Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀ ದೇವರ ಕಾರ್ತಿಕ ದೀಪೋತ್ಸವ ಜರಗಿತು. ಬೆಳಿಗ್ಗೆ ಪ್ರಾರ್ಥನೆಯೊಂದಿಗೆ ದೀಪೋತ್ಸವದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ಧಾತ್ರಿ ಹವನ, ವನಭೋಜನ, ದೀಪೋತ್ಸವ, ಮಹಾಪೂಜೆ ಮತ್ತಿತರ ಧಾರ್ಮಿಕ ಅನುಷ್ಠಾನಗಳು ದೇವಳದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್ ಮತ್ತು ಜಿ.ಪ್ರದೀಪ ಭಟ್ ನೇತೃತ್ವದಲ್ಲಿ ಜರಗಿತು. ದೇವಳದ ತಾಂತ್ರಿಕ ಜಿ.ರಾಘವೇಂದ್ರ ಆಚಾರ್ಯ, ದೇವಳದ ಮೊಕ್ತೇಸರ ಗುಜ್ಜಾಡಿ ನರಸಿಂಹ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ಡಾ.ಕಾಶೀನಾಥ ಪೈ, ಸುದನೇಶ ಶ್ಯಾನುಭಾಗ್, ಸುರೇಶ ಪೈ, ಪುರೋಹಿತರಾದ ಜಿ.ವಸಂತ ಭಟ್, ಅಜಿತ್ ಭಟ್, ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಭಜಕರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಡಿ.22 ಮತ್ತು ರಂದು ಎರಡು ಹಂತಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬoಧಿಸಿದoತೆ ಚುನಾವಣೆ ನೀತಿ ಸಂಹಿತೆ ಅವಧಿಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾ ಮಟ್ಟದಲ್ಲ “ಅಬಕಾರಿ ಉಪ ಆಯುಕ್ತರ ಕಛೇರಿ, ಅಬಕಾರಿ ಭವನ, ಅಜ್ಜರಕಾಡು, ಉಡುಪಿ ಜಿಲ್ಲೆ” ಇಲ್ಲಿ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದೆ. ಸದರಿ ನಿಯಂತ್ರಣ ಕೊಠಡಿಯು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ : 0820-2532732 ಆಗಿರುತ್ತದೆ. ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆಯ ಅವಧಿಯಲ್ಲಿ , ಯಾವುದೇ ರೀತಿಯ ಅಬಕರಿ ಅಕ್ರಮಗಳು ಕಂಡು ಬಂದಲ್ಲಿ ಮೇಲ್ಕಂಡ ದೂರವಾಣಿ ಸಂಖ್ಯೆಗೆ ಅಥವಾ ಅಬಕಾರಿ ಇಲಾಖೆಯ ಟೋಲ್‍ ಫ್ರೀಸಂಖ್ಯೆ: 1800 4252 550 ಕರೆ ಮಾಡಿ ಮಾಹಿತಿ ನೀಡುವಂತೆ ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾದ ರಾಜೀವ ಶ್ರೀಯಾನ್ ಮತ್ತು ಮನೋಹರ ಡಿಸೋಜ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಶಾಸಕ ಸುಕುಮಾರ್ ಶೆಟ್ಟಿ, ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ಮೆಚ್ಚಿ ಬೇರೆ ಬೇರೆ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಗುಜ್ಜಾಡಿ ಗ್ರಾಮದಲ್ಲಿ ಇಬ್ಬರು ಪ್ರಭಾವಿ ಕಾಂಗ್ರೆಸ್ ಮುಖಂಡರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಪಕ್ಷ ಇನ್ನಷ್ಟು ಬಲಿಷ್ಠವಾಗಿದೆ ಎಂದು ಹೇಳಿದರು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಕೆ. ಗುಜ್ಜಾಡಿ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ರವಿ ಗಾಣಿಗ ಕೆಂಚನೂರು, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರೀಶ ಮೇಸ್ತ, ಬಿಜೆಪಿ ಬೈಂದೂರು ಮಂಡಲ ಉಪಾಧ್ಯಕ್ಷ ವಿನೋದ ಭಂಡಾರಿ, ತ್ರಾಸಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವಿ ಶೆಟ್ಟಿಗಾರ್, ಪಕ್ಷದ ಮುಖಂಡರಾದ ಉಮೇಶ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರ ಕಾರ್ತಿಕ ದೀಪೋತ್ಸವ ಸರಳವಾಗಿ ಜರುಗಿತು ಬೆಳಿಗ್ಗೆ ಪ್ರಾರ್ಥನೆಯೊಂದಿಗೆ ದೀಪೋತ್ಸವದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ಧಾತ್ರಿ ಹವನ, ವನಭೋಜನ, ದೀಪೋತ್ಸವ, ಮಹಾಪೂಜೆ ಮತ್ತಿತರ ಧಾರ್ಮಿಕ ಅನುಷ್ಠಾನಗಳು ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಜರುಗಿತು ದೇವಳದ ತಾಂತ್ರಿಕ ಜಿ.ವಸಂತ ಭಟ್, ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಆಡಳಿತ ಮಂಡಳಿ ಸದಸ್ಯರು, ಭಜಕರು ಮತ್ತಿತರರು ಉಪಸ್ಥಿತರಿದ್ದರು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಆಜ್ಞಾನುಸಾರ ದೀಪೋತ್ಸವವನ್ನು ರಥಬೀದಿ ವಠಾರದಲ್ಲಿ ಅತ್ಯಂತ ಸರಳವಾಗಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ಶನಿವಾರ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಸಭೆ ನಡೆಸಿದರು. ಈ ಸಂದರ್ಭ ಅವರು ಮಾತನಾಡಿ, ಆಯಾ ಇಲಾಖೆಯಲ್ಲಿ ಸಮಸ್ಯೆ ಏನಿದೆ ಎನ್ನುವದರ ಮಾಹಿತಿ ಕೊಡಿ, ಮುಂದೆ ಅದಿಲ್ಲ ಇದಿಲ್ಲ ಉತ್ತರ ಬೇಡ. ಡೀಮ್ಡ್ ಫಾರೆಸ್ಟ್ ಯಾರದ್ದೋ ತಪ್ಪಿಗೆ ಡೀಮ್ಡ್ ಫಾರೆಸ್ಟ್ ಆಗಿದೆ. 94ಸಿಯಲ್ಲಿ ಅರ್ಜಿ ಬಂದಿರುವುದ ಬಾಕಿ ಇಡುವುದು ಸರಿಯಲ್ಲ. ತಾಲೂಕು ಮಟ್ಟದಿಂದ ಸೇರಿಸಿ ಎಲ್ಲಾ ಲೆಕ್ಕಕೊಡಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸೋಣ ಎಂದರು. ಕುಂದಗನ್ನಡ ಪೀಠದ ಬಗ್ಗೆ ಮಂಗಳೂರು ವಿವಿಗೆ ಪತ್ರ ಬರೆದಿದ್ದು, ಅವರಿಂದ ಉತ್ತರ ಬಂದಿದೆ. ಕುಂದಗನ್ನಡ ಪೀಠ ಸ್ಥಾಪನೆಯಾದರೆ ಅಧ್ಯಯನಕ್ಕೆ ಅನುಕೂಲವಾಗುತ್ತದೆ. ಕೊಂಕಣಿ ಅಕಾಡೆಮೆ, ಬ್ಯಾರಿ ಅಕಾಡೆಮಿ ರೀತಿಯಲ್ಲಿ ಕುಂದಗನ್ನಡ ಅಕಾಡೆಮಿ ಆದರೆ ಒಳ್ಳೆಯದು. ಕುಂದಗನ್ನಡ ಜಿಲ್ಲೆ ಬಗ್ಗೆ ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟಿದ್ದು ಎಂದರು. ಎಲ್ಲಾ ಹಾಸ್ಟೆಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿಎಸ್ಸೆಸ್‌ಟಿಇ ಯೋಜನೆಯಡಿಯಲ್ಲಿ ಫಿಟ್ ಇಂಡಿಯಾ, ಖೇಲೋ ಇಂಡಿಯಾ ಹಾಗೂ ಒತ್ತಡ ನಿರ್ವಹಣೆ ಬಗ್ಗೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಮಾಹಿತಿ ಕಾರ್ಯಾಗಾರ ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಸಂಸ್ಥೆ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಉದ್ಘಾಟಿಸಿದರು. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಅಜಾದ್ ಅಹಮದ್, ಸುಧಾಕರ ಶೆಟ್ಟಿ, ಸತ್ಯಾನಂದ ಸಾಲಿನ್ಸ್ ಹಾಗೂ ಅರುಣಕುಮಾರ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ಸಂಗೀತ ಶಿಕ್ಷಕಿಯರಾದ ರಮಣಿ ಹಾಗೂ ಉಷಾ ಪ್ರಾರ್ಥಿಸಿದರು. ಶಿಕ್ಷಕ ರವೀಂದ್ರ ಪೂಜಾರಿ ನಿರೂಪಿಸಿ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣ ವಂದಿಸಿದರು. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಉಪನ್ಯಾಸಕಿ ಶೋಭಾ ಶೆಟ್ಟಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಸದಾನಂದ ಬೈಂದೂರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳರೂರು ವಿದ್ಯುತ್ ಸರಬರಾಜು ಕಂಪೆನಿ ವಿಭಾಗದ ನಿರ್ದೇಶಕರಾಗಿ ಕಮಲಶಿಲೆ ಬಾಲಚಂದ್ರ ಭಟ್ ಅವರನ್ನು ಕರ್ನಾಟಕ ಸರಕಾರ ನೇಮಕಗೊಳಿಸಿದೆ. ಬಾಲಚಂದ್ರ ಭಟ್ ಅವರು ಪ್ರಸ್ತುತ ಉಡುಪಿ ಜಿಲ್ಲಾ ಬಿಜೆಪಿಯ ಕಾರ್ಯದರ್ಶಿಯಾಗಿ ಮತ್ತು ಕುಂದಾಪುರ ವಿದಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ, ಕುಂದಾಪುರ ಹಾಗೂ ಆರೋಗ್ಯ ರಕ್ಷಾ ಸಮಿತಿ ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಹದಿಹರೆಯದ ಹೆಣ್ಣುಮಕ್ಕಳಿಗೆ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಅಬ್ದುಲ್ ರೆಹಮಾನ್ ವಹಿಸಿದ್ದರು. ಡಾ. ಉಮೇಶ್ ನಾಯಕ್ ವೈದ್ಯಾಧಿಕಾರಿ, ಕೋಡಿ ಕುಂದಾಪುರ ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾಲಕ್ಷ್ಮಿ ಕಿರಿಯ ಆರೋಗ್ಯ ಸಹಾಯಕಿ, ಹೆಣ್ಣುಮಕ್ಕಳ ಆರೋಗ್ಯ ಮತ್ತು ಶುಚಿತ್ವವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಹಾಗೆಯೇ ಹಿರಿಯ ಆರೋಗ್ಯ ಸಹಾಯಕಿ ಚಂದ್ರಾವತಿ ಹದಿಹರೆಯದ ಹೆಣ್ಣುಮಕ್ಕಳ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಪ್ರಾಂಶುಪಾಲರಾದ ಡಾ. ಶಮೀರ್ ವಿದ್ಯಾರ್ಥಿನಿಯರಿಗೆ ಹಿತನುಡಿಯನ್ನಾಡಿ ಕಾರ್ಯಕ್ರಮದ ಉದ್ದೇಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಸಾಧು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂಧಿ ಉಪಸ್ಥಿತರಿದ್ದರು ಹರ್ಷಿತಾ ಗಣಕ ವಿಭಾಗದ ಉಪನ್ಯಾಸಕಿ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ರೀಜನಲ್ ಹೆಲ್ತ್‌ಕೇರ್ ಗ್ರೂಪ್  ಸಿಂಗಾಪುರದ ಶ್ರೀಕಾಂತ್, ಮಾತನಾಡಿ ಶ್ರೇಷ್ಠ ಮತ್ತು ಉದಾತ್ತ ಜೀವನ ಎಂಬ ವಿಷಯದ ನೆಲೆಯಲ್ಲಿ ಮಾತನಾಡಿ ಬದುಕು ನಮ್ಮ ವಿಚಾರಗಳಿಗೆ ಪೂರಕವಾಗಿರುತ್ತದೆ. ಅಮೂಲ್ಯವಾದ ಈ ಬದುಕು ಸದಾ ಉದಾತ್ತ ಆಲೋಚನೆಗಳೊಂದಿಗೆ ಖುಷಿಯಾಗಿರಬೇಕು. ನಮ್ಮನ್ನು ನಾವು ಚೆನ್ನಾಗಿ ಖುಷಿಯಾಗಿರಿಸಿಕೊಳ್ಳಬೇಕೆಂದರೆ ಇರುವ ಸಮಯದಲ್ಲಿ ಒಳ್ಳೆಯ ವಿಚಾರಗಳನ್ನು ಸಹ ಅಳವಡಿಸಿಕೊಳ್ಳಬೇಕು. ಯಾಕೆಂದರೆ ಸಮಯವೆಂದಿಗೂ ನಮಗಾಗಿ ಕಾಯುವುದಿಲ್ಲ ಅಲ್ಲದೇ ನಮ್ಮ ಶ್ರೇಷ್ಠ ವಿಚಾರಗಳು ನಮ್ಮೊಳಗೆ ಪರಿಪೂರ್ಣತೆಯನ್ನು ರೂಪಿಸುತ್ತದೆ. ನಿರಂತರವಾಗಿ ಉದಾತ್ತ ಮೌಲ್ಯಗಳ ನೆಲೆಯಲ್ಲಿ ನಮ್ಮ ಬದುಕು ನಡೆಸಬೇಕು. ನಮ್ಮ ನಿತ್ಯದ ಬದುಕಿನಲ್ಲಿ ಆದಷ್ಟು ಒಳ್ಳೆಯ ವಿಚಾರ ಮತ್ತು ಮೌಲ್ಯಗಳನ್ನು ಅಳವಡಿಸಿಕೊಂಡು ನಮ್ಮ ಬದುಕನ್ನು ಖುಷಿಯಾಗಿರಿಸಬೇಕು ಎಂದು ಹೇಳಿದರು ಭಂಡಾರ್ಕಾರ್ಸ್ ಕಾಲೇಜು ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಶಾಂತಾರಾಮ್ ಎ.ಭಂಡಾರ್ಕಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಜೀವನದ ಗುರಿಯನ್ನು ತಿಳಿಯಬೇಕೆಂದರೆ ಭಗವದ್ಗೀತೆಯನ್ನು ಅರ್ಥೈಸಿಕೊಳ್ಳಬೇಕು. ಅಲ್ಲದೇ ದೇವರ ಭಯವೇ ಜ್ಞಾನದ ಮೂಲವಾಗಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ ಕುಂದಾಪುರ ಹಾಗೂ ಬೈಂದೂರು ತಾಲೂಕು ಘಟಕದ ವತಿಯಿಂದ ಬೈಂದೂರು ಶೈಕ್ಷಣಿಕ ವಲಯದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಮುಂದಿನಮನಿ ಅವರಿಗೆ ಗೌರವಾರ್ಪಣೆ ನಡೆಯಿತು. ಸ್ವೀಕರಿಸಿ ಮಾತನಾಡಿದ ಮುಂದಿನಮನಿ, ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಉತ್ತಮ ಪ್ರಯತ್ನದಿಂದಾಗಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂದು ಹೇಳಿದರು. ಉಡುಪಿ ಜಿಲ್ಲಾ ಘಟಕದ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಮಾತನಾಡಿದರು ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಪರವಾಗಿ ಸರಕಾರ ತತ್‌ಕ್ಷಣವೇ ಸುರಕ್ಷಾ ಕ್ರಮಗಳೊಂದಿಗೆ ಶಾಲೆಗಳನ್ನು ಪುನಾರಂಭಿಸುವಂತೆ ಅಥವಾ ವಿದ್ಯಾಗಮ ಶೈಕ್ಷಣಿಕ ಚಟುವಟಿಕೆಯನ್ನು ಮುಂದುವರಿಸುವಂತೆ ಕ್ಷೇತ್ರ ಶಿಕ್ಷಣಧಿಕಾರಿ ಮೂಲಕ ಸರಕಾರಕ್ಕೆ ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಅವನೀಶ ಹೊಳ್ಳ ಶಿಕ್ಷಣಧಿಕಾರಿಯವರನ್ನು ಗೌರವಿಸಿದರು. ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಲಯದ ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರು ತಮ್ಮ…

Read More