ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ವಂಡ್ಸೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾತ್ಕಾಲಿಕ ವಾಹನವನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸಬ್ಲಾಡಿ ಎನ್.ಮಂಜಯ್ಯ ಶೆಟ್ಟಿ, ಉಪಾಧ್ಯಕ್ಷ ಜಗನ್ನಾಥ ಶೆಟ್ಟಿ, ನಿರ್ದೇಶಕರಾದ ಸಂಜೀವ ಪೂಜಾರಿ, ಜಯರಾಮ ಶೆಟ್ಟಿ, ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಪೂಜಾರಿ, ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ ಪೂಜಾರಿ ಹಾಗೂ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3533 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಇಲಾಖೆಯ ವೆಬ್ಸೈಟ್ https://recruitment.ksp.gov.in/ಅನ್ನು ಸಂಪರ್ಕಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರಕಾರದ ಆದೇಶದಲ್ಲಿ ಈ ಕೆಳಕಂಡ ಅಂಶಗಳನ್ನು ಸೇರ್ಪಡೆ ಮತ್ತು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ. ನ್ಯಾಯಾಲಯದ ಕೆಲಸದ ದಿನಗಳಲ್ಲಿ ಮಾತ್ರ ವಕೀಲರು, ಅವರ ಕಾನೂನು ಸಿಬ್ಬಂದಿ, ಗುಮಾಸ್ತರು ಹಾಗೂ ಇತರ ಸಹಾಯಕ ಸಿಬ್ಬಂದಿಯವರು ಆಯಾ ಕಚೇರಿಗಳಲ್ಲಿ ನೀಡುವ ಗುರುತಿನ ಚೀಟಿಯೊಂದಿಗೆ ಸಂಚರಿಸಲು ಅನುಮತಿ ನೀಡಲಾಗಿದ್ದು, ಉಳೀದಂತೆ ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ. ವಕೀಲರ ಕಛೇರಿಗಳಲ್ಲಿ ಹಾಗೂ ಕಾನೂನು ಸಂಸ್ಥೆಗಳಲ್ಲಿ ಶೇ. 50ರಷ್ಟು ಸಿಬ್ಬಂದಿಗಳನ್ನೊಳಗೊಂಡು ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕರ್ತವ್ಯ ನಿರ್ವಹಿಸಲು ಹಾಗೂ ಎಲ್ಲಾ ರೀತಿಯ ಹೋಮ್ ಡೆಲಿವರಿ ಮತ್ತು ಇ-ಕಾಮರ್ಸ್ ಸೇವೆಗಳಿಗೆ ಅನುಮತಿ ನೀಡಲಾಗಿರುತ್ತದೆ. ಈ ಮೇಲ್ಕಂಡ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ವಿಪತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಉದ್ಘವಿಸುವುದಿಲ್ಲ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಡೀ ರಾಜ್ಯವೇ ಹೆಮ್ಮೆಪಡುವಂತೆ ಕೆಲಸ ಮಾಡುತ್ತಿದ್ದು, ಕರೋನಾ ತಡೆ ನಿಟ್ಟಿನಲ್ಲಿಯೂ ಅವರು ತೆಗೆದುಕೊಂಡ ನಿರ್ಧಾರ ಯಥಾವತ್ತು ಜಾರಿಗೆ ತರುವ ಮೂಲಕ ಕರೋನಾ ನಿರ್ಮೂಲನೆಗೆ ಪ್ರಯತ್ನಿಸಲಾಗುತ್ತದೆ ಎಂದು ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಬುಧವಾರ ಬೈಂದೂರು ತಾಲೂಕು ವಿವಿಧ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕರೋನಾ ನಿಯಂತ್ರಣ ಕಾರ್ಯಪಡೆ ನಿರ್ವಾಹಣೆ ಕುರಿತು ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲೇ ಬಿಜೆಪಿ ಸರ್ಕಾರ ಅವಧಿ ಪೂರ್ಣ ಮಾಡಲಿದೆ ಎಂದರು. ಕರೋನಾ ನಿಯಂತ್ರಣಕ್ಕೆ ಬರಬೇಕಿದ್ದರೆ, ಗ್ರಾಮ ಪಂಚಾಯತಿ ಮುಖ್ಯಪಾತ್ರ ವಹಿಸಲಿದ್ದು, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪಾಸಿಟಿವ್ ಬಂದವರ ಹೋಮ್ ಕ್ವಾರಂಟೈನ್ ಮಾಡಿ ಹೊರಗೆ ಬಾರದಂತೆ ನಿಗಾ ಇಡಬೇಕು. ಪಾಸಿಟಿವ್ ಬಂದವರು ಕಣ್ಣುತಪ್ಪಿಸಿ ಹೊರಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಬುಧವಾರ 973 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 353, ಕುಂದಾಪುರ, ಬೈಂದೂರು ತಾಲೂಕಿನ 340, ಕಾರ್ಕಳ, ಹೆಬ್ರಿ ತಾಲೂಕಿನ 273 ಮಂದಿಗೆ ಹಾಗೂ ಹೊರ ಜಿಲ್ಲೆಯ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 973 ಪ್ರಕರಣಗಳಲ್ಲಿ 21 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 952 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 70 ವರ್ಷದ ವೃದ್ಧೆ, 56 ವರ್ಷದ ಪುರಷ, 55 ವರ್ಷದ ಪುರುಷ, ಕುಂದಾಪುರದ ವರ್ಷದ ವೃದ್ಧ, 80 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 894 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5866 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3589 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 5213…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವ ಸಂದರ್ಭದಲ್ಲಿ ಕೆ.ಪಿ.ಎಂ.ಇ ನವೀಕರಣ ಮಾಡದ ಹಾಗೂ ಕೋವಿಡ್-19 ಮಾರ್ಗಸೂಚಿ ಪಾಲಿಸದ ಉಡುಪಿ ತಾಲೂಕಿನ 16, ಕುಂದಾಪುರ ತಾಲೂಕಿನ 3 ಹಾಗೂ ಕಾರ್ಕಳ ತಾಲೂಕಿನ 7 ಸಂಸ್ಥೆಗಳ ನೋಂದಣಿಯನ್ನು ಕೆ.ಪಿ.ಎಮ್.ಇ ಹಾಗೂ ಎಪಿಡೆಮಿಕ್ ಕಾಯ್ದೆ ಅನ್ವಯ ರದ್ದುಪಡಿಸಲಾಗಿದೆ ಎಂದು ಜಿಲ್ಲಾ ಕೆ.ಪಿ.ಎಮ್.ಇ ಕಮಿಟಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕಳೆದ ನಾಲ್ಕೈದು ತಿಂಗಳಿನಿಂದ ಮೀನುಗಾರರಿಗೆ ಸೀಮೆಎಣ್ಣೆ ಹಂಚಿಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಮೀನುಗಾರಿಕೆಗೆ ತೊಂದರೆಯಾಗುತ್ತಿದೆ. ಹೀಗಾಗಿ ಮೀನುಗಾರರಿಗೆ ಸರಕಾರ ಹಂಚಿಕೆ ಮಾಡಿರುವ ಸೀಮೆಎಣ್ಣೆಯನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕೆಂದು ಗಂಗೊಳ್ಳಿ ಭಾಗದ ಮೀನುಗಾರರು ಆಗ್ರಹಿಸಿದ್ದಾರೆ. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ 852 ವಿಶೇಷ ರಹದಾರಿಗಳಿದ್ದು 138.876 ಕಿ.ಲೀ ಸೀಮೆಎಣ್ಣೆ ಬೇಡಿಕೆ ಇದೆ. ಇದರಂತೆ ಸರಕಾರ138.876 ಕಿ.ಲೀ. ಸೀಮೆಎಣ್ಣೆಯನ್ನು ಹಂಚಿಕೆ ಮಾಡಿ ಬಿಡುಗಡೆಗೆ ಆದೇಶ ನೀಡಿದೆ. ಆದರೆ ಕೆಎಫ್‌ಸಿಎಸ್‌ಸಿ ಯವರು ನ್ಯಾಯಬೆಲೆ ಅಂಗಡಿಗೆ ಕೇವಲ 96.70ಕಿ.ಲೀ ಸೀಮೆಎಣ್ಣೆಯನ್ನು ಮರುಹಂಚಿಕೆ ಮಾಡಿ ಸೀಮೆಎಣ್ಣೆ ಬಿಡುಗಡೆ ಮಾಡಿದ್ದು, ಸುಮಾರು 46 ಕಿ.ಲೀ ಕಡಿಮೆ ಹಂಚಿಕೆ ಮಾಡಿರುವುದು ಗಂಗೊಳ್ಳಿ ಭಾಗದ ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಸೀಮೆಎಣ್ಣೆ ಬಿಡುಗಡೆ ಮಾಡಿಲ್ಲ. ಜನವರಿ ತಿಂಗಳಿನಲ್ಲಿ ಪ್ರತಿ ರಹದಾರಿಗೆ ಕೇವಲ 87 ಲೀಟರ್, ಮಾರ್ಚ್‌ನಲ್ಲಿ ಕೂಡ ಕೇವಲ 30 ಲೀಟರ್ ಬಿಡುಗಡೆ ಮಾಡಲಾಗಿದೆ ಅಲ್ಲದೆ ಎಪ್ರಿಲ್ ತಿಂಗಳಿನಲ್ಲಿ ಸುಮಾರು 10 ಸಾವಿರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ನಾಗರೀಕರು ಕೋವಿಡ್-19 ರೋಗಕ್ಕೆ ತುತ್ತಾದವರು ರಾಜ್ಯ ಸರಕಾರದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಉಡುಪಿ ತಾಲೂಕಿನ ಕಾಲ್‌ಸೆಂಟರ್‌ನ ನಂಬರ್ 9663950222/9663957222, ಕುಂದಾಪುರ ತಾಲೂಕಿನ ಕಾಲ್ ಸೆಂಟರ್‌ನ ನಂಬರ್ 6363862122/7483984733 ಹಾಗೂ ಕಾರ್ಕಳ ತಾಲೂಕಿನ ಕಾಲ್ ಸೆಂಟರ್ ನಂಬರ್ 7411323408/7676227624 ಗೆ ಕರೆ ಮಾಡಿ, ಕಾಲ್‌ಸೆಂಟರ್‌ನ ವೈದ್ಯರು ಸೋಂಕಿತರ ತೊಂದರೆಗಳನ್ನು ತಿಳಿಸಿದ್ದಲ್ಲಿ, ಸೂಕ್ತ ಸೌಲಭ್ಯವಿರುವ ಆಸ್ಪತ್ರೆಯನ್ನು ಹಾಗೂ ಆಂಬ್ಯುಲೆನ್ಸ್‌ನ ವ್ಯವಸ್ಥೆಯನ್ನು ಮಾಡುತ್ತಾರೆ. ಕೋವಿಡ್ ರೋಗಿಗಳು ಕಾಲ್ ಸೆಂಟರ್‌ನವೈದ್ಯಾಧಿಕಾರಿಗಳ ಸೂಚನೆ ಪಡೆಯದೇ ಖಾಸಗಿ ಆಸ್ಪತ್ರೆಗೆ ಇಲ್ಲವೇ, ನರ್ಸಿಂಗ್ ಹೋಮ್ಗೆ ದಾಖಲಾದರೆ ಅಂತಹ ರೋಗಿಗಳಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಉಚಿತ ಸೌಲಭ್ಯವನ್ನು ಸರಕಾರದ ನಿಯಮದಂತೆ ನೀಡಲು ಸಾಧ್ಯವಾಗುವುದಿಲ್ಲ. ಜಿಲ್ಲೆಯ ಜಿಲ್ಲಾಸ್ಪತ್ರೆ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆ ಹಾಗೂ 19 ಖಾಸಗಿ ಆಸ್ಪತ್ರೆಗಳು ಅಥವಾ ನರ್ಸಿಂಗ್ ಹೋಮ್ಗಳು ಕೊರೋನಾ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದು, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೋಂಕು ದೃಢಪಟ್ಟವರನ್ನು ಮನವೊಲಿಸುವುದರೊಂದಿಗೆ ಅವರುಗಳನ್ನು ಕೋವಿಡ್ ಕೇರ್ ಸೆಂಟರ್‌ಗೆ ವರ್ಗಾಯಿಸಿ, ಚಿಕಿತ್ಸೆ ನೀಡಲು ಗ್ರಾಮ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಮುಂದಾಗಬೇಕು ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಣಿಪಾಲ್ನ ರಜತಾದ್ರಿಯ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಹಾಲ್‌ನಲ್ಲಿ ಕೋವಿಡ್ ನಿಯಂತ್ರಣ ಕುರಿತು ಉಡುಪಿ ಹಾಗೂ ಕಾಪು ತಾಲೂಕಿನ ಗ್ರಾಮ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸದಸ್ಯರುಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲನೆ ನಡೆಸಿದರು. ಸಾಮಾನ್ಯವಾಗಿ ಗ್ರಾಮೀಣ ಭಾಗಗಳಲ್ಲಿ ವಾಸಿಸುವ ಜನರ ಮನೆಗಳಲ್ಲಿ ಪ್ರತ್ಯೇಕವಾಗಿರಲು ಕೊಠಡಿ ಸೇರಿದಂತೆ ಶೌಚಾಲಯದ ವ್ಯವಸ್ಥೆ ಇರುವುದಿಲ್ಲ. ಗ್ರಾಮೀಣ ಜನರಿಗೆ ಸೋಂಕು ದೃಢಪಟ್ಟಾಗ ಅವರುಗಳ ರೋಗ ಲಕ್ಷಣದ ಬಗ್ಗೆ ಮಾಹಿತಿ ಹೊಂದಿ ಅವಶ್ಯವಿದ್ದಲ್ಲಿ ಆಸ್ಪತ್ರೆಗೆ ವರ್ಗಾಯಿಸಬೇಕು. ತಪ್ಪಿದ್ದಲ್ಲಿ ಅವರುಗಳನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ವರ್ಗಾಯಿಸಿ, ಚಿಕಿತ್ಸೆ ನೀಡುವ ಕಾರ್ಯವನ್ನು ಗ್ರಾಮ ಮಟ್ಟದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಾಡಬೇಕು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಗಂಗೊಳ್ಳಿ ಪೊಲೀಸರಿಗೆ ಮತ್ತು ಮಾಸ್ಕ್ ಸ್ಯಾನಿಟೈಸರ್‌ಗಳನ್ನು ನೀಡಲಾಯಿತು. ಸಂಘದ ಅಧ್ಯಕ್ಷರಾದ ರಾಜು ಪೂಜಾರಿ ಅವರು ಗಂಗೊಳ್ಳಿ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ನಂಜಾ ನಾಯ್ಕ ಎನ್. ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಎಂ.ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಿನಾಯಕ ರಾವ್ ಮರವಂತೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳಿವೆಗದ್ದೆ ಉಪಸ್ಥಿತರಿದ್ದರು.
