Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕದಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಕುಂದಾಪುರ ಪುರಸಭೆಯ 50 ಮಂದಿ ಪೌರ ಕಾರ್ಮಿಕರಿಗೆ ಸಮ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುರಸಭೆ ಮುಖ್ಯಾಧಿಕಾರಿ ಕೆ. ಗೋಪಾಲಕೃಷ್ಣ ಶೆಟ್ಟಿ, ಪೌರ ಕಾರ್ಮಿಕರನ್ನು ಸಮ್ಮಾನಿಸಿದರು ಲಯನ್ಸ್ ಕ್ಲಬ್ ಕುಂದಾಪುರದ ಕಾರ್ಯದರ್ಶಿ ರಾಜೇಂದ್ರ ಮಾತನಾಡಿದರು ಸುಮಾರು 180 ಜನರು ಉಚಿತ ಆರೋಗ್ಯ ತಪಾಸಣೆ  ಶಿಬಿರದಲ್ಲಿ ಪಾಲ್ಗೊಂಡರು. ರೆಡ್ ಕ್ರಾಸ್ ಕುಂದಾಪುರ ತಾಲೂಕು ಘಟಕದ ಸಭಾಪತಿ ಎಸ್ .ಜಯಕರ ಶೆಟ್ಟಿ ಪ್ರಾಸ್ತಾವಿಕ ಮಾತುಗನ್ನಾಡಿದರು. ಈ ಸಂಧರ್ಭದಲ್ಲಿ ಲಯನ್ಸ್ ಸಂಸ್ಥೆ ಹಾಗೂ ಲೈಪ್ ಕೇರ್‌ನ ಮಾಲಕ ಸೋಮನಾಥ್, ಲಯನ್ಸ್ ಕ್ಲಬ್‌ನ ಅಧ್ಯಕ್ಷ ಕೆ. ಚಂದ್ರಶೇಖರ್, ರೆಡ್‌ಕ್ರಾಸ್ ಘಟಕದ ಕಾರ್ಯದರ್ಶಿ ವೈ ಸೀತರಾಮ ಶೆಟ್ಟಿ ಖಜಾಂಚಿ ಶಿವರಾಮ ಶೆಟ್ಟಿ ಕಾರ್ಯಕಾರಿ ಸಮಿತಿ ಸದಸ್ಯರು, ಇತರ ಲಯನ್ಸ್ ಕ್ಲಬ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ನಿರ್ಮಲಾ ಸಭಾಭವನ ದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ ಪೈ, ಹೈನುಗಾರರು ಹಾಲಿನ ಗುಣಮಟ್ಟ ಕಾಪಾಡುವುದರ ಜತೆಗೆ, ಸ್ವಚ್ಛತೆ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ವೈಜ್ಞಾನಿಕ ಹೈನುಗಾರಿಕೆ ಮತ್ತು ಹೈನುರಾಸು ವಿಮೆ ಕುರಿತು ಮಾಹಿತಿ ನೀಡಿದರು. ಒಕ್ಕೂಟದ ವಿಸ್ತರಣಾಧಿಕಾರಿ ರಾಜಾರಾಮ ಒಕ್ಕೂಟದಿಂದ ದೊರೆಯುವ ಸೌಲಭ್ಯಗಳನ್ನು ವಿವರಿಸಿದರು. ಸಂಘ ಕಳೆದ ವರ್ಷ ₹2 ಲಕ್ಷ ನಿವ್ವಳ ಲಾಭ ಗಳಿಸಿದ ಪ್ರಯುಕ್ತ ಸದಸ್ಯರಿಗೆ ಶೇ 12 ಲಾಭಾಂಶ ಮತ್ತು ಬೋನಸ್ ವಿತರಿಸಲು ನಿರ್ಧರಿಸಲಾಯಿತು. ಉಪಾಧ್ಯಕ್ಷ ಹೆರಿಯ ಪೂಜಾರಿ, ಕಾರ್ಯದರ್ಶಿ ದಿವ್ಯಾ ಭಟ್ , ಪ್ರಮೋದಾ ಪೈ , ನಿರ್ದೇಶಕರಾದ ಗೋಪಾಲ ಗಾಣಿಗ, ರಾಮ ಪೂಜಾರಿ, ಕೃಷ್ಣಮೂರ್ತಿ ಹೆಬ್ಬಾರ್, ವಿಜಯಾ ಪ್ರಭು, ರುಕ್ಕು ಪೂಜಾರಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜಯಪ್ರಕಾಶ್ ಹೆಗ್ಡೆ ಮೊದಲ ಬಾರಿ ಕುಂದಾಪುರಕ್ಕೆ ಬಂದ ಅವರನ್ನು ಅಭಿಮಾನಿಗಳು ಸ್ವಾಗತಿಸಿದರು. ಬಳಿಕ ಸುದ್ದಿಗಾರೊಂದಿಗೆ ಮಾತನಾಡಿ, ರಾಜ್ಯ ಹಿಂದುಳಿದ ವರ್ಗಗಳ ನೂತನ ಸಮಿತಿ ಅಸ್ತಿತ್ವಕ್ಕೆ ಬಂದ ಬಳಿಕ ವರದಿಯ ಅಧ್ಯಯನ ಹಾಗೂ ಪರಾಮರ್ಶೆ ನಡೆಸಿದ ಬಳಿಕವೇ ಸರ್ಕಾರಕ್ಕೆ ನೀಡಲಾಗುವುದು ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾಂತರಾಜು ಅವರ ನೇತೃತ್ವದ ಸಮಿತಿ ಸಿದ್ಧಪಡಿಸಿದ ಜಾತಿ ಗಣತಿ ಆಯೋಗದ ಬಳಿ ಇದ್ದರೂ, ಅದು ಇನ್ನೂ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ ಆಯೋಗಕ್ಕೆ 5 ಸದಸ್ಯರಲ್ಲಿ ಸಾಮಾಜಿಕ ವಿಜ್ಞಾನ ಪರಿಣಿತೆ, ಮಹಿಳೆ ಸದಸ್ಯೆಯ ನೇಮಕ ಬಾಕಿ ಇದೆ. ಸದಸ್ಯರ ನೇಮಕಾತಿಯ ಮುಖ್ಯಮಂತ್ರಿಗಳ ವಿವೇಚನೆಯದ್ದಾಗಿದೆ’ ಎಂದರು. ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಕಿಶೋರ್‌ಕುಮಾರ್, ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಕೆ.ಎಂ.ಗೋಪಾಲ ಕಳಂಜಿ, ಪ್ರಮುಖರಾದ ಸೋಮಶೇಖರ ಶೆಟ್ಟಿ ಕೆಂಚನೂರು, ಸತೀಶ್ ಹೆಗ್ಡೆ ಮೇರ್ಡಿ, ಶ್ರೀನಿವಾಸ ಕುಂದರ್, ಮೇರ್ಡಿ ದಿನಕರ ಶೆಟ್ಟಿ, ಪ್ರತಾಪ್ ಶೆಟ್ಟಿ ಕೈಲ್ಕೆರೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2019-20ನೇ ಸಾಲಿನ ಪ್ರೋತ್ಸಾಹಕ ಬಹುಮಾನ ಲಭಿಸಿದೆ. ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಂದ ಸಂಘದ ಪರವಾಗಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಅಳ್ವೆಗದ್ದೆ ಗೌರವ ಸ್ವೀಕರಿಸಿದರು. ಈ ಸಂದರ್ಭ ಸಹಕಾರಿ ಸಂಘಗಳ ಉಪ ನಿಬಂಧಕ ಪ್ರವೀಣ್ ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ. ಜಿ. ರಾಜಾರಾಮ ಭಟ್, ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರುಗಳಾದ ವಿನಾಯಕ ರಾವ್, ನರಸಿಂಹ ದೇವಾಡಿಗ, ಸಿಬ್ಬಂದಿ ಜಯರಾಮ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತಿಹಾಸ ಪ್ರಸಿದ್ದ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಶ್ರೀಕ್ಷೇತ್ರದ ದೀಪೋತ್ಸವವು ಕಾರ್ತಿಕ ಸಂಕಷ್ಟಹರ ಚತುರ್ಥಿಯ ಸಂದರ್ಭ ಸಕಲ ಧಾರ್ಮಿಕ ವಿಧಿ ವಿದಾನಗಳೊಂದಿಗೆ ಸಾಂಗವಾಗಿ ಜರುಗಿತು. ದೇವಳದ ಆಡಳಿತ ಧರ್ಮದರ್ಶಿ ಹೆಚ್. ಬಾಲಚಂದ್ರ ಭಟ್ ನೇತ್ರತ್ವದಲ್ಲಿ ಬೆಳಿಗ್ಗೆ ಶ್ರೀದೇವರಲ್ಲಿ ಗಣಹವನ ಮಹಾಪೂಜೆ ರಾತ್ರಿ ಮಹಾಪೂಜೆ ಮಹಾರಂಗಪೂಜೆ ಹಾಗೂ ದೀಪೋತ್ಸವ ಸಡಗರದಿಂದ ನಡೆಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಡಚಾದ್ರಿ ಬೆಟ್ಟದ ಚಿತ್ರಮೂಲ ಗಣಪತಿ ಗುಹೆ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ ಆ ಭಾಗದಲ್ಲಿ ತಡೆಬೇಲಿ ಅಳವಡಿಸಿ ಭಕ್ತರ ಪ್ರವೇಶವನ್ನು ತಡೆಹಿಡಿಯಲಾಗಿದೆ ಅರಣ್ಯ ಇಲಾಖೆ ಕೈಗೊಂಡ ಈ ಕ್ರಮವು ಚರ್ಚೆಗೆ ಗ್ರಾಸವಾಗಿದೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೊಡಚಾದ್ರಿ, ವನ್ಯ ಜೀವಿಗಳು ಸಹಿತ ಔಷದೀಯ ಗಿಡಮೂಲಿಕೆಗಳ ತಾಣವಾಗಿದೆ. ಅರಣ್ಯ ಇಲಾಖೆಗೆ ಬಂದ ದೂರಿನಂತೆ ಕಬ್ಬಿಣದ ತಡೆಬೇಲಿ ನಿರ್ಮಿಸಲಾಗಿದೆ ಹಾಗಾಗಿ ಭಕ್ತರಿಗೆ ಇಷ್ಟಾರ್ಥ ಪೂರೈಕೆಗೆ ತೊಡಕಾಗಿದೆ ಎಂಬ ಭಾವನೆ ಮೂಡಿಬಂದಿದೆ. ಸರ್ವಜ್ಞ ಪೀಠ, ಚಿತ್ರಮೂಲ ಗಣಪತಿ ಗುಹೆ ಆಧ್ಯಾತ್ಮಿಕ ಚಿಂತಕರು ಸಹಿತ ಸಾಧು ಸಂತರಿಗೆ ಧ್ಯಾನ ಕೇಂದ್ರವಾಗಿದೆ. ಈ ದಿಸೆಯಲ್ಲಿ ಕೊಡಚಾದ್ರಿ ಪರಿಸರ ಸಂರಕ್ಷಣ ಟ್ರಸ್ಟ್ಟ್‌ನ ಗೌರವಾಧ್ಯಕ್ಷ ಕೇಮಾರು ಶ್ರೀ ಈಶ ವಿಟ್ಠಲದಾಸ ಸ್ವಾಮೀಜಿಯವರು ಧಾರ್ಮಿಕ ಭಾವನೆಯ ಮೇಲೆ ಧಕ್ಕೆ ಉಂಟುಮಾಡಿರುವ ಇಲಾಖೆ ಕ್ರಮವನ್ನು ಖಂಡಿಸಿದ್ದು ಗೇಟ್ ತೆರವುಗೊಳಿಸದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಇಲಾಖಾ ಅಧಿಕಾರಿಗಳು, ಪರಿಸರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕುಂದೇಶ್ವರ ದೇಗುಲದ ಹಾಲ್‌ನಲ್ಲಿ ಕುಂದಗನ್ನಡ ಜಿಲ್ಲೆ ಸ್ಥಾಪನೆ ಕುರಿತು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಸಮಾನ ಮನಸ್ಕರ ಕುಂದಾಪುರ ಜಿಲ್ಲಾ ಹೋರಾಟ ಸಮಿತಿ ಸಭೆ ಇತ್ತಿಚೆಗೆ ನಡೆಯಿತು. ಮಾಜಿ ಶಾಸಕರ ನೇತೃತ್ವದಲ್ಲಿ ಸಭೆ ನಡೆದು ಸಮಿತಿ ಕೂಡ ಅವರದ್ದೇ ನೇತೃತ್ವದಲ್ಲಿ ರೂಪಿಸಲಾಗಿದೆ. ಕುಂದಾಪುರ ಜಿಲ್ಲಾ ಹೋರಾಟ ಸಮಿತಿ ಸಂಚಾಲಕರಾಗಿ ಮುಂಬಾರು ದಿನಕರ ಶೆಟ್ಟಿ, ಜಿಲ್ಲಾ ಹೋರಾಟ ಸಮಿತಿ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ ಜಿ.ಪಂ ಮಾಜಿ ಸದಸ್ಯ ಗಣಪತಿ ಶ್ರೀಯಾನ್, ಜಿಲ್ಲಾ ಹೋರಾಟ ಸಮಿತಿ ವೇದಿಕೆಯ ಉಪಾಧ್ಯಕ್ಷರಾಗಿ ದಸ್ತಗೀರಿ ಸಾಹೇಬ್ ಕಾವ್ರಾಡಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಸತೀಶ್ ನಾಯ್ಕ್ ನಾಡಗುಡ್ಡೆಯಂಗಡಿ, ನವೀನ ಚಂದ್ರ ಶೆಟ್ಟಿ ಬೆಳ್ಳೂರು, ರತ್ನಾಕರ ಶೆಟ್ಟಿ ಆವರ್ಸೆ, ಚಿಟ್ಟೆ ರಾಜಗೋಪಾಲ ಹೆಗ್ಡೆ, ವಿನಯ ಶೇಟ್ ಕಾವ್ರಾಡಿ, ಕೆ. ಆರ್. ನಾಯ್ಕ್ ಹಂಗಳೂರು ಡಾ. ಕುಮಾರ್ ಶೆಟ್ಟಿ, ಭರತ್ ಶೆಟ್ಟಿ ಹರ್ಕೂರು ಅವರನ್ನು ಸಮೀತಿಗೆ ನೇಮಕ ಮಾಡಿಕೊಳ್ಳಲಾಯಿತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿರಿಯ ಬಿಜೆಪಿ ಮುಖಂಡೆ, ಕೋಟೇಶ್ವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜಾನಕಿ ಬಿಲ್ಲವ ಗುರುವಾರ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರೊಂದಿಗೆ ಸ್ಥಳೀಯ 20ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೋಟೇಶ್ವರ ಭಾಗದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತೆಯಾಗಿದ್ದ ಜಾನಕಿ ಬಿಲ್ಲವ ತಾಲೂಕು ಪಂಚಾಯತ್ ಸದಸ್ಯೆಯಾಗಿ 2 ಬಾರಿ, ಗ್ರಾ.ಪಂ ಸದಸ್ಯೆಯಾಗಿ 2 ಬಾರಿ, ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿಯೂ ಪಕ್ಷಕ್ಕಾಗಿ ಕೆಲಸ ಮಾಡಿದ್ದರು. ಈ ಹಿಂದಿನ ಅವಧಿಯಲ್ಲಿ ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿದ್ದ ಜಾನಕಿ ಬಿಲ್ಲವರನ್ನು ಸ್ವಪಕ್ಷದವರೇ ಅವಿಶ್ವಾಸ ಗೊತ್ತುವಳಿ ಮಂಡಿಸಿ ಅವರನ್ನು ಗಾದಿಯಿಂದ ಇಳಿಸಿದ್ದರು. ಆ ಬಳಿಕ ಜಾನಕಿ ಬಿಲ್ಲವ ಪಕ್ಷದ ಚಟಿವಟಿಕೆಯಿಂದ ದೂರ ಉಳಿದಿದ್ದರು. ಪಕ್ಷ ಸೇರ್ಪಡೆ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಮುಖಂಡರಾದ ಅಶೋಕ್ ಪೂಜಾರಿ ಬೀಜಾಡಿ, ವಿಕಾಸ್ ಹೆಗ್ಡೆ, ಶಂಕರ್ ಪೂಜಾರಿ, ಸುನೀಲ್ ಪೂಜಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರಾವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರ ಮನಸ್ಸಿನಲ್ಲಿ ಭಾರತೀಯ ಜನತಾ ಪಕ್ಷ ಭಾವನಾತ್ಮಕ ವಿಚಾರಗಳನ್ನು ಮತ್ತು ಸುಳ್ಳುಗಳನ್ನು ತುಂಬಿ ತನ್ನತ್ತ ಸೆಳೆದಿದೆ. ಇಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲು ಇದು ಪ್ರಮುಖ ಕಾರಣ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ ಕೊಡವೂರು ಹೇಳಿದರು. ಗುರುವಾರ ಮರವಂತೆಯಲ್ಲಿ ನಡೆದ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಜಿಲ್ಲೆಗಳಲ್ಲಿನ ಗೇಣಿದಾರರ ಮತ್ತು ಮೀನುಗಾರರ ಅಭಿವೃದ್ಧಿಗೆ ಹಿಂದಿನ ಕಾಂಗ್ರೆಸ್ ಸರ್ಕಾರಗಳು ಕ್ರಾಂತಿಕಾರಕ ಕ್ರಮಗಳನ್ನು ಜಾರಿಗೊಳಿಸಿದ್ದುವು. ಈಚಿನ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ, ಬಡವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಅನುಷ್ಠಾನಿಸಿತು. ಆದರೆ ಅವು ಇಲ್ಲಿ ಕಾಂಗ್ರೆಸ್‌ಗೆ ಮತ ತಂದುಕೊಡುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪಕ್ಷದ ಕಾರ್ಯಕರ್ತರು ಜನರೊಂದಿಗೆ ಬೆರೆತು ಅವರಿಗೆ ವಾಸ್ತವಾಂಶಗಳನ್ನು ಮನದಟ್ಟು ಮಾಡಬೇಕು ಎಂದು ಅವರು ಹೇಳಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಈ ತಿಂಗಳಿನಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ‘ಭಾಷೆಯನ್ನು ಉಳಿಸಿ, ಬೆಳೆಸುವುದು ಸಾಹಸ ಕಾರ್ಯವೇನೂ ಅಲ್ಲ. ಅದನ್ನು ಎಲ್ಲ ಆಯಾಮಗಳಲ್ಲಿ ಬಳಸಿದರೆ ಅದು ಸದಾ ಜೀವಂತವಾಗಿರುತ್ತದೆ’ ಎಂದು ಬೈಂದೂರು ರೋಟರಿ ಮಾಜಿ ಅಧ್ಯಕ್ಷ ಗೋವಿಂದ ಎಂ. ಹೇಳಿದರು. ಬೈಂದೂರು ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಕ್ಕಮ್ಮ ಮತ್ತು ಪರಮೇಶ್ವರ ಹೆಬ್ಬಾರ್ ಸ್ಮಾರಕ ದತ್ತಿ ಉಪನ್ಯಾಸದಲ್ಲಿ ಮಾತನಾಡಿದರು. ತಾಯ್ನುಡಿಯನ್ನು ಉಳಿಸಿ ಬೆಳೆಸುವ ಜವಬ್ದಾರಿ ಅದರ ವಾರಸುದಾರರ ಮೇಲಿದೆ. ಅದರ ಬಗೆಗೆ ಅಭಿಮಾನ ತಾಳಿ ಮಾತು, ಬರಹಗಳಲ್ಲಿ ಬಳಸಿದರೆ ಅದು ಮುಂದಿನ ತಲೆಮಾರಿಗೆ ವರ್ಗಾವಣೆಯಾಗುತ್ತದೆ. ಕುಂದಗನ್ನಡವು ಅತ್ಯಂತ ಸುಲಭ ಹಾಗೂ ಸಂಕ್ಷಿಪ್ತ ಪದಗಳಿಂದ ಕೂಡಿದ್ದು ಮಾತೃಭಾಷೆಯಾಗಿರುವವರು ಅದರ ಮೂಲ ಸ್ವರೂಪದಲ್ಲಿ ಅದನ್ನು ಬಳಸಬೇಕು ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಬೈಂದೂರು ತಾಲ್ಲೂಕು ಘಟಕದ ಅಧ್ಯಕ್ಷ ರವೀಂದ್ರ ಎಚ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ. ಸುಬ್ರಹ್ಮಣ್ಯ ಭಟ್, ಶಿಕ್ಷಣ ಸಂಯೋಜಕ ಅಬ್ದುಲ್ ರವೂಫ್, ದತ್ತಿದಾನಿ ಪ್ರಕಾಶ ಹೆಬ್ಬಾರ್ ಮುಖ್ಯ…

Read More