ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂಭಾಶಿಯ ಕೊರಗ ಕಾಲನಿ ಸಮೀಪದ ‘ಮಕ್ಕಳ ಮನೆ’ಗಾಗಿ ಚಾಲೆಂಜರ್ಸ್ ಫೌಂಡೇಶನ್ (ರಿ) ಕೊಡುಗೆಯಾಗಿ ನೀಡಿದ ಪ್ರಾಕೃತಿಕ ಬಯಲು ರಂಗಮಂದಿರ ವೇದಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಗುರುವಾರ ಸಂಜೆ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ಕುಂಭಾಶಿಯ ಮಕ್ಕಳ ಮನೆಗೆ ಪ್ರಾಕೃತಿಕ ಬಯಲು ರಂಗಮಂದಿರದಂತಹ ಅತ್ಯಮೂಲ್ಯ ಆಸ್ತಿ ಮಾಡಿಕೊಟ್ಟಿದ್ದಕ್ಕೆ ಚಾಲೆಂಜರ್ಸ್ ಫೌಂಡೇಶನ್ ಸಂಸ್ಥೆಗೆ ಜಿಲ್ಲಾಡಳಿತವು ಅಭಿನಂದನೆ ಸಲ್ಲಿಸುತ್ತದೆ. ಇದೊಂದು ಅದ್ಭುತ ಪರಿಕಲ್ಪನೆಯಾಗಿದ್ದು ಮುಂದಿನ ದಿನಗಳಲ್ಲಿ ಇಲ್ಲಿನ ಮಕ್ಕಳ ಪಾಠ ಹಾಗೂ ಇತರ ಉತ್ತಮ ಚಟುವಟಿಕೆಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ ಎಂದು ಹೇಳಿದರು. ಚಾಲೆಂಜರ್ಸ್ ಫೌಂಡೇಶನ್ ಅಧ್ಯಕ್ಷ ರಾಜೇಂದ್ರ ಶೆಟ್ಟಿ ಹಾಲಾಡಿ ಮಾತನಾಡಿ, ಚಾಲೆಂಜರ್ಸ್ ಫೌಂಡೇಶನ್ ಸಾಕಷ್ಟು ವರ್ಷಗಳಿಂದ ನಿರಂತರ ಸಮಾಜ ಸೇವೆಯಲ್ಲಿ ತೊಡಗಿದೆ. ಯಾರಿಂದಲೂ ದೇಣಿಗೆ, ನಿಧಿ ಸಂಗ್ರಹ, ಮಾಡದೇ ಸಂಸ್ಥೆ ಸದಸ್ಯರ ಆದಾಯದ ಒಂದಷ್ಟು ಭಾಗವನ್ನು ಸಮಾಜಕ್ಕೆ ನೀಡಲಾಗುತ್ತಿದೆ. ಸಮಾಜದಿಂದ ಪಡೆದುದ್ದನ್ನು ಸಮಾಜಕ್ಕೆ ಕೊಡಬೇಕು ಎನ್ನುವುದು ಚಾಲೆಂಜರ್ಸ್ ಫೌಂಡೇಶನ್ ಮೂಲಮಂತ್ರವಾಗಿದ್ದು ಸ್ವಾರ್ಥ ರಹಿತವಾಗಿ ಸಾಧನೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಕಳೆದ ವರ್ಷ ರೂ.160 ಕೋಟಿ ವ್ಯವಹಾರ ನಡೆಸಿ ರೂ 47.56 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.11 ಲಾಭಾಂಶ ಘೋಷಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಶುಕ್ರವಾರ ನಡೆದ ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘವು 18 ವರ್ಷ ಪೂರೈಸಿದೆ. ಐದು ಕಡೆ ಶಾಖೆಗಳನ್ನು ಹೊಂದಿದೆ. ನೂತನವಾಗಿ ತೆರೆದ ಶಿರೂರು, ತೆಕ್ಕಟ್ಟೆ ಶಾಖೆಗಳು ಉತ್ತಮ ಪ್ರಗತಿಯಲ್ಲಿದೆ. ಕುಂದಾಪುರ ಶಾಖೆ ಸ್ವಂತ ನಿವೇಶನ, ಕಟ್ಟಡ ಹೊಂದಿದೆ. ಬೈಂದೂರಿನ ಪ್ರಧಾನ ಕಚೇರಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಲಾಗಿದೆ. ಆಡಳಿತ ಮಂಡಳಿ, ಸಿಬ್ಬಂದಿ ಸಹಕಾರದಿಂದ ಸೊಸೈಟಿ ಪ್ರಗತಿ ಸಾಧಿಸುತ್ತಿದೆ ಎಂದು ಅವರು ಹೇಳಿದರು. ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕುಷ್ಟ ಬಿಲ್ಲವ ವಾರ್ಷಿಕ ವರದಿ, ಲೆಕ್ಕಪತ್ರ, ಮುಂದಿನ ವರ್ಷದ ಅಂದಾಜು ಆಯವ್ಯಯ ಪತ್ರ ಮಂಡಿಸಿದರು. ಉನ್ನತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವ ಹಕ್ಕುಗಳ ಘಟಕದ ಆಶ್ರಯದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ನಡೆಯಿತು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರವೀಣ್ ಮೊಗವೀರ ಗಂಗೊಳ್ಳಿ ಮಾತನಾಡಿ, ಮಾನವ ಹಕ್ಕು ಪ್ರತಿಯೊಬ್ಬ ವ್ಯಕ್ತಿಯ ಜನ್ಮಸಿದ್ಧ ಹಕ್ಕು, ವ್ಯಕ್ತಿಯ ವ್ಯಕ್ತಿತ್ವದ ವಿಕಸನಕ್ಕೆ ಹಾಗೂ ಶೋಷಣೆ ರಹಿತ ಸಮಾಜವನ್ನು ರೂಪಿಸಲು ಮಾನವ ಹಕ್ಕುಗಳ ಅರಿವು ಪ್ರತಿಯೊಬ್ಬರಿಗೂ ಅತ್ಯವಶ್ಯಕ. ನಾವು ನಮ್ಮ ಹಕ್ಕುಗಳನ್ನು ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಇತರರ ಹಕ್ಕುಗಳನ್ನು ಗೌರವಿಸಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಮಾನವ ಹಕ್ಕುಗಳ ಘಟಕದ ಸಂಯೋಜಕಿ ಅವಿತಾ ಕೊರೆಯಾ ಸ್ವಾಗತಿಸಿ, ನಿರೂಪಿಸಿದರು. ಸಹ ಸಂಯೋಜಕಿ ಡಾ.ದೀಪಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅರೆಹೊಳೆ ಕ್ರಾಸ್ನಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ನಾವುಂದ ಲಯನ್ಸ್ ಕ್ಲಬ್ಗೆ ಸನದು ಪ್ರದಾನ ಕಾರ್ಯಕ್ರಮ ನಡೆಯಿತು. ಲಯನ್ಸ್ ಜಿಲ್ಲಾ ಗವರ್ನರ್ ನೀಲಕಂಠ ಮಂಜುನಾಥ ಹೆಗ್ಡೆ ಮಾತನಾಡಿ, ಬೈಂದೂರು ಉಪ್ಪುಂದ ಲಯನ್ಸ್ ಕ್ಲಬ್ ಅತ್ಯುತ್ತಮ ಚಟುವಟಿಕೆ ಮೂಲಕ ಜಿಲ್ಲೆಗೆ ಮಾದರಿಯಾಗಿ ರೂಪುಗೊಳ್ಳುವ ವಿಶ್ವಾಸ ಇದೆ ಎಂದು ಹೇಳಿದರು. ನಾವುಂದ ಕ್ಲಬ್ ಅಧ್ಯಕ್ಷ ಭಾಸ್ಕರ್ ಶೆಟ್ಟಿ ವಕ್ವಾಡಿ ಅಧ್ಯಕ್ಷತೆ ವಹಿಸಿದ್ದರು. ನರಸಿಂಹ ದೇವಾಡಿಗ, ಭಾಸ್ಕರ್ ಶೆಟ್ಟಿ, ಶಶಿಧರ ಶೆಟ್ಟಿ, ಮಹಾದೇವ ಮಂಜು, ಎನ್. ಪ್ರಭಾಕರ ಶೆಟ್ಟಿ, ಸಮಥ್ ಶೆಟ್ಟಿ, ವೀರಶೇಖರ್ ಎನ್, ರಘರಾಮ ಶೆಟ್ಟಿ, ಗುರುರಾಜ ಶೇಟ್, ಮಂಜು ಶೆಟ್ಟಿ, ಬಿ. ಸುಬ್ಬಣ್ಣ ಶೆಟ್ಟಿ, ಅಶೋಕ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಕಿರಣ ಶೆಟ್ಟಿ, ವಿರೇಂದ್ರ ಹೆಗ್ಡೆ, ಕೆ. ಮನೋಹರ ಶೆಟ್ಟಿ, ರಾಘವೇಂದ್ರ ಪೂಜಾರಿ, ಕೃಷ್ಣಾನಂದ ಕಾಮತ್, ಪ್ರಸನ್ನ ಹೆಗ್ಡೆ ಬೈಂದೂರು -ಉಪ್ಪುಂದ ಕ್ಲಬ್ ಅಧ್ಯಕ್ಷ ಜಯಶೀಲ ಶೆಟ್ಟಿ ಮತ್ತಿತರರು ಇದ್ದರು. ಯಶೋದಾ ನಾವುಂದ, ಕೇಶವ ಪೂಜಾರಿ ನಾವುಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೇರಳದಿಂದ ಬಂದು ಖಂಬದಕೋಣೆಯಲ್ಲಿ ನೆಲೆಸಿ ಸುದೀರ್ಘ ಕಾಲ ಆಯುರ್ವೇದ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಶತಾಯುಷಿ ಕೆ. ವಿ. ಗೋವಿಂದನ್ ನಂಬಿಯಾರ್(೧೦೧) ಕೇರಳದ ತಳಿಪರಂಂಬದ ತಮ್ಮ ಮಗನ ಮನೆಯಲ್ಲಿ ಗುರುವಾರ ನಿಧನರಾದರು. ಅವರು ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ವೈದ್ಯಕೀಯ ಸೌಲಭ್ಯ ಅಲಭ್ಯವಾಗಿದ್ದ ಕಾಲದಲ್ಲಿ ಖಂಬದಕೋಣೆ ಸುತ್ತಲಿನ ಜನರ ಮನೆವೈದ್ಯರಾಗಿ ಸೇವೆ ಸಲ್ಲಿಸಿದ್ದ ನಂಬಿಯಾರ್, ವಿಷಜಂತು ಚಿಕಿತ್ಸೆಯಲ್ಲಿ ಪರಿಣತಿ ಹೊಂದಿ, ಹಲವು ಜೀವಗಳನ್ನು ಉಳಿಸಿರುವುದನ್ನು ಅಲ್ಲಿನ ಜನ ಸ್ಮರಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಟ್ರಸ್ಟ್ ನಾವುಂದ ಗರಡಿಯ ಆಡಳಿತ ಮೊಕ್ತೇಸರ ಹಾಗೂ ಕಾರ್ಯದರ್ಶಿ ಶೇಖರ ಎಮ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿದ ಗರಡಿಯ ಆಡಳಿತ ಸಮಿತಿಯ ಸಭೆಯಲ್ಲಿ ಗರಡಿಯ ಮುಂಬೈ ಕಮಿಟಿಯ ಈಗಿನ ಅಧ್ಯಕ್ಷರಾಗಿರುವ ಡಾ. ಎನ್ ಕೆ ಬಿಲ್ಲವ ಇವರನ್ನು ಬ್ರಹ್ಮ ಬೈದರ್ಕಳ ಗರಡಿ ಟ್ರಸ್ಟ್ ನಾವುಂದ ಇದರ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಹಾಗೂ ಉಪಾಧ್ಯಕ್ಷರಾಗಿ ಗರಡಿ ಮನೆಯ ನಾಗೇಶ್ ಪಿ ಪೂಜಾರಿ ಇವರನ್ನು ಆಯ್ಕೆ ಮಾಡಲಾಯಿತು, ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಮುತ್ತ ಬಿಲ್ಲವ ಇವರನ್ನು ಗೌರವಿಸಿದರು. ಗರಡಿಯ ಬಲ್ಲಾಳ ಚಂದ್ರಶೇಖರ ಶೆಟ್ಟಿ, ನಿವೃತ್ತ ಶಿಕ್ಷಕ ಸೀತಾರಾಮ ಪೂಜಾರಿ, ಆರ್ ಕೆ ಬಿಲ್ಲವ, ರಾಜು ಪೂಜಾರಿ ಬಾಳಿತ್ಲು, ಮೋಹನ ಪೂಜಾರಿ ಬಾಳಿತ್ಲು ಉಪಸ್ಥಿತರಿದ್ದರು. ತಾಲೂಕು ಪಂಚಾಯತಿ ಸದಸ್ಯ ಹಕ್ಕಾಡಿ ಜಗದೀಶ ಪೂಜಾರಿ, ರಾಜೀವ ಶೆಟ್ಟಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ದುರ್ಗಮ್ಮ ಖಾರ್ವಿ ಹಾಗೂ ಮಾಜಿ ಉಪಾಧ್ಯಕ್ಷೆ ಸಿಂಗಾರಿ ಶೆಡ್ತಿಯವರು ಕಾಂಗ್ರೇಸ್ ಪಕ್ಷದ ಕಾರ್ಯ ವೈಖರಿಗೆ ಬೇಸತ್ತು, ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರ್ವವನ್ನು ಮೆಚ್ಚಿ ಭಾರತೀಯ ಜನತಾ ಪಕ್ಷದ ಬೈಂದೂರು ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿಯವರ ಸಮ್ಮುಖದಲ್ಲಿ ಬಿಜೆಪಿಗೆ ಬೈಂದೂರು ಬಿಜೆಪಿ ಕಚೇರಿಯಲ್ಲಿ ಇಂದು ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಜಿಲ್ಲಾ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಬೈಂದೂರು ಮಂಡಲ ಉಪಾಧ್ಯಕ್ಷ ಗಣೇಶ್ ಗಾಣಿಗ ಉಪ್ಪುಂದ, ಶಿರೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ ಮೊಗವೀರ ಉಪ್ಪುಂದ, ಉಪ್ಪುಂದ ಶಕ್ತಿ ಕೇಂದ್ರದ ಅಧ್ಯಕ್ಷ ದಿವಾಕರ ಶೆಟ್ಟಿ ನೆಲ್ಯಾಡಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮೋಹನ ಚಂದ್ರ ಉಪ್ಪುಂದ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಬುಧವಾರ ನಡೆದ ಪಕ್ಷದ ಕಾರ್ಯಕರ್ತರ ಹಾಗೂ ಪದಾಧಿಕಾರಿಗಳ ಸಭೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ ಸೊರಕೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶೇ 60 ರಷ್ಟು ಅನುದಾನಗಳು ಗ್ರಾಮ ಪಂಚಾಯಿತಿ ಯೋಜನೆಗಳ ಮೂಲಕವೇ ಅನುಷ್ಠಾನ ಆಗುವುದರಿಂದ ರಾಜಕೀಯ ಪಕ್ಷಗಳಿಗೆ ಅತ್ಯಂತ ಪ್ರಾಮುಖ್ಯ ಚುನಾವಣೆ ಇದಾಗಿದ್ದು, ಗ್ರಾಮ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಕಾಂಗ್ರೆಸ್ ಪ್ರಯತ್ನ ನಡೆಸಲಿದೆ’ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಿರುವುದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ. ಸಿದ್ದರಾಮಯ್ಯ ಸರ್ಕಾರ ನೀಡಿದ ಅನ್ನಭಾಗ್ಯದ ಸಹಾಯ ದೊರಕದೆ ಇದ್ದರೆ ಎಷ್ಟೋ ಜನರು ಉಪವಾಸ ಬೀಳುವ ಸಾಧ್ಯತೆಗಳಿದ್ದವು. ನರೇಗಾದಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಲಭಿಸಿದೆ. ಸಂಬಳ, ಪರಿಹಾರ, ಅಭಿವೃದ್ಧಿಗೆ ಅನುದಾನ ನೀಡಲು ಹಣ ಇಲ್ಲದೆ ಇರುವ ಸರ್ಕಾರ ರಾಜ್ಯದಲ್ಲಿ ಇದ್ದೂ ಇಲ್ಲದಂತೆ ಇದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭಾವನಾತ್ಮಕ ಹಾಗೂ ಸುಳ್ಳು ಪ್ರಚಾರದೊಂದಿಗೆ ಚುನಾವಣೆ ಎದುರಿಸುವ ಬಿಜೆಪಿಯವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಾಧನಾ ಸಮುದಾಯ ಭವನದಲ್ಲಿ ನಡೆಯಿತು. ಕಳೆದ ಸಾಲಿನಲ್ಲಿ ರೂ7.19 ಲಕ್ಷ ನಿವ್ವಳ ಲಾಭ ಗಳಿಸಿದೆ. ಆ ಹಿನ್ನೆಲೆಯಲ್ಲಿ ಸದಸ್ಯರಿಗೆ ಶೇ 20 ಡಿವಿಡೆಂಡ್ ನೀಡಲು ನಿರ್ಧರಿಸಲಾಯಿತು. ಸಂಘದ ಅಧ್ಯಕ್ಷ ಶಂಕರ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದಿನ ವರ್ಷದ ವರದಿ ಮತ್ತು ಆಯವ್ಯಯ ಮಂಡಿಸಿದ ವಿಮಲಾ, ಸಂಘವು ಈಗ ದಿನಕ್ಕೆ 850 ಲಿಟರ್ ಹಾಲು ಸಂಗ್ರಹಿಸುತ್ತಿದೆ. ವರ್ಷದಲ್ಲಿ ಒಟ್ಟು ರೂ 1.2ಕೋಟಿ ಮೌಲ್ಯದ ಹಾಲು ಸಂಗ್ರಹಿಸಿ, ಒಕ್ಕೂಟಕ್ಕೆ ರೂ 1.21 ಕೋಟಿ ಮತ್ತು ಸ್ಥಳೀಯವಾಗಿ ರೂ 12 ಲಕ್ಷ ಬೆಲೆಯ ಹಾಲನ್ನು ಮಾರಾಟ ಮಾಡಿದೆ. ಪಶು ಆಹಾರ ವ್ಯವಹಾರದಿಂದ ರೂ12.92ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಸರ್ಕಾರದಿಂದ ರೂ 20.24 ಲಕ್ಷ ಪ್ರೋತ್ಸಾಹಧನ ಲಭಿಸಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಕೆ. ಮನೋಹರ, ವಿಸ್ತರಣಾಧಿಕಾರಿ ರಾಜಾರಾಮ ಸಂಘದ ಸಾಧನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಶೀತ, ಕೆಮ್ಮು, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ಗಳನ್ನು ಮಾಡಿಸಬೇಕು, ತಪ್ಪಿದ್ದಲ್ಲಿ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ ನೊಂದಣಿಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಾ ಪ್ರಾಧಿಕಾರದ ಕುಂದು ಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜನರು ಕೋವಿಡ್ ಸೋಂಕಿನ ಬಗ್ಗೆ ನಿರ್ಲಕ್ಷ ವಹಿಸುತ್ತಿದ್ದಾರೆ. ಇದರಿಂದಾಗಿ ಎರಡನೇ ಅಲೆ ಪ್ರಾರಂಭವಾಗುವ ಸಾಧ್ಯತೆಗಳಿವೆ. ಇದಕ್ಕೆ ಕಡಿವಾಣ ಹಾಕಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಮ್ಮು, ಶೀತ, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆ ಪಡೆಯಲು ಬಂದಂತಹ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಬೇಕು. ಖಾಸಗಿ ವೈದ್ಯಕೀಯ ಸಂಸ್ಥೆಗಳು ರೋಗಿಗಳ ಬಗ್ಗೆ ನಿಖರ ಮಾಹಿತಿಯನ್ನು ನೀಡಬೇಕು ಎಂದರು. ಜಿಲ್ಲೆಯಲ್ಲಿ ವೈದ್ಯಕೀಯ ವೃತ್ತಿಯನ್ನು ಪ್ರಾರಂಭಿಸುವ ಮುನ್ನ ಜಿಲ್ಲಾ ಮಟ್ಟದ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿ,…
