Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 766 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 285, ಕುಂದಾಪುರ, ಬೈಂದೂರು ತಾಲೂಕಿನ 293, ಕಾರ್ಕಳ, ಹೆಬ್ರಿ ತಾಲೂಕಿನ 186 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 766 ಪ್ರಕರಣಗಳಲ್ಲಿ 17 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 749 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 62 ವರ್ಷದ ವೃದ್ಧೆ, 57 ವರ್ಷದ ಮಹಿಳೆ, 40 ವರ್ಷದ ಮಹಿಳೆ, ಕುಂದಾಪುರದ 51 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 835 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5942 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3396 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 6335 ಮಂದಿಗೆ ಮೊದಲನೇ…

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ. ಕುಂದಾಪುರ: ಪ್ರಸ್ತುತ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿಯಾಗಿರುವ ಡಾ. ನಾಗಭೂಷಣ ಉಡುಪ ಅವರನ್ನು ಉಡುಪಿ ಜಿಲ್ಲೆಯ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ (ಡಿಎಚ್ಓ) ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ಚಂದ್ರ ಸೂಡ ಮೇ 31ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಡಿಎಚ್ಓ ಸ್ಥಾನಕ್ಕೆ ಡಾ. ನಾಗಭೂಷಣ್ ಅವರು ಆಯ್ಕೆ ಆಗಿದ್ದು ಇದೇ ಮೇ 31ರಂದು ಡಾ. ಸುಧೀರ್ಚಂದ್ರ ಸೂಡ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.

Read More

‘ನಿನ್ನ ಕಷ್ಟ ನನಗೆ ಅರ್ಥವಾಗುತ್ತದೆ’ ಹೀಗೆ ನಾವು ಹೇಳುವ ಒಂದು ಚಿಕ್ಕ ವಾಕ್ಯ ಹಲವರ ಬದುಕಿನಲ್ಲಿ ಹೊಸ ಚೈತನ್ಯವನ್ನೇ ತುಂಬಬಹುದು. ನಮ್ಮ ಮಾತನ್ನು ಕೇಳಿಸಿಕೊಳ್ಳುವವರಿದ್ದಾರೆ. ನಮ್ಮ ನೋವಿಗೆ ಹೆಗಲಾಗುವವರಿದ್ದಾರೆ ಎಂಬ ಸಣ್ಣ ವಿಶ್ವಾಸವೂ ಕೂಡ ಮನುಷ್ಯನ ಬದುಕಿನ ದೊಡ್ಡ ಆತ್ಮವಿಶ್ವಾಸಕ್ಕೆ ದಾರಿಮಾಡಿಕೊಡಬಲ್ಲದು./ಕುಂದಾಪ್ರ ಡಾಟ್ ಕಾಂ/ ಕೀಳರಿಮೆ ಹೆಚ್ಚಾದಾಗ, ಪ್ರೀತಿಯಲ್ಲಿ ಸೋತಾಗ, ಉದ್ಯೋಗದಲ್ಲಿ ಅಂದುಕೊಂಡ ಯಶಸ್ಸು ಸಿಗದಾಗ, ಕಾಯಿಲೆಗಳು ಕಂಗೆಡಿಸಿದಾಗ, ಅವಮಾನದಿಂದ ಬೇಸತ್ತಾಗ… ಹೀಗೆ ಅನೇಕ ಕಾರಣಕ್ಕೆ ಜನರು ಖಿನ್ನತೆಗೆ ಜಾರುತ್ತಾರೆ. ನಮ್ಮ ಸುತ್ತಮುತ್ತಲಲ್ಲೇ ಹಲವರು ಖಿನ್ನತೆಯಿಂದ ನರಳುತ್ತಿರುತ್ತಾರೆ. ಅವರು ನಮ್ಮವರೇ ಆಗಿದ್ದಾಗ ಅವರನ್ನು ಸಮಾಧಾನ ಪಡಿಸಲು ಮನಸ್ಸು ಚಡಪಡಿಸಿದರೂ, ಏನು ಮಾತನಾಡಬೇಕೆಂಬುದು ಹಲವರಿಗೆ ತಿಳಿಯುವುದಿಲ್ಲ. ಇಂಥ ಸಂದರ್ಭದಲ್ಲಿ ಅವರಿಗೆ ಯಾವುದೇ ಕ್ಷಣ ಬೇಕಾದರೂ ನಾವಿರುವುದಾಗಿ ಅರಿವು ಮೂಡಿಸುವುದೇ ದೊಡ್ಡ ಬಲ. ಖಿನ್ನತೆಯಲ್ಲಿರುವವರ ಬಳಿ ಎಂಥ ಮಾತುಗಳು ಕೆಲಸ ಮಾಡಬಹುದು ಎಂಬ ಅರಿವಿದ್ದರೆ, ಹತ್ತಿರದವರನ್ನು ಈ ವೇದನೆಯಿಂದ ಹೊರತರಲು ಸಹಾಯ ಆಗಬಹುದು. ನಿನಗೇನಾಗುತ್ತಿದೆ ಎಂದು ನನ್ನಲ್ಲಿ ಹೇಳಿಕೋ. ಅರ್ಥ ಮಾಡಿಕೊಳ್ಳುತ್ತೇನೆ. ಇದರಿಂದ ನಿನ್ನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಡಲ್ಕೊರೆತ ಮತ್ತು ಚಂಡಮಾರುತದ ಹೊಡೆತದಿಂದ ಕಡಿದು ಹೋಗಿದ್ದ ಮರವಂತೆ ಕರಾವಳಿ ಮಾರ್ಗವನ್ನು ಮರುಜೋಡಿಸುವ ಕೆಲಸ ಪೂರ್ಣಗೊಂಡಿದ್ದು, ಅದೀಗ ಜನ ಮತ್ತು ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮರವಂತೆ ಮೀನುಗಾರಿಕಾ ಹೊರಬಂದರಿನ ಉತ್ತರ ತಡೆಗೋಡೆಯ ಉತ್ತರದ ತೀರ ಪ್ರದೇಶ ನಿರಂತರ ಕಡಲ್ಕೊರೆತದಿಂದ ನಶಿಸುತ್ತಿತ್ತು. ಈಚಿನ ಚಂಡಮಾರುತದ ವೇಳೆ ಸಮುದ್ರದ ಮಟ್ಟ ಹೆಚ್ಚಿ, ಅಲೆಗಳ ಅಬ್ಬರ ತೀವ್ರಗೊಂಡ ಕಾರಣ ೩೫೦ ಮೀಟರು ಉದ್ದದ ರಸ್ತೆ ತುಂಡಾಗಿ ಸಂಪರ್ಕ ಕಡಿತಗೊಂಡಿತ್ತು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ಹಿಂದಿನ ವಾರ ಭೇಟಿನೀಡಿ ತಾತ್ಕಾಲಿಕವಾಗಿ ಸಂಪರ್ಕ ಕಲ್ಪಿಸುವ ಭರವಸೆ ನೀಡಿದ್ದರು. ಅದರಂತೆ ಮರುದಿನದಿಂದಲೇ ಇಲ್ಲಿ ಸಮುದ್ರ ತೀರದುದ್ದಕ್ಕೆ ಕಲ್ಲಿನ ತಡೆ ನಿರ್ಮಿಸಿ, ಕುಸಿದ ರಸ್ತೆಯ ಭಾಗವನ್ನು ಎತ್ತರಿಸುವ ಕಾಮಗಾರಿ ಆರಂಭವಾಯಿತು. ಈಗ ಅದರ ಮೇಲೆ ಕಚ್ಚಾ ರಸ್ತೆ ನಿರ್ಮಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ನೀಡಿದ ಭರವಸೆಯಂತೆ ರಸ್ತೆ ಸಂಪರ್ಕ ಮರುಸ್ಥಾಪಿಸಲು ಕಾರಣರಾದ ಶಾಸಕರು ಮತ್ತು ಸಚಿವರಿಗೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಚಿಕಿತ್ಸೆ ನೀಡುತ್ತಿರುವ ಸರಕಾರಿ ಹಾಗೂ ಖಾಸಗಿ ನೋಂದಾಯಿತ ಆಸ್ಪತ್ರೆಗಳಿಗೆ ಆರೋಗ್ಯ ಮಿತ್ರರನ್ನು ತಾತ್ಕಾಲಿಕ ನೆಲೆಯಲ್ಲಿ( ಸುಮಾರು 3 ತಿಂಗಳ ಅವಧಿಗೆ) ಒಟ್ಟು 14 ಹುದ್ದೆಗಳಿಗೆ ( ಉಡುಪಿ-9, ಬ್ರಹ್ಮಾವರ-1, ಕುಂದಾಪುರ-3, ಕಾರ್ಕಳ-1) ನೇಮಕಾತಿಗೊಳಿಸುವ ಬಗ್ಗೆ ಸ್ಥಳೀಯ ಅರ್ಹ ಅಭ್ಯರ್ಥಿಗಳಿಗೆ ಮೇ 29ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ,ರಜತಾದ್ರಿ ಮಣಿಪಾಲ ಉಡುಪಿ ಇಲ್ಲಿ ಅಭ್ಯರ್ಥಿಗಳ ನೇರ ಸಂದರ್ಶನ ನಡೆಸಲಾಗುವುದು. ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ಪದವಿ, ಕಂಪ್ಯೂಟರ್ ನಲ್ಲಿ ಕೆಲಸ ಮಾಡಿದ ಅನುಭವ ಇರುವ ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ವಿದ್ಯಾರ್ಹತೆಯ ಮೂಲ ದಾಖಲಾತಿ, ಆಧಾರ್ಕಾರ್ಡ್ ಹಾಗೂ ಇವುಗಳ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗುವಂತೆ ಹಾಗೂ ಆಯ್ಕೆಯಾದವರಿಗೆ ಪ್ರತೀ ಮಾಹೆ ರೂ.15,000 ಗೌರವಧನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಗಂಗೊಳ್ಳಿಯ ಜಾಮಿಯಾಥುಲ್ ಮುಸ್ಲಿಮಿನ್ ಟ್ರಸ್ಟ್ ಕರೋನಾ ಮಹಾಮಾರಿ ಕಟ್ಟಿಹಾಕಲು ಮಾದರಿ ಕಾರ್ಯ ಮಾಡುವ ಮೂಲಕ ಗಮನ ಸೆಳೆದಿದೆ. ಗಂಗೊಳ್ಳಿ ಪರಿಸರದಲ್ಲಿ ಕೋವಿಡ್ ಸೋಂಕಿನ ಕುರಿತು ಪರಿಸರದ ಜನರಲ್ಲಿ ಜಾಗೃತಿ ಮೂಡಿಸುದರೊಂದಿಗೆ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಆಶಾ ಕಾರ್ಯಕರ್ತೆಯೊಡಗೂಡಿ ಮನೆ ಮನೆಗೆ ತೆರಳಿ ಕೋವಿಡ್ ಪರೀಕ್ಷೆ ನಡೆಸಿ ಗ್ರಾಮದಲ್ಲಿ ಸೋಂಕು ನಿವಾರಣೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಜಾಮಿಯಾಥುಲ್ ಮುಸ್ಲಿಮಿನ್ ಟ್ರಸ್ಟ್ ಅಧ್ಯಕ್ಷ ಪಿ.ಎಂ.ಹಸೈನಾರ್ ಮತ್ತು ಕಾರ್ಯದರ್ಶಿ ಜಿ.ರೆಹಾನ್ ಅಹ್ಮದ್ ಹಾಗೂ ಟ್ರಸ್ಟ್‌ನ ಸದಸ್ಯರ ಮುಂದಾಳುತ್ವದಲ್ಲಿ ಗಂಗೊಳ್ಳಿಯ ಮೂರು ವಠಾರಗಳಲ್ಲಿನ ಸುಮಾರು ೧೫೦ ಕ್ಕೂ ಮಿಕ್ಕಿ ಮನೆಯ ಸದಸ್ಯರನ್ನು ಕೋವಿಡ್ ಪರೀಕ್ಷೆ ಒಳಪಡಿಸಲಾಗಿದೆ. ಪಾಸಿಟಿವ್ ಇದ್ದವರನ್ನು ಹೋಮ್ ಐಸೋಲೇಶನ್ ಮಾಡಿಸಿ ಅವರ ಚಲನವಲನಗಳ ಮೇಲೆ ನಿಗಾ ಇರಿಸುವ ಕೆಲಸವನ್ನೂ ಮಾಡಲಾಗುತ್ತಿದೆ ಅಲ್ಲದೆ ತುರ್ತು ಚಿಕಿತ್ಸೆ ಅಗತ್ಯವಿದ್ದವರನ್ನು ಆಸ್ಪತ್ರೆಗೆ ದಾಖಲಿಸಲು ಕ್ರಮಕೈಗೊಳ್ಳಲಾಗುತ್ತಿದೆ. ವ್ಯಾಪಕವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 905 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 420, ಕುಂದಾಪುರ, ಬೈಂದೂರು ತಾಲೂಕಿನ 246, ಕಾರ್ಕಳ, ಹೆಬ್ರಿ ತಾಲೂಕಿನ 233 ಮಂದಿಗೆ ಹಾಗೂ ಹೊರ ಜಿಲ್ಲೆಯ 6 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 905 ಪ್ರಕರಣಗಳಲ್ಲಿ 30 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 875 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ► ಉಡುಪಿ ಜಿಲ್ಲೆಯ ಬ್ಯಾಂಕುಗಳ ಕೆಲಸದ ಸಮಯ ಬದಲಿಸಲು ಆದೇಶ  – https://kundapraa.com/?p=48719 . ಇಂದು ಉಡುಪಿಯ 69 ವರ್ಷದ ವೃದ್ಧೆ, 70 ವರ್ಷದ ವೃದ್ಧ, ಕುಂದಾಪುರದ 78 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 753 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6015 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3648 ಮಂದಿಗೆ ಕೋವಿಡ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಮೇ 27: ಪ್ರಸ್ತುತ ಕೋವಿಡ್-19 ನಿರ್ಬಂಧಗಳ ಸಂದರ್ಭದಲ್ಲಿ, ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೌಲಭ್ಯಗಳು ಅತೀ ಅವಶ್ಯವಿರುವುದರಿಂದ, ಕೋವಿಡ್ 19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಬ್ಯಾಂಕುಗಳ ವ್ಯವಹಾರ ಹಾಗೂ ಕೆಲಸದ ಸಮಯವನ್ನು ಬದಲಿಸಲು ಸೂಚಿಸಲಾಗಿದೆ. ಮೇ 28 ರಿಂದ ಜೂನ್ 6ರ ವರೆಗೆ ಬ್ಯಾಂಕ್ ಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರ ವರೆಗೆ ವ್ಯವಹಾರದ ಸಮಯ ಮತ್ತು ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವೆಗೆ ಕೆಲಸದ ಸಮಯ ಎಂದು ನಿಗದಿಗೊಳಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು, ಮೇ.27: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ, ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ್ ಕತ್ತಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಬತ್ತದ ತಳಿಗಳಾದ ಎಂಒ-4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಸಭೆ ಸುದೀರ್ಘ ಚರ್ಚೆ ನಡೆಸಿ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ಥಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಂಡಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ಕ್ಷೇತ್ರದ ಜನತೆಯ ನಾಡಿಮಿಡಿತ ಅರಿತಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಜಲಜೀವನ್ ಮಿಷನ್ ಯೋಜನೆಯಡಿ 396 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಮನೆ-ಮನೆಗೂ ಶುದ್ದ ಕುಡಿಯುವ ನೀರು ಒದಗಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಇದರಿಂದಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ಆರ್‌ಐಡಿಎಫ್ ಅಡಿಯಲ್ಲಿ ನಬಾರ್ಡ್ ಸಾಲದ ನೆರವಿನಿಂದ ಬೈಂದೂರು ವಿಧಾನಸಭಾ ಕ್ಷೇತ್ರದ 788 ಗ್ರಾಮೀಣ ಜನವಸತಿಗಳಿಗೆ ಈ ಯೋಜನೆ ಅನುಷ್ಠಾನಗೊಳ್ಳಲಿದ್ದು, ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಮುಕ್ತಿ ದೊರೆಯಲಿದೆ. ಟೆಂಡರ್ ಪ್ರಕ್ರಿಯೆಯ ಬಳಿಕ ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದಿರುವ ಅವರು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೂ ಹಾಗೂ ಯೋಜನೆ ರೂಪಿಸಲು ಸಹಕರಿಸಿದ್ದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More