ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗದಿರುವ ಹಿನ್ನೆಲೆಯಲ್ಲಿ 50ಕ್ಕಿಂತ ಹೆಚ್ಚಿನ ಕೋವಿಡ್ ಪ್ರಕರಣಗಳಿರುವ ಗ್ರಾಮಗಳನ್ನು ಜೂನ್ 2 ರಿಂದ 7ರ ತನಕ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳನ್ನು ಗ್ರಾಮದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸೋಮವಾರ ಆದೇಶ ಹೊರಡಿಸಿದ್ದು ಅದರಂತೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನ 11 ಗ್ರಾಮಗಳು, ಹೆಬ್ರಿ ತಾಲೂಕನ ಬೆಳ್ವೆ ಸೇರಿದಂತೆ ಉಡುಪಿ ಜಿಲ್ಲೆಯ ಒಟ್ಟು 33 ಗ್ರಾಮಗಳು ಸಂಪೂರ್ಣ ಲಾಕ್ ಆಗಲಿದೆ. ಜಿಲ್ಲಾಡಳಿತ ಲಾಕ್ಡೌನ್’ಗೆ ಆದೇಶಿಸಿದರು ಗ್ರಾಮಗಳು: ಶಿರೂರು, ಜಡ್ಕಲ್, ಕಂಬದಕೋಣೆ, ನಾಡ, ಕಾವ್ರಾಡಿ, ಹೊಂಬಾಡಿ ಮಂಡಾಡಿ, ಕೋಟೇಶ್ವರ, ಹಾಲಾಡಿ, ಇಡೂರು ಕುಂಜ್ಞಾಡಿ, ಆಜ್ರಿ, ಆಲೂರು, 38 ಕಳತ್ತೂರು, 80 ಬಡಗಬೆಟ್ಟು, ಅಲೆವೂರು, ಪೆರ್ಡೂರು, ತೆಂಕನಿಡಿಯೂರು, ಬೊಮ್ಮರಬೆಟ್ಟು, ಬೆಳಪು, ಬೆಳ್ಳೆ, ಪಡುಬಿದ್ರಿ, ಶಿರ್ವ, ಮಾಳ, ಈದು, ಕುಕ್ಕುಂದೂರು, ಕಡ್ತಲ, ಮರ್ಣೆ, ಪಳ್ಳಿ, ನಿಟ್ಟೆ, ಮಿಯಾರು, ಬೆಳ್ಮಣ್,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಗೆ ಇನ್ನು 2 ರಿಂದ 3 ದಿನದಲ್ಲಿ ಮುಂಗಾರು ಪ್ರವೇಶವಾಗುವ ಸಂಭವವಿದ್ದು, ಮುಂಗಾರು ಮಳೆಯಿಂದ ಸಂಭವಿಸಬಹುದಾದ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧವಾಗಿರುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು. ಅವರು ವೀಡಿಯೋ ಸಂವಾದದ ಮೂಲಕ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂಗಾರು ಮಳೆಯ ಸಮಯದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಎದುರಿಸಲು ಅಗತ್ಯ ಸೂಚನೆ, ನಿರ್ದೇಶನಗಳನ್ನು ನೀಡಿದರು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿರುವುದರ ಕುರಿತು ಮತ್ತೊಮ್ಮೆ ಪರಿಶೀಲಿಸಿ, ರಾಜಕಾಲುವೆಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಅಗತ್ಯವಿರುವ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಿ. ಚರಂಡಿ ಮತ್ತು ರಾಜ ಕಾಲುವೆಗಳಿಂದ ಮೇಲೆತ್ತಿದ್ದ ಮಣ್ಣನ್ನು ಸೂಕ್ತ ರೀತಿಯಲ್ಲಿ ಬೇರೆಡೆಯಲ್ಲಿ ವಿಲೇವಾರಿ ಮಾಡಿ ಎಂದು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ಗ್ರಾಮಗಳಲ್ಲಿ 24*7 ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಸಿದ್ಧವಾಗಿಟ್ಟುಕೊಳ್ಳಿ. ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ , ಮಕ್ಕಳ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಗಳ ನಿರ್ಮಾಣ , ಅಗತ್ಯ ಬೆಡ್ಗಳ ವ್ಯವಸ್ಥೆ ಮತ್ತು ಚೈಲ್ಡ್ ವೆಂಟಿಲೇಟರ್ ಗಳನ್ನು ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದರು. ಅವರು ವೀಡಿಯೋ ಸಂವಾದದ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ 50 ಕ್ಕೂ ಸಕ್ರಿಯ ಪ್ರಕರಣಗಳಿರುವ ಗ್ರಾಮ ಪಂಚಾಯತ್ ಗಳನ್ನು ಬುಧವಾರದಿಂದ ಭಾನುವಾರದವರೆಗೆ 5 ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಮಾಡುವ ಕುರಿತಂತೆ ಕ್ರಮ ಕೈಗೊಳ್ಳಿ, ಸಂಬಂಧಪಟ್ಟ ಗ್ರಾಮಗಳ ಜನತೆಗೆ ಅಗತ್ಯ ವಸ್ತುಗಳ ಖರೀದಿಗೆ ಒಂದು ದಿನ ಕಾಲಾವಕಾಶ ನೀಡಿ, ನಂತರದ ದಿನದಿಂದ ಕಂಪ್ಲೀಟ್ ಲಾಕ್ ಡೌನ್ ಮಾಡುವಂತೆ ಸಚಿವ ಬೊಮ್ಮಾಯಿ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಪ್ರಸ್ತುತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 519 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 231, ಕುಂದಾಪುರ, ಬೈಂದೂರು ತಾಲೂಕಿನ 174, ಕಾರ್ಕಳ, ಹೆಬ್ರಿ ತಾಲೂಕಿನ 113 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 519 ಪ್ರಕರಣಗಳಲ್ಲಿ 9 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 510 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 78 ವರ್ಷದ ವೃದ್ಧೆ, 72 ವರ್ಷದ ವೃದ್ಧೆ, 49 ವರ್ಷದ ಪುರುಷ, ಕಾರ್ಕಳದ 89 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 765 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5092 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2879 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 5294 ಮಂದಿಗೆ ಮೊದಲನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಇಂಡಿಯನ್ ಸೀನಿಯರ್ ಛೇಂಬರ್ ಲೀಜನ್‌ನಿಂದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಕೋವಿಡ್ ಮುಂಜಾಗ್ರತಾ ಕ್ರಮಕ್ಕಾಗಿ ಸುರಕ್ಷತಾ ಕೋವಿಡ್ ಕಿಟ್‌ಗಳನ್ನು ವಿತರಿಸಲಾಯಿತು. ಲೀಜನ್‌ನ ಅಧ್ಯಕ್ಷ ಸೀನಿಯರ್ ಎನ್. ಕೆ. ಬಿಲ್ಲವ ಮತ್ತು ರಾಷ್ಟ್ರೀಯ ಸಂಯೋಜಕ ಸೀನಿಯರ್ ಗಿರೀಶ್ ಶ್ಯಾನುಭಾಗ್ ಸುರಕ್ಷತಾ ಕಿಟ್‌ಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ. ಎಂ. ಮುಂದಿನಮನಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಲೀಜನ್‌ನ ನಿಕಟಪೂರ್ವ ಕಾರ್ಯದರ್ಶಿ ಸೀನಿಯರ್ ರಾಮಕೃಷ್ಣ ದೇವಾಡಿಗ ಸ್ವಾಗತಿಸಿದರು. ಸಿಇಒ ಕರುಣಾಕರ ಶೆಟ್ಟಿ, ಲೀಜನ್ನ ನಿಕಟಪೂರ್ವ ಅಧ್ಯಕ್ಷರಾದ ಉದಯ ಡಿ. ಆರ್., ಕಛೇರಿಯ ಸಿಬ್ಬಂದಿಗಳಾದ ಗೋವಿಂದ ಗಾಣಿಗ, ಮೋಹನ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳಾಗುತ್ತಿರುವ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಕೊರೋನಾ ಪ್ರಂಟ್‌ಲೈನ್ ವಾರಿಯರ್ಸ್‍ಗೆ 8.5ಲಕ್ಷ ಮೌಲ್ಯದ ಕೋವಿಡ್ ಕಿಟ್ ನೀಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಉಡುಪಿ ಜಿಲ್ಲಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಬಿಜೆಪಿ ಯುವ ಮೋರ್ಚಾ ಕೊರೋನಾ ಸಂಕಷ್ಟ ಸಮಯದಲ್ಲಿ ಸ್ಪಂದಿಸುತ್ತಾ ಬಂದಿದೆ. ಈಗಾಗಲೇ 328 ಯೂನಿಟ್ ರಕ್ತವನ್ನು ಜಿಲ್ಲಾ ಆಸ್ಪತ್ರೆಗೆ ನೀಡಿದೆ. ಸಹಾಯವಾಣಿ ಕೇಂದ್ರಗಳ ಮೂಲಕ ಮಾರ್ಗದರ್ಶನ ನೀಡುತ್ತಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಭಾರತದ ಪ್ರಧಾನಿಯಾಗಿ 7 ವರ್ಷಗಳಾಗುತ್ತಿರುವ ಸಂದರ್ಭದಲ್ಲಿ ವಿಭಿನ್ನವಾಗಿ ಆಚರಿಸಲು ಬೂತ್ ಮಟ್ಟಕ್ಕೆ ಇಳಿದಿದೆ. ಸುಮಾರು 8.5 ಲಕ್ಷ ವೆಚ್ಚದಲ್ಲಿ ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್‍ಗೆ ವಿವಿಧ ಸಲಕರಣೆಗಳನ್ನು ನೀಡುತ್ತಿದೆ. 10 ಸಾವಿರ ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್, ಶವಹೊದಿಕೆ, ಹ್ಯಾಂಡ್ವಾಸ್, ಅಕ್ಸಿಮೀಟರ್ಗಳನ್ನು ನೀಡುತ್ತಿದೆ. ಕೋವಿಡ್ ಕೇರ್ ಸೆಂಟರ್ಗಳಿಗೆ ಹಣ್ಣುಹಂಪಲು, ಅಕ್ಸಿಮೀಟರ್, ಸ್ಯಾನಿಟೈಸರ್ ಇತ್ಯಾದಿ ಅವಶ್ಯಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ನಿರ್ಲಕ್ಷಯತೆಗೆ ಒಳಗಾದ, ಪರಿತ್ಯಜಿಸಲ್ಪಟ್ಟ, ದೌರ್ಜನ್ಯಕ್ಕೊಳಗಾದ, ಶೋಷಣೆಗೊಳಗಾದ, ಕುಟುಂಬದಿಂದ ಬೇರ್ಪಟ್ಟ, ಮಕ್ಕಳು ಮತ್ತು ವಿಶೇಷವಾಗಿ ಕೋವಿಡ್-19 ನಿಂದ ಬಳಲುತ್ತಿರುವ ಮಕ್ಕಳು ಮತ್ತು ಪೋಷಕರಿಗೆ ಆಪ್ತ ಸಮಾಲೋಚನೆಗಾಗಿ ನೀಡಲಾಗಿದ್ದ , ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಾಯವಾಣಿ ಸಂಖ್ಯೆಯಲ್ಲಿ ಬದಲಾವಣೆಯಾಗಿದ್ದು, ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೋವಿಡ್ ಸಹಾಯವಾಣಿ ಸಂಖ್ಯೆ: 0820-2574937, ಮಕ್ಕಳ ಸಹಾಯವಾಣಿ ಸಂಖ್ಯೆ: 1098/ 0820-2592229, ಉಚಿತ ಟೆಲಿ ಕೌನ್ಸೆಲಿಂಗ್ ಸಹಾಯವಾಣಿ: 14499 ಗೆ ಬೆಳಿಗ್ಗೆ 8 ರಿಂದ ರಾತ್ರಿ 8 ತನಕ ಕರೆ ಮಾಡಿ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಏಳು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗಂಗೊಳ್ಳಿಯಲ್ಲಿ ಬಿಜೆಪಿ ವತಿಯಿಂದ ಕೋವಿಡ್ ಸೋಂಕಿತ ಬಡ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳ ಕಿಟ್‌ನ್ನು ವಿತರಿಸಲಾಯಿತು. ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಮಂಡಲದ ಉಪಾಧ್ಯಕ್ಷ ವಿನೋದ್ ಭಂಡಾರಿಯವರು ಕೊಡಮಾಡಿದ ದಿನಸಿ ಸಾಮಗ್ರಿಗಳ ಕಿಟ್‌ಗಳನ್ನು ಕೋವಿಡ ಸೋಂಕಿತ ಮೂರು ಬಡ ಕುಟುಂಬಗಳಿಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹಸ್ತಾಂತರಿಸಿದರು. ಈ ಸಂದರ್ಭ ಬಿಜೆಪಿ ತ್ರಾಸಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಶೋಕ್ ಎನ್. ಡಿ., ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ. ರಾಘವೇಂದ್ರ ಪೈ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಆಯುಷ್ ಇಲಾಖೆ, ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಹೋಮ್ ಐಸೋಲೇಶನ್ ಕೋವಿಡ್ ಸೋಂಕಿತರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಆಯುಷ್ ಔಷಧಿಗಳನ್ನು ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿತರಿಸಲಾಯಿತು. ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಪ್ಪಾಡಿ-ಗುಡಿಕೇರಿ, ಕಂಪ, ಮಣ್ಮನೆ, ಮಧುಕೋಡ್ಲು, ಮೈನಮಕ್ಕಿ ಮೊದಲಾದ ಪ್ರದೇಶಗಳಲ್ಲಿ ಸೋಂಕಿತರ ಮನೆಗೆ ತೆರಳಿ ಆಯುಷ್ ಔಷಧಿಗಳಾದ ಸಂಶಮನ ವಟಿ, ಆರ್ಕ್-ಇ-ಅಜೀಬ್, ಚ್ಯವನ ಪ್ರಾಶ, ಶರಬತ್-ಉ-ಉನಾಬ್, ಅಶ್ವಗಂಧ ಚೂರ್ಣ, ಆಯುಷ್-೬೪ ಮಾತ್ರೆಗಳನ್ನೊಳಗೊಂಡ ಕಿಟ್‌ಗಳನ್ನು ವಿತರಿಸಲಾಯಿತು. ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ ಅವರು ಔಷಧ ಸೇವನೆ ರೀತಿ, ಹೋಮ್ ಐಸೋಲೇಶನ್‌ನಲ್ಲಿರುವವರಿಗೆ ಆಹಾರ-ವಿಹಾರದ ಬಗ್ಗೆ ಮಾಹಿತಿ ನೀಡಿದರು. ಆಯುಷ್ ಇಲಾಖೆ, ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಹೋಮ್ ಐಸೋಲೇಶನ್ ಕೋವಿಡ್ ಸೋಂಕಿತರಿಗೆ ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆಯುಷ್ ಇಲಾಖೆ ಉಡುಪಿ ಮುಖಾಂತರ ಜಿಲ್ಲೆಯ ಎಲ್ಲಾ ತಾಲೂಕಿನ ಕಾರ್ಯನಿರ್ವಹಣಾಧಿಕಾರಿಯವರಿಗೆ ವಿತರಿಸಲಾಗಿದ್ದು, ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಮೂಲಕ ಹೋಮ್ ಐಸೋಲೇಶನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರ್ಕಾರದಿಂದ 4 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು ಈ ಬಗ್ಗೆ ಅರ್ಜಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ದೊರೆಯುತ್ತದೆ ಎಂಬ ಸಂದೇಶವೊಂದು ಒಂದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಕೋವಿಡ್‌ನಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಕೇಂದ್ರ ಸರಕಾರದಿಂದ ಪರಿಹಾರ ದೊರೆಯುವ ಯಾವುದೇ ಯೋಜನೆ ಸದ್ಯಕ್ಕಿಲ್ಲ. ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.
