Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಲತಾ ಪೂಜಾರಿ ಅವರಿಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಪಿ.ಎಚ್.ಡಿ ಪದವಿ ದೊರೆತಿದೆ. ಲತಾ ಪೂಜಾರಿ ಅವರು ಮಂಡಿಸಿದ “ಅನಾಲಿಸಿಸ್ ಆಫ್ ಕ್ರೆಡಿಟ್ ಆಪರೇಷನ್ ಇನ್ ಕಮರ್ಷಿಯಲ್ ಬ್ಯಾಂಕ್” ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದ್ದು, ಡಾ. ಎ. ಎಸ್. ಶಿರಾಳ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು. ಯಲ್ಲಾಪುರ ಹಾಗೂ ಧಾರವಾಡದಲ್ಲಿ ಶಿಕ್ಷಣವನ್ನು ಪೂರೈಸಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಐದು ವರ್ಷಗಳಿಂದ ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಲತಾ ಪೂಜಾರಿ ಅವರು, ಶಿರೂರು ಮೂಲದ ನಾರಾಯಣ ಮಾಚ ಪೂಜಾರಿ ಹಾಗೂ ಕಮಲ ಪೂಜಾರಿ ಅವರ ಪುತ್ರಿಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಉಡುಪಿಯ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ.ಉಡುಪಿ ಜಿಲ್ಲೆಯ ನಾಲ್ಕು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಈ ನಾಲ್ಕು ಸ್ಥಳಗಳಿಗೆ ವೋಟ್ ಮಾಡುವ ಮೂಲಕ ನೀವು ಇವುಗಳನ್ನು ರಾಜ್ಯದ ಅದ್ಭುತವನ್ನಾಗಿ ಮಾಡಬಹುದಾಗಿದೆ. ಉಡುಪಿಯ ನಾಮ ನಿರ್ದೇಶನಗಳು : ಒಂದು ಬದಿ ಸೌಪರ್ಣಿಕಾ ನದಿ, ಇನ್ನೊಂದೆಡೆ ಭೋರ್ಗರೆಯುವ ಸಮುದ್ರ, ಇದರ ನಡುವೆ ಹೆದ್ದಾರಿ. ರಸ್ತೆಯಲ್ಲಿ ಪ್ರಯಾಣಿಸುವಾಗ ಎರಡೂ ಬದಿ ಕಣ್ಣಿಗೆ ಹಬ್ಬವನ್ನುಂಟುಮಾಡುವ ಜಾಗ ಮರವಂತೆ ಕಡಲ ತೀರ.ಕರ್ನಾಟಕದ ಏಕೈಕ ಶಿಲಾಸ್ತಂಭಗಳ ದ್ವೀಪ, ಮಡಗಾಂಸ್ಕರ್ ಬಿಟ್ಟರೆ ವಿಶ್ವದಲ್ಲಿ ಎರಡನೇ ಪ್ರಕೃತಿ ನಿರ್ಮಿತ ಅದ್ಭುತ ದ್ವೀಪ ಸೈಂಟ್ ಮೆರೀಸ್.40ಅಡಿ ಪೀಠದ ಮೇಲೆ ನಿಂತಿರುವ 32 ಅಡಿ ಎತ್ತರದ ಮಧ್ವಾಚಾರ್ಯರ ಏಕಶಿಲೆಯ ಪ್ರತಿಮೆ ಉಡುಪಿಯ ಮತ್ತೊಂದು ಆಕರ್ಷಣೆ.ಕ್ರೈಸ್ತರು ಮಾತ್ರವಲ್ಲ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.17: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ 256 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ. 1.05 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 13 ಡಿವಿಡೆಂಡ್ ನೀಡಲು ಉದ್ದೇಶಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 47.32 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 40.09 ಕೋಟಿ ಸಾಲ ನೀಡಿದೆ. ಅದರಲ್ಲಿ ರೂ. 10.08 ಕೋಟಿ ಮೊತ್ತದ ಕೃಷಿ ಸಾಲವನ್ನು ಸಂಘವು ನೀಡಿದೆ ಎಂದರು. ಕೃಷಿ ಹಾಗೂ ಹೈನುಗಾರಿಕೆಗೆ ಸಾಲ ನೀಡಿ ಪ್ರೋತ್ಸಾಹ ನೀಡುತ್ತಾ ಬರಲಾಗುತ್ತಿದೆ. ಸಂಸ್ಥೆಯ ನಿರಂತರವಾಗಿ ಪ್ರಗತಿಯ ಪಥದಲ್ಲಿದ್ದು ಸದಸ್ಯರಿಗೂ ಬಡ್ಡಿಯಲ್ಲಿ ಕಡಿತ, ವಿವಿಧ ಮಾಹಿತಿ ಕಾರ್ಯಕ್ರಮಗಳು, ವಿದ್ಯಾಭ್ಯಾಸದಲ್ಲಿ ಸಾಧನೆಗೈದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಸೇರಿದಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಮಾಜಿಕ ಕಳಕಳಿ, ನೊಂದ ಜೀವಗಳಿಗೆ ಸ್ಪಂದನೆ, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಸ್ತ ನೀಡುವ ಸಂಘಟನೆಗಳ ಕಾರ್ಯ ಸ್ವತಂತ್ರ ಭಾರತದ ಅಮೃತ ಮಹೋತ್ಸವ ಆಚರಣೆಯ ಮಹತ್ವ ಮತ್ತು ಅರ್ಥವನ್ನು ಇಮ್ಮಡಿಗೊಳಿಸುತ್ತದೆ. ಈ ನಿಟ್ಟಿನಲ್ಲಿ ಮಿತ್ರ ಸೇವಾಶ್ರಯ ಸಮಿತಿಯ ಕಾರ್ಯ ಚಟುವಟಿಕೆಗಳು ಶ್ಲಾಘನೀಯ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕರಾದ ನವೀನ್ ಎಚ್ ಜೆ ನುಡಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನಲ್ಲಿ ಸಹಯೋಗದೊಂದಿಗೆ ಆಯೋಜಿಸಿದ ಸ್ವಾತಂತ್ರ್ಯ ಅಮೃತಮಹೋತ್ಸವ ಸಾಧಕರಿಗೆ ಸನ್ಮಾನ ವನಮಹೋತ್ಸವ ಮತ್ತು ಮಿತ್ರ ಸೇವಾಶ್ರಯ ಸಮಿತಿಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಕಾಲೇಜಿನ ಪ್ರಾಂಶುಪಾಲರಾದ ಡಾ ರಘು ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ನೌಕಾ ಸೇನೆ ಯೋಧರಾದ ಬಾಬು ಪೂಜಾರಿ ಮತ್ತು ಭೂಸೇನೆಯ ನಿವೃತ್ತ ಯೋಧರಾದ ಗಣಪತಿ ಖಾರ್ವಿ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಉತ್ತೀರ್ಣರಾದ ಹಳೆ ವಿದ್ಯಾರ್ಥಿ ಸಿ ಎ ಪ್ರವೀಣ್ ಶೆಟ್ಟಿ ಮತ್ತು ಹಾಲಿ ವಿದ್ಯಾರ್ಥಿ ರಾಷ್ಟ್ರಮಟ್ಟದ ಕರಾಟೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.16: ಜಿಲ್ಲೆಯ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈವರೆಗೆ ಜಿಲ್ಲೆಯ ಎಸ್ಪಿಯಾಗಿದ್ದ ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಅಧಿಕ್ಷಕರಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಮಚ್ಚಿಂದ್ರ ಅವರು ಚಿಕ್ಕಮಗಳೂರು ಜಿಲ್ಲೆಯ ಎಸ್ಪಿಯಾಗಿದ್ದರು. 2020ರಲ್ಲಿ ಅವರನ್ನು ಜಿಲ್ಲೆಯ ಎಸ್ಪಿಯಾಗಿ ಆದೇಶ ಹೊರಡಿಸಲಾಗಿತ್ತಾದರೂ ಕೊನೆಗೆ ಅದು ರದ್ದಾಗಿ ವಿಷ್ಣುವರ್ಧನ್ ಅವರು ಎಸ್ಪಿಯಾಗಿ ಬಂದಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪುರಸಭೆ ನೇತೃತ್ದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ಸೋಮವಾರ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಜರುಗಿತು. ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಅವರು ಧ್ವಜಾರೋರಣೆ ನೆರವೇರಿಸಿದ ಬಳಿಕ ಗೌರವ ವಂದನೆ ಸ್ವೀಕರಿಸಿ ಮಾತನಾಡಿ ಶ್ರದ್ದೆ, ತ್ಯಾಗದ ಸ್ಮರಣೆ ಮತ್ತು ರಾಷ್ಟ್ರಜಾಗೃತಿಯ ಸಂದರ್ಭ ಸ್ವಾತಂತ್ರ್ಯದ 75 ವರ್ಷಗಳ ಅಧ್ಯಾಯ ಪ್ರಸ್ತುತ ತಲೆಮಾರಿನ ಮುನ್ನಡೆಗೆ ನಿರಂತರ ಪ್ರೇರಣೆಗೆ, ಅನ್ವೇಷಣೆಗೆ ಖಚಿತ ಭರವಸೆ ದಿಕ್ಕಿನತ್ತ ಸಾಗಲು ಹೊಸ ಹುರುಪು ನೀಡುವ ಮಹಾದಿನ ಎಂದರು. ಅಸಂಖ್ಯಾತ ಜನರ ಹೋರಾಟ, ತ್ಯಾಗವನ್ನು ಸ್ಮರಿಸಿದರೆ ಅಮೃತ ಮಹೋತ್ಸವದ ಮಹತ್ವ ಅರಿವಾಗುತ್ತದೆ. ಸುಭಾಷ್ಚಂದ್ರ ಬೋಸ್ ಭಾರತದ ಸ್ವಾತಂತ್ರ್ಯ ಹೋರಾಟ ಬ್ರಿಟಿಷರ ಸಾಮ್ರಾಜ್ಯ ಶಾಹಿ ವಿರುದ್ಧ ಮಾತ್ರವೇ ಅಲ್ಲ, ಅದು ಜಗತ್ತಿನ ಸಾಮ್ರಾಜ್ಯಶಾಹಿ ವಿರುದ್ಧ ಕೂಡಾ ಹೌದು ಎಂದಿದ್ದರು ಎಂಬ ಮಾಹಿತಿ ನೀಡಿದರು. ಉಡುಪಿ ಜಿಲ್ಲೆ ಉದಯವಾಗಿ ರಜತ ಮಹೋತ್ಸವ ಸಂಭ್ರಮದಲ್ಲಿದೆ. ಶಿಕ್ಷಣ, ವೈದ್ಯಕೀಯ, ಪ್ರವಾಸೋದ್ಯಮ, ಧಾರ್ಮಿಕ ಹಲವು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಿತು. ಬೈಂದೂರು ಕ್ಷೇತ್ರದ ಮಾಜಿ ಶಾಸಕರು ಹಾಗೂ ಶ್ರೀ.ವಿ.ವಿ.ವಿ ಮಂಡಳಿ (ರಿ) ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಅವರು ಧ್ವಜಾರೋಹಣಗೈದು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು ರಾಷ್ಟ್ರೀಯ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಸ್ವಾತಂತ್ರ್ಯದ ಈ ಸಂಭ್ರಮದಲ್ಲಿ ಶಿಕ್ಷಣ ಕ್ಷೇತ್ರದ ಪಾತ್ರದ ಕುರಿತು ಮಾತನಾಡಿದರು. ಸಮಾರಂಭದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಶ್ರೀ ವಿ.ವಿ.ವಿ ಮಂಡಳಿಯ ಸದಸ್ಯರಾಗಿರುವ ಶೀನ ಪೂಜಾರಿ, ಜನತಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಂದಿ ದೇವಾಡಿಗ, ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿರುವ ರಾಘವೇಂದ್ರ ಕುಲಾಲ್, ಸಮರ್ಪಣಾ ಎಜುಕೇಶನಲ್ ಟ್ರಸ್ಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಇಂದು ಉಪ್ಪುಂದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಕ ಚಾಲನೆ ನೀಡಲಾಯಿತು. ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರಾದ ಅಮ್ಮನವರ ತೊಪ್ಲುವಿನ ದಿ. ಗೋವಿಂದ ಖಾರ್ವಿ ಸಂಕದ ಬಾಗಿಲು ಮನೆ ಅವರು ನಿವಾಸದ ತನಕ ಮೆರವಣಿಗೆ ಏರ್ಪಡಿಸಲಾಗಿತ್ತು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ದಿವಾಕರ ಶೆಟ್ಟಿ ಅವರು ಉದ್ಘಾಟಿಸಿದರು. ಮೆರವಣಿಗೆಯಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕ, ಶಿಕ್ಷಕಿಯವರು ಹಾಗೂ ಎಸ್ ಡಿ ಎಮ್ ಸಿ ಸದಸ್ಯರು, ಸಾರ್ವಜನಿಕ ರು ಭಾಗವಹಿಸಿದರು. ಸ್ವಾತಂತ್ರ್ಯ ಹೋರಾಟಗಾರ ಗೋವಿಂದ ಖಾರ್ವಿ ಯವರ ಮನೆಗೆ ಮೆರವಣಿಗೆ ತೆರಳಿ ಧ್ವಜರೋಹಣ ಮಾಡಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಲಾಯಿತು. ನಂತರ ಅವರ ಭಾವಚಿತ್ರವನ್ನು ಶಾಲೆಗೆ ತರಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಉದಯ್ ಪಡಿಯಾರ್, ಪಂಚಾಯತ್ ಉಪಾಧ್ಯಕ್ಷ ದಿವಾಕರ್ ಶೆಟ್ಟಿ, ಮುಖ್ಯೋಪಧ್ಯಾಯ ವೆಂಕಪ್ಪ ಉಪ್ಪಾರ, ಗೋವಿಂದ ಖಾರ್ವಿ ಯವರ ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಊರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಜಾದಿ-ಕಾ ಅಮೃತಮಹೋತ್ಸವದ ಅಂಗವಾಗಿ “ದೇಶದ ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು” ಈ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸರ್ಕಾರಿ ಪ್ರೌಢಶಾಲೆ ಹೆಸ್ಕುತ್ತೂರಿನ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ಅವರು ದೇಶದ ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ರಾಷ್ಟ್ರಭಕ್ತಿಯನ್ನು ಮೈಗೂಡಿಸಿಕೊಳ್ಳುತ್ತಾ ಸಾಧಕ ವಿದ್ಯಾರ್ಥಿಗಳಾಗಿ ದೇಶಕ್ಕೆ ಮಾದರಿ ಪ್ರಜೆಯಾಗುವಂತೆ ಕರೆ ನೀಡಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವಾರ,ಕಾಲೇಜಿನ ಉಪಪ್ರಾಂಶುಪಾಲರಾಗಿರುವ ರಮೇಶ್ ಪೂಜಾರಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕಿಯಾಗಿರುವ ಪ್ರಿಯಾಂಕ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿರುವ ಅಭಿಜಿತ್ ಬಹುಮಾನ ವಿಜೇತರ ಯಾದಿಯನ್ನು ವಾಚಿಸಿ, ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ವತಿಯಿಂದ ಮತ್ಸ್ಯ ಸಂಪತ್ತು ವೃದ್ಧಿ ಹಾಗೂ ಪ್ರಾಕೃತಿಕ ವಿಕೋಪಗಳಿಂದ ಯಾವುದೇ ಅವಘಡಗಳು ಜರುಗದಂತೆ ಕೋಡಿಯ ಕಿನಾರೆಯಲ್ಲಿ ಸಮುದ್ರ ಪೂಜೆ ನೆರವೇರಿಸಲಾಯಿತು. ದೇವಳದ ಪ್ರಧಾನ ಅರ್ಚಕರಾದ ಸುಮಂತ್ ಭಟ್ ಪೋರೋಹಿತ್ಯದಲ್ಲಿ ಸಾಂಗವಾಗಿ ನೆರವೇರಿಸಿದರು. ಈ ವೇಳೆಯಲ್ಲಿ ದೇವಳದ ಅಧ್ಯಕ್ಷರಾದ ಜಯನಂದ ಖಾರ್ವಿ, ಉಪಾಧ್ಯಕ್ಷ ರಾದ ಪೀತಾಂಬರ ಗಣಪತಿ ಖಾರ್ವಿ, ಮೊಕ್ತೇಸರರಾದ ಪಾಂಡು ಸಾರಂಗ್, ಕಾರ್ಯಕ್ರಮದ ಉಸ್ತುವಾರಿ ಸುನೀಲ್ ಖಾರ್ವಿ ತಲ್ಲೂರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷ ನಾರಾಯಣ ಖಾರ್ವಿ ಮದ್ದುಗುಡ್ಡೆ, ವಿದ್ಯಾನಿಧಿ ಅಧ್ಯಕ್ಷ ದಿನಕರ ಖಾರ್ವಿ, ನವರಾತ್ರಿ ಸಮಿತಿಯ ಅಧ್ಯಕ್ಷೆ ಸಾವಿತ್ರಿ ಡಿ ಖಾರ್ವಿ, ಮಹಾಕಾಳಿ ಮಹಿಳಾ ಮಂಡಳಿಯ ಅಧ್ಯಕ್ಷೆ ವಸಂತಿ ಸಾರಂಗ, ಹಾಗೂ ಸಂಘದ ಸದಸ್ಯೆಯರ ಸಹಿತ ಸಮಾಜ ಭಾಂದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Read More