Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಂಕರನಾರಾಯಣದಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಶಿಫ್ಟ್ ಕಾರು ಹಾಲಾಡಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ (60) ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಹದ್ದೂರು ರಾಜೀವ ಶೆಟ್ಟಿ ಅವರು ಶಂಕರನಾರಾಯಣದಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿಯಾದ ಪರಿಣಾಮ ರಾಜೀವ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆಯೇ ಅವರು ಅಸುನೀಗಿದ್ದಾರೆ. ಹದ್ದೂರು ರಾಜೀವ ಶೆಟ್ಟಿಯವರು ವಿವಿಧ ಸಮಾಜಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು ಶಂಕರನಾರಾಯಣ ಮಂಡಲ ಪಂಚಾಯತ್ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ತಾಲೂಕು ಪಂಚಾಯತ್ ಸದಸ್ಯರಾಗಿ, ಕೆ.ಎಂ.ಎಫ್. ನಿರ್ದೇಶಕರಾಗಿ, ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲಾ ರೈತ ಸಂಘದ ಸದಸ್ಯರಾಗಿರುವ ಇವರು ಓರ್ವ ಪ್ರಗತಿಪರ ಕೃಷಿಕರು. ಹೈನುಗಾರಿಕೆಯಲ್ಲೂ ತೊಡಗಿಸಿಕೊಂಡಿದ್ದು ಬೈಲೂರು ಹಾಲುತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉತ್ತರ ಪ್ರದೇಶದ ಉನ್ನವೊ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಬಿಜೆಪಿಯ ಹಿರಿಯ ಸಂಸದ ಸಾಕ್ಷಿ ಮಹಾರಾಜ್ ತೆಕ್ಕಟ್ಟೆಯ ಸಮೀಪದ ಕೊಮೆಯಲ್ಲಿ ಡಾ.ತನ್ಮಯ ಗೋಸ್ವಾಮಿ ನಡೆಸುತ್ತಿರುವ ಆಯುರ್ವೇದ ಆಶ್ರಮದಲ್ಲಿ ಪಂಚಕರ್ಮ ಹಾಗೂ ಪ್ರಕೃತಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಉತ್ತರ ಪ್ರದೇಶದಿಂದ ದೂರದ ಕರ್ನಾಟಕದ ಕರಾವಳಿಯ ಸೊಬಗಿಗೆ ಮನಸೋತು ಇಲ್ಲಿಗೆ ಬಂದಿರುವುದೇ ವಿಶೇಷ. ದೇಶದ ಕೆಲವೇ ಮಂದಿಗೆ ಇರುವ ವೈ – ಪ್ಲಸ್ ಭದ್ರತೆಯನ್ನು ಹೊಂದಿರುವ ಅವರು ಇದನ್ನೆಲ್ಲ ಮರೆತು ಆಯುರ್ವೇದ ಆಶ್ರಮದ ವೈದ್ಯ ಡಾ. ತನ್ಮಯ ಗೋಸ್ವಾಮಿ ಅವರ ಸಲಹೆಗೆ ಮೈ ಚೆಲ್ಲಿ ವಿಶ್ರಾಂತಿ ಅನುಭವಿಸುತ್ತಿದ್ದಾರೆ. ಸಾಕ್ಷಿ ಮಹಾರಾಜ್ ಅವರಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಮಾತನಾಡಿದ ಆಶ್ರಮದ ಮುಖ್ಯಸ್ಥ ಡಾ.ತನ್ಮಯ್ ಗೋಸ್ವಾಮಿ ಬೆಳಿಗ್ಗೆ ಯೋಗಾಭ್ಯಾಸದಿಂದ ಚಿಕಿತ್ಸೆ ಪ್ರಾರಂಭವಾಗುತ್ತದೆ. ಮಧ್ಯಾಹ್ಮದವರೆಗೂ ಪಂಚಕರ್ಮದ ಪದ್ಧತಿಯಲ್ಲಿ ಚಿಕಿತ್ಸೆ ನೀಡಿ ದೇಹವನ್ನು ಹದಗೊಳಿಸಲಾಗುತ್ತದೆ. ಮಧ್ಯಾಹ್ಮ ಹಾಗೂ ರಾತ್ರಿ ಲಘು ಆಹಾರ. ಸಂಜೆ ಧ್ಯಾನ ಹಾಗೂ ಸಮುದ್ರ ದಂಡೆಯಲ್ಲಿ ವಾಯುವಿಹಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಮತ್ತು ಮನೆಲ್ ಶ್ರೀನಿವಾಸ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ಮಂಗಳೂರು ಇವರು, ಎರಡೂ ಸಂಸ್ಥೆಗಳ ಪ್ರಾಧ್ಯಾಪಕರ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಕೊಡುಕೊಳ್ಳುವಿಕೆಗಾಗಿ ಒಡಂಬಡಿಕೆ ಪತ್ರಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹಾಗೂ ಮನೆಲ್ ಶ್ರೀನಿವಾಸ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮಂಗಳೂರಿನ ನಿರ್ದೇಶಕರಾದ ಡಾ. ಮೋಲಿ ಚೌಧರಿ ಸಹಿ ಹಾಕುವ ಮೂಲಕ ಸಮ್ಮತಿ ಸೂಚಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಮನೆಲ್ ಶ್ರೀನಿವಾಸ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಹಾಯಕ ಪ್ರಾಧ್ಯಾಪಕ ಡಾ. ಶರಣ್ ಕುಮಾರ್ ಶೆಟ್ಟಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್, ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ನಂದಾ ರೈ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನಲ್ಲಿ ನ್ಯಾಯಾಲಯಗಳಿಗೆ ನಿವೇಶನ ಕಾಯ್ದಿರಿಸುವ ಪ್ರಕ್ರಿಯೆ ನಡೆಯುತ್ತಿದೆ. ಕಂದಾಯ ಇಲಾಖೆ ನ್ಯಾಯಾಂಗ ಇಲಾಖೆಗೆ ನಿವೇಶನ ಹಸ್ತಾಂತರಿಸಿದ ಬಳಿಕ ನ್ಯಾಯಾಲಯ ಆರಂಭಿಸಲಾಗುವುದು ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ(ಆಡಳಿತ) ಅಶೋಕ ಎಸ್. ಕಿಣಗಿ ಭರವಸೆ ನೀಡಿದರು. ಉಡುಪಿ ಜಿಲ್ಲಾ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ. ಎನ್ ಅವರೊಂದಿಗೆ ಬೈಂದೂರಿಗೆ ಭೇಟಿನೀಡಿ ಸ್ಥಳ ಪರಿಶೀಲನೆ ನಡೆಸಿದ ಅವರನ್ನು ಭೇಟಿಯಾದ ಬೈಂದೂರು ಹಿತರಕ್ಷಣಾ ವೇದಿಕೆಯ ನಿಯೋಗಕ್ಕೆ ಭರವಸೆ ನೀಡಿದರು. ಬೈಂದೂರು ತಾಲ್ಲೂಕು ರಚನೆಯಾಗಿ ಮೂರು ವರ್ಷಗಳು ಕಳೆದಿವೆ. ಕುಂದಾಪುರದಿಂದ 35 ಕಿ.ಮೀ. ದೂರದಲ್ಲಿರುವ ಬೈಂದೂರಿನಲ್ಲಿ ನ್ಯಾಯಾಲಯ ಸ್ಥಾಪಿಸಬೇಕು ಎಂಬ ಆಗ್ರಹ ಅದಕ್ಕಿಂತ ಹಿಂದಿನದು. ಈಗಾಗಲೇ ಅದಕ್ಕೆ ಎರಡು ಎಕರೆ ನಿವೇಶನ ಗುರುತಿಸಲಾಗಿದೆ. ಶೀಘ್ರ ಬಾಡಿಗೆ ಕಟ್ಟಡದಲ್ಲಿ ನ್ಯಾಯಾಲಯ ಆರಂಭಿಸಬೇಕು’ ಎಂದು ನಿಯೋಗ ಅವರನ್ನು ವಿನಂತಿಸಿ ಮನವಿ ಸಲ್ಲಿಸಿತು. ವೇದಿಕೆಯ ಅಧ್ಯಕ್ಷ ಜಗದೀಶ ಪಟವಾಲ್, ಕಾರ್ಯದರ್ಶಿ ಪ್ರಕಾಶ ಬೈಂದೂರು, ಸದಸ್ಯ ಸುಬ್ರಹ್ಮಣ್ಯ ಶೇಟ್, ವಕೀಲ ಧನಂಜಯ ಶೆಟ್ಟಿ ನಿಯೋಗದಲ್ಲಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್‍ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ದೀಪಾವಳಿ ಧಮಾಕಾ ಸಮಾರೋಪ ಸಮಾರಂಭದಲ್ಲಿ ಗಂಗೊಳ್ಳಿ ಗ್ರಾಮದ ಪೌರ ಕಾರ್ಮಿಕರು ಹಾಗೂ ಎಸ್‌ಎಲ್‌ಆರ್‌ಎಂ ಘಟಕದ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಗಂಗೊಳ್ಳಿಯ ಉದ್ಯಮಿ ಜಿ.ರಾಧಾಕೃಷ್ಣ ನಾಯಕ್ ಮಾತನಾಡಿ ಸ್ವಚ್ಛತಾ ಅಭಿಯಾನದಲ್ಲಿ ಪೌರ ಕಾರ್ಮಿಕರ ಸಲ್ಲಿಸುತ್ತಿರುವ ಸೇವೆ ಅತ್ಯುತ್ತವಾದದ್ದು. ಇವರ ಸೇವೆಯನ್ನು ಗುರುತಿಸಿ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ. ಈ ನಿಟ್ಟಿನಲ್ಲಿ ಗಂಗೊಳ್ಳಿ ಗ್ರಾಮದಲ್ಲಿ ಸ್ವಚ್ಛತೆ ಮೂಲಕ ಸಮಾಜ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ಗೌರವಿಸುತ್ತಿರುವುದು ಸ್ತುತ್ಯಾರ್ಹವಾದುದು ಎಂದು ಹೇಳಿದರು. ಸಂಸ್ಥೆಯ ಸಂಸ್ಥಾಪಕ ಜಿ.ಭಾಸ್ಕರ ವಿಠಲ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸೈನಿಕ ರತ್ನಾಕರ ಬೈಂದೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಥೆಯ ಪಾಲುದಾರ ಜಿ.ವೆಂಕಟೇಶ ಶೆಣೈ, ಜಯಶ್ರೀ ಭಾಸ್ಕರ ಶೆಣೈ ಮತ್ತಿತರರು ಉಪಸ್ಥಿತರಿದ್ದರು. ಸಂಸ್ಥೆಯ ಪಾಲುದಾರ ಜಿ.ವಿಠಲ ಭಾಸ್ಕರ ಶೆಣೈ ಸ್ವಾಗತಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಆಯೋಜಿಸಿದ್ದ ‘ರಾಷ್ಟ್ರೀಯ ಶಿಕ್ಷಣ ನೀತಿ – ಶಿಕ್ಷಕರ ಪಾತ್ರ’ಕುರಿತು ವೆಬಿನಾರ್ ನಡೆಯಿತು. ಸುರತ್ಕಲ್ ಎನ್‌ಐಟಿಕೆಯ ಬೋರ್ಡ್ ಆಫ್ ಗವರ್ನರ್ಸ್ ಅಧ್ಯಕ್ಷ ಡಾ ಕೆ. ಬಲವೀರ ರೆಡ್ಡಿ ಮಾತನಾಡಿ, ಪ್ರಾಚೀನ ಕಾಲದಿಂದಲೂ ಭಾರತ ಶೈಕ್ಷಣಿಕ ರಂಗದಲ್ಲಿ ಸಾರ್ವಭೌಮತ್ವ ಸ್ಥಾಪಿಸಿದ್ದು, ಪ್ರಸ್ತುತ ಜಗತ್ತಿಗೆ ತಕ್ಕಂತೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಮರು ವಿನ್ಯಾಸಗೊಳಿಸುವ ಅವಶ್ಯಕತೆ ಇದೆ. ಇದಕ್ಕಾಗಿ ನಮ್ಮ ಸಾಂಪ್ರದಾಯಿಕ ವಿದ್ಯಾ ತತ್ವಗಳನ್ನು ತಳಹದಿಯಾಗಿಸಿ ಸಮಗ್ರ ಹಾಗೂ ಬಹುಶಿಸ್ತೀಯ ವಿಧಾನವನ್ನು ಶಿಕ್ಷಣ ರಂಗಕ್ಕೆ ಪರಿಚಯಿಸುವ ವಿನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರಕಾರ ರೂಪಿಸುತ್ತಿದೆ. ಈ ಮೂಲಕ ಕೌಶಲ್ಯಪೂರ್ಣ ಮಾನವ ಸಂಪನ್ಮೂಲವನ್ನು ತಯಾರಿಗೊಳಿಸಿ ನಾಲ್ಕನೇ ಕೈಗಾರಿಕಾ ಕ್ರಾಂತಿ ಸಮಯದಲ್ಲಿ ಭಾರತವನ್ನು ಮುಂಚೂಣಿವಾಗಿಸುವ ಯೋಜನೆ ಕೇಂದ್ರದ ಮುಂದಿದೆ” ನೂತನ ಶಿಕ್ಷಣ ನೀತಿಯು ಪಠ್ಯ ಕ್ರಮದಲ್ಲಿ, ಬೋಧನಾ ವಿಧಾನಗಳಲ್ಲಿ ಹಾಗೂ ಉನ್ನತ ಶಿಕ್ಷಣ ವಲಯದಲ್ಲಿ ಆಮೂಲಾಗ್ರ ಬದಲಾವಣೆ ತರಲಿದ್ದು, ಬದಲಾದ ಸ್ಪರ್ಧಾತ್ಮಕ ಜಗತ್ತಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಯುವಕ ಸಂಘಗಳಲ್ಲಿನ ಯುವಕರಿಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮತ್ತು ಅವರಿಗೆ ಅಗತ್ಯ ತರಬೇತಿಗಳನ್ನು ನೀಡುವ ಮೂಲಕ, ಅವರಲ್ಲಿರುವ ಯುವಶಕ್ತಿಯನ್ನು ಜಿಲ್ಲೆಯ ಅಭಿವೃಧ್ದಿ ಕಾರ್ಯಗಳಿಗೆ ಬಳಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ನೆಹರು ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆಹರು ಯುವಕೇಂದ್ರಂದ ಮೂಲಕ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಯುವಕ ಸಂಘಗಳ ಸದಸ್ಯರಿಗೆ ಅವರಲ್ಲಿನ ಸಮಾಜಸೇವೆಯ ಗುಣ, ಕೌಶಲ್ಯ ಮತ್ತು ಸಾಹಸ ಪ್ರವೃತ್ತಿಯನ್ನು ಅಭಿವೃದ್ಧಿಗೊಳಿಸುವಂತೆ ಚಟುವಟಿಕೆಗಳನ್ನು ಏರ್ಪಡಿಸಿ. ಯುವಕ ಯುವತಿಯರಿಗೆ ವಿಕೋಪ ನಿರ್ವಹಣೆ ಸೇರಿದಂತೆ ಅತ್ಯಾವಶ್ಯಕ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು ಸಮಾಜದ ನೆರವಿಗೆ ಧಾವಿಸುವಂತಹ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ, ತುರ್ತು ಸಂದರ್ಭದಲ್ಲಿ ಈ ರೀತಿಯ ತರಬೇತಿ ಪಡೆದ ಯುವಕರ ಸೇವೆಯನ್ನು ಜಿಲ್ಲಾಡಳಿತದ ನೆರವಿಗೆ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ನೆಹರು ಯುವ ಕೇಂದ್ರದಿದ ಸಿದ್ಧಪಡಿಸುವ ವಾರ್ಷಿಕ ಕಾರ್ಯಕ್ರಮಗಳಲ್ಲಿ, ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಯುವಕರು ತೊಡಗುವಂತಹ ಕಾರ್ಯಕ್ರಮಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಡಾ. ಅಂಬೇಡ್ಕರ್ ಯುವಕ ಮಂಡಲ , ಅಮೃತ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಳಿ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ಬಿ.ಆರ್ ಅಂಬೇಡ್ಕರ್. ಅವರ 64ನೇ ವರುಷದ ಪರಿನಿರ್ವಾಣ ದಿನಾಚರಣೆ ನಡೆಯಿತು. ಯುವಕ ಮಂಡಲದ ಅಧ್ಯಕ್ಷ ನಟರಾಜ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಸಂಸ್ಥೆಯ ಗೌರವ ಅಧ್ಯಕ್ಷರಾದ ಭಾಸ್ಕರ್ ಹೆಚ್. ಜಿ, ಕಾರ್ಯದರ್ಶಿ ಸಂದೀಪ್, ಶಶಿ ದೀಪ ಕೆ,ಶಂಕರ, ಮಹಿಳಾ ಮಂಡಲದ ಅನಿತಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಸಂಯೋಜಕಿ ರಾಧಾ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೈಲಾರೇಶ್ವರ ಯುವಕ ಮಂಡಲದ ವಾರ್ಷಿಕ ಮಹಾ ಸಭೆಯು ಯುವಕ ಮಂಡಲದ ಕಛೇರಿಯಲ್ಲಿ ನೆಡೆಯಿತು. ಸಭೆಯಲ್ಲಿ ಯುವಕ ಮಂಡಲದ ಅಧ್ಯಕ್ಷ ಅರುಣ ಕುಮಾರ್ ಬಾಣ, ಗೌರವ ಅಧ್ಯಕ್ಷ ಕೆ ಆರ್ ಪ್ರದೀಪ್ ಹಿರಿಯ ಸದಸ್ಯ ರಮೇಶ ಬಿಲ್ಲವ, ನಾಗರಾಜ ರಾಯಪ್ಪನ ಮಠ, ಕಾರ್ಯದರ್ಶಿ ಸುಧೀರ್ ಕೃಷ್ಣ ಹಾಜರಿದ್ದರು. 2020-21 ಸಾಲಿನ ನೂತನ ಅಧ್ಯಕ್ಷರಾಗಿ ನಾಗರಾಜ ದಫೇದಾರ್ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಡಿ ನಾಯಕ್ ಆಯ್ಕೆಯಾದರು. ಇದೇ ಸಂದರ್ಭದಲ್ಲಿ 2019-20ರ ಸಾಲಿನ ಲೆಕ್ಕಪತ್ರವನ್ನು ಮಂಡಿಸಲಾಯಿತು. ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಡಿ.ಕೆ ಪ್ರಭಾಕರ್ ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದಲ್ಲಿ ಪ್ರಸಿದ್ದಿ ಪಡೆದಿದ್ದ ರಾಮಕೃಷ್ಣ ಆಸ್ಪತ್ರೆಯು ಆಯುಷ್ ಧಾಮ ಆರ್ಥೋ ನ್ಯೂರೋ ಆಸ್ಪತ್ರೆಯಾಗಿ ಡಿ.9ರ ಬುಧವಾರ ಲೋಕಾರ್ಪಣೆಗೊಳ್ಳಲಿದೆ. ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿ ಪಡೆದು ಎರಡು ದಶಕಕ್ಕೂ ಹೆಚ್ಚು ಅನುಭವವಿರುವ ಮತ್ತು ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ, ಮುಖ್ಯ ವೈದ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಮತ್ತು ಪ್ರಸ್ತುತ ಬ್ರಹ್ಮಾವರದ ಕ್ಷೇಮಧಾಮ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಬಿ.ವಿನಯಚಂದ್ರ ಶೆಟ್ಟಿ ತನ್ನ ಅನುಭವಿ ವೈದ್ಯ ತಂಡದೊಂದಿಗೆ ಈ ಆಸ್ವತ್ರೆಯನ್ನು ಮುನ್ನಡೆಸಲಿದ್ದಾರೆ. ಕರ್ನಾಟಕದ ಹೆಸರಾಂತ ವೈದ್ಯರ ಜೊತೆ ಕೇರಳ, ತಮಿಳುನಾಡು, ಪುಣೆ, ಆಂಧ್ರಪ್ರದೇಶದಂತಹ ರಾಜ್ಯಗಳ ಸಂದರ್ಶಕರು ನಿಯಮಿತವಾಗಿ ಸಂದರ್ಶನ ಮತ್ತು ಸಮಾಲೋಚನೆಗೆ ಲಭ್ಯವಿರಲಿದ್ದಾರೆ. ಕೇವಲ ಒಂದು ಪದ್ದತಿಯ ಚಿಕಿತ್ಸೆ ಪರಿಣಾಮಕಾರಿಯಾದ ಫಲಿತಾಂಶ ನೀಡುವಲ್ಲಿ ವಿಫಲವಾಗುತ್ತಿರುವಾಗ ಆಯುರ್ವೇದ, ಯೋಗ ಮತ್ತು ಬೇರೆ ಪಾರಂಪರಿಕ ಚಿಕಿತ್ಸಾ ಪದ್ದತಿಗಳ ಸಂಯೋಜನಾ ಚಿಕಿತ್ಸಾ ಪರಿಕ್ರಮ ನಿರೀಕ್ಷಿತ ಫಲಿತಾಂಶ ತೋರಿಸುತ್ತದೆ. ಆ ಸಂಯೋಜನಾ ಚಿಕಿತ್ಸಾ ಪದ್ದತಿ ಇಲ್ಲಿ ಅಳವಡಿಸಿಕೊಂಡು ಗುಣಾತ್ಮಕ ಫಲಿತಾಂಶ ನೀಡಲು…

Read More