ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಡಲ್ಕೊರೆತ ಮತ್ತು ಚಂಡಮಾರುತದ ಕಾರಣದಿಂದ ಕಡಿದುಹೋದ ಮರವಂತೆ ಕರಾವಳಿ ಮಾರ್ಗದ ಸಂಪರ್ಕವನ್ನು ತಾತ್ಕಾಲಿಕ ನೆಲೆಯಲ್ಲಿ ಮರುಸ್ಥಾಪಿಸುವ ಕಾಮಗಾರಿ ಈಗ ಭರದಿಂದ ಸಾಗಿದೆ. ಇನ್ನು ಒಂದು ವಾರದಲ್ಲಿ ಕೆಲಸ ಮುಗಿದು, ಜನ, ವಾಹನ ಸಂಚಾರ ಸುಗಮವಾಗಲಿದೆ. ಮರವಂತೆಯಲ್ಲಿ ಅರ್ಧದಲ್ಲಿ ಸ್ಥಗಿತವಾಗಿರುವ ಮೀನುಗಾರಿಕಾ ಹೊರಬಂದರಿನ ಉತ್ತರ ತಡೆಗೋಡೆಯ ಉತ್ತರ ದಿಕ್ಕಿನ ತೀರದಲ್ಲಿ ಬಿಟ್ಟುಬಿಟ್ಟು ಕಡಲ್ಕೊರೆತ ಸಂಭವಿಸಿತ್ತು. ಅದರಿಂದ ಒಂದಷ್ಟು ಭೂಭಾಗ, ತೆಂಗಿನ ಮರಗಳು ಸಿಲುಕಿ ಸಮುದ್ರ ಸೇರಿದ್ದುವು. ಅದರ ಬೆನ್ನಲ್ಲಿ, ಉರಿಯುವ ಬೆಂಕಿಗೆ ತೈಲ ಸುರಿದಂತೆ ಕಳೆದ ವಾರ ಅಪ್ಪಳಿಸಿದ ತೌತೆ ಚಂಡಮಾರುತ ಸಮುದ್ರದ ಮಟ್ಟವನ್ನು ಹೆಚ್ಚಿಸಿತು. ತೆರೆಗಳು ರುದ್ರನರ್ತನ ನಡೆಸಿದುವು. ಅದರ ಪರಿಣಾಮವಾಗಿ ಸುಮಾರು 350 ಮೀಟರು ಉದ್ದ, 50 ಮೀಟರು ಅಗಲದ ಭೂಭಾಗ, ನೂರಾರು ತೆಂಗಿನ ಮರಗಳು, ಹತ್ತಾರು ಮೀನುಗಾರಿಕಾ ಶೆಡ್‌ಗಳು ನೋಡನೋಡುತ್ತಿದ್ದಂತೆ ಕಡಲು ಪಾಲಾದುವು. ಅಷ್ಟೇ ಉದ್ದದ ಕಾಂಕ್ರೀಟ್ ರಸ್ತೆ ತುಂಡಾಗಿ, ಛಿದ್ರಗೊಂಡಿತು. ಅದರೊಂದಿಗೆ ಮೀನುಗಾರರ ವಸತಿ ಪ್ರದೇಶದ ಏಕೈಕ ಸಂಪರ್ಕದ ಕೊಂಡಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಭಾನುವಾರ 909 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 486, ಕುಂದಾಪುರ, ಬೈಂದೂರು ತಾಲೂಕಿನ 273, ಕಾರ್ಕಳ, ಹೆಬ್ರಿ ತಾಲೂಕಿನ 148 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 909 ಪ್ರಕರಣಗಳಲ್ಲಿ 20 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 889 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 65 ವರ್ಷದ ವೃದ್ಧ, 53 ವರ್ಷದ ಪುರುಷ, 53 ವರ್ಷದ ಪುರುಷ, ಕುಂದಾಪುರದ 79 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 772 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5773 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 4018 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶನಿವಾರ 849 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 5 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 303, ಕಾರ್ಕಳ, ಹೆಬ್ರಿ ತಾಲೂಕಿನ 216 ಮಂದಿಗೆ ಹಾಗೂ ಹೊರ ಜಿಲ್ಲೆಯ 6 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 849 ಪ್ರಕರಣಗಳಲ್ಲಿ 29 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 820 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 74 ವರ್ಷದ ವೃದ್ಧ, 76 ವರ್ಷದ ವೃದ್ಧೆ, ಕುಂದಾಪುರದ 80 ವರ್ಷದ ವೃದ್ಧೆ, 65 ವರ್ಷದ ವೃದ್ಧ, 42 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 1164 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5640 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 1164 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ಗ್ರಾಮದ ನಾಗಿನಗದ್ದೆ, ಕೋಟೆಮನೆ ಮುಂತಾದ ಪ್ರದೇಶಗಳ ಕೊರೋನಾ ಸೊಂಕಿತರ ಮನೆಗಳಿಗೆ ಶನಿವಾರ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಕುಟುಂಬಿಕರಿಗೆ ಧೈರ್ಯ ತುಂಬಿದರು. ಶಿರೂರು ಗ್ರಾಮದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಎದುರಿಸಲು ಮಾಡಿಕೊಳ್ಳಲಾದ ಸಿದ್ಧತೆಯನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಗ್ರಾಮೀಣ ಭಾಗದಲ್ಲಿನ ಸಿದ್ದತೆ ಪರಿಶೀಲನೆ ಮತ್ತು ಧೈರ್ಯ ತುಂಬಲು ಖುದ್ದು ಮನೆಗಳಿಗೆ ಭೇಟಿ ನೀಡಲಾಗಿದೆ. ಈಗಾಗಲೇ ಜಿಲ್ಲಾಡಳಿತ ಕೊರೋನಾ ಕುರಿತಂತೆ ಪೂರ್ಣ ಸಿದ್ದತೆ ಮಾಡಿಕೊಂಡಿದೆ. ಆಕ್ಸಿಜನ್ ಸೇರಿದಂತೆ ಅಗತ್ಯವಿರುವ ಚಿಕಿತ್ಸೆ ತಕ್ಷಣದಲ್ಲಿ ದೊರೆಯಲಿದೆ. ಜನರು ಆತಂಕಪಡುವಂತ ಅವಶ್ಯಕತೆಯಿಲ್ಲ. ಬ್ಲ್ಯಾಕ್ ಫಂಗಸ್ ಬಗ್ಗೆ ಭಯಪಡುವಂತ ಅವಶ್ಯಕತೆಯಿಲ್ಲ. ಕೊರೋನಾ ಸೋಂಕಿತರು ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದು ಉಸಿರಾಟದ ತೊಂದರೆಯಿದ್ದಲ್ಲಿ ತಕ್ಷಣ ಮಾಹಿತಿ ನೀಡಬೇಕು. ಅನಗತ್ಯ ಸಂಚಾರ ಮಾಡಬಾರದು ಎಂದರು. ಈ ಸಂದರ್ಭದಲ್ಲಿ ಕುಂದಾಪುರ ಸಹಾಯಕ ಕಮಿಷನರ್ ರಾಜು ಕೆ., ಬೈಂದೂರು ತಹಶೀಲ್ದಾರ ಶೋಭಾಲಕ್ಷ್ಮಿ ಹೆಚ್.…
ಬೆಳಗ್ಗೆ ಉಪಹಾರ ಸೇವನೆ ಮಾಡುವುದು ತುಂಬಾನೆ ಮುಖ್ಯವಾಗಿದೆ. ಆದರೆ ಹೆಚ್ಚಿನ ಜನರು ತಮ್ಮ ಕೆಲಸದ ಒತ್ತಡದ ಜೀವನ ಶೈಲಿ ಹಾಗು ಆಫೀಸ್ಗೆ ಅಥವಾ ಕಾಲೇಜಿಗೆ ತಡವಾಗುವುದರಿಂದ ಬ್ರೇಕ್ ಫಾಸ್ಟ್ ಅರ್ಧದಲ್ಲೇ ಬಿಟ್ಟು ಅಥವಾ ತಿನ್ನದೇ ಹೊರಡುತ್ತಾರೆ. ಇದರಿಂದ ಏನು ಸಮಸ್ಯೆ ಇಲ್ಲ ಎಂದು ಅಂದ್ಕೊತ್ತಾರೆ. ಆದರೆ ಉಪಹಾರ ಸೇವಿಸದಿರುವುದರಿಂದ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ./ಕುಂದಾಪ್ರ ಡಾಟ್ ಕಾಂ/ ಬ್ರೇಕ್ ಫಾಸ್ಟ್ ಮಾಡದೆ ಇದ್ದರೆ ರಕ್ತದಲ್ಲಿರುವ ಸಕ್ಕರೆ ಪ್ರಮಾಣದಲ್ಲಿ ಏರಿಳಿತವಾಗುತ್ತದೆ. ಇದರಿಂದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಬ್ರೇಕ್ ಫಾಸ್ಟ್ ಮಿಸ್ ಮಾಡಿದರೆ ಟೈಪ್ 2 ಮಧುಮೇಹದ ಹೆಚ್ಚಿನ ಅಪಾಯ ಇರುತ್ತದೆ, ಇನ್ಸುಲಿನ್ ಪ್ರತಿರೋಧ ಮತ್ತು ಹಾರ್ಮೋನ್ ನಿಯಂತ್ರಣದಿಂದ ಸ್ಥೂಲಕಾಯದ ಅಪಾಯ, ಮತ್ತು ಹೃದಯಾಘಾತ ಮತ್ತು ಅಧಿಕ ರಕ್ತದೊತ್ತಡದ ಅಪಾಯವು ಹೆಚ್ಚಾಗಿರುತ್ತದೆ ಎಂದು ಕಂಡುಬಂದಿದೆ. ದಿನವಿಡೀ ಬೇಕಾಗುವ ಫೈಬರ್ ಮತ್ತು ವಿಟಮಿನ್ ಗಳು ಸೇರಿದಂತೆ ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳನ್ನು ಪಡೆಯಲು ಬ್ರೇಕ್ ಫಾಸ್ಟ್ ಉತ್ತಮ ಆಹಾರವಾಗಿದೆ. ಆದ್ದರಿಂದ, ಉಪಾಹಾರವನ್ನು ಬಿಟ್ಟುಬಿಡುವುದರಿಂದ ದೇಹಕ್ಕೆ ಸಾಕಷ್ಟು…
ಯಾರೂ ಕೂಡಾ ರಾತ್ರಿ ಕಳೆದು ಬೆಳಗಾಗುವುದರಲ್ಲಿ ಶ್ರೀಮಂತರಾಗುವುದಿಲ್ಲ, ಖ್ಯಾತಿ ಪಡೆಯುವುದಿಲ್ಲ. ಎಲ್ಲೋ ಒಬ್ಬಿಬ್ಬರಿಗೆ ಲಾಟರಿ ಹೊಡೆಯಬಹುದಷ್ಟೇ. ಉಳಿದಂತೆ ಜಗತ್ತಿನ ಯಶಸ್ವೀ ನಾಯಕರು, ಉದ್ಯಮಿಗಳು, ನಟರು- ಎಲ್ಲರೂ ತಮ್ಮ ದಿನಚರಿಯಲ್ಲೊಂದು ಶಿಸ್ತನ್ನು ರೂಢಿಸಿಕೊಂಡಿರುತ್ತಾರೆ. ಸರಿಯಾದ ಅಭ್ಯಾಸಗಳನ್ನು ಹೊಂದಿರುತ್ತಾರೆ. ಸರಿಯಾದ ಅಭ್ಯಾಸಗಳು ಅವರ ಯೋಚನಾಲಹರಿ ಫೋಕಸ್ ಮಾಡಲು, ಸಾಮರ್ಥ್ಯ ಹೆಚ್ಚಿಸಲು ಕಾರಣವಾಗುತ್ತವೆ. ನಾವೆಲ್ಲರೂ ಮಿಲಿಯನೇರ್ ಆಗುವ ಕನಸು ಕಾಣುತ್ತೇವೆ. ಆದರೆ, ಅದಕ್ಕೆ ಬೇಕಾದ ಸಿದ್ಧತೆಗಳನ್ನು, ಅಭ್ಯಾಸಗಳನ್ನು ಎಲ್ಲರೂ ರೂಢಿಸಿಕೊಳ್ಳುವುದಿಲ್ಲ. ಎಲ್ಲರೂ ತಮ್ಮ ಬದುಕಿನಲ್ಲಿ ಯಶಸ್ಸಿಗಾಗಿ ಅಳವಡಿಸಿಕೊಳ್ಳಬೇಕಾದ ಆರು ಅಭ್ಯಾಸಗಳು ಇಲ್ಲಿವೆ. ಬೇಗ ಏಳುವುದು: ಸೆಲ್ಫ್ ಮೇಡ್ ಮಿಲಿಯನೇರ್ಗಳಲ್ಲಿ ಶೇ.50ರಷ್ಟು ಜನರು ತಮ್ಮ ವೈತ್ತಿ ಬದುಕನ್ನು ಆಱಂಭಿಸಬೇಕಾದ ಸಮಯಕ್ಕಿಂತ ಕನಿಷ್ಠ 3…ಗಂಟೆ ಮೊದಲು ಏಳುತ್ತಾರೆ. ಈ ಸಮಯದಲ್ಲಿ ವೈಯಕ್ತಿಕ ಕೆಲಸಗಳನ್ನು ಮುಗಿಸುವ ಜೊತೆಗೆ ವ್ಯಾಯಾಮ, ದಿನದ ಪ್ಲ್ಯಾನ್ಎಲ್ಲವನ್ನೂ ಮಾಡುತ್ತಾರೆ. ಹೆಚ್ಚೆಚ್ಚು ಓದು: ಯಶಸ್ವೀ ವ್ಯಕ್ತಿಗಳು ಸಿಕ್ಕಾಪಟ್ಟೆ ಓದುತ್ತಾರೆ. ಇದು ಕೇವಲ ಬಿಸ್ನೆಸ್ಗಾಗಿ ಅಲ್ಲ, ವೈಯಕ್ತಿಕ ಬೆಳವಣಿಗೆಗಾಗಿ ಕೂಡಾ. ಅವರು ಹೆಚ್ಚಾಗಿ ಓದುವ ವಿಷಯಗಳು ಬಯೋಗ್ರಫಿ, ಲೀಡರ್ಶಿಪ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಲಾಕ್‌ಡೌನ್‌ನಿಂದ ಇತರ ವಲಯಗಳಂತೆ ಬೇಕರಿ ಉತ್ಪನ್ನ ಮಾರಾಟಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಬೇಕರಿ ಉತ್ಪನ್ನಗಳನ್ನು ಮಾರಾಟ ಮಾಡಲು ಬೇಕರಿಗಳಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಸು ತಯಾರಿಕಾ ಹಾಗೂ ಮಾರಾಟ ಸಂಘವು ಉಡುಪಿ ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಿದೆ. ಜಿಲ್ಲೆಯಲ್ಲಿ 1,500ಕ್ಕೂ ಅಧಿಕ ಬೇಕರಿ ಉತ್ಪನ್ನ ಮಾರಾಟ ಮಾಡುವ ಅಂಗಡಿಗಳಿವೆ. ಹಾಗೆ, ಸುಮಾರು 75ಕ್ಕೂ ಹೆಚ್ಚು ಬೇಕರಿ ಉತ್ಪನ್ನಗಳನ್ನು ಉತ್ಪಾದಿಸುವ ಘಟಕಗಳಿದ್ದು, 15,000 ಕ್ಕೂ ಅಧಿಕ ಕಾರ್ಮಿಕರು ಇದನ್ನೆ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಹಾಗಾಗಿ ಲಾಕ್ಡೌನ್ ಅವಧಿಯಲ್ಲಿ ದಿನಸಿ ಸಾಮಗ್ರಿ ಖರೀದಿಗೆ ನೀಡಿರುವ ನಿಗದಿ ಅವಧಿಯಲ್ಲಿ ಬೇಕರಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಬೇಕು ಎಂದು ಸಂಘ ಒತ್ತಾಯಿಸಿದೆ. ಜನರಿಗೆ ದಿನಸಿ ವಸ್ತುಗಳಂತೆ ಬ್ರೆಡ್, ಬನ್, ಬಟರ್, ರಸ್ಕ್ ಮುಂತಾದ ಬೇಕರಿ ಉತ್ಪನ್ನಗಳು ಅವಶ್ಯಕವಾಗಿದೆ. ಆಸ್ಪತ್ರೆಗಳಲ್ಲೂ ರೋಗಿಗಳಿಗೆ ಬ್ರೆಡ್, ಬನ್ ನೀಡಲಾಗುತ್ತದೆ. ಆದರೆ, ಬೇಕರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಕುಂದಾಪುರ ತಾಲೂಕು ಶಾಖೆಯಿಂದ ವಿಶೇಷ ಚೇತನ ಬಾಲಕನ ವೈದ್ಯಕೀಯ ಚಿಕಿತ್ಸೆಗಾಗಿ ರೂಪಾಯಿ 30,000/- ದೇಣಿಗೆ ನೀಡಲಾಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಜಯಕರ ಶೆಟ್ಟಿ ದೇಣಿಗೆಯನ್ನು ಬಾಲಕನ ತಂದೆಗೆ ಹಸ್ತಾಂತರಿಸಿದರು. ಈ ಸಂದರ್ಭ ದೇಣಿಗೆಯ ಪ್ರಾಯೋಜಕರಾದ ಆವರ್ಸೆ ಮುತ್ತಯ್ಯ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಸಮಿತಿ ಸದಸ್ಯರಾದ ಗಣೇಶ್ ಆಚಾರ್ಯ, ಡಾ. ಸೋನಿ, ಸೀತಾರಾಮ ನಕ್ಕತ್ತಾಯ, ನಾರಾಯಣ ದೇವಾಡಿಗ ಹಾಗೂ ಜೆಸಿಐ ಸದಸ್ಯರು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 855 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 7 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 380, ಕಾರ್ಕಳ, ಹೆಬ್ರಿ ತಾಲೂಕಿನ 141 ಮಂದಿಗೆ ಹಾಗೂ ಹೊರ ಜಿಲ್ಲೆಯ 10 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 855 ಪ್ರಕರಣಗಳಲ್ಲಿ 15 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 840 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 63 ವರ್ಷದ ವೃದ್ಧ, 70 ವರ್ಷದ ವೃದ್ಧ, 60 ವರ್ಷದ ವೃದ್ಧ, 45 ವರ್ಷದ ಪುರುಷ, 53 ವರ್ಷದ ಮಹಿಳೆ ಕಾರ್ಕಳದ 60 ವರ್ಷದ ವೃದ್ಧ, 60 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 1223 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5960 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2424…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 7ರ ತನಕ ಲಾಕ್‌ಡೌನ್ ಮುಂದುವರಿಯಲಿದೆ. ಕೋವಿಡ್ ಪರಿಸ್ಥಿತಿ ಮತ್ತು ಲಾಕ್ಡೌನ್ ವಿಸ್ತರಣೆ ಕುರಿತು ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈ ನಿರ್ಧಾರ ಪ್ರಕಟಿಸಿದ್ದಾರೆ. ಲಾಕ್ಡೌನ್ನಿಂದ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಜನರ ಹಿತದೃಷ್ಟಿಯಿಂದ ಮತ್ತೆ ಲಾಕ್‌ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಜನ ಸಹಕರಿಸಬೇಕು. ಕೊರೊನಾ ನಿಯಂತ್ರಣಕ್ಕೆ ಮತ್ತೆ ಎರಡು ವಾರಗಳ ಕಾಲ ಲಾಕ್‌ಡೌನ್ ವಿಧಿಸಲಾಗುತ್ತಿದ್ದು, ಮೇ 24 ರಿಂದ ಜೂನ್ 7ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಹಿಂದಿನ ಲಾಕ್‌ಡೌನ್ ಮಾರ್ಗಸೂಚಿಗಳೇ ಮುಂದುವರಿಯುತ್ತವೆ ಎಂದು ಲಾಕ್ಡೌನ್ ಮಾರ್ಗಸೂಚಿಗಳ ಕುರಿತು ಎಂದು ಸಿಎಂ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ನಂತರ ಸಹ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, 9 ಗಂಟೆಗೆ…
