Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯ ಸರಕಾರ ಕೊರೋನಾ ಸಂಕಷ್ಟದಲ್ಲಿರುವವರಿಗೆ 1,250 ಕೋಟಿ ಮೊತ್ತದ ಪ್ಯಾಕೇಜ್ ಘೋಷಣೆ ಮಾಡಿದೆ. ಸಾಲ ಮರುಪಾವತಿದಾರರಿಗೂ ಬಿಗ್ ರಿಲೀಫ್ ದೊರೆತಿದೆ. ಸಹಕಾರಿ ಸಂಘಗಳಲ್ಲಿ ಸಾಲ ಪಡೆದ ರೈತರು ಹಾಗೂ ಸ್ವಸಹಾಯ ಸಂಘಗಳಿಗೆ ಸಾಲದ ಕಂತುಗಳ ಮರುಪಾವತಿ ಮಾಡಲು ಮೂರು ತಿಂಗಳ ವಿನಾಯಿತಿ ನೀಡಲಾಗಿದೆ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.  ಜುಲೈ ಅಂತ್ಯದ ವರೆಗೆ ಸಾಲದ ಕಂತುಗಳನ್ನು ಮರುಪಾವತಿ ಮಾಡುವಂತಿಲ್ಲ. ಇದರಿಂದ 4.25 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ಸುಮಾರು 135 ಕೋಟಿ ರೂ. ವೆಚ್ಚವಾಗಲಿದೆ ಎಂದು ಅವರು ತಿಳಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಸಾಲದ ಕಂತುಗಳು ಇದರಲ್ಲಿ ಅನ್ವಯವಾಗುವುದಿಲ್ಲ. ಅಲ್ಲದೇ ರಾಷ್ಟ್ರೀಕೃತ ಬ್ಯಾಂಕುಗಳ ಸಾಲದ ಕುರಿತು ಆರ್.ಬಿ.ಐ ನಿರ್ಧಾರ ಮಾಡಲಿದೆ ಎಂದು ಸಿಎಂ ತಿಳಿಸಿದ್ದಾರೆ. 1, 250 ಕೋಟಿ ಪ್ಯಾಕೇಜ್ ಘೋಷಣೆ: 1, 250 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ ಸಿಎಂ ಬಿ. ಎಸ್. ಯಡಿಯೂರಪ್ಪ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ…

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ. ಕುಂದಾಪುರ: ಜಿಲ್ಲೆಯಲ್ಲಿ ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕಿದೆ. ಕುಂದಾಪುರದಲ್ಲಿಯೂ ಉಪವಿಭಾಗಾಧಿಕಾರಿ ರಾಜು ಕೆ, ಡಿವೈಎಸ್ಪಿ ಶ್ರೀಕಾಂತ್ ಅವರ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸಲಾಗಿದ್ದು ಸಕಾರಣವಿಲ್ಲದೇ ಬೇರೆ ಗ್ರಾಮಗಳಿಂದ ನಗರಕ್ಕೆ ಬಂದವರ ಬೈಕ್, ಕಾರುಗಳನ್ನು ಜಪ್ತಿ ಮಾಡಲಾಗಿದೆ. ಮಂಗಳವಾರ ಪ್ರಧಾನಿ ಜೊತೆಗೆ ಜಿಲ್ಲಾಧಿಕಾರಿಗಳ ಸಭೆ ನಡೆದ ಬಳಿಕ ಉಡುಪಿ ಜಿಲ್ಲಾಧಿಕಾರಿಗಳು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿ ಅನಗತ್ಯ ಸಂಚಾರಕ್ಕೆ ಬ್ರೇಕ್ ಹಾಕುವಂತೆ ತಿಳಿಸಿದ್ದರು. ಅದರಂತೆ ಪೊಲೀಸರು ಪ್ರಕಟಣೆ ಹೊರಡಿಸಿದ್ದು ಅಗತ್ಯ ವಸ್ತುಗಳನ್ನು ಸಮೀಪದ ಅಂಗಡಿಗಳಲ್ಲೇ ಖರೀದಿಸಬೇಕು. ತೀರಾ ಅವಶ್ಯಕತೆ ಇದ್ದರಷ್ಟೇ ಪೇಟೆಗೆ ಬರಬಹುದು. ಅನಗತ್ಯ ಸಂಚಾರ ಕಂಡುಬಂದರೆ ವಾಹನ ಸೀಜ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದರು. ಜಿಲ್ಲಾ ಕೇಂದ್ರದಲ್ಲಿ ಸ್ವತಃ ಡಿಸಿ ಜಿ. ಜಗದೀಶ್ ಅವರೇ ಕಾರ್ಯಾಚರಣೆಗೆ ಇಳಿದರು. ಕುಂದಾಪುರದಲ್ಲಿಯೂ ಉಪವಿಭಾಗಾಧಿಕಾರಿ ರಾಜು ಕೆ, ಡಿವೈಎಸ್ಪಿ ಶ್ರೀಕಾಂತ್ ಅವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೇರೂರು ಗ್ರಾಮದ ರಾಗಿಹಕ್ಲು ಕ್ರಾಸ್ ಬಳಿ ಮೆಸ್ಕಾಂ ಗುತ್ತಿಗೆದಾರರು ವಿದ್ಯುತ್ ಮಾರ್ಗ ದುರಸ್ತಿ ಮಾಡುತ್ತಿದ್ದ ವೇಳೆ ರಸ್ತೆಗೆ ಅಡ್ಡವಾಗಿ ಜೋತುಬಿದ್ದ ತಂತಿಗೆ, ಬೈಕ್‌ನಲ್ಲಿ ಬಂದ ವ್ಯಕ್ತಿಯ ಕತ್ತು ಸಿಲುಕಿ ಅವರು ಸ್ಥಳದಲ್ಲೇ ಮೃತರಾದರು. ಹೇರೂರು ಗ್ರಾಮದ ಯರುಕೋಣೆ ಆಲಗದ್ದೆ ನಿವಾಸಿ ಮರತೂರು ಶೇಖರ ಶೆಟ್ಟಿ (68) ಮೃತ ವ್ಯಕ್ತಿ. ಶನಿವಾರ ರಾತ್ರಿ ಬಂದ ಗಾಳಿಮಳೆಯಿಂದ ಮರ ಬಿದ್ದು ಇಲ್ಲಿನ ಎರಡು ಕಂಬಗಳು ತುಂಡಾಗಿದ್ದುವು. ಸೋಮವಾರ ಮೆಸ್ಕಾಂ ಅಧಿಕಾರಿಗಳು ಗುತ್ತಿಗೆದಾರರ ಮೂಲಕ ದುರಸ್ತಿ ಕೆಲಸ ಮಾಡಿಸುತ್ತಿದ್ದಾಗ, ಕೆಲಸಗಾರರು ಸ್ಥಳದಲ್ಲಿ ಮುಂಜಾಗ್ರತಾ ಕ್ರಮ ಅನುಸರಿಸದೆ ನಿರ್ಲಕ್ಷ್ಯ ತೋರಿದ ಕಾರಣ ಒಂದು ತಂತಿ ಜೋತುಬಿತ್ತು. ಅದೇ ವೇಳೆಗೆ ಶೇಖರ ಶೆಟ್ಟಿ ಬಂದಿದ್ದು, ತಂತಿ ಅವರ ಕತ್ತಿಗೆ ಬಡಿದು, ಕತ್ತು ಮುರಿದು, ರಸ್ತೆಗೆ ಬಿದ್ದು ಮೃತರಾದರು. ಮೃತರ ತಮ್ಮ ಜಗನ್ನಾಥ ಶೆಟ್ಟಿ ಸಲ್ಲಿಸಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರಿಗೆ ಪತ್ನಿ, ವಿವಾಹಿತರಾದ ಮಗ ಮತ್ತು ಮೂವರು ಪುತ್ರಿಯರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರನ್ನು ರಾಜ್ಯ ಸರಕಾರ ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಎಂಬುದಾಗಿ ಘೋಷಿಸಿದ್ದು ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಂದಾಪುರ ತಾಲೂಕು ಸಂಘದ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಎರಡನೇ ಹಂತದಲ್ಲಿ ಜಿಲ್ಲೆಯ ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರಿಗೆ ಕೋವಿಶೀಲ್ಡ್ ಮೊದಲ ಡೋಸನ್ನು ನೀಡುವ ಕಾರ್ಯಕ್ರಮ ಕುಂದಾಪುರದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಮಾತನಾಡಿ, ಕೋವಿಡ್ ನಿಯಂತ್ರಣದ ವಿಚಾರದಲ್ಲಿ ಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಪಾತ್ರವೂ ಮಹತ್ತರವಾಗಿದೆ. ಸರ್ಕಾರ ಪತ್ರಕರ್ತರನ್ನು ದೃಶ್ಯ ಮಾಧ್ಯಮದ ಪ್ರತಿನಿಧಿಗಳನ್ನು ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಿದೆ. ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ ಲಸಿಕೆಯನ್ನು ನೀಡಲಾಗುತ್ತಿದೆ ಎಂದರು. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ, ಸಂಘದ ಪದಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತಾಪಂ ಕಚೇರಿಯ ವಾಹನ ಚಾಲಕ, ಭಂಡಾರ್ಕಾರ್ಸ್ ಕಾಲೇಜಿನ ಹಿಂಬದಿ ನಿವಾಸಿ ಡೆನ್ನಿಸ್ ಡಿಸೋಜ(52) ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ -19 ಹರಡುತ್ತಿರುವ ಹಿನ್ನೆಲೆಯಲ್ಲಿ ಎನ್.ಎಫ್.ಎಸ್.ಎ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರಧಾನ್ಯವನ್ನು ಪ್ರಸಕ್ತ ಸಾಲಿನ ಮೇ ಮತ್ತು ಜೂನ್ ತಿಂಗಳಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ವಿತರಿಸುವ ಪ್ರಮಾಣದ ವಿವರ ಹೀಗಿದೆ. ಜಿಲ್ಲೆಯಲ್ಲಿರುವ ಅಂತ್ಯೋದಯ (ಎ.ಎ.ವೈ) ಯೋಜನೆಯ 28,422 ಪಡಿತರ ಚೀಟಿದಾರರಿಗೆ ಉಚಿತವಾಗಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಪ್ರತಿ ಸದಸ್ಯರಿಗೆ ವಿತರಿಸಲಾಗುತ್ತದೆ. ಆದ್ಯತಾ (ಬಿ.ಪಿ.ಎಲ್) ಯೋಜನೆಯ 1,64,636 ಪಡಿತರ ಚೀಟಿದಾರರಿಗೆ ಉಚಿತವಾಗಿ ಪ್ರತಿ ಯುನಿಟ್ಗೆ 5 ಕೆ.ಜಿ. ಅಕ್ಕಿ ಮತ್ತು ಪ್ರತಿ ಆದ್ಯತಾ ಕಾರ್ಡಿಗೆ 2 ಕೆ.ಜಿ ಗೋಧಿ ಜೊತೆಗೆ, ಪ್ರತಿ ಸದಸ್ಯರಿಗೆ ಹೆಚ್ಚುವರಿಯಾಗಿ 5 ಕೆ.ಜಿ ವಿತರಿಸಲಾಗುವುದು. ಎ.ಪಿ.ಎಲ್ ಯೋಜನೆಯ 28,323 ಪಡಿತರ ಚೀಟಿದಾರರಿಗೆ ಪ್ರತಿ ಕೆ.ಜಿ ಗೆ 15 ರೂ. ನಂತೆ ಏಕ ಸದಸ್ಯ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಮೇ.18: ಸಾರ್ವಜನಿಕರು ದಿನನಿತ್ಯದ ಅಗತ್ಯ ದಿನಸಿ ವಸ್ತುಗಳು, ತರಕಾರಿ, ಮತ್ತು ಮೀನುಗಳನ್ನು ತಮ್ಮ ಮನೆಯ ಸಮೀಪದ ಅಂಗಡಿಗಳಲ್ಲಿ ಖರೀದಿಸಬೇಕು. ಮೇ.19ರಿಂದ ಅನಗತ್ಯವಾಗಿ ವಾಹನಗಳಲ್ಲಿ ಬಂದು ವಸ್ತುಗಳನ್ನು ಖರೀದಿಸಿದರೆ ವಾಹನಗಳನ್ನು ಸೀಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ತಿಳಿಸಿದ್ದು, ಈ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಕುಂದಾಪುರ ಪೊಲೀಸರು ಈಗಾಗಲೇ ಪ್ರಕಟಣೆ ಹೊರಡಿಸಿದ್ದು, ದಿನಸಿ ಖರೀದಿಗೆ ವಾಹನಗಳ ಮೂಲಕ ತಲ್ಲೂರು, ಕೋಟೇಶ್ವರ ಹಾಗೂ ಇತರೆ ಗ್ರಾಮದವರು ಕುಂದಾಪುರ ನಗರಕ್ಕೆ ಬರುವಂತಿಲ್ಲ. ಸ್ಥಳೀಯ ಅಂಗಡಿಯಲ್ಲಿಯೇ ಅಗತ್ಯ ವಸ್ತು ಖರೀದಿಸಿ. ಅನಗತ್ಯವಾಗಿ ವಾಹನದಲ್ಲಿ ಬಂದರೆ ವಾಹನ ಸೀಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 737 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 380, ಕುಂದಾಪುರ, ಬೈಂದೂರು ತಾಲೂಕಿನ 294, ಕಾರ್ಕಳ, ಹೆಬ್ರಿ ತಾಲೂಕಿನ 59 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 737 ಪ್ರಕರಣಗಳಲ್ಲಿ 43 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 694 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 69 ವರ್ಷದ ವೃದ್ಧ, 32 ವರ್ಷದ ಪುರುಷ, ಕುಂದಾಪುರದ 67 ವರ್ಷದ ವೃದ್ಧೆ, 45 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 1095 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6498 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2825 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತೌಕ್ತೆ ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಸಾಕಷ್ಟು ಹಾನಿಯಾಗಿದ್ದು ನೆರೆಯಿಂದ ನೀರು ನುಗ್ಗಿದ ಮನೆಗಳಿಗೆ 10 ಸಾವಿರ, ಭಾಗಶಃ ಹಾನಿಯಾದ ಮನೆಗಳಿಗೆ 1 ಲಕ್ಷ ರೂ. ಪೂರ್ಣ ಹಾನಿಯಾದ ಮನೆಗಳಿಗೆ ಮೊದಲ ಕಂತಿನಲ್ಲಿ 1 ಲಕ್ಷ ರೂ. ತಕ್ಷಣ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಅವರು ಮರವಂತೆ ಹೊರಬಂದರು ಸಮೀಪ ಕಡಲ್ಕೊರೆತದಿಂದ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿ ಮರವಂತೆಯಲ್ಲಿ ಸಮುದ್ರದಲೆಯ ಅಬ್ಬರಕ್ಕೆ ಸಾಕಷ್ಟು ಹಾನಿಯಾಗಿದೆ. ಹೊಸತಾಗಿ ನಿರ್ಮಿಸಿದ ರಸ್ತೆ ಸಾಕಷ್ಟು ಹಾನಿಯಾಗಿದೆ. ಬೈಂದೂರು ತಾಲೂಕಿನಲ್ಲಿ 106ಕ್ಕೂ ಹೆಚ್ಚು ಮನೆಗಳು, ಸಾರ್ವಜನಿಕ ಕಟ್ಟಡ, ರಸ್ತೆ, ಬೆಳೆ ಹಾನಿಯಾಗಿದೆ. ಹಾನಿಗೊಳಗಾದ ಮನೆ ಹಾಗೂ ಇನ್ನಿತರ ಪ್ರದೇಶಗಳ ವರದಿಯನ್ನು ತಕ್ಷಣ ನೀಡುವಂತೆ ಆಯಾ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವಿಪತ್ತು ಪರಿಹಾರ ನಿಧಿಯ ಹಣವನ್ನು ಬಳಸಿಕೊಂಡು ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಇದನ್ನೂ ಓದಿ► ಮರವಂತೆಯಲ್ಲಿ ಸ್ಥಳೀಯರ ಅಹವಾಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಹೊರಬಂದರು ಸಮೀಪ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿದ ಕಂದಾಯ ಸಚಿವ ಆರ್. ಅಶೋಕ್ ಅವರು ಸ್ಥಳೀಯ ಮೀನುಗಾರರ ಅಹವಾಲು ಕೇಳದೆ ತೆರಳಿದ್ದರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹಾನಿಗೀಡಾದ ಪ್ರದೇಶದ ವೀಕ್ಷಣೆಗೆ ಬರುವ ಸಚಿವರು ಘಟನೆಯ ವಾಸ್ತವಾಂಶ ಅರಿಯುವ ಬದಲಿಗೆ ಕಾಟಾಚಾರಕ್ಕೆ ಭೇಟಿ ನೀಡಿ ಹೋಗಿದ್ದಾರೆ. ತೌಕ್ತೆ ಚಂಡಮಾರುತದಿಂದ ಉಂಟಾದ ಕಡಲ್ಕೊರೆತ ಬೈಂದೂರು ಕ್ಷೇತ್ರದ ಮರವಂತೆಯಲ್ಲಿ ಅತಿ ಹೆಚ್ಚಿನ ಹಾನಿ ಉಂಟುಮಾಡಿದೆ. ಮನೆ, ಶೆಡ್, ರಸ್ತೆ‌ ಎಲ್ಲವೂ ಹಾನಿಯಾಗಿದೆ. ಭೂಪ್ರದೇಶಗಳನ್ನು ಕಳೆದುಕೊಂಡಿದ್ದಾರೆ. ಯಾರಿಗೂ ಸ್ಥಳೀಯರೊಂದಿಗೆ ಮಾತನಾಡುವ, ಸಮಸ್ಯೆ ಕೇಳುವ ಸೌಜನ್ಯವಿಲ್ಲ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮೀನುಗಾರಿಕಾ ಮುಖಂಡರಾದ ಮೋಹನ್ ಖಾರ್ವಿ, ಶಂಕರ ಖಾರ್ವಿ, ನಾಗ ಖಾರ್ವಿ ಲೋಕೇಶ್ ಖಾರ್ವಿ ಮೊದಲಾದವರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ► ಹಾನಿಗೊಳಗಾದ ಮನೆಗಳಿಗೆ ತಕ್ಷಣ ಪರಿಹಾರ ನೀಡಲು ಸೂಚನೆ: ಸಚಿವ ಆರ್. ಅಶೋಕ್ – https://kundapraa.com/?p=48384 .

Read More