ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸ್ತುತ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರು ಕೃಷಿಯಲ್ಲಿ ಸೂಕ್ಷ್ಮ ನೀರಾವರಿಯನ್ನು ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಿಕೊಳ್ಳಲು ಸಾಮಾನ್ಯ ವರ್ಗದ ರೈತರು ಗರಿಷ್ಠ 5 ಹೆ. ಪ್ರದೇಶದವರೆಗ ಹನಿ/ತುಂತುರು ನೀರಾವರಿ ಸೌಲಭ್ಯವನ್ನು ಅಳವಡಿಸಿಕೊಳ್ಳಲು ಶೇ.45 ಹಾಗೂ ಸಣ್ಣ ಮತ್ತು ಅತೀ ಸಣ್ಣರೈತರು/ ಪ.ಜಾತಿ ಮತ್ತು ಪ.ಪಂಗಡದ ರೈತರಿಗೆ 2 ಹೆ. ಪ್ರದೇಶದವರೆಗೆ ಶೇ. 90 ರಷ್ಟು ಸಹಾಯಧನ ನೀಡಲಾಗುತ್ತಿದ್ದು, ವಿಕಲಚೇತನರಿಗೆ ಆದ್ಯತೆ ಮೇರೆಗೆ ವಿತರಿಸಲಾಗುವುದು. ಆಸಕ್ತ ರೈತರು ಅರ್ಜಿ, ಪಹಣಿ, ಆಧಾರ ಪ್ರತಿ ಬ್ಯಾಂಕ್ ಖಾತೆಯ ವಿವರ ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಜಮೀನಿನ ನಕ್ಷೆ, ಚೆಕ್ಬಂಧಿ, ಬೆಳೆ ದೃಢೀಕರಣ ಪತ್ರ ಹಾಗೂ ಹನಿ/ತುಂತುರು ನೀರಾವರಿ ಅಳವಡಿಸುವ ಕಂಪೆನಿಯ ವಿವರದೊಂದಿಗೆ ಇಲಾಖೆಯ ತಾಲೂಕು ಕಛೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕರ ಕಛೇರಿ ದೂ.ಸಂ:…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ರತ್ತು ಬಾಯಿ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಸರಕಾರದ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೈಂದೂರು ವಲಯ ಪತ್ರಕರ್ತರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಶಿರೂರು ಶಾಲಾ ಸಂಸತ್ತನ್ನು ಉದ್ಘಾಟಿಸಿ ಮಾತನಾಡಿ, ಭಾರತದ ಭವ್ಯ ಭವಿಷ್ಯ ತರಗತಿ ಕೋಣೆಯಲ್ಲಿ ನಿರ್ಮಾಣವಾಗುತ್ತದೆ ಅದಕ್ಕೆ ಬೇಕಾದ ತರಬೇತಿಯನ್ನು ಮತ್ತು ಜ್ಞಾನವನ್ನು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ನೀಡುವುದು ಶಿಕ್ಷಣದ ಮುಖ್ಯ ದ್ಯೇಯವಾಗಿರಬೇಕು. ಮೊದಲು ತಂದೆ-ತಾಯಿಗಳಿಗೆ ಉತ್ತಮ ಮಕ್ಕಳಾಗಿ ಭವ್ಯ ಭಾರತದ ಪ್ರಜೆಗಳಾಗಿ ದೇಶ ಕಟ್ಟುವ ಹೊಣೆಗಾರಿಕೆಯನ್ನು ಎಳೆಮೆಯಲ್ಲಿಯೇ ಬೆಳೆಸಿಕೊಳ್ಳುವ ಅವಶ್ಯಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ಆನಂದ ಮದ್ದೋಡಿ ವಹಿಸಿದ್ದರು. ಈ ಸಂದರ್ಭ ಶಿಕ್ಷಕರಾದ ಗುರುರಾಜ್. ಎಸ್. , ನಿರ್ಮಲಾ, ಹೇಮಾವತಿ ಹಾಗೂ ಸಿಬ್ಬಂದಿ ವರ್ಗದವರಾದ ಗಿರಿಜಾ, ಪಾರ್ವತಿ ಹಾಗೂ ವಿದ್ಯಾರ್ಥಿ ನಾಯಕ ಮಹೇಶ್.ಎಂ. ಉಪಸ್ಥಿತರಿದ್ದರು ಶಾಲಾ ಸಂಸತ್ತಿನ ವಕ್ತಾರರಾದ ಚೈತ್ರಾ ಕಾರ್ಯಕ್ರಮದ ನಿರ್ವಹಿಸಿದರು. ಶಿಕ್ಷಕರಾದ ಚಂದ್ರ ಕೆ. ದೇವಾಡಿಗ ಸ್ವಾಗತಿಸಿ ಶಿಕ್ಷಕರಾದ ಶ್ರೀ ಪ್ರಕಾಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ವಿದ್ಯಾಸಂಸ್ಥೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಹಯೋಗದೊಂದಿಗೆ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಗಾಂಧಿ ಹಾಗೂ ಶಾಸ್ತ್ರಿಗಳ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ನ ಸ್ಥಾನೀಯ ಆಯುಕ್ತರಾದ ಕೊಗ್ಗ ಗಾಣಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ವಿಚಾರಧಾರೆಗಳ ಕುರಿತು ಮಾತನಾಡಿದರು. ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ನ ತರಬೇತಿ ಆಯುಕ್ತರಾದ ಆನಂದ ಅಡಿಗ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಕುರಿತು ಮಾತನಾಡಿದರು. ಈ ಸಂದರ್ಭ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ, ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಬ್ರಹ್ಮಣ್ಯ, ಸಂಸ್ಥೆಯ ಬೋಧಕ,ಬೋಧಕೇತರ ವೃಂದದದವರು ಉಪಸ್ಥಿತರಿದ್ದರು. ಸಂಸ್ಥೆಯ ಗೈಡ್ ಶಿಕ್ಷಕಿಯರಾದ ಪದ್ಮಾವತಿ, ಅಶ್ವಿನಿ ಪ್ರಾರ್ಥಿಸಿ, ಸಂಸ್ಥೆಯ ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಮುಖ್ಯಶಿಕ್ಷಕಿ ಪ್ರಮೀಳಾ ಡಿಸೋಜಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ರಿ. ಕುಂದಾಪುರ ವಲಯ ಇದರ ವತಿಯಿಂದ ಕುಂದಾಪುರದ ಗಾಂಧಿ ಪಾರ್ಕ್ ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಹಾಗೂ ಶಾಸ್ತ್ರಿ ಸರ್ಕಲ್ನಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಹಾಗೂ ಮಾಲಾರ್ಪಣೆ ಮಾಡಿ ಜನ್ಮ ದಿನಾಚರಣೆ ಆಚರಿಸಲಾಯಿತು. ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಕುಂದಾಪುರ ವಲಯದ ನಿಕಟ ಪೂರ್ವ ಅಧ್ಯಕ್ಷ ರಾಜ ಮಠದಬೆಟ್ಟು ಮಾಲಾರ್ಪಣ ಮಾಡಿದರು. ಈ ಸಂದರ್ಭ ನೂತನ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಉಪಾಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಸಲಹಾ ಸಮಿತಿ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರು ಪ್ರಕೃತಿಯೊಂದಿಗೆ ಬದುಕಿದವರು ಅವರು ಬದುಕಿದ ರೀತಿ, ಸಾಗಿದ ದಾರಿ ನಮಗೆಲ್ಲಾ ಅನುಕರಣೀಯ, ಅವರು ನೀಡಿದ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಡಾ. ಶಿವರಾಮ ಕಾರಂತರ ಮಗಳು ಕ್ಷಮಾ ರಾವ್ ಅವರು ಹೇಳಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ)ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್(ರಿ) ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 17 ನೇ ವರುಷದ ಸಂಭ್ರಮದ ಸಾಹಿತ್ಯಕ -ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021(ಎಣೆಯಿಲ್ಲದ ಚಕಿತ) ಕಾರ್ಯಕ್ರಮದಲ್ಲಿ ನುಡಿ ಚೇತನದಲ್ಲಿ ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲಾ ಸೋಮಶೇಖರ್ ಅವರು ಕಾರಂತರು ನಮಗಾಗಿ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ, ಅವರ ಸಾಧನೆಯ ಸ್ಪೂರ್ತಿ ನಾವು ಪಡೆದುಕೊಂಡು ಕಾರಂತರಂತೆ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕಾರಂತ ಥೀಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಕಛೇರಿಯಲ್ಲಿ ಎರಡು ದಿನಗಳ ಬೃಹತ್ ಖಾದಿ ಮೇಳವನ್ನು ಶಾಸಕರಾದ ಬಿ.ಎಂ. ಸುಕುಮಾರ್ ಶೆಟ್ಟಿ ಉದ್ಘಾಟನೆ ಮಾಡಿದರು. ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ಬೈಂದೂರು ಮಂಡಲದಲ್ಲಿ ನಡೆಯುತ್ತಿರುವ ಸೇವಾ ಮತ್ತು ಸಮರ್ಪಣಾ ಅಭಿಯಾನದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಎಲ್ಲಾ ಕಾರ್ಯಕ್ರಮಗಳ ಯಶಸ್ಸಿಗೆ ಪ್ರಾಮಾಣಿಕವಾಗಿ ದುಡಿಯುತ್ತಿರುವಂತಹ ಎಲ್ಲಾ ಪದಾಧಿಕಾರಿಗಳಿಗೆ ಧನ್ಯವಾದ ತಿಳಿಸಿದರು. ಜಿಲ್ಲಾ ಉಪಾಧ್ಯಕ್ಷರು ಹಾಗೂ ಗಾಂಧಿ ಜಯಂತಿ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ, ಗಾಂಧಿಜೀಯವರ ಜೀವನ ಚರಿತ್ರೆ ಮತ್ತು ಸ್ವತಂತ್ರ ಸಂಗ್ರಾಮದಲ್ಲಿ ಅವರ ಪಾತ್ರವನ್ನು ವಿವರಿಸಿದರು. ಈ ಸಂದರ್ಭ ಸುರೇಶ್ ಬಟ್ವಾಡಿ, ಬಾಬು ಹೆಗ್ಡೆ, ಮಹೇಂದ್ರ ಪೂಜಾರಿ, ಪ್ರಜ್ವಲ್ ಶೆಟ್ಟಿ, ಸದಾಶಿವ ಪಡುವರಿ, ಮಾಲಿನಿ ಕೆ., ಶರತ್ ಕುಮಾರ್ ಶೆಟ್ಟಿ, ಭಾಗೀರಥಿ ಸುರೇಶ್, ಸಂತೋಷ್ ಮಡಿವಾಳ, ಹಾಗೂ ಪಕ್ಷದ ಪದಾದಿಕಾರಿಗಳು , ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಮೊಬೈಲ್ ಎಕ್ಸ್ ಸಂಸ್ಥೆಯ ಮಾಲಕ ಮುಸ್ತಾಫ್ ಅವರ ಅಪಹರಣ ಹಾಗೂ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಕೋಟೇಶ್ವರ ಮೂಲದ ಮುಕ್ತಾರ್ (35) ಹಾಗೂ ಈತನೊಂದಿಗಿದ್ದ ದೆಹಲಿ ಮೂಲದ 25 ವರ್ಷದ ಯುವತಿಯನ್ನು ಬಂಧಿಸಲಾಗಿದೆ. ಅಂಗಡಿ ವ್ಯವಹಾರ ಮುಗಿಸಿ ಮನೆಗೆ ತೆರಳುತ್ತಿದ್ದ ಮುಸ್ತಾಫ್ ಅವರಿಂದ 4,64,0175 ರೂ. ಹಾಗೂ 1 ಲಕ್ಷ ಮೌಲ್ಯದ ಸೊತ್ತುಗಳು ಮತ್ತು ದಾಖಲಾತಿಗಳನ್ನು ಸುಲಿಗೆ ಮಾಡಿ ರಿವಾಲ್ವರ್ ತೋರಿಸಿ ಕಾರಿನಲ್ಲಿ ಅಪಹರಿಸಿ ಬೆಂಗಳೂರಿಗೆ ಕರೆದೊಯ್ದಿದ್ದರು. ಮೊಬೈಲ್, ದಾಖಲೆಗಳನ್ನು ತಮ್ಮಲ್ಲಿಯೇ ಇರಿಸಿಕೊಂಡ ಆರೋಪಿಗಳು ಸೆ.18ರಂದು ರಾತ್ರಿ 9:30ಕ್ಕೆ ಮುಸ್ತಾಫ್ ಅವರನ್ನು ಬಿಟ್ಟು ಕಳುಹಿಸಿದ್ದರು. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಂಬಂಧ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳ ಚಲನವಲನ ಗಮನಿಸಿ ದೆಹಲಿಯಲ್ಲಿ ಇರುವುದನ್ನು ಪತ್ತೆಹಚ್ಚಿ ಅಲ್ಲಿಗೆ ತೆರಳಿದ್ದರು. ಆರೋಪಿಗಳು ಅಲ್ಲಿಂದ ಕಾರಿನಲ್ಲಿ ಪರಾರಿಯಾಗಿದ್ದು ಪೊಲೀಸರು ಸುಮಾರು 1000…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ,ಅ.1: ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಗೋ ಹತ್ಯೆ ವಿರೋಧಿಸಿ ಮತ್ತು ಗೋ ಹಂತಕರನ್ನು ಗಡಿಪಾರು ಮಾಡಲು ಆಗ್ರಹಿಸಿ ಶುಕ್ರವಾರ ಗಂಗೊಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯ ನಡೆಯಿತು. ಗಂಗೊಳ್ಳಿ ಫೋರ್ಟ್ ಆಫೀಸ್ ಬಳಿಯಿಂದ ಆರಂಭವಾಗಿ ರಾಮಮಂದಿರದ ತನಕ ಕಾಲ್ನಡಿಗೆ ಮೆರವಣಿಗೆ ಸಾಗಿತು. ಬಳಿಕ ಗಂಗೊಳ್ಳಿ ವಿರೇಶ್ವರ ದೇವಸ್ಥಾನದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ್ಯದ ಪ್ರಧಾನ ಕಾರ್ಯದರ್ಶಿ ಕೆ.ಟಿ. ಉಲ್ಲಾಸ್ ಮಾತನಾಡಿ ಗಂಗೊಳ್ಳಿಯಲ್ಲಿ ಗೋವುಗಳನ್ನು ಅಮಾನುಷವಾಗಿ ಕೊಯ್ದು ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ವ್ಯಕ್ತಿಗಳು ಸಮಾಜದಲ್ಲಿ ಶಾಂತಿ ಕದಡುವ ಅಶಾಂತಿಯ ವಾತಾವರಣ ಉಂಟು ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಹಿಂದೂಗಳ ರಕ್ತ ಕುದಿಯುವಂತೆ ಮಾಡಿದ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಇಲಾಖೆ ಸುಮೊಟೊ ಪ್ರಕರಣ ದಾಖಲು ಮಾಡಿ ಗೂಂಡಾ ಕಾಯ್ದೆ ಅಡಿಯಲ್ಲಿ ಗಡಿಪಾರು ಮಾಡಬೇಕಾಗಿತ್ತು. ಆದರೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಇಂತವರನ್ನು ಗಡಿಪಾರು ಮಾಡುವಂತೆ…
ಅಕ್ಟೋಬರ್ ತಿಂಗಳು ಬಂದ ಕ್ಷಣ ಕೋಟ ಪರಿಸರದಲ್ಲಿ ಒಂದು ಹಬ್ಬದ ವಾತಾವರಣ, ಸಾಹಿತ್ಯಿಕ-ಸಾಂಸ್ಕೃತಿಕ ಕಾರ್ಯಕ್ರಮದ ಹಬ್ಬವೇ ಎನ್ನಬಹುದೆನೋ, ಕೋಟ ಎಂದಾಕ್ಷಣ ಮೊದಲು ಎರಿಗೂ ನೆನಪಾಗುವುದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ನೆನಪು. ಕೋಟ ಎನ್ನುವ ಚಿಕ್ಕ ಊರನ್ನು ಪ್ರಪಂಚದಾದ್ಯಂತ ಪಸರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ಹುಟ್ಟಿ ಬೆಳೆದ ತವರೂರಿನಲ್ಲಿ ಅವರ ಹುಟ್ಟಿದ ದಿನದ ಸಂಭ್ರಮ ಕಾರ್ಯಕ್ರಮಗಳ ಮೂಲಕ ಆಚರಿಸಿ ನಡೆದಾಡುವ ವಿಶ್ವಕೋಶನಿಗೊಂದು ವಿಶಿಷ್ಟ ರೀತಿಯಲ್ಲಿ ನಮಿಸುವುದು ಅವರಿಗೆ ಹುಟ್ಟೂರಿನಲ್ಲಿ ಕೊಡುವ ಅಭಿಮಾನದ ಗೌರವ. ಸಾಹಿತ್ಯಿಕ ಸಾಂಸ್ಕೃತಿಕ ಸುಗ್ಗಿಕಾರಂತರ ನೆನಪಿನಲ್ಲಿ ಅವರ ಬದುಕು -ಬರಹವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕಾರಂತ ಥೀಮ್ ಪಾರ್ಕ್ ತಲೆ ಎತ್ತಿ ನಿಂತಿದೆ. ದಿನನಿತ್ಯ ಎಂಬಂತೆ ಸಾಹಿತ್ಯಿಕ -ಸಾಂಸ್ಕೃತಿಕ ಚಟುವಟಿಕೆ ನಡೆದು ಸಾಂಸ್ಕೃತಿಕ ರಾಯಭಾರಿ ಎನ್ನುವ ಮಟ್ಟಿಗೆ ಬೆಳೆದು ನಿಂತಿರುವುದು ಹೆಮ್ಮೆಯ ಸಂಗತಿ. ಪ್ರತಿ ವರ್ಷ ಕಾರಂತೋತ್ಸವದ ಅಂಗವಾಗಿ ೧೦ ದಿನಗಳ ಕಾಲ ಸಾಹಿತ್ಯಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಒಂದು ಸಂಪ್ರದಾಯ. ಈ ನಿಟ್ಟಿನಲ್ಲಿ…
ಹಿಂದೆಲ್ಲಾ ವಿಚ್ಛೇದನ ಅಪರೂಪದ, ಅತ್ಯಂತ ಚರ್ಚೆಯ ವಿಷಯವಾಗಿರುತ್ತಿತ್ತು. ಆದರೆ ಇತ್ತೀಚಿಗೆ ಅದು ಮದುವೆಯಷ್ಟೇ ಕಾಮನ್ ಆಗಿದೆ. ತಾನು ತನ್ನದೆಂಬ ಅಹಂಕಾರದಲ್ಲಿ ಬೇರೆಯವರ ಭಾವನೆ ಅರ್ಥ ಮಾಡಿಕೊಳ್ಳುವುದರಲ್ಲಿ, ಮನುಷ್ಯ ಸಂಬಂಧವನ್ನು ಉಳಿಸಿಕೊಳ್ಳುದರಲ್ಲಿ ನಾವು ವಿಫಲರಾಗುತ್ತದ್ದೇವೆ. ಹಿಂದಿನ ಕಾಲದಲ್ಲಿ ಪರಸ್ಪರ ಹೊಂದಾಣಿಕೆ ಕಷ್ಟವೆಂಬುದು ಅರಿವಿಗೆ ಬಂದ ಮೇಲೂ ಕೆಲವು ವರ್ಷ ಜೊತೆಗಿದ್ದು, ಗಂಭೀರ ಕಾರಣಕ್ಕೆ ಇನ್ನು ಹೊಂದಾಣಿಕೆ ಸಾಧ್ಯವೇ ಇಲ್ಲ ಎಂಬುದು ಖಚಿತವಾದ ಮೇಲೆ ಜೋಡಿಗಳು ಕೋರ್ಟ್ ಮೆಟ್ಟಿಲೇರಿ ವಿಚ್ಛೇದನೆ ಪಡೆಯುತ್ತಿದ್ದರು. ಆದರೆ ಈಗ ಮದುವೆಯಾಗಿ ಕೆಲವೇ ದಿನಕ್ಕೆ ವಿಚ್ಚೇದನೆ ಬಯಸುವವರ ಸಂಖ್ಯೆ ಸಾಕಷ್ಟಿದೆ. ಮಕ್ಕಳಾದ ಮೇಲೆ ವಿಚ್ಛೇದನೆ ಬಯಸುವ ದಂಪತಿಗಳು ಇಂಥ ಗಂಭೀರ ನಿರ್ಧಾರ ತೆಗೆದುಕೊಳ್ಳೋ ಮುನ್ನ ಸಾಕಷ್ಟು ಆಯಾಮದಲ್ಲಿ ಯೋಚಿಸೋದು ಅಗತ್ಯ ತಂದೆ ತಾಯಿಯರಲ್ಲಿರುತ್ತದೆ.ಇಲ್ಲಿ ವಿಚ್ಛೇದನೆ ಪರಿಣಾಮ ಬೀರೋದು ಕೇವಲ ಇಬ್ಬರ ಬದುಕಿನ ಮೇಲಲ್ಲ. ಬದಲಿಗೆ ಇನ್ನೂ ಬಾಳಿ ಬದುಕಬೇಕಾದ ಇನ್ನೊಂದು ಜೀವ ಅಥವಾ ಜೀವಗಳ ಜೀವನದ ಮೇಲು ಕೂಡ. ಹಾಗಾಗಿ ವಿಚ್ಛೇದನೆ ತೀರ್ಮಾನಕ್ಕೆ ಬರೋ ಮುನ್ನ ಒಮ್ಮೆ ಹೀಗೂ ಯೋಚಿಸಿ.…
