ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ಕೇಂದ್ರ ತಂಡವು, ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದರು. ಕೇಂದ್ರ ತಂಡದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸೂಪರಿಟೆಂಡೆಂಟ್ ಇಂಜನಿಯರ್ ಸದಾನಂದ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪೊನ್ನು ಸ್ವಾಮಿ ಹಾಗೂ ಇವರೊಂದಿಗೆ ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಆಯುಕ್ತ ಮನೋಜ್ ರಾಜನ್, ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಹಿರಿಯ ವಿಜ್ಞಾನಿ ಡಾ.ಶ್ರೀನಿವಾಸ ರೆಡ್ಡಿ ಇದ್ದರು. ಬೈಂದೂರು ತಾಲೂಕಿನ ಬೈಂದೂರು, ಉಪ್ಪುಂದ, ಮೆಡಿಕಲ್, ಮರವಂತೆ, ಕಾಪು ತಾಲೂಕಿನ ಕಾಪುಲೈಟ್ ಹೌಸ್, ಕೈಪುಂಜಾಲು ಉಡುಪಿ ತಾಲೂಕಿನ ಪಡುಬಿದ್ರೆ ಬೀಚ್ ಮತ್ತು ಬ್ಲೂ ಫ್ಲಾಗ್ ಬೀಚ್ ಗೆ ಭೇಟಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ವಿಬಾಗಾಧಿಕಾರಿ ರಾಜು , ಬೈಂದೂರು ತಹಸೀಲ್ದಾರ್ ಶೋಭಾಲಕ್ಷಿ ಎಚ್. ಎಸ್., ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್, ಕಾಪು ತಹಸೀಲ್ದಾರ್ ಪ್ರತಿಭಾ ಮತ್ತಿತರರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ: ಇತ್ತಿಚಿಗೆ ಹತ್ಯೆಗೀಡಾದ ಯಡಮೊಗೆ ಗ್ರಾಮದ ಉದಯ ಗಾಣಿಗ ಅವರ ಕುಟುಂಬಕ್ಕೆ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ರೂ.1 ಲಕ್ಷವನ್ನು ಮಾನವೀಯ ನೆಲೆಯಲ್ಲಿ ಹಸ್ತಾಂತರಿಸಿದರು. ನೆರವು ಹಸ್ತಾಂತರಿಸಿ ಸಾಂತ್ವಾನದ ಮಾತನಾಡಿದ ಅವರು, ಪೋಲಿಸರು ಈಗಾಗಲೇ ತಪ್ಪಿತಸ್ಥರನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕಾನೂನು ಪ್ರಕಾರ ಆರೋಪಿಗಳಿಗೆ ಶಿಕ್ಷೆಯಾಗುತ್ತದೆ. ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ನಾವು ಪಕ್ಷ ಬದ್ಧವಿದೆ ಎಂದರು. ಈ ಸಂದರ್ಭ ಬಿಜೆಪಿ ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜೆಡ್ಡು ಮತ್ತು ಪ್ರಿಯದರ್ಶಿನಿ ಬೆಸ್ಕೂರು, ಮಾಜಿ ಜಿ.ಪಂ.ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಹರ್ಷ ಮೆಲ್ಕೋಡ್, ಪ್ರವೀಣ್ ಕುಮಾರ್ ಶೆಟ್ಟಿ ಕೊಡ್ಲಾಡಿ, ಶ್ರೀಗಣೇಶ್ ಉಪ್ಪುಂದ, ರವಿ ಗಾಣಿಗ ಮಲ್ಲಾರಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ಹಾಗೂ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಾಗುವ ಒಟ್ಟು 40,000 ರೂ. ಮೊತ್ತದ ಅಗತ್ಯ ಪರಿಕರಗಳನ್ನು ಹಸ್ತಾಂತರಿಸಲಾಯಿತು. ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅಗತ್ಯ ಪರಿಕರಗಳನ್ನು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಶಿರೂರು ಗ್ರಾ.ಪಂ ಅಧ್ಯಕ್ಷೆ ದಿಲ್ಶಾದ್ ಬೇಗಂ, ಬೈಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಂದಿನಿ, ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಹನಾ, ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ, ನಿರ್ದೇಶಕರಾದ ಚಿಕ್ಕು ಪೂಜಾರಿ, ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಶಿರೂರು ಶಾಖೆಯ ವ್ಯವಸ್ಥಾಪಕ ನಾಗರಾಜ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಒಲಂಪಿಕ್ಸ್‌ಗಾಗಿ ವಿದೇಶಕ್ಕೆ ತೆರಳುವ ಫಲಾನುಭವಿಗಳಿಗೆ ಲಸಿಕಾಕರಣಕ್ಕಾಗಿ ಅಗತ್ಯವಿರುವ ಅನುಬಂಧ-4 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ, ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಮೊ.ನಂ: 8277734612 ಹಾಗೂ ಈಗಾಗಲೇ ಮೊದಲನೇ ಡೋಸ್ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್ಪೋರ್ಟ್ ನಂಬರನ್ನು ಬಳಸದೇ ಲಸಿಕೆ ಪಡೆದಿದ್ದರೆ ಅಂತಹ ಫಲಾನುಭವಿಗಳಿಗೆ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕಾಕರಣಕ್ಕಾಗಿ ಅನುಬಂಧ-5 ರಲ್ಲಿ ಲಸಿಕಾ ಪ್ರಮಾಣ ಪತ್ರ ನೀಡಲು ದೃಢೀಕರಿಸುವ ಅಧಿಕಾರಿಯಾಗಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪನಿರ್ದೇಶಕರಾದ ರವೀಂದ್ರ ಮೊ.ನಂ: 8660523556 ಇವರನ್ನು, ನಗರದ ಡಾ.ಬಿ.ಆರ್. ಶೆಟ್ಟಿ- ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೇಮಕ ಮಾಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ, ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜೈನ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿರುವ ಜೈನ ದೇವಾಲಯ (ಬಸದಿ) ನವೀಕರಣ, ದುರಸ್ಥಿ ಹಾಗೂ ಜೀರ್ಣೋದ್ಧಾರಕ್ಕಾಗಿ ಸಹಾಯಧನ ಪಡೆಯಲು ಜೈನ ಬಸದಿ ಸಮಿತಿ ಅಥವಾ ಮಂಡಳಿಯವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ಸೈಟ್ https://dom.karnataka.gov.in/ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ದೂರವಾಣಿ ಸಂಖ್ಯೆ: 0820-2573596 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಅಡಿಕೆ ಬೆಳೆ ಮೇಲೆ ಪರಿಣಾಮ ಬೀರಲಿದೆ. ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಪೋಷಕಾಂಶಗಳು ಕೊಚ್ಚಿ ಹೋಗುವುದು ಮತ್ತು ಸೂರ್ಯನ ಬೆಳಕಿನ ಕೊರತೆ ಮುಂತಾದ ಹಲವು ಕಾರಣಗಳಿಂದ ಅಡಿಕೆ ಬೆಳೆಯಲ್ಲಿ ಕೊಳೆರೋಗ ಉಲ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಆಗಬಹುದಾದ ಹಾನಿಯ ಪ್ರಮಾಣ ಕಡಿಮೆ ಮಾಡಲು ಮತ್ತು ಸಂರಕ್ಷಣೆ ದೃಷ್ಟಿಯಿಂದ ಈ ಕೆಳಕಂಡ ಕೆಲವು ಅವಶ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ತೋಟಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ. ಕೆಳಗೆ ಬಿದ್ದಿರುವ ರೋಗಪಿಡಿತ ಕಾಯಿಗಳನ್ನು ಹಾಗೂ ಒಣಗಿದ ಹಿಂಗಾರಗಳನ್ನು ತೆಗೆದು ಸುಡಬೇಕು ಅಥವಾ ತೋಟದಿಂದ ಹೊರಗೆ ಗುಂಡಿಗಳಲ್ಲಿ ಹಾಕಿ ಮಣ್ಣಿನಿಂದ ಮುಚ್ಚಬೇಕು. ತೋಟಗಳಲ್ಲಿ ಆದಷ್ಟು ಸ್ವಚ್ಛತೆಯನ್ನು ಕಾಪಾಡಬೇಕು. ತೋಟಗಳಲ್ಲಿ ನೀರು ನಿಲ್ಲದಂತೆ ಬಸಿಲುಗಾಲುವೆಗಳನ್ನು ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಬೇಕು. ತೋಟದಲ್ಲಿ ಅಲ್ಲಲ್ಲಿ ಅಡಿಕೆ ಸಿಪ್ಪೆ, ಭತ್ತದ ಹೊಟ್ಟು ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಬಳಸಿ ಹೊಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ 11 ವರ್ಷ ಮೇಲ್ಪಟ್ಟ ಚರ್ಚ್ ನವೀಕರಣ, ಆವರಣ ಗೋಡೆ, ಸ್ಮಶಾನ ಆವರಣ ಗೋಡೆ, ಸಮುದಾಯ ಭವನ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಅನುದಾನ ಬಿಡುಗಡೆ ಮಾಡಲು ಪ್ರಸ್ತಾವನೆಗಳನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ದೂರವಾಣಿ ಸಂಖ್ಯೆ: 0820-2573596 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿಶೇಷಚೇತನರಿಗೆ ಎಪಿಡಿ ಸಂಸ್ಥೆಯ ಜೀವನೋಪಾಯ ಕಾರ್ಯಕ್ರಮದ ದಿನಸಿ ಕಿಟ್ ವಿತರಣೆ ಮತ್ತು ಅರಿವು ಕಾರ್ಯಕ್ರಮ ಇಲ್ಲಿನ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಿಟ್ ವಿತರಿಸಿ ಎಪಿಡಿ ಸಂಸ್ಥೆಯ ನೋಡಲ್ ಅಧಿಕಾರಿ ಹರೀಶ ಶೆಟ್ಟಿ ಮಾತನಾಡಿ, ನಮ್ಮ ಸಂಸ್ಥೆ ಸುಮಾರು 62 ವರ್ಷದಿಂದ ವಿಶೇಷ ಚೇತನರಿಗೆ ಶಿಕ್ಷಣ, ತರಬೇತಿ, ವೈದ್ಯಕೀಯ ಪುನಶ್ಚೇತನ ಹಾಗೂ ಉದ್ಯೋಗ ಸೌಲಭ್ಯವನ್ನು ನೀಡಿ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ವಿಜೇತರು ಮತ್ತು ತಾಲೂಕಿನ ಎಮ್.ಆರ್.ಡಬ್ಲೂ ಮಂಜುನಾಥ ಹೆಬ್ಬಾರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ ಕುಲಾಲ್, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವೀಂದ್ರ, ವಿ.ಆರ್.ಡಬ್ಲೂ ಕಾವೇರಿ ಪ್ರಸಾದ್ ಮತ್ತು ವಿಶೇಷ ಚೇತನರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿ.ಆರ್.ಡಬ್ಲೂ ಆಕಾಶ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಒತ್ತಿನಣೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಬುಧವಾರ ಗುಡ್ಡ ಜರಿದಿದೆ. ಬೈಂದೂರು ಶಿರೂರು ನಡುವಿನ ರಾಷ್ಟೀಯ ಹೆದ್ದಾರಿ ಪಕ್ಕದ ಗುಡ್ಡದ ಕಾಲಿನಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿಯೇ ಗುಡ್ಡ ಜರಿತ ಉಂಟಾಗಿದೆ. ಬೈಂದೂರು ತಹಶಿಲ್ದಾರರಾದ ಶೋಭಾಲಕ್ಷ್ಮೀ ಎಚ್. ಎಸ್. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನ ಸಂಚಾರಕ್ಕೆ ಯಾವುದೆ ಅಡೆತಡೆ ಉಂಟಾಗಿಲ್ಲ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆದ ಬಳಿಕ ಒತ್ತಿನಣೆಯಲ್ಲಿ 3 ಭಾರಿ ಗುಡ್ಡ ಕುಸಿದು ಸಂಚಾರಕ್ಕೆ ಅಡಚಣೆಯಾಗಿತ್ತು. ಒಂದು ಪಾರ್ಶ್ವದಲ್ಲಿ ಸೈಡ್ ವಾಲ್ ನಿರ್ಮಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯದಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಸರ್ಕಾರ ವಿಧಿಸಿದ ಹಲವು ನಿರ್ಭಂದಗಳಿ0ದ, ದೈನಂದಿನ ಸಂಪಾದನೆಯನ್ನು ನಂಬಿಕೊ0ಡಿದ್ದ ಅಸಂಖ್ಯಾತ ಕೂಲಿ ಕಾರ್ಮಿಕರಿಗೆ , ಜೀವನ ನಿರ್ವಹಣೆಗೆ ತೊಂದರೆಗಳಾದವು, ಆದರೆ ಈ ಸಮಯದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ , ಜಿಲ್ಲೆಯ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತರಿ ಯೋಜನೆಯ ಗಣನೀಯ ಪ್ರಮಾಣದಲ್ಲಿ ಉದ್ಯೋಗ ಒದಗಿಸುವ ಮೂಲಕ ಅವರ ಮೊಗದಲ್ಲಿ ಸಂತಸ ಮೂಡಿಸಿದೆ. ಜಿಲ್ಲೆಯಲ್ಲಿ ಕೊರೊನಾ ಕಾರಣದಿ0ದ ಸಾಕಷ್ಟು ಕಾರ್ಮಿಕರು, ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಆತ0ಕದಲ್ಲಿದ್ದು, ಹೆಚ್ಚಿನ ಯುವಕರು ಮನೆಯಲ್ಲಿ ಕೆಲಸ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನಡುವೆ ಗ್ರಾಮೀಣ ಭಾಗದ ಜನರನ್ನು ಹಾಗೂ ಊರು ಸೇರಿರುವ ನಗರವಾಸಿಗಳಿಗೆ ಮಹಾತ್ಮಗಾ0ಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಉದ್ಯೋಗ ಭಾಗ್ಯ ಕರುಣಿಸಿದೆ. ಕೊರೊನಾ ಲಾಕ್ ಡೌನ್ ಸ0ದರ್ಭದಲ್ಲಿ ತೊ0ದರೆಗೊಳಗಾದ , ಜಿಲ್ಲೆಯ ಕೂಲಿ ಕಾರ್ಮಿಕರಿಗೆ , ಒಟ್ಟು 10,632 ಕುಟು0ಬಗಳ 18,503 ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗವನ್ನು ಒದಗಿಸಲಾಗಿದ್ದು, 3046 ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ,…
