ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2021-22ರ ಸಾಲಿನಲ್ಲಿ ಖಾಲಿ ಇರುವ ಪ್ರಾಥಮಿಕ ವಿಭಾಗದ ಬಿಐಇಆರ್ಟಿ ಹುದ್ದೆಗೆ ಅರ್ಹ ಸರಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ ಚೇತನ ಮಕ್ಕಳ ಮನೆ-ಮನೆ ಭೇಟಿ ಮಾಡಿ ಬೋಧಿಸುವ ಮತ್ತು ಸಂಪನ್ಮೂಲ ಕೇಂದ್ರದಲ್ಲಿ ಬೋಧಿಸುವವರಿಗಾಗಿ ಇರುವ ಪ್ರಾಥಮಿಕ ವಿಭಾಗದ ಈ ಬಿಐಇಆರ್ಟಿ ಹುದ್ದೆಗೆ , ಶಿಕ್ಷಕ ತರಬೇತಿಯೊಂದಿಗೆ ವಿಶೇಷ ಡಿ. ಇಡಿ ಕಡ್ಡಾಯವಾಗಿರುತ್ತದೆ. ನಿವೃತ್ತರಿಗೆ ಅವಕಾಶವಿಲ್ಲ. ಆಸಕ್ತರು ಹತ್ತಿರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಜೂನ್ 21 ರಂದು ಮಧ್ಯಾಹ್ನ 12 ಗಂಟೆ ಒಳಗೆ ಅರ್ಜಿ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆಯುವಂತೆ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉತ್ತರಪ್ರದೇಶದಲ್ಲಿ ನಡೆದ ಮನಿಷಾ ಎಂಬ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು, ಬಾಲಕಿಯ ಮನೆಗೆ ಭೇಟಿ ನೀಡಲು ತೆರಳಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ನಾಯಕರಾದ ಆತಿಕುರ್ರಹ್ಮಾನ್,ಮಸೂದ್ ಹಾಗೂ ಪತ್ರಕರ್ತ ಸಿದ್ದೀಕ್ ಕಪ್ಪನ್ , ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ನ್ನು ಕೂಡ ಅನ್ಯಾಯವಾಗಿ ಬಂಧಿಸಿ ಇಂದಿಗೆ 250 ದಿನಗಳಾಗಿದ್ದು, ಇದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ಕುಂದಾಪುರ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಬಸ್ರೂರ್, ಕಂಡ್ಲೂರ್, ಗಂಗೊಳ್ಳಿ, ಶಿರೂರಿನಲ್ಲಿ, ಪ್ರತಿಭಟನೆ ನಡೆಯಿತು. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಜಿಲ್ಲಾಧ್ಯಕ್ಷರಾದ ಫಯೀಜ್ ಬಸ್ರೂರ್ ಮಾತನಾಡಿ, ಮೋದಿಯ ಸರ್ವಾಧಿಕಾರದ ದೇಶದಲ್ಲಿ ಇವರ ವಿರುಧ್ದ ಯಾರೆಲ್ಲಾ ಧ್ವನಿಯೆತ್ತುತ್ತಾರೋ ಅವರನ್ನು ಇಂದು ಭೇಟೆಯಾಡುತ್ತಿದ್ದಾರೆ , ಅತ್ಯಾಚಾರಕ್ಕೊಳಪಟ್ಟು ಕೊಲೆಗೈಯಲ್ಪಟ್ಟ ಬಾಲಕಿಯ ಮನೆಗೆ ಭೇಟಿ ನೀಡುವುದು ಕೂಡ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತ್ರಾಸಿ, ಹೊಸಾಡು ಹಾಗೂ ಗುಜ್ಜಾಡಿ ಗ್ರಾಮದ ಆಶಾ ಕಾರ್ಯಕರ್ತೆಯರು ಸೇರಿದಂತೆ ಸುಮಾರು 400ಕ್ಕೂ ಮಿಕ್ಕಿ ಬಡ ಕುಟುಂಬಗಳಿಗೆ ಟ್ರಸ್ಟ್ನ ಮುಖ್ಯಸ್ಥ ಗೋವಿಂದ ಬಾಬು ಪೂಜಾರಿ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು. ಬಳಿಕ ಮಾತನಾಡಿದ ಅವರು, ಕರೋನಾದಿಂದ ನೂರಾರು ಬಡ ಕುಟುಂಬಗಳು ಸಂಕಷ್ಟದಲ್ಲಿವೆ. ಮೀನುಗಾರರು, ಕೂಲಿ ಕಾರ್ಮಿಕರು ಸೇರಿದಂತೆ ಅನೇಕರು ಕೆಲಸವಿಲ್ಲದೆ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಹೀಗಾಗಿ ಇಂತಹ ಕುಟುಂಬಗಳ ಸಂಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ಅನೇಕ ಗ್ರಾಮಗಳಲ್ಲಿನ ಬಡ ಕುಟುಂಬಗಳಿಗೆ ಹಾಗೂ ಕರೋನಾ ನಿಯಂತ್ರಣಕ್ಕೆ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದರು. ಈ ಸಂದರ್ಭ ಗುರುರಾಜ ಪೂಜಾರಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಉಪಾಧ್ಯಕ್ಷ ಸೂರಜ್ ಖಾರ್ವಿ, ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ, ಮಿಥುನ್ ದೇವಾಡಿಗ ತ್ರಾಸಿ, ರವೀಂದ್ರ ಖಾರ್ವಿ, ರವಿ ಶೆಟ್ಟಿಗಾರ್ ತ್ರಾಸಿ, ಗುಜ್ಜಾಡಿ…
ಸೊಳ್ಳೆಗಳು ಯಾವುದೇ ಕಾಲಮಾನಕ್ಕೆ ಸೀಮಿತವಾಗದೇ ಎಲ್ಲಾ ಹವಾಮಾನದಲ್ಲೂ ಕಾಡುವ ಮಾರಣಾಂತಿಕ ಕೀಟವಾಗಿದೆ. ಯಕಶ್ಚಿತ್ ಸೊಳ್ಳೆ ಎಂದು ನಿರ್ಲಕ್ಷಿಸಿದರೆ ಅತ್ಯಂತ ಭೀಕರ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಸೊಳ್ಳೆಯಿಂದ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ, ಜಿಕಾ ವೈರಸ್, ಜ್ವರ, ಎನ್ಸೆಫಾಲಿಟಿಸ್ಗಳಂತಹ ಗಂಭೀರ ಕಾಯಿಲೆಗಳು ಹರಡುತ್ತವೆ. ಈ ಖಾಯಿಲೆಗಳು ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇನ್ನು ನೀವೇನಾದರೂ ಸಾಕುಪ್ರಾಣಿಗಳನ್ನು ಸಾಕಿದ್ದರೆ ಅದರಲ್ಲೂ ನಾಯಿಗಳ ಹೃದಯದ ಹುಳುಗಳಿಗೆ ಸೊಳ್ಳೆಗಳೇ ಕಾರಣವಾಗುತ್ತದೆ. ಆದ್ದರಿಂದ ಇದು ಕೇವಲ ಕಿರಿಕಿರಿ ಅಥವಾ ಕಡಿತದ ಬಗ್ಗೆ ಅಷ್ಟಕ್ಕೇ ಸೀಮಿತಗೊಳಿಸದೇ ಇದು ಮನೆಗೆ ನುಸುಳದಂತೆ ಎಚ್ಚರಿಕೆ ವಹಿಸಬೇಕಿದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಗಳು, ರಿಪೆಲ್ಲೆಂಟ್ ಸ್ಪ್ರೇಗಳು ಲಭ್ಯವಿದ್ದರೂ ಬಹುತೇಕ ರಾಸಾಯನಿಕಗಳಿಂದ ಕೂಡಿರುತ್ತದೆ, ಇವು ಮತ್ತೆ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ನೈಸರ್ಗಿಕವಾಗಿಯೇ ಯಾವುದೇ ರಾಸಾಯನಿಕ ಇಲ್ಲದೇ, ಮನೆಯಲ್ಲೇ ಕೆಲವು ಗಿಡಗಳನ್ನು ಬೆಳೆಸುವ ಮೂಲಕ ಸೊಳ್ಳೆಗಳನ್ನು ನಿವಾರಣೆ ಮಾಡಬಹುದು. ಈ ಗಿಡಗಳಿದ್ದರೆ ಸೊಳ್ಳೆಗಲು ಮನೆಗೆ ಬರುವುದೇ ಇಲ್ಲ, ಯಾವೆಲ್ಲಾ ಗಿಡಗಳು,…
ಕೆಮಿಕಲ್ಯುಕ್ತ ಆಹಾರ, ಮಾಲಿನ್ಯಮಯ ಪರಿಸರ ಮುಂತಾದವುಗಳಿಂದಾಗಿ ಇಂದು ಮಕ್ಕಳಲ್ಲೇ ಮರೆವು. ಸಾಮಾನ್ಯ ಸಮಸ್ಯೆಯಾಗಿದೆ. ಮಕ್ಕಳಿಂದ ಹಿಡಿದು ಮುದುಕರವರೆಗೆ ಎಲ್ಲರೂ ಮರೆವಿನ ಕಾರಣದಿಂದ ಆಗಾಗ ಹಲವು. ಸಮಸ್ಯೆಗಳನ್ನೆದುರಿಸುತ್ತಿದ್ದಾರೆ. ಈ ಮರೆವು ಹೆಚ್ಚಾದರೆ ಅದು ಬದುಕಿನ ಎಲ್ಲ ಮಜಲುಗಳನ್ನೂ ಬುಡಮೇಲು ಮಾಡಿಬಿಡಬಲ್ಲದು. ಹಾಗಾಗಿ ಮೆಮೋರಿ ಪವರ್ ಹೆಚ್ಚಿಸಿಕೊಳ್ಳುವುದು, ಅದನ್ನು ಶಾರ್ಪ್ ಆಗಿಟ್ಟುಕೊಳ್ಳುವುದು ಅಗತ್ಯ. ಮೆದುಳಿನ ಆರೋಗ್ಯ ಕಾಪಾಡಿಕೊಂಡು ಮೆಮೋರರಿ ಪವರ್ ಹೆಚ್ಚಿಸಿಕೊಳ್ಳಲು ಹೀಗ್ ಮಾಡಿ.. ಆಹಾರಾಭ್ಯಾಸ: ನಾವು ಸಾಮಾನ್ಯವಾಗಿ ನಮ್ಮ ಆಹಾರದ ಕಡೆ ಗಮನ ಹರಿಸುವುದಿಲ್ಲ. ಆಗಾಗ ಊಟವನ್ನು ಬಿಡುತ್ತೇವೆ, ಬದಲಿಗೆ ಎಣ್ಣೆಯಲ್ಲಿ ಕರಿದ, ಮಸಾಲೆಯುಕ್ತ ಆಹಾರ ಸೇವಿಸುತ್ತೇವೆ. ಇವೆಲ್ಲವೂ ಬದುಕಿನ ನಂತರದ ಘಟ್ಟಗಳಲ್ಲಿ ಮರೆವಿಗೆ ಕಾರಣವಾಗುತ್ತದೆ. ಒಂದು ಹೊತ್ತು ಊಟ ಬಿಡುವುದು ಸಾಮಾನ್ಯ ವಿಷಯದಂತೆ ಕಾಣಬಹುದು. ಆದರೆ, ಇದು ಮಾನಸಿಕ ಆರೋಗ್ಯದ ಮೇಲೆ ದೊಡ್ಡ ರೀತಿಯ ಪರಿಣಾಮ ಬೀರುತ್ತದೆ. ಡಯಟ್ನಲ್ಲಿ ಹೆಚ್ಚು ಬಣ್ಣಗಳಿಂದ ಕೂಡಿದ ತರಕಾರಿ, ಸೊಪ್ಪು, ಹಣ್ಣುಗಳನ್ನು ಸೇರಿಸ .ಇವುಗಳಲ್ಲಿರುವ ನ್ಯೂಟ್ರಿಯೆಂಟ್ಸ್ ಹಾಗೂ ಆ್ಯಂಟಿ ಆಕ್ಸಿಡೆಂಟ್ಗಳು ಫ್ರೀ ರ್ಯಾಡಿಕಲ್ ವಿರುದ್ಧ ಹೋರಾಡುತ್ತವೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಂದಿನಿಂದ ಕರೋನಾ ಲಾಕ್ಡೌನ್ನ ಪರಿಷ್ಕೃತ ನಿಯಮ ಜಾರಿಯಾಗಲಿದ್ದು, ಗಂಗೊಳ್ಳಿ ಗ್ರಾಮ ಪಂಚಾಯತ್ ಮತ್ತು ಗಂಗೊಳ್ಳಿ ಪೊಲೀಸ್ ಠಾಣೆ ವತಿಯಿಂದ ಗಂಗೊಳ್ಳಿ ಜನರಿಗೆ ಧ್ವನಿವರ್ಧಕದ ಮೂಲಕ ಮಾಹಿತಿ ನೀಡಲಾಯಿತು. ಇಂದಿನಿಂದ 21ರವರೆಗೆ ಹೊಸ ನಿಯಮಾವಳಿಗಳು ಜಾರಿಯಾಗುತ್ತಿದ್ದು, ಈ ದಿನಗಳಲ್ಲಿ ಮಧ್ಯಾಹ್ನ 2ಗಂಟೆಯೊಳಗೆ ಅಗತ್ಯ ವಸ್ತು ಖರೀದಿಗೆ ಅವಕಾಶ, ಸಂಜೆ 7ರಿಂದ ಬೆಳಿಗ್ಗೆ 5ಗಂಟೆ ತನಕ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ಜನರಿಗೆ ಮಾಹಿತಿ ನೀಡಲಾಗಿದ್ದು, ಜನರು ಕಟ್ಟುನಿಟ್ಟಾಗಿ ಸರಕಾರದ ಮತ್ತು ಜಿಲ್ಲಾಡಳಿತದ ಆದೇಶವನ್ನು ಪಾಲಿಸುವಂತೆ ಕೋರಲಾಯಿತು. ಈ ಸಂದರ್ಭ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್, ಪ್ರಪಬೆಷನರಿ ಎಸ್ಐ ವಿನಯ್, ಗ್ರಾಪಂ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕರೋನಾ ನಿಯಂತ್ರಣಕ್ಕೆ ಸಂಪೂರ್ಣ ಲಾಕ್ಡೌನ್ ಮಾಡಿರುವ ಗಂಗೊಳ್ಳಿಗೆ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಜೂ.10ರಿಂದ ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ಉತ್ತಮ ರೀತಿಯಲ್ಲಿ ಲಾಕ್ಡೌನ್ ವ್ಯವಸ್ಥೆ ಮಾಡಿರುವುದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್ ಕೈಗೊಂಡ ಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅನ್ಲಾಕ್ ಆದ ಬಳಿಕ ಜನರು ಮೈಮರೆಯದೆ ಕಾಲಕಾಲಕ್ಕೆ ಸರಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ಕರೋನಾ ನಿಯಂತ್ರಣದಲ್ಲಿ ಹಗಲಿರುಳು ದುಡಿದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳ ಹಾಗೂ ಎಲ್ಲಾ ಕರೋನಾ ವಾರಿಯರ್ಸ್ಗಳ ಕಾರ್ಯ ಶ್ಲಾಘನೀಯ. ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ವಿವಿಧ ವರ್ಗದ ಜನರಿಗೆ ಸರಕಾರ ಪರಿಹಾರದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ / ಸಾಧನೆಗಳು ಮೂಲ ಸ್ವರೂಪವಾಗಿದ್ದು , ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರುಗಳು , ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿತ ಅರ್ಜಿ ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ಜೂನ್ 20ರ ಒಳಗೆ ಹತ್ತಿರದ ರೈತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಗೋವಿಂದ ಬಾಬು ಪೂಜಾರಿ ಅವರ ನೇತೃತ್ವದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಅಗತ್ಯವುಳ್ಳ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳ ಸುಮಾರು 3,700 ಕಿಟ್’ಗಳನ್ನು ವಿತರಿಸಲಾಯಿತು. ಈ ಸಂದರ್ಭ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಕೋರೋನಾ ಲಾಕ್ಡೌನ್ ಕಾರಣದಿಂದ ಜನಸಾಮಾನ್ಯರು, ದಿನನಿತ್ಯ ದುಡಿದು ತಿನ್ನುವವರಿಗೆ ಸಾಕಷ್ಟು ತೊಂದರೆ ಆಗಿದೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಟ್ರಸ್ಟ್ ಮೂಲಕ ನಮ್ಮೂರಿನ ಜನರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬೈಂದೂರಿನಲ್ಲಿ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು ಹಾಗೂ ಪೌರ ಕಾರ್ಮಿಕರಿಗೆ ದಿನಸಿ ಕಿಟ್, ಮಾಸ್ಕ್ ಸ್ಯಾನಿಟೈಸರ್ ನೀಡಿರುವುದಲ್ಲದೇ ಧನಸಹಾಯವನ್ನು ಮಾಡಲಾಗಿದೆ. ಮುಂದುವರಿದು ಪ್ರತಿ ಗ್ರಾಮಗಳಿಗೂ ಜಿಬಿಪಿ ಜನಸೇವಾ ಸಂಘದ ಮೂಲಕ ಅಗತ್ಯವುಳ್ಳವರನ್ನು ಗುರುತಿಸಿ ಅವರಿಗೆ ಆಹಾರದ ಕಿಟ್ ವಿತರಿಸಲಾಗುತ್ತಿದೆ. ಬೆಂಗಳೂರಿನಲ್ಲಿಯೂ ಆಟೋ ಚಾಲಕರು, ಪೌರಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿ, ಧನಸಹಾಯ ಮಾಡಲಾಗಿದೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದಲೂ ಶನಿವಾರ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿಯವರ ಅವರ ನೇತೃತ್ವದಲ್ಲಿ ಬೈಂದೂರಿನ ಪೆಟ್ರೋಲ್ ಪಂಪ್ ಬಳಿ ಶನಿವಾರ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ ಕೊರೋನಾ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ 100ಕ್ಕೆ ಹಾಗೂ ಡಿಸೇಲ್ ಬೆಲೆ 94ಕ್ಕೆ ಏರಿಕೆ ಮಾಡಿರುವ ಮೋದಿ ದೇಶಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಕೇಂದ್ರ ಸರಕಾರ ಕೊರೋನಾ ಸಂಕಷ್ಟದಲ್ಲಿ ದರ ಇಳಿಸುವ ಕೆಲಸ ಮಾಡಬೇಕು. ಕೊರೋನಾದಿಂದ ಉದ್ಯೋಗವಿಲ್ಲದೆ ಜನರು ಸಂಕಷ್ಟದಲ್ಲಿದ್ದಾರೆ. ಉದ್ಯೋಗ, ಪರಿಹಾರ ಕೊಡಬೇಕು. ಮನೆಯಲ್ಲಿ ಕುಳಿತವರಿಗೆ ಸಹಾಯ ಹಸ್ತವನ್ನು ಚಾಚುವ ಕೆಲಸವನ್ನು ಸರ್ಕಾರ ಮಾಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದರು. ಮನಮೋಹನ್ ಸಿಂಗ್ ಸರಕಾರ ಅಧಿಕಾರದಲ್ಲಿದ್ದಾಗ ಕಚ್ಛಾ ತೈಲದ ಬೆಲೆ ಡಾಲರ್ ಗೆ 100 ರಿಂದ…
