Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಮತ್ತು ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನ, ಹಟ್ಟಿಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ ಸಹ ತಾಲೂಕು ಮಟ್ಟದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆಗಳ ಸಮಾರೋಪವು ನಡೆಯಿತು. ಸಮಾರೋಪ ಸಮಾರಂಭದ ಘನಾಧ್ಯಕ್ಷರಾದ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಉಪಾಧ್ಯಕ್ಷರಾದ ವೇದಮೂರ್ತಿ ಹೆಚ್. ಬಾಲಚಂದ್ರ ಭಟ್ಟರು ದೇವಾಲಯದ ಸಹಯೋಗದ ಕಾರ್ಯಕ್ರಮವನ್ನು ಮಾತನಾಡಿ, ಸಿದ್ಧಿವಿನಾಯಕನ ತಾಣವಾದ ಇಲ್ಲಿ ಬಂದು ಭಾಗವಹಿಸಿ ಸ್ಪರ್ಧೆಗಳಲ್ಲಿ ನಿಮ್ಮ ಪ್ರಯತ್ನವನ್ನು ನಡೆಸಿರುವ ಸರ್ವರೂ ಸಿದ್ಧಿಯನ್ನು ಪಡೆವಂತವರಾಗಲಿ ಎಂದು ಹಾರೈಸಿದರು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣದ ಪ್ರಾಧ್ಯಾಪಕರಾದ ಶ್ರೀ ಪಾಂಡುರಂಗ ರವರು ಗೆದ್ದವರಿಗೆ ಅಭಿನಂದಿಸಿ ಮಾತಾಡುತ್ತಾ ಸೋತವರು ಕುಗ್ಗಲೇ ಬಾರದು. ಇರುವವರಲ್ಲಿ ಮೂವರನ್ನು ಆರಿಸುವಾಗ ನಿಮ್ಮಲ್ಲಿ ಕೆಲವು ಕೊರತೆಗಳನ್ನು ಕಂಡಿರಬಹುದು. ಅವುಗಳನ್ನು ತಿದ್ದಿ ಸಾಧಿಸಿ ಮುಂದಿನ ವರ್ಷಗಳಲ್ಲಿ ತಮ್ಮ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು. ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಪ್ಟೆಂಬರ್ 16ರಿಂದ 18ರವರೆಗೆ ಪಾಂಡಿಚೇರಿಯ ಇಂದಿರಾ ಗಾಂಧಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆಯುವ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್‌ನ 22 ಕ್ರೀಡಾಪಟುಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.   ಭಾಗವಹಿಸುತ್ತಿರುವ ಕ್ರೀಡಾಪಟುಗಳ ಹೆಸರು :ಬಾಲಕರ ವಿಭಾಗದಲ್ಲಿ:ದಯಾನಂದ – (400ಮೀ), ನೋವಲ್ ಆರ್ ಪಿ- (ಉದ್ದ ಜಿಗಿತ), ನಿತಿನ್ ಎಲ್‌ಜಿ – (ಚಕ್ರ ಎಸೆತ), ರೂಪೇಶ್ – (ಪೋಲೋ ವಾಲ್ಟ್), ಅಬ್ದುಲ್ ರಜಕ್ ಶಿಗ್ಗಾನ – (ಹ್ಯಾಮರ್ ತ್ರೋ), ಸಾಹಿಲ್ – (100 ಮೀ), ಸಮರ್ಥ್ ಸಂಜೀವ್ ಕುಮಾರ್ – (1000ಮೀ), ಆಕಾಶ್ ಹುಕ್ಕೇರಿ – (110ಮೀ ಹರ್ಡಲ್ಸ್), ಜಸ್ವೀನ್ ಥೋಮಸ್ – (ಎತ್ತರ ಜಿಗಿತ), ದಿಶಾಂತ್– (ಉದ್ದ ಜಿಗಿತ), ಹೆಚ್ ಮೈಲಾರಿ – (ಚಕ್ರ ಎಸೆತ), ಆರಂಭಮ್ ರಾಜು – (60ಮೀ), (80ಮೀ ಹರ್ಡಲ್ಸ್), ಕೌಶಿಕ್ ಪಿ ಶೆಟ್ಟಿಗಾರ್ – (80 ಮೀ ಹರ್ಡಲ್ಸ್), ಹರ್ಷದ್ ಗೌಡ – (ಉದ್ದ ಜಿಗಿತ), ಮೋಕ್ಷಿತ್ ಆರ್ ಗೌಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭರತ್ ಪ್ರೆಸ್ ಎದುರುಗಡೆಯ ಡಿ ಮಾರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೆಪ್ಟಂಬರ್ 16ರಂದು ಬೆಳಗ್ಗೆ 10.30ಕ್ಕೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ – ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗೆ ಸೆಪ್ಟಂಬರ್ 15ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವ ಸಂಸತ್ತು ಸಭೆಯ ಕುರಿತು ಮಾಹಿತಿ ನೀಡಿ ಮಾತನಾಡಿದರು. ಪ್ರಜಾಪ್ರಭುತ್ವ ತತ್ವದ ಅನುಸರಣೆಯಲ್ಲಿ ರಾಜ್ಯವು ದೇಶಕ್ಕೆ ಮಾದರಿಯಾಗಿದೆ. ಐತಿಹಾಸಿಕ ಪ್ರಜಾಪ್ರಭುತ್ವ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಜಿಲ್ಲೆಯ ಶಾಲಾ ಹಾಗೂ ಕಾಲೇಜು ಮಕ್ಕಳಿಗೆ ಯುವ ಸಂಸತ್ತು ಸಭೆಯನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ ಎಂದರು. ಸೆಪ್ಟಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಯೋಜಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಸೆ. 16 ರಿಂದ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗಳ ಸ್ಫರ್ಧೆಗಳು ಆರಂಭವಾಗಲಿದ್ದು, ಅಕ್ಟೋಬರ್ 10 ರ ಒಳಗಾಗಿ ತಾಲೂಕು ಮಟ್ಟದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ-ಒನ್, ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 01 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kssd.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ ಜಿಲ್ಲಾ ಕಚೇರಿಯ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಣ್ಣಿನಿಂದ ನಿರ್ಮಿತ ಗಣಪತಿ ಮೂರ್ತಿಗಳ ಪ್ರತಿಷ್ಠಾನ ಮಾಡುವುದರೊಂದಿಗೆ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು.  ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬ ಆಚರಣೆಯ ಸಲುವಾಗಿ ಕಾನೂನು ಸುವಸ್ಯವಸ್ಥೆಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ಗೌರಿ – ಗಣೇಶ ಹಬ್ಬವನ್ನು ಇದೇ ಸೆಪ್ಟೆಂಬರ್ 13 ಮತ್ತು 14 ರಂದು ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸುವುದರೊಂದಿಗೆ ನೈಸರ್ಗಿಕ ಜಲಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳು ನೈಸರ್ಗಿಕವಾಗಿ ನೀರಿನಲ್ಲಿ ಕರಗುವುದಿಲ್ಲ. ಇವು ಮಾಲಿನ್ಯ ಉಂಟು ಮಾಡುವುದರೊಂದಿಗೆ ಜಲಚರಗಳಿಗೆ ಹಾನಿ ಉಂಟು ಮಾಡುತ್ತದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು. ನೈಸರ್ಗಿಕ ಜಲ ಮೂಲಗಳ ಮೇಲಿನ ಒತ್ತಡ ಕಡಿಮೆ ಮಾಡಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಗುಂಡ್ಮಿ ಸಮೀಪದ ಹದ್ದಿನಬೆಟ್ಟು ಯಡಬೆಟ್ಟು ಸಾಮೂಹಿಕ ಶ್ರೀ ಗಣೇಶೋತ್ಸವ ಆರಾಧನೋತ್ಸವ ಸಮಿತಿ ಆಶ್ರಯದಲ್ಲಿ ಇದೇ ಸೆಪ್ಟೆಂಬರ್ 14ರಂದು ಸಂಜೆ 07. ಗಂಟೆಗೆ ಹದ್ದಿನಬೆಟ್ಟು ಪರಿಸರದಲ್ಲಿ ನಡೆಯುವ 29ನೇ ವರ್ಷದ ಶ್ರೀ ಗಣೇಶ ಆರಾಧನೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹದ್ದಿನಬೆಟ್ಟು ಆರಾಧನೋತ್ಸವ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ ಗುಂಡ್ಮಿ ತಿಳಿಸಿದ್ದಾರೆ ಈ ಪುರಸ್ಕಾರ 50 ಸಾವಿರ ನಗದು ಒಳಗೊಂಡ ಶಾಶ್ವತ ಫಲಕ ನೀಡಿ ಗೌರವಿಸಲಿದೆ ಅಲ್ಲದೆ ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ದತ್ತುಸ್ವೀಕಾರ ಕಾರ್ಯಕ್ರಮದ ಅಂಗವಾಗಿ ಬ್ರಹ್ಮಾವರ ತಾಲೂಕಿನ ವ್ಯಾಪ್ತಿಯ 30 ವಿದ್ಯಾರ್ಥಿಗಳಿಗೆ 5 ಸಾವಿರ ರೂ.ಗಳಂತೆ ವಿದ್ಯಾರ್ಥಿ ವೇತನ ವಿತರಣೆ,ಎರಡು ಸ್ಥಳೀಯ ಸರಕಾರಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಒಂದು ವರ್ಷದ ಮಾಸಿಕ ಗೌರವ ವೇತನ, 6 ಜನ ಅನಾರೋಗ್ಯ ಪೀಡಿತರಿಗೆ ಸಹಾಯನಿಧಿ ವಿತರಣೆ ಜತೆಗೆ ಹಲವು ಸಾಮಾಜಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಪ್ರತಿಷ್ಟಿತ ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಪ್ರಧಾನ ಕಚೇರಿ ವಠಾರದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಮಾನ್ಯ ಅಧ್ಯಕ್ಷರಾದ ಎಸ್. ಶೀನ ಪೂಜಾರಿ ಅವರು ವಹಿಸಿ, ಮಾತನಾಡಿ, ಸಂಘದಿಂದ ಸಿಗುವ ಎಲ್ಲಾ ಸೌಲಭ್ಯಗಳ ಮಾಹಿತಿಯನ್ನು ನೀಡುವುದರೊಂದಿಗೆ 2025-26ನೇ ಸಾಲಿನಲ್ಲಿ ಸಂಘವು 105.23 ಕೋಟಿಯಷ್ಟು ಸಾಲ ನೀಡಿ ಸಂಘವು ಗಳಿಸಿದ ಲಾಭ ರೂ.2.53 ಕೋಟಿಯಲ್ಲಿ ವಿವಿಧ ಖಾತೆಗಳಿಗೆ ಹಂಚಿಕೆ ಮಾಡಿದ ಮೇಲೆ ಪಾಲುದಾರ ಸದಸ್ಯರಿಗೆ ಶೇ.17 ಡಿವಿಡೆಂಡನ್ನು ಘೋಷಿಸಿದರು. ಸಂಘವು ವರದಿ ಸಾಲಿನಲ್ಲಿ ಸುಮಾರು 502 ಕೋಟಿಗೂ ಮಿಕ್ಕಿದ ವ್ಯವಹಾರವನ್ನು ನಡೆಸಿದ್ದು ಲಾಭವನ್ನು ಗಳಿಸಲು ಸಂಘದ ನೌಕರರ ಸಾಧ್ಯವಾಗಿರುವುದಕ್ಕೆ ಮತ್ತು ಸದಸ್ಯರ ಸಹಕಾರದಿಂದ ಗಮನಾರ್ಹವಾದ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದರು. ಸುಧಾ ಸಿ. ಶೆಟ್ಟಿ , ಸಂಧ್ಯಾರಾಣಿ ಶೆಟ್ಟಿ ಮತ್ತು ಸುಷ್ಮಿತಾ ಇವರ ಪ್ರಾರ್ಥನೆಯೊಂದಿಗೆ ಸಭೆಯ ಕಲಾಪಗಳು ಪ್ರಾರಂಭವಾಯಿತು. ಮಹಾಸಭೆಯ ನಡವಳಿಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಹಾಗೂ ಸಂಘದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ರಸ್ತುತ ಆಧುನಿಕ ಕಾಲದ ಆಹಾರ ಕ್ರಮಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಅನಾರೋಗ್ಯಕ್ಕಿಡಾಗುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಹೇಳಿದರು. ಅವರು ಕೋಟ ಗ್ರಾಮಂಚಾಯತ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ತಾಲೂಕು ಪಂಚಾಯತ್ ಬ್ರಹ್ಮಾವರ, ಸಮುದಾಯ ಆರೋಗ್ಯ ಕೇಂದ್ರ ಕೋಟ ಹಾಗೂ ಗ್ರಾಮ ಪಂಚಾಯತ್ ಕೋಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಂಕ್ ಫುಡ್ ಸೇವನೆ ಮನುಕುಲವನ್ನು ಕಂಗೆಡಿಸಿದ್ದು ಇದರಿಂದ ದೇಹದ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಅನುಭವಿಸುತ್ತಾ ಇದ್ದೇವೆ,ಆಗಿನ ಕಾಲದ ಆಹಾರ ಕ್ರಮಗಳು ಮನುಷ್ಯನ ಆರೋಗ್ಯವನ್ನು ಸಮೃದ್ಧಗೊಳಿಸಿದ್ದು ಇಂದಿನ ಪೋಷಣ್ ಮಾಸಾಚರಣೆಯಲ್ಲಿ ಕಂಡುಬರುವ ಸೊಪ್ಪು ತರಕಾರಿಗಳು ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಭಾಗವಾಗಿದೆ ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಪೋಷಣ್ ಮಾಸಾಚರಣೆ ಅರ್ಥಪೂರ್ಣವಾಗಿದೆ ಎಂದರು. ಈ ಸಂದರ್ಭದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಸಹಭಾಗಿತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕರನಾರಾಯಣದಲ್ಲಿ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ನೆರವೇರಿತು. ರೋಟರಿ ವಲಯ 1ರ ಸಹಾಯಕ ಗವರ್ನರ್ ಜೆ. ಶ್ರೀನಾಥ್ ರಾವ್ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್‌ನ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ತಾಲೂಕು ವೈದ್ಯಾಧಿಕಾರಿ ಡಾ . ಪ್ರೇಮಾನಂದ, ರೋಟರಿ ವಲಯ 1ರ ಮೆಟರ್ನಲ್ ಅಂಡ್ ಚೈಲ್ಡ್ ಹೆಲ್ತ್ ಕೋ ಆರ್ಡಿನೇಟರ್ ಶೇಖರ್ ಎನ್. ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಕಮ್ಯುನಿಟಿ ಸರ್ವಿಸ್ ಚೇರ್ಮನ್ ಶಶಿಧರ ಶೆಟ್ಟಿ ಎಚ್., ಕಾರ್ಯಕ್ರಮದ ಸಂಯೋಜಕರಾದ ಶಂಕರ ಶೆಟ್ಟಿ ಯು., ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಡಾ. ವಿದ್ಯಾ ಅಶೋಕ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ನ ಸದಸ್ಯರಾದ ಸದಾನಂದ ಶೆಟ್ಟಿ ಎನ್., ನಿರಂಜನ್ ಶೆಟ್ಟಿ, ಸುಕುಮಾರ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ…

Read More