ಬೈಂದೂರಿನಲ್ಲಿ ಕರ್ನಾಟಕ ಅರೆಭಾಷೆ ಅಕಾಡೆಮಿಯ ‘ಸಾಹೇಬ್ರು ಬಂದವೇ’ ನಾಟಕ ಪ್ರದರ್ಶನ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಂದಾಪ್ರ ಕನ್ನಡ ಭಾಷೆ ತನ್ನ ಮೂಲ ಸೊಗಡು ಕಳೆದುಕೊಳ್ಳುತ್ತಿರುವುದು ವಿಷಾದನೀಯ ಸಂಗತಿಯಾಗಿದ್ದು, ಅದರ ಪುನಶ್ಚೇತನಕ್ಕೆ ಅಕಾಡೆಮಿ ರಚಿಸಲು ನಿಯೋಗದೊಂದಿಗೆ ತೆರಳಿ ಮುಖ್ಯಮಂತ್ರಿಗಳೊಂದಿಗೆ ಪ್ರಸ್ತಾಪಿಸಲಾಗುವುದು ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಸೋಮವಾರ ಬೈಂದೂರಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು, ಜೆಸಿಐ ಬೈಂದೂರು ಸಿಟಿ ಹಾಗೂ ಸಂಚಲನ ರಿ. ಹೊಸೂರು ಆಶ್ರಯದಲ್ಲಿ ಕರ್ನಾಟಕ ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ರಂಗ ಪ್ರಸ್ತುತಿ ‘ಸಾಹೇಬ್ರು ಬಂದವೇ’ ನಾಟಕ ಪ್ರದರ್ಶನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪ್ರ ಕನ್ನಡ ಭಾಷಿಕರಲ್ಲಿ ಕರಾವಳಿಯ ಕ್ರೀಯಾಶೀಲತೆ ಹಾಗೂ ಘಟ್ಟದ ಗಡಸುತನ ಮೇಳೈಸಿದ್ದು, ಉಳಿದೆಲ್ಲಾ ಪ್ರದೇಶಗಳಿಗಿಂತ ಭಿನ್ನವಾಗಿದೆ. ಕುಂದಾಪುರದ ಜನರ ನೇರವಾಗಿ ಮಾತನಾಡಿದರೂ, ಅಪಾರ ಪ್ರೀತಿ ವಿಶ್ವಾಸವನ್ನು ಹೊಂದಿದವರಾಗಿದ್ದಾರೆ ಎಂದು ಇಲ್ಲಿನ ಜನಸಂಸ್ಕೃತಿಯನ್ನು ಶಾಸಕರು ಬಣ್ಣಿಸಿದರು. ಸುಳ್ಯದ ಅರೆಭಾಷೆಗೂ ಕುಂದಾಪುರದ ಕುಂದಾಪುರ ಕನ್ನಡಕ್ಕೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗುಲ್ವಾಡಿ ಗ್ರಾಮ ಕೌಜೂರು ಬಳಿ ಮುತಾಲಿಬ್ ಎಂಬವರ ಮನೆ ಹಿಂಭಾಗ ಅಕ್ರಮ ದಾಸ್ತಾನು ಮಾಡಿದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭಾನುವಾರ ರಾತ್ರಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಮುತಾಲಿಬ್ ಎಂಬವರ ಮನೆ ಹಿಂಬಾಗದಲ್ಲಿ ಶೇಖರಿಸಿಟ್ಟ 1.86 ಲಕ್ಷ ರೂ. ಮೌಲ್ಯದ 248 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಂಡ್ಲೂರು ಎಸ್ಸೈ ರಾಜ ಕುಮಾರ್, ಸುಧಾ ಪ್ರಭು ಕುಂದಾಪುರ ಆಹಾರ ಇಲಾಖೆ ನಿರೀಕ್ಷಕ ಹೆಚ್. ಎಸ್. ಸುರೇಶ್ ದಾಳಿ ನಡೆಸಿದ್ದು, ಕಂಡ್ಲೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕಾಗಿ, ಶೇ.75ಕ್ಕಿಂತ ಹೆಚ್ಚಿನ ಪ್ರಮಾಣದ ತೀವ್ರತರನಾದ ಅಂದರೆ ಸೊಂಟದ ಕೆಳಭಾಗದಲ್ಲಿ, ಕಾಲುಗಳಲ್ಲಿ ಬಲವಿಲ್ಲದ ಆದರೆ ಎರಡೂ ಕೈಗಳು ಸ್ವಾಧೀನದಲ್ಲಿದ್ದು ಇತರ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ, ತಹಶೀಲ್ದಾರರಿಂದ ಪಡೆದ ಜಾತಿ ಮತ್ತು 2ಲ.ರೂ ಒಳಗಿನ ಆದಾಯ ಪ್ರಮಾಣ ಪತ್ರ ಹೊಂದಿರುವ ವಿದ್ಯಾರ್ಥಿ/ಖಾಸಗಿ ಅಥವಾ ಸ್ವ-ಉದ್ಯೋಗದಲ್ಲಿರುವ ವ್ಯಕ್ತಿಗಳಿಂದ ಎಸ್.ಸಿ ಕೋಟಾದಡಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದ್ದು, ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810/811 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ವ್ಯವಸಾಯ ಸಹಕಾರಿ ಸಂಘ ವಾರ್ಷಿಕ ಮಹಾಸಭೆಯು ಸಂಘದ ಪ್ರಧಾನ ಕಚೇರಿಯಲ್ಲಿ ಜರುಗಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ರೋಹಿತ್ ಜೋಯ್ಸ್, ಕೊಲ್ಲೂರು ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘವು 2019-20 ಸಾಲಿನಲ್ಲಿ ₹97 ಕೋಟಿ ವ್ಯವಹಾರ ನಡೆಸಿ ₹30.34 ಲಕ್ಷ ಲಾಭಗಳಿಸಿದೆ. ಸದಸ್ಯರಿಗೆ ಶೇ. 12 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಗ್ರಾಹಕರ ಸಹಕಾರ,ನಿಧಿಗಳ ಸಮರ್ಪಕ ನಿರ್ವಹಣೆ, ಸಾಲ ವಿತರಣೆ ಹಾಗೂ ಸಮಯೋಚಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಹೇಳಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ. ಗಣೇಶ ಶ್ಯಾನುಭೋಗ್ ವಾರ್ಷಿಕ ವರದಿ ಮಂಡಿಸಿ, ಸಂಘವು ₹91.32 ಲಕ್ಷ ಪಾಲು ಬಂಡವಾಳ ಹೊಂದಿದ್ದು, ₹17.24 ಕೋಟಿ ಠೇವಣಿ ಹೊಂದಿದೆ. ಸದಸ್ಯರಿಗೆ ₹16.51 ಕೋಟಿ ಸಾಲ ನೀಡಿದೆ.ಇದರಲ್ಲಿ ಕೃಷಿ ಸಾಲದ ಮೊತ್ತ ₹4.41 ಕೋಟಿ ಹಾಗೂ ವಿವಿಧಹೂಡಿಕೆಗಳಲ್ಲಿ ₹7.58 ಕೋಟಿ ವಿನಿಯೋಗಿಸಿದ್ದು, ಇದರಿಂದ ಸಂಘಕ್ಕೆ ₹2.01 ಲಕ್ಷ ಲಾಭ ದೊರಕಿದೆ’ ಎಂದರು. ಉಪಾಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ರೋಟರಿ ಕ್ಲಬ್ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ನೇತ್ರತಜ್ಞ ಡಾ.ಕೀರ್ತನ್ ರಾವ್, ಕಣ್ಣಿನ ದೋಷ ಹಾಗೂ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಕಾಲ ಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಂಡು ಕಣ್ಣಿನ ಆರೈಕೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ನೇತ್ರತಜ್ಞರಾದ ಡಾ. ಅಲಿಷಾ, ಡಾ. ನಿಖಿಲ್, ಗಂಗೊಳ್ಳಿ ರೋಟರಿ ಕ್ಲಬ್ ಕಾರ್ಯದರ್ಶಿ ಎಂ. ನಾಗೇಂದ್ರ ಪೈ ಉಪಸ್ಥಿತರಿದ್ದರು. ರೋಟರಿ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಸ್ವಾಗತಿಸಿದರು. ನಾರಾಯಣ ಇ.ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವ ಸ್ಪಂದನಾ ಕೇಂದ್ರ ಉಡುಪಿ, ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಸಿ.ಎ/ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಅರಿವು ಕಾರ್ಯಕ್ರಮವು ಶಿಕ್ಷ ಪ್ರಭಾ ಅಕಾಡೆಮಿಯ ಕೌಟಿಲ್ಯ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಂದಾಪುರ ಠಾಣಾಧಿಕಾರಿ ಸದಾಶಿವ ಆರ್ ಗವರೋಜಿ, ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಗಿಸುವ ಹಂತದಲ್ಲಿ ತೆಗೆದುಕೊಳ್ಳುವ ನಿರ್ಧಾರ ಅವರ ಜೀವನದ ಭವಿಷ್ಯವಾಗಿರುತ್ತದೆ. ಸಮಾಜದಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಕೊರೆತೆಯಿರುತ್ತದೆ. ಸರಿಯಾದ ಮಾಹಿತಿ ನೀಡಬೇಕಾದರೆ ಹೆಚ್ಚು ಹೆಚ್ಚು ಕಾರ್ಯಕ್ರಮ ಸಂಘಟಿಸುವುದರ ಮೂಲಕ ಅಧಿಕಾರಿಗಳು ಸಮರ್ಪಕವಾದ ಮಾಹಿತಿಯನ್ನು ನೀಡಿದರೆ ಸಾಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಯ ನಿರ್ದೇಶಕರಾದ ಪ್ರತಾಪ್‌ಚಂದ್ರ ಶೆಟ್ಟಿ ವಹಿಸಿಕೊಂಡು ಯುವ ಜನರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಕಿವಿ ಮಾತು ಹೇಳಿದರು. ಮುಖ್ಯ ಅತಿಥಿಯಾಗಿ ಯುವ ಸ್ಪಂದನ ಕೇಂದ್ರದ ಪರಿವರ್ತಕರಾದ ನರಸಿಂಹ ಗಾಣಿಗ ಯುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಸ್ತೆ ಬದಿಯಲ್ಲಿ ನಿರುಪಯುಕ್ತವಾಗಿ ಬಿದ್ದಿದ್ದ ಕಲ್ಲಿಗೆ ಜೀವ ತುಂಬಿದ ಕಲಾವಿದರು ತಮ್ಮ ಕಲಾಕೃತಿಯ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕಮಲಶಿಲೆ ಹಳ್ಳಿಹೊಳೆಯ ಮಾರ್ಗದ ರಸ್ತೆಯಂಚಿನಲ್ಲಿ ಬಿದ್ದಿದ್ದ ಕಡುಗಲ್ಲಿಗೆ ಕಲಾವಿದ ಚೇತನ್ ಕುಮಾರ್ ಮತ್ತು ಅಭಿಷೇಕ್ ಹೊಸ ವರ್ಷದ ಸಂದರ್ಭ ಜೀವ ತುಂಬಿದ್ದು ಮಲಗಿದ ಹಸನ್ಮುಖಿ ಕಪ್ಪೆಯ ಕಲಾಕೃತಿಯನ್ನು ರಚಿಸಿದ್ದಾರೆ. ಈ ಸುಂದರ ಕಲಾಕೃತಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಚೇತನ್ ಕುಮಾರ್ ಮೂಡುಬಿದ್ರೆ ಕಲಾವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಾಲೇಜು ತೆರೆದ ಕಾರಣ ತಮ್ಮ ಊರಾದ ಹಳ್ಳಿಹೊಳೆಯಲ್ಲಿ ಉಳಿದು ಹತ್ತಾರು ಕಲಾಕೃತಿಗಳನ್ನು ರಚಿಸಿ ಗಮನ ಸೆಳೆದಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಶಾಖೆಯಲ್ಲಿ ಜನರ ಬಳಿಗೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ದ.ಕ. ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಎಸ್. ರಾಜು ಪೂಜಾರಿ ಮಾತನಾಡಿ, ಜನರ ಆರ್ಥಿಕ ಅಗತ್ಯತೆಗಳಿಗೆ ಅನುಗುಣವಾಗಿ ಅವರ ಬಳಿ ಹೋಗುವುದು ಸಹಕಾರಿ ಬ್ಯಾಂಕುಗಳ ಕರ್ತವ್ಯ. ಆ ನಿಟ್ಟಿನಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರರವರ ವಿಶೇಷ ಯೋಜನೆ ಜನರ ಬಳಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಆರ್ಥಿಕ ಸಂಕಷ್ಟದ ಕಾಲದಲ್ಲಿ ಜನರಿಗೆ ಆರ್ಥಿಕ ಚೈತನ್ಯ ತುಂಬುವ ನಿಟ್ಟಿನಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಉಳಿತಾಯ ಖಾತೆ, ಠೇವಣಿ ಸಂಗ್ರಹ, ಸಾಲ ನೀಡಿಕೆ ಮುಂತಾದ ವಿಚಾರಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಇದರಿಂದ ಜನರಿಗೂ ಉಪಯೋಗವಾಗುತ್ತದೆ ಮತ್ತು ಬ್ಯಾಂಕಿನ ಗೌರವವೂ ಹೆಚ್ಚಾಗಲಿದೆ. ಜನರ ಬಳಿ ತೆರಳಿ ಬ್ಯಾಂಕಿನ ಅಗತ್ಯತೆಗಳನ್ನು ತಿಳಿಸಿ, ಜನರಲ್ಲಿ ಆರ್ಥಿಕ ಶಕ್ತಿಯ ವಿಶ್ವಾಸವನ್ನು ಮೂಡಿಸಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೋಟೇಶ್ವರದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ದಾಸ್ತಾನು ಮಾಡಿಟ್ಟಿದ್ದ ಪಡಿತರ ಅಕ್ಕಿಯನ್ನು ಆಹಾರ ನಿರೀಕ್ಷಕರು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಹಿತಿ ಆಧರಿಸಿ ಕೋಟೇಶ್ವರ ಗ್ರಾಮದ ಹಾಲಾಡಿ ರಸ್ತೆಯಲ್ಲಿರುವ ನಂದಿ ಹೋಟೆಲ್‍ನ ಹಿಂಭಾಗದಲ್ಲಿ ಉದಯ್ ಕುಮಾರ್ ಶೆಟ್ಟಿ ಎಂಬುವವರಿಗೆ ಸೇರಿದ್ದ ಶೆಡ್‍ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ ಪಡಿತರ ಅಕ್ಕಿಯನ್ನು ಸಾಗಾಟ ಮಾಡಲು ಯತ್ನಿಸಲಾಗುತ್ತಿತ್ತು. ಈ ವೇಳೆ ಕುಂದಾಪುರ ಠಾಣಾಧಿಕಾರಿ ಸದಾಶಿವ ಗವರೋಜಿ ಮತ್ತು ಕುಂದಾಪುರ ಆಹಾರ ನಿರೀಕ್ಷಕ ಸುರೇಶ್ ಹಾಗೂ ಸಿಬ್ಬಂದಿಗಳು ದಾಳಿ ಮಾಡಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಕೋಟೇಶ್ವರ ನಿವಾಸಿ ಉದಯ್ ಕುಮಾರ್ ಶೆಟ್ಟಿ, ಮಂಗಳೂರು ನಿವಾಸಿ ಆಜಾಮ್, ಉಡುಪಿ ನಿವಾಸಿ ರಮಾ ಪೂಜಾರಿ ಆರೋಪಿಗಳೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆರೋಪಿಗಳು ತಲೆ ಮರೆಸಿಕೊಂಡಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ದಾಳಿ ವೇಳೆ ರೂ. 3,76,800 ಮೌಲ್ಯದ 25,120 ಕೆಜಿ ಪಡಿತರ ಅಕ್ಕಿ, 2 ಲಕ್ಷ ರೂ ಮೌಲ್ಯದ ಅಶೋಕ್ ಲೈಲ್ಯಾಡ್ ಗೂಡ್ಸ್ ಗಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಅತ್ಯಂತ ದೊಡ್ಡ ಸರಕಾರಿ ಪ್ರೌಡಶಾಲೆಯಾದ ಸಿದ್ಡಾಪುರದ ಸರಕಾರಿ ಪ್ರೌಢಶಾಲೆಯಲ್ಲಿ ಹೊಸವರ್ಷದಂದು ಸಂಭ್ರಮ ಮನೆಮಾಡಿತ್ತು. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ (ಡಯಟ್) ಉಡುಪಿ ಇಲ್ಲಿನ ಪ್ರಾಂಶುಪಾಲರಾದ ವೇದಮೂರ್ತಿ, ಹಿರಿಯ ಉಪನ್ಯಾಸಕರಾದ ಅಶೋಕ ಕಾಮತ್, ಸಮಗ್ರ ಶಿಕ್ಷಣ ಕರ್ನಾಟಕದ ಉಪ ಯೋಜನಾ ಸಮನ್ವಯಾಧಿಕಾರಿಗಳಾದ ಪ್ರಭಾಕರ ಮಿತ್ಯಾಂತ, ಡಯಟ್ ಉಪನ್ಯಾಸಕರಾದ ವೆಂಕಟೇಶ ನಾಯಕ ಪಾಲ್ಗೊಂಡರು. ಶಾಲೆಯ ಮುಖ್ಯಶಿಕ್ಷಕರಾದ ಉದಯ ಗಾಂವಕಾರ ಎಲ್ಲರನ್ನೂ ಸ್ವಾಗತಿಸಿದರು. ಶಿಕ್ಷಕ ಶಿಕ್ಷಕಿಯರು, ಸಿಬ್ಬಂದಿ ವರ್ಗ ಶಾಲೆಯನ್ನು ಮುಂಚಿತವಾಗಿ ಶುಚಿಗೊಳಿಸಿ, ಅಲಂಕರಿಸಿದ್ದರು. ತೋರಣ, ಬಲೂನುಗಳೊಡನೆ ಶಾಲೆಯನ್ನು ಅಲಂಕರಿಸಲಾಗಿತ್ತು.
