Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಮೇ15: ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಶುಕ್ರವಾರ ರಾತ್ರಿಯಿಂದ ತಾಲೂಕಿನ ಹಲವೆಡೆ ಮಳೆಯಾಗುತ್ತಿದ್ದು, ಒಂದೆಡ ನದಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದೆ. ಇನ್ನೊಂದೆಡೆ ಕಳೆದ ಕೆಲವು ದಿನಗಳಿಂದ ಕಾಣಿಸಿಕೊಂಡಿದ್ದ ಕಡಲ್ಕೊರೆತದ ಅಬ್ಬರ ಇಂದು ಹೆಚ್ಚಾಗಿದ್ದು ಸಮುದ್ರ ತೀರದ ನಿವಾಸಿಗಳಿಗೆ ಆತಂಕ ಉಂಟುಮಾಡಿದೆ. ಕುಂದಾಪುರ ತಾಲೂಕಿನ ಕೋಡಿ ಭಾಗದಲ್ಲಿ ಸಮುದ್ರದ ತಡೆಗೋಡೆಯ ತನಕ ನೀರು ಅಪ್ಪಳಿಸುತ್ತಿದೆ. ಬೈಂದೂರು ತಾಲೂಕಿನ ಕಂಚುಗೋಡು, ಮರವಂತೆ, ಮಡಿಕಲ್, ದೊಂಬೆ ಭಾಗದಲ್ಲಿ ಕಡಲ್ಕೋರೆತ ಹೆಚ್ಚಿದ್ದು ಹತ್ತಾರು ತೆಂಗಿನ ಮರಗಳು ಸಮುದ್ರ ಪಾಲಾಗಿದೆ. ತೀರ ಪ್ರದೇಶದಲ್ಲಿದ್ದ ಕೆಲವು ಮೀನುಗಾರಿಕಾ ಶೆಡ್’ಗಳಿಗೂ ಹಾನಿ ಉಂಟಾಗಿದೆ. ಸಮುದ್ರ ತೀರ ಪ್ರದೇಶದಲ್ಲಿ ಕಡಲಕೊರೆತ ಹೀಗೆಯೇ ಮುಂದುವರಿದರೆ ಮೀನುಗಾರಿಕಾ ರಸ್ತೆ, ಶೆಡ್ ಹಾಗೂ ಮನೆಗಳಿಗೆ ಹಾನಿಯಾಗುವ ಅಪಾಯವಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಯಡ್ತರೆ ದುರ್ಮಿ, ತಾರಾಪತಿ, ಅಳವೆಕೋಡಿ ಭಾಗದಲ್ಲಿಯೂ ನೆರೆ ಉಂಟಾಗಿದ್ದು, ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿದೆ. ಸುಬ್ಬರಾಡಿ ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿ ಸಲುವಾಗಿ ನದಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕರೋನಾ ಮಹಾಮಾರಿ ಹಾಗೂ ದೇಶಕ್ಕೆ ಎದುರಾಗಿರುವ ಆರೋಗ್ಯ ಆಪತ್ತಿನಿಂದ ರಕ್ಷಣೆ ಮಾಡುವಂತೆ ಪ್ರಾರ್ಥಿಸಿ ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕೆಗೆ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು ವಿಶೇಷ ಚಂಡಕಾ ಯಾಗ ಪೂಜೆಯನ್ನು ಸಂಕಲ್ಪಿಸಿಕೊಂಡರು. ಬಳಿಕ ಶ್ರೀ ಆದಿ ಶಂಕರಾಚಾರ್ಯರರ ಸರ್ವಜ್ಞ ಪೀಠವನ್ನು ದರ್ಶನ ಮಾಡಿ ಪೂಜೆ ಸಲ್ಲಿಸಿ ಅಲ್ಲಿಗೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವುದು ಮತ್ತು ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ಕೈಗೊಳ್ಳಬಹುದಾದ ಕಾರ್ಯಗಳ ಬಗ್ಗೆ ವ್ಯವಸ್ಥಾಪನಾ ಸಮಿತಿಯಿಂದ ಪರಿಶೀಲಿಸಲಾಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರುಗಳಾದ ಜಯಾನಂದ ಹೋಬಳಿದಾರ್, ಗಣೇಶ್ ಕಿಣಿ ಬೆಳ್ವೆ, ಕೆ.ಪಿ. ಶೇಖರ್, ಸಂಧ್ಯಾ ರಮೇಶ್, ರಾಮಚಂದ್ರ ಅಡಿಗ, ದೇವಳದ ಕಾರ್ಯನಿರ್ವಹಣಾ ಅಧಿಕಾರಿ ಮಹೇಶ್ ಹಾಗೂ ದೇವಳದ ಸಿಬ್ಬಂದಿಗಳು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆಯ ಮೀನುಗಾರಿಕಾ ಹೊರಬಂದರಿನ ಉತ್ತರ ಭಾಗದಲ್ಲಿ ಮಂಗಳವಾರ ಆರಂಭವಾಗಿ ಗುರುವಾರದ ವರೆಗೆ ಏರುಗತಿಯಲ್ಲಿ ಸಾಗಿದ ಕಡಲ್ಕೊರೆತ, ಶುಕ್ರವಾರ ಗಂಭೀರ ಸ್ವರೂಪ ತಾಳಿದೆ. ಈ ಮೂರು ದಿನಗಳಲ್ಲಿ ಸಮುದ್ರದ ಉಬ್ಬರದ ಅಲೆಗಳು 350 ಮೀಟರು ಉದ್ದದ ದಂಡೆಯ 4 ಮೀಟರು ಅಗಲದ ಭೂಭಾಗವನ್ನು ಕಡಲಿಗೆ ಸೇರಿಸಿವೆ. ಈ ಸ್ಥಳದಲ್ಲಿದ್ದ ಸುಮಾರು ನೂರು ತೆಂಗಿನ ಮರಗಳು ಕಡಲಿಗೆ ಉರುಳಿವೆ. ಇಲ್ಲಿರುವ ಮೀನುಗಾರರ ವಸತಿ ಪ್ರದೇಶದ ಜೀವನಾಡಿಯಾಗಿರುವ ಕರಾವಳಿ ಮಾರ್ಗದ 2 ರಿಂದ 8 ಅಡಿ ಅಂತರದಲ್ಲಿ ಅಲೆಗಳು ಅಪ್ಪಳಿಸುತ್ತಿವೆ. ರಾತ್ರಿ ಹೊತ್ತಿಗೆ ಅಲೆಗಳ ಆರ್ಭಟ ಹೆಚ್ಚಲಿದ್ದು, ಆಗ ರಸ್ತೆ, ಅದರ ಬದಿಯಲ್ಲಿರುವ ವಿದ್ಯುತ್ ಲೈನ್ ಕುಸಿಯುವ ಸಾಧ್ಯತೆ ಇದೆ. ಶನಿವಾರ ಮತ್ತು ಭಾನುವಾರ ’ತೌಕ್ತಿ’ ಚಂಡ ಮಾರುತ ಇಲ್ಲಿಗೆ ಅಪ್ಪಳಿಸಿದರೆ ರಸ್ತೆಯ ಜತೆಗೆ ಅದರ ಪೂರ್ವದಲ್ಲಿರುವ 25 ಮೀನುಗಾರರ ಮನೆಗಳು ಅಪಾಯಕ್ಕೆ ಸಿಲುಕಲಿವೆ ಎಂದು ಮೀನುಗಾರರು ಭೀತಿ ವ್ಯಕ್ತಪಡಿಸುತ್ತಿದ್ದಾರೆ. ಬುಧವಾರ ಭಾಗಶ: ಕುಸಿದಿದ್ದ ಪಕ್ಕುಮನೆ ದಿನಕರ ಖಾರ್ವಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 1220 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 472, ಕುಂದಾಪುರ, ಬೈಂದೂರು ತಾಲೂಕಿನ 540, ಕಾರ್ಕಳ, ಹೆಬ್ರಿ ತಾಲೂಕಿನ 205 ಮಂದಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 1220 ಪ್ರಕರಣಗಳಲ್ಲಿ 250 ಸಿಂಟಮಿಕ್ ಹಾಗೂ 970 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 19 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 1201 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 81 ವರ್ಷದ ವೃದ್ಧೆ, 53 ವರ್ಷದ ಪುರುಷ, ಕುಂದಾಪುರದ 78 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 706 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 7619 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3095 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು, ಕಿರಿಮಂಜೇಶ್ವರ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶುಕ್ರವಾರ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಭೇಟಿ ನೀಡಿ ಆಸ್ಪತ್ರೆಗಳ ಸ್ಥಿತಿ, ಬಾಕಿ ಇರುವ ವಾಕ್ಸಿನೇಷನ್ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ವೈದಾಧಿಕಾರಿಗಳಿಂದ ಪಡೆದುಕೊಂಡದರು. ಈ ವೇಳೆ ಅವರು ಮಾತನಾಡಿ ವೈದ್ಯಕೀಯ ಸಿಬ್ಬಂದಿಗಳು ತಮ್ಮ ಶಕ್ತಿ ಮೀರಿ ಕಾರ್ಯನಿರ್ವಹಿಸುತ್ತಿದ್ದು ಕೋವಿಡ್ ನಿಯಂತ್ರಣಕ್ಕಾಗಿ ಸರಕಾರದ ನಿರ್ದೇಶನಗಳನ್ನು ಅಚ್ಚುಕಟ್ಟಾಗಿ ಪಾಲಿಸುತ್ತಿದ್ದಾರೆ. ಆದರೆ ಆಸ್ಪತ್ರೆಗಳಲ್ಲಿ ಮೂಲಭೂತ ಸೌಲರ್ಯಗಳ ಕೊರತೆ ಹಾಗೂ ಸಿಬ್ಬಂದಿಗಳ ಕೊರತೆಯಿಂದಾಗಿ ಅವರ ಮೇಲೆ ಒತ್ತಡ ಹೆಚ್ಚಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಎದುರಿಸಲು ಸಾಕಷ್ಟು ಮೂಲಭೂತ ಸೌಕರ್ಯಗಳ ಅಗತ್ಯವಿದೆ. ಬೈಂದೂರು ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಇದ್ದು ಇದನ್ನು ನಿವಾರಿಸುವ ಜೊತೆಗೆ ಮೂರನೇ ಅಲೆಯನ್ನು ಎದುರಿಸುವ ಸಲುವಾಗಿ ಬೈಂದೂರು ತಾಲೂಕಿಗೆ ಪ್ರತ್ಯೇಕವಾದ ಕೋವಿಡ್ ಆಸ್ಪತ್ರೆಯನ್ನು ಸಿದ್ಧಪಡಿಸಿಕೊಳ್ಳುವ ಅವಶ್ಯಕತೆ ಇದ್ದು, ಜಿಲ್ಲಾಡಳಿತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 892 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 222, ಕುಂದಾಪುರ, ಬೈಂದೂರು ತಾಲೂಕಿನ 314, ಕಾರ್ಕಳ, ಹೆಬ್ರಿ ತಾಲೂಕಿನ 349 ಮಂದಿಗೆ ಹಾಗೂ ಹೊರ ಜಿಲ್ಲೆಯ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 892 ಪ್ರಕರಣಗಳಲ್ಲಿ 121 ಸಿಂಟಮಿಕ್ ಹಾಗೂ 771 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 17 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 875 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 75 ವರ್ಷದ ವೃದ್ಧ, 65 ವರ್ಷದ ವೃದ್ಧ, 62 ವರ್ಷದ ವೃದ್ಧೆ, 51 ವರ್ಷದ ಮಹಿಳೆ, 55 ವರ್ಷದ ಮಹಿಳೆ, ಕುಂದಾಪುರದ 38 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 730 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 7108 ಕೋವಿಡ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು(6 ರಿಂ 10ನೇ ತರಗತಿ)ಗಳಿಗೆ ವಾರ್ಷಿಕ ರೂ.10,000/-ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಸಲುವಾಗಿ ಅರ್ಹ ಕ್ರೀಡಾಪಟುಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು 2020-21ನೇ ಸಾಲಿನಲ್ಲಿ ಮಾಧ್ಯಮಿಕ/ಪ್ರೌಢಶಾಲಾವಿದ್ಯಾರ್ಥಿಯಾಗಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತ ಕ್ರೀಡಾ ಸಂಸ್ಥೆಗಳು ಎಪ್ರಿಲ್ 1 , 2020 ರಿಂದ ಮಾರ್ಚ್ 31, 2021 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಬಾಗವಹಿಸಿರಬೇಕು. ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಜನೆಯಡಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಮಂತ್ರಾಲಯವು ಕರಾವಳಿ ನಿಯಂತ್ರಣ ವಲಯ(CRZ) ಅಧಿಸೂಚನೆಯಂತೆ National Centre for Sustainable Coastal Management (NCSCM), ಚೆನ್ನೈ, ಸಂಸ್ಥೆಯು ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ (CZMP) ಕರಡು ನಕಾಶೆಯನ್ನು ತಯಾರಿಸಿರುತ್ತದೆ. ಆದರಂತೆ ಸದರಿ ಕರ್ನಾಟಕ ರಾಜ್ಯ ಕಡಲತೀರ ವಲಯ, ನಿರ್ವಹಣಾ ಯೋಜನ ಕರಡು ನಕಾಶೆಯನ್ನು ಸಾರ್ವಜನಿಕರು ಪರಿಶೀಲಿಸಿ , ತಕರಾರುಗಳು, ಸಲಹೆಗಳು ಮತ್ತು ಅನಿಸಿಕೆಗಳೇನಾದರೂ ಇದ್ದಲ್ಲಿ,, ಪ್ರಾದೇಶಿಕ ನಿರ್ದೇಶಕರು (ಪರಿಸರ) ಉಡುಪಿ ರವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ. ಕರ್ನಾಟಕ ರಾಜ್ಯ ಕಡಲತೀರ ವಲಯ, ನಿರ್ವಹಣಾ ಯೋಜನೆ ಕುರಿತ ಸರ್ಕಾರದ ಅಧಿಸೂಚನೆಗಳು ಹಾಗೂ ಕರಡು CZMP ನಕಾಶೆಯನ್ನು, ಜಿಲ್ಲೆಯ ಸಂಬಂಧಪಟ್ಟ ತಹಶೀಲ್ದಾರರು, ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಪಂಚಾಯತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕಛೇರಿಯಲ್ಲಿ ವೀಕ್ಷಿಸಬಹುದಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮೇ 14 ರಿಂದ ಮುಂದಿನ ಆದೇಶದವರೆಗೆ 18-44 ವಯೋಮಿತಿಯವರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಸರ್ಕಾರದ ಆದೇಶದನ್ವಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮೇ 14 ರಿಂದ 17 ರ ವರೆಗೆ ಈಗಾಗಲೇ ಲಸಿಕೆ ಪಡೆದುಕೊಳ್ಳಲು ಲಸಿಕೆ ಶೆಡ್ಯೂಲ್ ನಿಗಧಿಪಡಿಸಿಕೊಂಡಿರುವವರಿಗೆ ಸಹ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಮುಂದಿನ ಸೂಚನೆವರೆಗೆ ಲಸಿಕಾ ಸ್ಥಳಕ್ಕೆ ಆಗಮಿಸಬಾರದು. 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಪ್ರಥಮ ಡೋಸ್ ನೀಡುವುದನ್ನು ಸರ್ಕಾರದ ಆದೇಶದನ್ವಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ 2 ನೇ ಡೋಸ್ ನೀಡುವದನ್ನು ಸಹ ಮೇ 14 ರಿಂದ ಮುಂದಿನ ಸೂಚನೆವರೆಗೆ ಸ್ಥಗಿತಗೊಳಿಸಿದ್ದು, ಲಸಿಕೆ ಲಭ್ಯತೆ ಹಾಗೂ ದಿನಾಂಕದ ಕುರಿತು ಪತ್ರಿಕಾ ಪ್ರಕಟಣೆ ನೀಡಲಾಗುವುದು, ಸಾರ್ವಜನಿಕರು ಸಹಕರಿಸುವಂತೆ ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವ್ಯಾಪ್ತಿಯ ಕಿರಿಮಂಜೇಶ್ವರ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಸಂಘದ ವತಿಯಿಂದ ವೈದ್ಯಕೀಯ ಕಿಟ್ ಹಾಗೂ ಸಲಕರಣೆಗಳನ್ನು ದೇಣಿಗೆಯಾಗಿ ನೀಡಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ ಎಲ್ಲೆಡೆ ಕೋವಿಡ್ ವ್ಯಾಪವಾಗಿ ಹರಡುತ್ತಿದ್ದು, ಆರೋಗ್ಯ ಸಿಬ್ಬಂದಿಗಳು ಶ್ರಮವಹಿಸಿ ದುಡಿಯುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭ ನಮ್ಮ ಸಂಘದಿಂದ ಕಳೆದ ವರ್ಷ 2.35 ಲಕ್ಷ ರೂ.ಗಳ ವೈದ್ಯಕೀಯ ಸಲಕರಣೆಗಳನ್ನು ವಿತರಿಸಲಾಗಿದ್ದು, ಈ ವರ್ಷವೂ ಕೂಡ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಪಿಪಿಇ ಕಿಟ್, ವೈದ್ಯರಿಗೆ ಗ್ಲೌಸ್, ಮಾಸ್ಕ್, ಗೌನ್ ಮೊದಲಾದ ಉಪಕರಣಗಳನ್ನು ವಿತರಿಸಲಾಗಿದೆ. ಆರೋಗ್ಯ ಕೇಂದ್ರದ ಸಿಬ್ಬಂದಿಯ ಸಂಚಾರಕ್ಕೆ ಅನುಕೂಲವಾಗುವಂತೆ ಕೋವಿಡ್ ಅಲೆ ತಗ್ಗುವ ತನಕ ಸಂಘದ ವತಿಯಿಂದ ವಾರದಲ್ಲಿ ನಾಲ್ಕು ದಿನಗಳ ಕಾಲ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದರು. ಕಿರಿಮಂಜೇಶ್ವರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.…

Read More