Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮದ ಕರೋನಾ ಸೋಂಕಿತರ ಮನೆಗಳಿಗೆ ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್ ಕೆ. ರಾಜು ಭೇಟಿ ನೀಡಿ ಕರೋನಾ ಸೋಂಕಿತರಿಗೆ ಧೈರ್ಯ ತುಂಬಿದರು. ಸೋಂಕು ಪೀಡಿತರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದ ಕೆ.ರಾಜು, ಕುಟುಂಬ ಸದಸ್ಯರಿಗೆ ಸೋಂಕು ಹರಡಿದ ಬಗ್ಗೆ ಮಾಹಿತಿ ಪಡೆದುಕೊಂಡರು. ಜ್ವರದಿಂದ ಬಳಲುತ್ತಿರುವ ವ್ಯಕ್ತಿಗಳು ಸ್ಥಳೀಯ ಖಾಸಗಿ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಸೋಂಕಿನ ಲಕ್ಷಣ ಇದ್ದರೂ ಕೋವಿಡ್ ತಪಾಸಣೆಗೆ ಸೂಚಿಸದ ವೈದ್ಯರ ವಿರುದ್ಧ ಗರಂ ಆದರು. ಖಾಸಗಿ ವೈದ್ಯರು ಸೋಂಕು ಲಕ್ಷಣ ಇದ್ದವರನ್ನು ಕೂಡಲೇ ಕೋವಿಡ್ ತಪಾಸಣೆಗೆ ಒಳಪಡಿಸಬೇಕು. ಕರೋನಾ ಪಾಸಿಟಿವ್ ಇದ್ದರೆ ಸೋಂಕಿತರಿಗೆ ಹೋಮ್ ಐಸೋಲೇಶನ್ ಅಥವಾ ಕೋವಿಡ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಂಜಿತ್, ವಂಡ್ಸೆ ಹೋಬಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನ ನಡೆಯುತ್ತಿದ್ದು, ಈ ಲಸಿಕೆ ಅಭಿಯಾನವನ್ನು ಮೂಡುಬಿದಿರೆ-ಮುಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು. ಮೊದಲ ಹಂತದ ವ್ಯಾಕ್ಸಿನೇಶನ್ ಡ್ರೈವ್ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ನಡೆಯಿತು. ಲಸಿಕೆ ಅಭಿಯಾನದ ಭಾಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬವರ್ಗ ಸೇರಿ ೫೦೦ ಜನರಿಗೆ ಕೋವಿಶೀಲ್ಡ್ ಲಸಿಕೆ (ಆನ್‌ಸೈಟ್ ಬಲ್ಕ್ ವ್ಯಾಕ್ಸಿನ್) ವಿತರಿಸಲಾಯಿತು. ನಾಲ್ಕು ಹಂತಗಳಲ್ಲಿ ಲಸಿಕೆ ವಿತರಣೆ ನಡೆಯಲಿದ್ದು, ಸುಮಾರು ೨೦೦೦ ಜನರಿಗೆ ವ್ಯಾಕ್ಸಿನೇಶನ್ ಮಾಡುವ ಗುರಿಯನ್ನು ಹೊಂದಲಾಗಿದೆ. ಇದೇ ಅಭಿಯಾನದ ಭಾಗವಾಗಿ ಮೂಡುಬಿದಿರೆಯ ಸಾರ್ವಜನಿಕರಿಗೆ ಶನಿವಾರದಂದು ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ಲಸಿಕೆ ನೀಡಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದರು. ಲಸಿಕೆ ಅಭಿಯಾನದಲ್ಲಿ ನಿಟ್ಟೆ ಮೆಡಿಕಲ್ ಅಕಾಡೆಮಿಯ ಕಮ್ಯುನಿಟಿ ಮೆಡಿಸಿನ್. ಅನಸ್ತೇಶಿಯಾ, ಸ್ಟಾಫ್ ನರ್ಸ್‌ಗಳು ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಭಾನುವಾರ 494 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 2 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 123, ಕುಂದಾಪುರ, ಬೈಂದೂರು ತಾಲೂಕಿನ 191, ಕಾರ್ಕಳ, ಹೆಬ್ರಿ ತಾಲೂಕಿನ 178 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 494 ಪ್ರಕರಣಗಳಲ್ಲಿ 10 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 484 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 73 ವರ್ಷದ ಪುರುಷ, 38 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 494 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4321 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 4077 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 1802 ಮಂದಿಗೆ ಮೊದಲನೇ ಡೋಸ್, 10 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ: ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಮನವಿ ಮಾಡಿತು. ಈ ಸಂದರ್ಭ ಮಾತನಾಡಿ ಅಧ್ಯಕ್ಷ ಪ್ರಭಾಕರ ಬಿ. ಕುಂಭಾಶಿ ಮಾತನಾಡಿ ಪಾಪದ ವ್ಯಕ್ತಿಯನ್ನು ಕರೆಸಿ ಪೂರ್ವದ್ವೇಷದಿಂದ ಕೊಲೆ ಮಾಡಿರುವುದು ಅಕ್ಷಮ್ಯ ಅಪರಾಧ. ಈ ಕೃತ್ಯದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಬಗ್ಗೆ ನಿಷ್ಪಕ್ಷಪಾತ ತನಿಕೆಯಾಗಬೇಕು. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು. ಬೆಳಿಗ್ಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಗೆ ನ್ಯಾಯ ಒದಗಿಸುವಂತೆ ಕೋರಿ ಮನವಿ ಸಲ್ಲಿಸಲಾಯಿತು. ಕುಂದಾಪುರ ಡಿವೈಎಸ್ಪಿ, ಶಂಕರನಾರಾಯಣ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ನೊಂದ ಕುಟುಂಬಕ್ಕೆ ನ್ಯಾಯ ನೀಡಲು ಆಗ್ರಹಿಸಲಾಯಿತು. ಉದಯ ಗಾಣಿಗರ ಕುಟುಂಬಕ್ಕೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಗೌರವಾಧ್ಯಕ್ಷ ಕೆ. ಎಂ. ಲಕ್ಷ್ಮಣ, ಕಾರ್ಯದರ್ಶಿ ನಾಗರಾಜ ಗಾಣಿಗ ಬಸ್ರೂರು, ಕೋಶಾಧಿಕಾರಿ ನಾಗರಾಜ ಗಾಣಿಗ ಹಿಲ್ಕೋಡು, ಉಪಾಧ್ಯಕ್ಷರಾದ ರವಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಡಮೊಗೆ ನಿವಾಸಿ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಈ ಕೃತ್ಯದಲ್ಲಿ ಭಾಗಿಯಾಗಿರುವ ಇತರರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆಗ್ರಹಿಸಿದ್ದಾರೆ. ಕಟ್‌ಬೆಲ್ತೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಬಿಜೆಪಿ ಕಾರ್ಯಕರ್ತರು ಕೆಲವೆಡೆ ಲಾಕ್‌ಡೌನ್ ಹೆಸರಿನಲ್ಲಿ ದಬ್ಬಾಳಿಕೆ ರಾಜಕೀಯ ನಡೆಸುತ್ತಿದ್ದಾರೆ. ಬೈಂದೂರು ಕ್ಷೇತ್ರದಲ್ಲಿಯೂ ನೈತಿಕ ಪೊಲೀಸ್‌ಗಿರಿ ಹೆಚ್ಚಿದೆ. ಓರ್ವ ಸಜ್ಜನ ವ್ಯಕ್ತಿಯನ್ನು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದ್ದು ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳಿಗೂ ಶಿಕ್ಷೆಯಾಗಬೇಕು ಎಂದರು. ಮೃತ ಉದಯ ಗಾಣಿಗರಿಗೆ ಪತ್ನಿ ಹಾಗೂ ಎರಡು ಮಕ್ಕಳಿದ್ದು ಕುಟುಂಬಕ್ಕೆ ಆಸರೆಯಾಗಿದ್ದವರನ್ನು ಕೊಲೆ ಮಾಡಲಾಗಿದೆ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಕೆಲಸವಾಗಬೇಕು ಎಂದರು. ಬೈಂದೂರು ಶಾಸಕರು ರಾಜಿನಾಮೆ ನೀಡಲಿ: ಬೈಂದೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರು ಭಾಗದ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ನೌಕರರು ಹಾಗೂ ಪೌರಕಾರ್ಮಿಕರಿಗೆ ದಿನಸಿ ಸಾಮಾಗ್ರಿಗಳು, ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಯಿತು. ಭಾನುವಾರು ಬೈಂದೂರು ರೋಟರಿ ಕ್ಲಬ್’ನಲ್ಲಿ ಕಿಟ್ ವಿತರಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಿ ಮಾತನಾಡಿ ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರಿಗೆ ಸ್ಪಂದಿಸುತ್ತಿರುವುದು ಬಹುದೊಡ್ಡ ಕಾರ್ಯ. ಟ್ರಸ್ಟ್ ಮೂಲಕ ಮನೆ ನಿರ್ಮಾಣ, ಆರ್ಥಿಕ ಸಹಕಾರವನ್ನು ನಿರಂತರವಾಗಿ ಮಾಡುತ್ತಿರುವುದು ಶ್ಲಾಘನೀಯವಾದುದು. ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರು ನಿರಂತರವಾಗಿ ಕೋವಿಡ್ ನಿಯಂತ್ರಣದಲ್ಲಿ ಶ್ರಮಿಸುತ್ತಿದ್ದಾರೆ. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟ್ ಮೂಲಕ ಹತ್ತಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದ್ದು ಇಂದಿನಿಂದ ಕೆಲವು ದಿನಗಳ ಕಾಲ ಪ್ರತಿ ಗ್ರಾಮದಲ್ಲಿಯೂ ದಿನಸಿ ಕಿಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಜೂ.06:ಯಡಮೊಗೆ ಗ್ರಾಮ ಪಂಚಾಯತಿಯ ಹೊಸಬಾಳುವಿನಲ್ಲಿ ಶನಿವಾರ ರಾತ್ರಿ ನಡೆದ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪಾದಿತ ಯಡಮೊಗೆ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಶಂಕರನಾರಾಯಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳೂರು -74 ಗ್ರಾ.ಪಂ ಸದಸ್ಯರೊಬ್ಬರ ಮನೆಯಲ್ಲಿ ಪ್ರಾಣೇಶ್ ಯಡಿಯಾಳ್ ನನ್ನು ತಡರಾತ್ರಿ 3 ಗಂಟೆಯ ಸಮಯದಲ್ಲಿ ವಶಕ್ಕೆ ಪಡೆಯಲಾಗಿದೆ. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ಮನೆಯ ಎದುರಿನ ರಸ್ತೆಯ ಮೇಲೆ ನಿಂತಿದ್ದ ಉದಯ ಅವರ ಮೇಲೆ ಪ್ರಾಣೇಶ್ ಯಡಿಯಾಳ ಏಕಾಏಕಿಯಾಗಿ ಕಾರು ಚಲಾಯಿಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡು ಉದಯ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯುವ ಯತ್ನ ನಡೆಸಿದರಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ► ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು. ಗ್ರಾಮ ಪಂಚಾಯತಿ ಅಧ್ಯಕ್ಷನಿಂದಲೇ ಕೊಲೆ? – https://kundapraa.com/?p=48989 . ಗ್ರಾ.ಪಂ.ನಲ್ಲಿ ನಡೆಯುವ ಅನ್ಯಾಯ, ಅಕ್ರಮಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಉದಯ ಗಾಣಿಗ ಬರಹ ಪ್ರಕಟಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಜೂ.05: ಲಾಕ್‌ಡೌನ್‌‌ ಸಮಯದಲ್ಲಿ ಜನಸಾಮಾನ್ಯರಿಗಾದ ತೊಂದರೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ‌ ಘಟನೆ ಯಡಮೊಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಬಾಳು‌ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಅಪಘಾತವು ಪೂರ್ವ ನಿಯೋಜಿತವಾದದ್ದು, ಗ್ರಾಮ ಪಂಚಾಯತಿ ಅಧ್ಯಕ್ಷನೇ ವೈಷಮ್ಯದಿಂದ ಕಾರು ಹತ್ತಿಸಿ ಕೊಲೆಗೈದಿದ್ದಾನೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಯಡಮೊಗೆ ಗ್ರಾಮದ ಹೊಸಬಾಳು ನಿವಾಸಿ ಉದಯ ಗಾಣಿಗ (45) ಅಪಘಾತದಲ್ಲಿ ಮೃತ ದುರ್ದೈವಿ. ಆರೋಪಿ ಯಡಮೊಗೆ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಘಟನೆಯ ಬಳಿಕ ಕಾರು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಆಗಿದ್ದೇನು? ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ಮನೆಯ ಎದುರಿನ ರಸ್ತೆಯ ಬದಿಯಲ್ಲಿ ನಿಂತಿದ್ದ ಉದಯ್ ಗಾಣಿಗ‌ ಎಂಬುವವರ ಮೇಲೆ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಏಕಾಏಕಿಯಾಗಿ ಕಾರು ಚಲಾಯಿಸಿದ್ದಾನೆ. ಗಂಭೀರ ಗಾಯಗೊಂಡ ಉದಯ ಅವರನ್ನು ಸ್ಥಳೀಯ ನಿವಾಸಿಗಳು ಆಂಬುಲೆನ್ಸ್ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶನಿವಾರ 552 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 1 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 208, ಕುಂದಾಪುರ, ಬೈಂದೂರು ತಾಲೂಕಿನ 139, ಕಾರ್ಕಳ, ಹೆಬ್ರಿ ತಾಲೂಕಿನ 197 ಮಂದಿಗೆ ಹಾಗೂ ಹೊರ ಜಿಲ್ಲೆಯ 8 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 552 ಪ್ರಕರಣಗಳಲ್ಲಿ 21 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 531 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 70 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 734 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4323 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3781 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 4577 ಮಂದಿಗೆ ಮೊದಲನೇ ಡೋಸ್, 956 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,68,422 ಮಂದಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ.ಜೂ.5: ಕೋವಿಡ್-19ರ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯುವ ನಿಟ್ಟಿನಲ್ಲಿ ಪಾಸಿಟಿವ್ ಪ್ರಕರಣಗಳು ಹಾಗೂ ಮರಣ ದರವನ್ನು ತಗ್ಗಿಸಲು ಜೂನ್ 7 ಬೆಳಗ್ಗೆ 6 ರಿಂದ ಜೂನ್ 14 ರ ಬೆಳಗ್ಗೆ 6 ಗಂಟೆಯವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ ಸೆಕ್ಷನ್ 144(3) ನ್ನು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ಕೆಳಕಡಂತೆ ಮಾರ್ಗಸೂಚಿಯನ್ನು ಹೊರಡಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ. ನಿಗದಿಯಾಗಿರುವ ವಿಮಾನ ಪ್ರಯಾಣ ಹಾಗೂ ರೈಲು ಪ್ರಯಾಣಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆಟೋ, ಕ್ಯಾಬ್ ಗಳು ಟ್ಯಾಕ್ಸಿಗಳ (including cabs by aggregators) ಮೂಲಕ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವವರು ವಿಮಾನಯಾನ ಟಿಕಟ್ ಗಳು ಹಾಗೂ ರೈಲು ಪ್ರಯಾಣದ ಟಿಕೆಟ್ ಗಳನ್ನೇ ಪಾಸ್ ಗಳಂತೆ ಬಳಸಿಕೊಳ್ಳಬಹುದಾಗಿದೆ. ತುರ್ತು ಸಂದರ್ಭದಲ್ಲಿ ಬಾಡಿಗೆಗೆ ಪಡೆದ ಹಾಗೂ ಈ ಮಾರ್ಗಸೂಚಿಗಳಲ್ಲಿ…

Read More