Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು, ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರು ಆಗಿದ್ದ ಜಿ.ಎಸ್. ಆಚಾರ್ ಪುಣ್ಯತಿಥಿ ಆಚರಣೆಯನ್ನು ಜೂನ್ ೨೪ರಂದು ಬೈಂದೂರಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು. ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷರು, ಉಡುಪಿ ಜಿ.ಪಂ. ಮಾಜಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರು ದಿ.ಜಿ.ಎಸ್ ಆಚಾರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿ ಸಹಕಾರ, ಸಾಮಾಜಿಕ, ರಾಜಕೀಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಜಿ.ಎಸ್ ಆಚಾರ್ ಅವರು ನಮ್ಮೊಡನೆ ಇಲ್ಲದಿದ್ದರೂ ಅವರ ಸಾಧನೆ ನೆನಪಿನಲ್ಲಿಡುವಂತಹದ್ದು. ಅನುಭವಿ ರಾಜಕಾರಣಿಯಾಗಿದ್ದ ಅವರು ಬೈಂದೂರು ಕ್ಷೇತ್ರದಲ್ಲಿ ನಾನು ಸೇರಿದಂತೆ ಹಲವಾರು ಯುವ ನಾಯಕರನ್ನು ಬೆಳೆಸಿದವರು. ಅವರ ಸ್ಪೂರ್ತಿ, ಮಾರ್ಗದರ್ಶನ ಅವರಿಂದ ಕಲಿತ ಎಲ್ಲಾ ನಾಯಕರಲ್ಲಿಯೂ ನೋಡಬಹುದಾಗಿದೆ. ಅವರು ಇಲ್ಲದಿದ್ದರೂ ಅವರ ಆದರ್ಶ ನಮ್ಮೊಡನೆ ಇದೆ. ಅವರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಹೇಳಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎನ್ಎಫ್ಟಿ ಡಾಟ್ ಎನ್ವೈಸಿ ಸಂಸ್ಥೆ ಅಮೆರಿಕದ ನ್ಯೂಯಾರ್ಕ್ ನಗರದ ಪ್ರತಿಷ್ಠಿತ ಟೈಮ್ಸ್ ಸ್ಪೇರ್‌ನಲ್ಲಿ ಆಯೋಜಿಸಿದ ನಾಲ್ಕು ದಿನಗಳ ಎನ್ಎಫ್ಟಿ ಕಲಾಕೃತಿಗಳ ಪ್ರದರ್ಶನದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ವ್ಯಂಗ್ಯಚಿತ್ರಕಾರ ಕುಂದಾಪುರದ ಸತೀಶ ಆಚಾರ‍್ಯ ಅವರ ಕಲಾಕೃತಿ ಪ್ರದರ್ಶನಗೊಂಡಿದೆ. ಅಮೆರಿಕದ ಎನ್ಎಫ್ಟಿ ಡಾಟ್ ಎನ್ವೈಸಿ ಸಂಸ್ಥೆ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿನ ಕಲಾವಿದರಲ್ಲಿ ಸಮನ್ವಯ ಸಾಧಿಸಿ ಅವರನ್ನು ಒಗ್ಗೂಡಿಸುವ ಸದುದ್ದೇಶದಿಂದ ಕಲಾ ಪ್ರದರ್ಶನ ಏರ್ಪಡಿಸಿದ್ದು, ವಿವಿಧ ದೇಶಗಳ ಸಾವಿರಾರು ಕಲಾವಿದರು ಭಾಗವಹಿಸಿದ್ದರು. ಅವುಗಳಲ್ಲಿ 200 ಕಲಾಕೃತಿಗಳನ್ನು ಆಯ್ಕೆ ಮಾಡಿಕೊಂಡು ಟೈಮ್ಸ್ ಸ್ಟೋರ್ ಬಿಲ್ ಬೋರ್ಡ್ನಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸತೀಶ್ ಆಚಾರ‍್ಯ ಅವರ ‘ಐ ಕೇರ್’ ಶೀರ್ಷಿಕೆಯ ಎನ್ಎಫ್ಟಿ ಡಿಜಿಟಲ್ ಕಲಾಕೃತಿಯೂ ಒಂದಾಗಿತ್ತು. ಪ್ರದರ್ಶನದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಆರ್ಟ್ಗೆ ಒತ್ತು ನೀಡಲಾಗಿದ್ದು, ತಂತ್ರಜ್ಞಾನದ ಬೆಂಬಲದೊಂದಿಗೆ ಅಧುನಿಕತೆಯತ್ತ ದಾಪುಗಾಲು ಹಾಕುತ್ತಿರುವ ಪ್ರಸ್ತುತ ಕಾಲ ಘಟ್ಟದಲ್ಲಿ ಮಾನವನಗಿಂತ ಯಂತ್ರವೇ ಹೆಚ್ಚು ಮಾನವೀಯತೆ ತೋರಿದರೂ ಆಶ್ಚರ್ಯವಿಲ್ಲ ಎನ್ನುವ ಸಂದೇಶ ಹೊತ್ತಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವದೆಹಲಿಯ ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಲದ ವತಿಯಿಂದ ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ʼನ್ಯಾಷನಲ್ ಕಾನ್ಲೇವ್ʼನಲ್ಲಿ ಬ್ಯಾಂಕಿನ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಲದ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ. ಭಾಗವತ್ ಕಿಸಾನ್ ರಾವ್ ಕರಾಡ್, ಕೇಂದ್ರ ಸಹಕಾರ ಖಾತೆಯ ರಾಜ್ಯ ಸಚಿವ ಬಿ. ಎಲ್ ವರ್ಮ ಪ್ರಶಸ್ತಿ ಪ್ರದಾನ ಮಾಡಿದರು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಶೆಟ್ಟಿ ಬ್ಯಾಂಕಿನ ಪರವಾಗಿ ಗೌರವ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶದಲ್ಲಿನ ರಸ್ತೆ ಹಾಗೂ ತೊರೆಗಳನ್ನು ದಾಟುವ ಸಂದರ್ಭ ಜನ ಮತ್ತು ಜಾನುವಾರುಗಳು ಪ್ರಾಣ ಕಳೆದುಕೊಂಡ ನಿದರ್ಶನಗಳಿವೆ. ಸುತ್ತುಬಳಸಿ ಊರು ಸೇರಬೇಕಾದ ಪರಿಸ್ಥಿತಿಯೂ ಇದ್ದು ಇದನ್ನು ತಡೆಗಟ್ಟಲು ಒಟ್ಟು 634 ಕಾಲು ಸಂಕಗಳನ್ನು ನಿರ್ಮಾಣ ಮಾಡುವ ಅವಶ್ಯಕತೆ ಇದೆ ಎಂದು ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯರಾದ ಬಿ. ವೈ. ರಾಘವೇಂದ್ರ ಪ್ರತಿಪಾದಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ನಡೆದ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸಭೆಯಲ್ಲಿ ಬಿ. ವೈ. ರಾಘವೇಂದ್ರ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರವು ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿ ಮತ್ತು ಮಲೆನಾಡಿನ ವಿಶಿಷ್ಟ ಭೂಸ್ವರೂಪವನ್ನು ಹೊಂದಿದ್ದು, ಅಂದಾಜು 4,954 ಕುಗ್ರಾಮಗಳಿವೆ. ಮಾನವ ವಾಸವು ಚದುರಿದ ಮತ್ತು ಗುಡ್ಡಗಾಡು ಪರ್ವತಗಳಲ್ಲಿ ಭಾಗದಲ್ಲಿ ಇರುವುದರಿಂದ ಮಳೆಗಾಲದಲ್ಲಿ ತುಂಬಿ ಹರಿಯುವ ಸಣ್ಣ ತೊರೆಗಳನ್ನು ಶಾಲಾ ಮಕ್ಕಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ಪ್ರಥಮ ಅಧ್ಯಕ್ಷ ಡಾ| ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್ ಉಳ್ಳೂರಿನ ಬಿಜೆಪಿ ಶಕ್ತಿ ಕೇಂದ್ರ ಕಛೇರಿಯಲ್ಲಿ ಆಚರಿಸಲಾಯಿತು. ಡಾ| ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು. ಡಾ| ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ, ಹೋರಾಟಗಳು ಮತ್ತು ಬಲಿದಾನದ ಕುರಿತು ಉಡುಪಿ ಜಿಲ್ಲಾ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಸ್ಟ ಸಂಚಾಲಕ ಚಿಟ್ಟೆ ರಾಜಗೋಪಾಲ ಹೆಗ್ಡೆ ಮಾತನಾಡಿದರು. ಈ ಸಂದರ್ಭದಲ್ಲಿ ಜಿ.ಪ. ಮಾಜಿ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಗ್ರಾ.ಪ.ಅಧ್ಯಕ್ಷ ರಾಜೇಶ್ ಹೆಬ್ಬಾರ್,ಶಕ್ತಿ ಕೇಂದ್ರ ಅಧ್ಯಕ್ಷ ಜಯರಾಮ ಶೆಟ್ಟಿ, ಮಾಜಿ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಟೈಲರ್ ರಾಮಣ್ಣ, ಶಿವಶಂಕರ, ಶ್ರೀಕಾಂತ್ ನಾಯಕ್ ಹಾಗೂ ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.23: ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ದರೋಡೆಕೋರರನ್ನು ಬೆನ್ನಟ್ಟಿದ ಬೈಂದೂರು ಪೊಲೀಸರು ಕೆಲವೇ ದಿನಗಳಲ್ಲಿ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಹಿತ ಆರೋಪಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೈಂದೂರಿನಿಂದ ದೂರದ ಮಧ್ಯಪ್ರದೇಶದ ತನಕ ಆರೋಪಿಗಳನ್ನು ಬೆನ್ನಟ್ಟಿ ಒಟ್ಟು 466.90 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡ ಬೈಂದೂರು ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಆರೋಪಿಗಳಾದ ಆಲಿಬಾನ್ (31), ಆಮ್ಜಲ್ಖಾನ್ (35) ಇಕ್ರಾರ್ (30) ಹಾಗೂ ಗೋಪಾಲ್ ಆಮ್ಲವರ್ (35) ಎಂಬ ನಾಲ್ವರನ್ನು ಬಂಧಿಸಿ ನ್ಯಾಯಾಲಯ ಹಾಜರುಪಡಿಸಿದ್ದು, ನ್ಯಾಯಾಲಯವು ಐದು ದಿನದ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣದ ಹಿನ್ನೆಲೆ:ಮಹಾರಾಷ್ಟ್ರದ ಥಾಣೆ ನಿವಾಸಿ ಈಶ್ವರ್ ದಲಿಚಂದ್ ಮುಂಬೈನಲ್ಲಿ ಚಿನ್ನ ಖರೀದಿಸಿ ಉಡುಪಿ, ಮಂಗಳೂರು ಮೊದಲಾದೆಡೆ ಮಾರಾಟ ಮಾಡುವ ವ್ಯವಹಾರ ನಡೆಸುತ್ತಿದ್ದರು. ಮುಂಬೈನಿಂದ ಬಸ್ಸಿನಲ್ಲಿ ಹೊರಟು ಜೂನ್ 16 ರಂದು ಶಿರೂರು ನೀರ್ಗದ್ದೆಯ ಹೋಟೆಲಿನಲ್ಲಿ ಉಪಹಾರಕ್ಕೆಂದು ನಿಲ್ಲಿಸಿದಾಗ ಅಪರಿಚಿತ ತಂಡವೊಂದು 466.90 ಗ್ರಾಂ ಒಟ್ಟು 18 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಎಗರಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ಪ್ರಥಮ ಅಧ್ಯಕ್ಷ ಡಾ| ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ್ ದಿವಸ್ ಬೈಂದೂರು ಮಂಡಲ ಬಿಜೆಪಿ ಕಛೇರಿಯಲ್ಲಿ ಗುರುವಾರ ಶ್ಯಾಮ ಪ್ರಸಾದ್ ಮುಖರ್ಜಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಆಚರಿಸಲಾಯಿತು. ಶಾಸಕರಾದ ಬಿ. ಎಮ್. ಸುಕುಮಾರ್ ಶೆಟ್ಟಿ ಅವರು ಪುಷ್ಪಾರ್ಚನೆ ಮಾಡಿದರು. ಸಣ್ಣ ಕೈಗಾರಿಕಾ ನಿಗಮದ ಉಪಾಧ್ಯಕ್ಷರಾದ ದತ್ತಾತ್ರಿ, ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಆನಂದ್ ಖಾರ್ವಿ, ಮಂಡಲ ಪ್ರಧಾನ ಕಾರ್ಯದರ್ಶಿಯವರಾದ ಪ್ರಿಯದರ್ಶಿನಿ ದೇವಾಡಿಗ ಹಾಗೂ ಪ್ರಕಾಶ್ ಪೂಜಾರಿ ಜೆಡ್ಡು, ಜನಪ್ರತಿನಿಧಿಗಳು, ಪ್ರಮುಖರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.23: ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕುಂದಾಪುರ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ. ಮತ್ತವರ ತಂಡ ವಶಕ್ಕೆ ಪಡೆದ ಘಟನೆ ಬೈಂದೂರಿನಲ್ಲಿ ನಡೆದಿದೆ. ಜೂ. 22 ರಂದು ಡಿವೈಎಸ್ಪಿ ಶ್ರೀಕಾಂತ್ ಕೆ. ಅವರು ಗಸ್ತಿನಲ್ಲಿರುವಾಗ ಶಿರೂರು ಕಡೆಯಿಂದ ಒಂದು ಟಾಟಾ ಕಂಪೆನಿಯ ಲಾರಿಯಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ಸಂಗ್ರಹಿಸಿ ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೇ ಸಾಗಾಟ ಮಾಡುತ್ತಿರುವುದಾಗಿ ಬಂದ ಮಾಹಿತಿಯಂತೆ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ತೆರಳಿ ಸಿಬ್ಬಂದಿಗಳೊಂದಿಗೆ ಹಾಗೂ ಬೈಂದೂರು ಆಹಾರ ನಿರೀಕ್ಷಕರು, ಗ್ರಾಮ ಲೆಕ್ಕಿಗರೊಂದಿಗೆ ಕಾದುಕೊಂಡಿರುವಾಗ ಶಿರೂರು ಕಡೆಯಿಂದ ಒಂದು ಟಾಟಾ ಕಂಪೆನಿಯ ಲಾರಿ ಬರುವುದನ್ನು ನೋಡಿ ಸಿಬ್ಬಂದಿಗಳ ಸಹಾಯದಿಂದ ಲಾರಿಯನ್ನು ನಿಲ್ಲಿಸಿದ್ದಾರೆ. ಈ ವೇಳೆ ಲಾರಿಯಲ್ಲಿ ಚಾಲಕ ಬೆಂಗಳೂರು ದಕ್ಷಿಣ ಹೊನ್ನಗಟ್ಟಿ ನಿವಾಸಿ ಸುನೀಲ್ ಹೆಚ್.ಆರ್ (22) ಮತ್ತು ಇನ್ನೋರ್ವ ವ್ಯಕ್ತಿ ಭಟ್ಕಳ ನಿವಾಸಿ ಮಹಮ್ಮದ್ ಸಮೀರ (25)…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ಜೀವನ ಅಮೂಲ್ಯ. ಪೌಢ ಶಾಲೆಯ ನಂತರವಂತೂ ವಿದ್ಯಾರ್ಥಿಗಳು ಪ್ರತಿ ಕ್ಷಣವನ್ನು ಭವಿಷ್ಯಕ್ಕಾಗಿ ಉಪಯೋಗಿಸಿಕೊಳ್ಳಬೇಕು. ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು. ತನ್ನತನವನ್ನು ರೂಪಿಸಿಕೊಳ್ಳಬೇಕು. ಜ್ಞಾನ, ಕೌಶಲ್ಯ, ಆರೋಗ್ಯ, ಶಿಸ್ತು ನಾಲ್ಕು ವಿಷಯಗಳು ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಮುಖ್ಯ. ಒಂದು ಗುರಿಯನ್ನು, ಉದ್ದೇಶವನ್ನು ಇಟ್ಟುಕೊಳ್ಳಬೇಕು.ಮೊಬೈಲನ್ನು ತಮ್ಮ ವ್ಯಕ್ತಿತ್ವ ವಿಕಸನಕ್ಕಾಗಿ ಬೆಳೆಸಿಕೊಳ್ಳಬೇಕು ಎಂದು ಜಾನಪದ ಸಂಶೋಧಕ, ನಿವೃತ್ತ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಹೇಳಿದರು. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ, ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‌ನವರು ಏರ್ಪಡಿಸಿದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಸಹಾಯಧನ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು. ಎಸ್. ಎಸ್. ಎಲ್. ಸಿ.ಯಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿದ 250ಕ್ಕೂ ಹೆಚ್ಚು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಹಾಯಧನವನ್ನು ಈ ಸಮಾರಂಭದಲ್ಲಿ ವಿತರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸಾಹಿತಿ ಪತ್ತೇದಾರಿ ಕಾದಂಬರಿಗಾರ್ತಿ ಸೌಮ್ಯ ಪುತ್ರನ್, “ವಿದ್ಯಾರ್ಥಿಗಳು ಜೀವನದ ಸವಾಲುಗಳನ್ನು ಎದುರಿಸುವುದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಶೇಷವಾಗಿ ತಾಂಡಾ ಜನರುಗಳ ಜಾನುವಾರುಗಳಲ್ಲಿನ ಬಂಜೆತನವನ್ನು ನೀಗಿಸಿ ಅವುಗಳನ್ನು ಅನುತ್ಪಾದಕತೆಯಿಂದ ಉತ್ಪಾದಕತೆಯತ್ತ ಸಾಗಿಸುವ ಯೋಜನೆಯನ್ನು ರೂ. 25 ಕೋಟಿಗಳಿಗೆ ತಯಾರಿಸಿ ಕೇಂದ್ರ ಹೈನುಗಾರಿಕೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಮೀನುಗಾರಿಕೆ ಸಚಿವರಾದ ಶ್ರೀ ಪರಷೋತ್ತಮ್ ರೂಪಲಾ ರವರಿಗೆ ಸಲ್ಲಿಸಿದ್ದು ಇದನ್ನು ಮಾನ್ಯ ಸಚಿವರು ಮುಕ್ತ ಕಂಠದಿಂದ ಪ್ರಶಂಸಿಸಿ ಇದಕ್ಕೆ ಅನುದಾನ ಒದಗಿಸುವ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮಾನ್ಯ ಸಂಸದರು ತಿಳಿಸಿದರು. ಭಾರತ ಗೋಪ್ರಧಾನ ದೇಶ, ಬಡರೈತರು ಅದರಲ್ಲಿಯೂ ತಾಂಡಾದ ಲಂಬಾಣಿ ಜನಾಂಗದವರು ಗೋಮಾತೆಯ ಮೇಲೇ ಭಕ್ತಿ ಮತ್ತು ಜೀವನದ ಆಸರೆ ಹೊಂದಿದ್ದಾರೆ. ಅನುತ್ಪಾದಕ ಗೋವುಗಳನ್ನು ಸಾಕುವ ರೈತರು ಅನುಭವಿಸುವ ನಷ್ಟ ಅಪಾರ. ಈ ಹಸುಗಳನ್ನು ರೈತರು ಹಾಲು ಕೊಡದಿದ್ದರೂ ಸಾಕಲೇಬೇಕು. ಗೋಹತ್ಯಾ ನಿಷೇಧ ಕಾನೂನು ಪ್ರಸಕ್ತ ಜಾರಿಯಲ್ಲಿದೆ. ಅನುತ್ಪಾದಕ ಗೋವುಗಳು ರೈತರಿಗೆ ಹೊರೆಯಾಗಬಾರದು, ಈ ಯೋಜನೆಯಲ್ಲಿ ಅನುತ್ಪಾದಕ ರಾಸುಗಳನ್ನು ವಿವಿಧ ಹಳ್ಳಿಗಳಲ್ಲಿ ಪತ್ತೆ ಹಚ್ಚಿ, ಈ ಅನುತ್ಪಾದಕತೆಯ ಕಾರಣವನ್ನು…

Read More