Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೋಂಕು ದೃಢಪಟ್ಟವರನ್ನು ಮನವೊಲಿಸುವುದರೊಂದಿಗೆ ಅವರುಗಳನ್ನು ಕೋವಿಡ್ ಕೇರ್ ಸೆಂಟರ್‌ಗೆ ವರ್ಗಾಯಿಸಿ, ಚಿಕಿತ್ಸೆ ನೀಡಲು ಗ್ರಾಮ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಮುಂದಾಗಬೇಕು ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಣಿಪಾಲ್ನ ರಜತಾದ್ರಿಯ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಹಾಲ್‌ನಲ್ಲಿ ಕೋವಿಡ್ ನಿಯಂತ್ರಣ ಕುರಿತು ಉಡುಪಿ ಹಾಗೂ ಕಾಪು ತಾಲೂಕಿನ ಗ್ರಾಮ ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸದಸ್ಯರುಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲನೆ ನಡೆಸಿದರು. ಸಾಮಾನ್ಯವಾಗಿ ಗ್ರಾಮೀಣ ಭಾಗಗಳಲ್ಲಿ ವಾಸಿಸುವ ಜನರ ಮನೆಗಳಲ್ಲಿ ಪ್ರತ್ಯೇಕವಾಗಿರಲು ಕೊಠಡಿ ಸೇರಿದಂತೆ ಶೌಚಾಲಯದ ವ್ಯವಸ್ಥೆ ಇರುವುದಿಲ್ಲ. ಗ್ರಾಮೀಣ ಜನರಿಗೆ ಸೋಂಕು ದೃಢಪಟ್ಟಾಗ ಅವರುಗಳ ರೋಗ ಲಕ್ಷಣದ ಬಗ್ಗೆ ಮಾಹಿತಿ ಹೊಂದಿ ಅವಶ್ಯವಿದ್ದಲ್ಲಿ ಆಸ್ಪತ್ರೆಗೆ ವರ್ಗಾಯಿಸಬೇಕು. ತಪ್ಪಿದ್ದಲ್ಲಿ ಅವರುಗಳನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ವರ್ಗಾಯಿಸಿ, ಚಿಕಿತ್ಸೆ ನೀಡುವ ಕಾರ್ಯವನ್ನು ಗ್ರಾಮ ಮಟ್ಟದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಾಡಬೇಕು ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಗಂಗೊಳ್ಳಿ ಪೊಲೀಸರಿಗೆ ಮತ್ತು ಮಾಸ್ಕ್ ಸ್ಯಾನಿಟೈಸರ್‌ಗಳನ್ನು ನೀಡಲಾಯಿತು. ಸಂಘದ ಅಧ್ಯಕ್ಷರಾದ ರಾಜು ಪೂಜಾರಿ ಅವರು ಗಂಗೊಳ್ಳಿ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ನಂಜಾ ನಾಯ್ಕ ಎನ್. ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಎಂ.ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಿನಾಯಕ ರಾವ್ ಮರವಂತೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳಿವೆಗದ್ದೆ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕೋವಿಡ್ 2ನೇ ಅಲೆಯಲ್ಲಿ ತತ್ತರಿಸುವ ದೇಶವಾಸಿಗಳನ್ನು ಇನ್ನಿಲದಂತೆ ಕಾಡುತ್ತಿರುವ ಬ್ಲಾಕ್ ಫಂಗಸ್ (ಕಪ್ಪು ಶೀಲಿಂದ್ರ) ಕಾಯಿಲೆಯನ್ನು ವಾಸಿ ಮಾಡಲು ಬಳಸುತ್ತಿರುವ ಔಷಧಿಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವುದು ಲಿಪೊಸೊಮನ್ ಆಂಪೊಟೆರಿಸಿನ್ ಬಿ ಎನ್ನುವ ಔಷಧಿ. ಲಿಪೊಸೊಮನ್ ಆಂಪೊಟೆರಿಸಿನ್ ಕಂಡು ಹಿಡಿಯಲು ಶ್ರಮ ಪಟ್ಟಿರುವ ಭಾರತ ಸೀರಮ್ಸ್ ಎಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪೆನಿಯ ಸಂಶೋಧಕ ತಂಡದ ನೇತೃತ್ವ ವಹಿಸಿದವರು ಕುಂದಾಪುರ ಮೂಲದವರಾದ ಬಾಂಡ್ಯ ಶ್ರೀಕಾಂತ ಪೈ. ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿ ಮೂಲದ ಬಾಂಡ್ಯ ಶ್ರೀಕಾಂತ ಪೈ, ಗಂಗೊಳ್ಳಿ ಹಾಗೂ ಕುಂದಾಪುರದಲ್ಲಿ ಪ್ರೌಢ ಹಾಗೂ ಪಿಯುಸಿ ಶಿಕ್ಷಣವನ್ನು ಮುಗಿಸಿ, ಬೆಂಗಳೂರಿನಲ್ಲಿ 1975ರಲ್ಲಿ ಬಿ. ಫಾರ್ಮ ಮತ್ತು ಮಣಿಪಾಲದಲ್ಲಿ 1977ರಲ್ಲಿ ಎಂ.ಫಾರ್ಮ ಶಿಕ್ಷಣ ಪಡೆದುಕೊಂಡು, ಉದ್ಯೋಗಕ್ಕಾಗಿ ಮುಂಬೈನಲ್ಲಿರುವ ಭಾರತ್ ಸೀರಮ್ಸ್ ಎಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪೆನಿ ಸೇರಿದ್ದರು. ವ್ಯಾಪಕ ಸಂಶೋಧನಾ ಕಾರ್ಯಗಳ ಬಳಿಕ ಭಾರತ್ ಸೀರಮ್ಸ್ ಮತ್ತು ವ್ಯಾಕ್ಸಿನ್ ಲಿಮಿಟೆಡ್‍ನಲ್ಲಿ ಕೆಲಸ ಮಾಡುತ್ತಿದ್ದಾಗ ಆಂಬಿಸೋಮ್ ಔಷಧಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 640 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 368, ಕುಂದಾಪುರ, ಬೈಂದೂರು ತಾಲೂಕಿನ 155, ಕಾರ್ಕಳ, ಹೆಬ್ರಿ ತಾಲೂಕಿನ 115 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 640 ಪ್ರಕರಣಗಳಲ್ಲಿ 18 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 622 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 33 ವರ್ಷದ ಪುರುಷ, 67 ವರ್ಷದ ವೃದ್ಧೆ, 65 ವರ್ಷದ ವೃದ್ಧ, ಕಾರ್ಕಳದ 54 ವರ್ಷದ ಪುರಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 695 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5792 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2864 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 6648 ಮಂದಿಗೆ ಮೊದಲನೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 7 ಮಂದಿ ಅರ್ಹ ಫಲಾನುಭವಿಗಳಿಗೆ ತಲಾ 3.90ಲಕ್ಷ ರೂ. ಮೌಲ್ಯದ ದೋಣಿ ಮತ್ತಿತರ ಮೀನುಗಾರಿಕಾ ಸಲಕರಣೆಗಳನ್ನು ಮಂಗಳವಾರ ವಿತರಿಸಲಾಯಿತು. ಗಂಗೊಳ್ಳಿಯ ಮ್ಯಾಂಗನೀಸ್ ವಾರ್ಫ್ ಬಳಿ ಫಲಾನುಭವಿಗಳಿಗೆ ದೋಣಿ ಮತ್ತಿತರ ಮೀನುಗಾರಿಕಾ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಸರಕಾರ ಮೀನುಗಾರರಿಗೆ ನೀಡಿದ ಯೋಜನೆಯ ಸದುಪಯೋಗ ಪಡೆದುಕೊಂಡು ಉತ್ತಮ ಮೀನುಗಾರಿಕೆ ನಡೆಸಬೇಕು. ಮೀನುಗಾರರು ನೆಮ್ಮದಿಯ ಜೀವನ ನಡೆಸುವಂತಾಗಬೇಕು. ಸರಕಾರದಿಂದ ಸಾಧ್ಯವಾದಷ್ಟು ಸಹಾಯವನ್ನು ಮೀನುಗಾರರಿಗೆ ಮಾಡಲು ಪ್ರಯತ್ನಿಸುವುದಾಗಿ ಹೇಳಿದರು. ಸುಮಾರು 3.90ಲಕ್ಷ ರೂ. ಮೌಲ್ಯದ ಮೀನುಗಾರಿಕಾ ದೋಣಿ, ಇಂಜಿನ್, ಬಲೆ, ಲೈಫ್ ಜಾಕೆಟ್, ಶಾಖ ನಿರೋಧಕ ಪೆಟ್ಟಿಗೆಯನ್ನು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಉಡುಪಿ ಮೀನುಗಾರಿಕೆ ಇಲಾಖೆ ಹಿರಿಯ ಉಪನಿರ್ದೇಶಕ ಗಣೇಶ ಕೆ., ಕುಂದಾಪುರ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಸುಮಲತಾ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಮಂಗಳವಾರ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಮೀಟರ್, ಸ್ಯಾನಿಟೈಸರ್ ಮತ್ತು ಮಾಸ್ಕ್‌ಗಳನ್ನು ನೀಡಲಾಯಿತು. ಸಂಘದ ಅಧ್ಯಕ್ಷರಾದ ರಾಜು ಪೂಜಾರಿ ಮಾತನಾಡಿ, ಕೊರೋನಾ ತಡೆಗಟ್ಟುವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯ ಪ್ರಮುಖವಾದುದು. ಅವರ ಸೇವೆಯನ್ನು ಗುರುತಿಸಬೇಕಾಗಿದೆ ಎಂದರು ಈ ಸಂದರ್ಭ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ, ಮರವಂತೆ ಗ್ರಾಮ ಪಂಚಾಯತ್ ಸದಸ್ಯ ಕರುಣಾಕರ ಆಚಾರ್ಯ, ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಿನಾಯಕ ರಾವ್ ಮರವಂತೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳಿವೆಗದ್ದೆ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಕುಂದಾಪುರ ವಿಧಾನಸಭಾ ಕ್ಷೇತ್ರ ಮಟ್ಟದ ಸಭೆ ಸೋಮವಾರ ನಡೆಯಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ , ಜನರು ಜವಾಬ್ದಾರಿಯಿಂದ ವರ್ತಿಸಬೇಕು. ಜನರು ಸ್ವರಕ್ಷಣೆ ಮಾಡಿಕೊಳ್ಳುವುದರ ಜತೆಗೆ ಇತರರ ರಕ್ಷಣೆಗೆ ನೆರವಾಗಬೇಕು, ಕುಂದಾಪುರ ವಿಧಾನಸಭಾ ಕ್ಷೇತ್ರದ 37 ಗ್ರಾಮ ಪಂಚಾಯಿತಿ 1 ಪಟ್ಟಣ ಪಂಚಾಯಿತಿ ಮತ್ತು 1 ಪುರಸಭೆ ವ್ಯಾಪ್ತಿಯಲ್ಲಿ ಮೊಬೈಲ್ ಯೂನಿಟ್ ಘಟಕ ಸಂಚರಿಸಲು ಅನುಕೂಲವಾಗುವಂತೆ 19 ವಾಹನಗಳು ಬೇಕಾಗುತ್ತದೆ. ಈ ಬಗ್ಗೆ ಸರಕಾರಕ್ಕೆ ಬರೆಯಲಾಗುವುದು ಎಂದು ಹೇಳಿದರು. ಬಳಿಕ ಸಭೆಯಲ್ಲಿ ಕುಂದಾಪುರ ಸಹಾಯಕ ಕಮಿಷನರ್ ಕೆ. ರಾಜು ಮಾತನಾಡಿ, ಸರಕಾರಿ ನಿರ್ದೇಶನದಂತೆ ಕೋವಿಡ್ ಪರೀಕ್ಷೆಯ ಹಿನ್ನೆಲೆಯಲ್ಲಿ ಗ್ರಾಮಾಂತರದಲ್ಲಿ ಮೊಬೈಲ್ ಕ್ಲಿನಿಕ್ ಯೂನಿಟ್ ಸಂಚರಿಸಲಿದೆ. ಪ್ರತಿಯೊಬ್ಬರು ಕೋವಿಡ್ ಪರಿಕ್ಷೇಗೆ ಒಳಪಟ್ಟು ಸೋಂಕು ಗೆಲ್ಲಲು ಪ್ರಯತ್ನಿಸಬೇಕು ಗ್ರಾಮಕ್ಕೆ ಒಂದು ಆಂಬ್ಯುಲೆನ್ಸ್ ನೀಡುವ ತೀರ್ಮಾನವನ್ನು ಸರಕಾರ ತೆಗೆದುಕೊಂಡಿದೆ. ಗ್ರಾಮ ಮಟ್ಟದ ಟಾಸ್ಕ್‌ಫೋರ್ಸ್ ಕಾರ್ಯಪಡೆ ಜವಾಬ್ದಾರಿ ನಿರ್ವಹಿಸಬೇಕು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಹೆಚ್ಚಿನ ಸಹಾಯಕ ಆರೋಗ್ಯ ಪರಿಣಿತರ ಅಗತ್ಯವಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ಆಸಕ್ತ ಯುವಕ / ಯುವತಿಯರಿಗೆ ಎಮರ್ಜೆನ್ಸಿ ಮೆಡಿಕಲ್ ಟೆಕ್ನೀಷಿಯನ್ (ಪಿ.ಯು.ಸಿ ವಿಜ್ಞಾನ), ಜನರಲ್ ಡ್ಯೂಟಿ ಅಸಿಸ್ಟೆಂಟ್ (10 ನೇ ತರಗತಿ), ಜನರಲ್ ಡ್ಯೂಟಿ ಅಸಿಸ್ಟೆಂಟ್- ಕ್ರಿಟಿಕಲ್ ಕ್ಯಾರ್ (10 ನೇ ತರಗತಿ), ಹೋಮ್ ಹೆಲ್ತ್ ಏಡ್ (10 ನೇ ತರಗತಿ), ಮೆಡಿಕಲ್ ಇಕ್ಯೂಪ್ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ (10 ನೇ ತರಗತಿ), ಫ್ಲೆಬೋಟೋಮಿಸ್ಟ್ (ಪಿ.ಯು.ಸಿ ವಿಜ್ಞಾನ) ಮತ್ತು ಮೆಡಿಕಲ್ ರೆಕಾರ್ಡ್ ಅಸಿಸ್ಟೆಂಟ್ (ಪಿ.ಯು.ಸಿ ವಿಜ್ಞಾನ) ಜಾಬ್ ರೋಲ್ಗಳಲ್ಲಿ ತುರ್ತು ತರಬೇತಿ ನೀಡಿ, ಆರೋಗ್ಯ ಸೇವೆಯಲ್ಲಿ ತಾತ್ಕಾಲಿಕವಾಗಿ ನಿಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳನ್ನು ಇ-ಮೇಲ್ udupikaushalya@gmail.comಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9449943452 ಅಥವಾ 9480259790 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸಲು, ವೈದ್ಯರು ಮತ್ತು ಸ್ವಾö್ಯಬ್ ಸಂಗ್ರಹಿಸುವ ಸಿಬ್ಬಂದಿಗಳು ಮನೆ ಮನೆಗಳಿಗೆ ಭೇಟಿ ನೀಡಿ, ಗ್ರಾಮದ ಎಲ್ಲಾ ಸಾರ್ವಜನಿಕರನ್ನು ತಪಾಸಣೆಗೆ ಒಳಪಡಿಸಿ, ಸೋಂಕಿನ ಲಕ್ಷಣಗಳಿದ್ದಲ್ಲಿ ಸ್ಥಳದಲ್ಲೇ ತಪಾಸಣೆ ನಡೆಸಿ, ರೋಗದ ಕುರಿತು ಅರಿವು ಮೂಡಿಸುವ ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಮೇ 25ರಿಂದ ಜಿಲ್ಲೆಯಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ 155 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿನ 59 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ, ಮನೆ ಮನೆಗಳಿಗೆ ಭೇಟಿ ನೀಡಿ, ಮನೆಯಲ್ಲಿ ಸೋಂಕಿನ ಲಕ್ಷಣಗಳಿದ್ದವರನ್ನು ರ್ಯಾಟ್ ಪರೀಕ್ಷೆ ಮೂಲಕ ಪರೀಕ್ಷಿಸಬೇಕು. ಪಾಸಿಟಿವ್ ಕಂಡುಬಂದಲ್ಲಿ ರೋಗಿಯ ಗುಣಲಕ್ಷಣದ ಆಧಾರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆ ನೀಡಲು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್‌ಗಳನ್ನು ಮೀಸಲಿಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಅವರು ಬೆಂಗಳೂರಿನ ವಿಕಾಸಸೌಧದಿಂದ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ರೋಗದಿಂದ ಒಬ್ಬರು ಮೃತಪಟ್ಟಿದ್ದು, ಒಂದು ರೋಗಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ಗೆ ರವಾನಿಸಲಾಗಿದೆ. ಜಿಲ್ಲೆಯಲ್ಲಿಯೇ ಬ್ಲಾಕ್ ಫಂಗಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ 10 ಹಾಸಿಗೆಯ ಕೊಠಡಿಯನ್ನು ಕೂಡಲೇ ಸಿದ್ಧಪಡಿಸುವಂತೆ ಸೂಚನೆ ನೀಡಿದ ಸಚಿವರು, ಬ್ಲಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಶೀಘ್ರದಲ್ಲಿಯೇ ಜಿಲ್ಲೆಗೆ ಸರಬರಾಜು ಮಾಡಲಾಗುವುದು. ಜಿಲ್ಲೆಗೆ ಹೊರಜಿಲ್ಲೆಗಳಿಂದಲೂ ಬ್ಲಾಕ್ ಫಂಗಸ್ ಚಿಕಿತ್ಸೆಗೆ ರೋಗಿಗಳು ಆಗಮಿಸುತ್ತಿದ್ದು, ಹೆಚ್ಚಿನ ಔಷಧಿಯನ್ನು ಸರಬರಾಜು ಮಾಡಲಾಗುವುದು ಎಂದರು. ಕೋವಿಡ್ ಚಿಕಿತ್ಸೆಗೆ ದಾಖಲಾಗುವ ಎಲ್ಲಾ ರೋಗಿಗಳಿಗೆ ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಚಿಕಿತ್ಸೆ ದೊರಕಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ…

Read More