ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶನಿವಾರ 684 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 290, ಕುಂದಾಪುರ, ಬೈಂದೂರು ತಾಲೂಕಿನ 267, ಕಾರ್ಕಳ, ಹೆಬ್ರಿ ತಾಲೂಕಿನ 123 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 684 ಪ್ರಕರಣಗಳಲ್ಲಿ 23 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 661 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 73 ವರ್ಷದ ವೃದ್ಧೆ, 68 ವರ್ಷದ ವೃದ್ಧೆ, ಕುಂದಾಪುರದ 62 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 848 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5775 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3611 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 6981 ಮಂದಿಗೆ ಮೊದಲನೇ ಡೋಸ್, 623 ಮಂದಿಗೆ…
Author: ನ್ಯೂಸ್ ಬ್ಯೂರೋ
ಸಮಸ್ಯೆ ಯಾರಿಗಿಲ್ಲ ಹೇಳಿ. ಹಾಗಂತ ತಲೆಯ ಮೇಲೆ ಕೈ ಹೊತ್ತು ಕುಳಿತರೆ ಬದುಕು ಸಾಗುವುದಿಲ್ಲ. ನಾವು ನಮಗಿಂತ ಮೇಲಿನವರನ್ನು ನೋಡಿ ನೊಂದುಕೊಳ್ಳುವುದಕ್ಕಿಂತ ನಮಗಿಂತ ಸಂಕಷ್ಟದಲ್ಲಿರುವ ಇತರರನ್ನು ನೋಡಿದರೆ ಸಾಕು. ನಮಗೆ ಭಗವಂತ ಇಷ್ಟನ್ನಾದರೂ ಕರುಣಿಸಿದ್ದಾನಲ್ಲ ಎಂಬ ತೃಪ್ತ ಭಾವ ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನೀವು ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡಿದ್ದಿರಿ ಅಂತ ನಿಮ್ಮ ಮನಸಿಗೆ ಅನಿಸಿದಾಗ ಒಮ್ಮೆ ಮರಗಳನ್ನು ನೋಡಿ. ಒಂದು ಸಮಯದಲ್ಲಿ ಅವು ತನ್ನೆಲ್ಲಾ ಎಲೆಗಳನ್ನು ಕಳೆದುಕೊಂಡರು ಎಂದಿಗೂ ಅವು ಕುಗ್ಗುವುದಿಲ್ಲ ಅವು ತಮ್ಮ ಸಮಯಕ್ಕಾಗಿ ಕಾಯುತ್ತವೆ. ಹಾಗೆ ನಾವು ಕೊಡ ಸಮಸ್ಯೆಗಳಿಗೆ ಹತಾಶರಾಗದೆ ಅವಮಾನಗಳಿಗೆ ಕುಗ್ಗದೆ ಬದುಕೋಣ. ಯುನಿವರ್ಸಿಟಿಗಳಿಂದ ಕಲಿಯುವ ಪಾಠಕಿಂತ ಬದುಕು ಕಲಿಸುವ ಪಾಠವೇ ದೊಡ್ಡದು. ನಾವು ಎಷ್ಟೋ ಜನರ ಸಮಸ್ಯೆಗಳಿಗೆ ದ್ವನಿಯಾಗುತ್ತೇವೆ. ಆದರೆ ನಮಗೆ ಸಮಸ್ಯೆ ಅಂತ ಬಂದಾಗ ತುಂಬಾ ಕಷ್ಟಪಡುತ್ತೇವೆ. ಕೆಲವರು ಹೇಳುವುದುಂಟು ನೀವು ಪತ್ರಕರ್ತರು, ಬರಹಗಾರರಿಗೆ ಏನು ಎಲ್ಲರ ಪರಿಚಯ ಉಂಟು ನಿಮಗೆ ಬೇಕಾದ ಕೆಲಸ ಕೊಡಲೆ ಮಾಡಿಸಿಕೊಳ್ಳಬಹುದು. ಆದರೆ ನೈಜತೆಯೇ ಬೇರೆ. ಬೇರೆಯವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮೇ 29ರಿಂದ ಜೂನ್ 07ರ ವರೆಗೆ ಸೆಲ್ಪ್ ಲಾಕ್‌ಡೌನ್ ಮಾಡಿ ಕೇವಲ ಸೋಮವಾರ ಮತ್ತು ಗುರುವಾರ ಬೆಳಿಗ್ಗೆ 6ರಿಂದ 10ಗಂಟೆ ವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಬಗ್ಗೆ ಗ್ರಾಮ ಪಂಚಾಯತ್ ಟಾಸ್ಕ್‌ಪೋರ್ಸ್ ಸಭೆಯಲ್ಲಿ ನಿರ್ಣಯಿಸಲಾಯಿತು. ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಟಾರ್ಸ್ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಮಹತ್ವದ ನಿರ್ಣಯಗಳನ್ನು ಅಂಗೀಕರಿಸಲಾಯಿತು. ವಾರದಲ್ಲಿ ಐದು ದಿನ ದಿನಗಳಲ್ಲಿ ಅಂಗಡಿ ತೆರೆಯದೆ ಅಂಗಡಿ ಮಾಲಕರೇ ಹೋಂ ಡೆಲಿವರಿ ನೀಡಲು ಅವಕಾಶ ಮಾಡಿಕೊಡುವುದು, ಹೋಟೆಲ್‌ಗಳಲ್ಲಿ ಪಾರ್ಸಲ್‌ಗೆ ಅವಕಾಶ ನೀಡುವುದು. ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವುದು, ಹೊರ ಜಿಲ್ಲೆಯಿಂದ ಬಂದವರ ಬಗ್ಗೆ ನಿಗಾ ಇರಿಸಿ ಕೊರೋನಾ ಪರೀಕ್ಷೆ ಮಾಡಿಸುವುದು, ಲಸಿಕೆ ಪ್ರಮಾಣ ಹೆಚ್ಚಳ ಮಾಡುವುದು, ಆಸ್ಪತ್ರೆಯಲ್ಲಿ ಸ್ಥಳದ ಅಭಾವ ಇರುವುದರಿಂದ ಸ್ಥಳೀಯ ಶಾಲೆಯಲ್ಲಿ ಲಸಿಕೆ ನೀಡುವುದು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್‌ನಿಂದ ಶನಿವಾರ ಬೈಂದೂರು ಸಾರ್ವಜನಿಕ ಆಸ್ಪತ್ರೆಗೆ ಮಾಸ್ಕ್, ಸ್ಯಾನಿಟೈಸರ್‌ನ್ನು ವಿತರಿಸಲಾಯಿತು. ಶ್ರೀ ರಾಮ ಸೌಹಾರ್ದ ಕೋ- ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಬೈಂದೂರು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ನಂದಿನಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಡಾ. ಮಹೇಂದ್ರ ಶೆಟ್ಟಿ, ಸಂಘದ ಉಪಾದ್ಯಕ್ಷ ಎಂ. ವಿನಾಯಕ ರಾವ್, ನಿರ್ದೇಶಕರಾದ ರಾಮಕೃಷ್ಣ ಖಾರ್ವಿ, ಶಿವರಾಮ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ರಾಜ್ಯಾದ್ಯಂತ ಕೋವಿಡ್-19 2ನೇ ಅಲೆಯ ಲಾಕ್ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ ರೂ.3,000 ಗಳ ಆರ್ಥಿಕ ನೆರವನ್ನು ಮಾನ್ಯ ಮುಖ್ಯಮಂತ್ರಿಗಳು ಮೇ 19 ರಂದು ಘೋಷಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ತಲಾ ರೂ.3,000 ಗಳ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯಡಿ ಆರ್ಥಿಕ ಸಂಕಷ್ಟದಲ್ಲಿರುವ ಎಲ್ಲಾ ಪ್ರಕಾರದ ಕಲಾವಿದರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕಲಾವಿದರು ವೃತ್ತಿನಿರತರಾಗಿದ್ದು, 35 ವರ್ಷ ಮೇಲ್ಪಟ್ಟವರಾಗಿರಬೇಕು ಹಾಗೂ ಕನಿಷ್ಠ 10 ವರ್ಷಗಳ ಕಲಾಸೇವೆ ಮಾಡಿರಬೇಕು. (ಕಲಾವಿದರು ಕಲಾಸೇವೆ ಮಾಡಿರುವಕನಿಷ್ಠ ಒಂದು ಪೋಟೋ ಲಗತ್ತಿಸುವುದು).ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರಬಾರದು ಹಾಗೂ ಯಾವುದೇ ಸರ್ಕಾರಿ ನೌಕರರಾಗಿರಬಾರದು (ರಾಜ್ಯ/ ಕೇಂದ್ರ/ ನಿಗಮ ಮಂಡಳಿ/ ಸರ್ಕಾರಿಅನುದಾನಿತ ಸಂಸ್ಥೆಗಳು/ ಅರೆ ಸರ್ಕಾರಿ ಸಂಸ್ಥೆಗಳು). 2020-21ನೇ ಸಾಲಿನ ಸಾಮಾನ್ಯ /ವಿಶೇಷಘಟಕ/ ಗಿರಿಜನಉಪಯೋಜನೆಯಡಿ ಸಾಂಸ್ಕೃತಿಕ ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಧನಸಹಾಯ ಪಡೆದವರು / ವಾದ್ಯ ಪರಿಕರ/ ವೇಷಭೂಷಣ ಖರೀದಿ/…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ರ ಎರಡನೆ ಅಲೆ ಕಾರಣ ರಾಜ್ಯದಲ್ಲಿ ವಿಧಿಸಿರುವ ಜನತಾಕರ್ಪ್ಯೂಅವಧಿಯಲ್ಲಿ ಹೂವು, ಹಣ್ಣು ಹಾಗೂ ತರಕಾರಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಹೆಕ್ಟೇರ್ ರೂ. 10,000 ಪರಿಹಾರವನ್ನು ಗರಿಷ್ಟ 1 ಹೆಕ್ಟೇರ್ ಗೆ ಹಾಗೂ ಕನಿಷ್ಟ ರೂ.2000 ಕ್ಕೆ ಮಿತಿಗೊಳಿಸಿ ವಿತರಿಸಲಾಗುವುದು. ವಾರ್ಷಿಕ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಳಿಗೆ 2021-22 ನೇ ಸಾಲಿನ ಬೇಸಿಗೆ ಬೆಳೆ ಸಮೀಕ್ಷೆ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 2021-22 ನೇ ಸಾಲಿನಮುಂಗಾರು ಬೆಳೆ ಸಮೀಕ್ಷೆ ಮಾಹಿತಿಯಆಧಾರದಲ್ಲಿ ಪಾವತಿಸಲು ಸರ್ಕಾರದ ಸೂಚನೆಯಿದ್ದು, ಬೆಳೆಸಮೀಕ್ಷೆಯಲ್ಲಿ ನಮೂದಾಗಿರುವ ಹಾಗೂ ಇಲಾಖೆಯ ತಂತ್ರಾಶದಲ್ಲಿ ನೊಂದಣಿಯಾಗಿರುವ ಹಾಗೂ ನೊಂದಣಿಯಾಗದೆಇರುವರೈತರ ವಿವರಗಳು ತೋಟಗಾರಿಕೆ ಇಲಾಖಾ ಕಛೇರಿಗಳಲ್ಲಿ ಲಭ್ಯವಿರುತ್ತದೆ. ರೈತರು ಈಗಾಗಲೇಇಲಾಖೆಯ FRUITS ತಂತ್ರಾಂಶದಲ್ಲಿ ನೊಂದಣಿಯಾಗಿದ್ದರೆ ಅರ್ಹ ರೈತರಿಗೆ ಪರಿಹಾರವನ್ನು ನೇರವಾಗಿ ಪಾವತಿಸಲಾಗುವುದು. FRUITS ತಂತ್ರಾಂಶದಲ್ಲಿ ನೋಂದಣಿಯಾಗದೇ ಇರುವ ರೈತರು ತಮ್ಮಆಧಾರ್ ನ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಮೊಬೈಲ್ ಸಂಖ್ಯೆಯ ವಿವರಗಳನ್ನು ತಾಲೂಕು ತೋಟಗಾರಿಕೆ ಇಲಾಖೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ವಂಡ್ಸೆ ಸಮೀಪದ ರಸ್ತೆಯಲ್ಲಿ ನಡೆದ ಟಿಪ್ಪರ್ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಸ್ಕೂಟರ್ ಸವಾರ ರಾಜು ಮೊಗವೀರ ಮೃತ ದುರ್ದೈವಿ. ವಂಡ್ಸೆ ಕಡೆಯಿಂದ ಬೆಳ್ಳಾಲ ಕಡೆಗೆ ತೆರಳುತ್ತಿದ್ದ ಟಿಪ್ಪರ್, ವಂಡ್ಸೆ ಕಡೆಗೆ ತೆರಳುತ್ತಿದ್ದ ರಾಜು ಮೊಗವೀರ ಎಂಬುವವರ ಸ್ಕೂಟರಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ರಸ್ತೆಗೆ ಬಿದ್ದಿದ್ದು, ಟಿಪ್ಪರ್ ಚಕ್ರ ತಲೆಯ ಮೇಲೆ ಹರಿದು ತೀವ್ರ ಸ್ವರೂಪದ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿಎಸ್ಐ ನಾಸೀರ್ ಹುಸೇನ್, ಸಿಬ್ಬಂದಿಗಳು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ತಡೆಯುವುದು ಅವಶ್ಯವಕವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಾದ್ಯ ಅತಿಅವಶ್ಯಕ ಚಟುವಟಿಕೆಗಳನ್ನು ಹೊರತು ಪಡಿಸಿ, ಇತರೆ ಉದ್ದೇಶಗಳಿಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ಯಾವುದೇ ಮೈಕ್ರೋಫೈನ್ಸ್/ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳ ಸಾಲ ವಸೂಲಾತಿದಾರರು, ಮನೆ ಮನೆಗೆ ಭೇಟಿ ನೀಡುವುದನ್ನು ಜೂನ್ 6 ರವರೆಗೆ ನಿರ್ಬಂಧಿಸಲಾಗಿದೆ. ಯಾವುದೇ ಮೈಕ್ರೋಫೈನಾನ್ಸ್/ ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಸಾಲಗಾರರಿಗೆ ಸಾಲ ಮರು ಪಾವತಿ ಮಾಡಲು ಒತ್ತಡ ಹೇರುವಂತಿಲ್ಲ, ಅಲ್ಲದೇ ಸಾಲ ಮರುಪಾವತಿ ಮಾಡಲು ಒತ್ತಡ ಹೇರಿದ್ದಲ್ಲಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಲು ನೋಡೆಲ್ ಅಧಿಕಾರಿಗಳನ್ನಾಗಿ, ರುದ್ರೇಶ್ ಡಿ.ಸಿ , ಲೀಡ್ ಡಿಸ್ಟಿಕ್ ಮ್ಯಾನೆಜರ್, 9449860858, ಪ್ರವೀಣ್ ಬಿ. ನಾಯಕ್, ಸಹಕಾರ ಸಂಘಗಳ ಉಪನಿಬಂಧಕರು 9448633338 ಇವರನ್ನು ನೇಮಿಸಲಾಗಿದೆ. ಈ ನೋಡೆಲ್ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕೃತವಾದ ಸಾಲ ಮರುಪಾವತಿ ಕುರಿತು ದೂರುಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 766 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 285, ಕುಂದಾಪುರ, ಬೈಂದೂರು ತಾಲೂಕಿನ 293, ಕಾರ್ಕಳ, ಹೆಬ್ರಿ ತಾಲೂಕಿನ 186 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 766 ಪ್ರಕರಣಗಳಲ್ಲಿ 17 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 749 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 62 ವರ್ಷದ ವೃದ್ಧೆ, 57 ವರ್ಷದ ಮಹಿಳೆ, 40 ವರ್ಷದ ಮಹಿಳೆ, ಕುಂದಾಪುರದ 51 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 835 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5942 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3396 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 6335 ಮಂದಿಗೆ ಮೊದಲನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸ್ತುತ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿಯಾಗಿರುವ ಡಾ. ನಾಗಭೂಷಣ ಉಡುಪ ಅವರನ್ನು ಉಡುಪಿ ಜಿಲ್ಲೆಯ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ (ಡಿಎಚ್ಓ) ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ಚಂದ್ರ ಸೂಡ ಮೇ 31ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಡಿಎಚ್ಓ ಸ್ಥಾನಕ್ಕೆ ಡಾ. ನಾಗಭೂಷಣ್ ಅವರು ಆಯ್ಕೆ ಆಗಿದ್ದು ಇದೇ ಮೇ 31ರಂದು ಡಾ. ಸುಧೀರ್ಚಂದ್ರ ಸೂಡ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
