ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ತಾಲೂಕಿನ ಕುಂದಾಪುರ ಹೊಲಿಕ್ರಾಸ್ ಚರ್ಚ್, ಬಸ್ರೂರು ಫಿಲೀಪ್ ನೇರಿ ಚರ್ಚ್, ತ್ರಾಸಿ ಕ್ರಿಸ್ಟ್ಕಿಂಗ್ ಚರ್ಚ್, ಗಂಗೊಳ್ಳಿ ಅವರ್ ಲೇಡಿ ಆಫ್ ಇಮ್ಯಾಕ್ಯೂಲೇಟ್ ಚರ್ಚ್, ತಲ್ಲೂರು, ಬೆಳ್ವೆ ಜೊಸೆಫ್ ಚರ್ಚ್, ಫ್ರಾನ್ಸಿಸ್ ಆಸಿಸಿ ಚರ್ಚ್, ಬೈಂದೂರು ಹೊಲಿಕ್ರಾಸ್ ಚರ್ಚ್ ಸೇರಿದಂತೆ ವಿವಿಧ ಚರ್ಚುಗಳು ಹಾಗೂ ಕ್ರೈಸ್ತ ಸಮುದಾಯ ಕ್ರಿಸ್ಮಸ್ ಹಬ್ಬವನ್ನು ಸರಳವಾಗಿ ಆಚರಿಸಿ ಸಂಭ್ರಮಿಸಿದರು. ಚರ್ಚ್ಗಳಿಗೆ ಕುಟುಂಬ ಸಮೇತ ತೆರಳಿದ ಕ್ರೈಸ್ತರು, ಯೇಸು ಕ್ರಿಸ್ತನ ಶೀಲುಬೆ ಮುಂದೆ ನಿಂತು ಶ್ರದ್ದಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಚರ್ಚ್ನ ಆವರಣದಲ್ಲಿ ನಿರ್ಮಿಸಿರುವ ಕಣ್ಮನ ಸೆಳೆಯುವ ಗೋದಲಿಗಳು ವಿದ್ಯುತ್ ದೀಪಾಲಂಕಾರ ಗಮನ ಸೆಳೆಯುತ್ತಿದ್ದವು. ಕ್ರೈಸ್ತರ ಮನೆಗಳಲ್ಲಿ ಸಂಭ್ರಮ ಮನೆಮಾಡಿದ್ದು, ಗೋದಲಿ, ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ. ಬೈಂದೂರು ಹೊಲಿಕ್ರಾಸ್ ಚರ್ಚ್‌ನಲ್ಲಿ ರೆ.ಪಾ ಲಿಯೋ ಲಸ್ರಾದೊ, ರೆ.ಪಾ ಸ್ಟ್ಯಾನಿ ಮಣಕ್ಕಲ್, ರೆ.ಪಾ ವಿನ್ಸೆಂಟ್ ಕುವೆಲ್ಲೊ, ಬ್ರದರ್ ಲಿವನ್ ಮಥಾಯಸ್ ಇವರ ನೇತ್ರತ್ವದಲ್ಲಿ ಸರಳವಾಗಿ ಕ್ರಿಸ್‌ಮಸ್ ಹಬ್ಬವನ್ನು ಆಚರಿಸಲಾಯಿತು. ಇದನ್ನೂ ಓದಿ: ► ಸಡಗರ, ಸಂಭ್ರಮದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ರ್ಟೀಯ ಮಹಿಳಾ ದಿನಾಚರಣೆಯಂದು ಇಲಾಖಾ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥ್ಯರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ ಮಹಿಳಾ ದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ-ಪ್ರತಿಯಲ್ಲಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇವರಿಗೆ ಜನವರಿ 20ರ ಒಳಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರೈತರು ಇಂದಿನ ದಿನಗಳಲ್ಲಿ ಹಲವಾರು ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳು ಇವೆ. ಸಮಸ್ಯೆಗಳನ್ನು ನಿವಾರಿಸಿಕೊಂಡು ಸಂಘಟಿತರಾದಲ್ಲಿ ಯಶಸ್ಸು ಖಚಿತ ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ ಹೇಳಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ, ರೈತಸಿರಿ ಹಾಗೂ ರೈತ ಸೇವಾ ಒಕ್ಕೂಟದ ಸಹಭಾಗಿತ್ವದಲ್ಲಿ ಸಂಘದ ರೈತಸಿರಿ ಸಭಾಂಗಣದಲ್ಲಿ ನಡೆದ ವಿಶ್ವ ರೈತ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ವೈಜ್ಞಾನಿಕ ಕೃಷಿ ವಿಧಾನಕ್ಕೆ ಹೊಂದಿಕೊಳ್ಳದೆ ಇರುವುದು, ಕೃಷಿಯಿಂದ ಉತ್ತಮ ಇಳುವರಿ ಸಿಗದೇ ಇರುವುದು, ಹೆಚ್ಚು ರಾಸಾಯನಿಕ ಗೊಬ್ಬರ ಬಳಸದೆ ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು. ಸಮಗ್ರ ಕೃಷಿಯಿಂದಾಗುವ ಅನುಕೂಲ ಹಾಗೂ ಲಾಭವು ಜಗತ್ತಿನ ಯಾವುದೇ ವೃತ್ತಿಯಿಂದ ಸಿಗುವುದಿಲ್ಲ. ಯುವ ಪೀಳಿಗೆಯನ್ನು ಕೃಷಿಯ ಕಡೆಗೆ ಆಕರ್ಷಿಸಲು ಹಿರಿಯರು ಪ್ರಯತ್ನಿಸಬೇಕು ಎಂದು ಹೇಳಿದರು. ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಸ್ವಾಗತಿಸಿ. ಹಿರಿಯ ವ್ಯವಸ್ಥಾಪಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊಸ ವರ್ಷದ ಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನ್ನು ತಡೆಯುವ ದೃಷ್ಟಿಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಕರ್ನಾಟಕ ರಾಜ್ಯಾದ್ಯಂತ ಸುಸಜ್ಜಿತಗೊಂಡಿದೆ. ಸಾಮಾನ್ಯ ದಿನಗಳಿಗಿಂತ ಹೊಸವರ್ಷ ಆಚರಣೆಗಳಲ್ಲಿ ಶೇ.30ರಿಂದ 35 ಅಪಘಾತ ಪ್ರಕರಣಗಳು ವರದಿಯಾಗುತ್ತಿದೆ. ಹೀಗಾಗಿ ಹೆಚ್ಚಿನ ತುರ್ತುಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಆರೋಗ್ಯ ಕವಚ 108 ಅಂಬುಲೆನ್ಸ್‌ನ್ನು ನಿಯೋಜಿಸಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ 8 ಆರೋಗ್ಯ ಕವಚ 108ಅಂಬುಲೆನ್ಸ್‌ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ನಿಯೋಜಿಸಲಾಗಿದೆ. ಹೆಚ್ಚುವರಿ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿಗಳ ಸಾಪ್ತಾಯಿಕ ರಜೆಯನ್ನು ರದ್ದುಗೊಳಿಸಲಾಗಿದೆ. ಮುಂಜಾಗೃತವಾಗಿಯೇ ಎಲ್ಲಾ ಆಂಬುಲೆನ್ಸ್‌ನಲ್ಲಿ ಇಂಧನ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಸಜ್ಜುಗೊಳಿಸಲಾಗಿದೆ. 108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿದ್ದು, ಸಾವು – ನೋವುಗಳು ಅನಾಹುತಗಳ ಮಾಹಿತಿಗಳನ್ನು ಪೊಲೀಸ್, ಅಗ್ನಿಶಾಮಕ ಸೇವೆ ಮತ್ತು ಆರೋಗ್ಯ ಇಲಾಖೆಗಳೊಂದಿಗೆ ಹಂಚಿಕೊಳ್ಳಲಾಗುವುದು. ಹೊಸ ವರ್ಷದ ತುರ್ತು ಪ್ರತಿಸ್ಪಂದನೆಗೆ ಆರೋಗ್ಯ ಕವಚ 108 ಅಂಬುಲೆನ್ಸ್‌ಗಳು ಸಜ್ಜುಗೊಂಡಿದ್ದು, ತುರ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳು ಪ್ರಾರಂಭವಾಗದಿರುವುದರಿಂದ ರಾಜ್ಯದಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹಾಗೂ ಬಾಲ್ಯ ವಿವಾಹ ಹೆಚ್ಚಾಗುವ ಸಂಭವವಿದ್ದು, ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಜ.1ರಿಂದ ಸುರಕ್ಷತೆ ಹಾಗೂ ಮುಂಜಾಗ್ರತೆಗಳೊಂದಿಗೆ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥರಿಗೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಡಿಡಿಪಿಐ ನಾಗೂರ ತಿಳಿಸಿದ್ದಾರೆ. ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆದ ಎಲ್ಲ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಯರ ಸಭೆಯಲ್ಲಿ ಶಾಲೆಗಳ ಮುಖ್ಯಸ್ಥರು ಪಾಲಿಸಬೇಕಾದ ಸೂಚನೆಗಳನ್ನು ತಿಳಿಸಲಾಗಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ. ಜ.1ರಿಂದ ಶಾಲಾ ಆವರಣದಲ್ಲಿ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ–2 ಕಾರ್ಯಕ್ರಮ ಆರಂಭಿಸಬೇಕು, 10ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಧದಿನ ತರಗತಿ ನಡೆಸಬೇಕು, ಒಂದು ತಂಡದಲ್ಲಿ 15 ವಿದ್ಯಾರ್ಥಿಗಳು ಮಾತ್ರ ಇರುವಂತೆ ನೋಡಿಕೊಳ್ಳಬೇಕು. ಇದಕ್ಕೂ ಮುನ್ನ ಶಾಲಾ ಆವರಣ ಹಾಗೂ ಕೊಠಡಿಗಳನ್ನು ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಸ್ವಚ್ಛಗೊಳಿಸಬೇಕು, ಶೌಚಾಲಯದಲ್ಲಿ ನಿರಂತರ ನೀರು ಸರಬರಾಜು ಇರಬೇಕು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ವಿಭಾಗದ ಆಶ್ರಯದಲ್ಲಿ ನನ್ನ ಕನಸಿನ ಉದ್ಯೋಗ – ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯ ತರಬೇತಿ ಕುರಿತು ವೆಬಿನಾರ್ ನಡೆಯಿತು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ವರುಣ್ ಕಟ್ಟಿ ಮಾತನಾಡಿ, ಮುಖ್ಯವಾಗಿ ಉತ್ತಮ ಉದ್ಯೊಗವನ್ನು ಪಡೆಯಬೇಕು ಎಂಬ ಆಶಯವನ್ನ ನಮ್ಮದಾಗಿಸಿಕೊಳ್ಳಬೇಕು. ಅದಕ್ಕೆ ಪೂರಕ ವಾತಾವರಣವನ್ನು ನಾವಿ ಸೃಷ್ಟಿಸಿಕೊಳ್ಳಬೇಕು. ಅಂದರೆ ಒಳ್ಳೆಯ ಉದ್ಯೋಗಕ್ಕೆ ಬೇಕಾದಂತಹ ಪರಿಪೂರ್ಣ ಕಲಿಕೆ ನಿರಂತರ ಅಧ್ಯಯನ, ತಲ್ಲೀನತೆ ಭಿನ್ನ ನೆಲೆಗಳ ಆಲೋಚನೆ ಮತ್ತು ನಿಮ್ಮ ಬಗ್ಗೆ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಉತ್ತಮ ಮಾತುಗಾರಿಕೆ ಸಂವಹನ ಕಲೆ, ಇಂಗ್ಲೀಷ್ ವ್ಯಾಕರಣ ಜ್ಞಾನಸಾಮಾನ್ಯ ಜ್ಞಾನವನ್ನು ಆದಷ್ಟು ಹೆಚ್ಚಿಸಿಕೊಳ್ಳಬೇಕು. ದೊಡ್ಡ ಆಲೋಚನೆಯೊಂದಿಗೆ ವಿವಿಧ ಉದ್ಯೋಗಕ್ಕೆ ಬೇಕಾದ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಮಾಡಿ ನಿಮ್ಮ ವಿದ್ಯಾರ್ಹತೆಯನ್ನು ಹೆಚ್ಚಿಸಿಕೊಳ್ಳಬೇಕು. ಇದೆಲ್ಲದರ ಜೊತೆಗೆ ಬಹುಮುಖ್ಯವಾಗಿ ನಿರಂತರ ಕಲಿಯುವಿಕೆಯ ಮೂಲಕ ನಿಮ್ಮನ್ನು ಯಾವುದೇ ಉತ್ತಮ ಹುದ್ದೆಗೆ ತಯಾರಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮಾತನಾಡಿ, ಆನ್‌ಲೈನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೀಚ್ ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕುಂದಾಪುರ ಕೋಸ್ಟಲ್ ಲಯನ್ಸ್ ಕ್ಲಬ್ ಅಧ್ಯಕ್ಷ ರತ್ನಾಕರ ಶೆಟ್ಟಿ ಕಂದಾವರ ಹೇಳಿದರು. ಕುಂದಾಪುರ ಕೋಡಿ ಕಡಲತೀರದಲ್ಲಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮುದ್ರ ತೀರಗಳು ಸ್ವಚ್ಛವಾಗಿದ್ದರೆ ಪರಿಸರದಲ್ಲಿ ವಾಸಿಸುವವರ ಆರೋಗ್ಯ ಚೆನ್ನಾಗಿರುತ್ತದೆ. ಅಂತಹ ಸ್ಥಳಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಗೊಳ್ಳುವುದರ ಜತೆಗೆ ಸ್ಥಳೀಯರಿಗೆ ಆದಾಯ ಬರುತ್ತದೆ ಎಂದು ತಿಳಿಸಿದರು. ಕ್ಲಬ್ ಪ್ರಧಾನ ಕಾರ್ಯದರ್ಶಿ ವಸಂತರಾಜ್ ಶೆಟ್ಟಿ, ಕೋಶಾಧಿಕಾರಿ ರಾಜೇಶ್ ಶೆಟ್ಟಿ, ಸ್ಥಾಪಕಾಧ್ಯಕ್ಷ ಅಶೋಕ್ ಶೆಟ್ಟಿ ಸಂಸಾಡಿ, ಪ್ರಥಮ ಉಪಾಧ್ಯಕ್ಷ ಜಯಶೀಲ ಶೆಟ್ಟಿ ಕಂದಾವರ, ನಿಕಟ ಪೂರ್ವ ಖಜಾಂಚಿ ಸುಕುಮಾರ ಶೆಟ್ಟಿ, ನಿರ್ದೇಶಕರಾದ ಅಂಪಾರು ನಿತ್ಯಾನಂದ ಶೆಟ್ಟಿ, ಗಿರೀಶ್ ಮೇಸ್ತ, ಉದಯ ಶೆಟ್ಟಿ ಮಚ್ಚಟ್ಟು, ಮಹಮದ್ ಅಶ್ರಫ್, ಅಣ್ಣಪ್ಪ ಶೆಟ್ಟಿ, ವೆಂಕಟರಮಣ ನಾಯಕ್, ಪ್ರಭಾಕರ ಶೆಟ್ಟಿ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2019-20ನೇ ಸಾಲಿನ ಮಹಾಸಭೆಯು ಇಲ್ಲಿನ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಜರುಗಿತು ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಆನಂದ ಬಿಲ್ಲವ, ಅಮೃತ ಮಹೋತ್ಸವ ವರ್ಷದ ಸಂಭ್ರಮಾಚರಣೆಯಲ್ಲಿರುವ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಸದಸ್ಯರ ಸಹಕಾರದಿಂದ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. 2019-20ನೇ ಸಾಲಿನ ಅಂತ್ಯಕ್ಕೆ ಸಂಘವು 26.19 ಕೋಟಿ ರೂ. ಠೇವಣಿ ಹೊಂದಿದ್ದು, 12.89 ಕೋಟಿ ರೂ.ಗಳನ್ನು ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಲಾಗಿದೆ. ವರದಿ ವರ್ಷದಲ್ಲಿ ಸಂಘವು 96 ಕೋಟಿ ರೂ. ವ್ಯವಹಾರ ನಡೆಸಿದ್ದು, ವರ್ಷಾಂತ್ಯಕ್ಕೆ ಸಂಘವು 39.07 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸಂಘದ ನಿರ್ದೇಶಕರಾದ ಕೆ.ಮಾಧವ ಖಾರ್ವಿ, ಹರೀಶ ಮೇಸ್ತ, ಜಿ.ಗೋಪಾಲ ನಾಯ್ಕ್, ಶ್ರೀನಿವಾಸ ಜತ್ತನ್, ಚಂದ್ರಶೇಖರ ಪೂಜಾರಿ, ನಾಗರಾಜ ಪೂಜಾರಿ, ಯಮುನಾ, ಆಶಾಲತಾ, ನಾಗರಾಜ ಎಂ. ಮತ್ತು ಲಕ್ಷö್ಮಣ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಯುವಜನಾಂಗಕ್ಕೆ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವದಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು. ಅವರು ಇಂದು ಅಜ್ಜರಕಾಡು ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು. ಯುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರತಿಬಿಂಬಿಸಿ ಬೆಳೆಸುವ ಉದ್ಧೇಶ ಯುವಜನೋತ್ಸವ ಕಾರ್ಯಕ್ರಮದ್ದಾಗಿದ್ದು, ಯುವಜನಾಂಗಗಳು ಒಂದುಗೂಡಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರುವಂತಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದುರ್ಮಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮೀನು ಮರಿಗಳ ಸಾಕಣಿಕಾ ಕೇಂದ್ರಕ್ಕೆ ಬಂದರು ಮತ್ತು ಮೀನುಗಾರಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ಮೀನು ಸಾಕಣಿಕಾ ಕೇಂದ್ರವು 1ಎಕರೆಗೂ ಹೆಚ್ಚು ವಿಸ್ತಾರವಿದ್ದು, 18 ಸಾವಿರಕ್ಕೂ ಅಧಿಕ ಮೀನು ಮರಿಗಳನ್ನು ಸಾಕುವ ಉದ್ದೇಶ ಹೊಂದಿದೆ ಎಂದರು. ಈ ಸಂದರ್ಭ ಉದ್ಯಮಿ ಗೋವಿಂದ ಬಾಬು ಪೂಜಾರಿ, ಬೈಂದೂರು ತಾ.ಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿ.ಪಂ ಸದಸ್ಯ ಸುರೇಶ್ ಬಟ್ವಾಡಿ, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಶಾಂತ ಪೂಜಾರಿ ಬೈಂದೂರು ಪಾಲುದಾರರಾದ ಗುರು ಪ್ರಸಾದ ಬೈಂದೂರು, ಸಂತೋಷ, ಗೌರೀಶ್ ಉಪ್ಪುಂದ ಉಪಸ್ಥಿತರಿದ್ದರು.
