ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಮುಜುರಾಯಿ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಸಾಮೂಹಿಕ ವಿವಾಹದ ಸಪ್ತಪದಿ ಯೋಜನೆ ಪ್ರತಿ ತಿಂಗಳು ನಡೆಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಪ್ತಪದಿ ರಾಜ್ಯಸರ್ಕಾರದ ಬಹುದೊಡ್ಡ ಯೋಜನೆ ಕೋವಿಡ್ ಕಾರಣಕ್ಕೆ ಯೋಜನೆಯಲ್ಲಿ ನಿಲುಗಡೆಯಾಗಿತ್ತು. ರಾಜ್ಯದಲ್ಲಿ 23 ಮಂದಿಗೆ ವಿವಾಹ ಮಾಡಿಸುವ ಕೆಲಸ ಆಗಿದೆ. ಚಿನ್ನದ ಟೆಂಡರ್ ಹಾಕಲು ಯಾರೂ ಮುಂದೆ ಬಂದಿರಲಿಲ್ಲ. ಕಾವೇರಿ ಎಂಪೋರಿಯಂ ಮೂಲಕ ಚಿನ್ನ ಖರೀದಿ ಮಾಡುತ್ತೇವೆ. ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗುತ್ತದೆ. ಆರ್ಥಿಕ ಸಮಸ್ಯೆ ಇರುವವರ ಪಾಲಿಗೆ ಸಪ್ತಪದಿ ಯೋಜನೆ ವರದಾನವಾಗಲಿದೆ ಎಂದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ಚುನಾವಣೆಯು ಶಾಂತ ಮತ್ತು ಮುಕ್ತವಾಗಿ ನಡೆಯುವಂತಾಗಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ, ಡಿಸೆಂಬರ್ 22 ರಂದು ಉಡುಪಿ, ಹೆಬ್ರಿ, ಬ್ರಹ್ಮಾವರ ಹಾಗೂ ಬೈಂದೂರು ತಾಲೂಕಿನಲ್ಲಿ ಮೊದಲನೇ ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್ 20 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 22 ರ ಸಂಜೆ 5 ಗಂಟೆಯವರೆಗೆ ಹಾಗೂ ಡಿಸೆಂಬರ್ 27 ರಂದು ಕುಂದಾಪುರ, ಕಾರ್ಕಳ ಹಾಗೂ ಕಾಪು ತಾಲೂಕಿನಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್ 25 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 27 ರ ಸಂಜೆ 5 ರ ವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಜಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದಲ್ಲಿ ಕಾಲದ ಅಗತ್ಯಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದರಿಂದ ಕ್ಷೇತ್ರ ಪ್ರೇಕ್ಷಣೀಯ ಸ್ಥಳವಾಗಲಿದೆ ಎಂದು ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಕ್ಷೇತ್ರ ಪುರೋಹಿತರೊಂದಿಗೆ ಉಮೇಶ್ ತಂತ್ರಿ, ಮತ್ತು ಶ್ರೀಧರ್ ಪುರೋಹಿತ್ ಅವರ ಪೌರೋಹಿತ್ಯದಲ್ಲಿ ಸಂಪನ್ನವಾದ ರಂಗಪೂಜೆ, ದೀಪೋತ್ಸವದ ಅಂತ್ಯದಲ್ಲಿ ನಡೆದ ಧಾರ್ಮಿಕ ಸಭೆ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಯ್ಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೊಕ್ತೇಸರ ಮಂಜುನಾಥ ಆಚಾರ್ಯ, ಬಾಬು , ಮಾಜಿ ಪ್ರಧಾನ ಕಾರ್ಯದರ್ಶಿ ಸಂಜೀವ ಆಚಾರ್ಯ, ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ ಪ್ರತಿಭಾ ವಿಜೇಂದ್ರ ಆಚಾರ್ಯ, ಬಾಲ ಕಲಾವಿದೆ ಶ್ರಾವ್ಯಾ ಮರವಂತೆ, ಮಾಗಣೆ ಮೊಕ್ತೇಸರ ರಮೇಶ ಆಚಾರ್ಯ, ರತ್ನಾಕರ ಆಚಾರ್ಯ, ಮಂಜುನಾಥ ಆಚಾರ್ಯ, ಸತೀಶ ಆಚಾರ್, ಸುರೇಂದ್ರ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಮೊಕ್ತೇಸರ ಚಿತ್ತೂರು ಪ್ರಭಾಕರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ನಿರೂಪಿಸಿದರು. ಜೀಣೋದ್ಧಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನ ಐಇಸಿ/ಎಸ್‌ಬಿಸಿಸಿಯ ಕಾರ್ಯಕ್ರಮದಡಿ ನೆಹರು ಯುವ ಕೇಂದ್ರ ಹಾಗೂ ಯುವಸಂಘಗಳ ಪ್ರತಿನಿಧಿಗಳಿಗೆ ಉಡುಪಿ ತಾಲೂಕು ಮಟ್ಟದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಪೇತ್ರಿ ಚೇರ್ಕಾಡಿಯ ಸಮೃದ್ಧಿ ಮಹಿಳಾ ಮಂಡಳಿಯಲ್ಲಿ ನಡೆಯಿತು. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ, ವಿಲ್ಫೆಡ್ ಡಿ’ಸೋಜ, ಕಾರ್ಯಕ್ರಮ ಉದ್ಘಾಟಿಸಿ, ಸರಕಾರದ ವತಿಯಿಂದ ಸಿಗುವ ಸವಲತ್ತುಗಳ ಉಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಚೇರ್ಕಾಡಿ ಸಮೃದ್ಧಿ ಮಹಿಳಾ ಮಂಡಳಿಯ ಅಧ್ಯಕ್ಷ ಪ್ರಸನ್ನ ಪ್ರಸಾದ್ ಭಟ್, ಉತ್ತಮ ಆಹಾರ ಪದ್ಧತಿಯನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಆರೋಗ್ಯವನ್ನು ಪಡೆಯಬಹುದು ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಬಾಯಿ, ತಾಯಿ ಮಕ್ಕಳ ಆರೋಗ್ಯದ ಬಗ್ಗೆ ಹಾಗೂ ರಾಷ್ಟ್ರೀಯ ಕಾರ್ಯಕ್ರಮ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್, ಸಾಂಕ್ರಮಿಕ ಹಾಗೂ ಅಸಾಂಕ್ರಮಿಕ ರೋಗಗಳ ಬಗ್ಗೆ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಹುಬ್ಬಳ್ಳಿಯ ಸುಮಧುರ ಎಂಟರ್ಟೈನ್ಮೆಂಟ್ ಫೌಂಡೇಶನ್ ಏರ್ಪಡಿಸಿದ್ದ ಝೇಂಕಾರ ಸಂಗೀತ ಉಪಕರಣಗಳನ್ನು ನುಡಿಸುವ ಆನ್‌ಲೈನ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಬಾಲ ಸ್ಯಾಕ್ಸೋಫೋನ್ ಪ್ರತಿಭೆ ಸಂಜಿತ್ ಎಂ ದೇವಾಡಿಗ ಅತ್ಯಧಿಕ ವಿವ್ಸ್ ಗಳ ಜೊತೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಗಂಗೊಳ್ಳಿಯ ಮಾಧವ ದೇವಾಡಿಗ ಮತ್ತು ಸಾವಿತ್ರಿ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಮರವಂತೆ ಚಿತ್ತಾರಿ ಶ್ರೀ ಮಹಾಗಣಪತಿ ದೇವಸ್ಥಾನ ಮರುರಚನೆಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ನೀಡಲಾದ ರೂ. 5 ಲಕ್ಷ ಅನುದಾನದ ಚೆಕ್‌ಅನ್ನು ಕ್ಷೇತ್ರದ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಅವರಿಗೆ ಹಸ್ತಾಂತರಿಸಲಾಯಿತು. ಚೆಕ್ ಸ್ವೀಕರಿಸಿ ಮಾತನಾಡಿದ ಪ್ರಭಾಕರ ಶೆಟ್ಟಿ,300 ವರ್ಷಗಳ ಹಿಂದೆ ಸ್ಥಾಪನೆಯಾದ ಈ ದೇಗುಲ ಕಾಲಾಂತರದಲ್ಲಿ ಅವನತಿಯತ್ತ ಸಾಗಿತು. ಈಚೆಗೆ ಭಕ್ತರು ಜೀರ್ಣೋದ್ಧಾರ ಸಮಿತಿ ರಚಿಸಿಕೊಂಡು ರೂ 1ಕೋಟಿ ವೆಚ್ಚದಲ್ಲಿ ಮರುನಿರ್ಮಿಸಲು ನಿರ್ಧರಿಸಿ, ಕಾರ್ಯೋನುಖರಾದೆವು. ಧರ್ಮಸ್ಥಳದ ಕೊಡುಗೆ ನಮ್ಮ ಹೊರೆಯನ್ನು ಅಷ್ಟರ ಮಟ್ಟಿಗೆ ತಗ್ಗಿಸಿದೆ. ಅದಕ್ಕಾಗಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ನಾವು ಋಣಿ ಎಂದರು. ರವಿ ಮಡಿವಾಳ ಸ್ವಾಗತಿಸಿ ವಂದಿಸಿದರು. ಕ್ಷೇತ್ರದ ಯೋಜನಾಧಿಕಾರಿ ಪುಷ್ಪರಾಜ, ಕ್ಷೇತ್ರದ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲ್ಲೂಕು ಯೋಜನಾಧಿಕಾರಿ ಶಶಿರೇಖಾ ಪಿ, ಯೋಜನೆಯ ಮೇಲ್ವಿಚಾರಕ ವೆಂಕಟೇಶ, ವಲಯಾಧ್ಯಕ್ಷೆ ವೀಣಾ, ಮರವಂತೆ ಒಕ್ಕೂಟದ ಸೇವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಧನಾ ಕಲಾ ಸಂಗಮ ಕುಂದಾಪುರವು ಆನೆಗುಡ್ಡೆ ರಥೋತ್ಸವದ ಸಂದರ್ಭದಲ್ಲಿ ಆಯೋಜಿಸಿದ ಗಜವರ್ಣ 2020 – ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆಯು ಸಾಂಗವಾಗಿ ನಡೆದಿದ್ದು, ಕುಂದಾಪುರ ಮತ್ತು ಬೈಂದೂರು ತಾಲೂಕಿನ ಸುಮಾರು 200 ಸ್ಪರ್ಧಿಗಳು ಬಾಗವಹಿಸಿದ್ದರು. ಈ ಸ್ಪರ್ಧೆಯ ಪಲಿತಾಂಶ ಈ ಕೇಳಗಿನಂತಿದೆ. ಪ್ರಥಮ ವಿಭಾಗ ಎಲ್ ಕೆಜಿಯಿಂದ 1ನೇ ತರಗತಿ – ಪ್ರಥಮ ಸಾತ್ವಿಕ್, ದ್ವಿತೀಯ ಸಾನವ್, ತ್ರತೀಯ ಅದ್ವಿತಿ ಶೆಟ್ಟಿ, ಸಮಾಧಾನಕರ ಆರಾಧ್ಯ ಶೆಟ್ಟಿ ಹಾಗೂ ಸಾತ್ವಿಕ್ ಆರ್ ರಾವ್. ದ್ವಿತೀಯ ವಿಭಾಗ 2ನೇ ತರಗತಿಯಿಂದ 4ನೇ ತರಗತಿ – ಪ್ರಥಮ ಸಿಂಚನ ಎಸ್ ಆಚಾರ್, ದ್ವಿತೀಯ ತನ್ವಿ ಪಿ ರಾವ್, ತ್ರತೀಯ ಯಕ್ಶಿತ್ ಎಸ್ ಶೆಟ್ಟಿ, ಸಮಾಧಾನಕರ ರಿಶಿಕಾ ಎಮ್ ಹಾಗೂ ಸಂಜಿತ್ ಎಮ್ ದೇವಡಿಗಾ. ತ್ರತೀಯ ವಿಭಾಗ 5ನೇ ತರಗತಿಯಿಂದ 7ನೇ ತರಗತಿ – ಪ್ರಥಮ ಯಶ್ವಿ ಆರ್, ದ್ವಿತೀಯ ಶ್ಯಾಮ್, ತ್ರತೀಯ ಶ್ರೀನಿಧಿ ಪಿ ಗೌಡ, ಸಮಾಧಾನಕರ ಪ್ರತೀಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೆಲವು ವ್ಯಕ್ತಿಗಳು ಎನ್‌ಪಿಸಿಐಎಲ್ (ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿ) ಕೈಗಾ, ವೆಬ್‌ಸೈಟ್‌ನ ಹೆಸರಿನಲ್ಲಿ, ಸುಳ್ಳು ದಾಖಲೆಗಳನ್ನು ಸೃಷ್ಠಿಸಿ, ನಕಲಿ ಉದ್ಯೋಗ ಭರವಸೆ ನೀಡಿ, ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸುವಂತೆ ಸುಳ್ಳು ಇ-ಮೇಲ್‌ಗಳನ್ನು ಹಾಗೂ ದೂರವಾಣಿ ಕರೆಗಳನ್ನು ಮಾಡುತ್ತಿದ್ದು, ಇಂತಹ ವ್ಯಕ್ತಿಗಳಿಂದ ಹಣ ಪಾವತಿಸುವಂತೆ ಇ-ಮೇಲ್ ಅಥವಾ ದೂರವಾಣಿ ಕರೆಗಳು ಬಂದಲ್ಲಿ ಪ್ರತಿಕ್ರಿಯಿಸಬಾರದು. ಇಂತಹ ಆಮಿಷ ಒಡ್ಡುವ ವ್ಯಕ್ತಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಈ ರೀತಿಯ ಆಮಿಷಕ್ಕೆ ಬಲಿಯಾಗಿ ಹಣ ಕಳೆದುಕೊಂಡಲ್ಲಿ ಸಂಸ್ಥೆ ಜವಾಬ್ದಾರಿಯಾಗುವುದಿಲ್ಲ, ಎನ್‌ಪಿಸಿಐಎಲ್, ಕೈಗಾ ಸೈಟ್ ಮೆರಿಟ್ ಆಧಾರದ ಮೇಲೆ ಉದ್ಯೋಗಾಕಾಂಕ್ಷಿಗಳನ್ನು ಆಯ್ಕೆ ಮಾಡುತ್ತಿದ್ದು, ಉದ್ಯೋಗಾಕಾಂಕ್ಷಿಗಳಿಂದ ಯಾವುದೇ ಮೊತ್ತವನ್ನು ಅಥವಾ ಠೇವಣಿಯನ್ನು ಸ್ವೀಕರಿಸುವುದಿಲ್ಲ. ಈ ನಿಗಮದ ಯಾವುದೇ ಉದ್ಯೋಗಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ (https://www.npcilcareers.co.in/) ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ recrute.kgs@npcil.co.in ಸಂಪರ್ಕಿಸುವಂತೆ ಎನ್‌ಪಿಸಿಐಎಲ್ ಕೈಗಾ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ► ಬೈಂದೂರು: ಕೈಗಾದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಡಿ. 22 ಮತ್ತು 27ರಂದು ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ಒಟ್ಟು 153 ಗ್ರಾಮ ಪಂಚಾಯತ್‌ಗಳಲ್ಲಿ ನಡೆಯಲಿದ್ದು, ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು, ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ, ಯಕ್ಷಗಾನ ಮತ್ತು ಜನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಉಡುಪಿಯ ಶ್ರೀ ಸುಬ್ರಹ್ಮಣ್ಯ ಯಕ್ಷಗಾನ ಕಲಾ ಮಂಡಳಿ ತಂಡದ ಕಲಾವಿದರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ ಕುರಿತಂತೆ ಅರಿವು ಮೂಡಿಸುತ್ತಿದ್ದು, ಗ್ರಾಮಸ್ಥರು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೇ, ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಅರ್ಹ ವ್ಯಕ್ತಿಗೆ ಮತ ಹಾಕುವುದರ ಮೂಲಕ ಅವರನ್ನು ಆಯ್ಕೆ ಮಾಡುವಂತೆ ಪ್ರೇರೇಪಿಸುತ್ತಿದ್ದಾರೆ. ಅನರ್ಹ ವ್ಯಕ್ತಿಗೆ ಮತ ಚಲಾಯಿಸಿದರೆ ಅದರ ಪರಿಣಾಮ ಏನಾಗಲಿದೆ, ಅರ್ಹ ವ್ಯಕ್ತಿಗೆ ಮತ ಚಲಾಯಿಸುವುದರಿಂದ ಅಗುವ ಪ್ರಯೋಜನಗಳ ಕುರಿತು, ಯಕ್ಷಗಾನ ರೂಪಕದಲ್ಲಿ ಕಥೆಯನ್ನು ಸಿದ್ಧಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರದರ್ಶನ ನೀಡುತ್ತಿದ್ದಾರೆ. ಇದರೊಂದಿಗೆ ಗಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಇಂದು ಬೆಳಗಿನ ಜಾವ ದೈವಾಧೀನರಾದ ಉದ್ಯಮಿ, ಪದ್ಮಭೂಷಣ ಆರ್.ಎನ್.ಶೆಟ್ಟಿ ಅವರಿಗೆ ಚಿರಶಾಂತಿಯನ್ನು ಕೋರಿ ಶೃದ್ಧಾಂಜಲಿ ಸಭೆ ನಡೆಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ರೇಖಾ ಬನ್ನಾಡಿ ಮಾತನಾಡಿ, ಪದ್ಮಭೂಷಣ ಆರ್.ಎನ್ ಶೆಟ್ಟಿ ಅವರು ಸಮಾಜಕ್ಕೆ ದೇಶಕ್ಕೆ ಮಾದರಿಯಾಗಿ ನಿಂತವರು. ಅನೇಕ ಶಿಕ್ಷಣ ಸಂಸ್ಥೆಗಳು ಅವರ ದೇಣಿಗೆ ಪಡೆದಿವೆ. ಅವರು ಉದ್ಯಮಿ ಅಷ್ಟೇ ಅಲ್ಲದೇ ಸಮಾಜಮುಖಿತಾದ ಜೀವ ಪರಚಿಂತಕರು. ದೇಶವನ್ನು ಕಟ್ಟುವಲ್ಲಿತಮ್ಮ ಕೊಡುಗೆಯನ್ನು ನೀಡಿದವರು. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇವೆ. ಅವರ ಪತ್ನಿಗೆ ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ರಾಮಚಂದ್ರ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿಕಾಲೇಜಿನ ಪ್ರಧ್ಯಾಪಕರು ಪದ್ಮಭೂಷಣ ಆರ್.ಎನ್.ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿ ಶೃದ್ಧಾಂಜಲಿ ಸಲ್ಲಿಸಿ ಅಗಲಿದ ಆತ್ಮಕ್ಕೆ ಚಿರಶಾಂತಿಯನ್ನು ಕೋರಲಾಯಿತು.
