Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಚುನಾವಣಾ ಪ್ರಚಾರಕ್ಕಾಗಿ ಅಭ್ಯರ್ಥಿಗಳು ವಿವಿಧ ಪ್ರಚಾರ ತಂತ್ರಗಳನ್ನು ಅನುಸರಿಸುವುದು ಸಾಮಾನ್ಯ. ಹೀಗೆ ಕೊಂಬು ಕಹಳೆಯನ್ನು ಚುನಾವಣಾ ಚಿಹ್ನೆಯಾಗಿ ಪಡೆದಿದ್ದ ಅಭ್ಯರ್ಥಿಯೊರ್ವರು ಕಹಳೆಯ ಮೂಲಕವೇ ತಮ್ಮ ವಾರ್ಡಿನಲ್ಲಿ ಪ್ರಚಾರ ನಡೆಸಿ ಮತದಾರರ ಗಮನ ಸೆಳೆದಿದ್ದಾರೆ. ತಾಲೂಕಿನ ಬಿಜೂರು ಗ್ರಾಮ ಪಂಚಾಯತ್ 1ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಸತೀಶ್ ಶೆಟ್ಟಿ ಎಂಬುವರು ಕೊಂಬು ಕಹಳೆಯೊಂದಿಗೆ ಪ್ರಚಾರಕ್ಕೆ ತೆರಳಿ ಗಮನ ಸೆಳೆದಿದ್ದು ಈ ಚಿತ್ರವೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸತೀಶ್ ಶೆಟ್ಟಿಯವರು ಈ ಹಿಂದೆ ಎರಡು ಬಾರಿ ಬಿಜೂರು ಗ್ರಾಮ ಪಂಚಾಯತ್ ಸದಸ್ಯರಾಗಿ ಒಮ್ಮೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಣಾಜೆಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ 41ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಪ್ರೊ. ಕರುಣಾಕರ್ ಎ. ಕೋಟೆಗಾರ್ ಅವರು ತಯಾರಿಸಿದ ‘ರಾಷ್ಟ್ರೀಯ ಶಿಕ್ಷಣ ನೀತಿ- 2020’ ವೀಡಿಯೊ ಸರಣಿಯನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಆನ್‌ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಕರುಣಾಕರ್ ಅವರನ್ನು ವಿವಿ ವತಿಯಿಂದ ಸನ್ಮಾನಿಸಲಾಯಿತು. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕೈಗಾ ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಆರ್. ಸತ್ಯನಾರಾಯಣ ಅತಿಥಿಗಳಾಗಿದ್ದರು. ಕುಲಸಚಿವ ರಾಜು ಮೊಗವೀರ ಸ್ವಾಗತಿಸಿದರು. ಪ್ರೊ. ರವಿಶಂಕರ ರಾವ್ ಮತ್ತು ಡಾ. ಧನಂಜಯ ಕುಂಬ್ಳೆ ನಿರೂಪಿಸಿದರು. ಹಣಕಾಸು ಅಧಿಕಾರಿ ಪ್ರೊ. ಬಿ. ನಾರಾಯಣ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಂಚಾಯತ್‌ರಾಜ್ ವ್ಯವಸ್ಥೆಯೆಂಬುದು ಆಳಿಸಿಕೊಳ್ಳುವವರ ಆಡಳಿತವಾಗಿದ್ದು, ಗ್ರಾಮ ಸರಕಾರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸುವ ವಿಶ್ವಾಸವಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ಸೋಮವಾರ ಬೈಂದೂರಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ 154 ಗ್ರಾಮ ಪಂಚಾಯತ್‌ನಲ್ಲಿ ಚುನಾವಣೆ ನಡೆಯಲಿದೆ. ಬೈಂದೂರು ವಿಧಾನಸಭಾ ವ್ಯಾಪ್ತಿಯ 39 ಪಂಚಾಯತಿಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸುವುದು ನಿಶ್ಚಿತ. ಗ್ರಾಮ ಮಟ್ಟದಲ್ಲಿ ಪಾರದರ್ಶಕ ಆಡಳಿತ ನೀಡಲು ಬದ್ಧರಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಅವಕಾಶ ನೀಡುವಂತೆ ಮತದಾರರಿಗೆ ಮನವಿ ಮಾಡಿದರು. ಈ ಸಂದರ್ಭ ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ, ಉಪಾಧ್ಯಕ್ಷೆ ಮಾಲಿನಿ ಕೆ., ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಪುಪ್ಪರಾಜ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಶೆಟ್ಟಿ ತಗ್ಗರ್ಸೆ, ಜಿಲ್ಲಾ ಬಿಜೆಪಿಯ ಸದಾನಂದ ಉಪ್ಪಿನಕುದ್ರು, ಬೈಂದೂರು ಬಿಜೆಪಿ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ಬೆಸ್ಕೂರು, ಪ್ರಕಾಶ್ ಜೆಡ್ಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಡಿ.22ರಂದು ತಾಲೂಕಿನ 15 ಗ್ರಾಮ ಪಂಚಾಯತಿಗಳಿಗೆ ನಡೆಯಲಿರುವ ಚುನಾವಣೆಗೆ ಸರ್ವ ಸಿದ್ಧತೆಗಳ ನಡೆದಿದ್ದು, 128 ಮತಗಟ್ಟೆಗಳಲ್ಲಿ ನಡೆಯಲಿರುವ ಚುನಾವಣೆಗೆ ಪೂರ್ವಭಾವಿಯಾಗಿ ಸೋಮವಾರ ಮಸ್ಟರಿಂಗ್ ಕಾರ್ಯ ನಡೆದಿದೆ. ಮಂಗಳವಾರ ನಡೆಯಲಿರುವ ಮತದಾನ ಪ್ರಕ್ರಿಯೆಗೆ 616 ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 128 ಡಿ ಗ್ರೂಫ್ ನೌಕರರು ಇರಲಿದ್ದು ಕೊರೋನಾ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೊರೊನಾ ಸುರಕ್ಷಿತ ಕಿಟ್ಗಳನ್ನು ಚುನಾವಣಾ ಆಯೋಗ ಸರಬರಾಜು ಮಾಡಿದೆ. ಸರತಿ ಸಾಲಿನಲ್ಲಿ ಅಂತರ ಕಾಯ್ದುಕೊಂಡು ಮತ ಚಲಾಯಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಥರ್ಮಲ್ ಸ್ಕ್ಯಾನರ್ ಮೂಲಕ ಮತದಾರರನ್ನು ಪರೀಕ್ಷಿಸಲು ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಿಸಲಾಗಿದೆ. ಅಧಿಕಾರಿಗಳು ಮಸ್ಟರಿಂಗ್ ಮುಗಿಸಿ ಮತಗಟ್ಟೆಗಳಿಗೆ ತೆರಳಲು ಒಟ್ಟು 33 ಸರಕಾರಿ ಬಸ್ ವ್ಯವಸ್ಥೆ ಮಾಡಲಾಗಿತ್ತು. 88,659 ಮತದಾರರು: ಬೈಂದೂರು ತಾಲೂಕಿನಲ್ಲಿ ಒಟ್ಟು 128 ಮತಗಟ್ಟೆಗಳಿದ್ದು 88,659 ಮತದಾರರಿದ್ದಾರೆ. ಅವರಲ್ಲಿ 45,284 ಮಹಿಳಾ ಮತದಾರರು, 43,374 ಪುರುಷ ಮತದಾರರು ಹಾಗೂ ಒಬ್ಬರು ಇತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ದತಿ 2016ರ ನಿಯಮ 18ಎ ರ ತಿದ್ದುಪಡಿ ಆದೇಶ -2020ರ ಪ್ರಕಾರ ಪಡಿತರ ಚೀಟಿದಾರರು ನೀಡುವ ಆಹಾರಧಾನ್ಯವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅಥವಾ ಮಾರಾಟ ಮಾಡಲು ದಾಸ್ತಾನು ಮಾಡಿದವರ ವಿರುದ್ಧ ಮುಕ್ತ ಮಾರುಕಟ್ಟೆ ದರದಲ್ಲಿ ದಂಡ ವಿಧಿಸಲಾಗುವುದು ಮತ್ತು ಆರು ತಿಂಗಳವರೆಗೆ ಅವರ ಕಾರ್ಡನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು,ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು , ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ,ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು,ರಾಷ್ಟ್ರೀಕ್ರತ ಹಾಗೂ ಇತರ ಬ್ಯಾಂಕುಗಳು ,ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಬ್ಲಿಷ್‌ಮೆಂಟ್‌ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 22ರಂದು ಕರ್ನಾಟಕ ಪಂಚಾಯತ್ ರಾಜ್ ಚುನಾವಣೆಯನ್ನು ನಡೆಸುವ ನಿಯಮಗಳು, 1993ರ ನಿಯಮ 114ನ್ನು ಪ್ರಜಾ ಪ್ರತಿನಿಧಿ ಕಾಯ್ದೆ 1954ರ ಸೆಕ್ಷನ್ -135ಬಿ ರಡಿಯಲ್ಲಿ ವೇತನಸಹಿತ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ, ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಾಲಾಡಿ ಲಕ್ಷ್ಮಿದೇವಿ ವಾಸುದೇವ ಕಾಮತ್ ಅವರ ಮನೆಯಲ್ಲಿ ಮನೆ ಭಜನಾ ಮಂಡಳಿಯವರ 184ನೇ ಮನೆ ಮನೆ ಭಜನಾ ಸಂಗಮ ಕಾರ್ಯಕ್ರಮವು ಅಧ್ಯಕ್ಷ ಹರೀಶ್ ಭಂಡಾರಿಯವರ ನೇತೃತ್ವದಲ್ಲಿ ನೆರವೇರಿತು. ಭಜನಾ ಸಂಗಮದ ಪರವಾಗಿ ಅಧ್ಯಕ್ಷೆ ಲಕ್ಷ್ಮಿದೇವಿ ಹಿತನುಡಿಗಳನ್ನಾಡಿ ಹರೀಶ್ ಭಂಡಾರಿಯವರಿಗೆ ಶಾಲು ಹೊದಿಸಿ ಗೌರವಿಸಿದರು. ಇತರ ಸದಸ್ಯರಿಗೆ ಪ್ರೀತಿಯ ಸ್ಮರಣಿಕೆಗಳನ್ನು ನೀಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕಾಲೇಜು ಬೋಧಕ-ಬೋಧಕೇತರ ಸಿಬ್ಬಂದಿ ಸಂಘದ ವಾರ್ಷಿಕ ಸಭೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಮಾತನಾಡಿ, ಸಿಬ್ಬಂದಿ ವರ್ಗದವರು ಪರಸ್ಪರ ಅನ್ಯೋನ್ಯವಾಗಿರುವುದರ ಮೂಲಕ ಪ್ರತಿಯೊಬ್ಬರ ಸುಖ – ದುಃಖಗಳಲ್ಲಿ ಭಾಗಿಗಳಾಗಬೇಕು. ಸಹೋದ್ಯೋಗಿಗಳು ಮಾಡಿದ ಸಾಧನೆಯನ್ನು ಗುರುತಿಸುವುದರ ಜೊತೆಗೆ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮೂಲಕ ಮಾದರಿ ಸಂಘವಾಗಬೇಕು ಎಂದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಬೋಧಕ-ಬೋಧಕೇತರ ಸಂಘದ ಕಾರ್ಯದರ್ಶಿ ಸತೀಶ್ ಕಾಂಚನ್ ಆನಗಳ್ಳಿ ವಾರ್ಷಿಕ ವರದಿ ವಾಚಿಸಿದರು. ಕಛೇರಿ ಮೇಲ್ವಿಚಾರಕಿ ಗಾಯತ್ರಿ ಶೇಟ್ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ವಿನಿತಾ ಎಸ್. ಗಾಣಿಗ ನಿರೂಪಿಸಿದರು. ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗೋಲಿ ಕಲೆ ಆದಿ ಮಾನವರ ಕಾಲದಲ್ಲಿ ಆರಂಭವಾಗಿ ಈವರೆಗೆ ವಿಕಸನ ಮತ್ತು ಪರಿಷ್ಕರಣೆಗೊಳ್ಳುತ್ತ ಬಂದಿದೆ. ಅದು ಮನುಷ್ಯನ ಭಾಷೆ ಮತ್ತು ಮಾತಿನ ಹುಟ್ಟಿಗಿಂತ ಹಿಂದಿನ ಅಭಿವ್ಯಕ್ತಿ ಮಾಧ್ಯಮವಾಗಿತ್ತು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ವಿಭಾಗ ಮುಖ್ಯಸ್ಥ ಡಾ. ಚೆಲುವರಾಜು ಹೇಳಿದರು. ಮರವಂತೆಯಲ್ಲಿ ಅವರು ಕನ್ನಡ ಜಾನಪದ ಪರಿಷತ್ತಿನ ಅಂಗ ಸಂಸ್ಥೆಯಾಗಿ ಆರಂಭಗೊಂಡ ರಂಗೋಲಿ ಕಲಾ ಪರಿಷತ್ತು ಉದ್ಘಾಟಿಸಿ ಅವರು ಮಾತನಾಡಿದರು. ‘ರಂಗೋಲಿ ಮೂಲತಃ ರೇಖೆಗಳಿಂದ ಆರಂಭವಾಗಿ, ಆಕೃತಿಗಳಲ್ಲಿ ಮೈದಳೆಯುತ್ತ ಬೆಳೆಯಿತು ನಾವು ಈಗ ಬಳಸುವ ಹಲವು ಚಿಹ್ನೆಗಳ ಮೂಲ ರಂಗೋಲಿ. ರೇಖಾ ಸಂಸ್ಕೃತಿ ರಾಮಾಯಣ, ಮಹಾಭಾರತ ಕಾಲದಲ್ಲೂಇತ್ತುಎನ್ನುವುದಕ್ಕೆನಿದರ್ಶನಗಳಿವೆ. ಇಂದು ಬಳಕೆಯಾಗುತ್ತಿರುವ ನಾಗಮಂಡಲದಂತಹ ಧಾರ್ಮಿಕ ಆಚರಣೆಗಳಲ್ಲಿ ರಂಗೋಲಿ ಸಂಸ್ಕೃತಿ ಇದೆ. ಈ ಕಲೆಯನ್ನು ಅಧ್ಯಯನ ಮಾಡಿ ಡಾಕ್ಟರೇಟ್ ಗಳಿಸಿ, ರಾಜ್ಯ ಜಾನಪದ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿ ಆಗಿರುವ ಡಾ. ಭಾರತಿ ಮರವಂತೆ ಅವರ ನೇತ್ರತ್ವದಲ್ಲಿ ಆರಂಭವಾದ ರಂಗೋಲಿ ಕಲಾ ಪರಿಷತ್ತು ಅದಕ್ಕೆ ವಿಶ್ವ ಮಾನ್ಯತೆ ತಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಎಂಬಿಎ ವಿಭಾಗ ಆಯೋಜಿಸಿದ್ದ ಮಂಗಳೂರು ಎಪಿಎಂಸಿ ಕ್ಷೇತ್ರ ಭೇಟಿಯ ವರದಿ ಮಂಡನೆಯ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಮಂಗಳೂರು ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ್ ಹೆಗ್ಡೆ, ಇಂದಿನ ಯುವ ಪೀಳಿಗೆಯ ಮುಂದೆ ದೊಡ್ಡ ಗುರಿ ಇದ್ದು, ಅದಕ್ಕೆ ತಕ್ಕಂತೆ ಅವರು ತಮ್ಮನ್ನು ತಯಾರಿ ಮಾಡಿಕೊಳ್ಳುತ್ತಿದ್ದು, ಇದು ನಮ್ಮ ಪೀಳಿಗೆ ಹಾಗೂ ಇಂದಿನ ಪೀಳಿಗೆಗಿರುವ ದೊಡ್ಡ ವ್ಯತ್ಯಾಸವಾಗಿದೆ. ಶಾಲೆ ಎಂಬುದು ನಮ್ಮ ಸ್ಪೂರ್ತಿಯನ್ನು ಹೆಚ್ಚಿಸುವ ಸೆಲೆ. ಆ ಹಿನ್ನಲೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡಿ ಸಮಾಜಕ್ಕೆ ಉತ್ತಮ ವಿದ್ಯಾರ್ಥಿಗಳನ್ನು ನೀಡುತ್ತಿದೆ ಎಂದರು. ಕೃಷಿ ಉತ್ಪನ್ನಗಳನ್ನು ತಂದ ರೈತರಿಗೆ ಶೋಷಣೆಯಾಗದಂತೆ, ಅವರಿಗೆ ಸೂಕ್ತ ಮೌಲ್ಯ ಹಾಗೂ ಭದ್ರತೆ ಒದಗಿಸುವ ವೇದಿಕೆಯಾಗಿ ಕೃಷಿ ಉತ್ಪನ್ನ ಮಾರಾಟ ಮಂಡಳಿ ಕೆಲಸ ಮಾಡುತ್ತದೆ. ಎಪಿಎಂಸಿ ವ್ಯಾಪ್ತಿಯಲ್ಲಿ ವ್ಯವಹಾರ ನಡೆಸಿದರೆ ಪ್ರತಿ ವ್ಯವಹಾರದ ಮೇಲೆ ಎಪಿಎಂಸಿ ಚುನಾಯಿತ ಆಡಳಿತ ನಿಗಾ ಇಡಬಹುದಾಗಿದೆ.ಇಲ್ಲಿ ರೈತನಿಗೆ ಮೋಸ ಆಗುವ ಪ್ರಮೇಯ…

Read More