ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ನಿಯಮದಂತೆ ಆಹಾರ ಧಾನ್ಯ ಪಡೆಯುತ್ತಿರುವ (ಬಿಪಿಎಲ್, ಎಎವೈ & ಎಪಿಎಲ್) ಕಾರ್ಡುದಾರರು ಹೊಸದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡಿನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿಯನ್ನು ಅಪ್ಲೋಡ್ ಮಾಡುವ ಕಾರ್ಯ ಜನವರಿ 1 ರಿಂದ ಪ್ರಾರಂಭಿಸಲಾಗಿದೆ. ತಂತ್ರಾಂಶದಲ್ಲಿ ಮಾಹಿತಿ ಅಪ್‌ಲೋಡ್ ಮಾಡುವಾಗ ಪಡಿತರ ಕಾರ್ಡಿನ ಕುಟುಂಬದ ಹಿರಿಯ ಮಹಿಳಾ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಬೇಕು ಮತ್ತು ಹೊಸ ಕುಟುಂಬದ ಮುಖ್ಯಸ್ಥರೊಂದಿಗೆ (ಹಿರಿಯ ಮಹಿಳಾ ಸದಸ್ಯ) ಇತರೆ ಸದಸ್ಯರ ಸಂಬಂಧದ ವಿವರಗಳನ್ನು ಹಾಗೂ ಪಡಿತರ ಚೀಟಿದಾರರ ಜಾತಿಯ ವಿವರವನ್ನು (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಇತರೆ) ಜಾತಿ ಪ್ರಮಾಣ ಪತ್ರ ವಿವರಗಳನ್ನು ಸಹ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಜಾತಿಯವರಾಗಿದ್ದಲ್ಲಿ ಸದ್ರಿ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ನ್ಯಾಯಬೆಲೆ ಅಂಗಡಿಗೆ ಬರಬೇಕಾಗುವುದು. ನ್ಯಾಯಬೆಲೆ ಅಂಗಡಿ ಮಾಲಿಕರು ಸದ್ರಿ ಜಾತಿ ಪ್ರಮಾಣ ಪತ್ರದ ಸಂಖ್ಯೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕ.ರಾ.ರ.ಸಾ.ನಿಗಮದ ವತಿಯಿಂದ ಮಂಗಳೂರಿನಿಂದ ಕುಮಟ ಮಾರ್ಗದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವೋಲ್ವೋ ಸಾರಿಗೆ ಸೌಲಭ್ಯವನ್ನು ಜನವರಿ 4 ರಿಂದ ಪ್ರಾರಂಭಿಸಲಾಗಿದೆ. ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಟು ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಹೊನ್ನಾವರ ಮಾರ್ಗವಾಗಿ ರಾತ್ರಿ 9.30 ಕ್ಕೆ ಕುಮಟಾ ತಲುಪಲಿದೆ. ಕುಮಟಾದಿಂದ ಮುಂಜಾನೆ 5.30 ಕ್ಕೆ ಹೊರಟು ಹೊನ್ನಾವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ ಮಾರ್ಗವಾಗಿ ಬೆಳಗ್ಗೆ 9.30 ಕ್ಕೆ ಮಂಗಳೂರು ತಲುಪಲಿದೆ. ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್‌ಒಪಿರಲ್ಲಿಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರೌಂಡ್ ರೈಡರ್ಸ್ ಗಂಗೊಳ್ಳಿ ಆಶ್ರಯದಲ್ಲಿ ಇಲ್ಲಿನ ಸ.ವಿ.ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಬೈಂದೂರು ವಲಯ ಮಟ್ಟದ ಲೀಗ್ ಮಾದರಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ನಡೆಯಿತು. ತಾಲೂಕು ಗಾಣಿಗ ಸಂಘದ ಉಪಾಧ್ಯಕ್ಷ ಪ್ರಮೋದ ಗಾಣಿಗ ಪಂದ್ಯಾಟವನ್ನು ಉದ್ಘಾಟಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಹರೀಶ ಖಾರ್ವಿ, ಗ್ರಾಪಂ ಸದಸ್ಯೆ ಶಾಂತಿ ಖಾರ್ವಿ, ಸತೀಶ್ ಜಿ., ಗೋಪಾಲ ಚಂದನ ಮತ್ತಿತರರು ಉಪಸ್ಥಿತರಿದ್ದರು. ಗಂಗೊಳ್ಳಿಯ ವಿಶ್ವಾಸ ಗಂಗೊಳ್ಳಿ ತಂಡ ಎವರ್‌ಗ್ರೀನ್ ವಿಶ್ವಸಾಗರ ಗಂಗೊಳ್ಳಿ ತಂಡವನ್ನು ಸೋಲಿಸಿ ಗ್ರೌಂಡ್ ರೈಡರ್ಸ್ ಟ್ರೋಫಿ – 2021ನ್ನು ಗೆದ್ದುಕೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾದ್ಯಕ್ಷೆ ಪ್ರೇಮಾ ಸಿ.ಪೂಜಾರಿ ಮತ್ತುಉಡುಪಿ ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷೆ ಡಾ.ವೀಣಾ ಕಾರಂತ ವಿಜೇತ ತಂಡಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಬ್ಯಾಂಕ್ ಹಂಗಳೂರು ಶಾಖೆಯಲ್ಲಿ ಸೇವಾ ನಿವೃತ್ತಿ ಹೊಂದಿದ ನಾಗರಾಜ ಹೊಳ್ಳ ಇವರನ್ನು ಶಾಖೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡೆಗೆ ನೀಡಲಾಯಿತು. ಈ ಸಂದರ್ಭದಲ್ಲಿ ಮ್ಯಾನೇಜರ್ ರವೀಂದ್ರ ಅಧ್ಯಕ್ಷತೆ ವಹಿಸಿದ್ದರು, ನಾಗರಾರಾಜ ಹೊಳ್ಳ, ಜಯಂತಿ, ಗೀತಾ ಸುಷ್ಮಾ, ಕಲ್ಪನ, ಉಷಾ, ಕೃಷ್ಣ ನಾಯಕ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಸಿಸ್ಟೆಂಟ್ ಮ್ಯಾನೇಜರ್ ಪ್ರಜ್ವಲ್ ಸ್ವಾಗತ ಹಾಗೂ ವಂದನೆಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವರ್ಣಮುಖಿ ರಂಗಮಂಟಪದಲ್ಲಿ ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹ ಸಮಾರಂಭ ಜರುಗಿತು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಸರಳ ಮದುವೆ ಬಗ್ಗೆ ಯುವಪೀಳಿಗೆ, ಜನಸಾಮಾನ್ಯರು ಹಾಗೂ ಮಧ್ಯಮ ವರ್ಗದವರ ಆಶಯದಿಂದ ಈ ಸರಳ ವಿವಾಹ ಯೋಜನೆ ಆಯೋಜಿಸಲಾಗಿದ್ದು, ಈ ಮೂಲಕ ಸಮಾಜದಲ್ಲಿ ಆದರ್ಶ ಪ್ರಾಯ ಜೀವನ ನಡೆಸುವಂತಾಗಲಿ ಎಂಬ ಹರಕೆ, ಹಾರೈಕೆ ಸರಕಾರದ್ದು ಎಂದ ಹೇಳಿದರು. ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅದ್ದೂರಿಯಲ್ಲಿ ಒಬ್ಬರನೊಬ್ಬರು ಮೀರಿಸುವಂತ ಪೈಪೋಟಿಯಲ್ಲಿ ತಮ್ಮ ಮಕ್ಕಳ ಮದುವೆಗಳಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡುವ ಮೂಲಕ ಅನಗತ್ಯ ದುಂದುವೆಚ್ಚ ಮಾಡುತ್ತಿರುವುದು ಕಾಣಬಹುದಾಗಿದೆ. ಇದರಿಂದ ಸಾಮಾನ್ಯ ಜನರಿಗೆ ಆರ್ಥಿಕವಾಗಿ ಹಿನ್ನಡೆಯಾಗಿ ಸಾಲದ ಸುಳಿಯಲ್ಲಿ ಬೀಳುತ್ತಾರೆ. ಇದಕ್ಕಿಂತ ಸರಳ ಹಾಗೂ ಸಾಮೂಹಿಕ ವಿವಾಹ ಮಡಿಕೊಳ್ಳುವುದರಿಂದ ಆರ್ಥಿಕ ಹೊರೆ ತಗ್ಗಿಸಬಹುದು. ಈ ನಿಟ್ಟಿನಲ್ಲಿ ಕಂಕಣಭಾಗ್ಯ ಕೂಡಿಬಂದ ಯುವಜನತೆ ಸರ್ಕಾರದ ಸಪ್ತಪದಿ ಯೋಜನೆ ಪ್ರಯೋಜನ ಪಡೆಯಬೇಕು ಎಂದು ಸಲಹೆ ನೀಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುರಸಭೆ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದ ನಿರಂತರ ನೀರು ಪೂರೈಕೆ ಕಾಮಗಾರಿ ಕುರಿತು ವಿವರಣೆ ನೀಡಬೇಕಿದ್ದ ಅಧಿಕಾರಿ ಸಭೆಗೆ ಗೈರಾಗಿದ್ದು, ಅವರಿಲ್ಲದೆ ಯೋಜನೆ ಕುರಿತು ಚರ್ಚೆ ಅಸಾಧ್ಯ. ಅಧಿಕಾರಿ ಸಮಯ ಪಡೆದು ಮತ್ತೊಮ್ಮೆ ಸಭೆ ಕರೆಯಬೇಕು. ಒಳಚರಂಡಿ ಯೋಜನೆ ಕಾಮಗಾರಿ ಮುಗಿಸಲು ಎಷ್ಟು ಸಮಯ ಬೇಕು.. ಪುರಸಭೆ ವೆಟ್‌ವೆಲ್ ನಿರ್ಮಾಣಕ್ಕೆ ಜಾಗ ಕೊಟ್ಟ ಎರಡು ವರ್ಷದಲ್ಲಿ ಕಾಮಗಾರಿ ಮುಗಿಸುತ್ತೇವೆ. ಇವೆಲ್ಲವೂ ಕುಂದಾಪುರ ಪುರಸಭೆ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ಜಲಸಿರಿ ಹಾಗೂ ಒಳ ಚರಂಡಿ ಯೋಜನೆ ಕುರಿತು ನಡೆದ ವಿಶೇಷ ಸಭೆಯಲ್ಲಿ ಚರ್ಚಿಗೆ ಬಂದ ಪ್ರಮುಖ ಅಂಶಗಳು. ಜಲಸಿರಿ ಯೋಜನೆ ಬಗ್ಗೆ ಸದಸ್ಯ ಮೋಹನದಾಸ್ ಶೆಣೈ ಮಾತನಾಡಿ, ಇಷ್ಟು ದೊಡ್ಡ ಯೋಜನೆ ಬಗ್ಗೆ ವಿಶೇಷ ಸಭೆ ಆಯೋಜಿಸಿ ಮುಂಚಿತ ಮಾಹಿತಿ ನೀಡಿದರೂ ಸಭೆಗೆ ಯೋಜನೆಯ ಮುಖ್ಯಾಧಿಕಾರಿ ಬಂದಿಲ್ಲ. ಬೇರೆಯವರು ಕೊಡುವ ಸಮಜಾಯಿಸಿ ನಮಗೆ ಬೇಕಿಲ್ಲ. ಸಭೆಗೆ ಮಾಹಿತಿ ನೀಡಿಯೂ ಬಾರದಿರುವುದು ಪುರಸಭೆ ಹಾಗೂ ಸದಸ್ಯರಿಗೆ ಮಾಡಿದ ಅವಮಾನ. ಅಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ತ್ರಾಸಿ ಚರ್ಚ್‌ನ ಧರ್ಮಗುರು ಚಾರ್ಲ್ಸ್ ಲೂವಿಸ್ ಅವರ ಗುರುದೀಕ್ಷೆಯ 50 ವರ್ಷ ಪೂರೈಸಿದ ಅಂಗವಾಗಿ ತ್ರಾಸಿ ಚರ್ಚ್‌ನ ಸಭಾಂಗಣದಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಉಡುಪಿ ಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೋ ಅವರು ಚಾರ್ಲ್ಸ್ ಲೂವಿಸ್ ಅವರನ್ನು ಗೌರವಿಸಿ ಆಶೀರ್ವಚನ ನೀಡಿದರು. ಧರ್ಮಗುರು ಜೋಸೆಫ್ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಾರ್ಜ್ ಡಿ’ಅಲ್ಮೇಡಾ ಮಾನಪತ್ರ ಹಸ್ತಾಂತರಿಸಿ ಶುಭ ಹಾರೈಸಿದರು. ಧರ್ಮಗುರು ಅನಿಲ್ ಕರ್ನೆಲಿಯೊ, ಕುಂದಾಪುರ ವಲಯ ವಿಗಾರ್ ವಾರ್ ಸ್ಟ್ಯಾನಿ ತಾವ್ರೊ, ಸಹೋದರಿ ಗ್ಲೇಡಿಸ್, ಕುಂದಾಪುರ ವಲಯದ ವಿವಿಧ ಚರ್ಚಿನ ಧರ್ಮಗುರುಗಳು, ಚರ್ಚಿನ 18 ಆಯೋಗದ ಸಂಚಾಲಕರು, ತ್ರಾಸಿ ಚರ್ಚಿನ ಪಾಲನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ತ್ರಾಸಿ ಚರ್ಚಿನ ಪಾಲನಾ ಮಂಡಳಿ ಉಪಾಧ್ಯಕ್ಷ ಮಾರ್ಕ್ ಡಿಅಲ್ಮೇಡಾ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಸಿಪ್ರಿಯಾನ್ ಡಿಸಿಲ್ವ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಶಾರದಾ ಕಾಲೇಜು, ಬಸ್ರೂರು ಐಕ್ಯೂಎಸಿ ಮತ್ತು ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ ವಿಭಾಗ ಮತ್ತು ಸಮುದಾಯ ಕುಂದಾಪುರ ಇದರ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ವೆಬಿನಾರ್ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಟ್ರಸ್ಟಿ ಸದಸ್ಯರಾದ ಉದ್ಯಮಿ ಗಣೇಶ ಶೆಟ್ಟಿ ಮೊಳಹಳ್ಳಿ, ಕೊರೋನಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಇಂದು ಹಮ್ಮಿಕೊಂಡಿರುವ ಜಿಡಿಪಿ ಮತ್ತು ಉದ್ಯೋಗ ಎಂಬ ವೆಬಿನಾರ್ ಕಾರ್ಯಕ್ರಮ ಅರ್ಥಪೂರ್ಣವಾಗಿದ್ದು, ವಿದ್ಯಾರ್ಥಿಗಳು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕನ್ನಡ ವಿಶ್ವವಿದ್ಯಾನಿಲಯದ ಹಂಪಿ ಇದರ ಅಭಿವೃದ್ಧಿ ಅಧ್ಯಯನ ಕೇಂದ್ರದ ನಿವೃತ್ತ ಪ್ರಾಧ್ಯಾಪಕರಾದ ಡಾ.ಚಂದ್ರ ಪೂಜಾರಿ ಮಾತನಾಡಿ, ಜಿಡಿಪಿ ದೇಶದ ಒಟ್ಟಾರೆ ಆಂತರಿಕ ಉತ್ಪನ್ನ ಹಾಗೂ ಆರ್ಥಿಕ ಗಾತ್ರವನ್ನು ಸಂಕೇತಿಸುತ್ತಿದ್ದು, ಜನರ ಖರೀದಿ ಸಾಮರ್ಥ್ಯ, ದೇಶೀಯ ಹಾಗೂ ವಿದೇಶಿಹೂಡಿಕೆ, ಉದ್ಯೋಗ ಸೃಷ್ಟಿ, ಸೇವಾ ವಲಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಸರ್ಕಾರ ಉತ್ಪಾದನಾ ವಲಯ ಚೇತರಿಕೆಗೆ, ಕೃಷಿ ಕ್ಷೇತ್ರಕ್ಕೆ ಬೆಂಬಲ, ಉದ್ಯೋಗ ಸೃಷ್ಟಿಯಾಗಬಲ್ಲ ಯೋಜನೆಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮ ಪಂಚಾಯಿತಿ ಮತ್ತು ರೋಟರಿ ಕ್ಲಬ್ ಆಶ್ರಯದಲ್ಲಿ ‘ಮಕ್ಕಳಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನದ ಅಂಗವಾಗಿ ಈಚೆಗೆ ಜರುಗಿದ ‘ಓದುವ ಬೆಳಕು’ ಕಾರ್ಯಕ್ರಮಕ್ಕೆ ಚಾಲನೆ ನಿಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ ಗ್ರಾಮ ಪಂಚಾಯಿತಿಯನ್ನು ಮಕ್ಕಳ ಸ್ನೇಹಿಯಾಗಿ ಮಾಡಲು ಪ್ರಯತ್ನಿಸಲಾಗುವುದು ಹೇಳಿದರು. ಪಂಚಾಯಿತಿ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರು, ಕಾರ್ಯದರ್ಶಿ ದಿನೇಶ ಶೇರುಗಾರ್, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ. ಲಕ್ಷ್ಮೀಕಾಂತ ಮಡಿವಾಳ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷೆ ತಿಲೋತ್ತಮಾ ನಾಯಕ್, ಊರಿನ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು ಉಪಸ್ಥಿತರಿದ್ದರು. ನಿಶಾ ಪೂಜಾರಿ ನಿರೂಪಿಸಿದರು. ವಿದ್ಯಾರ್ಥಿ ಶ್ರೀಶ ಖಾರ್ವಿ ಸ್ವಾಗತಿಸಿದರು. ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತನುಶ್ರೀ ಖಾರ್ವಿ ವಂದಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಪ್ರಸಕ್ತ ಸಾಲಿಗೆ ಕಿರುಸಾಲ ಯೋಜನೆಯಡಿ ಸ್ತ್ರಿ ಶಕ್ತಿ ಸ್ವಸಹಾಯ ಗುಂಪುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು 3 ಲಕ್ಷ ರೂ. ಮೇಲ್ಪಟ್ಟು ಉಳಿತಾಯ ಇರುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಸ್ತ್ರಿ ಶಕ್ತಿ ಸ್ವಸಹಾಯ ಗುಂಪುಗಳಿಗೆ 3 ಲಕ್ಷ ಹಾಗೂ 2 ಲಕ್ಷ ರೂ. ಮೇಲ್ಪಟ್ಟು ಉಳಿತಾಯ ಇರುವ ಇತರೆ ಸ್ತ್ರಿ ಶಕ್ತಿ ಸ್ವ-ಸಹಾಯ ಗುಂಪುಗಳಿಗೆ 2 ಲಕ್ಷ ರೂ. ಬಡ್ಡಿ ರಹಿತ ಸಾಲ ನೀಡಲು, ಸ್ತ್ರಿ ಶಕ್ತಿ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978 ನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
