Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕೈಗಾರಿಕಾ ಭೇಟಿಯ ಭಾಗವಾಗಿ ಕೋಟದ ಜನತಾ ಫಿಶ್ ಮೀಲ್ ಮತ್ತು ಆಯಿಲ್ ಪ್ರಾಡಕ್ಟಸ್ ಇಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೈಗಾರಿಕಾ ಕೇಂದ್ರದ ಸಾರ್ವಜನಿಕ ಸಂಬಂಧ ಮತ್ತು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಅಧಿಕಾರಿಯಾದ ರವಿಕಿರಣ್ ಉತ್ಪನ್ನಗಳ ತಯಾರಿಕೆ ಮತ್ತು ಪ್ರಾತ್ಯಕ್ಷಿಕೆಯ ಕುರಿತು ಉಪನ್ಯಾಸ ನೀಡಿದರು. ಜೊತೆಗೆ ಯಂತ್ರಗಳ ಕಾರ್ಯವೈಖರಿಯನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಅವಕಾಶ ಮತ್ತು ಮಾರ್ಗದರ್ಶನ ನೀಡಿದ ಆಡಳಿತ ಮಂಡಳಿಗೆ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಚೈತ್ರಾರವರು ವಂದಿಸಿದರು. ಕಾಲೇಜಿನ ವತಿಯಿಂದ ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ದೀಕ್ಷಿತಾ ಯು. ಜಿ. ಸ್ಮರಣಿಕೆ ನೀಡಿ ಗೌರವಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ 2019-20ನೇ ಸಾಲಿನ ಮಹಾಸಭೆಯು ಇಲ್ಲಿನ ಎಸ್.ವಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ಶಾರದಾ ಎಸ್.ಖಾರ್ವಿ ಮಾತನಾಡಿ, ಸಂಘವು 18.07 ಲಕ್ಷ ರೂ. ಪಾಲು ಬಂಡವಾಳ ಮತ್ತು 9.44 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದೆ. 2.28 ಕೋಟಿ ರೂ.ಗಳನ್ನು ವಿವಿಧ ಇತರ ಸಂಘ ಹಾಗೂ ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ ಸಂಘವು 10.53 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ.10% ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸಂಘದ ಉಪಾಧ್ಯಕ್ಷೆ ಮಾಲತಿ ಜಿ. ಖಾರ್ವಿ, ನಿರ್ದೇಶಕಿಯರಾದ ನೀಲಾವತಿ ಎಸ್. ಖಾರ್ವಿ, ಸುಶೀಲಾ ಎ. ಖಾರ್ವಿ, ಶಾರದಾ ಆರ್. ಹೆಗ್ಡೆ, ಶೈಲಾ ಎಂ. ಖಾರ್ವಿ, ಜಯಂತಿ ಆರ್. ಪಠೇಲ್, ದೀಪಾ ಎನ್. ಖಾರ್ವಿ, ರೇಖಾ ಜಿ. ಖಾರ್ವಿ ಉಪಸ್ಥಿತರಿದ್ದರು. ನಿರ್ದೇಶಕಿ ಪಾರ್ವತಿ ಬಿ. ಖಾರ್ವಿ ಸ್ವಾಗತಿಸಿದರು. ಸಂಘದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ 15 ಗ್ರಾಮ ಪಂಚಾಯತಿಗಳಿಗೆ ನಡೆದ ಚುನಾವಣೆಯಲ್ಲಿ ಶೇ.71.28ರಷ್ಟು ಮತದಾನವಾಗಿದೆ. ತಾಲೂಕಿನ 128 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನ ನಡೆದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಉತ್ಸುಕತೆಯಿಂದ ಮತದಾನ ನಡೆಯುತ್ತಿರುವುದು ಕಂಡುಬಂತು. ಹಿರಿಯ ನಾಗರಿಕರು, ವಿಕಲಚೇತನರು ಹೆಚ್ಚು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದರು. ಬೈಂದೂರು ತಾಲೂಕಿನಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯ ತನಕ ಶೇ.11.49 ಮತದಾನವಾಗಿದ್ದರೇ, 11 ಗಂಟೆಯ ತನಕ ಶೇ. 28.49, ಮಧ್ಯಾಹ್ನ 1 ಗಂಟೆಯ ತನಕ ಶೇ.46.53 ಹಾಗೂ 3 ಗಂಟೆಯ ಒಟ್ಟು ಶೇ.57.18 ಮತದಾನವಾಗಿದೆ. ಅಂತಿಮವಾಗಿ ಶೇ.71.28 ಮತದಾನವಾಗಿದೆ. ಮಹಿಳೆಯರದ್ದೇ ಅಧಿಕ ಮತದಾನ: 43,374 ಪುರುಷರ ಪೈಕಿ 28507 (65.72%) ಪುರುಷರು ಮತದಾನ ಮಾಡಿದ್ದರೆ, 45284 ಮಹಿಳೆಯರ ಪೈಕಿ 34,692 (76.61) ಮಂದಿ ಮತದಾನ ಮಾಡಿದ್ದಾರೆ. ಒಟ್ಟು 63,199 (71.28) ಮತದಾನವಾಗಿದೆ. ಮತ ಕೇಂದ್ರಗಳಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲನೆ ಮಾಡಲಾಗುತ್ತಿದ್ದು, ಮತದಾನಕ್ಕೂ ಮುನ್ನ ಸ್ಯಾನಿಟೈಜ್, ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿದೆ. ಎಸ್ಪಿ, ಡಿವೈಎಸ್ಪಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್ ಮಸ್ ಮತ್ತು ಹೊಸವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವ ಅವಶ್ಯಕತೆ ಇದ್ದು, ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಜನರು ಸೇರುವ ಸಾಮೂಹಿಕ ಕೂಟಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುವ ಸ್ಥಳಗಳಲ್ಲಿ ಆಯೋಜಿಸುವುದನ್ನು ನಿಷೇಧಿಸಿ, ಈ ಕೆಳಗಿನಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಕ್ರೈಸ್ತ ಧರ್ಮದ ಚರ್ಚ್‌ಗಳಲ್ಲಿಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಹಬ್ಬದ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ. ಡಿಸೆಂಬರ್ 30ರಿಂದ ಜನವರಿ 2ರ ವರೆಗೆ ಕ್ಲಬ್ / ಪಬ್/ ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ-ಡಾನ್ಸ್ ಕಾರ್ಯಕ್ರಮ, ವಿಶೇಷ ಪಾರ್ಟಿ ಇತ್ಯಾದಿಗಳನ್ನು ನಿಷೇಧಿಸಲಾಗಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೆಪಿ ಪಕ್ಷ ಗ್ರಾಮ ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರತಿ ಗ್ರಾಮದಲ್ಲಿಯೂ ಜನಸೇವೆಯಲ್ಲಿ ತೊಡಗಿಕೊಳ್ಳುವ ಅಭ್ಯರ್ಥಿಗಳು ಆಯ್ಕೆಯಾಗಬೇಕು ಎಂಬ ಆಶಯವನ್ನು ಹೊಂದಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಸಿದ್ದಾಪುರ ಬಿಜೆಪಿ ಕಛೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಗ್ರಾಮ ಪಂಚಾಯತ್ ಸದಸ್ಯರಿಗೆ ವಿಶೇಷ ಅಧಿಕಾರವಿದ್ದು, ಜನಸಾಮಾನ್ಯರಿಗೆ ನ್ಯಾಯ ಒದಗಿಸಲು ಅವರಿಗೆ ಹೆಚ್ಚಿನ ಅವಕಾಶವಿದೆ. ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಮತದಾರರಿದ್ದು, ಕೇಂದ್ರ, ರಾಜ್ಯ ಸರಕಾರಗಳ ಜನಪರ ಕಾರ್ಯಗಳು ಹಾಗೂ ಅದನ್ನು ಗ್ರಾಮಮಟ್ಟದ ತನಕ ತಲುಪಿಸುವ ಅಭ್ಯರ್ಥಿಯನ್ನೇ ಆಯ್ಕೆಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು. ರೈತರ ವೇಷತೊಟ್ಟು ಕೆಲವು ಹಿತಾಸಕ್ತಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರನಾಳಿಕೆಯಲ್ಲಿ ರೈತ ಮಸೂದೆಯ ಬಗ್ಗೆ ಹೇಳಿಕೊಂಡಿದ್ದ ಕಾಂಗ್ರೆಸ್ ಪಕ್ಷ ಇಂದು ವಿರೋಧ ವ್ಯಕ್ತಪಡಿಸುತ್ತಿದೆ. ಬಿಜೆಪಿ ಸರಕಾರ ಏಕಾಏಕಿ ರೈತ ಮಸೂದೆಯನ್ನು ಜಾರಿಗೆ ತಂದಿಲ್ಲ. ಬದಲಾಗಿ ಹಲವು ಹಂತಗಳಲ್ಲಿ ಚರ್ಚಿಸಿ, ರೈತರ ಆದಾಯ ದ್ವಿಗುಣಗೊಳ್ಳುವ ಖಾತ್ರಿಯಾದ ಬಳಿಕವಷ್ಟೇ ಮಸೂದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ತಾಲೂಕಿನ 15 ಗ್ರಾಮ ಪಂಚಾಯತಿಗಳಿಗೆ ನಡೆಯುತ್ತಿರುವ ಚುನಾವಣೆ 128 ಮತಗಟ್ಟೆಗಳಲ್ಲಿ ಸುಗಮವಾಗಿ ನಡೆಯುತ್ತಿದ್ದು, ಪೇಟೆಗಿಂತ ಗ್ರಾಮೀಣ ಪ್ರದೇಶಗಳಲ್ಲಿಯೇ ಹೆಚ್ಚಿನ ಮತದಾನ ನಡೆಯುತ್ತಿರುವುದು ಕಂಡುಬಂತು. ಹಿರಿಯ ನಾಗರಿಕರು, ವಿಕಲಚೇತನರು ಹೆಚ್ಚು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದು, ಮಧ್ಯಾಹ್ನ 3 ಗಂಟೆಯ ತನಕ ಒಟ್ಟು ಶೇ57.18 ರಷ್ಟು ಮತದಾನವಾಗಿದೆ. ಬೈಂದೂರು ತಾಲೂಕಿನಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯ ತನಕ ಶೇ.11.49 ಮತದಾನವಾಗಿದ್ದರೇ, 11 ಗಂಟೆಯ ತನಕ ಶೇ. 28.49, ಮಧ್ಯಾಹ್ನ 1 ಗಂಟೆಯ ತನಕ ಶೇ.46.53 ಹಾಗೂ 3 ಗಂಟೆಯ ಒಟ್ಟು ಶೇ.57.18 ಮತದಾನವಾಗಿದೆ. ಮತ ಕೇಂದ್ರಗಳಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲನೆ ಮಾಡಲಾಗುತ್ತಿದ್ದು, ಮತದಾನಕ್ಕೂ ಮುನ್ನ ಸ್ಯಾನಿಟೈಜ್, ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿದೆ. ಎಸ್ಪಿ, ಡಿವೈಎಸ್ಪಿ, ಸಿಪಿಐ ನೇತೃತ್ವದಲ್ಲಿ ಮತದಾನ ಕೇಂದ್ರಗಳಲ್ಲಿ ಬಂದೋವಸ್ತ್ ಏರ್ಪಡಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ವತ್ತಿನೆಣೆ ಗುಡ್ಡದಲ್ಲಿ ಬೆಂಕಿ ಅವಘಡದಿಂದಾಗಿ ಸುಮಾರು ಒಂದು ಎಕೆರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳ ಅವಾಂತರದಿಂದಾಗಿ ವತ್ತಿನೆಣೆ ಪ್ರದೇಶದ ಒಣ ಹುಲ್ಲು ಇರುವ ಜಾಗಕ್ಕೆ ಬೆಂಕಿ ತಗಲಿಸಿದ್ದಾಳೆ. ಶಿರೂರು, ಬೈಂದೂರು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಕೆಲವು ಭಾಗಗಳಲ್ಲಿ ಬೆಂಕಿ ಹಚ್ಚುವ ಅಭ್ಯಾಸದಿಂದಾಗಿ ಅರಣ್ಯ ಇಲಾಖೆಗಳಿಗೆ ಸಮಸ್ಯೆಯಾಗಿ ಕಾಡುತ್ತಿದೆ. ತಕ್ಷಣ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಿಂದಿಸುವಲ್ಲಿ ಯಶಸ್ವಿಯಾಗಿದ್ದು ಯಾವುದೇ ಮರ ಗಿಡಗಳಿಗೆ, ಅರಣ್ಯ ಪ್ರದೇಶಕ್ಕೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೈಗಾರಿಕೋದ್ಯಮಿ ಶಿಕ್ಷಣ ಶಿಲ್ಪಿ, ಪದ್ಮಭೂಷಣ ಡಾ ಆರ್. ಎನ್. ಶೆಟ್ಟಿ ಅವರ ನಿಧನಕ್ಕೆ ಸಂತಾಪ ಸಭೆ, ನುಡಿನಮನ ಕಾರ್ಯಕ್ರಮ ಬೈಂದೂರು ಬಂಟರ ಭವನದಲ್ಲಿ ಜರುಗಿತು. ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ, ಸಂಘದ ಗೌರವ ಅಧ್ಯಕ್ಷ ಡಾ. ಸುಧಾಕರ ಹೆಗ್ಡೆ , ಬೈಂದೂರು ಬಂಟರ ಸಂಘದ ಅಧ್ಯಕ್ಷ ಕೆ. ವಿಠಲ ಶೆಟ್ಟಿ, ಹುಬ್ಬಳ್ಳಿ, ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಸಾಲ್ಗದ್ದೆ, ಬೈಂದೂರು ಸುರಭಿ ಕಲಾ ಸಂಸ್ಥೆಯ ನಿರ್ದೇಶಕ ಸುಧಾಕರ ಪಿ ಬೈಂದೂರು, ಉದ್ಯಮಿ ಬಾಡ ಪ್ರವೀಣ್ ಚಂದ್ರ ಶೆಟ್ಟಿ, ಶಿರೂರು ಬಂಟರ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ನುಡಿನಮನ ಸಲ್ಲಿಸಿದರು. ವಸಂತ ಹೆಗ್ಡೆ ಕಳವಾಡಿ ಪ್ರಸ್ತಾವನೆಗೈದರು. ಸಾಲ್ಗದ್ದೆ ಶಶಿಧರ ಶೆಟ್ಟಿ ಸ್ವಾಗತಿಸಿ, ಸಂಘದ ಕಾರ್ಯದರ್ಶಿ ಎನ್. ಕರುಣಾಕರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಪ್ರದೀಪ ಕುಮಾರ್ ಶೆಟ್ಟಿ ಕಾರಿಕಟ್ಟೆ ಧನ್ಯವಾದಗೈದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಟೌನ್ ಸೌಹಾರ್ದ ಸಹಕಾರಿಯ 100ನೇ ಸಾಮಾನ್ಯ ಸಭೆಯು ಇಲ್ಲಿನ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಜರುಗಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರಿಯ ಅಧ್ಯಕ್ಷ ಎಚ್. ಗಣೇಶ್ ಕಾಮತ್, ಆರ್ಥಿಕ ಹಿಂಜರಿತ ಹಾಗೂ ಕೋವಿಡ್-19 ಪರಿಣಾಮದ ಹೊರತಾಗಿಯೂ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು 2019-209ನೇ ಸಾಲಿನಲ್ಲಿ 74.62 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಶತಮಾನೋತ್ಸವ ವರ್ಷದಲ್ಲಿ ಸದಸ್ಯರಿಗೆ ಶೇ. 17 ಪಾಲು ಮುನಾಫೆ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಸಹಕಾರಿಯು ಪ್ರಸಕ್ತ ಸಾಲಿನಲ್ಲಿ 113.71 ಕೋಟಿ ವಹಿವಾಟು ದಾಖಲಿಸಿದ್ದು, ದುಡಿಯುವ ಬಂಡವಾಳ 53.70 ಕೋಟಿ ರೂ ಮತ್ತು 44.49 ಕೋಟಿ ರೂ. ಠೇವಣಿ ಹೊಂದಿದೆ. ವಿವಿಧ ಸಹಕಾರಿ ಬ್ಯಾಂಕ್‌ಗಳಲ್ಲಿ 19.53 ಕೋಟಿ ಹೂಡಿಕೆ ಮಾಡಲಾಗಿದೆ ಎಂದು ಹೇಳಿದರು. ತಂತ್ರಜ್ಞಾನಕ್ಕೆ ಹೊಂದಿಕೊಂಡು ಸಹಕಾರಿಯ ಎಲ್ಲಾ ಶಾಖೆಗಳಲ್ಲಿ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸದಸ್ಯರಿಗಾಗಿ ಸ್ವಸಹಾಯ ಗುಂಪುಗಳ ರಚನೆ ಮತ್ತು ಸ್ವ ಉದ್ಯೋಗಕ್ಕೆ ಪ್ರೇರಣೆ ನೀಡುವುದು. ಸ್ವಸಹಾಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ನಾಗೂರಿನ ಕೆಎಎಸ್ ಆಡಿಟೋರಿಯಮ್‌ನಲ್ಲಿ ಕನ್ನಡ ಜಾನಪದ ಪರಿಷತ್ತಿನ ಬೈಂದೂರು ತಾಲ್ಲೂಕು ಘಟಕದ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ, ಜಾನಪದ ಮೂಲೆಗುಂಪಾದರೆ ಮಾನವ ಜನಾಂಗ ಮೂಲೆಗುಂಪಾಗುತ್ತದೆ. ಕನ್ನಡ ಜಾನಪದ ಪರಿಷತ್ತು ಕರ್ನಾಟಕದ ಸಮೃದ್ಧ ಜಾನಪದದ ಕುರಿತು ಕ್ಷೇತ್ರಕಾರ್ಯ ಮತ್ತು ದಾಖಲೀಕರಣ ನಡೆಸಿ ಅದನ್ನು ರಕ್ಷಿಸುವ ಗುರಿ ಹೊಂದಿದೆ ರಾಜ್ಯ ಸರ್ಕಾರದ ಎಲ್ಲ ಅಕಾಡೆಮಿಗಳು ಬೆಂಗಳೂರಿಗೆ ಸೀಮಿತವಾಗುತ್ತಿವೆ. ಸರ್ಕಾರ ಜಾನಪದ ಪ್ರಾಧಿಕಾರ ಸ್ಥಾಪಿಸಿ, ನಾಲ್ಕು ಪ್ರಾದೇಶಿಕ ವಿಭಾಗಗಳಾಗಿ ಮಾಡಿ ಅಲ್ಲಿಗೆ ಜಾನಪದದ ಉದ್ದೇಶಕ್ಕೆ ದುಡಿಯುವವರನ್ನು ನೇಮಕ ಮಾಡಬೇಕು ಎಂಬ ಬೇಡಿಕೆ ಇಡಲಾಗಿದೆ ಎಂದು ಹೇಳಿದರು. ಈ ವರೆಗೆ ಐದು ಜಾನಪದ ಮಹಾಕಾವ್ಯಗಳನ್ನು ಗುರುತಿಸಲಾಗಿದೆ. ಇನ್ನು ಹಲವು ಖಂಡಕಾವ್ಯಗಳಿವೆ. ಎಲ್ಲವುಗಳ ಅಧ್ಯಯನ ಮತ್ತು ದಾಖಲಾತಿ ಆಗಬೇಕು. ಅಜ್ಞಾತರಾಗಿರುವ ಜಾನಪದ ಕಲಾವಿದರನ್ನು ಬೆಳಕಿಗೆ ತರಬೇಕು. ಅದಕ್ಕಾಗಿ ಪರಿಷತ್ತಿನ ತಾಲ್ಲೂಕು, ಹೋಬಳಿ ಘಟಕಗಳನ್ನು ರಚಿಸಲಾಗುತ್ತಿದೆ. ಮುಂದೆ ಗ್ರಾಮ ಘಟಕಗಳನ್ನೂ ಸ್ಥಾಪಿಸಲಾಗುವುದು ಎಂದು ಹೇಳಿದರು.…

Read More