ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೂತನ ನ್ಯಾಯಾಲಯ ಕಟ್ಟಡ ಮತ್ತು ವಕೀಲರ ಸಂಘದ ಕಟ್ಟಡ ಶನಿವಾರ ಮಧ್ಯಾನ್ನ 2ಕ್ಕೆ ಸರ್ವೋಚ್ಚ ನ್ಯಾಯಾಲಯ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಉದ್ಘಾಟಿಸಲಿದ್ದಾರೆ ಎಂದು ಬಾರ್ ಅಸೋಸಿಯೇಷನ್ ಅಧ್ಯಕ್ಷ ನಿರಂಜನ್ ಹೆಗ್ಡೆ ಸಳ್ವಾಡಿ ಹೇಳಿದರು. ವಕೀಲರ ಸಂಘದ ಕಾರ್ಯದರ್ಶಿ ಎಚ್. ಪ್ರಮೋದ್ ಹಂದೆ ಮಾತನಾಡಿ, ನೂತನ ನ್ಯಾಯಾಲಯ ಕಟ್ಟಡ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ವಹಿಸಲಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ರಂಗಸ್ವಾಮಿ ನಟರಾಜ್, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾದುಸ್ವಾಮಿ, ಲೋಕೋಪಯೋಗಿ ಇಲಾಖಾ ಸಚಿವ ಸಿ ಸಿ ಪಾಟೀಲ್, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜ್ಯ ಉಚ್ಚ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿ ಟಿ ಜಿ ಶಿವಶಂಕರೇ ಗೌಡ ಮತ್ತು ಕಾನೂನು ಇಲಾಖಾ ಪ್ರಧಾನ ಕಾರ್ಯದರ್ಶಿ ಟಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾ.3ರಿಂದ ಬೆಂಗಳೂರಿನಲ್ಲಿ ಆರಂಭಗೊಳ್ಳುಲಿರುವ 13ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಭಾರತೀಯ ಸಿನಿಮಾ ಸ್ಪರ್ಧೆಗೆ ಮಾಲ್ವಿಕ ಮೋಶನ್ ಪಿಚ್ಚರ್ಸ್ ನಿರ್ಮಾಣದ, ಗುಲ್ವಾಡಿ ಟಾಕೀಸ್ ಅರ್ಪಿಸುವ ರೊನಾಲ್ಡ್ ಲೋಬೊ ಮತ್ತು ಯಾಕೂಬ್ ಖಾದರ್ ಗುಲ್ವಾಡಿ ನಿರ್ದೇಶನದ ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಕಥೆ ಹೊಂದಿರುವ ‘ಆ 90 ದಿನಗಳು’ ಸಿನಿಮಾ ಆಯ್ಕೆಯಾಗಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಿದ್ಧಗೊಂಡಿರುವ ‘ಆ 90 ದಿನಗಳು’ ಸಿನೆಮಾದಲ್ಲಿ ದೊಡ್ಡ ತಾರಾಗಣವಿದೆ. ಖ್ಯಾತ ನ್ಯಾಯವಾದಿ ರವಿಕಿರಣ್ ಮುರುಡೇಶ್ವರ ಅವರ ಪುತ್ರ ರತಿಕ್ ಮುರ್ಡೇಶ್ವರ್ ನಾಯಕ ನಟನಾಗಿ ಕಾಣಿಸಿಕೊಂಡಿದ್ದು, ಹಿರಿಯ ನಟಿ ಭವ್ಯ, ರಾಧ ಭಗವತಿ, ಕೃತಿಕ ದಯಾನಂದ್, ಜೋ ಸೈಮನ್, ಪ್ರದೀಪ್ ಪೂಜಾರಿ, ಅಮೀರ್ ಹಂಝ, ಪಕೀರ್ ಸಲಾಂ, ರವಿಕಿರಣ್ ಮುರ್ಡೇಶ್ವರ ಸೇರಿದಂತೆ ಹಲವು ಸ್ಥಳೀಯ ಪ್ರತಿಭೆಗಳು ಅಭಿನಯಿಸಿದ್ದಾರೆ. ಗಿರೀಶ ಶೆಟ್ಟಿಗಾರ್, ನವೀನ ವಿಲಿಯಮ್ಸ್ ಬರ್ಬೋಜ ಸಹ ನಿರ್ಮಾಪಕರಾಗಿದ್ದು, ತಾಂತ್ರಿಕ ನಿರ್ದೇಶನವನ್ನು ಬಿ. ಶಿವಾನಂದ್, ಛಾಯಾಗ್ರಹಣವನ್ನು ಪಿವಿಆರ್ ಸ್ವಾಮಿ, ಗೂಗಾರ ದೊಡ್ಡಿ, ಸಂಗೀತವನ್ನು ಕೃಷ್ಣ ಬಸ್ರೂರು, ಸಂಕಲನವನ್ನು ನಾಗೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಕೇಂದ್ರ ಸರಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಯುವ ಸಂಸತ್ತು ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಯುವ ಜನರಿಂದ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಕಾರ್ಯಕ್ರಮ ಉಡುಪಿ ನೊಡೆಲ್ ಕೇಂದ್ರದ ಅಡಿಯಲ್ಲಿ – ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳು ಬರಲಿದ್ದು, ಆಯಾ ಜಿಲ್ಲೆಗಳಲ್ಲಿ ಭಾಗವಹಿಸುವ ಯುವ ಪ್ರತಿಭೆಗಳಿಗೆ ಆಯಾ ಜಿಲ್ಲಾ ಮಟ್ಟದಲ್ಲಿಯೇ ಸ್ಕ್ರೀನಿಂಗ್ ಮಾಡಿ ಜಿಲ್ಲೆಯಿಂದ ಆಯ್ಕೆಯಾದ ಅತ್ಯುತ್ತಮ ಅಭ್ಯರ್ಥಿಗಳನ್ನು ಉಡುಪಿಯಿಂದ ಆನ್ಲೈನ್ ಮೂಲಕ ಫೆಬ್ರವರಿ 23 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ತಮ್ಮ ಜಿಲ್ಲೆಗಳನ್ನು ಪ್ರತಿನಿಧಿಸುವರು. ಪ್ರತೀ ಜಿಲ್ಲೆಯಿಂದ ಇಬ್ಬರು ಅತ್ಯುತ್ತಮ ಅಭ್ಯರ್ಥಿಗಳ ಆಯ್ಕೆಯನ್ನು ಉಡುಪಿಯಲ್ಲಿ ನಡೆಸಿ ಅವರ ಹೆಸರನ್ನು ರಾಜ್ಯ ಮಟ್ಟಕ್ಕೆ ಶಿಫಾರಸು ಮಾಡಲಾಗುವುದು. ಈ ಕಾರ್ಯಕ್ರಮವು (ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ) ಜಿಲ್ಲಾ ಮಟ್ಟದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಜಿಲ್ಲೆಯಲ್ಲಿ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ಸಂಬAಧಪಟ್ಟ ತಹಶೀಲ್ದಾರಿಗೆ ದೂರು ನೀಡುವಂತೆ ಉಡುಪಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಕ.ರಾ.ರ.ಸಾ. ನಿಗಮವು ಮಂಗಳೂರಿನಿಂದ ರಾಯಚೂರಿಗೆ ವಯಾ ಉಡುಪಿ – ಮಣಿಪಾಲ – ಕುಂದಾಪುರ – ಸಿದ್ಧಾಪುರ – ಮಾಸ್ತಿಕಟ್ಟೆ – ನಗರ – ಹೊಸನಗರ – ರಿಪ್ಪನ್ಪೇಟೆ – ಆಯನೂರು –ಶಿವಮೊಗ್ಗ – ಹೊನ್ನಾಳಿ – ಹರಿಹರ – ಹರಪನಹಳ್ಳಿ – ಹಗರಿಬೊಮ್ಮನಹಳ್ಳಿ – ಹೊಸಪೇಟೆ – ಗಂಗಾವತಿ – ಸಿಂಧನೂರು – ಮಾನ್ವಿ ಮಾರ್ಗವಾಗಿ ಹೊಸ ರಾಜಹಂಸ ಸಾರಿಗೆ ಕಾರ್ಯಾಚರಣೆಯನ್ನು ಫೆ.25 ರಿಂದ ಪ್ರಾರಂಭಿಸಲಾಗುತ್ತದೆ. ಈ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 05:30ಕ್ಕೆ ರಾಯಚೂರು ತಲುಪುತ್ತದೆ. ಮರು ಪ್ರಯಾಣದಲ್ಲಿ ರಾಯಚೂರಿನಿಂದ ಸಂಜೆ 5 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 06.45 ಕ್ಕೆ ಮಂಗಳೂರಿಗೆ ತಲುಪುವುದು. ಸದರಿ ಸಾರಿಗೆಯಲ್ಲಿ ಮಂಗಳೂರಿನಿಂದ ರಾಯಚೂರಿಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 850 ರೂ. ಇದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ. ಸಾರ್ವಜನಿಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಗೆ ಒಳಪಡುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ ಪಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪಜಾತಿಗಳು ಹೊರತುಪಡಿಸಿ) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 1 ರಿಂದ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ನೀರಾವರಿ ಸೌಲಭ್ಯ ಹೊಂದಿರದ, ವಾರ್ಷಿಕ ಆದಾಯ 40,000 ರೂ. ಒಳಗಿರುವ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.dbcdc.kanataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574882…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಧ್ವಜ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವದ ಅಂಗವಾಗಿ ಬುಧವಾರ ಮನ್ಮಹಾರಥೋತ್ಸವ ಸಂಭ್ರಮದಿಂದ ಜರುಗಿತು. ಬೆಳಿಗ್ಗೆ ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳು ಆರಂಭಗೊಂಡವು. ತಂತ್ರಿಗಳು ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಬ್ಬದ ಅಂಗವಾಗಿ ಕುಂದಾಪುರ ಡಿವೈಎಸ್‌ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಎನ್ಸಿಸಿ ಭೂದಳ ಹಾಗೂ ಎನ್ಎಸ್ಎಸ್ ಘಟಕವು ಮಂಗಳೂರಿನ ವೆನ್ಲಾಕ್ ಆಸ್ಪçತ್ರೆಯ ರಕ್ತನಿಧಿ ಕೇಂದ್ರ, ಆಳ್ವಾಸ್ ರೋಟರಿ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜಿನ ಕಾಮಾರ್ಸ ಸೆಮಿನಾರ್ ಹಾಲ್ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ ಶರತ್ ಕುಮಾರ್ ರಾವ್ ಜೆ. ಮಾತನಾಡಿ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮನಸ್ಥಿತಿಯುಳ್ಳವರಿಂದಾಗಿ ಸಮಾಜದಲ್ಲಿಂದು ತುರ್ತು ರಕ್ತ ಅನಿವಾರ್ಯವಾದಾಗ ಸೂಕ್ತ ಸಮಯದಲ್ಲಿ ರಕ್ತದ ಪೂರೈಕೆ ಸಾದ್ಯವಾಗುತ್ತಿದೆ. ಇಂತಹವರ ಸಂಖ್ಯೆ ಸಮಾಜದಲ್ಲಿ ದ್ವಿಗುಣವಾಗುತ್ತಾ ಸಾಗಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತಾನಾಡಿ, ಸಮಾಜದಲ್ಲಿ ನಮ್ಮ ಹೆಸರು ಶಾಶ್ವತವಾಗಿ ಉಳಿಯಬೇಕೆಂದರೆ ನಾವು ವಾಸಿಸುವ ಪರಿಸರಕ್ಕೆ ನಾವೆಷ್ಟು ಕೊಡುಗೆ ನೀಡಿದ್ದೇವೆ ಎಂಬುದನ್ನು ಅವಲಂಭಿಸಿರುತ್ತದೆಯೇ ಹೊರತು ವೈಯಕ್ತಿಕ ಲಾಭಕ್ಕಾಗಿ ಮಾಡಿದ ಕೆಲಸಗಳಿಂದಲ್ಲ ಎಂದರು. ಆಳ್ವಾಸ್ ಬೆಸ್ಟ್ ಬ್ಲಡ್ ಡೋನರ್ ಇನ್ಸ್ಟಿಟ್ಯೂಷನ್ :ಕೋವಿಡ್ ಸಂಧರ್ಭದಲ್ಲಿ ಅತೀ ಹೆಚ್ಚು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಫೆ.9ರಂದು ಮುಚ್ಚಿದ್ದ ಪದವಿಪೂರ್ವ, ಪದವಿ ಕಾಲೇಜುಗಳು ಇಂದು ಪುನರಾರಂಭವಾಗಿದ್ದು, ಇತರೆ ವಿದ್ಯಾರ್ಥಿಗಳು ಎಂದಿನಂತೆ ತರಗತಿಗೆ ಹಾಜರಾಗಿದ್ದರೇ, ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಪಟ್ಟು ಹಿಡಿದ ವಿದ್ಯಾರ್ಥಿನಿಯರು ಗೈರು ಹಾಜರಾಗಿದ್ದಾರೆ. ಕುಂದಾಪುರ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರ ಪೈಕಿ, 2 ವಿದ್ಯಾರ್ಥಿನಿಯರು ಧೀರ್ಘಾವಧಿ ಗೈರಾಗಿದ್ದು, ಓರ್ವ ವಿದ್ಯಾರ್ಥಿನಿ ಎಂದಿನಂತೆ ಕಾಲೇಜಿಗೆ ಹಿಜಾಬ್ ತೆಗೆದು ಹಾಜರಾಗಿದ್ದಾಳೆ. ಉಳಿದ 25 ಮಂದಿ ವಿದ್ಯಾರ್ಥಿನಿಯರು ಗೈರಾಗಿದ್ದಾರೆ. ತಾಲೂಕಿನ ಇತರ ಸರಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿಯೂ ಬಹುಪಾಲು ವಿದ್ಯಾರ್ಥಿನಿಯರು ತರಗತಿಗೆ ಗೈರಾಗಿದ್ದಾರೆ ಎನ್ನಲಾಗಿದೆ. ಕಾಲೇಜು ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಫೆ.16ರಿಂದ 23ರ ತನಕ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಬೀಗು ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು. ಕಾಲೇಜು ಗೇಟಿನ ಬಳಿ ನಿಷೇಧಾಜ್ಞೆ ಜಾರಿಯಾಗಿರುವ ನೋಟಿಸು ಅಂಟಿಸಲಾಗಿತ್ತು. ಉಪನ್ಯಾಸರು ಕಾಲೇಜು ಆವರಣದಲ್ಲಿ ನಿಂತು ಪರಿಶೀಲಿಸುತ್ತಿರುವುದು ಕಂಡುಬಂತು. ಎಎಸ್ಪಿ ಸಿದ್ಧಲಿಂಗಪ್ಪ, ಎಸಿ ರಾಜು ಕಾಲೇಜಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಡಿ.ವೈ.ಎಸ್.ಪಿ ಶ್ರೀಕಾಂತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಕೇವಲ ಓದು ಮತ್ತು ಬರಹಕ್ಕೆ ಸೀಮಿತವಾಗಿರದೆ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಬೇಕು ಎಂದು ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠ ಮ. ನಿ. ಪ್ರ. ಗುರು ಮಹಾಂತ ಸ್ವಾಮೀಜಿ ಹೇಳಿದರು. ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಧರ್ಮದರ್ಶಿ, ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ನಿರ್ಮಾತೃ ದಿ. ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರ ತೃತೀಯ ವರ್ಷದ ಸಂಸ್ಮರಣೆ ಅಂಗವಾಗಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಸೋಮವಾರ ನಡೆದ ಸಂಸ್ಥಾಪಕರ ದಿನಾಚರಣೆ ಹಾಗೂ ಅಪ್ರಮೇಯ ಸ್ಮಾರಕ ಮತ್ತು ಮತಂಗವನ ಉದ್ಯಾನವನ ಉದ್ಘಾಟಿಸಿ ಮಾತನಾಡಿ ಒಳ್ಳೆಯ ಕೆಲಸ ಮಾಡಿದ್ದೇನೆ ಎಂಬ ಭಾವನೆ ಹೊಂದಿರಬಾರದು ಎಂಬ ಬಸವಣ್ಣನವರ ಮಾತನ್ನು ರಾಮಚಂದ್ರ ಭಟ್ಟರು ಜೀವನದಲ್ಲಿ ಅಕ್ಷರಶಃ ಅಳವಡಿಸಿಕೊಂಡಿದ್ದರು. ಸುಜ್ಞಾನವಂತ, ಸದ್ಭಾವಯುತ, ಸಂಸ್ಕಾರಯುತ ಮಕ್ಕಳ ಸಮಾಜಕ್ಕೆ ಕಟ್ಟಿಕೊಟ್ಟಿದ್ದಾರೆ ಎಂದರು. ಅಪ್ರಮೇಯ ಸ್ಮಾರಕ ಉದ್ಘಾಟಿಸಿ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಸಂಚಾಲಕ ಚಂದ್ರಶೇಖರ ಭಟ್ ಮಾತನಾಡಿ, ಮಕ್ಕಳು ಬೆಳೆಯುತ್ತಾ ಹೋದಂತೆ ಅವರ ಆಸೆ-ಆಕಾಂಕ್ಷೆಗಳು…
