Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪಡುಕರೆ ಬೀಚ್ ನಲ್ಲಿ ಮರೀನಾ ನಿರ್ಮಾಣ ಕುರಿತಂತೆ ಕಾರ್ಯ ಸಾಧ್ಯತಾ ವರದಿ ( ಫಿಸಿಬಲಿಟಿ ರಿಪೋರ್ಟ್) ಪಡೆಯುವ ಕುರಿತಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ , ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಪಡುಕರೆ ತೀರದಲ್ಲಿ ನೈಸರ್ಗಿಕ ದ್ವೀಪಗಳಿದ್ದು, ಸುಮಾರು 1.66 ಕಿಮೀ ನಿಂದ 2 ಕಿಮೀ ವರೆಗೆ ಬ್ರೇಕ್ ವಾಟರ್ ನಿರ್ಮಿಸಿ, 3.69 ಕಿಮೀ ಜಾಗದಲ್ಲಿ ಮರೀನಾ ನಿರ್ಮಿಸಬಹುದಾಗಿದ್ದು, ಈ ಕುರಿತಂತೆ ಪುಣೆಯ ಸಿ.ಡಬ್ಲೂಯ.ಪಿ.ಆರ್.ಎಸ್ ನಿಂದ ಕಾರ್ಯ ಸಾಧ್ಯತಾ ವರದಿಯನ್ನು ಪಡೆದು, ನಂತರ ವಿಸ್ತೃತಾ ಯೋಜನಾ ವರದಿ ತಯಾರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಮೂಲಕ ಈ ಕಾರ್ಯವನ್ನು ಕೈಗೊಳ್ಳುವಂತೆ ತಿಳಿಸಿದರು. ಇಡೀ ಭಾರತದಲ್ಲಿ ಪೂರ್ಣ ಪ್ರಮಾಣದ ಮರೀನಾ ಇಲ್ಲವಾಗಿದ್ದು, ಉಡುಪಿಯ ಪಡುಕರೆಯಲ್ಲಿ ಮರೀನಾ ನಿರ್ಮಾಣವಾದಲ್ಲಿ  ಜಾಗತಿಕ ಪ್ರವಾಸಿ ತಾಣದಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ, ವಿಫುಲ ಉದ್ಯೋಗವಕಾಶಗಳು ಮತ್ತು ರಾಜ್ಯದ ಪ್ರವಾಸೋಧ್ಯಮ ಬೆಳವಣಿಗೆಗೆ ಅತ್ಯಂತ ಪ್ರಮುಖ ಕೊಡುಗೆಯಾಗಲಿದೆ ಎಂದ ಜಿಲ್ಲಾಧಿಕಾರಿಗಳು, ಸ್ಥಳೀಯ ಪರಿಸರಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿರಿಯ ಉದ್ಯಮಿ, ಶಿಕ್ಷಣ ತಜ್ಞ ಆರ್ ಎನ್ ಶೆಟ್ಟಿ(92) ಗುರುವಾರ ನಸುಕಿನ ಜಾವ 3.30ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕೃಷಿ ಕುಟುಂಬದಲ್ಲಿ 1928ರಲ್ಲಿ ಜನಿಸಿದ ರಾಮ ನಾಗಪ್ಪ ಶೆಟ್ಟಿ ಅವರು ಪ್ರೌಢಶಿಕ್ಷಣದ ಬಳಿಕ ಶಿರಸಿಯ ನಾಗರಿಕ ಗುತ್ತಿಗೆದಾರರರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಮುಂದೆ ಅವರು ಉದ್ಯಮಿಯಾಗಿ ಬೆಳೆದು ಬಹುದೊಡ್ಡ ಹೆಸರು ಮಾಡಿದ್ದರು. 1967ರಲ್ಲಿ ಪಾಲುದಾರ ಕಂಪೆನಿಯಾದ ಆರ್. ಎನ್. ಶೆಟ್ಟಿ ಆಂಡ್ ಕಂಪೆನಿ ಆರಂಬಿಸಿದರು. ಅದರ ಮೂಲಕ ಹಿಡಕಲ್ ಜಲಾಶಯ, ತಟ್ಟಿಹಳ್ಳ ಜಲಾಶಯ, ಸೂಪ ಜಲಾಶಯ, ಗೇರುಸೊಪ್ಪ ಜಲಾಶಯ, ವರಾಹಿ ವಿದ್ಯುತ್ ಯೋಜನೆ, ಕೊಂಕಣ ರೈಲು ಸುರಂಗ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮೊದಲಾದ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಆಸ್ಪತ್ರೆ, ಮೋಟಾರ್ಸ್ ಕಂಪೆನಿ, ಫೈನಾನ್ಸ್, ಶಿಕ್ಷಣ ಸಂಸ್ಥೆಗಳನ್ನು ಅವರು ಸ್ಥಾಪಿಸಿ ಯಶಸ್ಸು ಗಳಿಸಿದ್ದರು. ಮುರುಡೇಶ್ವರ ದೇವಸ್ಥಾನದ ಅನುವಂಶಿಕ ಾಡಳಿತಾಧಿಕಾರಿಯಾಗಿ ಅದನ್ನು ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವದೆಹಲಿಯ ಅಲ್ ಇಂಡಿಯಾ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(AIIMS) ಪ್ರವೇಶ ಪರೀಕ್ಷೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಕ್ಷಿಪ್ರಾ ದೇವಾಡಿಗ ಜನರಲ್ ಮೆರಿಟ್ ಕೆಟಗರಿಯಲ್ಲಿ INI -CET MD/MSನಲ್ಲಿ ರಾಷ್ಟ್ರಮಟ್ಟದಲ್ಲಿ 139ನೇ ರ್ಯಾಂಕ್ ಹಾಗೂ ಓಬಿಸಿ ಕೆಟಗರಿಯಲ್ಲಿ 21ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಬೈಂದೂರು ತಾಲೂಕು ಬಿಜೂರು ಗ್ರಾಮದ ಮುತ್ತಯ್ಯ ದೇವಾಡಿಗ ಹಾಗೂ ಜಯಶ್ರೀ ದೇವಾಡಿಗ ದಂಪತಿಯ ಪುತ್ರಿಯಾದ ಕ್ಷಿಪ್ರ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ 2020ರಲ್ಲಿ ವೈದ್ಯಕೀಯ ಪದವಿಯನ್ನು ಮುಗಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಘ ಸಂಸ್ಥೆಗಳು ಊರಿನ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವುದು ಶ್ಲಾಘನಾರ್ಹವಾಗಿದ್ದು, ಇಂತಹ ಸಂಸ್ಥೆಗಳು ಇನ್ನಷ್ಟು ಬೆಳೆಯಲಿ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀಚಂದ್ರ ಸೂಡ ಹೇಳಿದರು. ಅವರು ಬುಧವಾರ ಶಿರೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಶಿರೂರು ಅಸೋಸಿಯೇಷನ್ ಅವರು ಸಾರ್ವಜನಿಕ ಸೇವೆಗಾಗಿ ಕೊಡುಗೆಯಾಗಿ ನೀಡಿದ ನೂತನ ಆಂಬ್ಯುಲೆನ್ಸ್ ಹಸ್ತಾಂತರಿಸಿ ಮಾತನಾಡಿ ಎಂ.ಎಂ. ಹೌಸ್‌ನವರು ಊರಿನ ಹಿತಕ್ಕಾಗಿ ಊದಾರ ದೇಣಿಗೆ ನೀಡುತ್ತಿರುವುದು ಶ್ಲಾಘನಾರ್ಹ ಎಂದರು. ಶಿರೂರು ಅಸೋಸಿಯೇಷನ್ ಉಪಾಧ್ಯಕ್ಷ ಸಾದನ್‌ದಾಸ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸಂಸ್ಥೆಯ ಮೂಲಕ ಹಲವಾರು ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ವಿದೇಶಗಳಲ್ಲಿ ನೆಲೆಸಿರುವ ಶಿರೂರಿಗರು ಊರಿನ ಅಭಿವೃದ್ಧಿಯ ದೃಷ್ಟಿಯಿಂದ ಒಂದುಗೂಡಿ ಆರಂಭಿಸಿದ ಶಿರೂರು ಅಸೋಸಿಯೇಷನ್ ಹಲವಾರು ಸೇವಾ ಕಾರ್ಯಗಳನ್ನು ಕೈಗೊಂಡು ಊರಿನ ಪ್ರಗತಿಯಲ್ಲಿ ಕೈಜೋಡಿಸಿದೆ. ಇಲ್ಲಿ ನಾವು ರಾಜಕಿಯ ರಹಿತವಾಗಿ ಶ್ರಮಿಸುತ್ತಿದ್ದು, ಊರಿನವರ ಸಹಕಾರವೂ ಅತಿಮುಖ್ಯ ಎಂದರು. ಮುಖ್ಯ ಅತಿಥಿಗಳಾಗಿ ಶಿರೂರು ಎಂ.ಎಂ. ಹೌಸ್‌ನ ಮಣೆಗಾರ್ ಜಿಪ್ರಿ ಸಾಹೇಬ್, ಬಂದೂರು ಸಮುದಾಯ ಆರೋಗ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಪರಿಸರ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಕೆ.ಎಮ್.ಅಬ್ದುಲ್ ರೆಹಮಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಮೀರ್, ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಸಿದ್ಧಪ್ಪ ಕೆ.ಎಸ್. ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರವನ್ನು ಸ್ವಚ್ಛ ಮಾಡುವುದರ ಮೂಲಕ ರಾಷ್ಟ್ರೀಯ ಪರಿಸರ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆಗ್ಗುಂಜೆ ಜಗನ್ನಾಥ್ ಶೆಟ್ಟಿ (88) ಇಂದು ನಿಧನರಾಗಿದ್ದಾರೆ. ಮೂಲತಃ ಪ್ರಗತಿಪರ ಕೃಷಿಕರಾಗಿದ್ದು ಕೃಷಿಯಲ್ಲಿ ಅಪಾರ ಜ್ಞಾನವನ್ನು ಹೊಂದಿದವರಾಗಿದ್ದು ಕೃಷಿಯಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಮ್ರತರು ಮೂವರು ಪುತ್ರರು, ಓರ್ವ ಪುತ್ರಿಯನ್ನು ಆಗಲಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ಕುಂದಾಪುರ ಸಿಟಿಯವರು ನೀಡಿದ ನಾಲ್ಕು ಬ್ಯಾರಿಕೇಡ್‌ಗಳನ್ನು ಜೇಸಿಐ ಅಧ್ಯಕ್ಷ ನಾಗೇಶ್ ನಾವಡ ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹಾಗೂ ಕುಂದಾಪುರ ಆರಕ್ಷಕ ಠಾಣೆಯ ಎಎಸ್‌ಐ ತಾರನಾಥ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಜೇಸಿಐ ಕುಂದಾಪುರ ಸಿಟಿಯ ಸ್ಥಾಪಕಾಧ್ಯಕ್ಷ ಹುಸೈನ್ ಹೈಕಾಡಿ, ಪೂರ್ವಾಧ್ಯಕ್ಷ ರಾಘವೇಂದ್ರ ಚರಣ್ ನಾವಡ, ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಸಾರ್ವಜನಿಕ ಸಂಪರ್ಕಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶಿವರಾಜ್ ಸಿ. ನಾವುಂದ ಹಾಗೂ ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಾಣಿಜ್ಯ ಉಪನ್ಯಾಸಕಿ ಪ್ರಥ್ವಿಶ್ರೀ ಜಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯಾದ್ಯಂತ ಸ್ವರ್ಣವಲ್ಲಿ ಸಂಸ್ಥಾನದಿಂದ ಏರ್ಪಡಿಸಿರುವ ಭಗವದ್ಗೀತಾ ಅಭಿಯಾನದ ದಶಮಾನೋತ್ಸವ ಕಾರ್ಯಕ್ರಮ ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು. ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಅವರು ಕಾರ್ಯಕ್ರಮ ಉದ್ಧಾಟಿಸಿ ಮಾತನಾಡಿ, ಜೀವನದಲ್ಲಿ ಯಶಸ್ಸು-ಶ್ರೇಯಸ್ಸು ಸಾಧಿಸಲು ಶಿಸ್ತು ಮತ್ತು ಧ್ಯೇಯ ಪೂರ್ಣ ಸಾಧನೆ ಅಗತ್ಯ. ಭಗವದ್ಗೀತಾ ಪಠಣ ನಿತ್ಯ ಮಾಡುವುದರಿಂದ ಅಂತ:ಕರಣ ಶುದ್ಧಿಯಾಗುತ್ತದೆ. ಅರ್ಥಕ್ಕಿಂತ ಶ್ರದ್ಧೆ ಪರಿಣಾಮಕಾರಿಯಾದುದು ಎಂದು ಗೀತಾ ಸಂದೇಶವನ್ನು ಮನೆಮನೆಗೆ ತಲುಪಿಸುವಲ್ಲಿ ರಾಮಕ್ಷತ್ರಿಯ ಸಮಾಜದ ಮಾತೃಮಂಡಳಿಯವರು ಸ್ಥಳೀಯ ವಿದ್ಯಾಸಂಸ್ಥೆಗಳು ತೊಡಗಿಸಿಕೊಂಡಿದ್ದರಿಂದ ಪಠಣ, ಮಾರ್ಗದರ್ಶನ ಮತ್ತು ಸ್ಪರ್ಧೆ ನಿರ್ವಹಣೆ ಯಶಸ್ವಿಯಾಗಿದೆ ಎಂದರು. ಸ್ವರ್ಣವಲ್ಲಿ ಸಂಸ್ಥಾನದ ಟ್ರಸ್ಟೀ, ಅಭಿಯಾನದ ಅಧ್ಯಕ್ಷ ಬಿ. ರಾಮಕೃಷ್ಣ ಶೇರುಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೂಜ್ಯ ಶ್ರೀಗಳ ಸಾಮಾಜಿಕ ಕಾಳಜಿ ತಪೋನುಷ್ಠಾನಗಳು ಸಮಾಜದ ಏಳ್ಗೆಗೆ ಪೂರಕವಾಗಿವೆ ಎಂದರು. ನಿವೃತ್ತ ಮುಖ್ಯೋಪಾಧ್ಯಾಯ ಬಿ. ವಿಶ್ವೇಶ್ವರ ಅಡಿಗ ಸ್ಪರ್ಧಾ ವಿವರಗಳನ್ನು ವಿವರಿಸಿ ಆನ್‌ಲೈನ್ ನಲ್ಲಿ ಭಾಗವಹಿಸಿದ ಶಾಲಾ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದ ಅಧ್ಯಾಪಕರನ್ನು ಅಭಿನಂದಿಸಿ ಪ್ರತಿ ಶಿಕ್ಷಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಕನ್ನಡ ಸಾಹಿತ್ಯಕ್ಕೆ ಸಮೃದ್ಧ ಕೊಡುಗೆ ನೀಡಿದ ಅನನ್ಯ ಬರಹಗಾರ. ಅವರು ಬರೆದಂತೆ ಬದುಕಿದ ಲೇಖಕ’ ಎಂದು ಪುತ್ತೂರು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ನರೇಂದ್ರ ರೈ ದೇರ್ಲ ಹೇಳಿದರು. ಇಲ್ಲಿನ ಸುರಭಿ ಸಾಂಸ್ಕೃತಿಕ, ಸಾಹಿತ್ಯ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ರೋಟರಿ ಸಮುದಾಯ ಭವನದಲ್ಲಿ ನಡೆದ ಪೂರ್ಣಚಂದ್ರ ತೇಜಸ್ವಿ-ಮಂಥನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಸರದಿಂದ ಪಡೆದ ಅನುಭೂತಿಯೇ ತೇಜಸ್ವಿ ಅವರ ಬರಹಗಳ ಕೇಂದ್ರ ವಸ್ತು. ಕುವೆಂಪು ಅವರಿಗೆ ಪರಿಸರ ಅಧ್ಯಾತ್ಮದ ದಾರಿಯಾದರೆ, ಕಾರಂತರಿಗೆ ಪರಿಸರ ವಿಜ್ಞಾನದ ಮಾರ್ಗ. ಆದರೆ, ತೇಜಸ್ವಿ ಅವರಿಗೆ ಅದು ಬೆರಗುಗೊಳಿಸುವ ವಿಸ್ಮಯ‘ ಎಂದು ವಿವರಿಸಿದರು. ನಾವು ಹವ್ಯಾಸ ಎಂದು ಭಾವಿಸುವ ಛಾಯಾಗ್ರಹಣ, ಭೇಟೆ ಮತ್ತು ಮೀನು ಹಿಡಿಯುವಿಕೆ, ತೇಜಸ್ವಿಗೆ ನಿಸರ್ಗದ ಚೋದ್ಯಗಳ ಅಧ್ಯಯನದ ಮಾರ್ಗ. ಅವರು ತಮ್ಮ ಕಥನಗಳಲ್ಲಿ ಪರಿಸರಾವಲಂಬಿ ಮಾನವ, ಆಧುನಿಕತೆಯ ಪ್ರವಾಹದಲ್ಲಿ ಅವನತಿಯತ್ತ ಸಾಗುವ ಚಿತ್ರಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬೈಂದೂರು 2019-20ನೇ ಸಾಲಿನಲ್ಲಿ 16.41 ಲಕ್ಷ ರೂ. ಲಾಭಗಳಿಸಿ ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ. ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಾಲಗಳ ವಿತರಣೆ ಹಾಗೂ ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಭಾನುವಾರ ಬೈಂದೂರಿನ ಸಂಘದ ಪ್ರಧಾನ ಕಛೇರಿಯಲ್ಲಿ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಹಕಾರಿಯು 2019-20ನೇ ಸಾಲಿನಲ್ಲಿ ರೂ. 18.60 ಕೋಟಿ ಠೇವಣಿ ಹೊಂದಿದ್ದು 18.55 ಕೋಟಿ ಸಾಲ ನೀಡಿದೆ. ಕಳೆದ ಸಾಲಿನ ಕಾರ್ಯಯೋಜನೆಯಲ್ಲಿ ನಿಗದಿಪಡಿಸಿದ ಠೇವಣಿ, ಸಾಲ, ಅನುತ್ಪಾದಕ ಸಾಲ, ಸುಸ್ತಿ ಸಾಲ ಹಾಗೂ ಮುಂಗಡ ಲಾಭಗಳಿಕೆಯಲ್ಲಿ ನಿಗದಿತ ಗುರಿಯನ್ನು ಮೀರಿ ಸಂಸ್ಥೆ ಪ್ರಗತಿ ಸಾಧಿಸಿದೆ. ಆಡಿಟ್ ವರ್ಗೀಕರಣದಲ್ಲಿ ಸಂಸ್ಥೆ ’ಎ’ ತರಗತಿಯನ್ನು ಹೊಂದಿದೆ ಎಂದರು. ಜಿಲ್ಲೆಯಲ್ಲಿಯೇ ಮಾದರಿ ಸಂಸ್ಥೆಯಾಗಿ ರೂಪುಗೊಳ್ಳುತ್ತಿರುವ ಹಿಂದೆ ಗ್ರಾಹಕರ ಸಹಕಾರ ಹಾಗೂ ನೌಕರರ…

Read More