Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.9: ಕಾಲುಸಂಕದಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದ ಬಾಲಕಿ ಸನ್ನಿಧಿ ಮೃತದೇಹ ಪತ್ತೆಗಾಗಿ, ಮಂಗಳವಾರ ಸಂಜೆಯ ತನಕವೂ ಬಾಲಕಿ ಹಳ್ಳಕ್ಕೆ ಬಿದ್ದಿದ್ದ ಸ್ಥಳ ಹಾಗೂ ಎಡಮಾವಿನ ಹೊಳೆಯಲ್ಲಿ ಶೋಧಕಾರ್ಯ ನಡೆಸಿದ್ದು, ಯಾವುದೇ ಸುಳಿವು ಲಭ್ಯವಾಗಿಲ್ಲ ಶೋಧಕಾರ್ಯದಲ್ಲಿ ಮುಳುಗು ತಜ್ಞರು:ಬಾಲಕಿ ಸನ್ನಿಧಿಗಾಗಿ ಹೊಳೆಯಲ್ಲಿ ಸೋಮವಾರ ಸಂಜೆ ಹಾಗೂ ಮಂಗಳವಾರ ಇಡೀ ದಿನ ಶೋಧ ಕಾರ್ಯ ನಡೆಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಗಂಗೊಳ್ಳಿಯ 8 ಮಂದಿ ಮೀನುಗಾರರು ನದಿಯಲ್ಲಿ ಮುಳುಗಿ ಮೃತದೇಹ ಹುಡುಕಾಟ ನಡೆಸಿದ್ದಾರೆ. ಮುಳುಗುತಜ್ಞ ಮಂಜುನಾಥ ಕನ್ನೇರಿ ಕೂಡ ಸಂಶಯವಿರುವ ಭಾಗದಲ್ಲಿ ಶೋಧಕಾರ್ಯ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬೈಂದೂರು ತಹಶೀಲ್ದಾರ್, ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಬೈಂದೂರು ಪೊಲೀಸ್ ಸಿಬ್ಬಂದಿಗಳು ಸ್ಥಳದಲ್ಲಿಯೇ ಇದ್ದು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಜಿಲ್ಲಾಧಿಕಾರಿ ಭೇಟಿ:ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಬಾಲಕಿ ಕುಟುಂಬಿಕರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ತಿಳಿಸಿದ್ದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಸಹಾಯಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟ ಹಾಗೂ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ 75ನೇ ಸ್ವಾತಂತ್ರ್ರೋತ್ಸವದ ಅಮೃತಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವೀರ ಯೋಧರ ತ್ಯಾಗ ಬಲಿದಾನವನ್ನು ನೆನಪಿಸುವ ಹಾಗೂ ಶಾಂತಿ ಸಾಮರಸ್ಯದ ದೇಶಪ್ರೇಮದ ಸಂದೇಶವನ್ನು ಸಾರುವ ಸಲುವಾಗಿ ಸಾಲಿಗ್ರಾಮದಿಂದ ತೆಕ್ಕಟ್ಟೆವರೆಗೆ ಕಾಲ್ನಡಿಗೆ ಜಾಥಾ ಜರುಗಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಜಾಥಾ ಬಳಿಕ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವನ್ನು ಮತ್ತೊಮ್ಮೆ ನೆನಪಿಸುವ ಹಾಗೂ ಪ್ರಜಾಪ್ರಭುತ್ವವನ್ನು ಸಾರುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಕಾಂಗ್ರೆಸ್ ಭಾರತ ಸ್ವಾತಂತ್ರ್ಯಕ್ಕಾಗಿ ಬಹುದೊಡ್ಡ ಕೊಡುಗೆ ನೀಡಿದೆ. ಅದರ ಜೊತೆಗೆ ಕಳೆದ 60 ವರ್ಷಗಳಿಂದ ಸಂವಿಧಾನ ಬದ್ಧವಾದ ಆಡಳಿತ ನಡೆಸಿಕೊಂಡು ಬಂದಿದೆ. ಬಡವರ ಬಗ್ಗೆ ಕಾಳಜಿ ಕಾರ್ಯಕ್ರಮಗಳನ್ನು ಸದಾ ನೀಡಿದೆ. ಬಿಜೆಪಿ ಗಾಂಧಿ ಹತ್ಯೆಗೈದ ಗೋಡ್ಸೆ ದೇವಾಲಯ ಕಟ್ಟಲು ಶ್ರಮಿಸುತ್ತದೆ, ನೆಹರು, ಇಂದಿರಾ, ರಾಜೀವ್ ಗಾಂಧಿ ಹೀಗೆ ಹಲವು ನಾಯಕರುಗಳು ಈ ದೇಶಕ್ಕಾಗಿ ಸದಾ ಶ್ರಮಿಸಿದ ನಾಯಕರುಗಳು ಆದರೆ ಇಂಥಹ ಮಹಾನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.8: ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳು ಕಾಲುಸಂಕ ದಾಟುವ ವೇಳೆ ಆಯಾತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಸೋಮವಾರ ಸಂಜೆ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿದೆ. ನಾಪತ್ತೆಯಾದ ಬಾಲಕಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಚಪ್ಪರಿಕೆ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ, ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ (7 ) ನೀರುಪಾಲಾದ ಬಾಲಕಿ. ಮನೆಗೆ ತೆರಳುತ್ತಿದ್ದಾಗ ಬಿಜಮಕ್ಕಿ ಎಂಬಲ್ಲಿ ಕಾಲು ಸಂಕ ದಾಟುವಾಗ ಬಾಲಕಿ ಆಯಾತಪ್ಪಿ ಹಳ್ಳಕ್ಕೆ ಬಿದ್ದಿದ್ದಾಳೆ. ಕೂಡಲೇ ವಿಷಯ ತಿಳಿದು ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದಾರೆ. ಈ ಹಳ್ಳ ಬೋಳಂಬಳ್ಳಿ ನದಿಗೆ ಸೇರುತ್ತಿದ್ದು, ನೀರಿನ ಸೆಳೆತಕ್ಕೆ ಮಗು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ. ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಜಿ.ಪಂ.ಮಾಜಿ ಅಧ್ಯಕ್ಷ ರಾಜು ಪೂಜಾರಿ, ತಹಶೀಲ್ದಾರ್ ಕಿರಣ್ ಗೋರಯ್ಯ, ಎಸ್.ಐ ಪವನ್ ನಾಯ್, ಗ್ರಾ.ಪಂ.ಮಾಜಿ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಮೊದಲಾದವರು ಭೇಟಿ ನೀಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.7: ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ವೇಯ್ಟ್ ಲಿಪ್ಟಿಂಗ್ ಸ್ಪರ್ದೆಯಲ್ಲಿ ಕಂಚಿನ ಪದಕ ಪಡೆದು, ಹುಟ್ಟೂರಿಗೆ ಮರಳಿದ ಗುರುರಾಜ ಪೂಜಾರಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಪೌರಾಯುಕ್ತ ಡಾ. ಉದಯ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಗುರುರಾಜ ಪೂಜಾರಿ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅವಧಿಯಲ್ಲಿ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ ಪಡೆಯುವ ಮೂಲಕ ಗುರುರಾಜ ಪೂಜಾರಿ ಅವರು ಉಡುಪಿ ಜಿಲ್ಲೆಯ ಸಂಭ್ರಮವನ್ನು ಹೆಚ್ಚಿಸಿದ್ದು, ದೇಶದಲ್ಲಿ ಜಿಲ್ಲೆಯ ಹೆಸರನ್ನು ಪ್ರಖ್ಯಾತಗೊಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಪ್ರತಿಭೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಹ ಉನ್ನತ ಸಾಧನೆಗಳನ್ನು ಮಾಡಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹುಣ್ಸೆಮಕ್ಕಿ ಹೊಂಬಾಡಿ-ಮಂಡಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ 23ನೇ ವರ್ಷದ ಅಧ್ಯಕ್ಷರಾಗಿ ವಿಶ್ವನಾಥ್ ಎನ್. ಪೂಜಾರಿ ಹಾಗೂ ಪ್ರಧಾನ ಕಾರ್ಯದಶಿ೯ಯಾಗಿ ರಮೇಶ್ ಪೂಜಾರಿ ಹೊಂಬಾಡಿ ಆಯ್ಕೆಯಾಗಿದ್ದಾರೆ. ಗೌರವಧ್ಯಕ್ಷರು: ನಾಗೇಶ ಡಿ ಶೇಟ್, ಉದಯ ಪೂಜಾರಿ, ಉಪಾಧ್ಯಕ್ಷರು: ಜಯರಾಮ ಆಚಾರ್, ಹರೀಶ್ ಬ್ರಹ್ಮನಗರ, ಜೊತೆ ಕಾರ್ಯದಶಿ೯: ಹರೀಶ್ ಎಮ್.ಎಸ್. ತಲ್ಮಕ್ಕಿ, ಗುರುರಾಜ್ ಕುಲಾಲ್, ಸಚಿನ್ ನಾಯಕ್, ಕೋಶಾಧಿಕಾರಿ: ಗಣಪತಿ ಪ್ರಭು, ಜೊತೆ ಕೋಶಾಧಿಕಾರಿ: ಗಣೇಶ್ ಎನ್ ಪೂಜಾರಿ, ಸಂಘಟನಾ ಕಾರ್ಯದಶಿ೯: ಕೃಷ್ಣ ಕುಲಾಲ್, ಸಹ ಸಂಘಟನಾ ಕಾರ್ಯದಶಿ೯: ಕಾತೀ೯ಕ್ ಪೂಜಾರಿ, ಆದಿತ್ಯ, ಸಾಂಸ್ಕೃತಿಕ ಕಾರ್ಯದಶಿ೯: ಪ್ರಕಾಶ್ ಡಿ ಶೇಟ್, ಸಾಂಸ್ಕೃತಿಕ ಜೊತೆ ಕಾರ್ಯದಶಿ೯: ಸುಭಾಸ್ ಪೂಜಾರಿ, ಭರತ್, ಕ್ರೀಡಾ ಕಾರ್ಯದಶಿ೯: ವಿಘ್ನೇಶ್ ಆಚಾರ್, ಚಂದ್ರ, ಅನಿಲ್ ಪೂಜಾರಿ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಗೋಸ್ಟ 19 ರಿಂದ 23 ರ ತನಕ ಥೈಲ್ಯಾಂಡಿನಲ್ಲಿ ನಡೆಯುವ ಕರಾಟೆ ಡೂ ಚಾಂಪಿಯನ್ ಶಿಪ್’ಗೆ ಭಂರ್ಡಾಕಾರ್ಸ ಕಾಲೇಜಿನ ಕರಾಟೆ ಪಟುಗಳಾದ ಚೇತನ ಗಾಣಿಗ, ಪವನ ಪೂಜಾರಿ, ಭರತ ದೇವಾಡಿಗ, ಅಜಯ ದೇವಾಡಿಗ ಅವರಿಗೆ ಉಡುಪಿಯ ವೆಂಟನ ಫೌಂಡೇಶನ್ ವತಿಯಿಂದ ಸಹಾಯಧನ ನೀಡುವ ಕಾರ್ಯಕ್ರಮ ನಡೆಯಿತು. ವೆಂಟನ ಫೌಂಡೇಶನ್ ವತಿಯಿಂದ ಸದಸ್ಯ ಷಣ್ಮುಖರಾಜ ನಾಲ್ಕು ಕ್ರೀಡಾಪಟುಗಳಿಗೆ ತಲಾ ಐವತ್ತೂ ಸಾವಿರ ರೂಪಾಯಿಯ ಚೆಕ್ ಹಸ್ತಾಂತರಿಸಿದರು. ಬಳಿಕ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೆಂಟನ ಫೌಂಡೇಶನ್ ಸಹಾಯಹಸ್ತ ವತಿಯಿಂದ ನೀಡಲಾಗಿದೆ. ಈ ಭಾಗದಿಂದ ಅಂತರಾಷ್ಠೀಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗುವುದು ಹೆಮ್ಮೆಯ ವಿಷಯ. ಇದರ ಹಿಂದೆ ಅವರ ಹಲವಾರು ವರ್ಷದ ಪರಿಶ್ರಮವಿದೆ. ಇವರ ಭಾಗವಹಿಸುವಿಕೆ ಇತರರಿಗೂ ಪ್ರೇರೆಪಣೆಯಾಗಲಿ ಎಂದರು. ಕಾಲೇಜಿನ ಹಳೆ ವಿದ್ಯಾರ್ಥಿ ಕೆ.ಪಿ. ಭಟ್, ವಿಶ್ವಸ್ಥ ಮಂಡಳಿಯ ಸದಸ್ಯರಾದ ಪ್ರಕಾಶ ಸೋನ್ಸ್, ದೇವದಾಸ ಕಾಮತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ, ವೇದಿಕೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ06: ಜುಲೈ 20ರಂದು ಮೃತಪಟ್ಟಿದ್ದ ಉಪ್ಪುಂದ ಖಾಸಗಿ ಶಾಲೆಯೊಂದರ ಎರಡನೇ ತರಗತಿ ವಿದ್ಯಾರ್ಥಿನಿ ಸಮನ್ವಿಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆಕೆಯ ಸಾವಿನ ನೈಜ ಕಾರಣ ಬಯಲಾಗಿದೆ. ಹೃದಯಾಘಾತದಿಂದ ಬಾಲಕಿ ಮೃತಪಟ್ಟಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬಿಜೂರು ಗ್ರಾಮದ ಗಂಟಿಹೊಳೆ ಕೊಚ್ಲುಗದ್ದೆ ನಿವಾಸಿ ಸುಪ್ರಿತಾ ಪೂಜಾರಿ ಎಂಬವರ ಪುತ್ರಿ ಸಮನ್ವಿ, ಜು.20ರಂದು ಮನೆಯಿಂದ ತಾಯಿಯೊಂದಿಗೆ ಶಾಲಾ ಬಸ್ ಏರಲು ತೆರಳುತ್ತಿದ್ದ ಸಂದರ್ಭ ಕುಸಿದು ಬಿದ್ದಿದ್ದಳು. ತಕ್ಷಣ ಬೈಂದೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದನ್ನು ತಿಳಿಸಿದ್ದರು. ಚಾಕಲೇಟ್ ಕವರ್ ಸಹಿತ ತಿಂದು ಗಂಟಲ್ಲಿ ಸಿಕ್ಕಿಕೊಂಡು ಉಸಿರಾಟದ ಸಮಸ್ಯೆಯಿಂದ ಸಮನ್ವಿ ಮೃತಪಟ್ಟಿದ್ದಾಳೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿತ್ತು. ಈ ಬಗ್ಗೆ ಕುಂದಾಪ್ರ ಡಾಟ್ ಕಾಂ ನಿಖರವಾದ ವರದಿ ಪ್ರಕಟಿಸಿ, ಮರಣೋತ್ತರ ಪರಿಕ್ಷೇಯ ವರದಿ ಬಳಿಕವಷ್ಟೇ ಸತ್ಯ ತಿಳಿಯಲಿದೆ ಎಂದು ತಿಳಿಸಿತ್ತು. ವೈದಕೀಯ ವರದಿ ನಂತರ ಸಮನ್ವಿ ಸಾವಿಗೆ ನಿಜವಾದ ಕಾರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಪರೀಕ್ಷಾ ಫಲಿತಾಂಶ ಅಂಕಪಟ್ಟಿ, ಮೌಲ್ಯಮಾಪನ ಸೇರಿದಂತೆ ವಿವಿಧ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಕುಂದಾಪುರ ತಾಲೂಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಶ್ರಯದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಶನಿವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಭಂಡಾರ್‌ಕಾರ್ಸ್ ಕಾಲೇ ಜು ಎಬಿವಿಪಿ ಮುಖಂಡ ವಿತೇಶ್ ಶೆಟ್ಟಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ಪದವಿ ಶಿಕ್ಷಣದ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟಗೊಂಡು ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ದೊರೆಯದೇ ಕ್ಯಾಂಪಸ್‌ನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಉದ್ಯೋಗ ವಂಚಿತರಾಗುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ನಾಲ್ಕೈದು ದಿನಗಳಲ್ಲಿ ಅಂಕಪಟ್ಟಿ ಒದಗಿಸಿಕೊಡದಿದ್ದರೆ ಮಂಗಳೂರು ವಿವಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಪ್ರತಿಷ್ಠಿತ ಕಂಪನಿಗಳು ನಡೆಸಿದ ಕ್ಯಾಂಪಸ್‌ನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಕಪಟ್ಟಿಸಲ್ಲಿಸಲಾಗದೆ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಆಗಸ್ಟ್ ೩ ರಂದು ಪ್ರಕಟವಾದ ತೃತೀಯ ಹಾಗೂ ಪಂಚಮ ಸೆಮಿಸ್ಟರ್ ಫಲಿತಾಂಶದಲ್ಲಿ ಸಾಕಷ್ಟು ಲೋಪದೋಷಗಳಿದೆ. ಪ್ರಥಮ ಸೆಮಿಸ್ಟರ್ ಮೌಲ್ಯಮಾಪನ ಆಮೆಗತಿಯಲ್ಲಿ ಸಾಗುತ್ತಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಂಘ ಸಂಸ್ಥೆಗಳ ಸಹಭಾಗಿತ್ವದಿಂದ ಸ್ಥಳೀಯ ಸಂಸ್ಥೆಗಳು ಜನಸಾಮಾನ್ಯರಿಗೆ ಹೆಚ್ಚಿನ ಮೂಲ ಅವಶ್ಯಕತೆಯನ್ನು ಒದಗಿಸಲು ಸಾಧ್ಯವಾಗುತ್ತದೆ. ದೀರ್ಘ ಕಾಲದಿಂದ ನಿರ್ಲಕ್ಷ್ಯಕ್ಕೊಳಗಾಗಿದ್ದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿಪಡಿಸಲು ಮುಕ್ತಿಧಾಮ ಟ್ರಸ್ಟ್ ರಿ. ಪಟ್ಟಣ ಪಂಚಾಯತ್ ಜತೆ ಕೈ ಜೋಡಿಸಿ ಶ್ರಮಿಸಿದ ಕಾರ್ಯ ಶ್ಲಾಘನೀಯ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ ಕುಮಾರ್ ಹೇಳಿದರು. ಅವರು ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಪಟ್ಟಣ ಪಂಚಾಯತ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದಿಂದ ತಲಾ ಒಂದೊಂದು ಸಿಲಿಕಾನ್ ಚೇಂಬರ್ ಅಳವಡಿಸಿ ನವೀಕರಿಸಿದ ರುದ್ರಭೂಮಿಯ ಲೋಕಾರ್ಪಣೆ ಮತ್ತು ನಿರ್ವಹಣೆಯ ಹೊಣೆ ಹೊತ್ತಿರುವ ಮುಕ್ತಿಧಾಮ ಟ್ರಸ್ಟಿಗೆ ಕೀ ಹಸ್ತಾಂತರಣ ಸಮಾರಂಭದಲ್ಲಿ ಮಾತನಾಡಿದರು. ಬೈಂದೂರು ಬಾಜಪ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ ರುದ್ರಭೂಮಿ ಜನರ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಒದಗಿಸಲಾಗುವುದು. ಈಗಾಗಲೇ ಬೈಂದೂರಿನಲ್ಲಿ ಬಸ್ ತಂಗುದಾಣ, ಇ ಶೌಚಾಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಮುಕ್ತಿಧಾಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 108ನೇ ವಾರ್ಷಿಕ ಮಹಾಸಭೆಯಲ್ಲಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2021-22 ಸಾಲಿನ ವಾರ್ಷಿಕ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಏನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ಎಂ. ವಿನಾಯಕ ರಾವ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ ನಾಯಕ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಕ್ಷ್ಮೀ ನಾರಾಯಣ, ಕುಂದಾಪುರ ತಾಲೂಕು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ. ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.

Read More