Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 919 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 576, ಕುಂದಾಪುರ, ಬೈಂದೂರು ತಾಲೂಕಿನ 257, ಕಾರ್ಕಳ, ಹೆಬ್ರಿ ತಾಲೂಕಿನ 83 ಮಂದಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 919 ಪ್ರಕರಣಗಳಲ್ಲಿ 237 ಸಿಂಟಮಿಕ್ ಹಾಗೂ 682 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 13 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 906 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 80 ವರ್ಷದ ವೃದ್ಧ, 75 ವರ್ಷದ ವೃದ್ಧ 88 ವರ್ಷದ ವೃದ್ಧೆ, ಕುಂದಾಪುರದ 77, ವರ್ಷದ ವೃದ್ಧ 68 ವರ್ಷದ ವೃದ್ಧ ಹಾಗೂ 58 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 837 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6952…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಲಸಿಕೆ ನೀಡುವುದರಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದ್ದು ಈ ವಿಚಾರದಲ್ಲಿ ಹಿರಿಯ ನಾಗರಿಕರು ಮತ್ತು 45 ವರ್ಷ ಮೇಲ್ಪಟ್ಟವರು ಆತಂಕಕ್ಕೀಡಾಗಿದ್ದು, ಈ ಕುರಿತು ಸರಕಾರ ಮತ್ತು ಆರೋಗ್ಯ ಇಲಾಖೆ ಜನರಲ್ಲಿ ಇರುವ ಗೊಂದಲ ಮತ್ತು ಆತಂಕ ನಿವಾರಿಸಬೇಕು ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಆಗ್ರಹಿಸಿದ್ಧಾರೆ. ಬಹಳಷ್ಟು ಹಿರಿಯ ನಾಗರಿಕರು ಒಂದು ಡೋಸ್ ಲಸಿಕೆ ತೆಗೆದುಕೊಂಡು 60 ದಿನವಾದರೂ ಇನ್ನೊಂದು ಡೋಸ್ ಲಸಿಕೆ ಲಭ್ಯವಾಗಿಲ್ಲ.ಆರೋಗ್ಯ ಇಲಾಖೆಯ ಪ್ರಕಟಣೆ ಪ್ರಕಾರ ಒಂದು ಡೋಸ್ ಲಸಿಕೆ ಪಡೆದು 4 ವಾರದಲ್ಲಿ 2 ನೇ ಡೋಸ್ ಲಸಿಕೆ ಪಡೆಯಬೆೇಕು.ಈ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರು ಲಾಕ್‌‌ಡೌನ್‌‌‌ ನಡುವೆ ಲಸಿಕಾ ಕೇಂದ್ರಕ್ಕೆ ಅಲೆದಾಡುತಿದ್ದಾರೆ. ಮೊದಲ ಡೋಸ್ ಕೋ ವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಸದ್ಯಕ್ಕೆ ಲಭ್ಯವಿಲ್ಲ ಎಂದು ಲಸಿಕಾ ಕೇಂದ್ರದಲ್ಲಿ ತಿಳಿಸುತ್ತಿದ್ದಾರೆ. ಈ ಬಗ್ಗೆ ಹಿರಿಯ ನಾಗರಿಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ನಿಗದಿತ ಸಮಯಕ್ಕೆ 2 ನೇ ಡೋಸ್ ಲಸಿಕೆ ತೆಗೆದುಕೊಳ್ಳದ ಕಾರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 1084 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 519, ಕುಂದಾಪುರ, ಬೈಂದೂರು ತಾಲೂಕಿನ 388, ಕಾರ್ಕಳ, ಹೆಬ್ರಿ ತಾಲೂಕಿನ 169 ಮಂದಿಗೆ ಹಾಗೂ ಹೊರ ಜಿಲ್ಲೆಯ 8 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 1084 ಪ್ರಕರಣಗಳಲ್ಲಿ 229 ಸಿಂಟಮಿಕ್ ಹಾಗೂ 855 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 18 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 1066 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 48 ವರ್ಷದ ಮಹಿಳೆ ಹಾಗೂ ಕುಂದಾಪುರದ 72 ವರ್ಷದ ವೃದ್ಧ ಹಾಗೂ 67 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 787 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6876 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3094 ಮಂದಿಗೆ ಕೋವಿಡ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾರಾಪತಿ, ಅಳ್ವೆಕೋಡಿ, ಬೆಸ್ಕೂರು, ಸುಬ್ಬರಾಡಿ ಭಾಗದ ಸುಮಾರು 350 ಮನೆಗಳಿಗೆ ಮಳೆಗಾಲ ಆರಂಭದ ತನಕ ಉಚಿತ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ಮಂಗಳವಾರ ಚಾಲನೆ ನೀಡಲಾಯಿತು. ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಮುದ್ರ ತಟದ ಬೆಸ್ಕೂರಿನಿಂದ ತಾರಾಪತಿಯ ತನಕ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಅಗತ್ಯವಿದ್ದು, ಪಂಚಾಯತ್ ಮೂಲಕ ಮಾಡುವ ಕಾರ್ಯವನ್ನು ಟ್ರಸ್ಟ್ ಸ್ವಇಚ್ಛೆಯಿಂದ ಪೂರೈಸುತ್ತಿರುವುದು ನಿಜಕ್ಕೂ ಶ್ಲಾಘನಾರ್ಹ ಕಾರ್ಯವಾಗಿದೆ. ಟ್ರಸ್ಟ್‌ನ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಅವರ ಕಾರ್ಯಕ್ಕೆ ಗ್ರಾಮಸ್ಥರ ಪರವಾಗಿ ಅಭಿನಂದಿಸಲಾಗುವುದು ಎಂದರು. ಈ ಸಂದರ್ಭ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಮಾತನಾಡಿ ಕಳೆದ ಭಾರಿ ಬಿಜೂರು ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾದಾಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರದ ಬೋರ್ಡ್ ಹೈಸ್ಕೂಲ್ನ ಕಲಾಮಂದಿರದಲ್ಲಿ 18 ವರ್ಷ ವಯಸ್ಸಿನ ನಂತರದವರು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡು ಸಂದೇಶ ತಲುಪಿದ ನೂರು ಜನರಿಗೆ ಮೊದಲ ಹಂತದ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಕಮೀಷನರ್ ರಾಜು ಕೆ, ತಾಲೂಕು ಆರೋಗ್ಯ ಅಧಿಕಾರಿ ಡಾ| ನಾಗಭೂಷಣ ಉಡುಪ ಎಚ್., ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಅಂಗ ಸಂಸ್ಥೆಯಾದ ಸೇವಾ ಭಾರತಿ ಪ್ರಮುಖರಾದ ಡಾ. ವಾದಿರಾಜ್ ಭಟ್, ಕಲಾಕ್ಷೇತ್ರ-ಕುಂದಾಪುರ ಸಂಸ್ಥೆಯ ಅಧ್ಯಕ್ಷ ಬಿ. ಕಿಶೋರ್ ಕುಮಾರ್, ರಾಜೇಶ್ ಕಾವೇರಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸದಾಶಿವ ಗವರೋಜಿ, ವೈದ್ಯ ರಾದ ಡಾ. ಶ್ರಾವ್ಯ, ಫಾರ್ಮಸಿ ಅಧಿಕಾರಿ ಬಿ.ಎಮ್ ಚಂದ್ರಶೇಖರ, ಅನ್ನಪೂರ್ಣ ಹಾಗೂ ವೀಣಾ, ರಾಘವೇಂದ್ರ ಭಟ್ ಕೋಟೇಶ್ವರ, ಮುರಳಿಧರ ಜಪ್ತಿ, ಪ್ರಸನ್ನ ಕೋಟೇಶ್ವರ, ಗಣೇಶ್ ಭಟ್ ಕೋಟೇಶ್ವರ, ರತ್ನಾಕರ್ ಶೇರೆಗಾರ್, ಸತ್ಯನಾರಾಯಣ ಮಂಜ ಕೋಟೇಶ್ವರ, ಸುಹಾಸ್ ಕೋಟೇಶ್ವರ, ರಾಮಚಂದ್ರ ಕುಂದಾಪುರ, ರಾಜ ಪೂಜಾರಿ ಉಪಸ್ಥಿತರಿದ್ದರು. ಇವತ್ತು 44 ಜನರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯಾದ್ಯಂತ ಜಾರಿಯಾಗಿರುವ ಲಾಕ್‌ಡೌನ್ ಮೊದಲ ದಿನ ಕುಂದಾಪುರ ಮತ್ತು ಬೈಂದೂರು ತಾಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ತನಕ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿದ್ದರಿಂದ ಜನರು ಕಾಲ್ನಡಿಗೆಯಲ್ಲಿಯೇ ಪೇಟೆಗಳಿಗೆ ತೆರಳಿ ಸಾಮಾಗ್ರಿಗಳನ್ನು ಖರೀದಿಸುತ್ತಿರುವುದು ಕಂಡುಬಂತು. ಆಸ್ಪತ್ರೆ ಮೊದಲಾದ ಅನುಮತಿ ನೀಡಲಾಗಿರುವ ಸೇವೆಗಳಿಗೆ ತೆರಳುವರ ವಾಹನವನ್ನು ಪೊಲೀಸರು ವಿಚಾರಿಸಿ ನಗರದೊಳಕ್ಕೆ ಪ್ರವೇಶ ನೀಡುತ್ತಿದ್ದರು. ನಿಯಮ ಮೀರಿ ಸಂಚರಿಸಿದ ವಾಹನಗಳನ್ನು ಕುಂದಾಪುರದಲ್ಲಿ ಪೊಲೀಸರು ಮುಟ್ಟುಗೋಲು ಹಾಕಿಕೊಂಡರು. ಕುಂದಾಪುರ ನಗರ ಠಾಣೆಯಲ್ಲಿ ಕಳೆದ ಮೂರು ದಿನಗಳಲ್ಲಿ ಕಾರು, ಬೈಕು ಸೇರಿದಂತೆ ಒಟ್ಟು 61 ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ತಾಲೂಕಿನ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಕಠಿಣ ಕ್ರಮಗಳನ್ನು ಅನುಸರಿಸಿ ಅನಗತ್ಯ ಸಂಚಾರಕ್ಕೆ ಬೇಕ್ ಹಾಕಲಾಗಿತ್ತು. ದಿನಸಿ, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಖರೀದಿಸಲು ಬಂದವರು ಪಡಿತರವನ್ನು ಹೊತ್ತುಕೊಂಡೇ ತೆರಳಬೇಕಾದ ಅನಿವಾರ್ಯತೆ ಎದುರಾಯಿತು. ಗ್ರಾಮೀಣ ಭಾಗದ ಜನರು ಕೆಲವೆಡೆ ವಾಹನಗಳಲ್ಲಿ ಕೊಂಡೊಯ್ದರೆ, ಹಲವರು ತಲೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 855 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 452, ಕುಂದಾಪುರ, ಬೈಂದೂರು ತಾಲೂಕಿನ 369, ಕಾರ್ಕಳ, ಹೆಬ್ರಿ ತಾಲೂಕಿನ 30 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 855 ಪ್ರಕರಣಗಳಲ್ಲಿ 227 ಸಿಂಟಮಿಕ್ ಹಾಗೂ 628ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 15 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 840 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 72 ವರ್ಷದ ವೃದ್ಧೆ, 50 ವರ್ಷದ ಪುರುಷ ಹಾಗೂ 73 ವರ್ಷದ ವೃದ್ಧ, ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 642 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6582 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2512 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೈಂದೂರು ಕ್ಷೇತ್ರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ ನಿಯಂತ್ರಣಕ್ಕೆ ತರಲು ಶ್ರಮಿಸಬೇಕಿದೆ. ಒಂದೊಂದು ಜೀವವು ಮುಖ್ಯವಾಗಿದ್ದು, ಕೋವಿಡ್‌ನಿಂದ ಜನ ಸಾಯುವುದನ್ನು ತಪ್ಪಿಸಬೇಕಾದರೆ ಲಾಕ್‌ಡೌನ್ ಬಿಗಿಗೊಳಿಸುವುದು ಅನಿವಾರ್ಯ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅವರು ಹೇಳಿದರು. ಅವರು ಕೊಲ್ಲೂರಿನಲ್ಲಿ ಸೋಮವಾರ ನಡೆದ ಕೋವಿಡ್ ನಿಯಂತ್ರಣಕ್ಕಾಗಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ ಮುಂದಿನ ಎರಡು ವಾರದಲ್ಲಿ ದೇಶದಾದ್ಯಂತ ಕೊರೊನಾ ಕಂಟ್ರೋಲ್ ಆಗುವ ಸಾಧ್ಯತೆಯಿದೆ. ಕೋವಿಡ್ ಎರಡನೆ ಅಲೆ ತೀವೃಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅನಿವಾರ‍್ಯವಾಗಿ ಲಾಕ್‌ಡೌನ್ ಘೋಷಿಸಲಾಗಿದ್ದು, ಜನ ಇದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಲಾಕ್‌ಡೌನ್ ಸಂದರ್ಭದಲ್ಲಿ ಅನಗತ್ಯ ಸಂಚಾರಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ ಅವರು ಅನಗತ್ಯವಾಗಿ ಸಂಚರಿಸುತ್ತಿರುವ ವ್ಯಕ್ತಿಗಳ ವಾಹನಗಳನ್ನು ವಶಪಡಿಸಿಕೊಂಡು ಲಾಕ್‌ಡೌನ್ ಬಳಿಕವೇ ಹಿಂದಿರುಗಿಸಿ, ಈ ಬಗ್ಗೆ ನಾನು, ಶಾಸಕರು ಸೇರಿದಂತೆ ಯಾವುದೇ ಜನಪ್ರತಿನಿಗಳು ಹಸ್ತಕ್ಷೇಪ ಮಾಡುವುದಿಲ್ಲ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಭಾನುವಾರ 962 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 5 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 309, ಕುಂದಾಪುರ, ಬೈಂದೂರು ತಾಲೂಕಿನ 266, ಕಾರ್ಕಳ, ಹೆಬ್ರಿ ತಾಲೂಕಿನ 384 ಮಂದಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 962 ಪ್ರಕರಣಗಳಲ್ಲಿ 201 ಸಿಂಟಮಿಕ್ ಹಾಗೂ 761 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 19 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 943 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 63 ವರ್ಷದ ವೃದ್ಧ, 58 ವರ್ಷದ ಪುರುಷ, 58 ವರ್ಷದ ಪುರುಷ, ಕುಂದಾಪುರದ 66 ವರ್ಷದ ವೃದ್ಧ, 67 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 543 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6372 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಂಡ್ಸೆ, ಸಿದ್ಧಾಪುರ ಹಾಗೂ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶನಿವಾರ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಹೋಂ ಐಸೊಲೇಶನ್ ಹಾಗೂ ಆಸ್ಪತ್ರೆಗೆ ದಾಖಲಾದ ಕೋವಿಡ್ ರೋಗಿಗಳ ಮಾಹಿತಿ ಪಡೆದುಕೊಂಡ ಬಳಿಕ ಮಾತನಾಡಿ, ವೈದ್ಯರು, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಕೋವಿಡ್ ಅಪಾಯ ತಡೆಯಲು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಉನ್ನತ ಅಧಿಕಾರಿಗಳ ಗಮನ ಸೆಳೆಯಲಾಗುವುದು ಎಂದರು. ಈ ಸಂದರ್ಭ ತಾಲೂಕು ವೈದ್ಯಾಧಿಕಾರಿ ನಾಗಭೂಷಣ ಉಡುಪ, ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಸನ್ಮಾನ್ ಶೆಟ್ಟಿ, ಸಿದ್ಧಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ನಿಶಾ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಲತಾ ನಾಯಕ್ ಮೊದಲಾದವರು ಇದ್ದರು.

Read More