ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಕೆಲವು ದಿನಗಳಿಂದ ಕುಂದಾಪುರ ತಾಲೂಕಿನಲ್ಲಿ ಕರೋನಾ ಸೋಂಕು ವ್ಯಾಪಕವಾಗಿ ಹರಡುತಿದ್ದು, ಕಳೆದ ವರ್ಷದಂತೆ ಸೋಂಕು ಹರಡುವಿಕೆ ತಡೆಯುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾದಂತೆ ಕಾಣುತ್ತಿದೆ. ಜನತಾ ಕರ್ಫ್ಯೂ ಕಾರಣದಿಂದ ಬೇರೆಡೆ ವ್ಯವಹಾರ ನಡೆಸುತ್ತಿರುವ ಗ್ರಾಮೀಣ ಪ್ರದೇಶದ ಜನರು ಊರಿಗೆ ಆಗಮಿಸಿದ್ದು ಅವರಿಗೆ ಮನೆಗಳಲ್ಲಿ ಹೋಂ ಐಸೋಲೇಶನ್ಗೆ ಸರಿಯಾದ ವ್ಯವಸ್ಥೆ ಇಲ್ಲದಿರುವುದು ಮತ್ತು ಪ್ರಾಥಮಿಕ ಸಂಪರ್ಕದಲ್ಲಿರುವವರು ಬೇಕಾಬಿಟ್ಟಿ ತಿರುಗಾಡುತ್ತಿರುವುದು ಸೋಂಕು ಹೆಚ್ಚಲು ಕಾರಣವಾಗುತ್ತಿದೆ. ಈ ಬಗ್ಗೆ ತುರ್ತು ಕ್ರಮ ಕೈಗೊಂಡು ಹೋಂ ಐಸೋಲೇಶನ್ಗೆ ಸರಿಯಾದ ವ್ಯವಸ್ಥೆ ಇಲ್ಲದವರಿಗೆ ಮತ್ತು ಆಸ್ಪತ್ರೆಗೆ ಸೇರಬೇಕಾದ ಅಗತ್ಯವಿಲ್ಲದವರಿಗೆ ಶೀಘ್ರವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಬೇಕು ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರ್ಯಾಪಿಡ್ ಟೆಸ್ಟ್ ಕಿಟ್ ಹೆಚ್ಚಿಸುವುದು, ಗ್ರಾಮೀಣ ಪ್ರದೇಶಕ್ಕೆ ಹೆಚ್ಚುವರಿ ಅಂಬುಲೆನ್ಸ್ ಸೇವೆ ಒದಗಿಸುವುದು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೆಚ್ಚುವರಿ ಸಿಬ್ಬಂದಿ ನೇಮಿಸಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕಾರಂತರ ಬದುಕಿನ ಪ್ರತಿ ಹೆಜ್ಜೆಯೂ ಸ್ಪೂರ್ತಿದಾಯಕವಾಗಿದ್ದು, ಅವರ ಬದುಕು-ಬರವಣಿಗೆ ಮುಂದಿನ ಯುವ ಜನಾಂಗಕ್ಕೆ ಪ್ರೇರಣೆಯಾಗಬೇಕು ಆ ನಿಟ್ಟಿನಲ್ಲಿ ಕಾರಂತ ಥೀಮ್ ಪಾರ್ಕ್ ಕಾರಂತರ ಕುರಿತಾದ ಕೆಲಸವನ್ನು ನಿರ್ವಹಿಸುತ್ತಿರುವುದು ಸಂತಸದ ವಿಷಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಅಧ್ಯಕ್ಷ ಕೆರಾಡಿ ಚಂದ್ರಶೇಖರ್ ಶೆಟ್ಟಿ ಹೇಳಿದರು. ಅವರು ಇತ್ತೀಚಿಗೆ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಗ್ರಂಥಾಲಯ, ಅಂಗನವಾಡಿ, ಆರ್ಟ್ ಗ್ಯಾಲರಿ, ವೀಕ್ಷಿಸಿದರು. ಈ ಸಂದರ್ಭದಲ್ಲಿ ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ಶ್ರೀಪ್ರಕಾಶ್ ಹಂದಟ್ಟು, ವಿಕಾಸ ಸೌಧದ ಸಿಬ್ಬಂದಿ ಕೋಟ ಸಂತೋಷ್ ಪೂಜಾರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಂಚಾಯಿತಿ ವ್ಯಾಪ್ತಿಯ ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ. ಕಾಣಿಸಿಕೊಳ್ಳುತ್ತಿರುವ ಕೊರೋನಾ ಪಾಸಿಟಿವ್ ಪ್ರಕರಣಗಳ ಮೇಲೆ ನಿಗಾ ಇರಿಸಲಾಗುತ್ತಿದೆ. ಹೋಮ್ ಐಸೊಲೇಶನ್ ಬಗೆಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಚಿಕಿತ್ಸೆ ಅಗತ್ಯ ಇರುವವರನ್ನು ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಸಾರ್ವಜನಿಕರು ಕೊರೊನಾ ತಡೆ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಹನಾ ಹೇಳಿದರು. ಅವರು ಶಿರೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು. ಶಿರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು, ಮೂರು ಸಾವು ಸಂಭವಿಸಿದೆ. ಜನರು ಇದನ್ನು ಗಂಭೀರವಾಗಿ ಪರಿಗಣಿಸದೆ ನಿಯಮಗಳನ್ನು ಉಲ್ಲಂಘಿಸುತ್ತಿರುವುದರಿಂದ ಎಲ್ಲದರ ನಿಯಂತ್ರಣಕ್ಕೆ ವ್ಯಾಪಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೋಮವಾರ ಮತ್ತು ಮಂಗಳವಾರ ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ನಿರ್ಧರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಿಲ್ಶಾದ್ ಬೇಗಂ ಅಧ್ಯಕ್ಷತೆ ವಹಿಸಿದ್ದರು. ಸ್ವಾಗತಿಸಿದ ಅಭಿವೃದ್ಧಿ ಅಧಿಕಾರಿ ಮಂಜುನಾಥ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಮಗ್ರ ಮಕ್ಕಳರಕ್ಷಣೆ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ ಆಪ್ತಸಮಾಲೋಚನೆಗೆ ಅಗತ್ಯವಿರುವ 0-18 ವರ್ಷದ ಎಲ್ಲಾ ಮಕ್ಕಳಿಗಾಗಿ ಉಚಿತ ಟೆಲಿ ಕೌನ್ಸಿಲಿಂಗ್ ಸೌಲಭ್ಯವನ್ನು ನೀಡಲು ಟೋಲ್ ಪ್ರೀ ಸಂಖ್ಯೆ 14499 ಸ್ಥಾಪಿಸಲಾಗಿದೆ. ಇದು ಸಮಗ್ರ ಮಕ್ಕಳ ರಕ್ಷಣಾಯೋಜನೆಯಡಿ ನಿರ್ಲಕ್ಷತೆಗೆ ಒಳಗಾದ, ಪರಿತ್ಯಜಿಸಲ್ಪಟ, ದೌರ್ಜನ್ಯಕ್ಕೊಳಗಾದ, ಶೋಷಣೆಗೆ ಒಳಗಾದ, ಕುಟುಂಬದಿಂದ ಬೇರ್ಪಟ್ಟ ಮಕ್ಕಳು, ದುರ್ಬಲ ಸ್ಥಿತಿಗೆ ತಲುಪದಿರುವಂತೆ ತಡೆಯಲು ಹಾಗೂ ಇಂತಹ ಪ್ರಕರಣಗಳನ್ನು ಕಡಿಮೆ ಮಾಡಲು ಮತ್ತು ಸಂಕಷ್ಟದಲ್ಲಿರುವ ಮಕ್ಕಳ ಪರಿಸ್ಥಿತಿಯನ್ನು ಉತ್ತಮ ಪಡಿಸುವ ಉದ್ದೇಶವನ್ನು ಹೊಂದಿರುವ ಕೇಂದ್ರ ಪುರಸ್ಕೃತ ಯೋಜನೆಯಾಗಿದೆ. ಕೋವಿಡ್-19 ಎರಡನೇ ಅಲೆ ಅತೀ ಹೆಚ್ಚಾಗಿದ್ದು ಈ ಸಂದರ್ಭದಲ್ಲಿ ಆಪ್ತಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗಾಗಿ ಟೆಲಿಕೌನ್ಸಿಲಿಂಗ್ ಸೌಲಭ್ಯವನ್ನು ನೀಡಲಾಗುವುದು.ಆಪ್ತಸಮಾಲೋಚನೆ ಬಯಸುವ ಉಡುಪಿ ಜಲ್ಲೆಯ ಎಲ್ಲಾ ಮಕ್ಕಳು ಬೆಳಗ್ಗೆ 8 ರಿಂದರಾತ್ರಿ 8 ಗಂಟೆಯವರೆಗೆ 14499 ಸಂಖ್ಯೆಗೆ ಕರೆಮಾಡುವ ಮೂಲಕ ಉಚಿತವಾಗಿ ಆಪ್ತಸಮಾಲೋಚನೆಯ ಸೌಲಭ್ಯವನ್ನು ಪಡೆಯಬಹುದಾಗಿದೆ ಹಾಗೂ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಉಚಿತ ಮಕ್ಕಳ ಸಹಾಯವಾಣಿ ಸಂಖ್ಯೆ;…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆಯ ದಾಸ್ತಾನು ಸಾಕಷ್ಟು ಇಲ್ಲದಿರುವುದರಿಂದ ಪ್ರಥಮ ಡೋಸ್ ಪಡೆದು 8 ವಾರ ಮೀರಿದವರು ಒಟ್ಟು 947 ಅರ್ಹ ಫಲಾನುಭವಿಗಳಿದ್ದು, ಇವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕಾಗಿರುವುದರಿಂದ ಆಶಾಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಯವರು ಸದರಿಯವರಿಗೆ ಕರೆ ಮಾಡಿ ಲಸಿಕೆ ಪಡೆಯಲು ಕ್ರಮವಹಿಸುತ್ತಾರೆ. ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 8 ವಾರ ಮೀರಿದವರು ಆಶಾಕಾರ್ಯಕರ್ತೆಯರಿಗೆ ಕರೆ ಮಾಡಿ 2ನೇ ಡೋಸ್ ಲಸಿಕೆ ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿರುವುದಿಲ್ಲವಾಗಿದ್ದು, ರಾಜ್ಯದಿಂದ ಸರಬರಾಜಾದ ತಕ್ಷಣ ಪ್ರಥಮ ಡೋಸ್ ಪಡೆದು 6 ವಾರ ಮೀರಿದವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವ ಬಗ್ಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಯವರು ಸದರಿಯವರಿಗೆ ಕರೆ ಮಾಡಿ ಲಸಿಕೆ ಪಡೆಯಲು ಕ್ರಮವಹಿಸುತ್ತಾರೆ. ಮುಂದಿನ ದಿನಗಳಲ್ಲಿ ಲಸಿಕೆಯು ಸರಬರಾಜಾದ ತಕ್ಷಣ ಪ್ರಥಮ ಡೋಸ್ ಪಡೆದವರಿಗೆ ಆದ್ಯತೆ ಮೇರೆಗೆ 2ನೇ ಡೋಸ್ ನೀಡಲಾಗುವುದು. ಮತ್ತು ಜಿಲ್ಲೆಗೆ ಸಾಕಷ್ಟು ಲಸಿಕೆ ಬಂದ ತಕ್ಷಣ ಆಶಾಕಾರ್ಯಕರ್ತೆಯರು ಸಾರ್ವಜನಿಕರಿಗೆ ಮಾಹಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 556 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 319, ಕುಂದಾಪುರ, ಬೈಂದೂರು ತಾಲೂಕಿನ 171, ಕಾರ್ಕಳ, ಹೆಬ್ರಿ ತಾಲೂಕಿನ 64 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಒಟ್ಟು 556 ಪ್ರಕರಣಗಳಲ್ಲಿ 191 ಸಿಂಟಮಿಕ್ ಹಾಗೂ 365 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 18 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 538 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಇಂದು ಉಡುಪಿಯ 78 ವರ್ಷದ ವೃದ್ಧ ಹಾಗೂ ಕಾರ್ಕಳದ 46 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 337 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 2705 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3244 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 224…
ಕುಂದಾಪ್ರ ಡಾಟ್ ಕಾಂ’ ಸುದ್ದಿ. ಉಡುಪಿ : ಕೊರೊನಾ ವೈರಸ್ ಸೋಂಕಿನಿಂದಾಗಿ ಉಡುಪಿಯಲ್ಲಿ ಪರಿಸ್ಥಿತಿ ದಿನೇ ದಿನೇ ಕೈಮೀರುತ್ತಿದೆ. ಬಹಳಷ್ಟು ಸಮಸ್ಯೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಸೊಂಕಿನ ಲಕ್ಷಣ ಕಂಡುಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಸೋಂಕಿನ ಲಕ್ಷಣಗಳು ಕಂಡು ಬಂದ್ರೆ ಕೂಡಲೇ ಟೆಸ್ಟ್ ಮಾಡಿಸಿಕೊಂಡು ಐಸೋಲೇಟ್ ಆಗಿ. ಮನೆಯವರನ್ನು ಕೊರೊನಾ ಸೋಂಕಿನಿಂದ ರಕ್ಷಿಸಿ, ಒಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ್ರೆ ಮನೆ ಮಂದಿ ಗೆಲ್ಲಾ ಸೋಂಕು ವ್ಯಾಪಿಸುತ್ತಿದೆ. ಹೊರಗಿನಿಂದ ಬರುವವರನ್ನು ಸಾಧ್ಯವಾದಷ್ಟು ದೂರವಿಡಿ. ಒಂದೊಮ್ಮೆ ಮನೆಗೆ ಹೊರಗಿನವರು ಬಂದ್ರೆ ಅವರನ್ನು ಪ್ರತ್ಯೇಕವಾಗಿ ಇರಲು ಹೇಳಿ. ಇಮ್ಯುನಿಟಿ ಕೊರತೆ ಇದ್ದವರನ್ನು ಬಹು ಬೇಗನೆ ಸೋಂಕು ಬಾಧಿಸುತ್ತಿದೆ. ಕೊರೊನಾ ಬಗ್ಗೆ ಜಾಗೃತೆ ವಹಿಸದೇ ಇದ್ರೆ, ಕೊರೊನಾ ಸೋಂಕಿನಿಂದ ಪಾರಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಜನರಲ್ಲಿ ಸಾಕಷ್ಟು ಬಾರಿ ಮನವಿಯನ್ನು ಮಾಡಲಾಗಿದೆ. ಸೋಂಕು ಕಾಣಿಸಿಕೊಂಡ ಕೂಡಲೇ ಟೆಸ್ಟ್ ಮಾಡಿಸಿಕೊಂಡು ಅಗತ್ಯಬಿದ್ರೆ ಆಸ್ಪತ್ರೆಗೆ ದಾಖಲಾಗುವ ಬದಲು, ಸೋಂಕು ಕಾಣಿಸಿಕೊಂಡು ಪರಿಸ್ಥಿತಿ ಬಿಗಡಾಯಿಸಿದ ನಂತರವೇ ಆಸ್ಪತ್ರೆಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್ ನಿಯಂತ್ರಣ ಹಾಗೂ ಸಹಾಯಕ್ಕಾಗಿ ಕುಂದಾಪುರ ಮತ್ತು ಬೈಂದೂರು ಭಾಗದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅಗತ್ಯವುಳ್ಳ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಛೇರಿಯಲ್ಲಿ ಕೋವಿಡ್ ತುರ್ತು ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು ನಾಗಶ್ರೀ ಅವರನ್ನು (7760514907) ಸಂಪರ್ಕಿಸಿ ಅಗತ್ಯ ಸೇವೆಗಳ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಆಸ್ಪತ್ರೆ ಮತ್ತು ಅಂಬ್ಯುಲೆನ್ ಸೇವೆಗಾಗಿ ಪ್ರಕಾಶ್ ಪೂಜಾರಿ ಜಡ್ಡು ಮತ್ತು ಹರ್ಷ ಮೊಗವೀರ ಸಿದ್ಧಾಪುರ (9008121917, 8971162076), ವೆಂಟಿಲೇಟರ್ ಮತ್ತು ರೆಮಿಡಿಸಿವರ್ಗಾಗಿ ಶರತ್ ಕುಮಾರ ಶೆಟ್ಟಿ, ಮತ್ತು ಸಾಮ್ರಾಟ್ ಶೆಟ್ಟಿ (9986099687, 9845230002), ವ್ಯಾಕ್ಸಿನೇಶನ್ ಸೇವೆಗಾಗಿ ಸುರೇಶ್ ಬಟವಾಡಿ ಮತ್ತು ಆನಂದ ಖಾರ್ವಿ, (9448525641, 9880476829), ಆಯುಷ್ಮಾನ್ ಭಾರತ್ ಕಾರ್ಡ್ ಸೇವೆಗಾಗಿ ಪ್ರಿಯದರ್ಶಿನಿ ಮತ್ತು ಭಾಗೀರಥಿ (7975887506, 9448605186), ಪ್ರಚಾರ ವಿಭಾಗ ವಿನೋದ್ ಭಂಡಾರಿ ಮತ್ತು ಪ್ರಜ್ವಲ್ ಕುಮಾರ ಶೆಟ್ಟಿ (9900113246, 9880996689) ಹಾಗೂ ಅಂತಿಮ ಸಂಸ್ಕಾರಕ್ಕಾಗಿ ರೋಹಿತ್ ಶೆಟ್ಟಿ ಸಿದ್ಧಾಪುರ ಮತ್ತು ಆಕಾಶ್ ಪೂಜಾರಿ (9980255514, 8296029677) ಅವರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೊಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಳದ ಶ್ರೀ ರಾಮ ಸಂಘದ ವತಿಯಿಂದಲಾಕ್ಡೌನ್ ಹಿನ್ನಲೆಯಲ್ಲಿ ಕರ್ತವ್ಯನಿರತ ಪೋಲಿಸ್ ಸಿಬ್ಬಂದಿಗಳು, ಆಸ್ಪತ್ರೆ ಸಿಬ್ಬಂದಿ, ಲಸಿಕೆ ವಿತರಣೆ ಕೇಂದ್ರದ ಸಿಬ್ಬಂದಿ ಹಾಗೂ ಸಂಕಷ್ಟದಲ್ಲಿರುವವರಿಗೆ ಉಚಿತ ಉಪಹಾರ ವ್ಯವಸ್ಥೆ ಕಲ್ಪಿಸಲಾಗಿದೆ. ನಿತ್ಯವೂ ವಿವಿಧ ಬಗೆಯ ಉಪಹಾರವನ್ನು ತಯಾರಿಸಿ ಚೆನ್ನಾಗಿ ಪ್ಯಾಕ್ ಮಾಡಿ ನೀಡಲಾಗುತ್ತಿದ್ದು, ಜೊತೆಗೆ ಚಹಾದ ವ್ಯವಸ್ಥೆ ಮಾಡಲಾಗುತ್ತಿದೆ. ಕುಂದಾಪುರ, ಕೋಟೇಶ್ವರ ಮತ್ತು ಕುಂಭಾಶಿಯಲ್ಲಿ ಈ ಸೇವೆ ನೀಡುತ್ತಿದ್ದು ಲಾಕ್ಡೌನ್ ಮುಗಿಯುವ ತನಕ ಮುಂದುವರೆಯಲಿದೆ ಎಂದು ಶ್ರೀ ರಾಮ ಸಂಘದ ನಿರಂಜನ್ ಕಾಮತ್ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 529 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 250, ಕುಂದಾಪುರ, ಬೈಂದೂರು ತಾಲೂಕಿನ 202, ಕಾರ್ಕಳ, ಹೆಬ್ರಿ ತಾಲೂಕಿನ 73 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 529 ಪ್ರಕರಣಗಳಲ್ಲಿ 195 ಸಿಂಟಮಿಕ್ ಹಾಗೂ 334 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 33 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 496 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು 549 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 2488 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2345 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 1309 ಮಂದಿಗೆ ಮೊದಲ ಡೋಸ್, 1477 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯತನಕ ಒಟ್ಟು 1,94,339 ಮಂದಿಗೆ ಮೊದಲ ಡೋಸ್…
