Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 812 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 5 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 383, ಕುಂದಾಪುರ, ಬೈಂದೂರು ತಾಲೂಕಿನ 211, ಕಾರ್ಕಳ, ಹೆಬ್ರಿ ತಾಲೂಕಿನ 206 ಮಂದಿಗೆ ಹಾಗೂ ಹೊರ ಜಿಲ್ಲೆಯ 12 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 812 ಪ್ರಕರಣಗಳಲ್ಲಿ 23 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 789 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 77 ವರ್ಷದ ವೃದ್ಧ, 67 ವರ್ಷದ ವೃದ್ಧ, 63 ವರ್ಷದ ವೃದ್ಧ, 66 ವರ್ಷದ ವೃದ್ಧೆ, ಕಾರ್ಕಳದ 70 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 914 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6335 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2405 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್ 19 ಎರಡನೇ ಅಲೆಯಿಂದ ರಾಜ್ಯಾದ್ಯಂತ ಜನ ತತ್ತರಿಸಿ ಹೋಗಿದ್ದಾರೆ. ಸೊಂಕು ಪೀಡಿತರಿಗೆ ವೈದ್ಯಕೀಯ ಸೌಲಭ್ಯಗಳು, ವೆಂಟಿಲೇಟರ್ ಬೆಡ್, ಆಕ್ಸಿಜನ್ ಮತ್ತು ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಪ್ರತಿ ದಿನ ಸಾವಿರಕ್ಕೂ ಹೆಚ್ಚು ಸೋಂಕು ಪೀಡಿತರ ಪ್ರಕರಣಗಳು ದಾಖಲಾಗಿ ಮರಣ ಪ್ರಮಾಣದಲ್ಲೂ ಹೆಚ್ಚಳವಾಗುತ್ತಿದೆ. ಒಂದನೇ ಅಲೆಯಲ್ಲಿ ಇದ್ದಂತ ಹೋಮ್ ಕ್ವಾರಂಟೈನ್ , ಕಂಟೈನ್ಮೆಂಟ್ ಝೋನ್ ನಿರ್ಮಾಣ ಮುಂತಾದ ಕಠಿಣ ಪ್ರಕ್ರಿಯೆಗಳು ಈಗ ಕಾಣೆಯಾಗಿದ್ದು ಪರಿಸ್ಥಿತಿ ನಿರ್ವಹಿಸುವಲ್ಲಿ ಸರಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಈಗಾಗಲೇ ವೆಂಟಿಲೇಟರ್ ಬೆಡ್ ಗಳಿಗೆ ಜನರು ಪರದಾಡುತ್ತಿದ್ದಾರೆ. ಹಳ್ಳಿಗಳಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಸೋಂಕು ಪೀಡಿತರಿಗೆ ಮನೆಯಲ್ಲಿಯೇ ಹೊಂ ಐಸೋಲೇಷನ್ ಪಡೆಯಲು ವ್ಯವಸ್ಥೆ ಮಾಡಿರುವುದರಿಂದ ಕೆಲವು ಸೋಂಕಿತರು ರಾಜಾರೋಷವಾಗಿ ತಿರುಗಾಡಿ, ಮನೆಮಂದಿಯ ಜೊತೆಗೆ ಅಕ್ಕಪಕ್ಕದ ಮನೆಯವರಿಗೂ ಸೋಂಕು ಹರಡಿಸುತ್ತಿರುವುದು ಸೋಂಕಿತರ ಪ್ರಮಾಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ, ಸರ್ಕಾರದ ನಿರ್ದೇಶನದಂತೆ ಕೋವಿಡ್ -19ರ ಪ್ರಕರಣಗಳನ್ನು ತಡೆಗಟ್ಟುವುದು, ಪರೀಕ್ಷೆ, ಕ್ವಾರಂಟೈನ್, ನಿಯಂತ್ರಣ, ಚಿಕಿತ್ಸೆ, ಹಾಗೂ ಲಸಿಕಾಕರಣಗಳನ್ನು ಪರಿಣಾಮಕಾರಿಯಾಗಿ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವಾರು ಕೋವಿಡ್ ಕಾರ್ಯಪಡೆಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಹೋಮ್ ಐಸೋಲೇಷನ್ ನಲ್ಲಿರುವ ವ್ಯಕ್ತಿಗಳ ಮನೆಗಳನ್ನು ಭೇಟಿ ಮಾಡಿ, ಹೋಮ್ ಐಸೋಲೇಷನ್ ನ್ನು ಕಡ್ಡಾಯವಾಗಿ ಪಾಲಿಸುತ್ತಿರುವ ಬಗ್ಗೆ, ಪ್ರತ್ಯೇಕ ಕೊಠಡಿ, ಪ್ರತ್ಯೇಕ ಶೌಚಾಲಯ ಹೊಂದಿರುವ ಬಗ್ಗೆ, ಆರೋಗ್ಯದ ಏರುಪೇರುಗಳ ಬಗ್ಗೆ, ಅಗತ್ಯವಿದ್ದಲ್ಲಿ ಸ್ಥಳೀಯವಾಗಿ ವೈದ್ಯಾಧಿಕಾರಿಗಳ ಮೂಲಕ ಔಷಧೋಪಚಾರ ನೀಡುವ, ತಾಲೂಕು ಕೋವಿಡ್ ಕೇರ್ ಸೆಂಟರ್ ಗೆ ಆಥವಾ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕ್ರಮಗಳನ್ನು ಹಾಗೂ ಕೋವಿಡ್ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಪ್ರತ್ಯೇಕ ಕೊಠಡಿಯನ್ನು ಹೊಂದಿಲ್ಲದೇ ಇರುವ ಹಾಗೂ ಪ್ರತ್ಯೇಕ ಶೌಚಾಲಯ ಹೊಂದದೇ ಇರುವ ವ್ಯಕ್ತಿಗಳನ್ನು , ಕಾರ್ಯಪಡೆಯ ಸಹಕಾರದಲ್ಲಿ ಕಡ್ಡಾಯವಾಗಿ ಕೋವಿಡ್ ಕೇರ್ಸೆಂ ಟರ್ ಗೆ ಸ್ಥಳಾಂತರಗೊಳ್ಳಲು ಕೋರಲಾಗಿದೆ. ಸದರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19ರ ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರ್ಕಾರದ ಆದೇಶದಂತೆ ಈ ಕೆಳಕಂಡ ಸೇರ್ಪಡೆ ಮಾಡಿ , ಜಿಲ್ಲಾಧಿಕಾರಿ ಜಿ .ಜಗದೀಶ್ ಆದೇಶಿಸಿದ್ದಾರೆ. ಕೈಗಾರಿಕೆಗಳು / ಕೈಗಾರಿಕಾ ಸ್ಥಾಪನೆ / ಉತ್ಪಾದನಾ ಘಟಕಗಳ ಕಾರ್ಯಾಚರಣೆಗೆ ಸಂಬಂಧಿಸಿ 11 ನೇ ಷರತ್ತಿಗೆ ಉಪ-ಷರತ್ತುಗಳನ್ನು (ಎಫ್) ಮತ್ತು (ಜಿ) ಸೇರಿಸಲಾಗಿದೆ. ಉಪ-ಷರತ್ತು (ಎಫ್) ಉಕ್ಕಿನ ಉದ್ಯಮದ ನಿರಂತರ ಕಾರ್ಯಾಚರಣೆಗೆ ಅಗತ್ಯವಾದ ಡೊಲೊಮೈಟ್, ಸ್ಫಟಿಕ ಶಿಲೆ ಮತ್ತು ಕಚ್ಚಾ ವಸ್ತುಗಳ ((Dolomite, Quartz and other fluxes)) ಗಣಿಗಾರಿಕೆ ಮತ್ತು ಸಾಗಣೆಗೆ ಅನುಮತಿಸಲಾಗಿದೆ. ಉಪ-ಷರತ್ತು (ಜಿ) ರಸ್ತೆ ಕಾಮಗಾರಿ , ಮಾನ್ಸೂನ್ ಪೂರ್ವದ ಕೆಲಸಗಳು ಮತ್ತು ಕೊರೆತದಿಂದ ಉಂಟಾದ ಹಾನಿಯ ಮರುನಿರ್ಮಾಣ ಕಾಮಗಾರಿಗಳಿಗೆ ಅವಶ್ಯವಿರುವ ನಿರ್ಮಾಣ ಸಾಮಗ್ರಿಗಳಿಗೆ ಸಂಬಂಧಿಸಿದ ಕ್ವಾರಿಗಳ (quarries)ಗಣಿಗಾರಿಕೆ ಅನುಮತಿಸಲಾಗಿದೆ. ನಿರ್ಮಾಣ ಚಟುವಟಿಕೆಗಳಿಗೆ ಸಂಬಂಧಿಸಿದ 12 ನೇ ಷರತ್ತುಗೆ ಈ ಕೆಳಕಂಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಬುಧವಾರ 863 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 320, ಕುಂದಾಪುರ, ಬೈಂದೂರು ತಾಲೂಕಿನ 333, ಕಾರ್ಕಳ, ಹೆಬ್ರಿ ತಾಲೂಕಿನ 201 ಮಂದಿಗೆ ಹಾಗೂ ಹೊರ ಜಿಲ್ಲೆಯ 9 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 863 ಪ್ರಕರಣಗಳಲ್ಲಿ 26 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 837 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 77 ವರ್ಷದ ವೃದ್ಧೆ, 86 ವರ್ಷದ ವೃದ್ಧ, 50 ವರ್ಷದ ಪುರುಷ, ಕುಂದಾಪುರದ 60 ವರ್ಷದ ವೃದ್ಧ, 75 ವರ್ಷದ ವೃದ್ಧೆ, ಕಾರ್ಯಳದ 65 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 913 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6442 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2229 ಮಂದಿಗೆ ಕೋವಿಡ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾದ್ಯಂತ ರಾಷ್ಟ್ರೀಯ ಹೆದ್ದಾರಿ, ಪ್ರಮುಖ ರಸ್ತೆಯ ಬದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು, ಕೆಲ ಹೋಟೆಲ್ ಹಾಗೂ ಅಂಗಡಿಯವರು ಕಸ/ಕಡ್ಡಿ ತ್ಯಾಜ್ಯ ಎಸೆಯುತ್ತಿದ್ದು ಇದನ್ನು ತಡೆಗಟ್ಟಲು ಹಾಗೂ ಕಸವನ್ನು ಎಸೆಯುವರ ವಿರುದ್ದ ಕ್ರಮವಹಿಸಲು ಸ್ಥಳೀಯ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ. ಪ್ರಸ್ತುತ ಕೊರೋನಾ ಸೋಂಕು ಜಿಲ್ಲೆಯಲ್ಲಿ ಹರಡುತ್ತಿದ್ದು ಈ ಸಮಯದಲ್ಲೂ ಸಾರ್ವಜನಿಕರು ವಾಹನದಲ್ಲಿ ಬಂದು ಕಸವನ್ನು ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ಎಸೆಯುತ್ತಿರುವುದು ಗಮನಕ್ಕೆ ಬಂದಿದ್ದು ತ್ಯಾಜ್ಯ ವಸ್ತುಗಳನ್ನು ಎಸೆಯುವ ವಾಹನಗಳನ್ನು ಮುಟ್ಟುಗೋಲು (ಸೀಜ್) ಹಾಕಿ ಆ ವಾಹನಗಳನ್ನು ಕೋವಿಡ್ ಸಾಂಕ್ರಾಮಿಕ ರೋಗ ಮುಗಿಯುವ ತನಕ ಕಸ ಸಾಗಾಣಿಕೆಗೆ ಬಳಸಲು ಕ್ರಮ ವಹಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯ ಸರಕಾರ ಕೊರೋನಾ ಸಂಕಷ್ಟದಲ್ಲಿರುವವರಿಗೆ 1,250 ಕೋಟಿ ಮೊತ್ತದ ಪ್ಯಾಕೇಜ್ ಘೋಷಣೆ ಮಾಡಿದೆ. ಸಾಲ ಮರುಪಾವತಿದಾರರಿಗೂ ಬಿಗ್ ರಿಲೀಫ್ ದೊರೆತಿದೆ. ಸಹಕಾರಿ ಸಂಘಗಳಲ್ಲಿ ಸಾಲ ಪಡೆದ ರೈತರು ಹಾಗೂ ಸ್ವಸಹಾಯ ಸಂಘಗಳಿಗೆ ಸಾಲದ ಕಂತುಗಳ ಮರುಪಾವತಿ ಮಾಡಲು ಮೂರು ತಿಂಗಳ ವಿನಾಯಿತಿ ನೀಡಲಾಗಿದೆ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.  ಜುಲೈ ಅಂತ್ಯದ ವರೆಗೆ ಸಾಲದ ಕಂತುಗಳನ್ನು ಮರುಪಾವತಿ ಮಾಡುವಂತಿಲ್ಲ. ಇದರಿಂದ 4.25 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ಸುಮಾರು 135 ಕೋಟಿ ರೂ. ವೆಚ್ಚವಾಗಲಿದೆ ಎಂದು ಅವರು ತಿಳಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಸಾಲದ ಕಂತುಗಳು ಇದರಲ್ಲಿ ಅನ್ವಯವಾಗುವುದಿಲ್ಲ. ಅಲ್ಲದೇ ರಾಷ್ಟ್ರೀಕೃತ ಬ್ಯಾಂಕುಗಳ ಸಾಲದ ಕುರಿತು ಆರ್.ಬಿ.ಐ ನಿರ್ಧಾರ ಮಾಡಲಿದೆ ಎಂದು ಸಿಎಂ ತಿಳಿಸಿದ್ದಾರೆ. 1, 250 ಕೋಟಿ ಪ್ಯಾಕೇಜ್ ಘೋಷಣೆ: 1, 250 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ ಸಿಎಂ ಬಿ. ಎಸ್. ಯಡಿಯೂರಪ್ಪ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ…

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ. ಕುಂದಾಪುರ: ಜಿಲ್ಲೆಯಲ್ಲಿ ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕಿದೆ. ಕುಂದಾಪುರದಲ್ಲಿಯೂ ಉಪವಿಭಾಗಾಧಿಕಾರಿ ರಾಜು ಕೆ, ಡಿವೈಎಸ್ಪಿ ಶ್ರೀಕಾಂತ್ ಅವರ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸಲಾಗಿದ್ದು ಸಕಾರಣವಿಲ್ಲದೇ ಬೇರೆ ಗ್ರಾಮಗಳಿಂದ ನಗರಕ್ಕೆ ಬಂದವರ ಬೈಕ್, ಕಾರುಗಳನ್ನು ಜಪ್ತಿ ಮಾಡಲಾಗಿದೆ. ಮಂಗಳವಾರ ಪ್ರಧಾನಿ ಜೊತೆಗೆ ಜಿಲ್ಲಾಧಿಕಾರಿಗಳ ಸಭೆ ನಡೆದ ಬಳಿಕ ಉಡುಪಿ ಜಿಲ್ಲಾಧಿಕಾರಿಗಳು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿ ಅನಗತ್ಯ ಸಂಚಾರಕ್ಕೆ ಬ್ರೇಕ್ ಹಾಕುವಂತೆ ತಿಳಿಸಿದ್ದರು. ಅದರಂತೆ ಪೊಲೀಸರು ಪ್ರಕಟಣೆ ಹೊರಡಿಸಿದ್ದು ಅಗತ್ಯ ವಸ್ತುಗಳನ್ನು ಸಮೀಪದ ಅಂಗಡಿಗಳಲ್ಲೇ ಖರೀದಿಸಬೇಕು. ತೀರಾ ಅವಶ್ಯಕತೆ ಇದ್ದರಷ್ಟೇ ಪೇಟೆಗೆ ಬರಬಹುದು. ಅನಗತ್ಯ ಸಂಚಾರ ಕಂಡುಬಂದರೆ ವಾಹನ ಸೀಜ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದರು. ಜಿಲ್ಲಾ ಕೇಂದ್ರದಲ್ಲಿ ಸ್ವತಃ ಡಿಸಿ ಜಿ. ಜಗದೀಶ್ ಅವರೇ ಕಾರ್ಯಾಚರಣೆಗೆ ಇಳಿದರು. ಕುಂದಾಪುರದಲ್ಲಿಯೂ ಉಪವಿಭಾಗಾಧಿಕಾರಿ ರಾಜು ಕೆ, ಡಿವೈಎಸ್ಪಿ ಶ್ರೀಕಾಂತ್ ಅವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೇರೂರು ಗ್ರಾಮದ ರಾಗಿಹಕ್ಲು ಕ್ರಾಸ್ ಬಳಿ ಮೆಸ್ಕಾಂ ಗುತ್ತಿಗೆದಾರರು ವಿದ್ಯುತ್ ಮಾರ್ಗ ದುರಸ್ತಿ ಮಾಡುತ್ತಿದ್ದ ವೇಳೆ ರಸ್ತೆಗೆ ಅಡ್ಡವಾಗಿ ಜೋತುಬಿದ್ದ ತಂತಿಗೆ, ಬೈಕ್‌ನಲ್ಲಿ ಬಂದ ವ್ಯಕ್ತಿಯ ಕತ್ತು ಸಿಲುಕಿ ಅವರು ಸ್ಥಳದಲ್ಲೇ ಮೃತರಾದರು. ಹೇರೂರು ಗ್ರಾಮದ ಯರುಕೋಣೆ ಆಲಗದ್ದೆ ನಿವಾಸಿ ಮರತೂರು ಶೇಖರ ಶೆಟ್ಟಿ (68) ಮೃತ ವ್ಯಕ್ತಿ. ಶನಿವಾರ ರಾತ್ರಿ ಬಂದ ಗಾಳಿಮಳೆಯಿಂದ ಮರ ಬಿದ್ದು ಇಲ್ಲಿನ ಎರಡು ಕಂಬಗಳು ತುಂಡಾಗಿದ್ದುವು. ಸೋಮವಾರ ಮೆಸ್ಕಾಂ ಅಧಿಕಾರಿಗಳು ಗುತ್ತಿಗೆದಾರರ ಮೂಲಕ ದುರಸ್ತಿ ಕೆಲಸ ಮಾಡಿಸುತ್ತಿದ್ದಾಗ, ಕೆಲಸಗಾರರು ಸ್ಥಳದಲ್ಲಿ ಮುಂಜಾಗ್ರತಾ ಕ್ರಮ ಅನುಸರಿಸದೆ ನಿರ್ಲಕ್ಷ್ಯ ತೋರಿದ ಕಾರಣ ಒಂದು ತಂತಿ ಜೋತುಬಿತ್ತು. ಅದೇ ವೇಳೆಗೆ ಶೇಖರ ಶೆಟ್ಟಿ ಬಂದಿದ್ದು, ತಂತಿ ಅವರ ಕತ್ತಿಗೆ ಬಡಿದು, ಕತ್ತು ಮುರಿದು, ರಸ್ತೆಗೆ ಬಿದ್ದು ಮೃತರಾದರು. ಮೃತರ ತಮ್ಮ ಜಗನ್ನಾಥ ಶೆಟ್ಟಿ ಸಲ್ಲಿಸಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರಿಗೆ ಪತ್ನಿ, ವಿವಾಹಿತರಾದ ಮಗ ಮತ್ತು ಮೂವರು ಪುತ್ರಿಯರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರನ್ನು ರಾಜ್ಯ ಸರಕಾರ ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಎಂಬುದಾಗಿ ಘೋಷಿಸಿದ್ದು ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಂದಾಪುರ ತಾಲೂಕು ಸಂಘದ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಎರಡನೇ ಹಂತದಲ್ಲಿ ಜಿಲ್ಲೆಯ ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರಿಗೆ ಕೋವಿಶೀಲ್ಡ್ ಮೊದಲ ಡೋಸನ್ನು ನೀಡುವ ಕಾರ್ಯಕ್ರಮ ಕುಂದಾಪುರದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಮಾತನಾಡಿ, ಕೋವಿಡ್ ನಿಯಂತ್ರಣದ ವಿಚಾರದಲ್ಲಿ ಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಪಾತ್ರವೂ ಮಹತ್ತರವಾಗಿದೆ. ಸರ್ಕಾರ ಪತ್ರಕರ್ತರನ್ನು ದೃಶ್ಯ ಮಾಧ್ಯಮದ ಪ್ರತಿನಿಧಿಗಳನ್ನು ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಿದೆ. ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ ಲಸಿಕೆಯನ್ನು ನೀಡಲಾಗುತ್ತಿದೆ ಎಂದರು. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ, ಸಂಘದ ಪದಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು…

Read More