ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯಲ್ಲಿ ಜೂನ್ 14ರಿಂದ ಪ್ರಾರಂಭವಾಗುವ ಅನ್ಲಾಕ್ ಪ್ರಕ್ರಿಯೆಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ, ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ತಹಸಿಲ್ದಾರರುಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ. ಇಂದು ನಡೆದ ವಿಡಿಯೋ ಸಂವಾದದ ಮೂಲಕ ಎಲ್ಲಾ ಅಧಿಕಾರಿಗಳೊಂದಿಗೆ ಅವರು ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್ ನಿರ್ಬಂಧಗಳನ್ನು, ಎಲ್ಲಾ ಅಧಿಕಾರಿಗಳು ಮತ್ತು ಪಂಚಾಯತ್ ಗಳ ಸಹಕಾರದಿಂದ ಯಶಸ್ವಿಯಾಗಿ ಅನುಷ್ಠಾನ ಮಾಡಿದರ ಫಲವಾಗಿ ಜಿಲ್ಲೆಯಲ್ಲಿ ಸೋಂಕು ಹರಡುವುದು ಗಣನೀಯವಾಗಿ ಕಡಿಮೆಯಾಗಿದೆ. ಇದೇ ಕಾರಣದಿಂದ ಸರ್ಕಾರ ಜಿಲ್ಲೆಯಲ್ಲಿ ಅನ್ಲಾಕ್ ಘೋಷಣೆ ಮಾಡಿದ್ದು, ಈ ಕುರಿತಂತೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಪಾಸಿಟಿವಿಟಿ ದರವನ್ನು ಸೊನ್ನೆಗೆ ಇಳಿಸಬೇಕು ಎಂದು ಹೇಳಿದರು. ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಎಲ್ಲ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಮಾರ್ಗಸೂಚಿಯಲ್ಲಿ ಅನುಮತಿಸಲಾದ ಚಟುವಟಿಕೆಗಳನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ಠಾಣೆಯ ಪಿಸೈ ಸಂಗೀತಾ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಅಂಬಿಕಾ ನಗರ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾದೆ. ಬೈಂದೂರು ಠಾಣೆಗೆ ನೂತನ ಪಿಎಸೈ ಆಗಿರುವ ಪವನ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವ್ಯಾಸಂಗ ಹಾಗೂ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುವ 18 ರಿಂದ 44 ವರ್ಷ ವಯೋಮಾನದವರು ಲಸಿಕೆ ಪಡೆಯಲು ಅನೆಕ್ಸರ್-3 ಪಡೆಯುವುದು ಅಗತ್ಯವಾಗಿದ್ದು, ಅದಕ್ಕಾಗಿ ಉಡುಪಿಗೆ ತೆರಳುವುದನ್ನು ತಪ್ಪಿಸಿ ಕುಂದಾಪುರ ಹಾಗೂ ಬೈಂದೂರಿನಲ್ಲಿಯೇ ಲಭ್ಯವಾಗುವಂತೆ ಮಾಡಲಾಗಿದೆ. ಅನೆಕ್ಸರ್-3 ಪಡೆಯಲಿಚ್ಚಿಸುವವರು ಜೂನ್.14ರ ಸೋಮವಾರ ಬೆಳಿಗ್ಗೆ 10ರಿಂದ 1ರ ತನಕ ಬೈಂದೂರು ತಾಲೂಕು ಕಛೇರಿಯಲ್ಲಿ ಹಾಗೂ ಮಧ್ಯಾಹ್ನ 2 ರಿಂದ 5 ತನಕ ಕುಂದಾಪುರ ತಾಲೂಕು ಕಛೇರಿಗೆ ತೆರಳಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪಡೆಯಬಹುದಾಗಿದೆ. ವಿದೇಶಕ್ಕೆ ತೆರಳಲು ಲಸಿಕೆ ಪಡೆಯಲಿಚ್ಛಿಸುವವರು ಆಧಾರ್ ಕಾರ್ಡ್, ಪಾಸ್ಪೋರ್ಟ್, ನೌಕರನಾಗಿದ್ದರೆ ಕಂಪೆನಿಯ ಆಫರ್ ಲೆಟರ್, ವೀಸಾ, ವ್ಯಾಸಂಗಕ್ಕೆ ತೆರಳುತ್ತಿದ್ದರೆ ವಿದ್ಯಾಸಂಸ್ಥೆಯ ಪತ್ರ ಇವುಗಳ ಮೂಲಪ್ರತಿ ಹಾಗೂ ಸ್ವಯಂ ದೃಢೀಕೃತ ಜೆರಾಕ್ಸ್ ಪ್ರತಿಯೊಂದಿಗೆ ಬೈಂದೂರು ಹಾಗೂ ಕುಂದಾಪುರ ತಾಲೂಕು ಕಛೇರಿಯಲ್ಲಿ ನಿಗದಿತ ದಿನಾಂಕದಂದು ಸಲ್ಲಿಸಿ ಅನೆಕ್ಸರ್-3 ಪಡೆದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 215 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 1 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 85, ಕುಂದಾಪುರ, ಬೈಂದೂರು ತಾಲೂಕಿನ 80, ಕಾರ್ಕಳ, ಹೆಬ್ರಿ ತಾಲೂಕಿನ 49 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 215 ಪ್ರಕರಣಗಳಲ್ಲಿ 17 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 198 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 72 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 309 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3717 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3407 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 8846 ಮಂದಿಗೆ ಮೊದಲನೇ ಡೋಸ್, 1006 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 3,00,199 ಮಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ 11 ಜಿಲ್ಲೆ ಹೊರತುಪಡಿಸಿ ಕೊವೀಡ್ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಅನ್ ಲಾಕ್, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೆ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಜೂನ್ 14ರಿಂದ ಈ ನಿಯಮಗಳು ಜಾರಿಗೆ ಬರಲಿದ್ದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಗೆ ಅನ್ವಯವಾಗಲಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಶೇ.50ರಷ್ಟು ಸಿಬ್ಬಂದಿ ಬಳಸಿ ಎಲ್ಲಾ ಕಾರ್ಖಾನೆಗಳು ಆರಂಭ. ಕೋವಿಡ್ ಮಾರ್ಗಸೂಚಿ ಪಾಲಿಸಿ ಕೆಲಸ ಮಾಡಬೇಕು. ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ. ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ ಮಾಡಕೊಡಲಾಗಿದೆ. ಬಾರ್, ಹೋಟೆಲ್ ಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯಾದ್ಯಂತ ಉಲ್ಬಣಗೊಳ್ಳುತ್ತಿದ್ದ ಕೋವಿಡ್ ಸೋಂಕಿನ ಪ್ರಸರಣವನ್ನು ನಿಯಂತ್ರಿಸುವಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಮಾರ್ಗಸೂಚಿಗಳನ್ನು ಜಾರಿ ಮಾಡಿದ್ದ ರಾಜ್ಯ ಸರ್ಕಾರ, ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ರೂಪಿಸಿದ, ‘ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜಾರಿಗೊಳಿಸುವ ಮೂಲಕ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ಗಣನೀಯ ಪ್ರಮಾಣದಲ್ಲಿ ನಿಯಂತ್ರಿಸಲು ಸಹಕಾರಿಯಾಗಿದೆ.. ಜಿಲ್ಲೆಯಲ್ಲಿ ಅನುಷ್ಠಾನ ಮಾಡಿರುವ ‘ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ವೈದ್ಯರು, ಸ್ವಾಬ್ ಸಂಗ್ರಹಗಾರರು, ಗ್ರಾಮೀಣ ಕೋವಿಡ್ ಕಾರ್ಯಪಡೆಯ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಒಳಗೊಂಡ 73 ತಂಡಗಳನ್ನು ರಚಿಸಿದ್ದು, ತಂಡದ ಎಲ್ಲಾ ಸದಸ್ಯರು ಒಟ್ಟಾಗಿ ಗ್ರಾಮಗಳಿಗೆ ತೆರಳಲು ಅನುಕೂಲವಾಗುವಂತೆ, ಎಲ್ಲಾ ತಂಡಗಳಿಗೆ ಜಿಲ್ಲಾಡಳಿತದ ಮೂಲಕ ಪ್ರತ್ಯೇಕ ವಾಹನ ವ್ಯವಸ್ಥೆ ಒದಗಿಸಲಾಗಿದ್ದು, ರೋಗ ಲಕ್ಷಣಗಳಿರುವವರನ್ನು ಸ್ಥಳದಲ್ಲೇ ಕೋವಿಡ್ ಪರೀಕ್ಷೆ ನಡೆಸಲು ರ್ಯಾಟ್ ಕಿಟ್ ಗಳನ್ನು ಒದಗಿಸಿದ್ದು, ರ್ಯಾಟ್ ಟ್ ಪರೀಕ್ಷೆ ಮೂಲಕ ಸ್ಥಳದಲ್ಲೇ ಸೋಂಕಿತರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯ ಸರಕಾರದಿಂದ ‘ಎ’ ದರ್ಜೆಯ 50,000 ಧಾರ್ಮಿಕ ದತ್ತಿ ಇಲಾಖೆಯ ದೇಗುಲಗಳ ಸಿಬ್ಬಂದಿ ಹಾಗೂ ಅರ್ಚಕರಿಗೆ 1,500ರೂ. ಮೌಲ್ಯದ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಗುತ್ತಿದೆ ಹಾಗೂ ಎಲ್ಲ ಅರ್ಚಕರಿಗೆ ಲಾಕ್ಡೌನ್ ನಿಮಿತ್ತ ೩೦೦೦ರೂ. ಪ್ಯಾಕೇಜ್ ಒದಗಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ವತಿಯಿಂದ ಏರ್ಪಡಿಸಲಾಗಿದ್ದ ಬಡತನ ರೇಖೆಗಿಂತ ಕೆಳಗಿರುವ ೫೫೦ಕ್ಕೂ ಮಿಕ್ಕಿ ಕೊಲ್ಲೂರು ನಿವಾಸಿಗಳಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಸಚಿವರು ಜೂ.14ರ ನಂತರ ಲಾಕ್ಡೌನ್ ಹಂತ – ಹಂತವಾಗಿ ತೆರವುಗೊಳಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. ದೇಗುಲಗಳು ತೆರೆಯುವ ಬಗ್ಗೆ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಾಗಿದೆ ಭಕ್ತರ ನೂಕು ನುಗ್ಗಲಿನಿಂದ ಮತ್ತೆ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಸಾಮಾಜಿಕ ಅಂತರ ಕಾಯ್ದು ದೇಗುಲದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಇಲಾಖೆಯ ಅಧಿಕಾರಿಗಳೊಡನೆ ಚರ್ಚೆ ನಡೆಯುತ್ತಿದೆ ಎಂದರು. ಉಡುಪಿ ಹಾಗೂ ಮಂಗಳೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ನ ಸಾಧಕ-ಭಾದಕ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಏಳಜಿತ ಶ್ರೀ ರಾಮಕೃಷ್ಣ ಕುಟೀರದಿಂದ ಪರಿಸರದ ಆಟೋ ಚಾಲಕರಿಗೆ ದಿನಸಿ, ತರಕಾರಿ ಹಾಗೂ ಆಯುರ್ವೇದದ ಔಷದಿಗಳ ಕಿಟ್ ಗುರುವಾರ ಕುಟೀರದ ಆವರಣದಲ್ಲಿ ವಿತರಿಸಲಾಯಿತು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಕಿಟ್ ವಿತರಿಸಿ ಮಾತನಾಡಿ, ಕುಟೀರದ ವತಿಯಿಂದ ಈತನಕ ಅಗತ್ಯವುಳ್ಳವರನ್ನು ಗುರುತಿಸಿ 100ಕ್ಕೂ ಹೆಚ್ಚು ಕಿಟ್ಗಳನ್ನು ವಿತರಿಸಲಾಗಿದೆ. ಸಂಕಷ್ಟದ ಸಮಯದಲ್ಲಿ ಸಾಧ್ಯವಾದಷ್ಟು ನೆರವು ನೀಡಲಾಗಿದೆ. ಲಾಕ್ಡೌನ್ ಸಡಿಲಗೊಳಿಸಿರುದರಿಂದ ಕಿಟ್ ವಿತರಣಾ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಹಾಗೂ ಸಮಸ್ಯೆಗಳಿಗೆ ಆಸ್ಪದ ನೀಡದಂತೆ , ಅರ್ಹ ಸಾರ್ವಜನಿಕರಿಗೆ ಸಮರ್ಪಕವಾಗಿ ಲಸಿಕೆಯನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, ಆದ್ಯತಾ ವಲಯದಲ್ಲಿರುವವರು ಮತ್ತು ದುರ್ಬಲ ವರ್ಗದವರಿಗೆ ಸಮಪರ್ಕವಾಗಿ ಲಸಿಕೆ ನೀಡುವಂತೆ ತಿಳಿಸಿದ ಡಾ.ರೇಜು, ಲಸಿಕೆ ನೀಡುವ ಕುರಿತಂತೆ ಸಾರ್ವಜನಿಕರಿಗೆ ಸಾಕಷ್ಟು ಮುಂಚಿತವಾಗಿ ಮಾಹಿತಿ ನೀಡಿ, ಲಸಿಕಾ ಸ್ಥಳದಲ್ಲಿ ಅನಗತ್ಯವಾಗಿ ಜನದಟ್ಟಣಿ ಉಂಟಾಗದಂತೆ ಹಾಗೂ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಅರ್ಹರಿಗೆ ಲಸಿಕೆ ನೀಡಿ, ಲಸಿಕಾ ಉಸ್ತುವಾರಿಗೆ ನಿಯೋಜಿಸಿರುವ ಅಧಿಕಾರಿಗಳು ಲಸಿಕೆ ನೀಡುವ ಸ್ಥಳದಲ್ಲಿ ಸಮಸ್ಯೆಗಳು ಕಂಡುಬರದAತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 289 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 2 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 126, ಕುಂದಾಪುರ, ಬೈಂದೂರು ತಾಲೂಕಿನ 122, ಕಾರ್ಕಳ, ಹೆಬ್ರಿ ತಾಲೂಕಿನ 40 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 289 ಪ್ರಕರಣಗಳಲ್ಲಿ 13 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 276 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 74 ವರ್ಷದ ಪುರುಷ, ಕಾರ್ಕಳ ತಾಲೂಕಿನ 72 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 241 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3812 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3606 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 2146 ಮಂದಿಗೆ ಮೊದಲನೇ ಡೋಸ್, 304 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ.…
