Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ ಪ್ರಾಂಚೈಸಿ ಮೂಲಕ ಲಿಡ್‌ಕರ್ ಲೆದರ್ ಎಂಪೋರಿಯಂ ತೆರೆಯಲು ಉದ್ದೇಶಿಸಲಾಗಿದ್ದು, ಚರ್ಮ ಕುಶಲಕರ್ಮಿ ಕುಟುಂಬಗಳಿಗೆ ಸೇರಿದ ಅರ್ಹ ಮತ್ತು ಆಸಕ್ತಿವುಳ್ಳ ಯುವಕ/ಯುವತಿಯರು ಲಿಡ್‌ಕರ್ ವೆಬ್‌ಸೈಟ್ http://www.lidkar.com ನಲ್ಲಿ ಪ್ರಾಂಚೈಸಿ ಅರ್ಜಿಗಳನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 5 ರ ಒಳಗೆ ಜಿಲ್ಲಾ ಸಂಯೋಜಕರು, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತ, ಉಡುಪಿ ಜಿಲ್ಲೆ  ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಂಬದಕೋಣೆಯ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮ ನಡೆಯಿತು. ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟಿ, ಮಾತನಾಡಿ, ಯಾರು ಎಷ್ಟೇ ದೊಡ್ಡ ಹುದ್ದೆಗೇರಿದರೂ ತನಗೆ ಅಕ್ಷರ ಕಲಿಸಿದ ಗುರುಗಳನ್ನು ಮರೆಯುವುದಿಲ್ಲ. ತಂದೆತಾಯಿ ನಮಗೆ ಜನ್ಮ ನೀಡಿದರೆ ಗುರು ನಮ್ಮಲ್ಲಿ ಅರಿವಿನ ದೀಪವನ್ನು ಹಚ್ಚುತ್ತಾರೆ. ವಿದ್ಯೆಯಿಲ್ಲದ ಮನುಷ್ಯನ ಜೀವನ ಪಶುವಿಗೆ ಸಮಾನ ಎಂಬಂತೆ ವ್ಯಕ್ತಿಯ ವ್ಯಕ್ತಿತ್ವ ವಿಕಸನವಾಗಲು ಶಿಕ್ಷಣದ ಅಗತ್ಯವಿದೆ. ನಮಗೆ ದಾರಿತೋರಿದ ಗುರುಗಳನ್ನು ಸ್ಮರಿಸಿ, ಗೌರವಿಸುವುದು ಶಿಷ್ಯರಾದವರ ಆದ್ಯ ಕರ್ತವ್ಯವಾಗಿದೆ . ಜ್ಞಾನಿಗಳ ಸರಿಯಾದ ಮಾರ್ಗದರ್ಶನವಿದ್ದರೆ ಎಂತಹ ವ್ಯಕ್ತಿಯಾದರೂ ಸಾಧನೆ ಮಾಡಬಲ್ಲ. ಶೃದ್ದೆ, ನಿಷ್ಠೆ, ಗುರುಭಕ್ತಿಯಿಂದ ವಿದ್ಯಾರ್ಥಿ ಕಲಿತಾಗ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬಲ್ಲ. ಇಂದು ಇಲ್ಲಿ ತಮ್ಮ ಗುರುಗಳನ್ನು ಗುರುತಿಸಿ, ಗುರುವಂದನೆ ಮಾಡುತ್ತಿರುವುದು ಸ್ತುತ್ಯಾರ್ಹ ಎಂದರು ಹೇಳಿದರು. ವಿಶ್ರಾಂತ ಉಪನ್ಯಾಸಕ ಪಿ.ಶೇಷಪ್ಪಯ್ಯ ಹೆಬ್ಬಾರ್, ನಿವೃತ್ತ ಶಿಕ್ಷಕಿಯರಾದ ಸೀತಾಲಕ್ಷ್ಮೀ ಟೀಚರ್, ರೋಮನ್ ಲೋಬೋ, ಸುಶೀಲ ಗಾಣಿಗರವರನ್ನು ಕಾರ್ಯಕ್ರಮದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ನವೆಂಬರ್ 29 ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಬೆಳಿಗ್ಗೆ 10 ಗಂಟೆಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಯತೆಯನ್ನು ಕ.ಸಾ.ಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸಲಿದ್ದು, ಹಿರಿಯ ವಕೀಲ ಎ.ಎಸ್.ಎನ್ ಹೆಬ್ಬಾರ್ ಸಾಹಿತ್ಯ ಸುಧೆ ಪ್ರಕಾಶನ ಪ್ರಕಟಿಸಿದ ಮುಷ್ತಾಕ್ ಹೆನ್ನಾಬೈಲ್ ಅವರ ಪ್ರಥಮ ಕೃತಿ ಪರಿಭ್ರಮಣ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ, ಮಂಗಳೂರು ವಿ.ವಿ ನಿರ್ದೇಶಕ ಮುದ್ದು ಮೂಡುಬೆಳ್ಳೆ, ಮಲೆನಾಡು ಪ್ರಕಾಶನ ಪ್ರಕಟಿಸಿದ ನಾರಾಯಣ ಶೇವಿರೆ ಅವರ ದೇಶೀ ದಿಶೆ , ಪ್ರಸಾದ್ ನಾರ್ಣಕಜೆ , ಇತಿಹಾಸ ಅಧ್ಯಾಪಕರು  ಮಲೆನಾಡು ಪ್ರಕಾಶನ ಪ್ರಕಟಿಸಿದ ನಾರಾಯಣ ಶೇವಿರೆ ಅವರ ಉಪಾಸನೆ  ಕ್ಯಾಥರೀನ್ ರೋಡ್ರಿಗಸ್, ಶಿಕ್ಷಣ ಚಿಂತಕರು ಅವರು ಸಾಹಿತ್ಯ ಸುಧೆ ಪ್ರಕಾಶನ ಪ್ರಕಟಿಸಿದ ಪ್ರೊ.ನರಹರಿ ಎ.ಎಮ್. ಅವರ ಪ್ರಥಮ ಕೃತಿ ಶಿಕ್ಷಣ ಮನ್ವಂತರ-ರಾಷ್ಟ್ರೀಯ ಶಿಕ್ಷಣ ನೀತಿ -2020 ಅನಾವರಣಗೊಳಿಸಿ ಮಾತಾನಾಡಲಿದ್ದಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಎಂ ಕೋಡಿ ಸಮೀಪ ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರಲ್ಲಿ, ಓರ್ವ ಸಾವ್ನಪ್ಪಿದ್ದು, ಮತ್ತೋರ್ವ ಪಾರಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತ ಯುವಕನನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಮಂಜುನಾಥ (33) ಎಂದು ಗುರುತಿಸಲಾಗಿದೆ. ಕುಂದಾಪುರ ಪರಿಸರದಲ್ಲಿ ಕೂಲಿ ಕಾರ್ಮಿಕರಾಗಿ ದುಡಿದುಕೊಂಡಿದ್ದ ಮೃತ ಮಂಜುನಾಥ ‌ಹಾಗೂ ಆತನ ಸ್ನೇಹಿತ ಮಂಜುನಾಥ ಎನ್ನುವವರು ಕೆಲಸ ಇಲ್ಲದ ಕಾರಣ ಕುಂದಾಪುರ ಸಮೀಪದ ಎಂ ಕೋಡಿಗೆ ಸ್ನಾನಕ್ಕೆಂದು ತೆರಳಿದ್ದರು. ಇಬ್ಬರು ಅರಬ್ಬಿ ಸಮುದ್ರಕ್ಕೆ ಇಳಿದ್ದಿದ್ದು ಅಲೆಯ ರಭಸಕ್ಕೆ ಮಂಜುನಾಥ ಎನ್ನುವರು ‌ಸಮುದ್ರದಲ್ಲಿ ಮುಳುಗಿದ್ದು, ಇನ್ನೊರ್ವ ಸಾವಿನ ಅಂಚಿನಿಂದ ಪಾರಾಗಿದ್ದಾನೆ. ಸ್ಥಳೀಯರ ಸಹಕಾರದಿಂದ ಮೃತ ಯುವಕನ ಶವವನ್ನು ಮೇಲಕ್ಕೆ ಎತ್ತಿದ್ದು, ಕುಂದಾಪುರದ ಶವಗಾರದಲ್ಲಿ ಇರಿಸಲಾಗಿದೆ. ಕುಂದಾಪುರ ಪೋಲಿಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಶಂಕರನಾರಾಯಣ: ಇಲ್ಲಿಗೆ ಸಮೀಪದ ಕುಳ್ಳುಂಜೆ ಗ್ರಾಮದ ಕೋವಿನಗುಡ್ಡೆ ಎಂಬಲ್ಲಿ ಚಿಕ್ಕ ಗುಡಿಸಿಲಿನಲ್ಲಿ ದಯಾನೀಯ ಬದುಕು ಸಾಗಿಸುತ್ತಿದ್ದ ಸಾಂತು ಅಜ್ಜಿ ಎಂಬುವವರಿಗೆ ನೆಟ್ಟಿಗರು, ದಾನಿಗಳು, ಸರ್ಕಾರದ ನೆರವಿನಿಂದ ತಾ.ಪಂ ಸದಸ್ಯ ಕಲ್ಗದ್ದೆ ಉಮೇಶ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಸುಂದರ ಹಾಗೂ ಸುಸಜ್ಜಿತವಾದ ಮನೆ ಸಿದ್ಧಗೊಂಡು ಸೋಮವಾರ ಗೃಹ ಪ್ರವೇಶ ನೆರವೇರಿದೆ. ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ನೂತನ ಮನೆಯೊಳಕ್ಕೆ ದೀಪ ಬೆಳಗಿ, ವಯೋವೃದ್ದೆ ಸಾಂತಜ್ಜಿಯನ್ನು ಗೌರವಿಸಿದರು. ಬಳಿಕ ಅವರು ಮಾತನಾಡಿ, ಇದು ಪರಮಾತ್ಮನ ಪೂರ್ಣಾನುಗ್ರಹಕ್ಕೆ ಪಾತ್ರವಾಗುವ ಮಾನವೀಯ ಕಾರ್ಯ. ಉಮೇಶ ಶೆಟ್ಟರು ಅವರ ಸ್ನೇಹಿತರ ಪರಿಶ್ರಮವನ್ನು ಈ ಕುಟುಂಬ ಶಾಶ್ವತವಾಗಿ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಎಂದರು. ಮನೆ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದ ತಾ.ಪಂ. ಸದಸ್ಯ ಕಲ್ಗದ್ದೆ ಉಮೇಶ್ ಶೆಟ್ಟಿ ಮಾತನಾಡಿ, ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಬಂದಾಗ ಸಾಂತಜ್ಜಿ ಟಾರ್ಪಲ್ ಸೂರಿನ ಮನೆ ನೋಡಿದೇವು. ಸಾಂತಜ್ಜಿ ಅವರ ಮಗಳು, ಮೊಮ್ಮಗಳು ಬಿಟ್ಟು ಮತ್ಯಾರೂ ಇಲ್ಲ. ಮನೆ ನಿರ್ಮಿಸಿಕೊಳ್ಳುವ ಸ್ಥಿತಿಯಲ್ಲಿಯೂ ಇರಲಿಲ್ಲ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪ್ರ ಕನ್ನಡದ ಮೊದಲ ಹಾಗೂ ಪ್ರಸಿದ್ಧ ಆಲ್ಬಂ ಸಾಂಗ್ ‘ಪಣ್ಕ್ ಮಕ್ಕಳ್’ಗೆ ಸಾಹಿತ್ಯ ಬರೆದಿದ್ದ ಅಶೋಕ್ ನೀಲಾವರ (45) ಸೋಮವಾರ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ನೀಲಾವರದವರಾದ ಅಶೋಕ್ ಅವರು ಬೆಳಗಾವಿ ಜಿಲ್ಲೆ ಗೋಕಾಕ್‌ಗೆ ಬೇಕರಿಯ ಇಂಟೀರಿಯರ್ ಡಿಸೈನ್ ಕೆಲಸಕ್ಕಾಗಿ ತೆರಳಿದ್ದ ಸಂದರ್ಭ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚಿತ್ರಸಾಹಿತಿಯಾಗಿ ಗುರುತಿಸಿಕೊಂಡಿದ್ದ ಅಶೋಕ್ ಅವರು, ಪಣ್ಕ್ ಮಕ್ಕಳ್ ಭಾಗ -1 ಹಾಗೂ ಪಣ್ಕ ಮಕ್ಕಳ್ ಭಾಗ-2ರ ಎಲ್ಲಾ ಹಾಡುಗಳಿಗೂ ಸಾಹಿತ್ಯ ಬರೆದಿದ್ದರು. ಮೃಗಶಿರ, ಕತ್ತಲೆಕೋಣೆ, ಬೀಟ್ ಚಿತ್ರದ ಒಂದೊಂದು ಹಾಡಿಗೂ ಸಾಹಿತ್ಯ ಬರೆದಿದ್ದರು. ಮೃತರು ಮಗಳು, ಮಡದಿ ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ. ಮೃತರ ಅಗಲಿಕೆಗೆ ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸರಕಾರವು ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ-1 ಅವರು ರಾಜ್ಯಪಾಲರ ಆದೇಶಾನುಸಾರ ಅಧಿಸೂಚನೆ ಪ್ರಕಟಿಸಿದ್ದಾರೆ. ಕೆ. ಜಯಪ್ರಕಾಶ್ ಹೆಗ್ಡೆ ಅವರು ಮೂರು ಬಾರಿ ಶಾಸಕರಾಗಿ, ಒಂದು ಭಾರಿ ಮೀನುಗಾರಿಕಾ ಸಚಿವರಾಗಿ,  ಉಡುಪಿ ಚಿಕ್ಕಮಗಳೂರು ಸಂಸದರಾಗಿಯೂ ರಾಜಕೀಯದಲ್ಲಿ ಸೇವೆ ಸಲ್ಲಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ವರ್ಷಂಪ್ರತಿ ಜರಗುವ ಶ್ರೀದೇವರ ವಿಶ್ವರೂಪ ದರ್ಶನ ಸೇವೆಯು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ಸ್ವಾಮೀಜಿಯವರ ಆಜ್ಞಾನುಸಾರ ಸರಳವಾಗಿ ಧಾರ್ಮಿಕ ಕಾರ್ಯಕ್ರಮಗಳು ವಿಧಿವಿಧಾನಗಳೊಂದಿಗೆ ಜರಗಿದವು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್, ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ, ವೇದಮೂರ್ತಿ ಜಿ.ವೇದವ್ಯಾಸ ಆಚಾರ್ಯ, ಜಿ.ವೆಂಕಟೇಶ ನಾಯಕ್, ಸೇನಾಪುರ ಹಾಗೂ ಗಂಗೊಳ್ಳಿ ಆಚಾರ್ಯ ಕುಟುಂಬಸ್ಥರು, ಊರಿನ ಹತ್ತು ಸಮಸ್ತರು, ದೇವಳದ ಆಡಳಿತ ಮಂಡಳಿ ಸದಸ್ಯರು, ಭಜಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ zomato, Swiggy, Uber ets, Amazon ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿಗೆ ಸೇರಿದ ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ 25,000 ರೂ. ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸಾಲ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಫೇಕ್ಷಿಗಳು, ಅರ್ಜಿಗಳನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ನಿಗಮದ ವೆಬ್‌ಸೈಟ್ http://www.dbcdc.karnataka.gov.in ನಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಡಿಸೆಂಬರ್ 19 ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಅಥವಾ ಡಿ.ದೇವರಾಜ ಅರಸು ಹಿಂದುಳಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಂಬದಕೋಣೆಯ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಸಾಪ ತಾಲೂಕು ಘಟಕ ಮತ್ತು ಗೆಳೆಯರ ಬಳಗ ಬೈಂದೂರು ಇವರ ಆಶ್ರಯದಲ್ಲಿ ಬಿ. ಪ್ರವೀಣ ಶೆಟ್ಟಿ ಅವರ ‘ತುಂಬಿ ತುಳುಕಿದ ಸಾಲು’ ಕವನ ಸಂಕಲನ ಬಿಡುಗಡೆಗೊಳಿಸಲಾಯಿತು. ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷ ಡಾ. ಕಿಶೋರ ಕುಮಾರ ಶೆಟ್ಟಿ ಮಾತನಾಡಿ, ತನ್ನ ಸಮಾಜದ ಕುರಿತು ಚಿಂತಿಸುವ, ಬಡವರ ಕಷ್ಟಕ್ಕೆ ಮಿಡಿಯುವ ಸಾಹಿತ್ಯದಿಂದ ಸಾಮಾಜಿಕ ಸುಧಾರಣೆಗೆ ಹೊಸ ಸಾಧ್ಯತೆಗಳು ತೆರೆಯಲ್ಪಡುತ್ತದೆ. ಮನಸ್ಸಿನ ಯೋಚನೆ, ಹೃದಯದ ಭಾವನೆ ಆರೋಗ್ಯಕರವಾಗಿ ಬೆರೆತಾಗ ಸೃಜನಶೀಲ ಕವನ ಮೂಡಿಬರುತ್ತದೆ. ಆಧುನಿಕತೆಯ ಭರಾಟೆಯಲ್ಲಿ ನಮ್ಮನ್ನು ಕಳೆದುಕೊಳ್ಳುವ ಆತಂಕದಲ್ಲಿರುವ ನಾವು ಕಲೆ, ಸಾಹಿತ್ಯ, ಸಂಗೀತ ಮೊದಲಾದ ಪ್ರಕಾರಗಳಿಂದ ನೆಮ್ಮದಿ, ಸಂತೋಷವನ್ನು ಹುಡುಕಿಕೊಳ್ಳಬೇಕಾಗಿದೆ ಇಂಜಿನಿಯರ್ ಆಗಿದ್ದರು ಸಹ ತಾವು ಹೊರ ಪ್ರಪಂಚದಲ್ಲಿ ಕಂಡು, ಕೇಳಿದ ವಿಚಾರಗಳನ್ನು ಆಂತರಂಗಿಕವಾಗಿ ವಿಮರ್ಶಿಸಿ ಕವನ ರೂಪದಲ್ಲಿ ಹೊರಹಾಕಿದ್ದಾರೆ. ಇಂದಿನ ಯುವ ಬರಹಗಾರರಿಗೆ ಇವರ ಕವಿತೆಗಳು ಹೊಸ ಆಯಾಮವನ್ನು ತೋರಿಸುತ್ತದೆ. ವಿಭಿನ್ನ…

Read More