Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ.ಜೂ.5: ಕೋವಿಡ್-19ರ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯುವ ನಿಟ್ಟಿನಲ್ಲಿ ಪಾಸಿಟಿವ್ ಪ್ರಕರಣಗಳು ಹಾಗೂ ಮರಣ ದರವನ್ನು ತಗ್ಗಿಸಲು ಜೂನ್ 7 ಬೆಳಗ್ಗೆ 6 ರಿಂದ ಜೂನ್ 14 ರ ಬೆಳಗ್ಗೆ 6 ಗಂಟೆಯವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ ಸೆಕ್ಷನ್ 144(3) ನ್ನು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ಕೆಳಕಡಂತೆ ಮಾರ್ಗಸೂಚಿಯನ್ನು ಹೊರಡಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ. ನಿಗದಿಯಾಗಿರುವ ವಿಮಾನ ಪ್ರಯಾಣ ಹಾಗೂ ರೈಲು ಪ್ರಯಾಣಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆಟೋ, ಕ್ಯಾಬ್ ಗಳು ಟ್ಯಾಕ್ಸಿಗಳ (including cabs by aggregators) ಮೂಲಕ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವವರು ವಿಮಾನಯಾನ ಟಿಕಟ್ ಗಳು ಹಾಗೂ ರೈಲು ಪ್ರಯಾಣದ ಟಿಕೆಟ್ ಗಳನ್ನೇ ಪಾಸ್ ಗಳಂತೆ ಬಳಸಿಕೊಳ್ಳಬಹುದಾಗಿದೆ. ತುರ್ತು ಸಂದರ್ಭದಲ್ಲಿ ಬಾಡಿಗೆಗೆ ಪಡೆದ ಹಾಗೂ ಈ ಮಾರ್ಗಸೂಚಿಗಳಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದುಬೈನ ಉದ್ಯಮಿ ಕೇವಿನ್ ಲೂವಿಸ್ ಕೊಡ ಮಾಡಿದ ಸುಮಾರು ೧.೨೦ ಲಕ್ಷ ಮೌಲ್ಯದ ಆಹಾರ ಸಾಮಾಗ್ರಿಗಳ ಕಿಟ್‌ಗಳನ್ನು ಗುಜ್ಜಾಡಿ ಶ್ರೀ ರಾಮ ಮಂದಿರದಲ್ಲಿ ಶನಿವಾರ ವಿತರಿಸಲಾಯಿತು. ಗುಜ್ಜಾಡಿ ಗ್ರಾಮದ ಕರೋನಾ ವಾರಿಯರ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ದಾದಿಯರಿಗೆ ಮತ್ತು ಗುಜ್ಜಾಡಿ ಗ್ರಾಮದ ಐದು ವಾರ್ಡಗಳ ಆಶಕ್ತ ಕುಟುಂಬಗಳಿಗೆ ಕೇವಿನ್ ಲೂವಿಸ್ ಕೊಡ ಮಾಡಿದ ಕಿಟ್‌ಗಳನ್ನು ಗುಜ್ಜಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ವಿತರಿಸಿದರು. ಬಳಿಕ ಮಾತನಾಡಿದ ಅವರು, ಕರೋನಾ ಹಾವಳಿಯಿಂದ ಅನೇಕ ಕುಟುಂಬಗಳು ಸಂಕಷ್ಟದಲ್ಲಿದೆ. ಕರೋನಾ ವಾರಿಯರ್ಸ್‌ಗಳು ಮತ್ತು ಆರೋಗ್ಯ ಸಿಬ್ಬಂದಿಗಳು ಹಗಲಿರುಳು ಕರೋನಾ ವಿರುದ್ಧ ಸೆಣಸಾಡುತ್ತಿದ್ದಾರೆ. ಇಂತಹ ಸಂಕಷ್ಟದಲ್ಲಿರುವ ಗುಜ್ಜಾಡಿ ಗ್ರಾಮದ ಬಡ ಕುಟುಂಬಗಳಿಗೆ ದುಬೈ ಉದ್ಯಮಿ ಕೇವಿನ್ ಲೂವಿಸ್ ಆಹಾರ ಸಾಮಾಗ್ರಿಗಳನ್ನು ವಿತರಿಸುತ್ತಿರುವುದು ಪುಣ್ಯದ ಕೆಲಸ ಎಂದರು. ಈ ಸಂದರ್ಭದಲ್ಲಿ ಗುಜ್ಜಾಡಿ ಗ್ರಾಪಂ. ಅಧ್ಯಕ್ಷೆ ಯಮುನಾ ಪೂಜಾರಿ, ಉಪಾದ್ಯಕ್ಷ ರಾಜು ಪೂಜಾರಿ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ…

Read More

ಕುಂದಾಪ್ರ ಡಾಟ್ ಕಾಂ ಉಸದ್ದಿ. ಕುಂದಾಪುರ: ಗ್ರಾಮ ಪಂಚಾಯತ್ ತ್ರಾಸಿ ವತಿಯಿಂದ ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕುಂದಾಪುರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ತ್ರಾಸಿ ಗ್ರಾಮ ಪಂಚಾಯತ್ ಕಾರ್ಯಾಲಯ ಸಮೀಪ ಶನಿವಾರ ಜರಗಿತು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ದೇವಾಡಿಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷೆ ಹೇಮಾ, ಸದಸ್ಯ ರಾಜು ಮೆಂಡನ್, ಪಿಡಿಒ ಶೋಭಾ ಎಸ್., ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ಸಂಗೀತಾ, ಲೆಕ್ಕ ಸಹಾಯಕ ಶಿವಾನಂದ, ಗ್ರಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಕಾರ್ಯಕ್ರಮವನ್ನು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ತಮ್ಮ ಮನೆ ಸುತ್ತಮುತ್ತಲಿನ ಪರಿಸರದಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಹಾಗೂ ಎನ್ನೆಸ್ಸೆಸ್ ಘಟಕದ ಯೋಜನಾಧಿಕಾರಿಗಳಾದ ಲತಾ ಪೂಜಾರಿ ಹಾಗೂ ನಾಗರಾಜ್ ಶೆಟ್ಟಿ ಹಾಗೂ ಉಪನ್ಯಾಸಕರುಗಳು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಬೆಂಗಳೂರು ನಾರಾಯಣ ಹೃದಯಾಲಯದ ವೈದ್ಯ ಡಾ.ಇಸ್ತಿಯಾಕ್ ಅಹಮ್ಮದ್, ಮುಂಬೈ ಉದ್ಯಮಿ ಗಣೇಶ್, ಬೆಂಗಳೂರಿನ ಸೃಜನ್ ಅವರ ನೆರವಿನಿಂದ ಯುಎಸ್ಐ ಯುಎಸ್‌ಐ ಡೆಂಪೆಸ್ಸಿ ವೆಂಚರ್ಸ್ ಕಂಪೆನಿಯ ಸಿಇಓ ಡಾನ್ ಬೊವೆನ್ ಅವರು ಕೊಡ ಮಾಡಿದ ಆಧುನಿಕ ತಂತ್ರಜ್ಞಾನದ ಅನಿಲ ಸಾಂದ್ರಕ, ಡೈನಮಿಕ್ ಇನ್ಫೋಟೆಕ್ ಸಂಸ್ಥೆ ಹಾಗೂ ಕೀಳೇಶ್ವರಿ ಯೂತ್ ಕ್ಲಬ್ ವತಿಯಿಂದ ನೀಡಲಾದ 250 ಕೊರೊನಾ ವೈರಸ್ ಚಿಕಿತ್ಸೆಯ ಔಷಧಿಗಳ ಕಿಟ್ಗಳ ಉಪ ವಿಭಾಗಾಧಿಕಾರಿ ಕೆ.ರಾಜು ಅವರಿಗೆ ಹಸ್ತಾಂತರಿಸಲಾಯಿತು. ಕೊಡುಗೆಗಳನ್ನು ಸ್ವೀಕರಿಸಿ ಅವರು ಮಾತನಾಡಿ ಕೋವಿಡ್ ಸಂಕಷ್ಟದ ಸಮಯದಲ್ಲಿ ಸರ್ಕಾರಿ ವ್ಯವಸ್ಥೆಯೊಂದಿಗೆ ಈ ಭಾಗದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನೀಡಿರುವ ಸಹಕಾರವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಕುಂದಾಪುರದಂತಹ ಉಪ ವಿಭಾಗದಲ್ಲಿ, ಕೋವಿಡ್ ವಿರುದ್ಧದ ಹೋರಾಟದಲ್ಲಿ ದುಡಿಯಲು ಅವಕಾಶ ದೊರಕಿರುವುದು ನನ್ನ ಸರ್ಕಾರಿ ಸೇವೆಯ ಸುವರ್ಣ ದಿನಗಳು ಎಂದು ನಾನು ಭಾವಿಸುವುದಾಗಿ ಹೇಳಿದರು. ಕುಂದಾಪುರದ ಕೋವಿಡ್ ನಿರ್ವಹಣೆಗಾಗಿ ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 561 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 3 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 227, ಕಾರ್ಕಳ, ಹೆಬ್ರಿ ತಾಲೂಕಿನ 106 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 561 ಪ್ರಕರಣಗಳಲ್ಲಿ 9 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 552 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಕಾರ್ಕಳ ತಾಲೂಕಿನ 85 ವರ್ಷದ ಮಹಿಳೆ, 89 ವರ್ಷದ ಪುರುಷ, ಉಡುಪಿ ತಾಲೂಕಿನ 66 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 585 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4506 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3326 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 5494 ಮಂದಿಗೆ ಮೊದಲನೇ ಡೋಸ್, 1311 ಮಂದಿಗೆ ಎರಡನೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಆದರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ ಈ ವರ್ಷ ಪರಿಸ್ಥಿತಿ ತುಂಬಾ ವಿಭಿನ್ನವಾಗಿದೆ. ಮಕ್ಕಳ ಯೋಗಕ್ಷೇಮ ಮತ್ತು ಶೈಕ್ಷಣಿಕ ಭವಿಷ್ಯ ಇದನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಈಗ ನಡೆಸುವುದಿಲ್ಲ. ಬದಲಾಗಿ ಪರೀಕ್ಷೆ ಇಲ್ಲದೆ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲು ನಿರ್ಧರಿಸಲಾಗಿದೆ. ಹೀಗಾಗಿ 2021ರ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ ಭಿನ್ನ ಮಾದರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಶ್ನೆಗಳು ಸರಳವಾಗಿ ನೇರವಾಗಿ ಇರುತ್ತದೆ. ಪರೀಕ್ಷೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಜೂ.೦3: ಜಿಲ್ಲೆಯಲ್ಲಿ ೫೦ಕ್ಕಿಂತ ಅಧಿಕ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾದ ಗ್ರಾಮ ಪಂಚಾಯತಿಗಳನ್ನು ಲಾಕ್‌ಡೌನ್ ಮಾಡಲು ಜಿಲ್ಲಾಧಿಕಾರಿಗಳು ಈಗಾಗಲೇ ಆದೇಶಿಸಿದ್ದು ಬುಧವಾರದಿಂದ 33 ಗ್ರಾಮಗಳನ್ನು ಲಾಕ್ ಮಾಡಲಾಗಿದೆ. ಮುಂದುವರಿದ ಜಿಲ್ಲೆಯ ಏಳು ಗ್ರಾಮಪಂಚಾಯತಿ ಲಾಕ್‌ಡೌನ್ ಮಾಡಲು ಜಿಪಂ ಸಿಇಓ ಆದೇಶಿಸಿದ್ದಾರೆ. ಜೂನ್ 5 ರಿಂದ ಕುಂದಾಪುರ ತಾಲೂಕಿನ ತಲ್ಲೂರು, ಕರ್ಕುಂಜೆ, ಯಡಮೊಗೆ, ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ, ಆವರ್ಸೆ, ಹನೆಹಳ್ಳಿ ಹಾಗೂ ಕಾರ್ಕಳದ ಕಲ್ಯ ಗ್ರಾ.ಪಂ ಲಾಕ್ಡೌನ್ ಮಾಡಲಾಗುತ್ತಿದೆ. ಈ ಗ್ರಾಮಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ನಾಳೆ ಅವಕಾಶ ನೀಡಲಾಗಿದೆ. ಜೂನ್ 5 ಬೆಳಗ್ಗೆ 6 ರಿಂದ ಜೂನ್ 7 ಬೆಳಗ್ಗೆ 6ರ ವರೆಗೆ ಲಾಕ್ ಡೌನ್ ಇರಲಿದೆ. ► ಜೂನ್.2ರಿಂದ ಕುಂದಾಪುರ & ಬೈಂದೂರು ತಾಲೂಕಿನ 11 ಗ್ರಾಮಗಳು ಸಂಪೂರ್ಣ ಲಾಕ್ – https://kundapraa.com/?p=48826 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 580 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 129, ಕಾರ್ಕಳ, ಹೆಬ್ರಿ ತಾಲೂಕಿನ 129 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 580 ಪ್ರಕರಣಗಳಲ್ಲಿ 14 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 566 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಜಿಲ್ಲೆಯಲ್ಲಿ ಇಂದು 923 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4533 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3161 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 6919 ಮಂದಿಗೆ ಮೊದಲನೇ ಡೋಸ್, 3302 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,58,351 ಮಂದಿಗೆ ಮೊದಲ ಡೋಸ್ ಹಾಗೂ 84,485 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ. ಸೂಚನೆ:…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲು ಸರ್ಕಾರ ನಿರ್ಧಾರ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದು, ಜೂನ್ 14ರ ತನಕ ಲಾಕ್’ಡೌನ್ ಮುಂದುವರಿಯಲಿದೆ. ವಿಧಾನಸೌಧದಲ್ಲಿ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋಂಕು ನಿವಾರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ ತಜ್ಞರ ಸಲಹೆ ಮೇರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗುವುದು. ಈಗಿರುವ ನಿಯಮಗಳೇ ಮುಂದೆಯೂ ಚಾಲ್ತಿಯಲ್ಲಿರಲಿದೆ ಎಂದು ತಿಳಿಸಿದರು. ಸೋಂಕು ಶೇ.5 ಕ್ಕಿಂತ ಕಮ್ಮಿಯಾದ್ರೆ ವಾರದ ಬಳಿಕ ವಿನಾಯ್ತಿ ಕೊಡಲು ಸಿದ್ಧವಾಗಿದ್ದು, ಇದಕ್ಕೆ ಜನ ಸಹಕಾರ ಕೊಡಬೇಕು. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಪ್ರಧಾನಿಯವರೇ ಸಂಪೂರ್ಣ ಅಧಿಕಾರ ಕೊಟ್ಟಿದ್ದಾರೆ. ಡಿಸಿಗಳು ಅವರ ಚೌಕಟ್ಟಿನಲ್ಲೇ ನಿರ್ಧಾರ ತಗೋತಾರೆ ಎಂದರು. ಎರಡನೇ ಹಂತದ ಪ್ಯಾಕೇಜ್ ಘೋಷಣೆ: ಇದೇ ವೇಳೆ ಸಿಎಂ, ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಿದರು. ಒಟ್ಟು 500 ಕೋಟಿ ಪ್ಯಾಕೇಜ್ ಘೋಷಣೆ…

Read More