Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ ನಾಗೋಡಿ ಘಾಟ್ ಹತ್ತಿರ ಬೀಳುತ್ತಿರುವ ಅತಿಯಾದ ಮಳೆಯಿಂದಾಗಿ ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ 766ಸಿ ರಸ್ತೆಯು ಬಿರುಕು ಬಿಟ್ಟಿರುವದರಿಂದ , ಸಾರ್ವಜನಿಕ ಹಿತದೃಷ್ಠಿಯಿಂದ ಈ ಮಾರ್ಗದಲ್ಲಿ ಜೂನ್ 16 ರಿಂದ ಆಗಸ್ಟ್ 30 ರ ವರೆಗೆ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗವಾಗಿ, ನಗರ-ಹುಲಿಕಲ್  ಘಾಟ್-ಹೊಸಂಗಡಿ-ಸಿದ್ದಾಪುರ ಮಾರ್ಗದಿಂದ ಸಂಚರಿಸಲು ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶಿಸಿದ್ದಾರೆ. ► ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧ – https://kundapraa.com/?p=49470 . ► ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ಯಾಕ್ಸಿಗಳ ಪ್ರಯಾಣ ದರ ಪರಿಷ್ಕರಣೆ – https://kundapraa.com/?p=49466 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರವನ್ನು ಶೇ.5% ಕ್ಕಿಂತ ಕಡಿಮೆಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ವೀಡಿಯೋ ಸಂವಾದದ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲ್ಲೆಯ ಕೋವಿಡ್ ಪಾಸಿಟಿವಿಟಿ ದರವನ್ನು 5% ಗಿಂತ ಕಡಿಮೆಗೊಳಿಸಬೇಕು ಎಂಬ ಷರತ್ತಿನೊಂದಿಗೆ ಜಿಲ್ಲೆಯಲ್ಲಿ ಅನ್ಲಾಕ್ ಮಾಡಲು ಸರ್ಕಾರ ಆದೇಶಿಸಿದ್ದು, ಈ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡು ಪಾಸಿಟಿವಿಟಿ ಪ್ರಮಾಣವನ್ನು ಕಡಿಮೆಗೊಳಿಸಬೇಕು, ಅನ್ಲಾಕ್ ಅವಧಿಯಲ್ಲಿ ಜನಜಂಗುಳಿ ಉಂಟಾಗದತೆ ಕಡ್ಡಾಯವಾಗಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆಯಾಗುವಂತೆ ನೋಡಿಕೊಳ್ಳಬೇಕು, ಈ ಬಗ್ಗೆ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯಿಂದ ಪರಿಶೀಲನೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಬೊಮ್ಮಾಯಿ ಸೂಚಿಸಿದರು. ಐಎಲ್ಐ ಮತ್ತು ಸಾರಿ ಪ್ರಕರಣಗಳನ್ನು ಬೇಗನೆ ಗುರುತಿಸಿ ಅಗತ್ಯ ಚಿಕಿತ್ಸೆ ನೀಡಬೇಕು, ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಗಳನ್ನು ನೆಡೆಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಹಲವು ವರ್ಷಗಳ ಬೇಡಿಕೆ ಇರುವ ಸರ್ಕಾರಿ ವೈದ್ಯಕೀಯ ಕಾಲೇಜು ಇನ್ನೂ ಕೂಡ ಉಡುಪಿ ಜಿಲ್ಲೆಗೆ ಒದಗಿ ಬಂದಿಲ್ಲ. ಒಂದು ವಿದ್ಯಾರ್ಥಿ ಅವನ ಶಾಲಾ ಜೀವನದಲ್ಲಿ ಇರುವಾಗಲೇ ಆತನೊಬ್ಬ ವೈದ್ಯನಾಗಬೇಕೆಂಬ ಕನಸನ್ನು ಇಟ್ಟುಕೊಂಡು ಅದರ ಹಿಂದೆ ಬಹಳಷ್ಟು ಶ್ರಮವಹಿಸುತ್ತಾನೆ. ಆದರೆ ನೀಟ್ ಪರೀಕ್ಷೆ ಬರೆದ ನಂತರ ಕಾಲೇಜು ಪ್ರವೇಶ ಸಮಯದಲ್ಲಿ ಅಲ್ಲಿಯ ಶುಲ್ಕ ರಚನೆ ನೋಡಿದಾಗ ಅವನ ಕನಸನ್ನು ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷಗಟ್ಟಲೆ ಫೀಸು ನೀಡಲು ಸಾಧ್ಯವಾಗದೆ,ಮತ್ತು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದೆ ಇರುವುದರಿಂದ ಆ ವಿದ್ಯಾರ್ಥಿ ಶಿಕ್ಷಣದಿಂದ ಹಿಂಜರಿಯುತ್ತಾನೆ ಎಂದು ಉಡುಪಿ ಜಿಲ್ಲೆಯ ಕ್ಯಾಂಪಸ್ ಫ್ರಂಟ್ ಜಿಲ್ಲಾಧ್ಯಕ್ಷರಾದ ಅಸೀಲ್ ಅಕ್ರಂ ಹೇಳಿದರು. ಅವರು ಉಡುಪಿ ಪ್ರೆಸ್ ಕ್ಲಬ್‌ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ವಿಚಾರದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಬರುವಂತಹ ಬಜೆಟ್ ಅಧಿವೇಶನದಲ್ಲಿ ಈ ವಿಷಯವನ್ನು ಉಲ್ಲೇಖಿಸಬೇಕೆಂದು ಮನವಿ ಮಾಡಲಾಯಿತು. ಮನವಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುತ್ತಿರುವ ಉಡುಪಿ ಜಿಲ್ಲೆ ಸಹಿತ 6 ಜಿಲ್ಲೆಗಳಿಗೆ ಲಾಕ್ಡೌನ್ ಸಡಿಲಿಕೆ ಮಾರ್ಗಸೂಚಿ ಪರಿಷ್ಕರಿಸಿ ಸರಕಾರ ಆದೇಶ ಹೊರಡಿಸಿದೆ. ಕೆಟಗರಿ 1ರ ಜಿಲ್ಲೆಗಳಿಗೆ ನೀಡಲಾಗಿರುವ ಕೋವಿಡ್ ಮಾರ್ಗಸೂಚಿಯ ವಿನಾಯತಿಗಳು ಈ ಜಿಲ್ಲೆಗಳಿಗೆ ಅನ್ವಯವಾಗಲಿದ್ದು, ಸಂಜೆ 5 ಗಂಟೆಯ ತನಕ ಅನುಮತಿಸಲಾಗಿರುವ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಕೆಟಗರಿ 1ರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳು ಅನ್ವಯವಾಗಿದೆ. • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು. • ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು. • ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. • ಬಸ್ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ. • ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ. • ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ…

Read More

ಕುಂದಾಪ್ರ ಡಾಡ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಮುಂಗಾರು ಹಂಗಾಮಿನ ಅಧಿಸೂಚಿತ ಬೆಳೆಯ ವಿವರ: ಅಧಿಸೂಚಿತ ಬೆಳೆ ಭತ್ತ( ಮಳೆಯಾಶ್ರಿತ), ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳು ಅಧಿಸೂಚಿತ ಘಟಕಗಳಾಗಿದ್ದು, ವಿಮಾ ಮೊತ್ತ ಪ್ರತಿ ಹೆ.ಗೆ ರೂ. 55000, ವಿಮಾ ಕಂತಿನ ದರ ಪ್ರತಿ ಹೆ.ಗೆ ರೂ 1100(2%) ಆಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನ, ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ/ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತುಆಧಾರ್ ಸಂಖ್ಯೆಗಳನ್ನು ಒದಗಿಸಿ ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಬಹುದಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅನುದಾನಿತ ಪ್ರೌಢ, ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳನ್ನು ದಾಖಲಾತಿ ಮಾಡುವಂತೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಅನುದಾನಿತ ಪ್ರೌಢ ಶಾಲೆಗಳ ಪಟ್ಟಿ: ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲೆ, ಹೆಮ್ಮಾಡಿ ಜನತಾ ಪ್ರೌಢಶಾಲೆ, ನಾಡ ಗ್ರಗರಿ ಪ್ರೌಢಶಾಲೆ, ಕೊಲ್ಲೂರಿನ ಶ್ರೀ ಮೂಕಾಂಬಿಕಾ ಟೆಂಪಲ್ ಪ್ರೌಢಶಾಲೆ, ಮುದೂರಿನ ಭಾರತ್ ಮಾತಾ ಪ್ರೌಢಶಾಲೆ. ಅನುದಾನಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಪಟ್ಟಿ: ಮೈಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿ ಪ್ರಾ ಶಾಲೆ, ಮುದೂರು ಶ್ರೀ ಮಾತಾ ಹಿರಿಯ ಪ್ರಾಥಮಿಕ ಶಾಲೆ, ಪಡುಕೋಣೆಯ ಸೇಂಟ್ಅಂತೋನಿ ಹಿರಿಯ ಪ್ರಾಥಮಿಕ ಶಾಲೆ, ಗುಡ್ಡೆ ಅಂಗಡಿಯ ಸೇಂಟ್ಅಂತೋನಿ ಕಿರಿಯ ಪ್ರಾಥಮಿಕ ಶಾಲೆ, ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಆಲೂರು ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆ, ಮೂಡಮುಂದ ಶಾರದ ಹಿರಿಯ ಪ್ರಾಥಮಿಕ ಶಾಲೆ, ಪಡುವರಿಯ ಹೋಲಿಕ್ರಾಸ್ ಹಿರಿಯ ಪ್ರಾಥಮಿಕ ಶಾಲೆ, ತ್ರಾಸಿಯ ಕಲ್ಲಾನಿ ಹಿರಿಯ ಪ್ರಾಥಮಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಜೂನ್ 19: ಜಿಲ್ಲೆಯಲ್ಲಿ ತೌಖ್ತೆ ಚಂಡಮಾರುತದಿಂದ ಸಮುದ್ರ ಕೊರೆತ ಉಂಟಾಗಿ ಹಾನಿಗೊಳಗಾದ ಬೈಂದೂರು ತಾಲೂಕು ಮರವಂತೆಯ 1.5 ಕಿಮೀ ರಸ್ತೆಯ ಮರು ನಿರ್ಮಾಣಕ್ಕೆ ತಕ್ಷಣವೇ 3 ಕೋಟಿ ರೂ ಗಳನ್ನು ಬಿಡುಗಡೆಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾ ದಿಂದ ರಾಜ್ಯದ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು, ಸಂಬಂಧಿಸಿದ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗೆ ತೌಖ್ತೆ ಚಂಡಮಾರುತ ಸಂದರ್ಭದಲ್ಲಿ ಮರವಂತೆಯಲ್ಲಿ 1.5 ಕಿಮೀ ರಸ್ತೆ ಹಾನಿಯಾದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಮುಖ್ಯಮಂತ್ರಿಗಳ ಗಮನಕ್ಕೆ ತಂದರು, ಪ್ರಸ್ತುತ ಹಾಳಾಗಿರುವ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿದ್ದು, ರಸ್ತೆಯನ್ನು ಪುನರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳು ಲಾಕ್ಡೌನ್ ಸಡಿಲಿಕ್ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ. ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ…

Read More

ಆಟ ಪಾಠವೆಂದು ಓಡಾಡಿಕೊಂಡಿದ್ದ ಮಕ್ಕಳು ಈಗ ಟಿವಿ ಮುಂದೆ ಕುಳಿತು, ಹಾಳುಮೂಳು ತಿಂದು ಮೈತೂಕ ಹೆಚ್ಚಿಸಿಕೊಳ್ಳುತ್ತಿರುವುದು ಸಾಮಾನ್ಯ ಆಗಿಬಿಟ್ಟಿದೆ. ಮನೆಯಲ್ಲೇ ಕುಳಿತು ಉಣ್ಣುವುದು ತಿನ್ನುವುದು, ಸಾಕಷ್ಟು ವ್ಯಾಯಾಮ ಇಲ್ಲದಿರುವುದರಿಂದ ಉಂಟಾಗುವ ಮಕ್ಕಳ ಬೊಜ್ಜು ಅತ್ಯಂತ ಹಾನಿಕರ. ಇಂಥ ಅನಗತ್ಯ ಬೊಜ್ಜಿನಿಂದ ಟೈಪ್ 2 ಡಯಾಬಿಟೀಸ್ ಬರುವ ಸಾಧ್ಯತೆ ಇದೆ. ಹಾಗಾಗಿ ಬೊಚ್ಚು ಬಾರದಂತೆ ತಡೆಯಲು ಕೆಲವೊಂದು ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಕೊಳ್ಳುವಂತೆ ಮಾಡುವುದು ಅಗತ್ಯ. ಆಟ-ವ್ಯಾಯಾಮ ದಿನವೂ ಇರಲಿ: ಮಗು ದಿನದಲ್ಲಿ ಕನಿಷ್ಠ ಎರಡು ಗಂಟೆ ಆಡಲಿ, ನಡೆದಾಡಲಿ, ಓಡಲಿ, ವ್ಯಾಯಾಮ ಮಾಡಲಿ. ಸುರಕ್ಷಿತವೆನಿಸಿದರೆ ಪಾರ್ಕಿಗೆ ಕರೆದೊಯ್ದು ನಡೆದಾಡಿಸಿ. ಇಲ್ಲವಾದರೆ ಮನೆಯಲ್ಲೇ ಸ್ಕಿಪ್ಪಿಂಗ್, ಜಾಗಿಂಗ್, ಜಂಪಿಂಗ್ ಮಾಡಲಿ, ನೂರು ಬಾರಿ ಮೆಟ್ಟಿಲು ಹತ್ತಿ ಇಳಿಯುವುದು ಮಾಡಲಿ. ರಾತ್ರಿಯ ಹೊತ್ತಿಗೆ ಮಗು ಸಾಕಷ್ಟು ದಣಿಯಲಿ. ಅಂದರೆ ನಿದ್ರೆ ಚೆನ್ನಾಗಿ ಬರುತ್ತದೆ. ಆಟಕ್ಕೆ ಟೈಮ್‌ಟೇಬಲ್ ನಿಗದಿಪಡಿಸಿ, ಅದನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾಡಿ. ನಿದ್ರೆ ಸಾಕಷ್ಟಿರಲಿ: 3ರಿಂಧ 5 ವರ್ಷದ ಮಕ್ಕಳು ದಿನದಲ್ಲಿ ಕನಿಷ್ಠ 10 ಗಂಟೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಸಮಾಜ ಕಲ್ಯಾಣ ಇಲಾಖೆಯು 2021/22ನೇ ಸಾಲಿನಲ್ಲಿ ಹಿರಿಯ ವಕೀಲರ ಬಳಿ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ಕಾನೂನು ಪದವಿಧರರಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖಾ ವೆಬ್‌ಸೈಟ್ https://www.sw.kar.nic.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 1 ರಿಂದ ಆಗಸ್ಟ್ 14ರವರೆಗೆ ಅವಧಿ ವಿಸ್ತರಿಸಲಾಗಿದೆ. ಇಲಾಖೆಯು ಹೊರಡಿಸಿರುವ ನಿಭಂದನೆಗಳಿಗೆ ಒಳಪಟ್ಟು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸೂಕ್ತ ದಾಖಲೆಗಳನ್ನು 15 ದಿನಗಳ ಒಳಗಾಗಿ ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ , ರಜತಾದ್ರಿ, ಮಣಿಪಾಲ. ಇಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More