್ಸೆಟ್ ತರಬೇತಿ ಸಂಸ್ಥೆಯ ಮಾಜಿ ನಿರ್ದೇಶಕ, ಉಪ್ಪುಂದ ರಮೇಶ ವೈದ್ಯರಿಗೆ ಕೊಡಮಾಡಿದ ರಾಜ್ಯಮಟ್ಟದ ’ಸಾಹಿತ್ಯ ಭೂಷಣ ಪ್ರಶಸ್ತಿ’ಯನ್ನು ಪ್ರತಿಷ್ಠಾನದ ಪರವಾಗಿ ಕವಿ ಕೆ. ಪುಂಡಲೀಕ ನಾಯಕ್ ಶನಿವಾರ ಹೊಳ್ಳರ ಮನೆ ‘ಬೆಳ್ಳಿರಥ’ದಲ್ಲಿ ಪ್ರದಾನ ಮಾಡಿದರು. ಈ ಸಂದರ್ಭ ಗಣೇಶ ಪ್ರಸನ್ನ ಮಯ್ಯ, ಜಗದೀಶ ಉಪ್ಪುಂದ, ಹೊಳ್ಳರ ಹಾಗೂ ವೈದ್ಯರ ಕುಟುಂಬದ ಸದಸ್ಯರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮದಲ್ಲಿ ಹುಟ್ಟಿ ಬೆಳೆದು ಕೋಟೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದು ನಂತರ ಬೆಂಗಳೂರಲ್ಲಿ ವೈದ್ಯಕೀಯ ಶಿಕ್ಷಣ ಪಡೆದು ನೇತ್ರ ತಜ್ಞರಾಗಿ ಹಲವು ಅಂತಾರಾಷ್ಟ್ರೀಯ ಮಟ್ಟದ ಸಾಧನೆಗೈದ ಆದಿ ಚುಂಚನಗಿರಿ ವಿವಿಯ ವೈಸ್ ಚಾನ್ಸಲರ್, ಡಾ. ಎಸ್. ಚಂದ್ರಶೇಖರ ಶೆಟ್ಟಿ ಅವರಿಗೆ ಆಲ್‌ಇಂಡಿಯಾ ಒಪ್ತಲ್ಮೊಲಾಜಿಕಲ್ ಸೊಸೈಟಿ ‘ಲೈಫ್ ಟೈಮ್ ಅಚೀವ್‌ಮೆಂಟ್ ಅವಾರ್ಡ್’ ಪ್ರದಾನ ಮಾಡಿ ಗೌರವಿಸಿದೆ. ನೇತ್ರ ವಿಜ್ಞಾನ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ರಾಜ್ಯ ಘಟಕಗಳ ಶಿಫಾರಸುಗಳನ್ನು ಪರಿಶೀಲಿಸಿ ಆಯ್ಕೆ ಮಾಡಲಾಗುತ್ತಿದೆ. ಡಾ. ಎಸ್. ಚಂದ್ರಶೇಖರ ಶೆಟ್ಟಿ ಅವರು ಹಲವು ದಶಕಗಳ ಜೀವನದಲ್ಲಿ ವೈದ್ಯಕೀಯ ತಜ್ಞರಾಗಿ, ಸ್ವಯಂ ಸೇವಕರಾಗಿ , ಶಿಕ್ಷಕರಾಗಿ, ಆಡಳಿತಾಧಿಕಾರಿಯಾಗಿ, ಅಂತರಾಷ್ಟ್ರೀಯ ಸಂಘಟನೆಗಳ ಸದಸ್ಯರಾಗಿ, ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಾಗಿ ಅಪಾರ ಸಾಧನೆ ಮಾಡಿದವರು. ಕರ್ನಾಟಕ ಮೆಡಿಕಲ್ ಕಾಲೇಜು, ಮೈಸೂರು ಮೆಡಿಕಲ್ ಕಾಲೇಜು, ಬೆಂಗಳೂರು ಮೆಡಿಕಲ್ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, ರಾಜೀವ್ ಗಾಂಧಿ ಆರೋಗ್ಯ ವಿವಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತುಮಕೂರಿನ ತಾವರೆಕೆರೆ ಹೆದ್ದಾರಿಯಲ್ಲಿ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ (58) ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ಕೊನೆಯುಸಿರೆಳಿದಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಅಶೋಕ್ ಶೆಟ್ಟಿಯವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಭಾಗಕ್ಕೆ ಬಲವಾದ ಪೆಟ್ಟು ತಗುಲಿದ್ದರಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಪುತ್ರ ಪನ್ನಗ ಶೆಟ್ಟಿಯವರನ್ನು ಸೋಮವಾರವೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ, ಚಿಕಿತ್ಸೆ ನೀಡಲಾಗುತ್ತಿದೆ. ಅಶೋಕ್ ಕುಮಾರ್ ಶೆಟ್ಟಿಯವರು ಕುಂದಾಪುರ ತಾಲೂಕು ಛಾಯಾಗ್ರಾಹಕ ಸಂಘ ಹಾಗೂ ರಾಜ್ಯ ಛಾಯಾಗ್ರಾಹಕ‌ ಸಂಘದ ಅಧ್ಯಕ್ಷರಾಗಿ‌ ಸೇವೆ ಸಲ್ಲಿಸಿದ್ದು, ಪ್ರಸ್ತುತ ಜಿಲ್ಲಾ‌ ಛಾಯಾಗ್ರಾಹಕ‌ ಸಂಘದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಹಿಂದಿನ ಅವಧಿಯಲ್ಲಿ ಹೆರೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಅವರು ಒಂದು ಅವಧಿಗೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.  ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುರಾಣ ಪ್ರಸಿದ್ಧ ಹಾಗೂ ಐತಿಹಾಸಿಕ ಪ್ರಸಿದ್ಧ ಪಂಚಗಂಗಾವಳಿ ನದಿಗಳ ಮಹತ್ವ ದೇಶಕ್ಕೆ ತಿಳಿಯುವಂತೆ ಬೆಂಗಳೂರು -ಕಾರವಾರ ಎಕ್ಸ್‌ಪ್ರೆಸ್ ರೈಲನ್ನು ‘ಪಂಚಗಂಗಾ ಎಕ್ಸ್‌ಪ್ರೆಸ್’ ಎಂದು ನಾಮಕರಣ ಮಾಡಿರುವುದಕ್ಕೆ ಪಂಚಗಂಗಾವಳಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಹಾಗೂ ಸಂಚಾಲಕ ಯು.ಎಸ್.ಶೆಣೈ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಯತ್ನ ನಡೆಸಿದ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಕುಂದಾಪುರ ಅವರಿಗೆ ಪಂಚಗಂಗಾವಳಿ ಸಮಿತಿಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಪೌರಾಣಿಕ ಹಿನ್ನಲೆಯಿರುವ ಕುಂದಾಪುರದ ಪಂಚಗಂಗಾವಳಿ ನದಿಗಳಾದ ಸೌಪರ್ಣಿಕಾ, ಖೇಟ, ಚಕ್ರ, ಕುಬ್ಜ, ವಾರಾಹಿ ನದಿಗಳು ಮಲೆನಾಡಿನಿಂದ ಕುಂದಾಪುರ-ಬೈಂದೂರು ತಾಲ್ಲೂಕಿನ ಪ್ರದೇಶಗಳಲ್ಲಿ ಹರಿದು ಕುಂದಾಪುರ -ಗಂಗೊಳ್ಳಿ ನಡುವೆ ಪಂಚಗಂಗಾವಳಿಯಾಗಿ ಸಮುದ್ರ ಸೇರುತ್ತವೆ. ಪೂರ್ವದಿಂದ ಹರಿದು ಉತ್ತರ ದಿಕ್ಕಿಗೆ ಸಾಗಿ, ದಕ್ಷಿಣಕ್ಕೆ ಮರಳಿ ಪಶ್ಚಿಮದಲ್ಲಿ ಐದು ನದಿಗಳು ಒಂದಾಗಿ ಅರಭಿಸಮುದ್ರ ಸೇರುವ ಈ ನಡೆ ಪ್ರಪಂಚದ ನೈಲ್‌ನದಿ ಬಿಟ್ಟರೆ ಬೇರೆ ಎಲ್ಲೂ ಇಲ್ಲ. ಸುಮಾರು ಎರಡು ಸಾವಿರ ಗಿಡಮೂಲಿಕೆಗಳ ನಡುವೆ ಹರಿದು…

Read More